Bengaluru: ಫ್ರೀಯಾಗಿ ಪಾನಿಪುರಿ ಕೊಡದಿದ್ದಕ್ಕೆ ವ್ಯಾಪಾರಿ ಮೇಲೆ ಡೆಡ್ಲಿ ಅಟ್ಯಾಕ್ – Kannada News | Vendor Stabbed for Refusing Free Panipuri in Bengaluru
ಬೆಂಗಳೂರು, ಡಿಸೆಂಬರ್ 19: ಉಚಿತವಾಗಿ ಪಾನಿಪುರಿ ನೀಡಲು ನಿರಾಕರಿಸಿದ್ದಕ್ಕೆ ರಸ್ತೆಬದಿ ವ್ಯಾಪಾರಿಯೋರ್ವನಿಗೆ ಚಾಕು ಇರಿದಿರುವ ಘಟನೆ ಬೆಂಗಳೂರಿನ ಬ್ಯಾಟರಾಯನಪುರದಲ್ಲಿ ನಡೆದಿದೆ. ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮದ್ಯದ ಅಮಲಿನಲ್ಲಿದ್ದ ವ್ಯಕ್ತಿ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ. ರಾತ್ರಿ ವೇಳೆ ನಡೆದಿರುವ ಈ ಘಟನೆ ಬೀದಿಬದಿ ವ್ಯಾಪಾರಿಗಳು ಮತ್ತು ಸ್ಥಳೀಯರನ್ನು ಬೆಚ್ಚಿಬೀಳಿಸಿದೆ. ಪೊಲೀಸರ ಮಾಹಿತಿಯ ಪ್ರಕಾರ ಬ್ಯಾಟರಾಯನಪುರ ಮುಖ್ಯ ರಸ್ತೆಯಲ್ಲಿರುವ ಪಾಮಿಪುರಿ ಅಂಗಡಿಯಲ್ಲಿ ರಾತ್ರಿ ಸುಮಾರು 10.30ರ ವೇಳೆಗೆ ಘಟನೆ ನಡೆದಿದೆ. ಮದ್ಯಪಾನ ಮಾಡಿದ ಸ್ಥಿತಿಯಲ್ಲಿದ್ದ ವ್ಯಕ್ತಿಯೋರ್ವ…