Headlines

nagaraj11081993

Karnataka Budget 2026: ಕರ್ನಾಟಕದಲ್ಲಿ ಹವ್ಯಕ ಭಾಷಾ ಅಕಾಡೆಮಿ ಸ್ಥಾಪನೆ: ಬಜೆಟ್​​ನಲ್ಲಿ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು, ಮಾರ್ಚ್​ 06: ಕರ್ನಾಟಕದಲ್ಲಿ ಹವ್ಯಕ ಭಾಷಾ ಬೆಳವಣಿಗೆಗಾಗಿ ಹವ್ಯಕ ಭಾಷಾ ಅಕಾಡೆಮಿಯನ್ನು ಸ್ಥಾಪನೆ ಮಾಡುವುದಾಗಿ 2026-27ರ ಬಜೆಟ್​​ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ(Siddaramaiah) ಘೋಷಿಸಿದ್ದಾರೆ. ಹವ್ಯಕ ಭಾಷೆಗೆ ಸಂಬಂಧಿಸಿದ ಅಕಾಡೆಮಿ ಸ್ಥಾಪನೆ ಮಾಡಬೇಕು ಎಂದು ಹವ್ಯಕ ಬ್ರಾಹ್ಮಣರು ಸುದೀರ್ಘ ಸಮಯದಿಂದ ಬೇಡಿಕೆ ಇಟ್ಟಿದ್ದರು. ಶ್ರೀ ಅಖಿಲ ಹವ್ಯಕ ಮಹಾಸಭಾ ಸೇರಿದಂತೆ ಹಲವರ ಪ್ರಯತ್ನ ಇದರ ಹಿಂದಿತ್ತು. ಇದೇ ವೇಳೆ ಗೋರ್‌ ಬಂಜಾರ ಸಮುದಾಯದ ಇತಿಹಾಸ, ಸಂಸ್ಕೃತಿ, ಭಾಷೆ, ಆಚಾರ-ವಿಚಾರ, ಉಡುಗೆ, ಆಹಾರ ಪದ್ದತಿ, ಕಸುಬು ಇತ್ಯಾದಿಗಳನ್ನು ದಾಖಲಿಸಲು ಬಂಜಾರ…

Read More

ತ್ರಿಷಾ, ವಿಜಯ್ ಖುಲ್ಲಂ ಖುಲ್ಲಾ ತಿರುಗಾಡಿದ್ದು ಸರಿಯೇ? ಖಾರವಾಗಿ ಪ್ರತಿಕ್ರಿಯಿಸಿದ ಫ್ಯಾನ್ಸ್

ನಟ ದಳಪತಿ ವಿಜಯ್ ಅವರ ರಾಜಕೀಯ ಜೀವನಕ್ಕಿಂತಲೂ ವೈಯಕ್ತಿಕ ಜೀವನದ ವಿಚಾರವೇ ಹೆಚ್ಚು ಚರ್ಚೆ ಆಗುತ್ತಿದೆ. ಅದಕ್ಕೆ ಕಾರಣ ಆಗಿರುವುದು ತ್ರಿಷಾ (Trisha Krishnan) ಜೊತೆಗಿನ ಒಡನಾಟ. ಈಗಾಗಲೇ ವಿಜಯ್ ಪತ್ನಿ ಸಂಗೀತಾ ಅವರು ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಅಲ್ಲದೇ ವಿಜಯ್ ಅವರಿಗೆ ನಟಿಯೊಬ್ಬರ ಜೊತೆ ಅನೈತಿಕ ಸಂಬಂಧ ಇದೆ ಎಂದು ಕೂಡ ಸಂಗೀತಾ ಆರೋಪಿಸಿದ್ದಾರೆ. ಈ ಸಂದರ್ಭದಲ್ಲಿ ತ್ರಿಷಾ ಮತ್ತು ವಿಜಯ್ (Thalapathy Vijay) ಅವರು ಖುಲ್ಲಂ ಖುಲ್ಲಾ ಜೊತೆಯಾಗಿ ತಿರುಗಾಡಿದ್ದಾರೆ. ವಿಡಿಯೋ ವೈರಲ್ ಆಗಿದ್ದು,…

Read More

ಹಠಾತ್ ಆಗಿ ಯುವ ಜನತೆ ಸಾಯುತ್ತಿರುವುದಕ್ಕೆ ಕಾರಣ ಕೋವಿಡ್ ಲಸಿಕೆ ಅಲ್ವವೇ ಅಲ್ಲ; ಅಸಲಿ ಸತ್ಯ ಬಿಚ್ಚಿಟ್ಟ ಡಾಕ್ಟರ್

ಇತ್ತೀಚಿಗೆ ಭಾರತದಲ್ಲಿ ಆಕಸ್ಮಿಕವಾಗಿ ಸಾವನ್ನಪ್ಪುವ ಯುವ ಜನರ ಸಂಖ್ಯೆ ಹೆಚ್ಚುತ್ತಿರುವುದು ಸಾರ್ವಜನಿಕರ ಆತಂಕಕ್ಕೆ ಕಾರಣವಾಗಿದೆ. ಈ ರೀತಿಯ ಮರಣಗಳಿಗೆ ಕೋವಿಡ್- 19 ಲಸಿಕೆ ಕಾರಣವಾಗಿರಬಹುದೇ ಎಂಬ ಪ್ರಶ್ನೆ ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹರಡುತ್ತಿದ್ದು, ಏನೂ ಅರಿಯದ ಜನ ಇದನ್ನು ಸತ್ಯ ಎಂದು ನಂಬಿದ್ದಾರೆ. ಆದರೆ ವೈಜ್ಞಾನಿಕ ಅಧ್ಯಯನಗಳು ಈ ಊಹಾಪೋಹಗಳಿಗೆ ಸ್ಪಷ್ಟ ಉತ್ತರ ನೀಡಿದೆ. ನವದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (AIIMS) ಮತ್ತು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ICMR) ಸಂಯುಕ್ತವಾಗಿ ನಡೆಸಿದ ಅಧ್ಯಯನದ…

Read More

ಇತರ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕ ಬಜೆಟ್ ಗಾತ್ರ ಎಷ್ಟು? ಇಲ್ಲಿದೆ ಕುತೂಹಲಕಾರಿ ತುಲನೆ

ಬೆಂಗಳೂರು, ಮಾರ್ಚ್ 6: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ದಾಖಲೆಯ 4.48 ಲಕ್ಷ ಕೋಟಿ ರೂ ಗಾತ್ರದ ಬಜೆಟ್ (Karnataka Budget) ಮಂಡಿಸಿದ್ದಾರೆ. ದೇಶದ ಅತಿದೊಡ್ಡ ಬಜೆಟ್ ಮಂಡಿಸಿರುವ ರಾಜ್ಯಗಳ ಸಾಲಿನಲ್ಲಿ ಕರ್ನಾಟಕವೂ ಇದೆ. ಬಜೆಟ್ ಗಾತ್ರ 4 ಲಕ್ಷ ಕೋಟಿ ರೂ ದಾಟಿರುವ ಆರು ರಾಜ್ಯಗಳಲ್ಲಿ ಕರ್ನಾಟಕವೂ ಒಂದು. ಉತ್ತರಪ್ರದೇಶ, ಮಹಾರಾಷ್ಟ್ರ, ರಾಜಸ್ಥಾನ, ತಮಿಳುನಾಡಿನ ನಂತರ ಕರ್ನಾಟಕವೇ ಅತಿ ದೊಡ್ಡ ಗಾತ್ರದ ಬಜೆಟ್ ಮಂಡಿಸಿರುವುದು. ಅತಿದೊಡ್ಡ ಬಜೆಟ್ ಮಂಡಿಸಿರುವ ಪ್ರಮುಖ ರಾಜ್ಯಗಳಿವು ಉತ್ತರಪ್ರದೇಶ: 9.12 ಲಕ್ಷ…

Read More

ಆಂಧ್ರದಲ್ಲೂ 13 ವರ್ಷದೊಳಗಿನ ಮಕ್ಕಳಿಗೆ ಸೋಷಿಯಲ್ ಮೀಡಿಯಾ ನಿಷೇಧ

ನವದೆಹಲಿ, ಮಾರ್ಚ್ 6: ಆಂಧ್ರಪ್ರದೇಶವು 13 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ಸಾಮಾಜಿಕ ಮಾಧ್ಯಮವನ್ನು ಬಳಸುವಂತಿಲ್ಲ ಎಂದು ಘೋಷಿಸಿದೆ. ಆಂಧ್ರದ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು (CM Chandrababu Naidu) ಈ ಬಗ್ಗೆ ಆದೇಶ ಹೊರಡಿಸಿದ್ದು, ಹೊಸ ನಿಯಮವನ್ನು ಮುಂದಿನ 3 ತಿಂಗಳುಗಳಲ್ಲಿ ಹಂತ ಹಂತವಾಗಿ ಜಾರಿಗೆ ತರಲಾಗುವುದು ಎಂದಿದ್ದಾರೆ. ಈ ನಿರ್ಬಂಧಗಳನ್ನು ಅವರು 16 ವರ್ಷ ವಯಸ್ಸಿನವರೆಗಿನ ಮಕ್ಕಳಿಗೂ ವಿಸ್ತರಿಸುವ ಸುಳಿವು ನೀಡಿದ್ದಾರೆ. ಇದು ಮಕ್ಕಳು ಆನ್‌ಲೈನ್‌ನಲ್ಲಿ ಹೆಚ್ಚು ಸಮಯ ಕಳೆಯುವುದರ ದುಷ್ಪರಿಣಾಮದ ಬಗ್ಗೆ ಸರ್ಕಾರ…

Read More

Karnataka Budget 2026: ಸಮಾಜ ಕಲ್ಯಾಣ ಇಲಾಖೆಯ 2,500 ಹುದ್ದೆ ಭರ್ತಿ ಮಾಡಲು ಸರ್ಕಾರ ನಿರ್ಧಾರ

2026ನೇ ಕರ್ನಾಟಕ ಬಜೆಟ್​​ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹಿಂದುಳಿದ ವರ್ಗಗಳು, ಪರಿಶಿಷ್ಟ ಪಂಗಡಗಳು ಮತ್ತು ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿ ಮಹತ್ವದ ಘೋಷಣೆಗಳನ್ನು ಮಾಡಿದ್ದಾರೆ. 2026-27ನೇ ಸಾಲಿನಲ್ಲಿ ಸಮಾಜ ಕಲ್ಯಾಣ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮಗಳಿಗೆ 1500 ಕೋಟಿ ರೂ. ಒದಗಿಸಲಾಗುವುದು. ಜೊತೆಗೆ ಈ ಇಲಾಖೆಗಳಲ್ಲಿ ಖಾಲಿ ಇರುವ 2500 ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಘೋಷಣೆ ಮಾಡಿದ್ದಾರೆ. ಗಂಗಾ ಕಲ್ಯಾಣ ಯೋಜನೆಯಡಿ ಕೊಳವೆ ಬಾವಿಗಳ ವಿದ್ಯುದ್ದೀಕರಣಕ್ಕೆ ನೀಡುವ ಮೊತ್ತವನ್ನು 75 ಸಾವಿರದಿಂದ 1.5 ಲಕ್ಷ…

Read More

ಮಹಿಳಾ ಅತಿಥಿ ಉಪನ್ಯಾಸಕರಿಗೆ ಗುಡ್ ನ್ಯೂಸ್! 90 ದಿನಗಳ ಮಾತೃತ್ವ ರಜೆ ಘೋಷಣೆ

ಬೆಂಗಳೂರು, ಮಾರ್ಚ್​ 06: ಕರ್ನಾಟಕದ 2026–27ನೇ ಸಾಲಿನ ಬಜೆಟ್  (Karnataka Budget) ಮಂಡನೆಯ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಹಿಳಾ ಅತಿಥಿ ಉಪನ್ಯಾಸಕರಿಗೆ ಮಹತ್ವದ ಘೋಷಣೆ ಮಾಡಿದ್ದಾರೆ. ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳು, ಪಾಲಿಟೆಕ್ನಿಕ್ ಹಾಗೂ ಎಂಜಿನಿಯರಿಂಗ್ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ಅತಿಥಿ ಉಪನ್ಯಾಸಕರಿಗೆ 90 ದಿನಗಳ ಮಾತೃತ್ವ ರಜೆ ಸೌಲಭ್ಯವನ್ನು ನೀಡಲಾಗುವುದು ಎಂದು ಅವರು ತಿಳಿಸಿದ್ದಾರೆ. ರಜೆ ಸೌಲಭ್ಯವನ್ನು ಮುಂದಿನ ಶೈಕ್ಷಣಿಕ ಸಾಲಿನಿಂದ ಜಾರಿಗೆ ತರಲಾಗುವುದೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಈ ಕ್ರಮದಿಂದ ರಾಜ್ಯದ ಸಾವಿರಾರು ಮಹಿಳಾ…

Read More

ರ‍್ಯಾಗಿಂಗ್​ನಿಂದ ನೊಂದ ಕೋತಿಮರಿಗೆ ಅಮ್ಮನಾದ ಗೊಂಬೆ!

ನವದೆಹಲಿ, ಮಾರ್ಚ್ 5: ಈ ವಿಡಿಯೋ ಎಲ್ಲಿ ಚಿತ್ರೀಕರಿಸಲ್ಪಟ್ಟಿದ್ದು ಎಂಬುದು ತಿಳಿದಿಲ್ಲ. ಆದರೆ, ಈ ವಿಡಿಯೋ (Video Viral) ನೋಡಿದರೆ ಕಣ್ಣಂಚು ಒದ್ದೆಯಾಗುವುದು ಗ್ಯಾರಂಟಿ. ಕೋತಿಮರಿಯೊಂದು ಆಟವಾಡುತ್ತಿದ್ದಾಗ ಅಲ್ಲಿಗೆ ಬಂದ ದೊಡ್ಡ ಕೋತಿ ಆ ಮರಿಯನ್ನು ಗಿರಗಿರನೆ ತಿರುಗಿಸಿ ಬಿಸಾಡುತ್ತದೆ, ಹಿಂಸೆ ನೀಡುತ್ತದೆ. ಇದರಿಂದ ನೋವಾಗಿ ಓಡಿದ ಮರಿಕೋತಿ ಕಲ್ಲುಬಂಡೆಯ ಹಿಂದಿದ್ದ ಕೋತಿಯ ಗೊಂಬೆಯನ್ನು ಗಟ್ಟಿಯಾಗಿ ತಬ್ಬಿಕೊಂಡು ಹೆದರಿ ಬಚ್ಚಿಟ್ಟುಕೊಳ್ಳುತ್ತದೆ. ಆ ಕ್ಷಣಕ್ಕೆ ಆ ಮರಿಕೋತಿಗೆ ಆ ಗೊಂಬೆಯೇ ಸಾಂತ್ವನ ನೀಡುವ ಅಮ್ಮನಾಗುತ್ತದೆ! ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು…

Read More

ಕರ್ನಾಟಕ ಬಜೆಟ್ 2026: ಕನ್ನಡ ಚಿತ್ರರಂಗಕ್ಕೆ ಸಿಕ್ಕಿದ್ದೇನು?

ಸಿಎಂ ಸಿದ್ದರಾಮಯ್ಯ (Siddaramaiah) ಅವರು ದಾಖಲೆಯ 17ನೇ ಬಾರಿ ಕರ್ನಾಟಕ ಬಜೆಟ್ ಅನ್ನು ಇಂದು (ಮಾರ್ಚ್ 06) ಮಂಡಿಸಿದರು. ಹಲವಾರು ಕ್ಷೇತ್ರಗಳಿಗೆ ಹಲವು ಅನುದಾನ, ಯೋಜನೆಗಳನ್ನು ಬಜೆಟ್​​ನಲ್ಲಿ ಘೋಷಣೆ ಮಾಡಲಾಗಿದೆ. ನಿರೀಕ್ಷೆಯಂತೆ ಶಿಕ್ಷಣ, ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಗ್ರಾಮೀಣಾಭಿವೃದ್ಧಿ, ಕೃಷಿ ಇನ್ನಿತರೆ ಪ್ರಮುಖ ಕ್ಷೇತ್ರಗಳಿಗೆ ಹೆಚ್ಚಿನ ಅನುದಾನವನ್ನು ನೀಡಲಾಗಿದೆ. ಕನ್ನಡ ಚಿತ್ರರಂಗವೂ ಸಹ ಈ ಬಾರಿಯ ಬಜೆಟ್​​ ಮೇಲೆ ಸಾಕಷ್ಟು ನಿರೀಕ್ಷೆಗಳನ್ನು ಇರಿಸಿಕೊಂಡಿತ್ತು. ಹಾಗಿದ್ದರೆ ಬಜೆಟ್​​ನಲ್ಲಿ ಕನ್ನಡ ಚಿತ್ರರಂಗಕ್ಕೆ ಸಿಕ್ಕಿದ್ದೇನು? ಮಾಹಿತಿ ಇಲ್ಲಿದೆ… ಹೆಸರಘಟ್ಟದಲ್ಲಿರುವ ಸರ್ಕಾರಿ…

Read More

ರಾಜ್ಯದಲ್ಲಿ 12 ಹೊಸ ಪೊಲೀಸ್ ಠಾಣೆಗಳ ಸ್ಥಾಪನೆ; ನಿಮ್ಮ ಜಿಲ್ಲೆಗೆ ಸಿಕ್ಕಿದ್ದೇನು? ಇಲ್ಲಿದೆ ನೋಡಿ

ಬೆಂಗಳೂರು ಮಾ.6: ರಾಜ್ಯದ ಮುಖ್ಯಮಂತ್ರಿ ಅವರು ಇಂದು (ಮಾ.6) ದಾಖಲೆಯ 17ನೇ ಬಜೆಟ್​​​ ಅನ್ನು ಮಂಡಿಸಿದ್ದಾರೆ. ಹಲವು ಕ್ಷೇತ್ರಗಳಿಗೆ ಭರಪೂರ ಅನುದಾನವನ್ನು ನೀಡಿದ್ದು, ಇದೀಗ ಪೊಲೀಸ್​​​​ ಇಲಾಖೆಗೂ ಹೆಚ್ಚಿನ ಅನುದಾನು ನೀಡಿದ್ದಾರೆ. ಹೆಚ್ಚುತ್ತಿರುವ ಜನಸಂಖ್ಯೆ ಮತ್ತು ಕೈಗಾರಿಕಾ ಬೆಳವಣಿಗೆಯನ್ನು ಗಮನದಲ್ಲಿಟ್ಟುಕೊಂಡು, ನಾಗರಿಕರ ಸುರಕ್ಷತೆಗಾಗಿ ರಾಜ್ಯ ಸರ್ಕಾರವು 12 ಹೊಸ ಪೊಲೀಸ್ ಠಾಣೆಗಳನ್ನು ಮಂಜೂರು ಮಾಡಿದೆ. ಇದರಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹಾಗೂ ಸಂಚಾರಿ ಪೊಲೀಸ್ ಠಾಣೆಗಳು ಸೇರಿವೆ. ಹೊಸ ಠಾಣೆಗಳಿಗೆ ಸುಸಜ್ಜಿತ ಕಟ್ಟಡ ಮತ್ತು ಆಧುನಿಕ ಉಪಕರಣಗಳನ್ನು…

Read More