All posts by nagaraj11081993

ವಿಜಯ್-ತ್ರಿಶಾ ಒಂದೇ ಹೋಟೆಲ್​​​ನಲ್ಲಿ ಇದ್ದಿದ್ದ ನೋಡಿದ ಆ ವ್ಯಕ್ತಿ; ಮುಂದೇನಾಯ್ತು?

ವಿಜಯ್-ತ್ರಿಶಾ ಒಂದೇ ಹೋಟೆಲ್​​​ನಲ್ಲಿ ಇದ್ದಿದ್ದ ನೋಡಿದ ಆ ವ್ಯಕ್ತಿ; ಮುಂದೇನಾಯ್ತು?

ದಳಪತಿ ವಿಜಯ್ ಹಾಗೂ ತ್ರಿಷಾ (Trisha) ನಡುವೆ ಸಂಬಂಧ ಇದೆ, ಈ ಕಾರಣದಿಂದ ವಿಜಯ್ ಅವರು ಪತ್ನಿಯಿಂದ ದೂರ ಆಗುತ್ತಿದ್ದಾರೆ ಎಂಬ ಮಾತು ಜೋರಾಗಿದೆ. ವಿಜಯ್ ಪತ್ನಿ ಸಂಗೀತಾ ಅವರು ಖುದ್ದು, ‘ವಿಜಯ್​ಗೆ ನಟಿಯ ಜೊತೆ ಸಂಬಂಧ ಇದೆ’ ಎಂದು ಆರೋಪಿಸಿದ್ದಾರೆ. ಈ ಬೆನ್ನಲ್ಲೇ ವಿಜಯ್ ಹಾಗೂ ತ್ರಿಷಾ ಅವರು ಒಟ್ಟಾಗಿ ಕಾಣಿಸಿಕೊಂಡಿದ್ದಾರೆ. ವಿವಾಹ ಕಾರ್ಯಕ್ರಮ ಒಂದಕ್ಕೆ, ಒಂದೇ ಕಾರಲ್ಲಿ ಇವರು ಆಗಮಿಸಿದರು. ಈ ಬೆನ್ನಲ್ಲೇ ವ್ಯಕ್ತಿಯೋರ್ವ ನೀಡಿದ ಹೇಳಿಕೆ ಚರ್ಚೆಗೆ ಕಾರಣ ಆಗಿದೆ.

ರಾಜಕೀಯ ವಿಮರ್ಶಕ ತಿರುಚಿ ಸೂರ್ಯ ಅವರು ಸಂದರ್ಶನ ಒಂದರಲ್ಲಿ ಮಾತನಾಡಿದ್ದರು. ಅವರು ಹೋಟೆಲ್ ಒಂದರಲ್ಲಿ ತ್ರಿಷಾ ಅವರನ್ನು ನೋಡಿದ್ದಾರಂತೆ. ಅವರ ಹೇಳಿಕೆಯನ್ನು ಚರ್ಚೆಯನ್ನು ಹುಟ್ಟುಹಾಕಿದೆ. ಹೋಟೆಲ್​​ನಲ್ಲಿ ನೋಡಿದ ಬಳಿಕ ಅವರು ಸುಮ್ಮನೆ ಇರಲಿಲ್ಲ. ಅದನ್ನು ಮಾಧ್ಯಮಗಳ ಮುಂದೆ ಹೇಳಿದ್ದಾರೆ. ಅಲ್ಲದೆ, ಚಾಲೆಂಜ್ ಕೂಡ ಮಾಡಿದ್ದಾರೆ.

‘ನಾನು ವಿಜಯ್ ಹಾಗೂ ತ್ರಿಷಾ ಅವರನ್ನು ಒಂದೇ ಹೋಟೆಲ್​​​ನಲ್ಲಿ ನೋಡಿದ್ದೇನೆ. ಈ ಹೇಳಿಕೆ ಬಳಿಕ ವಿಜಯ್ ಹಾಗೂ ತ್ರಿಷಾ ಅವರು ನನ್ನ ವಿರುದ್ಧ ಮಾನ ನಷ್ಟ ಮೊಕದ್ದಮೆ ಹೂಡಬಹುದು. ನಾನು ಅವರನ್ನು ಎಲ್ಲಿ ನೋಡಿದ್ದೇನೆ ಎಂಬುದಕ್ಕೆ ನನ್ನ ಬಳಿ ಸಾಕ್ಷಿ ಇದೆ. ನಾನು ಅದನ್ನು ಕೋರ್ಟ್​​ಗೆ ನೀಡುತ್ತೇನೆ’ ಎಂದು ಚಾಲೆಂಜ್ ಮಾಡಿದ್ದಾರೆ.

ಇದನ್ನೂ ಓದಿ: ‘ಪತ್ನಿ ಜೊತೆ ಬಂದು ಸ್ಪಷ್ಟನೆ ಕೊಡಬೇಕು, ಸಂಬಂಧ ಇಟ್ಟುಕೊಂಡವರ ಜೊತೆಯಲ್ಲ’

ಸಾಮಾನ್ಯವಾಗಿ ಈ ರೀತಿಯ ಅಫೇರ್ ವಿಷಯ ಪ್ರಸ್ತಾಪ ಆದಾಗ ಆ ನಟ-ನಟಿ ದೂರ ಇರಲು ಪ್ರಯತ್ನಿಸುತ್ತಾರೆ. ಸಾರ್ವಜನಿಕವಾಗಿ ಒಟ್ಟಿಗೆ ಕಾಣಿಸಿಕೊಳ್ಳುವುದನ್ನು ತಪ್ಪಿಸಿಕೊಳ್ಳುತ್ತಾರೆ. ಆದರೆ, ವಿಜಯ್ ಹಾಗೂ ತ್ರಿಷಾ ಆ ರೀತಿ ಮಾಡಿಲ್ಲ. ಇವರು ಒಟ್ಟಿಗೆ ಕಾಣಿಸಿಕೊಳ್ಳುವುದರ ಮೂಲಕ ಚರ್ಚೆ ಹುಟ್ಟುಹಾಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಭರ್ಜರಿಯಾಗಿ ಬಿಡುಗಡೆ ಆಗಲಿದೆ ‘ಉಸ್ತಾದ್ ಭಗತ್ ಸಿಂಗ್’ ಗಗನಕ್ಕೇರಲಿದೆ ಟಿಕೆಟ್ ಬೆಲೆ

ಯಶ್ ನಟನೆಯ ‘ಟಾಕ್ಸಿಕ್’ (Toxic) ಸಿನಿಮಾದ ಬಿಡುಗಡೆ ಮುಂದೂಡಲಾಗಿದ್ದು, ಇದೀಗ ಅದೇ ದಿನಾಂಕಕ್ಕೆ ಪವನ್ ಕಲ್ಯಾಣ್ ನಟನೆಯ ‘ಉಸ್ತಾದ್ ಭಗತ್ ಸಿಂಗ್’ ಸಿನಿಮಾ ಬಿಡುಗಡೆ ಆಗಲಿದೆ. ಈ ಮೊದಲು ಮಾರ್ಚ್ 26ಕ್ಕೆ ಸಿನಿಮಾದ ಬಿಡುಗಡೆ ದಿನಾಂಕವನ್ನು ಘೋಷಿಸಲಾಗಿತ್ತು. ಆದರೆ ‘ಟಾಕ್ಸಿಕ್’ ಹಿಂದೆ ಸರಿದಿದ್ದರಿಂದ ಆ ದಿನಾಂಕದಂದು ‘ಉಸ್ತಾದ್ ಭಗತ್ ಸಿಂಗ್’ ಸಿನಿಮಾ ಬಿಡುಗಡೆ ಆಗಲಿದೆ. ಇದು ಪವನ್ ಕಲ್ಯಾಣ್ ಅವರ ‘ತಾತ್ಕಾಲಿಕ ಕೊನೆಯ ಸಿನಿಮಾ’ ಎಂಬ ಮಾತುಗಳು ಕೇಳಿ ಬರುತ್ತಿದ್ದು, ಇದೇ ಕಾರಣಕ್ಕೆ ಬಲು ಅದ್ಧೂರಿಯಾಗಿ ಸಿನಿಮಾವನ್ನು ಬಿಡುಗಡೆ ಮಾಡಲು ಚಿತ್ರತಂಡ ಯೋಜನೆ ಹಾಕಿಕೊಂಡಿದೆ.

ಪವನ್ ಕಲ್ಯಾಣ್ ಇದೀಗ ಆಂಧ್ರದ ಡಿಸಿಎಂ ಆಗಿದ್ದು, ಅವರು ಆಂಧ್ರ ಪ್ರದೇಶ ಚುನಾವಣೆ ಘೋಷಣೆಗೆ ಮುಂಚೆ ಒಪ್ಪಿಕೊಂಡಿದ್ದ ಮೂರು ಸಿನಿಮಾಗಳಲ್ಲಿ ಕೊನೆಯ ಸಿನಿಮಾ ‘ಉಸ್ತಾದ್ ಭಗತ್ ಸಿಂಗ್’ ಆಗಿದೆ. ಈ ಸಿನಿಮಾದ ಬಳಿಕ ಅಧಿಕಾರದಲ್ಲಿದ್ದಷ್ಟು ವರ್ಷ ಅವರು ಸಿನಿಮಾಗಳಲ್ಲಿ ನಟಿಸುವುದಿಲ್ಲ ಎನ್ನಲಾಗುತ್ತಿದೆ. ಹಾಗಾಗಿ ತಾತ್ಕಾಲಿಕವಾಗಿ ಇದು ಅವರ ಕೊನೆಯ ಸಿನಿಮಾ ಎಂಬ ಮಾತುಗಳು ಕೇಳಿ ಬರುತ್ತಿವೆ. ಇದೇ ಕಾರಣಕ್ಕೆ ಸಿನಿಮಾವನ್ನು ಭಾರಿ ಅದ್ಧೂರಿಯಾಗಿ ಬಿಡುಗಡೆ ಮಾಡಲು ಚಿತ್ರತಂಡ ಯೋಜನೆ ಹಾಕಿಕೊಂಡಿದೆ.

‘ಉಸ್ತಾದ್ ಭಗತ್ ಸಿಂಗ್’ ಸಿನಿಮಾ ಮಾರ್ಚ್ 19ರಂದು ಅಧಿಕೃತವಾಗಿ ಬಿಡುಗಡೆ ಆಗಲಿದ್ದು, ಹಿಂದಿನ ದಿನದಿಂದಲೇ ಆಂಧ್ರ, ತೆಲಂಗಾಣ, ಕರ್ನಾಟಕ ರಾಜ್ಯಗಳಲ್ಲಿ ಪ್ರೀಮಿಯರ್ ಶೋಗಳನ್ನು ಆಯೋಜಿಸಲು ಸಿದ್ಧತೆ ಆರಂಭವಾಗಿದೆ. ಅಲ್ಲದೆ, ಸಿನಿಮಾದ ಪ್ರೀಮಿಯರ್ ಶೋ ಟಿಕೆಟ್​​ಗೆ ಬೆಲೆ ಸಹ ಬಲು ದುಬಾರಿಯೇ ಇರಲಿದೆ. ತೆಲಂಗಾಣ ಮತ್ತು ಆಂಧ್ರ ಎರಡೂ ರಾಜ್ಯಗಳಲ್ಲಿ ಟಿಕೆಟ್ ಬೆಲೆ ಏರಿಸಲು ಸುಲಭವಾಗಿ ಅವಕಾಶ ಸಿಗಲಿದೆ. ಇನ್ನು ಕರ್ನಾಟಕದಲ್ಲಿ ಯಾವ ಅನುಮತಿಯೂ ಬೇಕಾಗಿಲ್ಲ. ಹಾಗಾಗಿ ಸಹಜವಾಗಿಯೇ ನೆರೆಯ ರಾಜ್ಯಗಳಿಗಿಂತಲೂ ಕರ್ನಾಟಕದಲ್ಲೇ ‘ಉಸ್ತಾದ್ ಭಗತ್ ಸಿಂಗ್’ ಸಿನಿಮಾ ಟಿಕೆಟ್ ಬೆಲೆ ಹೆಚ್ಚಿರಲಿದೆ.

ಇದನ್ನೂ ಓದಿ:‘ಟಾಕ್ಸಿಕ್’ ಬಿಡುಗಡೆ ಮುಂದೂಡಿಕೆಗೆ ಕಾರಣವೇನು: ಒತ್ತಡಕ್ಕೇ ಮಣಿದರೇ ಯಶ್?

‘ಉಸ್ತಾದ್ ಭಗತ್ ಸಿಂಗ್’ ಸಿನಿಮಾನಲ್ಲಿ ಪವನ್ ಕಲ್ಯಾಣ್ ಪೊಲೀಸ್ ಅಧಿಕಾರಿಯ ಪಾತ್ರದಲ್ಲಿ ನಟಿಸಿದ್ದಾರೆ. ಸಿನಿಮಾನಲ್ಲಿ ಕನ್ನಡತಿ ಶ್ರೀಲೀಲಾ ನಾಯಕಿ. ಸಿನಿಮಾ ನಿರ್ದೇಶನ ಮಾಡಿರುವುದು ಪವನ್ ಅವರ ಆಪ್ತ ಹರೀಶ್ ಶಂಕರ್. ಸಿನಿಮಾಕ್ಕೆ ದೇವಿಶ್ರೀ ಪ್ರಸಾದ್ ಮತ್ತು ತಮನ್ ಇಬ್ಬರೂ ಸಂಗೀತ ನೀಡಿದ್ದಾರೆ. ಸಿನಿಮಾ ಇದೇ ಮಾರ್ಚ್ 19ರಂದು ತೆರೆಗೆ ಬರಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

‘ಧುರಂಧರ್ 2’ ಸಿನಿಮಾ ಟ್ರೈಲರ್: ಸಜ್ಜಾಗಿ ಎಂದ ರಣ್ವೀರ್

ರಣವೀರ್ ಸಿಂಗ್ (Ranveer Singh) ನಟಿಸಿ ಆದಿತ್ಯ ಧರ್ ನಿರ್ದೇಶನ ಮಾಡಿದ್ದ ‘ಧುರಂಧರ್’ ಮೊದಲ ಭಾಗ ದಾಖಲೆಯ ಗೆಲುವು ಕಂಡಿದೆ. ಇದೀಗ ಸಿನಿಮಾದ ಎರಡನೇ ಭಾಗ ‘ಧುರಂಧರ್ 2’ ಬಿಡುಗಡೆ ಆಗುತ್ತಿದ್ದು, ಭಾರತದ ಬಹು ನಿರೀಕ್ಷಿತ ಸಿನಿಮಾಗಳಲ್ಲಿ ಒಂದೆನಿಸಿಕೊಂಡಿದೆ. ಸಿನಿಮಾ ಮಾರ್ಚ್ 19ರಂದು ಬಿಡುಗಡೆ ಆಗುತ್ತಿದ್ದು, ಸಿನಿಮಾದ ಟ್ರೈಲರ್​​ಗಾಗಿ ಪ್ರೇಕ್ಷಕರು ಕೆಲ ಸಮಯದಿಂದ ಕಾಯುತ್ತಲೇ ಇದ್ದಾರೆ. ಮಾರ್ಚ್ 03ರಂದು ಟ್ರೈಲರ್ ಬಿಡುಗಡೆ ಆಗಲಿದೆ ಎಂಬ ಸುದ್ದಿ ಹರಡಿತ್ತು ಆದರೆ ಅಂದು ಟ್ರೈಲರ್ ಬಿಡುಗಡೆ ಆಗಿರಲಿಲ್ಲ. ಆದರೆ ಇದೀಗ ಸಿನಿಮಾದ ಟ್ರೈಲರ್ ಬಿಡುಗಡೆ ಬಗ್ಗೆ ಚಿತ್ರತಂಡ ಅಧಿಕೃತವಾಗಿ ಮಾಹಿತಿ ನೀಡಿದೆ.

ನಾಳೆ ಅಂದರೆ ಮಾರ್ಚ್ 7 ರ ಶನಿವಾರದಂದು ಬೆಳಿಗ್ಗೆ 11:01 ಕ್ಕೆ ಸಿನಿಮಾದ ಟ್ರೈಲರ್ ಬಿಡುಗಡೆಯಾಗಲಿದೆ ಎಂದು ಚಿತ್ರತಂಡ ಘೋಷಿಸಿದೆ. ರಣವೀರ್ ಸಿಂಗ್ ಸೇರಿದಂತೆ ಸಿನಿಮಾಕ್ಕೆ ಸಂಬಂಧಿಸಿದ ಇತರೆ ಕೆಲವರು ಮಾಹಿತಿಯನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ರಣ್ವೀರ್ ಸಿಂಗ್, ‘ನಿಮ್ಮನ್ನು ನೀವು ಸಜ್ಜುಗೊಳಿಸಿಕೊಳ್ಳಿ’ ಎಂದಿದ್ದಾರೆ. ಅವರ ಜೊತೆಗೆ ಸಂಜಯ್ ದತ್, ಅರ್ಜುನ್ ರಾಂಪಾಲ್, ಮಾಧವನ್ ಹಾಗೂ ಅಕ್ಷಯ್ ಖನ್ನಾ ಅಂತಹ ಸ್ಟಾರ್ ಕಲಾವಿದರು ಈ ಚಿತ್ರದಲ್ಲಿದ್ದಾರೆ. ಈ ಚಿತ್ರವು ಕನ್ನಡ ಸೇರಿದಂತೆ ಪಂಚಭಾಷೆಗಳಲ್ಲಿ ಮಾರ್ಚ್ 19 ರಂದು ತೆರೆಕಾಣಲಿದೆ.

ಇದನ್ನೂ ಓದಿ:ಟಾಕ್ಸಿಕ್ Vs ಧುರಂದರ್ 2: ಅಡ್ವಾನ್ಸ್ ಬುಕಿಂಗ್​ನಲ್ಲಿ ಮುನ್ನಡೆ ಸಾಧಿಸಿದ ರಣವೀರ್ ಸಿಂಗ್ ಸಿನಿಮಾ

‘ಧುರಂಧರ್ 2’ ಸಿನಿಮಾದ ಟೀಸರ್ ಒಂದು ಈ ಮುಂಚೆಯೇ ಬಿಡುಗಡೆ ಆಗಿತ್ತು. ರಣ್ವೀರ್ ಸಿಂಗ್ ಯಂಗ್ ಲುಕ್​​ನಲ್ಲಿ ಟೀಸರ್​​ನಲ್ಲಿ ಕಾಣಿಸಿಕೊಂಡಿದ್ದರು. ‘ಧುರಂಧರ್ 2’ ಸಿನಿಮಾ ರಣ್ವೀರ್ ಸಿಂಗ್ ಪಾತ್ರ ಪಾಕಿಸ್ತಾನಕ್ಕೆ ಹೋಗುವ ಮುಂಚಿನ ಕತೆಯನ್ನು ಒಳಗೊಂಡಿರಲಿದೆ ಎಂಬ ಸುದ್ದಿ ಹರಡಿತ್ತು. ಇದೀಗ ಟ್ರೈಲರ್ ಬಿಡುಗಡೆ ಆಗುತ್ತಿದ್ದು, ‘ಧುರಂಧರ್ 2’ ಸಿನಿಮಾದ ಸಾಕಷ್ಟು ಮಾಹಿತಿಯನ್ನು ಬಿಟ್ಟುಕೊಡಲಿದೆ. ಅಲ್ಲದೆ, ಸಿನಿಮಾದ ಕತೆ ಏನಾಗಿರಬಹುದು ಎಂಬ ಸುಳಿವನ್ನು ಸಹ ನೀಡಲಿದೆ.

‘ಧುರಂಧರ್’ ಸಿನಿಮಾ ಭಾರತೀಯ ಗೂಢಚಾರಿಯೊಬ್ಬ ಪಾಕಿಸ್ತಾನಕ್ಕೆ ಹೋಗಿ ಅಲ್ಲಿನ ಭಯೋತ್ಪಾದಕರ ಸಿಂಡಿಕೇಟ್ ಅನ್ನು ಮಣ್ಣು ಮಾಡುವ ಕತೆಯನ್ನು ಒಳಗೊಂಡಿದೆ. ಸಿನಿಮಾನಲ್ಲಿ ರಣ್ವೀರ್ ಸಿಂಗ್ ಜೊತೆಗೆ ಸಂಜಯ್ ದತ್, ಅಕ್ಷಯ್ ಖನ್ನಾ, ಆರ್ ಮಾಧವನ್ ಸೇರಿದಂತೆ ಇನ್ನೂ ಕೆಲವು ಪ್ರಮುಖ ನಟ-ನಟಿಯರು ನಟಿಸಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಅಡಿಕೆ ಬೆಳೆಗಾರರಿಗೆ ಬಜೆಟ್​ನಲ್ಲಿ ಶುಭ ಸುದ್ದಿ: ಎಲೆ ಚುಕ್ಕಿ, ಹಳದಿ ಎಲೆ ರೋಗ ನಿಯಂತ್ರಣಕ್ಕೆ 10 ಕೋಟಿ ರೂ.

ಬೆಂಗಳೂರು, ಮಾರ್ಚ್ 6: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಮಂಡಿಸಿದ 2026-27ನೇ ಸಾಲಿನ ರಾಜ್ಯ ಬಜೆಟ್‌ನಲ್ಲಿ (Karnataka Budget 2026) ಅಡಿಕೆ ಬೆಳೆಗಾರರ ಸಮಸ್ಯೆಗಳನ್ನು ಗಮನದಲ್ಲಿಟ್ಟುಕೊಂಡು ಮಹತ್ವದ ಘೋಷಣೆ ಮಾಡಲಾಗಿದೆ. ಅಡಿಕೆ ಬೆಳೆಗೆ ತೀವ್ರ ಹಾನಿ ಉಂಟುಮಾಡುತ್ತಿರುವ ಎಲೆ ಚುಕ್ಕಿ, ಹಳದಿ ಎಲೆ ಹಾಗೂ ಕೊಳೆ ರೋಗಗಳನ್ನು ನಿಯಂತ್ರಿಸುವ ಸಲುವಾಗಿ ಅಧ್ಯಯನ ಚಟುವಟಿಕೆಗಳಿಗೆ 10 ಕೋಟಿ ರೂಪಾಯಿ ಅನುದಾನ ನೀಡುವುದಾಗಿ ಸರ್ಕಾರ ಬಜೆಟ್​​ನಲ್ಲಿ ಘೋಷಿಸಿದೆ.

ಬಜೆಟ್ ಭಾಷಣದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಅಡಿಕೆ ಬೆಳೆಯ ವಿವಿಧ ರೋಗಗಳು ಹಾಗೂ ತೆಂಗು ಬೆಳೆಗೆ ಕಾಣಿಸಿಕೊಳ್ಳುವ ಕಪ್ಪು ತಲೆ ಹುಳು ಮತ್ತು ಬಿಳಿ ನೊಣಗಳ ನಿಯಂತ್ರಣಕ್ಕಾಗಿ ಸಮುದಾಯ ಆಧಾರಿತ ರೋಗ–ಕೀಟ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ಈ ಯೋಜನೆಯನ್ನು ಕೃಷಿ ವಿಶ್ವವಿದ್ಯಾಲಯಗಳು ಮತ್ತು ಕೃಷಿ ವಿಜ್ಞಾನ ಕೇಂದ್ರಗಳ ಸಹಯೋಗದೊಂದಿಗೆ ಜಾರಿಗೊಳಿಸಲಾಗುತ್ತದೆ ಎಂದು ಅವರು ಹೇಳಿದ್ದಾರೆ.

ತೋಟಗಾರಿಕೆ ಉತ್ಪನ್ನಗಳ ಸಂಸ್ಕರಣೆಗೆ ಉತ್ತೇಜನ ನೀಡಲು 64 ಕೋಟಿ ರೂ.

ತೋಟಗಾರಿಕೆ ಉತ್ಪನ್ನಗಳ ಸಂಸ್ಕರಣೆಗೆ ಉತ್ತೇಜನ ನೀಡಲು ಸರ್ಕಾರ ಮತ್ತೊಂದು ಮಹತ್ವದ ನಿರ್ಧಾರ ಕೈಗೊಂಡಿದೆ. ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲ್ಲೂಕು ಹಾಗೂ ವಿಜಯಪುರ ಜಿಲ್ಲೆಯ ತೊರವಿಯಲ್ಲಿ ಒಟ್ಟು 12,000 ಮೆಟ್ರಿಕ್ ಟನ್ ಸಾಮರ್ಥ್ಯದ ಎರಡು ಶೀತಲಗೃಹಗಳನ್ನು 64 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗುವುದು ಎಂದು ಘೋಷಿಸಲಾಗಿದೆ. ಜೊತೆಗೆ, ರಾಜ್ಯದ ಎಲ್ಲಾ ಕೃಷಿ ಮಾರುಕಟ್ಟೆಗಳಲ್ಲಿ ಹಂತ ಹಂತವಾಗಿ ಶೀತಲಗೃಹಗಳನ್ನು ನಿರ್ಮಿಸುವ ಯೋಜನೆಯೂ ಸರ್ಕಾರದ ಮುಂದಿದೆ.

ತೋಟಗಾರಿಕೆಯನ್ನು ರೈತರ ಆದಾಯ ಹೆಚ್ಚಿಸುವ ಪ್ರಮುಖ ಕ್ಷೇತ್ರವಾಗಿ ಅಭಿವೃದ್ಧಿಪಡಿಸುವ ಗುರಿಯನ್ನು ಸರ್ಕಾರ ಹೊಂದಿದೆ. ಉತ್ತಮ ಗುಣಮಟ್ಟದ, ಅಧಿಕ ಮೌಲ್ಯದ ಮತ್ತು ಮಾರುಕಟ್ಟೆ ಆಧಾರಿತ ತೋಟಗಾರಿಕೆ ಬೆಳೆಗಳಿಗೆ ಆದ್ಯತೆ ನೀಡಲಾಗುತ್ತಿದೆ. ಕಳೆದ ಮೂರು ವರ್ಷಗಳಲ್ಲಿ ರಾಜ್ಯದಲ್ಲಿ ಸುಮಾರು 89,000 ಹೆಕ್ಟೇರ್ ಪ್ರದೇಶದಲ್ಲಿ ಹೊಸ ತೋಟಗಾರಿಕೆ ಬೆಳೆಗಳನ್ನು ಅಳವಡಿಸಲಾಗಿದೆ ಎಂದು ಸಿದ್ದರಾಮಯ್ಯ ತಿಳಿಸಿದರು.

ಇದೇ ಅವಧಿಯಲ್ಲಿ 2.23 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಹನಿ ನೀರಾವರಿ ವ್ಯವಸ್ಥೆ ಅಳವಡಿಕೆಯಾಗಿದ್ದು, 2.36 ಲಕ್ಷ ರೈತರಿಗೆ ಇದರ ಪ್ರಯೋಜನ ದೊರೆತಿದೆ. ಬೆಳೆ ವಿಮೆ ಯೋಜನೆಯಡಿ 11 ಲಕ್ಷ ರೈತರಿಗೆ ಒಟ್ಟು 2,378 ಕೋಟಿ ರೂಪಾಯಿ ಪರಿಹಾರ ನೀಡಲಾಗಿದೆ. ಜೊತೆಗೆ 21,360 ಫಲಾನುಭವಿಗಳಿಗೆ 9,800 ಕೊಯ್ಲೋತ್ತರ ಘಟಕಗಳನ್ನು ನಿರ್ಮಿಸಲು ಸಹಾಯ ಮಾಡಲಾಗಿದೆ ಎಂದು ಅವರು ತಿಳಿಸಿದರು.

ಇದನ್ನೂ ಓದಿ: ಗೃಹಲಕ್ಷ್ಮಿ ಯೋಜನೆಗೆ ಭರ್ಜರಿ ಅನುದಾನ: ಗೃಹಿಣಿಯರಿಗೆ ಬಜೆಟ್​ನಲ್ಲಿ ಗುಡ್ ನ್ಯೂಸ್ ಕೊಟ್ಟ ಸಿದ್ದರಾಮಯ್ಯ

ಇದರ ಜೊತೆಗೆ ತೋಟಗಾರಿಕೆ ಇಲಾಖೆಯ ಕ್ಷೇತ್ರಗಳು ಮತ್ತು ನರ್ಸರಿಗಳಲ್ಲಿರುವ ಲಭ್ಯ ಜಮೀನನ್ನು ಬಳಸಿಕೊಂಡು ಉತ್ಕೃಷ್ಟ ಮೌಲ್ಯದ ತೋಟಗಳ ಅಭಿವೃದ್ಧಿ, ಕೊಯ್ಲೋತ್ತರ ಸೌಲಭ್ಯಗಳು ಹಾಗೂ ತೋಟಗಾರಿಕೆ ಆಧಾರಿತ ಕೈಗಾರಿಕೆಗಳನ್ನು ಪಿಪಿಪಿ (PPP) ಮಾದರಿಯಲ್ಲಿ ಸ್ಥಾಪಿಸಲು ಸರ್ಕಾರ ಯೋಜನೆ ರೂಪಿಸಿದೆ.

ಕರ್ನಾಟಕ ಬಜೆಟ್ ಕುರಿತ ಕ್ಷಣಕ್ಷಣದ ಅಪ್​ಡೇಟ್​ಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

Karnataka Budget 2026: ಬಜೆಟ್​ನಲ್ಲಿ ಇಲಾಖಾವಾರು ಹಣ ಹಂಚಿಕೆ: ಯಾವ ಕ್ಷೇತ್ರಕ್ಕೆ ಎಷ್ಟು ಪಾಲು?

ಬೆಂಗಳೂರು, ಮಾ.6: ಇಂದು (ಮಾ.6) ಮಂಡನೆಯಾದ 2026-27ನೇ ಸಾಲಿನ ರಾಜ್ಯ ಬಜೆಟ್‌ನ ಒಟ್ಟು ಗಾತ್ರ ಸರಿಸುಮಾರು 4.48 ಲಕ್ಷ ಕೋಟಿ ರೂ. ಇದರಲ್ಲಿ ಹಲವು ಇಲಾಖೆಗಳಿಗೆ ಹಂಚಿಕೆಗಳನ್ನು ಮಾಡಲಾಗಿದೆ. ಅದರಲ್ಲಿ ಗ್ಯಾರಂಟಿ ಯೋಜನೆಗಳು ಮತ್ತು ಅಭಿವೃದ್ಧಿ ಕಾರ್ಯಗಳ ನಡುವೆ ಸಮತೋಲನ ಕಾಯ್ದುಕೊಳ್ಳಲು ಸರ್ಕಾರವು ವಿವಿಧ ಇಲಾಖೆಗಳಿಗೆ ಹಣವನ್ನು ನೀಡಿದೆ. ಯಾವೆಲ್ಲ ಇಲಾಖೆಗಳಿಗೆ ಎಷ್ಟು ಅನುದಾನವನ್ನು ನೀಡಿದೆ ಎಂಬುದನ್ನು ಇಲ್ಲಿ ಹೇಳಲಾಗಿದೆ.

ಇನ್ನು ಈ ಬಜೆಟ್​​ನಲ್ಲಿ ಶಿಕ್ಷಣಕ್ಕೆ ಪ್ರಥಮ ಆದ್ಯತೆ ನೀಡಿಲಾಗಿದೆ. ರಾಜ್ಯದ ಇತಿಹಾಸದಲ್ಲೇ ಶಿಕ್ಷಣ ಕ್ಷೇತ್ರಕ್ಕೆ ಈ ಬಾರಿ ಗರಿಷ್ಠ ಮೊತ್ತವನ್ನು ಮೀಸಲಿಡಲಾಗಿದೆ. 800 ಕೆಪಿಎಸ್ (KPS) ಶಾಲೆಗಳ ಸ್ಥಾಪನೆ ಮತ್ತು 15,000 ಶಿಕ್ಷಕರ ನೇಮಕಾತಿಗೆ ಒತ್ತು ನೀಡಲಾಗಿದೆ. ಇದರ ಜತೆಗೆ ಗ್ಯಾರಂಟಿಗೂ ಬಲ ನೀಡಲಾಗಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ನೀಡಲಾದ ದೊಡ್ಡ ಮೊತ್ತವು ‘ಗೃಹಲಕ್ಷ್ಮಿ’ ಅಂತಹ ಗ್ಯಾರಂಟಿ ಯೋಜನೆಗಳ ಮುಂದುವರಿಕೆಯನ್ನು ಖಚಿತಪಡಿಸಿದೆ.

ನೀರಾವರಿ ಮತ್ತು ಗ್ರಾಮೀಣಾಭಿವೃದ್ಧಿಗೂ ಹೆಚ್ಚು ಅನುದಾನಗಳನ್ನು ನೀಡಲಾಗಿದೆ. ಕೃಷಿ ಮತ್ತು ಗ್ರಾಮೀಣ ಭಾಗದ ಮೂಲಸೌಕರ್ಯಕ್ಕೆ ಸರಿಸುಮಾರು 50,000 ಕೋಟಿಗೂ ಅಧಿಕ ಹಣವನ್ನು ವಿವಿಧ ಇಲಾಖೆಗಳ ಮೂಲಕ ಹಂಚಲಾಗಿದೆ.

ಇಲಾಖಾವಾರು ಅನುದಾನ:

ಇಲಾಖೆಯ ಹೆಸರು ಹಂಚಿಕೆಯಾದ ಅನುದಾನ (ಕೋಟಿ ರೂ.ಗಳಲ್ಲಿ)
ಶಿಕ್ಷಣ ಇಲಾಖೆ 47,224
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ 34,929
ಇಂಧನ ಇಲಾಖೆ 29,947
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ 26,559
ಒಳಾಡಳಿತ ಮತ್ತು ಸಾರಿಗೆ ಇಲಾಖೆ 23,100
ಜಲಸಂಪನ್ಮೂಲ (ನೀರಾವರಿ) 22,436
ನಗರಾಭಿವೃದ್ಧಿ ಮತ್ತು ವಸತಿ ಇಲಾಖೆ 22,203
ಕಂದಾಯ ಇಲಾಖೆ 19,843
ಸಮಾಜ ಕಲ್ಯಾಣ ಇಲಾಖೆ 18,612
ಆರೋಗ್ಯ ಮತ್ತು ಕುಟುಂಬ ಕಲ್ಯಾಣ 17,817
ಲೋಕೋಪಯೋಗಿ ಇಲಾಖೆ (PWD) 11,424
ಕೃಷಿ ಇಲಾಖೆ 8,373
ಆಹಾರ ಮತ್ತು ನಾಗರಿಕ ಸರಬರಾಜು 7,942
ಪಶುಸಂಗೋಪನೆ ಮತ್ತು ಮೀನುಗಾರಿಕೆ 4,084
ಇತರ ಇಲಾಖೆಗಳು 1,72,757

ಬೆಂಗಳೂರು ನಗರಕ್ಕೆ ಬಂಪರ್ ಕೊಡುಗೆ

ಇದರ ಜತೆಗೆ ಬೆಂಗಳೂರನ್ನು ಅಂತರಾಷ್ಟ್ರೀಯ ಮಟ್ಟದ ನಗರವನ್ನಾಗಿ ರೂಪಿಸಲು ‘ನಮ್ಮ ಬೆಂಗಳೂರು’ ಮತ್ತು ‘ಬ್ರ್ಯಾಂಡ್ ಬೆಂಗಳೂರು’ ಯೋಜನೆಗಳ ಅಡಿಯಲ್ಲಿ ಸಾವಿರಾರು ಕೋಟಿ ರೂಪಾಯಿಗಳನ್ನು ಮೀಸಲಿಡಲಾಗಿದೆ. ಬೆಂಗಳೂರಿನ ಪ್ರಮುಖ ಟ್ರಾಫಿಕ್ ಪಾಯಿಂಟ್‌ಗಳಲ್ಲಿ ಸಂಚಾರ ದಟ್ಟಣೆ ಕಡಿಮೆ ಮಾಡಲು ಟನಲ್ ರಸ್ತೆ (Tunnel Roads) ನಿರ್ಮಾಣಕ್ಕೆ ಹೆಚ್ಚಿನ ಅನುದಾನ ಮೀಸಲಿಡಲಾಗಿದೆ. ಮೊದಲ ಹಂತದಲ್ಲಿ ಹೆಬ್ಬಾಳದಿಂದ ಸಿಲ್ಕ್ ಬೋರ್ಡ್‌ವರೆಗಿನ ಯೋಜನೆಯ ವೇಗಕ್ಕೆ ಒತ್ತು ನೀಡಲಾಗಿದೆ.

ಮೆಟ್ರೋ 3ನೇ ಹಂತದ ಕಾಮಗಾರಿಗಳಿಗೆ ಮತ್ತು ಹೊಸ ಮಾರ್ಗಗಳ ಸಮೀಕ್ಷೆಗಾಗಿ ಸುಮಾರು 5,000 ಕೋಟಿ ರೂ. ಗೂ ಅಧಿಕ ಹಣವನ್ನು ಮೀಸಲಿಡಲಾಗಿದೆ. ವಿಮಾನ ನಿಲ್ದಾಣದ ಮಾರ್ಗವನ್ನು ಶೀಘ್ರವಾಗಿ ಪೂರ್ಣಗೊಳಿಸಲು ಗಡುವು ನೀಡಲಾಗಿದೆ. ರಸ್ತೆ ಗುಂಡಿ ಮುಚ್ಚುವುದು, ಬಿಳಿ ರಸ್ತೆ ನಿರ್ಮಾಣ ಮತ್ತು ಮಳೆನೀರು ಕಾಲುವೆಗಳ ಅಭಿವೃದ್ಧಿಗೆ ಸುಮಾರು 3,000 ಕೋಟಿ ರೂ. ಅನುದಾನ ನೀಡಲಾಗಿದೆ. ಬಹುಕಾಲದ ಬೇಡಿಕೆಯಾದ ಪೆರಿಫೆರಲ್ ರಿಂಗ್ ರೋಡ್ (PRR) ಭೂಸ್ವಾಧೀನ ಪ್ರಕ್ರಿಯೆ ಚುರುಕುಗೊಳಿಸಲು ಹಣಕಾಸಿನ ನೆರವು ಘೋಷಿಸಲಾಗಿದೆ. ಬೆಂಗಳೂರಿನ 110 ಹಳ್ಳಿಗಳಿಗೆ ಕಾವೇರಿ ನೀರು ಪೂರೈಸುವ ಯೋಜನೆಯ ಅಂತಿಮ ಹಂತದ ಕಾಮಗಾರಿಗಳಿಗೆ ಅಗತ್ಯ ಅನುದಾನ ಒದಗಿಸಲಾಗಿದೆ.

ಇದನ್ನೂ ಓದಿ: ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆ ಹೆಸರು ಬದಲಾವಣೆ ಮಾಡಿ ಸಿಎಂ ಘೋಷಣೆ

ಯಾವೆಲ್ಲ ಮೂಲಗಳಿಂದ ತೆರಿಗೆ ಬಂದಿದೆ:

ರಾಜ್ಯ ತೆರಿಗೆ ಆದಾಯ: 49 ಶೇಕಾಡ

ಬಂಡವಾಳ ಜಮೆ ಮತ್ತು ಸಾಲಗಳು: 29 ಶೇಕಾಡ

ಕೇಂದ್ರ ತೆರಿಗೆ ಪಾಲು: 14 ಶೇಕಾಡ

ಕೇಂದ್ರ ಸರ್ಕಾರದ ಸಹಾಯಾನುದಾನ: 4 ಶೇಕಾಡ

ರಾಜ್ಯ ತೆರಿಗೆಯೇತರ ರಾಜಸ್ವ: 4 ಶೇಕಾಡ

ರಾಜ್ಯದ ಸ್ವಂತ ತೆರಿಗೆ ರಾಜಸ್ವಗಳ ವಿವರ

ವಾಣಿಜ್ಯ ತೆರಿಗೆಗಳು: ರೂ. 1,25,000 (57%).

ರಾಜ್ಯ ಅಬಕಾರಿ: ರೂ. 45,000 (20%).

ನೋಂದಣಿ ಮತ್ತು ಮುದ್ರಾಂಕ: ರೂ. 29,000 (13%).

ಮೋಟಾರು ವಾಹನ ತೆರಿಗೆ: ರೂ. 15,500 (7%).

ಇತರೆ: ರೂ. 5,500 (3%).

ಬಜೆಟ್ ವೆಚ್ಚದ ಹಂಚಿಕೆ

ಸಾಲ ಮರುಪಾವತಿ: 20 ಶೇಕಾಡ

ಇತರ ಸಾಮಾನ್ಯ ಸೇವೆಗಳು: 18 ಶೇಕಾಡ

ಸಮಾಜ ಕಲ್ಯಾಣ: 15 ಶೇಕಾಡ

ಇತರ ಆರ್ಥಿಕ ಸೇವೆಗಳು: 14 ಶೇಕಾಡ

ಕೃಷಿ, ನೀರಾವರಿ ಮತ್ತು ಗ್ರಾಮೀಣಾಭಿವೃದ್ಧಿ: 13 ಶೇಕಾಡ

ಶಿಕ್ಷಣ: 10 ಶೇಕಾಡ

ಆರೋಗ್ಯ: 4 ಶೇಕಾಡ

ನೀರು ಪೂರೈಕೆ ಮತ್ತು ನೈರ್ಮಲ್ಯ: 3 ಶೇಕಾಡ

ಇತರ ಸಾಮಾಜಿಕ ಸೇವೆಗಳು: 3 ಶೇಕಾಡ

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Source link

ಗ್ಲಾಮ್ ಲುಕ್ ಅಲ್ಲಿ ಯುವರಾಣಿಯಂತೆ ಕಂಗೊಳಿಸಿದ ನಟಿ ಆಶಿಕಾ ರಂಗನಾಥ್

Source link

ಕರ್ನಾಟಕದ ಒಟ್ಟು ಸಾಲ ಎಷ್ಟು ಗೊತ್ತೇ? ಬಜೆಟ್​ನಲ್ಲಿ ಸಿಎಂ ಸಿದ್ದರಾಮಯ್ಯ ಕೊಟ್ಟ ಮಾಹಿತಿ ಇಲ್ಲಿದೆ

ಬೆಂಗಳೂರು, ಮಾರ್ಚ್ 6: 2025-26ನೇ ಸಾಲಿನಲ್ಲಿ ರಾಜ್ಯದ ಜಿಎಸ್‌ಡಿಪಿ 8.1% ನೈಜ ಬೆಳವಣಿಗೆ ದಾಖಲಿಸಿದ್ದು, ಇದು ದೇಶದ ಜಿಡಿಪಿಗಿಂತ ಹೆಚ್ಚಾಗಿದೆ. ಕೃಷಿ, ಕೈಗಾರಿಕಾ ಮತ್ತು ಸೇವಾ ವಲಯಗಳಲ್ಲಿ ಸಮತೋಲಿತ ಬೆಳವಣಿಗೆ ಕಂಡುಬಂದಿದೆ. ರಾಜ್ಯವು 56,432 ಹುದ್ದೆಗಳನ್ನು ಭರ್ತಿ ಮಾಡುವ ಮೂಲಕ ಉದ್ಯೋಗ ಸೃಷ್ಟಿಗೆ ಆದ್ಯತೆ ನೀಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. 2026-27ನೇ ಸಾಲಿನ ಬಜೆಟ್ ಮಂಡಿಸಿದ ಅವರು, ಮೂಲಸೌಕರ್ಯ ಅಭಿವೃದ್ಧಿಗೆ 8,600 ಕೋಟಿ ರೂಪಾಯಿಗಳ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ ಎಂದು ತಿಳಿಸಿದರು. ಅಲ್ಲದೆ, ಸಾಲದ ಬಗ್ಗೆಯೂ ಮಾಹಿತಿ ನೀಡಿದ್ದಾರೆ.

ಕೇಂದ್ರ ಸರ್ಕಾರದ ತೆರಿಗೆ ನೀತಿ ಬದಲಾವಣೆಗಳು ಮತ್ತು ಜಿಎಸ್‌ಟಿ ದರ ತರ್ಕಬದ್ಧಗೊಳಿಸುವಿಕೆಯಿಂದ ರಾಜ್ಯದ ಆದಾಯ ಸಂಗ್ರಹಣೆಗೆ ಸವಾಲುಗಳು ಎದುರಾಗಿವೆ. ಜಿಎಸ್‌ಟಿ ಸಂಗ್ರಹಣೆಯಲ್ಲಿ ಪ್ರಸಕ್ತ ವರ್ಷ 10,000 ಕೋಟಿ ರೂಪಾಯಿ ಮತ್ತು ಮುಂದಿನ ವರ್ಷ 15,000 ಕೋಟಿ ರೂಪಾಯಿ ಕೊರತೆಯಾಗಲಿದೆ ಎಂದು ಅಂದಾಜಿಸಲಾಗಿದೆ. ರಾಜ್ಯದ ಒಟ್ಟು ಸಾಲ 8,24,389 ಕೋಟಿ ರೂಪಾಯಿ ಎಂದು ಸಿದ್ದರಾಮಯ್ಯ ತಿಳಿಸಿದ್ದು, ಕೇಂದ್ರದ ಅಸಹಕಾರದ ನಡುವೆಯೂ ವಿತ್ತೀಯ ಶಿಸ್ತು ಕಾಪಾಡಿಕೊಂಡು ಅಭಿವೃದ್ಧಿ ಮುಂದುವರಿಸಲು ರಾಜ್ಯ ಸರ್ಕಾರ ಬದ್ಧವಾಗಿದೆ ಎಂದಿದ್ದಾರೆ.

ಕರ್ನಾಟಕ ಬಜೆಟ್ ಕುರಿತ ಕ್ಷಣಕ್ಷಣದ ಅಪ್​ಡೇಟ್​ಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಬದುಕಿದ್ದ ವ್ಯಕ್ತಿ ಸತ್ತನೆಂದು ತಿಳಿದು ಸಂಬಂಧಿಕರ ಯಡವಟ್ಟು; ಜೀವಂತವಾಗಿದ್ದಾಗಲೇ ನಡೀತಿತ್ತು ಅಂತ್ಯ ಸಂಸ್ಕಾರ!

ಬಾಗಲಕೋಟೆ, ಮಾರ್ಚ್​ 06: ಜಿಲ್ಲೆಯ ಜಮಖಂಡಿ (Bagalakot) ಪಟ್ಟಣದ ಮೋಮಿನ್ ಗಲ್ಲಿಯಲ್ಲಿ ಬದುಕಿದ್ದ ವ್ಯಕ್ತಿಯನ್ನು ಸತ್ತನೆಂದು ಭಾವಿಸಿ ಅಂತ್ಯ ಸಂಸ್ಕಾರಕ್ಕೆ ಕರೆದೊಯ್ದ ಘಟನೆ ನಡೆದಿದೆ. ಊರಿಗೆ ಕರೆತರುತ್ತಿದ್ದ ವ್ಯಕ್ತಿಯಲ್ಲಿ ಮಾರ್ಗ ಮಧ್ಯೆ ಮತ್ತೆ ಉಸಿರಾಟ ಕಂಡುಬಂದಿದ್ದು, ಸಂಬಂಧಿಕರು ಗಲಿಬಿಲಿಗೊಂಡಿದ್ದಾರೆ. ಈ ಘಟನೆ ತಿಳಿಯುತ್ತಿದ್ದಂತೆ ಜಮಖಂಡಿ ಸರ್ಕಾರಿ ಆಸ್ಪತ್ರೆ ಬಳಿ ಸಾವಿರಾರು ಜನರು ರಾತ್ರಿ ವೇಳೆ ಜಮಾಯಿಸಿದ್ದರು.

ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ವ್ಯಕ್ತಿ!

ಮೋಮಿನ್ ಗಲ್ಲಿಯ ನಿವಾಸಿ ಹಾಜಿ ಮುಬಾರಕ್ ಅವಟಿ (65) ಅವರು ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದು, ಇತ್ತೀಚೆಗೆ ಅವರಿಗೆ ಹೃದಯಾಘಾತವೂ ಆಗಿತ್ತು. ಈ ಹಿನ್ನೆಲೆಯಲ್ಲಿ ಅವರನ್ನು ಬೆಳಗಾವಿಯ ಖಾಸಗಿ ಆಸ್ಪತ್ರೆಯಾದ ಕೆಎಲ್‌ಇ ಆಸ್ಪತ್ರೆಗೆ ದಾಖಲಿಸಿ ವೆಂಟಿಲೇಟರ್ ಮೇಲೆ ಚಿಕಿತ್ಸೆ ನೀಡಲಾಗುತ್ತಿತ್ತು. ವೈದ್ಯರು ಅವರ ಸ್ಥಿತಿ ಗಂಭೀರವಾಗಿದ್ದು ಬದುಕುವ ಸಾಧ್ಯತೆ ಕಡಿಮೆ ಎಂದು ಕುಟುಂಬಸ್ಥರಿಗೆ ತಿಳಿಸಿದ್ದರು ಎಂದು ಹೇಳಲಾಗಿದೆ.

ಈ ಹಿನ್ನೆಲೆಯಲ್ಲಿ ಕುಟುಂಬಸ್ಥರು ವೈದ್ಯರ ಸಲಹೆಗೆ ವಿರುದ್ಧವಾಗಿ ಮುಬಾರಕ್ ಅವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಿಕೊಂಡು ಊರಿಗೆ ಕರೆತರಲು ನಿರ್ಧರಿಸಿದರು. ವೆಂಟಿಲೇಟರ್ ತೆಗೆದ ಬಳಿಕ ಉಸಿರಾಟ ಕಾಣಿಸದ ಹಿನ್ನೆಲೆ ಮುಬಾರಕ್ ಮೃತಪಟ್ಟಿದ್ದಾರೆ ಎಂದು ಸಂಬಂಧಿಕರು ಭಾವಿಸಿ ಅಂತ್ಯಸಂಸ್ಕಾರಕ್ಕೆ ಜಮಖಂಡಿಗೆ ಕರೆತರುತ್ತಿದ್ದರು. ಆದರೆ ಲೋಕಾಪುರ ಸಮೀಪ ರಸ್ತೆಯ ಹಂಪ್ಸ್ ಬಳಿ ವಾಹನ ದಡಕಿದಾಗ ಮುಬಾರಕ್ ಅವಟಿ ಮತ್ತೆ ಉಸಿರಾಡಿದಂತೆ ಕಂಡುಬಂದಿದೆ ಎಂದು ಸಂಬಂಧಿಕರು ತಿಳಿಸಿದ್ದಾರೆ. ಇದರಿಂದ ಗಾಬರಿಗೊಂಡ ಕುಟುಂಬಸ್ಥರು ತಕ್ಷಣವೇ ಅವರನ್ನು ಜಮಖಂಡಿ ತಾಲೂಕು ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದರು.

ಇದನ್ನೂ ಓದಿ 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ಬಳಕೆ ನಿಷೇಧ! ಕರ್ನಾಟಕ ಸರ್ಕಾರ ಮಹತ್ವದ ನಿರ್ಧಾರ

ವೈದ್ಯರು ಹೇಳಿದ್ದೇನು?

ಜಮಖಂಡಿ ಸರ್ಕಾರಿ ಆಸ್ಪತ್ರೆಯ ವೈದ್ಯ ಡಾ. ಕೃಷ್ಣಾ ಬಣ್ಣದ ಅವರು ಈ ಕುರಿತು ಮಾಹಿತಿ ನೀಡಿ, ರಾತ್ರಿ ಸುಮಾರು 7.30 ರಿಂದ 8 ಗಂಟೆ ವೇಳೆಗೆ ಮುಬಾರಕ್ ಅವರನ್ನು ಆಸ್ಪತ್ರೆಗೆ ಕರೆತರಲಾಗಿತ್ತು. ಅವರ ಬಳಿ ಇದ್ದ ಕೇಸ್ ಪೇಪರ್‌ಗಳನ್ನು ಪರಿಶೀಲಿಸಿದಾಗ ಬೆಳಗಾವಿಯ ಆಸ್ಪತ್ರೆ ವೈದ್ಯರು ಸಾವನ್ನಪ್ಪಿದ್ದಾರೆ ಎಂದು ಎಲ್ಲಿಯೂ ಉಲ್ಲೇಖ ಮಾಡಿರಲಿಲ್ಲ. ಮುಬಾರಕ್ ಅವರಿಗೆ ಕಿಡ್ನಿ ಫೇಲ್ಯೂರ್ ಪರಿಣಾಮವಾಗಿ ಹೃದಯಾಘಾತವಾಗಿತ್ತು.

ವೆಂಟಿಲೇಟರ್ ತೆಗೆದ ಬಳಿಕ ಉಸಿರಾಟ ಕಾಣಿಸದ ಕಾರಣ ಸಂಬಂಧಿಕರು ಮೃತಪಟ್ಟಿದ್ದಾರೆ ಎಂದು ಭಾವಿಸಿ ಮನೆಗೆ ಕರೆತರುತ್ತಿದ್ದರು. ಮಾರ್ಗ ಮಧ್ಯೆ ಹಂಪ್ಸ್ ಬಳಿ ಮತ್ತೆ ಉಸಿರಾಟ ಕಂಡುಬಂದಿದೆ ಎಂದು ಹೇಳಲಾಗುತ್ತಿದೆ ಎಂದು ವೈದ್ಯರು ವಿವರಿಸಿದರು. ಜಮಖಂಡಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿದ ಬಳಿಕ ಹೆಚ್ಚಿನ ಚಿಕಿತ್ಸೆಗೆ ಮುಬಾರಕ್ ಅವರನ್ನು ವಿಜಯಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಕರ್ನಾಟಕದ ಒಟ್ಟು ಸಾಲ ಎಷ್ಟು ಗೊತ್ತೇ? ಬಜೆಟ್​ನಲ್ಲಿ ಸಿಎಂ ಸಿದ್ದರಾಮಯ್ಯ ಕೊಟ್ಟ ಮಾಹಿತಿ ಇಲ್ಲಿದೆ

ಬೆಂಗಳೂರು, ಮಾರ್ಚ್ 6: 2025-26ನೇ ಸಾಲಿನಲ್ಲಿ ರಾಜ್ಯದ ಜಿಎಸ್‌ಡಿಪಿ 8.1% ನೈಜ ಬೆಳವಣಿಗೆ ದಾಖಲಿಸಿದ್ದು, ಇದು ದೇಶದ ಜಿಡಿಪಿಗಿಂತ ಹೆಚ್ಚಾಗಿದೆ. ಕೃಷಿ, ಕೈಗಾರಿಕಾ ಮತ್ತು ಸೇವಾ ವಲಯಗಳಲ್ಲಿ ಸಮತೋಲಿತ ಬೆಳವಣಿಗೆ ಕಂಡುಬಂದಿದೆ. ರಾಜ್ಯವು 56,432 ಹುದ್ದೆಗಳನ್ನು ಭರ್ತಿ ಮಾಡುವ ಮೂಲಕ ಉದ್ಯೋಗ ಸೃಷ್ಟಿಗೆ ಆದ್ಯತೆ ನೀಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. 2026-27ನೇ ಸಾಲಿನ ಬಜೆಟ್ ಮಂಡಿಸಿದ ಅವರು, ಮೂಲಸೌಕರ್ಯ ಅಭಿವೃದ್ಧಿಗೆ 8,600 ಕೋಟಿ ರೂಪಾಯಿಗಳ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ ಎಂದು ತಿಳಿಸಿದರು. ಅಲ್ಲದೆ, ಸಾಲದ ಬಗ್ಗೆಯೂ ಮಾಹಿತಿ ನೀಡಿದ್ದಾರೆ.

ಕೇಂದ್ರ ಸರ್ಕಾರದ ತೆರಿಗೆ ನೀತಿ ಬದಲಾವಣೆಗಳು ಮತ್ತು ಜಿಎಸ್‌ಟಿ ದರ ತರ್ಕಬದ್ಧಗೊಳಿಸುವಿಕೆಯಿಂದ ರಾಜ್ಯದ ಆದಾಯ ಸಂಗ್ರಹಣೆಗೆ ಸವಾಲುಗಳು ಎದುರಾಗಿವೆ. ಜಿಎಸ್‌ಟಿ ಸಂಗ್ರಹಣೆಯಲ್ಲಿ ಪ್ರಸಕ್ತ ವರ್ಷ 10,000 ಕೋಟಿ ರೂಪಾಯಿ ಮತ್ತು ಮುಂದಿನ ವರ್ಷ 15,000 ಕೋಟಿ ರೂಪಾಯಿ ಕೊರತೆಯಾಗಲಿದೆ ಎಂದು ಅಂದಾಜಿಸಲಾಗಿದೆ. ರಾಜ್ಯದ ಒಟ್ಟು ಸಾಲ 8,24,389 ಕೋಟಿ ರೂಪಾಯಿ ಎಂದು ಸಿದ್ದರಾಮಯ್ಯ ತಿಳಿಸಿದ್ದು, ಕೇಂದ್ರದ ಅಸಹಕಾರದ ನಡುವೆಯೂ ವಿತ್ತೀಯ ಶಿಸ್ತು ಕಾಪಾಡಿಕೊಂಡು ಅಭಿವೃದ್ಧಿ ಮುಂದುವರಿಸಲು ರಾಜ್ಯ ಸರ್ಕಾರ ಬದ್ಧವಾಗಿದೆ ಎಂದಿದ್ದಾರೆ.

ಕರ್ನಾಟಕ ಬಜೆಟ್ ಕುರಿತ ಕ್ಷಣಕ್ಷಣದ ಅಪ್​ಡೇಟ್​ಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

Karnataka Budget 2026 PDF Download: ಕರ್ನಾಟಕ ಬಜೆಟ್ 2026-27, ಪಿಡಿಎಫ್ ಪ್ರತಿ ಡೌನ್​ಲೋಡ್ ಮಾಡಿ

ಬೆಂಗಳೂರು, ಮಾರ್ಚ್ 6: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ನೇತೃತ್ವದ ಕರ್ನಾಟಕ ಕಾಂಗ್ರೆಸ್ ಸರ್ಕಾರದ 2026-27 ನೇ ಸಾಲಿನ ಬಜೆಟ್ (Karnataka Budget 2026) ಮಂಡನೆಯಾಗಿದೆ. ಬಜೆಟ್ ಮಂಡನೆ ಮಾಡಿದ ಸಿದ್ದರಾಮಯ್ಯ, ಅತಿಹೆಚ್ಚು ಆಯವ್ಯಯ ಮಂಡಿಸಿದ ದಾಖಲೆಯನ್ನೂ ತಮ್ಮ ಹೆಸರಿಗೆ ಬರೆದುಕೊಂಡರು. ಅವರು 2026ರವರೆಗೆ 17 ಬಜೆಟ್ ಮಂಡನೆ ಮಾಡಿದಂತಾಗಿದೆ. ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಸ್ಕೀಮ್​ಗಳಿಗೆ ಅನುದಾನ, ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಅನುದಾನ ಸೇರಿದಂತೆ ಅನೇಕ ಘೋಷಣೆಗಳನ್ನು ಬಜೆಟ್​​ನಲ್ಲಿ ಮಾಡಲಾಗಿದೆ.

ಕರ್ನಾಟಕ ಬಜೆಟ್​ 2026-27 ಪಿಡಿಎಫ್ ಪ್ರತಿ ಇಲ್ಲಿ ಡೌನ್​ಲೋಡ್ ಮಾಡಿ

ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆಗೆ ಬಜೆಟ್​ನಲ್ಲಿ ಭರ್ಜರಿ ಅನುದಾನ ಹಂಚಿಕೆ ಮಾಡಲಾಗಿದೆ. ಗೃಹಲಕ್ಷ್ಮಿ ಯೋಜನೆಗೆ 28,608 ಕೋಟಿ ರೂ. ಅನುದಾನ ಮೀಸಲು, ಶಕ್ತಿ ಯೋಜನೆಗೆ 5,300 ಕೋಟಿ ರೂಪಾಯಿ ಅನುದಾನ ಮೀಸಲು, ಗೃಹಜ್ಯೋತಿ ಯೋಜನೆಗೆ ಈ ವರ್ಷ 10,578 ಹಣ ಮೀಸಲು ಇಡಲಾಗಿದೆ.

ಇದನ್ನೂ ಓದಿ: ಸಿದ್ದರಾಮಯ್ಯ ದಾಖಲೆಯ ಬಜೆಟ್ ಮಂಡನೆಯ ಲೈವ್ ಅಪ್​ಡೇಟ್ಸ್​ಗೆ ಇಲ್ಲಿ ಕ್ಲಿಕ್ ಮಾಡಿ

ಸದ್ಯ ಈ ಬಜೆಟ್ ಮಂಡನೆಯೊಂದಿಗೆ ಕರ್ನಾಟಕದ ಇತಿಹಾಸದಲ್ಲಿ ಅತಿಹೆಚ್ಚು ಬಾರಿ ಬಜೆಟ್ ಮಂಡಿಸಿದ ಕೀರ್ತಿ ಸಿದ್ದರಾಮಯ್ಯ ಅವರದ್ದಾಗಿದೆ. ಈ ಹಿಂದೆ ಮಾಜಿ ಮುಖ್ಯಮಂತ್ರಿಗಳಾದ ರಾಮಕೃಷ್ಣ ಹೆಗಡೆ 13 ಬಾರಿ ಹಾಗೂ ಬಿಎಸ್ ಯಡಿಯೂರಪ್ಪ 8 ಬಾರಿ ಬಜೆಟ್ ಮಂಡನೆ ಮಾಡಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link