ಜಗತ್ತಿನ ಎರಡು ದೊಡ್ಡ ಶಕ್ತಿಗಳ ಸಮ್ಮಿಲನ: ಸಂಘರ್ಷ ಬೇಡ ಸಹಕಾರವಿರಲಿ ಎಂದ ಜಿನ್‌ಪಿಂಗ್ – Kannada News | Xi Jinping to Trump: US and China Must Be Partners, Not Rivals, for Global Stability
ಬೀಜಿಂಗ್, ಮೇ.14: ಜಗತ್ತಿನ ಎರಡು ಬಲಿಷ್ಠ ಆರ್ಥಿಕತೆಗಳಾದ ಅಮೆರಿಕ ಮತ್ತು ಚೀನಾ ಪರಸ್ಪರ ಸಂಘರ್ಷದ ಹಾದಿ ಬಿಟ್ಟು ಸಹಕಾರದೊಂದಿಗೆ ಸಾಗಬೇಕೆಂದು ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಕರೆ ನೀಡಿದ್ದಾರೆ. ಚೀನಾಕ್ಕೆ ಎರಡು ದಿನಗಳ ಪ್ರವಾಸ ಕೈಗೊಂಡಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಬೀಜಿಂಗ್‌ನಲ್ಲಿ ಬರಮಾಡಿಕೊಂಡ ಜಿನ್‌ಪಿಂಗ್, ಉಭಯ ದೇಶಗಳ ದ್ವಿಪಕ್ಷೀಯ ಸಂಬಂಧದ ಬಗ್ಗೆ ಮಹತ್ವದ ಹೇಳಿಕೆಯನ್ನು ನೀಡಿದ್ದಾರೆ. ನಾವು ಶತ್ರುಗಳಲ್ಲ, ಪಾಲುದಾರರಾಗಬೇಕು ಎಂದು ಹೇಳಿದ್ದಾರೆ. ಅಮೆರಿಕ ಮತ್ತು ಚೀನಾ “ವೈರಿಗಳಾಗುವ ಬದಲಿಗೆ ಪಾಲುದಾರರಾಗಬೇಕು” (Partners, not…