ಬಹ್ರೇನ್ನಲ್ಲಿರುವ ಅಮೆರಿಕದ ವಾಯುನೆಲೆ ಮೇಲೆ ಇರಾನ್ ದಾಳಿ – Kannada News | Iran’s Fresh Attack on US Air Base infra in Bahrain
ಬಹ್ರೇನ್, ಮಾರ್ಚ್ 4: ಇಸ್ರೇಲ್ ಮತ್ತು ಅಮೆರಿಕದ ದಾಳಿಗೆ ಪ್ರತೀಕಾರವಾಗಿ ಇರಾನ್ ಕೂಡ ತನ್ನ ದಾಳಿಯನ್ನು ಮುಂದುವರೆಸಿದೆ. ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯುನೆಲೆಗಳನ್ನು ಇರಾನ್ (Iran Attack) ಗುರಿಯಾಗಿಸಿಕೊಂಡಿದೆ. ಈಗಾಗಲೇ ಬಹ್ರೇನ್, ಕುವೈತ್, ಸೌದಿ ಅರೇಬಿಯಾ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್‌ನ ಮಿಲಿಟರಿ ಸೌಲಭ್ಯಗಳ ಮೇಲೆ ದಾಳಿ ನಡೆದಿವೆ. ಇಂದು ಮತ್ತೆ ಇರಾನ್ ಬಹ್ರೇನ್ನ ಯುಎಸ್ ವಾಯುನೆಲೆ ಮೇಲೆ ಡ್ರೋನ್ ದಾಳಿ ನಡೆಸಿದೆ. ಈ ದಾಳಿಯ ದೃಶ್ಯವನ್ನು ಬಹ್ರೇನ್ ನಿವಾಸಿಗಳು ಮೊಬೈಲ್ನಲ್ಲಿ ಸೆರೆಹಿಡಿದಿದ್ದಾರೆ. ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು…