ಫಲನಾಭವಿಗಳು ಮೃತಪಟ್ಟ ಬಳಿಕವೂ ಖಾತೆಗೆ ಗೃಹಲಕ್ಷ್ಮಿ ಹಣ: ದಕ್ಷಿಣ ಕನ್ನಡದಲ್ಲಿ 22 ಕೋಟಿ ಜಮೆ ಬೆಳಕಿಗೆ – Kannada News | Gruhalakshmi Scheme: 22 Crore Paid to Deceased Beneficiaries in Dakshina Kannada
ಮಂಗಳೂರು, ಮೇ 12: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾಗಿರುವ ಗೃಹಲಕ್ಷ್ಮಿ ಹಣ ತಿಂಗಳು ತಿಂಗಳು ಸರಿಯಾಗಿ ಪಾವತಿಯಾಗುತ್ತಿಲ್ಲ ಎಂಬ ಜನರ ಆರೋಪದ ನಡುವೆ, ಶಾಕಿಂಗ್ ವಿಚಾರವೊಂದು ಬಹಿರಂಗಗೊಂಡಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅದಾಗಲೇ ಮೃತಪಟ್ಟಿರುವ ಫಲಾನುಭವಿಗಳ ಖಾತೆಗಳಿಗೆ ಸುಮಾರು 22 ಕೋಟಿ ರೂಪಾಯಿ ಹಣ ಜಮೆಯಾಗಿರುವುದು ಬೆಳಕಿಗೆ ಬಂದಿದೆ. ವಿಷಯ ಗೊತ್ತಾಗುತ್ತಲೇ ಈ ಬಗ್ಗೆ ತಕ್ಷಣ ಕ್ರಮಕ್ಕೆ ಜಿಲ್ಲಾಡಳಿತ ಮುಂದಾಗಿದೆ. ಮೃತ ಫಲಾನುಭವಿಗಳ ಖಾತೆಗಳಿಗೆ ಜಮೆಯಾದ ಹಣವನ್ನು ಸರ್ಕಾರಕ್ಕೆ ಮರಳಿ ಪಡೆಯಲು ತಕ್ಷಣ ಕ್ರಮ ಕೈಗೊಳ್ಳುವಂತೆ…