Headlines

nagaraj11081993

IPL 2026: RCB ಅಭಿಮಾನಿಗಳಿಗೆ 3 ಗುಡ್ ನ್ಯೂಸ್… ಒಂದು ಬ್ಯಾಡ್ ನ್ಯೂಸ್ – Kannada News | M. Chinnaswamy Stadium in Bengaluru To Host 3 Big Matches

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಮತ್ತೆ ಕ್ರಿಕೆಟ್ ಕಲರವ ಶುರುವಾಗಲಿದೆ. ಕಳೆದ ಕೆಲ ತಿಂಗಳುಗಳಿಂದ ನಿಷೇಧಕ್ಕೆ ಒಳಗಾಗಿದ್ದ ಮೈದಾನದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಕಣಕ್ಕಿಳಿಯುವುದು ಖಚಿತವಾಗಿದೆ. ಈ ಖಚಿತತೆಯೊಂದಿಗೆ ಆರ್​ಸಿಬಿ ಅಭಿಮಾನಿಗಳಿಗೆ ಮೂರು ಗುಡ್ ನ್ಯೂಸ್ ಕೂಡ ಸಿಕ್ಕಿದೆ. ಇದರ ಜೊತೆಗೆ ಒಂದು ಬ್ಯಾಡ್ ನ್ಯೂಸ್ ಕೂಡ ಇದೆ. ಇಲ್ಲಿ ಗುಡ್ ನ್ಯೂಸ್ ಏನೆಂದರೆ… ಈ ಬಾರಿಯ ಐಪಿಎಲ್​ನ ಪ್ರಮುಖ ಪಂದ್ಯಗಳು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲೇ ನಡೆಯಲಿದೆ ಎಂದು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ (KSCA)…

Read More

Gold Rates: ಚಿನ್ನ, ಬೆಳ್ಳಿ ಬೆಲೆ ಸತತ ಇಳಿಕೆ; ಇಲ್ಲಿದೆ ದರಪಟ್ಟಿ – Kannada News | Gold Price Today on 4th March 2026, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಮಾರ್ಚ್ 4: ಚಿನ್ನದ ಬೆಲೆ ಸತತವಾಗಿ ಇಳಿಯುತ್ತಿದೆ. 10 ಗ್ರಾಮ್ ಚಿನ್ನದ ಬೆಲೆ (Gold Rates) 5,000 ರೂಗೂ ಅಧಿಕ ಮೊತ್ತದಷ್ಟು ಇಳಿಕೆ ಆಗಿದೆ. ಭಾರತದಲ್ಲಿ ಮಾತ್ರವಲ್ಲ, ವಿದೇಶಗಳಲ್ಲಿ ಹೆಚ್ಚಿನ ಕಡೆ ಸ್ವರ್ಣ ದರ ಭರ್ಜರಿ ಕುಸಿತ ಕಂಡಿದೆ. ಬೆಳ್ಳಿ ಬೆಲೆಯೂ ಕುಸಿದಿದೆ. ಗ್ರಾಮ್​ಗೆ 10 ರೂನಷ್ಟು ಇಳಿಕೆ ಕಂಡಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,50,800 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,64,510 ರುಪಾಯಿ…

Read More

Chittoor Accident: ಬೆಂಗಳೂರಿನಿಂದ ತಿರುಪತಿಗೆ ಹೊರಟಿದ್ದ ಕಾರು ಚಿತ್ತೂರು ಬಳಿ ಅಪಘಾತ, ಕರ್ನಾಟಕದ ಐವರು ಸಾವು – Kannada News | Bengaluru–Tirupati Journey Ends in Tragedy After Highway Crash in Chittoor

ಚಿತ್ತೂರು, ಮಾರ್ಚ್​ 04: ಬೆಂಗಳೂರಿನಿಂದ ತಿರುಪತಿಗೆ ಹೊರಟಿದ್ದ ಕಾರು ಆಂಧ್ರದ ಚಿತ್ತೂರು ಬಳಿ ಅಪಘಾತ(Accident)ಕ್ಕೀಡಾಗಿದ್ದು, ಕರ್ನಾಟಕದ ಐವರು ಸಾವನ್ನಪ್ಪಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಜಿತ್ತೂರು ಜಿಲ್ಲೆಯ ಪಲಮನೇರು ಬಳಿ ಈ ಘಟನೆ ವರದಿಯಾಗಿದೆ. ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಎಲ್ಲರೂ ಪ್ರಾಣ ಕಳೆದುಕೊಂಡಿದ್ದಾರೆ. ಅತಿ ವೇಗದಲ್ಲಿ ಬಂದ ಕಾರು ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನ ಮುಂಭಾಗ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ವಾಹನದಲ್ಲಿ ಸಿಲುಕಿದ್ದ ಶವಗಳನ್ನು ಹೊರತರುವುದು ಪೊಲೀಸರಿಗೆ ಕಷ್ಟಕರವಾಯಿತು ಎಂದು ಪೊಲೀಸರು ತಿಳಿಸಿದ್ದಾರೆ….

Read More

ಕೊನೇ ಕ್ಷಣದಲ್ಲಿ ಅಭಿಮಾನಿಗಳಿಗೆ ಶಾಕ್ ಕೊಟ್ಟ ಯಶ್; ಟಾಕ್ಸಿಕ್ ಸಿನಿಮಾ ರಿಲೀಸ್ ಮುಂದಕ್ಕೆ  – Kannada News | Yash Starrer Toxic Movie Release date postponed due to On Going War Situation

ರಾಕಿಂಗ್ ಸ್ಟಾರ್ ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾ (Toxic Movie) ಮಾರ್ಚ್ 19ರಂದು ರಿಲೀಸ್ ಆಗಬೇಕಿತ್ತು. ಆದರೆ, ಈಗ ಸಿನಿಮಾ ತಂಡ ಶಾಕಿಂಗ್ ಅಪ್​​ಡೇಟ್ ಕೊಟ್ಟಿದೆ. ಸಿನಿಮಾ ರಿಲೀಸ್​​ಗೆ ಕೆಲವೇ ದಿನ ಬಾಕಿ ಇರುವಾಗ ರಿಲೀಸ್​​ ದಿನಾಂಕವನ್ನು ಮುಂದಕ್ಕೆ ಹಾಕಿಕೊಂಡಿದೆ. ಇದು ಅಭಿಮಾನಿಗಳಿಗೆ ಬೇಸರ ಮೂಡಿಸಿದೆ. ಹೊಸ ರಿಲೀಸ್ ದಿನಾಂಕವನ್ನು ಕೂಡ ಘೋಷಣೆ ಮಾಡಲಾಗಿದೆ. ಜೂನ್ 4ರಂದು ಸಿನಿಮಾ ರಿಲೀಸ್ ಆಗಲಿದೆ. ಮಧ್ಯ ಪ್ರಾಚ್ಯ ರಾಷ್ಟ್ರಗಳಲ್ಲಿ ಯುದ್ಧ ಭೀತಿ ನಿರ್ಮಾಣ ಆಗಿದೆ. ಈ ಬಿಕ್ಕಟ್ಟು ಸದ್ಯಕ್ಕಂತೂ ಪರಿಹಾರ…

Read More

SA vs NZ: ಅವರ ಮೇಲೆ ಇವರು ಗೆದ್ದಿಲ್ಲ, ಇವರ ಮೇಲೆ ಅವರು ಸೋತಿಲ್ಲ..! – Kannada News | South Africa vs New Zealand semi final: Head To Head

T20 World Cup 2026: ಟಿ20 ವಿಶ್ವಕಪ್​ನ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ನ್ಯೂಝಿಲೆಂಡ್ ಮತ್ತು ಸೌತ್ ಆಫ್ರಿಕಾ ತಂಡಗಳು ಮುಖಾಮುಖಿಯಾಗಲಿದೆ. ಇಂದು (ಮಾ.4) ನಡೆಯಲಿರುವ ಈ ಪಂದ್ಯದಲ್ಲಿ ಗೆಲ್ಲುವ ತಂಡ ಫೈನಲ್​ಗೇರಲಿದೆ. ಹೀಗಾಗಿಯೇ ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ರಣರೋಚಕ ಪೈಪೋಟಿಯನ್ನು ನಿರೀಕ್ಷಿಸಬಹುದು. ಏಕೆಂದರೆ ಉಭಯ ತಂಡಗಳ ಈ ಹಿಂದಿನ ಮುಖಾಮುಖಿಯೇ ರೋಚಕತೆಯಿಂದೆ ಕೂಡಿದೆ. ಟಿ20 ವಿಶ್ವಕಪ್​ನಲ್ಲಿ ಉಭಯ ತಂಡಗಳು ಒಟ್ಟು 5 ಬಾರಿ ಮುಖಾಮುಖಿಯಾಗಿವೆ. ಈ ವೇಳೆ ಎಲ್ಲಾ ಪಂದ್ಯಗಳಲ್ಲೂ ಸೌತ್ ಆಫ್ರಿಕಾ ತಂಡವೇ ಜಯ…

Read More

ಲಕ್ನೋ: ಬಿರಿಯಾನಿ ಅಂಗಡಿಯ ಫ್ರೀಜರ್​ನಲ್ಲಿ ವ್ಯಕ್ತಿಯ ಶವ ಪತ್ತೆ – Kannada News | Man’s Body Discovered Inside Freezer at Biryani Outlet in Lucknow

ಲಕ್ನೋ, ಮಾರ್ಚ್​ 04: ಉತ್ತರ ಪ್ರದೇಶದ ಲಕ್ನೋದಲ್ಲಿರುವ ಬಿರಿಯಾನಿ ಅಂಗಡಿಯ ಫ್ರೀಜರ್​​ನಲ್ಲಿ 35 ವರ್ಷ ವ್ಯಕ್ತಿಯೊಬ್ಬರ ಶವ(Dead body )ಪತ್ತೆಯಾಗಿರುವ ಘಟನೆ ನಡೆದಿದೆ. ಬಕ್ಷಿ ಕಾ ತಾಲಾಬ್ ಪ್ರದೇಶದಲ್ಲಿರುವ ಅಂಡಗಿಯಲ್ಲಿ ಈ ಘಟನೆ ನಡೆದಿದೆ. ಮೃತರನ್ನ ವಿಜಯ್ ಪಾಲ್ ಎಂದು ಗುರುತಿಸಲಾಗಿದೆ. ಅವರು ಬಿಕೆಟಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ಕಿಶನ್​ಪುರ್ ಮಾಜ್ರಾ ನಿವಾಸಿಯಾಗಿದ್ದರು. ಅಂಗಡಿ ಮಾಲೀಕರಾದ ಶನಿ ರಾವತ್​ ಅವರ ತಂದೆ ಮೃತಪಟ್ಟ ಹಿನ್ನೆಲೆಯಲ್ಲಿ ಅಂಗಡಿಯು ಕಳೆದ ನಾಲ್ಕು ದಿನಗಳಿಂದ ಮುಚ್ಚಿತ್ತು. ರಾವತ್ ಭಾನುವಾರ ಬೆಳಗ್ಗೆ…

Read More

National Safety Day 2026: ಭಾರತದಲ್ಲಿ ರಾಷ್ಟ್ರೀಯ ಸುರಕ್ಷತಾ ದಿನವನ್ನು ಆಚರಿಸುವುದು ಏಕೆ ಗೊತ್ತಾ? – Kannada News | National Safety Day 2026: Do you know why National Safety Day is celebrated in India?

ರಾಷ್ಟ್ರೀಯ ಸುರಕ್ಷತಾ ದಿನImage Credit source: vecteezy ಅಪಘಾತಗಳು ಯಾವಾಗ ಬೇಕಾದರೂ ಮತ್ತು ಎಲ್ಲಿ ಬೇಕಾದರೂ ಸಂಭವಿಸಬಹುದು, ಆದರೆ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವುದರಿಂದ ಅಥವಾ ಸಂಭವನೀಯ ಅಪಘಾತಗಳ ಬಗ್ಗೆ ತಿಳಿದಿರುವುದರಿಂದ ಅವುಗಳನ್ನು ತಪ್ಪಿಸಬಹುದು. ಬೆಂಕಿ ಅವಘಡಗಳು, ಕೈಗಾರಿಕಾ ಅಪಘಾತಗಳು, ರಸ್ತೆ ಅಪಘಾತಗಳು ಸೇರಿದಂತೆ ವಿವಿಧ ಅಪಘಾತಗಳನ್ನು ತಡೆಗಟ್ಟಲು ಸುರಕ್ಷತಾ ಕ್ರಮಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಮತ್ತು ಅಪಘಾತಗಳನ್ನು ತಪ್ಪಿಸಲು ಜನರು ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಲು ಸಾಧ್ಯವಾಗುವಂತೆ ಸುರಕ್ಷತೆಯ (Safety) ಬಗ್ಗೆ ಮಾಹಿತಿ ಮತ್ತು ಜಾಗೃತಿ ಮೂಡಿಸಲು ಪ್ರತಿವರ್ಷ…

Read More

Mantras: ಯಾವುದೇ ಮಂತ್ರ ಪಠಿಸುವ ಮುನ್ನ ಈ ವಿಷಯ ನೆನಪಿಟ್ಟುಕೊಳ್ಳಿ; ಜ್ಯೋತಿಷ್ಯ ಸಲಹೆ ಇಲ್ಲಿದೆ – Kannada News | Mantras: A Guide to Their Auspicious and Inauspicious Effects

ಮಂತ್ರಗಳು ಆಧ್ಯಾತ್ಮಿಕ ಅಭ್ಯಾಸದಲ್ಲಿ ಮಹತ್ವದ ಸ್ಥಾನವನ್ನು ಪಡೆದುಕೊಂಡಿವೆ. “ಮನನಾ ತ್ರಾಯತೇ ಇತಿ ಮಂತ್ರಃ” ಎಂಬುದು ಮಂತ್ರದ ಮೂಲಭೂತ ವ್ಯಾಖ್ಯಾನವಾಗಿದೆ, ಅಂದರೆ ಮನಸ್ಸಿನಿಂದ ಧ್ಯಾನಿಸುವುದರಿಂದ ನಮ್ಮನ್ನು ರಕ್ಷಿಸುವ ಶಕ್ತಿ. ಮಂತ್ರಗಳ ಪಠಣೆಯು ವ್ಯಕ್ತಿಯಲ್ಲಿ ನಂಬಿಕೆ ಮತ್ತು ಆತ್ಮವಿಶ್ವಾಸವನ್ನು ಹೆಚ್ಚಿಸುತ್ತದೆ, ಭಕ್ತ ಮತ್ತು ಭಗವಂತನ ನಡುವೆ ಗಾಢವಾದ, ಉತ್ತಮ ಸಂಬಂಧವನ್ನು ಏರ್ಪಡಿಸುತ್ತದೆ. ಆದರೆ, ಈ ಮಂತ್ರಗಳು ಶುಭ ಮತ್ತು ಅಶುಭ ಎರಡೂ ಪರಿಣಾಮಗಳನ್ನು ಉಂಟುಮಾಡಬಲ್ಲವು ಎಂದು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ…

Read More

ಚಂದ್ರಗ್ರಹಣ ಮೋಕ್ಷ ಬಳಿಕ ದೇಗುಲಗಳಲ್ಲಿ ಶುದ್ಧೀಕರಣ, ವಿಶೇಷ ಪೂಜೆ! – Kannada News | Karnataka Temples Reopen with Rituals After Rare Lunar Eclipse

ಬೆಂಗಳೂರು, ಮಾರ್ಚ್​ 04: ನಭೋಮಂಡಲದಲ್ಲಿ ಅಪರೂಪದ ಖಗೋಳ ಕೌತುಕವಾಗಿ ರಕ್ತ ಚಂದ್ರಗ್ರಹಣ (Lunar Eclipse) ನಿನ್ನೆ ಸ್ಪಷ್ಟವಾಗಿ ಗೋಚರಿಸಿದೆ. ಭೂಮಿಯ ನೆರಳು ಚಂದ್ರನ ಮೇಲೆ ಸಂಪೂರ್ಣವಾಗಿ ಆವರಿಸಿದ ಪರಿಣಾಮ, ಬೆಳ್ಳಗೆ ಹೊಳೆಯುತ್ತಿದ್ದ ಚಂದ್ರನು ತಾಮ್ರದ ಕೆಂಪು ಬಣ್ಣದಲ್ಲಿ ಕಂಗೊಳಿಸಿದ್ದ. ಮಧ್ಯಾಹ್ನ 3 ಗಂಟೆ 13 ನಿಮಿಷಕ್ಕೆ ಆರಂಭವಾದ ವರ್ಷದ ಮೊದಲ ಕೇತುಗ್ರಸ್ತ ಚಂದ್ರಗ್ರಹಣ ಸಂಜೆ 6 ಗಂಟೆ 47 ನಿಮಿಷಕ್ಕೆ ಮೋಕ್ಷವಾಯಿತು. ಭಾರತಕ್ಕಿಂತ ಹೆಚ್ಚಾಗಿ ಅಮೆರಿಕದ ಕ್ಯಾಲಿಫೋರ್ನಿಯಾ, ಲಾಸ್ ಏಂಜೆಲಸ್ ಹಾಗೂ ಮೆಕ್ಸಿಕೋ ಸೇರಿದಂತೆ ಹಲವು ಪ್ರದೇಶಗಳಲ್ಲಿ…

Read More

Video: ದುಬೈನಲ್ಲಿರುವ ಅಮೆರಿಕದ ರಾಯಭಾರಿ ಕಚೇರಿ ಮೇಲೆ ಇರಾನ್ ಡ್ರೋನ್ ದಾಳಿ – Kannada News | Drone Strike Reportedly Targets US Consulate in Dubai, Blast Captured on Video

ದುಬೈ, ಮಾರ್ಚ್​ 04: ದುಬೈನಲ್ಲಿರುವ ಅಮೆರಿಕ ರಾಯಭಾರಿ ಕಚೇರಿ ಮೇಲೆ ಇರಾನ್‌ನ ಡ್ರೋನ್ ದಾಳಿ ನಡೆಸಿದೆ. ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಟೆಹ್ರಾನ್ ಅಮೆರಿಕದ ಮಿಲಿಟರಿ ನೆಲೆಗಳು ಮತ್ತು ಪ್ರದೇಶದಾದ್ಯಂತದ ಇತರ ಇಸ್ರೇಲಿ ಸ್ವತ್ತುಗಳನ್ನು ಗುರಿಯಾಗಿಸಿಕೊಂಡು ಪ್ರತಿದಾಳಿ ನಡೆಸಿದೆ. ಅದಕ್ಕೂ ಮುನ್ನ ಇಸ್ರೇಲ್-ಅಮೆರಿಕ ದಾಳಿಯಲ್ಲಿ ಇರಾನ್ ಸರ್ವೋಚ್ಚ ನಾಯಕ ಅಯತೊಲ್ಲಾ ಖಮೇನಿಯನ್ನು ಹತ್ಯೆ ಮಾಡಲಾಗಿತ್ತು, ಅದಾದ ಬಳಿಕ ಸಂಘರ್ಷ ಮತ್ತಷ್ಟು ಹೆಚ್ಚಿದೆ. ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರುಬಿಯೊ ಘಟನೆಯನ್ನು ದೃಢಪಡಿಸಿದರು. ಮಂಗಳವಾರ ಬೆಳಗಿನ ಜಾವ ರಿಯಾದ್‌ನಲ್ಲಿರುವ ಅಮೆರಿಕ…

Read More