All posts by nagaraj11081993

Auqib Nabi: ರಣಜಿ ಹೀರೋ ಆಕಿಬ್ ನಬಿ ಶೀಘ್ರದಲ್ಲೇ ಟೀಂ ಇಂಡಿಯಾಗೆ ಎಂಟ್ರಿ

Source link

ಮಟ್ಕಾ ಅಡ್ಡೆ ಮೇಲೆ ದಾಳಿ ಮಾಡಿ ಬುಕ್ಕಿಯನ್ನ ಹಿಡಿದು ಪೊಲೀಸರಿಗೆ ಒಪ್ಪಿಸಿದ‌ ಶಾಸಕ – Kannada News | Haveri MLA Rudrappa lamani raids Matka den in guttala Town And hands over accused to police

ಹಾವೇರಿ, (ಮಾರ್ಚ್ 03): ಅಪರಾಧ ಕೃತ್ಯಗಳ ಜೊತೆಗೆ ಅಕ್ರಮ ಚಟುವಟಿಕೆಗಳನ್ನು ತಡೆಗಟ್ಟುವುದು ಪೊಲೀಸ್ (Police) ಇಲಾಖೆಯ ಕರ್ತವ್ಯವಾಗಿದೆ. ಆದ್ರೆ, ಹಳ್ಳಿಗಳಲ್ಲಿ ಪೊಲೀಸರೇ ಮಟ್ಕಾ (Matka), ಇಸ್ಪಿಟ್ ದಂಧೆಕೋರರ ಜೊತೆ ಶಾಮೀಲಾಗಿ ಹಣ ಮಾಡುವ ಕೆಲಸಕ್ಕಿಳಿದಿದ್ದಾರೆ. ಇದರ ಮಧ್ಯೆ ಪೊಲೀಸರು ಮಾಡಬೇಕಾದ ಕೆಲಸವನ್ನು ಶಾಸಕರೊಬ್ಬರು ಮಾಡಿ ತೋರಿಸಿದ್ದಾರೆ. ಹೌದು… ನಿನ್ನೆ (ಮಾರ್ಚ್ 02) ಕಾರ್ಯ ನಿಮಿತ್ತ ಹಾವೇರಿ (Haveri) ತಾಲೂಕಿನ ಗುತ್ತಲ ಪಟ್ಟಣಕ್ಕೆ ಆಗಮಿಸಿದ್ದು, ಈ ವೇಳೆ ಸ್ಥಳೀಯರಿಂದ  ಕೇಳಿಬಂದ ದೂರಿನ ಮೇರೆಗೆ ಸ್ವತಃ ಉಪಸಭಾಧ್ಯಕ್ಷರು ಶಾಸಕರಾದ ರುದ್ರಪ್ಪ ಲಮಾಣಿಯವರು (Rudrappa lamani )ಮಟ್ಕಾ ಬರೆಯುತ್ತಿದ್ದ ಅಡ್ಡೆ ಮೇಲೆ ದಾಳಿ ಮಾಡಿ ಬುಕ್ಕಿಯನ್ನ ಹಿಡಿದು ಪೊಲೀಸರಿಗೊಪ್ಪಿಸಿದ್ದಾರೆ. ಇದಕ್ಕೆ ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಹಾವೇರಿ ತಾಲೂಕಿನ ಗುತ್ತಲ ಪಟ್ಟಣದ ಪ್ರಾಥಮಿಕ ಮಕ್ಕಳ ಶಾಲೆ ಸಮೀದ ಕೊಠಡಿಯೊಂದರಲ್ಲಿ ಮಟ್ಕಾ ಬರೆಯುತ್ತಿದ್ದಾರೆ. ಇದನ್ನು ಯಾರೊಬ್ಬರೂ ತಡೆಯುತ್ತಿಲ್ಲ ಎಂದು ಸ್ಥಳೀಯ ಮಹಿಳೆಯರು ಶಾಸಕ ರುದ್ರಪ್ಪ ಲಮಾಣಿಗೆ ಅವರಿಗೆ ಸೋಮವಾರ ಮನವಿ ಮಾಡಿದ್ದಾರೆ. ಇದರಿಂದ ಎಚ್ಚೆತ್ತ ರುದ್ರಪ್ಪ ಲಮಾಣಿ ಕೂಡಲೇ ಆ ಕೊಠಡಿ ಮೇಲೆ ದಾಳಿ ಮಾಡಿದ್ದು, ಆ ವೇಳೆ ವ್ಯಕ್ತಿಯೋರ್ವ ಮಟ್ಕಾ ಬರೆಯುತ್ತಿರುವುದು ಕಂಡುಬಂದಿದೆ. ಕೂಡಲೇ ಆತನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

ಇದನ್ನೂ ಓದಿ: ಸರ್ಕಾರಿ ಶಾಲೆ ಶಿಕ್ಷಕಿಯಾಗಿ ಖಾಸಗಿ ಕಾಲೇಜಿನಲ್ಲಿ ಮೂಗು ತೂರಿಸಿದ ಟೀಚರ್ ಸಸ್ಪೆಂಡ್

ಶಾಸಕರ ಬಳಿ ಅಳಲು ತೋಡಿಕೊಂಡ ಮಹಿಳೆಯರು

ನಾಡ ಕಚೇರಿ ಉದ್ಘಾಟನೆ ಮತ್ತು ಪಟ್ಟಣ ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ ಭಾಗವಹಿಸಲು ರುದ್ರಪ್ಪ ಲಮಾಣಿ ಮತ್ತು ತಹಶೀಲ್ದಾರ್ ಆಗಮಿಸಿದ್ದರು. ಆಗ ಶಾಸಕರನ್ನು ಅಡ್ಡಗಟ್ಟಿದ ಮಹಿಳೆಯರು,ಮೀನು ಮಾಂಸದಂಗಡಿಯವರು ತ್ಯಾಜ್ಯವನ್ನು ಎಲ್ಲೆಂದರಲ್ಲಿ ಎಸೆಯುತ್ತಿದ್ದು, ಇದರಿಂದ ದುರ್ವಾಸನೆ ಬರುತ್ತಿದೆ. ಇದನ್ನು ತಿನ್ನಲು ಬರುವ ಬೀದಿ ನಾಯಿಗಳು ಮಕ್ಕಳ ಮೇಲೆ ದಾಳಿ ಮಾಡುತ್ತಿವೆ. ಇದನ್ನು ತಡೆಟ್ಟಬೇಕೆಂದು ಮನವಿ ಮಾಡಿದ್ದರು. ಜೊತೆಗೆ ಮಟ್ಕಾ ಹಾವಳಿ ಹೆಚ್ಚಾಗಿದ್ದು, ಇದಕ್ಕೆ ಕಡಿವಾಣ ಹಾಕಬೇಕೆಂದು ಆಗ್ರಹಿಸಿದ್ದರು. ಅಲ್ಲದೇ ಇಲ್ಲೇ ರೂಮ್​​ನಲ್ಲಿ ಮಟ್ಕಾ ಬರೆಯುತ್ತಾರೆ ಯಾರು ಏನು ಮಾಡುತ್ತಿಲ್ಲ ಎಂದು ಅಸಮಾಧಾನ ಹೊರಹಾಕಿದರು.

ಕಾರ್ಯಕ್ರಮಕ್ಕೆ ಬಂದಿದ್ದ ವೇಳೆ ದಾಳಿ

ಬಳಿಕ ರುದ್ರಪ್ಪ ಲಮಾಣಿಯವರು ಮಹಿಳೆಯರನ್ನು ಸಮಾಧಾನಪಡಿಸಿ ಕೂಡಲೇ ಆ ಕ್ಷಣವೇ ಮಟ್ಕಾ ಅಡ್ಡೆ ಮೇಲೆ ದಾಳಿ ಮಾಡಿದ್ದು, ಈ ವೇಳೆ ವ್ಯಕ್ತಿಯೋರ್ವ ರೂಮ್​​​ನಲ್ಲಿ ಕುಳಿತು ಮಟ್ಕಾ ಬರೆಯುತ್ತಿರುವುದು ಕಂಡುಬಂದಿದೆ. ಇದರಿಂದ ಗರಂ ಆದ ರುದ್ರಪ್ಪ ಲಮಾಣಿ ಕೂಡಲೇ ಪಿಎಸ್​​ಐಗೆ ಕರೆ ಮಾಡಿ ಸ್ಥಳಕ್ಕೆ ಕರೆಯಿಸಿಕೊಂಡು ಮಟ್ಕಾ ಬುಕ್ಕಿಯನ್ನು ಒಪ್ಪಿಸಿದ್ದಾರೆ. ಈ ವೇಳೆ ಪಿಎಸ್​​ಐಗೆ ತರಾಟೆಗೆ ತೆಗೆದುಕೊಂಡಿದ್ದು, ತಹಶೀಲ್ದಾರ್ ಶರಣಮ್ಮ ಹಾಗೂ ಗುತ್ತಲ ಪೊಲೀಸ್ ಠಾಣೆಯ ಸಿಬ್ಬಂದಿಗೆ ಮಟ್ಕಾ ದಂಧೆಗೆ ಕಡಿವಾಣ ಹಾಕಬೇಕೆಂದು ಖಡಕ್ ಸೂಚನೆ ನೀಡಿದ್ದಾರೆ.

ಎಷ್ಟೋ ರಾಜಕಾರಣಿಗಳು ಇಂತಹ ಅಕ್ರಮ ದಂಧೆಕೋರರ ಬೆನ್ನಿಗೆ ನಿಂತಿರುವರ ನಡುವೆ ಪೊಲೀಸರು ಮಾಡಬೇಕಾದ ಈ ಕೆಲಸವನ್ನು ಮಾಡಿ  ಶಾಸಕ ರುದ್ರಪ್ಪ ಲಮಾಣಿ ಮಾದರಿಯಾಗಿದ್ದಾರೆ.

ವರದಿ: ಅಣ್ಣಪ್ಪ ಬಾರ್ಕಿ ಟಿವಿ9 ಹಾವೇರಿ

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On – 7:32 pm, Tue, 3 March 26

Source link

ಚಂದ್ರ ಗ್ರಹಣದ ದಿನವೇ ಗದಗದಲ್ಲಿ ಸಪ್ತಪದಿ ತುಳಿದ 19 ಜೋಡಿಗಳು: ಗ್ರಹಣ ಶುಭ ಕಾರ್ಯಗಳಿಗೆ ಅಡ್ಡಿಯಲ್ಲ – Kannada News | Puttaraja Gavai Jayanti: Gadag Hosts 19 Interfaith Marriages During Eclipse

ಗದಗ, ಮಾ.3: ಸಾಮಾನ್ಯವಾಗಿ ಗ್ರಹಣವೆಂದರೆ ಅಶುಭ, ಈ ಸಮಯದಲ್ಲಿ ಯಾವುದೇ ಶುಭ ಕಾರ್ಯ ಮಾಡಬಾರದು ಎಂಬ ನಂಬಿಕೆ ಬಲವಾಗಿದೆ. ಆದರೆ, ಗದಗ ನಗರದಲ್ಲಿ ಈ ಎಲ್ಲಾ ಕಟ್ಟುಪಾಡುಗಳನ್ನು ಮೀರಿ ಹೋಳಿ ಹುಣ್ಣಿಮೆ ಹಾಗೂ ಚಂದ್ರಗ್ರಹಣದ ದಿನದಂದೇ 19 ಜೋಡಿಗಳು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಅಂಧರ ಬಾಳಿನ ಬೆಳಕು, ಪಂಡಿತ ಪುಟ್ಟರಾಜ ಗವಾಯಿಗಳ 112ನೇ ಜಯಂತೋತ್ಸವದ ಅಂಗವಾಗಿ ಈ ಅರ್ಥಪೂರ್ಣ ಸಾಮೂಹಿಕ ವಿವಾಹವನ್ನು ಆಯೋಜಿಸಲಾಗಿತ್ತು. ದಿ. ಕೆ.ಎಚ್. ಪಾಟೀಲ್ ಅಭಿಮಾನಿಗಳ ಬಳಗವು ಗದಗ ಎಪಿಎಂಸಿ ಆವರಣದ ಪುಟ್ಟರಾಜ ಗವಾಯಿಗಳ ಮಠದ ಆವರಣದಲ್ಲಿ ಈ ಕಾರ್ಯಕ್ರಮ ಹಮ್ಮಿಕೊಂಡಿತ್ತು. ಜಾತಿ-ಮತದ ಭೇದವಿಲ್ಲದೆ ಸರ್ವಧರ್ಮದ ಒಟ್ಟು 19 ಜೋಡಿಗಳು ಗಣ್ಯರು ಹಾಗೂ ಮಠಾಧೀಶರ ಸಮ್ಮುಖದಲ್ಲಿ ಸಪ್ತಪದಿ ತುಳಿದರು. ಗವಾಯಿಗಳ 112ನೇ ಜಯಂತಿಯ ಸ್ಮರಣಾರ್ಥ 112 ಕೆಜಿ ತೂಕದ ಬೃಹತ್ ಕೇಕ್ ಕತ್ತರಿಸುವ ಮೂಲಕ ವಿವಾಹ ಮಹೋತ್ಸವಕ್ಕೆ ಅದ್ಧೂರಿ ಚಾಲನೆ ನೀಡಲಾಯಿತು. ಮದುವೆಗೂ ಮುನ್ನ ನಗರದ ಪ್ರಮುಖ ರಸ್ತೆಗಳಲ್ಲಿ ಪುಟ್ಟರಾಜ ಗವಾಯಿಗಳ ಭಾವಚಿತ್ರದ ಮೆರವಣಿಗೆ ನಡೆಯಿತು. 112 ಸುಮಂಗಲೆಯರು ಕುಂಭ ಹೊತ್ತು ಸಾಗಿದ್ದು ಮೆರವಣಿಗೆಗೆ ಕಳೆ ನೀಡಿತ್ತು. ಗದಗನ ಗವಾಯಿಗಳ ಮಠದ ಕಲ್ಲಯ್ಯಜ್ಜನವರು ಹಾಗೂ ತೋಂಟದ ಡಾ. ಸಿದ್ದರಾಮ ಶ್ರೀಗಳು ಸೇರಿದಂತೆ ಹಲವು ಮಠಾಧೀಶರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದು, ನವಜೋಡಿಗಳನ್ನು ಆಶೀರ್ವದಿಸಿದರು. “ಗ್ರಹಣವು ಒಂದು ನೈಸರ್ಗಿಕ ವಿದ್ಯಮಾನ, ಅದು ಶುಭ ಕಾರ್ಯಗಳಿಗೆ ಅಡ್ಡಿಯಲ್ಲ” ಎಂಬ ಸಂದೇಶವನ್ನು ಈ ಕಾರ್ಯಕ್ರಮದ ಮೂಲಕ ಜನರಿಗೆ ನೀಡಲಾಯಿತು.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

Source link

ರೇಣುಕಾ ಸ್ವಾಮಿ ಪ್ರಕರಣ: ಸುಳ್ಳು ಸಾಕ್ಷ್ಯ ಆರೋಪಕ್ಕೆ ಎಸ್​​ಪಿಪಿ ಪ್ರಸನ್ನ ತಿರುಗೇಟು – Kannada News | Renukaswamy murder case: SPP Prasanna Kumar hits back at evidence tampering claims

ರೇಣುಕಾ ಸ್ವಾಮಿ (Renuka Swamy) ಕೊಲೆ ಪ್ರಕರಣದ ತನಿಖೆ ನಡೆಸಿರುವ ತನಿಖಾಧಿಕಾರಿಗಳು ಸಾಕ್ಷ್ಯ ತಿದ್ದಿದ್ದಾರೆ ಎಂಬ ಆರೋಪ ಇತ್ತೀಚೆಗೆ ಕೇಳಿ ಬಂದಿತ್ತು. ಇದರ ವಿರುದ್ಧ ದರ್ಶನ್ ಅಭಿಮಾನಿಗಳು ಪ್ರತಿಭಟನೆ ನಡೆಸಲಿದ್ದಾರೆ ಎಂಬ ಸುದ್ದಿಯೂ ಹರಿದಾಡಿತ್ತು. ಆದರೆ ಇದೀಗ ಈ ಆರೋಪಕ್ಕೆ ಎಸ್​ಪಿಪಿ ಪ್ರಸನ್ನ ಕುಮಾರ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಆರೋಪಿಯೊಬ್ಬರ ಪರ ವಕೀಲರು ಉದ್ದೇಶಪೂರ್ವಕವಾಗಿ ಹಾಗೂ ಕೇವಲ ಪ್ರಚಾರಕ್ಕಾಗಿ ಇಂಥಹಾ ಆರೋಪಗಳನ್ನು ಮಾಡುತ್ತಿದ್ದಾರೆ ಎಂದಿದ್ದಾರೆ.

57ನೇ ಸಿಸಿಹೆಚ್ ಕೋರ್ಟ್ ವಾದಿಸಿದ ಎಸ್​ಪಿಪಿ ಪ್ರಸನ್ನ ಕುಮಾರ್ ಅವರು, ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಎ3 ಆರೋಪಿ ಪವನ್ ಪರ ವಕೀಲರು ಪ್ರಚಾರಕ್ಕಾಗಿ ಮೆಮೊ ಸಲ್ಲಿಸಿ, ಮಾಧ್ಯಮಗಳಲ್ಲಿ ಹೇಳಿಕೆ ನೀಡುತ್ತಿದ್ದಾರೆ. ಮೊಬೈಲ್ ಸಂಖ್ಯೆ, ಐಎಂಇಐ ಸಂಖ್ಯೆಗಳ ಬಗ್ಗೆ ಆರೋಪಿಗಳೇ ತಕರರಾರು ಎತ್ತಿಲ್ಲ, ಅಲ್ಲದೆ, ಅವರು ಎತ್ತಿರುವ ಪ್ರಶ್ನೆಗಳಿಗೆ ತನಿಖಾಧಿಕಾರಿಗಳೇ ನ್ಯಾಯಾಲಯದಲ್ಲಿ ಉತ್ತರ ನೀಡಲಿದ್ದಾರೆ’ ಎಂದಿದ್ದಾರೆ.

ತನಿಖಾಧಿಕಾರಿಯನ್ನು ಆರೋಪಿ ಮಾಡಲು ಕಾನೂನಿನಲ್ಲಿ ಅವಕಾಶವಿಲ್ಲ ಹಾಗಿದ್ದರೂ ಸಹ ಪವನ್ ಪರ ವಕೀಲರು ಅರ್ಜಿ ಸಲ್ಲಿಸಿದ್ದಾರೆ. ಇದೊಂದು ಹಾಸ್ಯಾಸ್ಪದ ಅರ್ಜಿ, ಈ ರೀತಿಯ ಅನವಶ್ಯಕ ಅರ್ಜಿಗಳನ್ನು ಸಲ್ಲಿಸಿ ಮಾಧ್ಯಮಗಳಲ್ಲಿ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಹಾಗಾಗಿ ಪವನ್ ಪರ ವಕೀಲರು ಸಲ್ಲಿಸಿರುವ ಅರ್ಜಿಯನ್ನು ವಜಾ ಮಾಡಬೇಕು ಎಂದು ಪವನ್ ಅವರು ಮನವಿ ಮಾಡಿದ್ದಾರೆ.

ಇದನ್ನೂ ಓದಿ:ದರ್ಶನ್ ಕ್ಷಮೆ ಕೇಳಿದರೆ ಒಪ್ಪಿಕೊಳ್ತೀರಾ? ರೇಣುಕಾ ಸ್ವಾಮಿ ತಂದೆ ಹೇಳಿದ್ದೇನು?

ಪ್ರತಿದಿನವೂ ವಿಚಾರಣೆ ನಡೆಸುವಂತೆ ದರ್ಶನ್ ಪರ ವಕೀಲರು ಸಲ್ಲಿಸಿರುವ ಅರ್ಜಿಗೆ ತಕರಾರು ಎತ್ತಿದ ಪ್ರಸನ್ನ ಅವರು, ಪ್ರತಿದಿನ ವಿಚಾರಣೆ ಸಾಧ್ಯವಿಲ್ಲವೆಂದು ಸುಪ್ರೀಂಕೋರ್ಟ್ ಹೇಳಿದೆ’ ಎಂದಿದ್ದಾರೆ. ಇನ್ನು ಕುಟುಂಬ ಸದಸ್ಯರ ಭೇಟಿಗೆ ಅವಕಾಶ ಕೋರಿ ದರ್ಶನ್ ಸಲ್ಲಿಸಿರುವ ಅರ್ಜಿಯ ಬಗ್ಗೆಯೂ ಪ್ರತಿವಾದ ಮಂಡಿಸಿದ ಪ್ರಸನ್ನ ಅವರು, ‘ಜೈಲು ಅಧಿಕಾರಿಗೆ ಮನವಿ ನೀಡದೇ ನೇರ ಅರ್ಜಿ ಸಲ್ಲಿಸಿದ್ದಾರೆ ಇದು ನಿಯಮಕ್ಕೆ ಬಾಹಿರ. ಜೈಲು ಕೈಪಿಡಿಯಲ್ಲಿರುವಂತೆ ಅಧಿಕಾರಿಗಳು ಕ್ರಮ ಕೈಗೊಳ್ಳುತ್ತಾರೆ, ಕೋರ್ಟ್​ಗೆ ಖುದ್ದು ಹಾಜರುಪಡಿಸಲು ಆರೋಪಿಗಳು ಕೋರಿದ್ದಾರೆ ಆದರೆ ಇದರಿಂದ ಇದರಿಂದ ದರ್ಶನ್ ಭದ್ರತೆಗೆ ಸಮಸ್ಯೆ ಆಗಲಿದೆ ಎಂದು ಪ್ರಸನ್ನ ವಾದಿಸಿದ್ದಾರೆ. ಅರ್ಜಿಗಳ ಕುರಿತು ಆದೇಶವನ್ನು ನ್ಯಾಯಾಲಯವು ಕಾಯ್ದಿರಿಸಿದೆ.

ತನಿಖಾಧಿಕಾರಿಯು ಸಾಕ್ಷ್ಯಗಳನ್ನು ತಿರುಚಿದ್ದು, ಸುಳ್ಳು ಸಾಕ್ಷ್ಯವನ್ನು ಸೃಷ್ಟಿಸಿದ್ದಾರೆ ಹಾಗಾಗಿ ಅವರನ್ನು ಈ ಪ್ರಕರಣದಲ್ಲಿ 18ನೇ ಆರೋಪಿಯನ್ನಾಗಿ ಮಾಡಬೇಕು ಎಂದು ಪವನ್ ಪರ ವಕೀಲರು ಅರ್ಜಿ ಹೂಡಿದ್ದರು. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಜರು ನಡೆದ ಸ್ಥಳಗಳಿಗೆ (ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯೂ ಸೇರಿದಂತೆ) ಖುದ್ದಾಗಿ ಭೇಟಿ ನೀಡಿ ಪರಿಶೀಲನೆ ನಡೆಸಲು ಅನುಮತಿ ಕೊಡಬೇಕೆಂದು ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ. ಈ ಬಗ್ಗೆ ಕಾಮಾಕ್ಷಿಪಾಳ್ಯ ಪೊಲೀಸರ ಅಭಿಪ್ರಾಯವನ್ನು ನ್ಯಾಯಾಲಯ ಕೇಳಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಕೆಲಸ ಕೊಡಿಸಿದ ಸ್ನೇಹಿತನಿಗೇ ಚಟ್ಟ ಕಟ್ಟಿದ ಫ್ರೆಂಡ್​​: ಎಣ್ಣೆ ನಶೆಯಲ್ಲಿ ಶುರುವಾದ ಜಗಳ ಕೊಲೆಯಲ್ಲಿ ಎಂಡ್​ – Kannada News | Drunken Brawl Ends in Friend’s Murder in Surapura Taluk of Yadgir

ಯಾದಗಿರಿ, ಮಾರ್ಚ್​​ 03: ಮದ್ಯ ಸೇವಿಸದ ನಶೆಯಲ್ಲಿ ಸ್ನೇಹಿತರ ನಡುವೆ ಶುರುವಾದ ಗಲಾಟೆ ಓರ್ವನ ಕೊಲೆಯಲ್ಲಿ ಅಂತ್ಯಗೊಂಡಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಗುತ್ತಿಬಸವಣ್ಣನ ಕ್ರಾಸ್ ಬಳಿಯ ಕ್ರಶರ್​​ ಬಳಿ ನಡೆದಿದೆ. ವಿಜಯಪುರ ಜಿಲ್ಲೆಯ ತಾಳಿಕೋಟಿ ಮೂಲದ ಬಸನಗೌಡ (30) ಮೃತ ವ್ಯಕ್ತಿಯಾಗಿದ್ದು, ಈತನ ಸ್ನೇಹಿತ ಬಸನಗೌಡ ಎನ್ನುವವನೇ ಕೊಲೆ ಆರೋಪಿಯಾಗಿದ್ದಾನೆ.

ಮೃತಪಟ್ಟಿರುವ ವ್ಯಕ್ತಿ ಬಸನಗೌಡ ಕಳೆದ ಒಂದು ತಿಂಗಳಿನಿಂದ  ಕ್ರಶರ್ ಕಂಪನಿಯಲ್ಲಿ ಟಿಪ್ಪರ್ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದ. ಕ್ರಶಿಂಗ್​ ಮಾಡಿದ ಕಲ್ಲುಗಳುನ್ನ ಟಿಪ್ಪರ್‌ನಲ್ಲಿ ಲೋಡ್ ಮಾಡಿಕೊಂಡು ಬೇರೆ ಕಡೆ ಸಾಗಿಸುವ ಕೆಲಸ ಈತನದ್ದಾಗಿತ್ತು. ಈ ನಡುವೆ ತಾಳಿಕೋಟಿಯಲ್ಲಿ ಕೆಲಸವಿಲ್ಲದೆ ಅಲೆಯುತ್ತಿದ್ದ ಸ್ನೇಹಿತ ಬಸನಗೌಡನಿಗೂ ತನ್ನದೇ ಕಂಪನಿಯಲ್ಲಿ ಕೆಲಸ ಕೊಡಿಸಿದ್ದ. ಎಂದಿನಂತೆ ನಿನ್ನೆ ಕೆಲಸ ಮುಗಿಸಿದ ಸ್ನೇಹಿತರು ಸಂಜೆ ಎಣ್ಣೆ ಹೊಡೆಯಲು ಕುಳಿತುಕೊಂಡಿದ್ದಾರೆ. ಮದ್ಯದ ನಶೆಯಲ್ಲಿದ್ದ ಇವರ ನಡುವೆ ಕ್ಷುಲ್ಲಕ ಕಾರಣಕ್ಕೆ ಜಗಳ ಶುರುವಾಗಿದೆ. ಇದು ವಿಕೋಪಕ್ಕೆ ಹೋಗಿ ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಕೊನೆಗೆ ಕೆಲಸ ಕೊಡಿಸಿದ್ದ ಬಸನಗೌಡಗೆ ಸ್ನೇಹಿತ ಬಸನಗೌಡ ಕಾಲಿನಿಂದ ಒದ್ದು ಹಲ್ಲೆ ಮಾಡಿದ್ದಾನೆ. ಹಲ್ಲೆ ಮಾಡಿದ ಬಳಿಕ ನಶೆಯಲ್ಲಿ‌ ಹೋಗಿ ಮಲಗಿದ್ದಾನೆ. ಆದರೆ ಇತ್ತ ಹಲ್ಲೆಗೊಳಗಾದ ಬಸನಗೌಡ ಬೆಳಗಾಗುವುದರಲ್ಲಿ ಮೃತಪಟ್ಟಿದ್ದಾನೆ.

ಇದನ್ನೂ ಓದಿ: ಫೋಕ್ಸೋ ಕೇಸ್​​ನಲ್ಲಿ ಇಂದು 2 ಬೆಳವಣಿಗೆ; ಕುತೂಹಲ ಮೂಡಿಸಿದ ಮಲ್ಲಿಕಾರ್ಜುನ ಮುತ್ಯಾ ನಡೆ

ಇಬ್ಬರು ಸ್ನೇಹಿತರು ಚೆನ್ನಾಗಿಯೇ ಇದ್ದರು. ಇವರ ನಡುವೆ ಯಾವುದೇ ಜಗಳ ಆಗಿರಲಿಲ್ಲ. ಹೀಗಿದ್ದರೂ ಕುಡಿದ ನಶೆಯಲ್ಲಿ ನಡೆದ ಘಟನೆ ಓರ್ವನ ಪ್ರಾಣ ಪಡೆದಿದೆ. ಘಟನಾ ಸ್ಥಳಕ್ಕೆ ಕೆಂಭಾವಿ ಪೊಲೀಸರು ಮತ್ತು ಎಸ್ಪಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತ ದೇಹವನ್ನ ಕೆಂಭಾವಿಯ ಶವಗಾರಕ್ಕೆ ರವಾನೆ ಮಾಡಿದ್ದಾರೆ. ವಿಚಾರಣೆ ವೇಳೆ ಮದ್ಯದ ಅಮಲಲ್ಲಿ ಸ್ನೇಹಿತನನ್ನು ತಾನೇ ಕೊಂದಿರೋದಾಗಿ ಆರೋಪಿಯೂ ಒಪ್ಪಿಕೊಂಡಿದ್ದಾನೆ ಎನ್ನಲಾಗಿದೆ. ಘಟನೆ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಉಪಕಾರ ಮಾಡಲು ಹೋಗಿ ಸ್ನೇಹಿತನಿಂದಲೇ ವ್ಯಕ್ತಿ ಹತ್ಯೆಯಾಗಿರುವ ಹಿನ್ನೆಲೆ, ಆರೋಪಿ ವಿರುದ್ಧ ಮೃತನ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆತನಿಗೆ ತಕ್ಕ ಶಿಕ್ಷೆಯಾಗಬೇಕು ಎಂಬ ಆಗ್ರಹವೂ ವ್ಯಕ್ತವಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

ಮಹಿಳೆಯ ಘೋಷಿತ ಆದಾಯ 4.81 ಲಕ್ಷ ರೂ; ಇನ್ಷೂರೆನ್ಸ್ ಕಟ್ಟಿದ್ದು 50 ಲಕ್ಷ ರೂ; ಕೋರ್ಟ್​ಗೆ ಹೋಯ್ತು ಕೇಸ್ – Kannada News | Woman pays Rs 50 lakh insurance premium, shows less than 5 lakh declared income, know what happened next

ಆದಾಯ ತೆರಿಗೆ ಇಲಾಖೆ ಈಗೀಗ ಬಹಳ ಕ್ರಿಯಾಶೀಲವಾಗಿದ್ದು, ತೆರಿಗೆ ವಂಚಕರು, ಕಪ್ಪು ಹಣದ ಜಾಡನ್ನು ಪತ್ತೆ ಮಾಡಲು ಬಹಳ ಎಚ್ಚರ ವಹಿಸುತ್ತದೆ. ಅಸಹಜ ಆದಾಯ ಹೆಚ್ಚಳ, ವಹಿವಾಟುಗಳಾದಲ್ಲಿ ಅದರ ಗಮನಕ್ಕೆ ಬೇಗ ಬರುತ್ತದೆ. ಅವನ್ನು ಪತ್ತೆ ಮಾಡಲೆಂದೇ ಎಐ ಇತ್ಯಾದಿ ಆಧುನಿಕ ತಂತ್ರಜ್ಞಾನವನ್ನು ಇಲಾಖೆ (Income Tax department) ಬಳಸುತ್ತದೆ. ಇತ್ತೀಚೆಗೆ ಮಹಿಳೆಯೊಬ್ಬರು ತಮ್ಮ ಘೋಷಿತ ಆದಾಯಕ್ಕಿಂತ ಹತ್ತು ಪಟ್ಟು ಹೆಚ್ಚು ಮೊತ್ತದಷ್ಟು ಹಣವನ್ನು ಇನ್ಷೂರೆನ್ಸ್ ಪ್ರೀಮಿಯಮ್ ಕಟ್ಟಲು ಬಳಸಿ, ಐಟಿ ಕಣ್ಣಿಗೆ ಸಿಕ್ಕು, ಕೋರ್ಟ್ ಕಟಕಟೆ ಏರಬೇಕಾದ ಘಟನೆ ಬೆಳಕಿಗೆ ಬಂದಿದೆ. ಇದು ಪ್ರತಿಯೊಬ್ಬರೂ ಕಲಿಯಬೇಕಾದ ಪಾಠ ಎನಿಸಬಹುದು.

ಪ್ರತಿಭಾ ಎನ್ನುವ ಮಹಿಳೆ ನಿರ್ದಿಷ್ಟ ಹಣಕಾಸು ವರ್ಷದಲ್ಲಿ ತನ್ನ ವಾರ್ಷಿಕ ಆದಾಯ 4.81 ಲಕ್ಷ ರೂ ಎಂದು ಐಟಿಆರ್​ನಲ್ಲಿ ಘೋಷಿಸಿದ್ದರು. ಆದರೆ, ಆ ವರ್ಷ ಆಕೆ 50 ಲಕ್ಷ ರೂ ಮೊತ್ತದ ಇನ್ಷೂರೆನ್ಸ್ ಪ್ರೀಮಿಯಮ್ ಪಾವತಿಸಿದ್ದರು. ಇದು ಆದಾಯ ಇಲಾಖೆಯ ಗಮನಕ್ಕೆ ಬಂದಿದೆ.

ಘೋಷಿತ ಆದಾಯ 4.81 ಇರುವಾಗ ಇನ್ಷೂರೆನ್ಸ್ ಪ್ರೀಮಿಯಮ್​ಗೆ ಪಾವತಿಸಲು 50 ಲಕ್ಷ ರೂ ಎಲ್ಲಿಂದ ಬಂತು ಎನ್ನುವುದು ಐಟಿ ಅನುಮಾನ. ಆ ಹಣದ ಮೂಲ ಯಾವುದೆಂದು ಸರಿಯಾಗಿ ವಿವರಿಸದಿದ್ದಾಗ ಅದನ್ನು ಅನ್​ಎಕ್ಸ್​ಪ್ಲೇನ್ಡ್ ಇನ್ವೆಸ್ಟ್​ಮೆಂಟ್ ಎಂದು ಪರಿಗಣಿಸಲಾಗುತ್ತದೆ.

ಇದನ್ನೂ ಓದಿ: ಎನ್​ಪಿಎಸ್ ಸ್ವಾಸ್ಥ್ಯ ಈಕ್ವಿಟಿ ಪ್ಲಸ್; ಇದು ರಿಟೈರ್ಮೆಂಟ್​ಗೂ ಸೈ, ಹೆಲ್ತ್​ಕೇರ್ ವೆಚ್ಚಕ್ಕೂ ಸೈ; ಹೇಗೆ ಕೆಲಸ ಮಾಡುತ್ತೆ ಈ ಹೈಬ್ರಿಡ್ ಸ್ಕೀಮ್?

ಯಾವುದೇ ಪ್ರಾಪರ್ಟಿ ಖರೀದಿ ನಡೆದಾಗ, ದೊಡ್ಡ ಮೊತ್ತದ ಇನ್ಷೂರೆನ್ಸ್ ಪ್ರೀಮಿಯಮ್ ಪಾವತಿಯಾದಾಗ, ದೊಡ್ಡ ಮೊತ್ತದ ಬ್ಯಾಂಕ್ ಠೇವಣಿ ಆದಾಗ, ಷೇರು ಅಥವಾ ಮ್ಯೂಚುವಲ್ ಫಂಡ್​ಗಳಲ್ಲಿ ದೊಡ್ಡ ಹೂಡಿಕೆಗಳಾದಾಗ, ಇತ್ಯಾದಿ ಸಂದರ್ಭದಲ್ಲಿ ತೆರಿಗೆ ಅಧಿಕಾರಿಗಳು ಆ ವಹಿವಾಟು ನಡೆಸಿದ ವ್ಯಕ್ತಿಯ ಆದಾಯ ಹರಿವನ್ನು ಪರಿಶೀಲಿಸುತ್ತಾರೆ. ಐಟಿ ರಿಟರ್ನಸ್​ನಲ್ಲಿ ಫೈಲ್ ಮಾಡಲಾದ ವಿವರವನ್ನು ಪರಿಶೀಲಿಸುತ್ತಾರೆ. ಮಹಿಳೆಯ ಕೇಸ್​ನಲ್ಲೂ ಆಗಿದ್ದು ಇದೆಯೇ.

ಕೋರ್ಟ್​ನಲ್ಲಿ ಮಹಿಳೆಯ ವಿವರಣೆಗೆ ಸಿಗಲಿಲ್ಲ ಸಮಾಧಾನ

50 ಲಕ್ಷ ರೂ ಹಣ ಎಲ್ಲಿಂದ ಬಂತು ಎಂದು ಕೇಳಿದಾಗ ಮಹಿಳೆ, ಅದು ತನ್ನ ವೈಯಕ್ತಿಕ ಹಣವಲ್ಲ. ತನ್ನ ಕುಟುಂಬದ ಹಿಂದೂ ಅವಿಭಜಿತ ಕುಟುಂಬ ಅಥವಾ ಎಚ್​ಯುಎಫ್​ಗೆ ಸೇರಿದ ಹಣ. ತಮ್ಮ ಕುಟುಂಬ ಹೊಂದಿರುವ ಸೇಬಿನ ತೋಟದಿಂದ ಬಂದ ಕೃಷಿ ಆದಾಯದ ಹಣ ಎಂದು ಆಕೆ ವಿವರಣೆ ಕೊಟ್ಟರು.

ಇಂಥ ಸಂದರ್ಭದಲ್ಲಿ ನಿರ್ದಿಷ್ಟ ಆದಾಯ ಬರುವಂತಹ ಕ್ಯಾಷ್ ಫ್ಲೋ ದಾಖಲೆಗಳು, ಎಂಒಯು, ಅಥವಾ ಸೇಲ್ ಡೀಡ್ ಅಥವಾ ಇನ್ನೇನಾದರೂ ಮಾರಾಟ ದಾಖಲೆಗಳಿವೆಯಾ ಎಂಬುದನ್ನು ಪರಿಶೀಲಿಸಲಾಗುತ್ತದೆ. ಈ ಮಹಿಳೆಯ ಪ್ರಕರಣದಲ್ಲೂ ಇದನ್ನು ಪರಿಶೀಲಿಸಲಾಗಿದೆ. ಆದರೆ ಸೂಕ್ತ ದಾಖಲೆಗಳು ಸಿಗಲಿಲ್ಲ. ಅಂದರೆ, 50 ಲಕ್ಷ ರೂ ಪ್ರೀಮಿಯಮ್ ಪಾವತಿಗೆ ಬೇಕಾದಷ್ಟು ಹಣವು ಆಕೆಯ ಕುಟುಂಬದಲ್ಲಿ ಇತ್ತು ಎನ್ನುವುದಕ್ಕೆ ದಾಖಲೆಗಳು ಇರಲಿಲ್ಲ.

ಇದನ್ನೂ ಓದಿ: ಮಾರ್ಕೆಟ್ ಟ್ರೆಂಡ್, ಎಕ್ಸ್​ಪೆನ್ಸ್ ರೇಶಿಯೋ, ಎಮರ್ಜೆನ್ ಫಂಡ್ ಇತ್ಯಾದಿ.. ಜನಸಾಮಾನ್ಯರು ಮಾಡುವ ಹೂಡಿಕೆ ತಪ್ಪುಗಳಿವು

ಮಹಿಳೆಯ ವಿವರಣೆಯು ಆದಾಯ ತೆರಿಗೆ ಮೇಲ್ಮನವಿ ನ್ಯಾಯಮಂಡಳಿಗೆ ಸಮಾಧಾನ ಕೊಡಲಿಲ್ಲ. ಆಕೆಯ ವಿರುದ್ಧ ತೀರ್ಪು ಬಂದಿತು. ಆಕೆ ದಂಡ ಸಮೇತವಾಗಿ 50 ಲಕ್ಷ ರೂಗೆ ತೆರಿಗೆ ಇತ್ಯಾದಿಯನ್ನು ಪಾವತಿಸುವಂತಾಯಿತು.

ನೀವೂ ಕೂಡ ದೊಡ್ಡ ಮೊತ್ತದ ಹಣವನ್ನು ಯಾವುದರಲ್ಲಾದರೂ ಹೂಡಿಕೆ ಮಾಡುತ್ತಿದ್ದಾಗ, ಆ ಹಣ ಎಲ್ಲಿಂದ ಬಂತು ಎನ್ನುವುದಕ್ಕೆ ಸೂಕ್ತ ದಾಖಲೆಗಳನ್ನು ಹೊಂದಿರುವುದು ಬಹಳ ಮುಖ್ಯ.

ಇನ್ನಷ್ಟು ಪರ್ಸನಲ್ ಫೈನಾನ್ಸ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ರಾಜ್ಯದಲ್ಲಿ ಹೆಚ್ಚುತ್ತಿದೆ ಬಾಂಬ್ ಬೆದರಿಕೆ: ಬೆಂಗಳೂರು ಸಿಟಿ ಸಿವಿಲ್ ಕೋರ್ಟ್‌ಗೆ ಹುಸಿ ಬಾಂಬ್ ಬೆದರಿಕೆ – Kannada News | Karnataka Bomb Threats: Bengaluru City Civil Court Targeted in Email Hoax, Police Investigate

ಬೆಂಗಳೂರು, ಮಾ.3: ರಾಜ್ಯದಲ್ಲಿ ಬಾಂಬ್ ಬೆದರಿಕೆಗಳು ಹೆಚ್ಚುತ್ತಿದೆ. ಇತ್ತೀಚಿನ ದಿನಗಳಲ್ಲಿ ಜಿಲ್ಲಾಧಿಕಾರಿ ಕಚೇರಿ, ಶಾಲೆ, ಇದೀಗ ಕೋರ್ಟ್​​​ಗೂ ಬೆದರಿಕೆ ಬರುತ್ತಿದೆ. ಇಂದು ಮಧ್ಯಾಹ್ನ ಕಲಬುರ್ಗಿಯ ಜಿಲ್ಲಾ ಕೋರ್ಟ್​​ಗೆ ಬೆದರಿಕೆ ಬಂದಿತ್ತು. ಇದೀಗ ರಾಜಧಾನಿ ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ಆವರಣವನ್ನು ಸ್ಫೋಟಿಸುವುದಾಗಿ ಅಪರಿಚಿತರು ಇ-ಮೇಲ್ ಮೂಲಕ ಬೆದರಿಕೆ ಹಾಕಿದ್ದಾರೆ. ಇದರಿಂದ ಎಚ್ಚೆತ್ತುಕೊಂಡ ಪೊಲೀಸರು ಮತ್ತು ಭದ್ರತಾ ಪಡೆಗಳು ಇಡೀ ಕೋರ್ಟ್ ಆವರಣವನ್ನು ಜಾಲಾಡಿದ್ದು, ಅಂತಿಮವಾಗಿ ಇದೊಂದು ‘ಹುಸಿ ಬಾಂಬ್ ಬೆದರಿಕೆ’ (Hoax Call) ಎಂದು ದೃಢಪಟ್ಟಿದೆ. ಇಂದು (ಮಾರ್ಚ್ 3, 2026) ಬೆಳಿಗ್ಗೆ ಕೋರ್ಟ್‌ನ ಅಧಿಕೃತ ಇ-ಮೇಲ್ ವಿಳಾಸಕ್ಕೆ ಸಂದೇಶ ಬಂದಿತ್ತು. ಇನ್ನು ಈ ಬೆದರಿಕೆ ಇ-ಮೇಲ್ ತಮಿಳು ಭಾಷೆಯಲ್ಲಿದೆ.

ಸುದ್ದಿ ತಿಳಿಯುತ್ತಿದ್ದಂತೆ ಹಲಸೂರು ಗೇಟ್ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿದರು. ಬಾಂಬ್ ನಿಷ್ಕ್ರಿಯ ದಳ (BDS) ಮತ್ತು ಶ್ವಾನದಳದೊಂದಿಗೆ ಕೋರ್ಟ್‌ನ ಪ್ರತಿ ಕೊಠಡಿ, ಕಾರಿಡಾರ್ ಮತ್ತು ಪಾರ್ಕಿಂಗ್ ಪ್ರದೇಶಗಳಲ್ಲಿ ತೀವ್ರ ಶೋಧ ನಡೆಸಲಾಯಿತು.

ಇದನ್ನೂ ಓದಿ: ಕಲಬುರಗಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ: ಓಡಿದ ವಕೀಲರು

ಸುದೀರ್ಘ ಪರಿಶೀಲನೆಯ ನಂತರ ಯಾವುದೇ ಅನುಮಾನಾಸ್ಪದ ವಸ್ತುಗಳು ಅಥವಾ ಸ್ಫೋಟಕಗಳು ಪತ್ತೆಯಾಗಿಲ್ಲ. ಸಾರ್ವಜನಿಕರಲ್ಲಿ ಭೀತಿ ಹುಟ್ಟಿಸಲು ಕಿಡಿಗೇಡಿಗಳು ಈ ರೀತಿ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇ-ಮೇಲ್ ಕಳುಹಿಸಿದ ಕಿಡಿಗೇಡಿಗಳ ಪತ್ತೆಗಾಗಿ ಸೈಬರ್ ಕ್ರೈಂ ವಿಭಾಗದ ನೆರವು ಪಡೆಯಲಾಗುತ್ತಿದೆ. ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಇಸ್ರೇಲ್-ಯುಎಸ್ ದಾಳಿಯಿಂದಾಗಿ ಇರಾನ್​ನಲ್ಲಿರುವ ಭಾರತೀಯ ವಿದ್ಯಾರ್ಥಿಗಳು ಸುರಕ್ಷಿತ ಸ್ಥಳಕ್ಕೆ ಶಿಫ್ಟ್ – Kannada News | Embassy of India in Iran relocates Indian students in Tehran to safer locations

ಟೆಹ್ರಾನ್, ಮಾರ್ಚ್ 3: ಇರಾನ್‌ನ ರಾಜಧಾನಿ ಟೆಹ್ರಾನ್ ಮೇಲೆ ಅಮೆರಿಕ ಮತ್ತು ಇಸ್ರೇಲ್‌ನ (Israel Attack) ದಾಳಿ ನಡೆಯುತ್ತಿರುವುದರಿಂದ ಹಲವಾರು ಭಾರತೀಯ ವಿದ್ಯಾರ್ಥಿಗಳನ್ನು ಟೆಹ್ರಾನ್‌ನ ಹೊರಗೆ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ ಎಂದು ಇರಾನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ತಿಳಿಸಿದೆ. ಕೆಲವು ವಿದ್ಯಾರ್ಥಿಗಳು ಸ್ವಯಂಪ್ರೇರಣೆಯಿಂದ ಟೆಹ್ರಾನ್‌ನಲ್ಲಿಯೇ ಉಳಿಯಲು ನಿರ್ಧರಿಸಿದ್ದಾರೆ. ಅಂಥವರನ್ನು ಹೊರತುಪಡಿಸಿ ಉಳಿದವರನ್ನು ಶಿಫ್ಟ್ ಮಾಡಲಾಗಿದೆ. ಅವರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಅವರಿಗೆ ತುರ್ತು ಸಂಪರ್ಕ ಸಂಖ್ಯೆಗಳನ್ನು ಸಹ ನೀಡಲಾಗಿದೆ.

ಟೆಹ್ರಾನ್ ನಗರದಲ್ಲಿ ದಾಳಿಯ ಅಪಾಯ ಹೆಚ್ಚಾದ ಕಾರಣದಿಂದ ಭಾರತದ ರಾಯಭಾರ ಕಚೇರಿಯು ಟೆಹ್ರಾನ್‌ನಲ್ಲಿರುವ ಭಾರತೀಯ ವಿದ್ಯಾರ್ಥಿಗಳನ್ನು ಟೆಹ್ರಾನ್‌ನ ಹೊರಗೆ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಿದೆ. ರಾಯಭಾರ ಕಚೇರಿಯು ಅವರಿಗೆ ಸಾರಿಗೆ, ಆಹಾರ ಮತ್ತು ವಸತಿ ವ್ಯವಸ್ಥೆಗಳನ್ನು ಮಾಡಿದೆ. ರಾಯಭಾರ ಕಚೇರಿಯ ಸಹಾಯವನ್ನು ನಿರಾಕರಿಸಿದ ಕೆಲವೇ ವಿದ್ಯಾರ್ಥಿಗಳು ಮಾತ್ರ ಟೆಹ್ರಾನ್‌ನಲ್ಲಿ ಉಳಿದಿದ್ದಾರೆ ಎಂದು ಕಾನ್ಸುಲೇಟ್ ತಿಳಿಸಿದೆ.

ಇದನ್ನೂ ಓದಿ: ಇರಾನ್​ ಮೇಲೆ ಇಸ್ರೇಲ್-ಯುಎಸ್​ ದಾಳಿ; ಸಾವಿನ ಸಂಖ್ಯೆ 787ಕ್ಕೆ ಏರಿಕೆ

“ಇನ್ನೂ ಇರಾನ್‌ನಲ್ಲಿಯೇ ಉಳಿದಿರುವ ಇತರ ಭಾರತೀಯ ವಿದ್ಯಾರ್ಥಿಗಳು ಮತ್ತು ಭಾರತೀಯ ಪ್ರಜೆಗಳಿಗೆ ಈ ಹಿಂದೆ ನೀಡಲಾದ ಸಲಹೆಯು ಬದಲಾಗದೆ ಉಳಿದಿದೆ. ನೀವು ಇರುವ ಸ್ಥಳದಲ್ಲಿಯೇ ಇರಿ, ಸಾಧ್ಯವಾದಷ್ಟು ಮನೆ ಅಥವಾ ರೂಂನ ಒಳಗಿರಿ. ಕಿಟಕಿಗಳಿಂದ ದೂರವಿರಿ. ಎಲ್ಲಾ ಸಮಯದಲ್ಲೂ ಸರಿಯಾದ ಎಚ್ಚರಿಕೆ ವಹಿಸಿ. ಪ್ರತಿಭಟನೆಗಳ ಪ್ರದೇಶಗಳ ಬಳಿ ಓಡಾಡಬೇಡಿ. ಇರಾನ್‌ನಲ್ಲಿರುವ ಭಾರತದ ರಾಯಭಾರ ಕಚೇರಿಯೊಂದಿಗೆ ನಿಯಮಿತವಾಗಿ ಸಂಪರ್ಕದಲ್ಲಿರಿ” ಎಂದು ಭಾರತ ಸೂಚಿಸಿದೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Source link

‘ಭೀಮಾ ತೀರದಲ್ಲಿ’ ರೀ-ರಿಲೀಸ್: ಬಜೆಟ್ ಇನ್ನಿತರೆ ಮಾಹಿತಿ ಹಂಚಿಕೊಂಡ ನಿರ್ಮಾಪಕ – Kannada News | Producer Anaji Nagaraj talks about Bheema Theeradalli movie re release

ದುನಿಯಾ ವಿಜಯ್ (Duniya Vijay) ನಟನೆಯ ‘ಭೀಮಾ ತೀರದಲ್ಲಿ’ ಸಿನಿಮಾ 2012 ರಲ್ಲಿ ಬಿಡುಗಡೆ ಆಗಿತ್ತು. ಸಿನಿಮಾ ಬಿಡುಗಡೆ ಆದಾಗ ಸಾಕಷ್ಟು ವಿವಾದವೂ ಆಗಿತ್ತು. ಆದರೆ ಸಿನಿಮಾ ಹಿಟ್ ಎನಿಸಿಕೊಂಡಿತ್ತು. ಇದೀಗ 14 ವರ್ಷಗಳ ಬಳಿಕ ‘ಭೀಮಾ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಆಗುತ್ತಿದೆ. ಸಿನಿಮಾದ ನಿರ್ಮಾಪಕ ಅಣಜಿ ನಾಗರಾಜ್ ಮತ್ತು ನಿರ್ದೇಶಕ ಓಂ ಪ್ರಕಾಶ್ ರಾವ್ ಅವರುಗಳು ‘ಭೀಮಾ ತೀರದಲ್ಲಿ’ ಸಿನಿಮಾ ಬಗ್ಗೆ ಮಾತನಾಡಿದ್ದಾರೆ. ಆಗ ಸಿನಿಮಾಕ್ಕೆ ಬಜೆಟ್ ಎಷ್ಟಾಗಿತ್ತು, ಚಿತ್ರೀಕರಣದ ಸಂದರ್ಭದಲ್ಲಿ ನಡೆದ ಸ್ವಾರಸ್ಯಕರ ಘಟನೆಗಳ ಬಗ್ಗೆಯೂ ಮಾತನಾಡಿದ್ದಾರೆ. ವಿಡಿಯೋ ನೋಡಿ….

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Source link

ಲಾರೆಸ್ ವಿಶ್ವ ಕ್ರೀಡಾ ಪ್ರಶಸ್ತಿಗೆ ಭಾರತ ಮಹಿಳಾ ಕ್ರಿಕೆಟ್ ತಂಡ ನಾಮನಿರ್ದೇಶನ – Kannada News | Laureus Awards 2026: Indian Women’s Cricket Team & Sports Stars Nominated

2026 ರ ಲಾರೆಸ್ ವಿಶ್ವ ಕ್ರೀಡಾ ಪ್ರಶಸ್ತಿಗಳಿಗೆ (2026 Laureus World Sports Awards) ನಾಮನಿರ್ದೇಶನಗಳನ್ನು ಪ್ರಕಟಿಸಲಾಗಿದೆ. 2025 ರಲ್ಲಿ ಏಕದಿನ ವಿಶ್ವಕಪ್ ಗೆದ್ದ ಭಾರತೀಯ ಮಹಿಳಾ ಕ್ರಿಕೆಟ್ ತಂಡವನ್ನು (Indian Women’s Cricket Team) ಸಹ ನಾಮನಿರ್ದೇಶನಗೊಂಡ ತಂಡಗಳ ಪಟ್ಟಿಯಲ್ಲಿ ಸೇರಿಸಲಾಗಿದೆ. ಭಾರತೀಯ ಮಹಿಳಾ ಕ್ರಿಕೆಟ್ ತಂಡವನ್ನು ಲಾರೆಸ್ ವರ್ಷದ ತಂಡ ವಿಭಾಗದಲ್ಲಿ ನಾಮನಿರ್ದೇಶನ ಮಾಡಲಾಗಿದೆ. ಈ ವಿಭಾಗದಲ್ಲಿ ಭಾರತ ಮಹಿಳಾ ತಂಡವನ್ನು ಹೊರತುಪಡಿಸಿ ವಿವಿಧ ಕ್ರೀಡೆಗಳಲ್ಲಿ ತಮ್ಮ ಛಾಪು ಮೂಡಿಸಿರುವ ಪ್ರಪಂಚದಾದ್ಯಂತದ ಐದು ತಂಡಗಳನ್ನು ಆಯ್ಕೆ ಮಾಡಲಾಗಿದೆ. ಅಂದರೆ, ಒಟ್ಟು ಆರು ತಂಡಗಳನ್ನು ಲಾರೆಸ್ ವರ್ಷದ ತಂಡಕ್ಕೆ ನಾಮನಿರ್ದೇಶನ ಮಾಡಲಾಗಿದೆ.

ಸ್ಪರ್ಧೆಯಲ್ಲಿ ಈ 6 ತಂಡಗಳು

ವಿಶ್ವ ಚಾಂಪಿಯನ್ ಭಾರತೀಯ ಮಹಿಳಾ ಕ್ರಿಕೆಟ್ ತಂಡವು ಲಾರೆಸ್ ವರ್ಷದ ತಂಡ ಪ್ರಶಸ್ತಿಗಾಗಿ ಸ್ಪರ್ಧಿಸಲಿರುವ ಐದು ತಂಡಗಳಲ್ಲಿ ಇಂಗ್ಲೆಂಡ್ ಮಹಿಳಾ ಫುಟ್ಬಾಲ್ ತಂಡ, ಯುರೋಪಿಯನ್ ರೈಡರ್ ಕಪ್ ತಂಡ (ಗಾಲ್ಫ್), ಮೆಕ್‌ಲಾರೆನ್ ಫಾರ್ಮುಲಾ 1 ತಂಡ (ಯುಕೆ), ಬ್ಯಾಸ್ಕೆಟ್‌ಬಾಲ್‌ನ ಒಕ್ಲಹೋಮ ಸಿಟಿ ಥಂಡರ್ (ಯುಎಸ್‌ಎ) ಮತ್ತು ಫುಟ್‌ಬಾಲ್ ಕ್ಲಬ್ ಪ್ಯಾರಿಸ್ ಸೇಂಟ್-ಜರ್ಮೈನ್ (ಫ್ರಾನ್ಸ್) ಸೇರಿವೆ. 2025 ರ ಏಕದಿನ ವಿಶ್ವಕಪ್‌ನಲ್ಲಿ ಅತ್ಯುತ್ತಮ ಪ್ರದರ್ಶನಕ್ಕಾಗಿ ಭಾರತೀಯ ಮಹಿಳಾ ಕ್ರಿಕೆಟ್ ತಂಡವನ್ನು ನಾಮನಿರ್ದೇಶನ ಮಾಡಲಾಗಿದೆ.

ಈ 8 ವಿಭಾಗಗಳಲ್ಲಿ ನಾಮನಿರ್ದೇಶನ

ಲಾರೆಸ್ ವಿಶ್ವ ಕ್ರೀಡಾ ಪ್ರಶಸ್ತಿಗಳನ್ನು ವರ್ಷದ ತಂಡ ಸೇರಿದಂತೆ ಎಂಟು ವಿಭಾಗಗಳಲ್ಲಿ ನೀಡಲಾಗುತ್ತದೆ. ಇವುಗಳಿಗೆ ನಾಮನಿರ್ದೇಶನಗಳನ್ನು ಮ್ಯಾಡ್ರಿಡ್‌ನಲ್ಲಿ ನಡೆದ ಸಮಾರಂಭದಲ್ಲಿ ಘೋಷಿಸಲಾಗಿದ್ದು, ವರ್ಷದ ತಂಡ ಸೇರಿದಂತೆ ಎಂಟು ವಿಭಾಗಗಳಲ್ಲಿ ನಾಮನಿರ್ದೇಶನ ಮಾಡಲಾಗಿದೆ.

ICC ODI Rankings: ಏಕದಿನ ಕ್ರಿಕೆಟ್​ನಲ್ಲಿ ಮತ್ತೆ ಅಗ್ರಸ್ಥಾನಕ್ಕೇರಿದ ಸ್ಮೃತಿ ಮಂಧಾನ

ವಿಶ್ವ ಕ್ರೀಡಾಳು ಪ್ರಶಸ್ತಿಗೆ ನಾಮನಿರ್ದೇಶನಗೊಂಡವರು

ಲಾರೆಸ್ ವಿಶ್ವ ಕ್ರೀಡಾಳು ಪ್ರಶಸ್ತಿಗೆ ನಾಮನಿರ್ದೇಶನಗೊಂಡವರಲ್ಲಿ ಟೆನಿಸ್ ತಾರೆಗಳಾದ ಕಾರ್ಲೋಸ್ ಅಲ್ಕರಾಜ್ ಮತ್ತು ಮೊಂಡೊ ಡುಪ್ಲಾಂಟಿಸ್ ಸೇರಿದ್ದಾರೆ. ಲಾರೆಸ್ ವಿಶ್ವ ಕ್ರೀಡಾಳು ಪ್ರಶಸ್ತಿಗೆ ನಾಮನಿರ್ದೇಶನಗೊಂಡವರಲ್ಲಿ ಅರಿನಾ ಸಬಲೆಂಕಾ, ಇವಾನಾ ಬೊನ್ಮಾಟಿ ಮತ್ತು ವಿಶ್ವಪ್ರಸಿದ್ಧ ಈಜುಗಾರ್ತಿ ಕೇಟೀ ಲೆಡೆಕಿ ಸೇರಿದ್ದಾರೆ. ಇವರೆಲ್ಲರೂ 2025 ರಲ್ಲಿ ನೀಡಿದ ಉತ್ತಮ ಪ್ರದರ್ಶನಕ್ಕಾಗಿ ನಾಮನಿರ್ದೇಶನಗೊಂಡಿದ್ದಾರೆ.

ಲಾರೆಸ್ ವಿಶ್ವ ಕ್ರೀಡಾ ಪ್ರಶಸ್ತಿಗಳು 2026 ರ ವಿಜೇತರನ್ನು ಏಪ್ರಿಲ್ 20 ರಂದು ಮ್ಯಾಡ್ರಿಡ್‌ನ ಸಿಬೆಲೆಸ್ ಅರಮನೆಯಲ್ಲಿ ಘೋಷಿಸಲಾಗುವುದು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 6:47 pm, Tue, 3 March 26

Source link