All posts by nagaraj11081993

ಕನ್ನಡ ಪ್ರೇಕ್ಷಕರ ನಿರ್ಲಕ್ಷ್ಯ, ತಮಿಳು ಪ್ರೇಕ್ಷಕರ ಅಪ್ಪುಗೆ ಪಡೆದ ಕನ್ನಡ ಸಿನಿಮಾ – Kannada News | Second case of Seetharam movie getting good response in Tamil Nadu

ಕನ್ನಡದ ದೊಡ್ಡ ಬಜೆಟ್ ಪ್ಯಾನ್ ಇಂಡಿಯಾ (Pan India) ಸಿನಿಮಾಗಳು ಅಥವಾ ಸುದೀಪ್, ಯಶ್, ದರ್ಶನ್ ಅಂಥಹಾ ದೊಡ್ಡ ನಟರ ಸಿನಿಮಾಗಳಷ್ಟೆ ರಾಜ್ಯದ ಗಡಿ ದಾಟಿ ಹೊರ ರಾಜ್ಯಗಳಲ್ಲಿ ಪ್ರದರ್ಶನ ಕಾಣುತ್ತವೆ. ಅದರಲ್ಲೂ ಸಿನಿಮಾ ಚೆನ್ನಾಗಿದ್ದರಷ್ಟೆ ಪರಭಾಷೆ ಪ್ರೇಕ್ಷಕರು ಮೆಚ್ಚಿಕೊಳ್ಳುತ್ತಾರೆ. ಕನ್ನಡದ ಕೆಲವು ಸ್ಟಾರ್ ನಟರ ಕನ್ನಡ ಸಿನಿಮಾಗಳು ಪರಭಾಷೆಯಲ್ಲಿ ಅಟ್ಟರ್ ಫ್ಲಾಪ್ ಆದ ಉದಾಹರಣೆಯೂ ಇದೆ. ಆದರೆ ಇದೀಗ ಕನ್ನಡದ ಸಿನಿಮಾ ಒಂದು ನೆರೆಯ ತಮಿಳುನಾಡಿನಲ್ಲಿ ಸದ್ದು ಮಾಡಲು ಆರಂಭಿಸಿದೆ. ಆದರೆ ಇದು ಸಂತೋಷ ಪಡಬೇಕಾದ ಸುದ್ದಿಯೋ ಅಥವಾ ಬೇಸರ ಪಟ್ಟುಕೊಳ್ಳಬೇಕಾದ ಸುದ್ದಿಯೋ ಗೊಂದಲದಲ್ಲಿದೆ ಚಿತ್ರತಂಡ.

ವಿಜಯ್ ರಾಘವೇಂದ್ರ ನಟಿಸಿರುವ ‘ಸೆಕೆಂಡ್ ಕೇಸ್ ಆಫ್ ಸೀತಾರಾಮ್’ ಸಿನಿಮಾ ವಾರದ ಹಿಂದಷ್ಟೆ ಬಿಡುಗಡೆ ಆಗಿದ್ದು ಸಿನಿಮಾದ ಬಗ್ಗೆ ಬಹಳ ಒಳ್ಳೆಯ ವಿಮರ್ಶೆಗಳು ವ್ಯಕ್ತವಾಗಿವೆ. ಸಿನಿಮಾ ಪ್ರೇಮಿಗಳು, ಸಿನಿಮಾ ನೋಡಿದವರು ಸಿನಿಮಾವನ್ನು ಬಹುವಾಗಿ ಮೆಚ್ಚಿಕೊಂಡಿದ್ದಾರೆ. ಆದರೆ ಈ ಹಿಂದಿನ ಕನ್ನಡದ ಕೆಲ ಒಳ್ಳೆಯ ಸಿನಿಮಾಗಳಿಗೆ ಆದ ಗತಿಯೇ ಈ ಸಿನಿಮಾಕ್ಕೂ ಆಗಿದೆ. ಸಿನಿಮಾವನ್ನು ಚಿತ್ರಮಂದಿರಗಳಿಂದ ಎತ್ತಂಗಡಿ ಮಾಡಲಾಗುತ್ತಿದೆ. ಆದರೆ ನೆರೆಯ ತಮಿಳುನಾಡಿನಲ್ಲಿ ಸಿನಿಮಾಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.

‘ಸೆಕೆಂಡ್ ಕೇಸ್ ಆಫ್ ಸೀತಾರಾಮ್’ ಸಿನಿಮಾಕ್ಕೆ ಬೆಂಗಳೂರಿನಲ್ಲಿ ಪ್ರಸ್ತುತ ಕೆಲವೇ ಚಿತ್ರಮಂದಿರಗಳಲ್ಲಿ ಕೆಲವೇ ಶೋಗಳಷ್ಟೆ ಲಭ್ಯವಿದೆ. ಅದೂ ಇತ್ತೀಚೆಗಷ್ಟೆ ಕೆಲವು ಶೋಗಳು ಹೆಚ್ಚುವರಿಯಾಗಿ ನೀಡಲಾಗಿದೆ. ಅತ್ತ ತಮಿಳುನಾಡಿನಲ್ಲಿ ಸಿನಿಮಾಕ್ಕೆ ಒಳ್ಳೆಯ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, ಸಿನಿಮಾವು ದಿನದಿಂದ ದಿನಕ್ಕೆ ಶೋಗಳ ಸಂಖ್ಯೆಯನ್ನು ಹೆಚ್ಚು ಮಾಡಿಕೊಳ್ಳುತ್ತಿದೆ. ಬುಕ್​ಮೈಶೋ ಮಾಹಿತಿಯಂತೆ ಚೆನ್ನೈನಲ್ಲಿ ನಾಳೆ (ಮಾರ್ಚ್ 03) ಸಿನಿಮಾಕ್ಕೆ ನಾಲ್ಕು ಚಿತ್ರಮಂದಿರಗಳಲ್ಲಿ ಐದು ಶೋಗಳು ನಿಗದಿ ಆಗಿವೆ. ಸಣ್ಣ ಬಜೆಟ್​​ನ ಕನ್ನಡ ಸಿನಿಮಾ ಕೇವಲ ತನ್ನ ಕಂಟೆಂಟ್ ಒಂದಿರಂದಲೇ ಪರರಾಜ್ಯದಲ್ಲಿ ಶೋಗಳನ್ನು ಗಿಟ್ಟಿಸಿಕೊಳ್ಳುತ್ತಿರುವುದು ಸಾಮಾನ್ಯ ಸಂಗತಿಯಲ್ಲ.

ಇದನ್ನೂ ಓದಿ:ವಿಜಯ್ ರಾಘವೇಂದ್ರ ಟಾರ್ಚರ್​​ಗೆ ಸುಸ್ತಾದ ಅನುಶ್ರೀ; ಕೊನೆಗೂ ಮೂಡಿತು ನಗು

ಐದು ವರ್ಷಗಳ ಹಿಂದೆ ಬಿಡುಗಡೆ ಆಗಿದ್ದ ‘ಸೀತಾರಾಮ್ ಬಿನೋಯ್’ ಸಿನಿಮಾದ ಎರಡನೇ ಭಾಗ ಇದಾಗಿದೆ. ಸಿನಿಮಾ ನೋಡಿದವರು ಮೊದಲ ಭಾಗಕ್ಕಿಂತಲೂ ಎರಡನೇ ಭಾಗ ಚೆನ್ನಾಗಿ ಮೂಡಿ ಬಂದಿದೆ ಎಂಬ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಇದೊಂದು ಸಸ್ಪೆನ್ಸ್ ಥ್ರಿಲ್ಲರ್ ಕತೆ ಆಗಿದ್ದು, ಹೆಚ್ಚುವರಿ ದೃಶ್ಯಗಳಿಲ್ಲದೆ ಬಹಳ ಗಟ್ಟಿಯಾದ ಚಿತ್ರಕತೆಯನ್ನು ಸಿನಿಮಾ ಹೊಂದಿದೆ. ನಿರ್ದೇಶಕ, ನಿರ್ಮಾಪಕರೂ ಆಗಿರುವ ಪವನ್ ಒಡೆಯರ್ ಅವರು ಈ ಸಿನಿಮಾವನ್ನು ತಮಿಳುನಾಡಿನಲ್ಲಿ ವಿತರಣೆ ಮಾಡಿದ್ದು, ತಮಿಳುನಾಡಿನಲ್ಲಿ ಸಿನಿಮಾ ಪಡೆದುಕೊಳ್ಳುತ್ತಿರುವ ಪ್ರತಿಕ್ರಿಯೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ದೇವಿಪ್ರಸಾದ್ ಶೆಟ್ಟಿ ಈ ಸಿನಿಮಾ ನಿರ್ದೇಶನ ಮಾಡಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಸಿಎಂ ಸಿದ್ದರಾಮಯ್ಯ ಸಿಕ್ಕಾಪಟ್ಟೆ ಸಾಲ ಮಾಡಿ ಕನ್ನಡಿಗರ ಪಾಲಿಗೆ ಸಾಲರಾಮಯ್ಯ ಆಗಿದ್ದಾರೆ: ಜೆಡಿಎಸ್ ವ್ಯಂಗ್ಯ – Kannada News | Karnataka Debt Crisis: Siddaramaiah’s 2025 26 Budget Faces Opposition Over Rs7.6 Lakh Crore Loan

ಬೆಂಗಳೂರು, ಮಾ.3: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಲಿರುವ 2025-26ರ ಆಯವ್ಯಯದ ಮೇಲೆ ವಿರೋಧ ಪಕ್ಷಗಳು ತೀವ್ರ ವಾಗ್ದಾಳಿ ನಡೆಸಿವೆ. ರಾಜ್ಯದ ಸಾಲದ ಪ್ರಮಾಣವು ಅಪಾಯಕಾರಿ ಮಟ್ಟವನ್ನು ತಲುಪುತ್ತಿದ್ದು, ಮುಂದಿನ ವರ್ಷದ ಅಂತ್ಯಕ್ಕೆ ಕರ್ನಾಟಕದ ಒಟ್ಟು ಸಾಲ 7,64,655 ಕೋಟಿ ರೂಪಾಯಿ ದಾಟಲಿದೆ ಎಂಬ ಅಂಕಿಅಂಶಗಳು ಆತಂಕ ಮೂಡಿಸಿವೆ. 2025-26ರ ಅಂತ್ಯಕ್ಕೆ ಈ ಸಾಲದ ಪರಿಣಾಮ ಜನರ ಮೇಲೆ ಬೀಳಲಿದೆ. ಪ್ರಸಕ್ತ ಆರ್ಥಿಕ ವರ್ಷವೊಂದರಲ್ಲೇ ಸರ್ಕಾರ ಸುಮಾರು 1.16 ಲಕ್ಷ ಕೋಟಿ ರೂ. ಸಾಲ ಪಡೆದಿದೆ ಎಂದು ಜೆಡಿಎಸ್​​​ ಎಕ್ಸ್​​​ನಲ್ಲಿ ಬರೆದುಕೊಂಡಿದೆ.

ವಾರ್ಷಿಕವಾಗಿ ಸುಮಾರು 50,000 ಕೋಟಿ ರೂ. ಹಣವನ್ನು ಕೇವಲ ಸಾಲದ ಬಡ್ಡಿ ಪಾವತಿಗಾಗಿಯೇ ಮೀಸಲಿಡಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ. ಇದು ಅಭಿವೃದ್ಧಿ ಕೆಲಸಗಳಿಗೆ ಹಣದ ಕೊರತೆ ಉಂಟುಮಾಡಬಹುದು. ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಿಗೆ ವಾರ್ಷಿಕ 50,000 ರಿಂದ 60,000 ಕೋಟಿ ರೂ. ಅಗತ್ಯವಿದ್ದು, ಇದನ್ನು ಸರಿದೂಗಿಸಲು ಸರ್ಕಾರ ಸಾಲದ ಮೊರೆ ಹೋಗುತ್ತಿದೆ ಎಂದು ಹೇಳಿದೆ.

JDS  ಹಂಚಿಕೊಂಡ ಪೋಸ್ಟ್​​ನಲ್ಲಿ ಏನಿದೆ ?

ಗ್ಯಾರಂಟಿಯಿಂದ ರಾಜ್ಯವನ್ನು ದಿವಾಳಿ ಎಬ್ಬಿಸಿರುವ ಸ್ವಯಂ ಘೋಷಿತ ಆರ್ಥಿಕ ತಜ್ಞ
@siddaramaiah, ಕರ್ನಾಟಕದ ಜನರ ತಲೆಯ ಮೇಲೆ ಮತ್ತೊಂದು ಸಾಲದ ಹೊರೆ ಹೊರಿಸುವ ಬಜೆಟ್‌ ಮಂಡಿಸಲು ರೆಡಿಯಾಗಿದ್ದಾರೆ. 2025-26 ರ ಅಂತ್ಯಕ್ಕೆ ಕರ್ನಾಟಕ ರಾಜ್ಯದ ಒಟ್ಟು ಸಾಲ 7,64,655 ಕೋಟಿ ರೂ. ದಾಟಲಿದೆ. ವಾರ್ಷಿಕ 50,000 ಕೋಟಿ ರೂ. ಗಳಷ್ಟು ಬಡ್ಡಿ ಪಾವತಿ ಒತ್ತಡ, ಆದಾಯ ಹಾಗೂ ಖರ್ಚಿನ ನಡುವಿನ ಅಂತರ @INCKarnataka ಸರ್ಕಾರಕ್ಕೆ ಸವಾಲಾಗಿ ಪರಿಣಮಿಸಿದೆ. ಪ್ರಸಕ್ತ ಆರ್ಥಿಕ ವರ್ಷದಲ್ಲಿ 1.16 ಲಕ್ಷ ಕೋಟಿ ರೂ. ಸಾಲ ಪಡೆದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಿಕ್ಕಾ ಪಟ್ಟೆ ಸಾಲ ಮಾಡಿ ಕನ್ನಡಿಗರ ಪಾಲಿಗೆ ಸಾಲರಾಮಯ್ಯ ಆಗಿದ್ದಾರೆ.

ಇದನ್ನೂ ಓದಿ: ಬಜೆಟ್ ಮಧ್ಯೆ ಡಿಕೆ ಶಿವಕುಮಾರ್ ಡಿನ್ನರ್ ಪಾಲಿಟಿಕ್ಸ್: ಸಂಚಲನ ಮೂಡಿಸಿದ ಡಿಸಿಎಂ ನಡೆ

ಜೆಡಿಎಸ್​​​​ ಪೋಸ್ಟ್​​;

ತೆರಿಗೆ ಸಂಗ್ರಹದ ಗುರಿ ತಲುಪಿದರೂ, ಬದ್ಧ ವೆಚ್ಚಗಳು (ಸಂಬಳ, ಪಿಂಚಣಿ, ಬಡ್ಡಿ) ಮತ್ತು ಗ್ಯಾರಂಟಿ ವೆಚ್ಚಗಳ ನಡುವಿನ ಸಮತೋಲನ ಕಾಪಾಡುವುದು ಸರ್ಕಾರಕ್ಕೆ ದೊಡ್ಡ ಸವಾಲಾಗಿದೆ. ಪ್ರಸಕ್ತ ಆರ್ಥಿಕ ವರ್ಷದಲ್ಲಿ 1.16 ಲಕ್ಷ ಕೋಟಿ ರೂ. ಎಂದು ಹೇಳಿದೆ. ಈ ಮೂಲಕ ಸಾಲ ಪಡೆದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಿಕ್ಕಾ ಪಟ್ಟೆ ಸಾಲ ಮಾಡಿ ಕನ್ನಡಿಗರ ಪಾಲಿಗೆ ಸಾಲರಾಮಯ್ಯ ಆಗಿದ್ದಾರೆ ಎಂದು ಟೀಕಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು “ರಾಜ್ಯದ ಸಾಲವು ಜಿಎಸ್‌ಡಿಪಿ (GSDP) ಮಿತಿಯೊಳಗೇ ಇದೆ. ಬಡವರ ಕೈಗೆ ಹಣ ನೀಡುವ ಮೂಲಕ ಮಾರುಕಟ್ಟೆಯಲ್ಲಿ ಚಲಾವಣೆ ಹೆಚ್ಚುತ್ತಿದ್ದೇವೆ” ಎಂದು ಈ ಹಿಂದೆಯೇ ಸರ್ಕಾರ ಸಮರ್ಥಿಸಿಕೊಂಡಿದೆ.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಇರಾನ್​ ಮೇಲೆ ಇಸ್ರೇಲ್-ಯುಎಸ್​ ದಾಳಿ; ಸಾವಿನ ಸಂಖ್ಯೆ 787ಕ್ಕೆ ಏರಿಕೆ – Kannada News | Death Toll rises to 787 in Iran US Israel strikes Irans nuke facility

ಟೆಹ್ರಾನ್, ಮಾರ್ಚ್ 3: ಫೆಬ್ರವರಿ 28ರಂದು ಇರಾನ್​ನ ಮೇಲೆ ದಾಳಿ ಆರಂಭಿಸಿದ್ದ ಇಸ್ರೇಲ್ (Israel War) ಹಾಗೂ ಅಮೆರಿಕ ಇರಾನ್​ನ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿಯನ್ನು ಹತ್ಯೆ ಮಾಡಿತ್ತು. ಇದಾದ ನಂತರ ಈ ಸಂಘರ್ಷ ಬೇರೆ ದೇಶಗಳಿಗೂ ಪಸರಿಸಿತು. ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯುನೆಲೆಗಳ ಮೇಲೆ ಇರಾನ್ ದಾಳಿ ನಡೆಸಲಾರಂಭಿಸಿದೆ. ಇದೀಗ ಇರಾನ್ ವಿರುದ್ಧ ಅಮೆರಿಕ-ಇಸ್ರೇಲ್ ದಾಳಿಯ ಸಾವಿನ ಸಂಖ್ಯೆ 787ಕ್ಕೆ ಏರಿದೆ. ಸೋಮವಾರ, ಸಾವಿನ ಸಂಖ್ಯೆ 555 ಇತ್ತು. ಇಂದು ಇರಾನ್​ನ ಪರಮಾಣು ಸೌಲಭ್ಯದ ಮೇಲಿನ ದಾಳಿಯ ಬಳಿಕ ಸಾವಿನ ಸಂಖ್ಯೆ ಏರಿಕೆಯಾಗಿದೆ.

ಇರಾನ್ ಪ್ರದೇಶದ ಮೇಲೆ ಅಮೆರಿಕ-ಇಸ್ರೇಲ್ ವೈಮಾನಿಕ ದಾಳಿಯ ನಂತರ ಸಂಘರ್ಷ ಪ್ರಾರಂಭವಾಯಿತು. ಈ ದಾಳಿಗಳು ಖಮೇನಿ ಮತ್ತು ಅವರ ಕುಟುಂಬದ ಇತರ ಸದಸ್ಯರು ಸೇರಿದಂತೆ ಉನ್ನತ ಮಿಲಿಟರಿ ಮತ್ತು ರಾಜಕೀಯ ನಾಯಕರ ಜೀವಗಳನ್ನು ಬಲಿ ಪಡೆದಿವೆ. ಇರಾನ್ ಗಲ್ಫ್‌ನಾದ್ಯಂತ ಅಮೆರಿಕದ ಮಿಲಿಟರಿ ತಾಣಗಳು ಮತ್ತು ಪ್ರಾದೇಶಿಕ ಮಿತ್ರರಾಷ್ಟ್ರಗಳ ಮೇಲೆ ಸರಣಿ ಕ್ಷಿಪಣಿ ಮತ್ತು ಡ್ರೋನ್ ದಾಳಿಗಳನ್ನು ನಡೆಸಿದೆ. ಬಹ್ರೇನ್, ಇರಾಕ್, ಕುವೈತ್ ಮತ್ತು ಯುಎಇಗಳಲ್ಲಿನ 6 ಯುಎಸ್ ಮಿಲಿಟರಿ ಸ್ಥಳಗಳನ್ನು ಹೊಡೆದುರುಳಿಸಲಾಗಿದೆ ಎಂದು ಸ್ಯಾಟಲೈಟ್ ಚಿತ್ರಗಳು ಸೂಚಿಸುತ್ತವೆ.

ಇದನ್ನೂ ಓದಿ: ಇರಾನ್ ಮೇಲೆ 4-5 ವಾರ ದಾಳಿ ಮುಂದುವರೆಯಲಿದೆ; ಟ್ರಂಪ್ ಘೋಷಣೆ

ಇರಾನ್‌ನ ದಾಳಿಗಳು ಇತರ ಗಲ್ಫ್ ರಾಷ್ಟ್ರಗಳಿಗೂ ವಿಸ್ತರಿಸಿದ್ದು, ಕ್ಷಿಪಣಿಗಳು ಮತ್ತು ಡ್ರೋನ್‌ಗಳು ಯುನೈಟೆಡ್ ಅರಬ್ ಎಮಿರೇಟ್ಸ್ ಮತ್ತು ಅದರಾಚೆಗಿನ ನಾಗರಿಕ ಮೂಲಸೌಕರ್ಯ, ವಿಮಾನ ನಿಲ್ದಾಣಗಳು ಮತ್ತು ವಾಣಿಜ್ಯ ಕೇಂದ್ರಗಳನ್ನು ಗುರಿಯಾಗಿಸಿಕೊಂಡಿವೆ. ಸ್ಪೋಟಕಗಳಿಂದ ಭಗ್ನಾವಶೇಷಗಳು ದುಬೈ ಮತ್ತು ಅಬುಧಾಬಿಯಲ್ಲಿ ಸಾವುನೋವುಗಳು ಮತ್ತು ಆಸ್ತಿ ಹಾನಿಯನ್ನುಂಟುಮಾಡಿವೆ. ಹಲವಾರು ಗಲ್ಫ್ ರಾಷ್ಟ್ರಗಳು ತಮ್ಮ ವಾಯುಪ್ರದೇಶವನ್ನು ತಾತ್ಕಾಲಿಕವಾಗಿ ಮುಚ್ಚಿವೆ.

ಇದನ್ನೂ ಓದಿ: ರಿಯಾದ್​​ನಲ್ಲಿರುವ ಅಮೆರಿಕ ರಾಯಭಾರಿ ಕಚೇರಿ ಮೇಲೆ ಇರಾನ್ ಡ್ರೋನ್ ದಾಳಿ

ಯುಎಸ್, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧವು ನಾಲ್ಕನೇ ದಿನಕ್ಕೆ ಕಾಲಿಟ್ಟಿದ್ದು, ಇರಾನ್‌ನ ಭೂಗತ ನಟಾಂಜ್ ಪರಮಾಣು ಸೌಲಭ್ಯದಲ್ಲಿ ಹಾನಿ ಸಂಭವಿಸಿರುವುದು ದೃಢಪಟ್ಟಿದೆ. ಇದರಿಂದ ಸಾವಿನ ಸಂಖ್ಯೆ ಹೆಚ್ಚುತ್ತಿದೆ. ನಟಾಂಜ್ ಸ್ಥಳದಲ್ಲಿನ ಪ್ರವೇಶ ಕಟ್ಟಡಗಳು ಹಾನಿಗೊಳಗಾಗಿವೆ. ಈ ಹಿಂದೆ, ಇರಾನಿನ ಯಾವುದೇ ಪರಮಾಣು ತಾಣಗಳ ಮೇಲೆ ದಾಳಿ ನಡೆದಿಲ್ಲ ಎಂದು ಹೇಳಲಾಗಿತ್ತು.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Published On – 5:12 pm, Tue, 3 March 26

Source link

IPL 2026: ಬೆಂಗಳೂರಿನಲ್ಲಿ ಆಡಲು ಒಪ್ಪಿದ ಆರ್​ಸಿಬಿ; ಚಿನ್ನಸ್ವಾಮಿಯಲ್ಲೇ ಉದ್ಘಾಟನಾ ಪಂದ್ಯ – Kannada News | RCB’s 2026 IPL Journey Starts in Bengaluru: Home Games and KKR Opening Clash!

2026 ರ ಐಪಿಎಲ್ ಸಮೀಪಿಸುತ್ತಿರುವ ಬೆನ್ನಲ್ಲೇ ಆರ್​ಸಿಬಿ ಅಭಿಮಾನಿಗಳಿಗೆ ಭರ್ಜರಿ ಸಿಹಿ ಸುದ್ದಿ ಸಿಕ್ಕಿದೆ. ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಬೆಂಗಳೂರಿನಲ್ಲಿ ತನ್ನ ತವರು ಪಂದ್ಯಗಳನ್ನು (5 ಪಂದ್ಯಗಳು) ಆಡಲು ಒಪ್ಪಿಗೆ ಸೂಚಿಸಿದೆ. ಇದರ ಜೊತೆಗೆ ಈ ಬಾರಿಯ ಐಪಿಎಲ್ ಉದ್ಘಾಟನಾ ಪಂದ್ಯವು ಕೂಡ ಬೆಂಗಳೂರಿನಲ್ಲೇ ನಡೆಯಲಿದೆ. ವಾಸ್ತವವಾಗಿ ಕಳೆದ ಆವೃತ್ತಿಯ ಚಾಂಪಿಯನ್ ಹಾಗೂ ರನ್ನರ್ ಅಪ್ ತಂಡಗಳ ನಡುವೆ ಉದ್ಘಾಟನಾ ಪಂದ್ಯ ನಡೆಯುವುದು ವಾಡಿಕೆ. ಅದರಂತೆ ಆರ್​ಸಿಬಿ ಹಾಗೂ ಪಂಜಾಬ್ ಕಿಂಗ್ಸ್ ಉದ್ಘಾಟನಾ ಪಂದ್ಯವನ್ನು ಆಡಬೇಕಿತ್ತು. ಆದರೆ ಈ ಬಾರಿ ಹಾಲಿ ಚಾಂಪಿಯನ್ ಆರ್​ಸಿಬಿ, ಕೆಕೆಆರ್ ತಂಡವನ್ನು ಉದ್ಘಾಟನಾ ಪಂದ್ಯದಲ್ಲಿ ಎದುರಿಸಲಿದೆ ಎಂದು ವರದಿಯಾಗಿದೆ.

Published On – 5:03 pm, Tue, 3 March 26

Source link

ಕಿವಿ ಕೇಳಿಸದಿರುವುದು ಕೇವಲ ವೃದ್ಧಾಪ್ಯದ ಸಮಸ್ಯೆಯಲ್ಲ; ಚಿಕ್ಕ ವಯಸ್ಸಿನಲ್ಲಿ ಹೀಗಾಗುವುದಕ್ಕೆ ಕಾರಣವೇನು? – Kannada News | Causes of Hearing Loss in Your 40s

ಸಾಮಾನ್ಯವಾಗಿ ಕಿವಿ (Ear) ಕೇಳಿಸದಿರುವುದು ಅಥವಾ ಕೇಳುವ ಸಾಮರ್ಥ್ಯ ಕಡಿಮೆಯಾಗುವುದು ವೃದ್ಧಾಪ್ಯದ ಸಮಯದಲ್ಲಿ ಎಂಬುದು ಹಲವರ ಭಾವನೆ. ಆದರೆ ಈಗ ಹಾಗಲ್ಲ ಚಿಕ್ಕ ವಯಸ್ಸಿನಲ್ಲಿಯೇ ಈ ರೀತಿಯ ಸಮಸ್ಯೆಗಳು ಕಂಡುಬರುತ್ತಿದೆ. ಇದಕ್ಕೆ ಕಾರಣಗಳು ಹಲವಾರಿದ್ದರೂ ಕೂಡ ಇಯರ್‌ಫೋನ್ ಅಥವಾ ಹೆಡ್‌ಫೋನ್‌ನಲ್ಲಿ ಹೆಚ್ಚು ವಾಲ್ಯೂಮ್ ಇಟ್ಟು ಸಂಗೀತ ಅಥವಾ ಇತರೆ ವಿಷಯಗಳನ್ನು ಕೇಳುವ ಅಭ್ಯಾಸ, ದಿನಪೂರ್ತಿ ಇಯರ್‌ಫೋನ್ ಬಳಸುವುದು. ಕೆಲಸಕ್ಕಾಗಿ ಬಳಕೆ ಮಾಡುತ್ತಿದ್ದರೂ ಕೂಡ ಹೆಚ್ಚಿನ ವಾಲ್ಯೂಮ್ ಇಟ್ಟು ಕೇಳಿಸಿಕೊಳ್ಳುವುದು ಹೀಗೆ ನಾನಾ ಅಭ್ಯಾಸಗಳಿಂದ ಸಣ್ಣ ವಯಸ್ಸಿನಲ್ಲಿಯೇ ಕಿವುಡುತನ ಹೆಚ್ಚಾಗುತ್ತಿದೆ. ಈ ವಿಷಯವಾಗಿ ಎಐಐಎಂಎಸ್‌ನ ಇಎನ್‌ಟಿ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ. ಪೂನಂ ಸಾಗರ್ ಅವರು ಕೆಲವು ರೀತಿಯ ಮಾಹಿತಿ ಹಂಚಿಕೊಂಡಿದ್ದು, ಚಿಕ್ಕ ವಯಸ್ಸಿನಲ್ಲಿ ಈ ರೀತಿಯ ಸಮಸ್ಯೆ ಹೆಚ್ಚುತ್ತಿರುವುದಕ್ಕೆ ಕಾರಣವೇನು, ನಮಗೆ ಸರಿಯಾಗಿ ಕೇಳಿಸುತ್ತಿಲ್ಲ ಎಂಬುದನ್ನು ತಿಳಿದುಕೊಳ್ಳುವುದು ಹೇಗೆ ಎಂಬುದರ ಬಗ್ಗೆ ಹೇಳಿದ್ದಾರೆ. ಈ ಕುರಿತು ಮತ್ತಷ್ಟು ಮಾಹಿತಿ ಸ್ಟೋರಿಯಲ್ಲಿದೆ.

ಹಲವು ಅಧ್ಯಯನಗಳ ಪ್ರಕಾರ, ಮೊಬೈಲ್ ಅಥವಾ ಇತರ ವೈಯಕ್ತಿಕ ಸಾಧನಗಳ ವಾಲ್ಯೂಮ್ ಅನ್ನು 60 ಶೇಕಡಕ್ಕಿಂತ ಹೆಚ್ಚು ಇಟ್ಟುಕೊಂಡರೆ ಕಿವುಡುತನದ ಅಪಾಯ ಹೆಚ್ಚುತ್ತದೆ. ಹಾಗಾಗಿ ಈ ರೀತಿಯ ಸಾಧನಗಳನ್ನು ಬಳಸುವಾಗ ಎಚ್ಚರಿಕೆ ಅಗತ್ಯವಿರುತ್ತದೆ. ಕಿವಿಯ ಕೇಳುವ ಸಾಮರ್ಥ್ಯಕ್ಕೆ ಹಾನಿಯಾಗದಂತೆ ನೋಡಿಕೊಳ್ಳಲು ಕಡಿಮೆ ವಾಲ್ಯೂಮ್ ನಲ್ಲಿ ಮಾತ್ರ ಕೇಳಬೇಕು. ಜೊತೆಗೆ ಸುಮಾರು 60 ನಿಮಿಷಗಳ ಕಾಲ ಕೇಳಿದ ನಂತರ ಕಡ್ಡಾಯವಾಗಿ ಒಂದು ಸಣ್ಣ ವಿರಾಮ ತೆಗೆದುಕೊಳ್ಳಬೇಕು. ಈ 60- 60 ನಿಯಮವನ್ನು ಪಾಲಿಸುವವರಿಗೆ ಕಿವಿ ಸಂಬಂಧಿತ ಸಮಸ್ಯೆಗಳ ಅಪಾಯ ಕಡಿಮೆ ಇರುತ್ತದೆ. ಶಬ್ದದ ಮಟ್ಟ ಹೆಚ್ಚಾದಷ್ಟೂ ಕೇಳುವ ಸಾಮರ್ಥ್ಯ ಕಡಿಮೆಯಾಗುವ ಅಪಾಯ ಹೆಚ್ಚುತ್ತದೆ. ಆದ್ದರಿಂದ 60 ನಿಮಿಷಗಳ ನಂತರ ಕನಿಷ್ಠ ಕೆಲವು ಸಮಯ ವಿರಾಮ ತೆಗೆದುಕೊಳ್ಳಬೇಕು. ನಿರಂತರವಾಗಿ ಹೆಡ್‌ಫೋನ್ ಅಥವಾ ಇಯರ್ ಫೋನ್ ಬಳಸುವುದರಿಂದ ಕಿವಿಗಳಿಗೆ ಹಾನಿಯಾಗುವ ಸಾಧ್ಯತೆ ಹೆಚ್ಚಾಗಿರುತ್ತದೆ.

ಕಡಿಮೆ ವಯಸ್ಸಿವರಲ್ಲಿ ಹೆಚ್ಚುತ್ತಿರುವ ಸಮಸ್ಯೆ:

ಸಾಮಾನ್ಯವಾಗಿ 50 ವರ್ಷಗಳ ನಂತರ ಕೆಲವರಿಗೆ ಕಿವುಡುತನ ಅಥವಾ ಕೇಳಿಸಿಕೊಳ್ಳುವ ಸಾಮರ್ಥ್ಯದಲ್ಲಿ ಕುಸಿತ ಕಾಣಿಸಿಕೊಳ್ಳುತ್ತದೆ. ಆದರೆ ಇತ್ತೀಚಿನ ದಿನಗಳಲ್ಲಿ 40 ವರ್ಷ ದಾಟುತ್ತಿದ್ದಂತೆಯೇ ಹಿಯರಿಂಗ್ ಪವರ್ ಕಡಿಮೆಯಾಗುತ್ತಿರುವುದು ಗಮನಕ್ಕೆ ಬರುತ್ತಿದೆ. ಇದರ ಪ್ರಮುಖ ಕಾರಣಗಳಲ್ಲಿ ವೈಯಕ್ತಿಕ ಆಡಿಯೋ ಸಾಧನಗಳ ಹೆಚ್ಚಿನ ಶಬ್ದ ಬಳಕೆ ಎಂದು ತಜ್ಞರು ಹೇಳಿದ್ದಾರೆ.

ಇದನ್ನೂ ಓದಿ: ಕಿವಿಯ ಸೋಂಕು ಹೆಚ್ಚಾಗುವುದಕ್ಕೆ ಈ ಅಂಶಗಳೇ ಕಾರಣ! ಇದನ್ನು ತಡೆಯಲು ಚಳಿಗಾಲದಲ್ಲಿ ಈ ಸಲಹೆಗಳನ್ನು ಪಾಲಿಸಿ

ಕೇಳಿಸಿಕೊಳ್ಳುವ ಸಾಮರ್ಥ್ಯ ಕಡಿಮೆಯಾಗುತ್ತಿರುವುದರ ಲಕ್ಷಣಗಳು:

  • ಸಾಮಾನ್ಯ ಸಂಭಾಷಣೆ ಸರಿಯಾಗಿ ಅರ್ಥವಾಗದಿರುವುದು.
  • ಜನಸಂದಣಿ ಅಥವಾ ಗದ್ದಲದ ಸ್ಥಳಗಳಲ್ಲಿ ಮಾತು ಅರ್ಥಮಾಡಿಕೊಳ್ಳಲು ಕಷ್ಟವಾಗುವುದು.
  • ಫೋನ್‌ನಲ್ಲಿ ಮಾತನಾಡುವಾಗ ಶಬ್ದ ಸ್ಪಷ್ಟವಾಗಿ ಕೇಳಿಸದಿರುವುದು ಅಥವಾ ಪದಗಳನ್ನು ಅರ್ಥಮಾಡಿಕೊಳ್ಳಲು ಕಷ್ಟವಾಗುವುದು.
  • ಕಿವಿಯಲ್ಲಿ ಗಂಟೆ ಅಥವಾ ಸೀಟಿ ಶಬ್ದ ಕೇಳಿಸುವುದು.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಪ್ರಧಾನಿ ಮುಂದೆ ಕಠಿಣ ಸವಾಲುಗಳು: ಮೋದಿ ಬಗ್ಗೆ ಬೆಳಗಾವಿ ಪಂಡಿತರ ಸ್ಫೋಟಕ ಭವಿಷ್ಯ – Kannada News | Lunar Eclipse 2026: Big Challenges Infront of PM, Belagavi Pandit vijahendra Sharma Prediction about Narendra Modi

ಬೆಳಗಾವಿ, ಮಾರ್ಚ್ 03): 2026ರ ಮೊದಲ ಕೇತುಗ್ರಸ್ಥ ಚಂದ್ರಗ್ರಹಣ (Lunar Eclipse 2026) ಹಿನ್ನಲೆಯಲ್ಲಿ ಕರ್ನಾಟಕದಾದ್ಯಂತ ಹಲವು ಪ್ರಮುಖ ದೇವಾಲಯಗಳು ಇಂದು (ಮಾರ್ಚ್ 03) ಮಧ್ಯಾಹ್ನದ ಪೂಜೆಯ ಬಳಿಕ ಬಂದ್ ಆಗಿದ್ದು, ಸಂಜೆ 6:48ಕ್ಕೆ ಗ್ರಹಣ ಮೋಕ್ಷವಾದ ನಂತರ ಶುದ್ಧೀಕರಣ ಪೂಜೆಗಳೊಂದಿಗೆ ಮತ್ತೆ ದೇಗುಲ ಬಾಗಿಲು ತೆರೆಯಲಾಗುತ್ತದೆ. ಇನ್ನು ಈ ಗ್ರಹಣದ ಬಗ್ಗೆ ಅಯೋಧ್ಯ ರಾಮಲಲ್ಲಾ ಮೂರ್ತಿ ಪ್ರತಿಷ್ಠಾಪನೆ ಮುಹೂರ್ತ ನೀಡಿದ್ದ ಪಂಡಿತ ವಿಜಯೇಂದ್ರ ಶರ್ಮಾ ಪ್ರತಿಕ್ರಿಯಿಸಿದ್ದು,ಭಾರತದಲ್ಲಿ ಸಂಜೆ 6.26ರಿಂದ 6.50ರ ವರೆಗೆ ಚಂದ್ರ ಗ್ರಹಣ ಗೋಚರವಾಗಲಿದೆ. ಈ ವೇಳೆ ಸ್ನಾನ, ಜಪ, ಕೂಲದೇವರ ನಾಮಸ್ಮರಣೆ ಮಾಡಬೇಕು ಎಂದಿದ್ದಾರೆ.

ಇನ್ನು ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ಹಾಗೂ ದೇಶದ ಬಗ್ಗೆ ಮಾತನಾಡಿದ್ದು, ಚಂದ್ರ ಗ್ರಹಣದಿಂದ ಸ್ವಲ್ಪ ಮಟ್ಟಿಗೆ ಕೆಡಕಾಗುತ್ತೆ. ದೇವರ ಜಪ ಪೂಜೆಗಳಿಂದ ಎಲ್ಲವೂ ಸರಿ ಆಗುತ್ತೆ. ಯುದ್ದದ ಕಾರ್ಮೋಡ ಕಳೆದು ಹೋಗಲಿದೆ. ಭಾರತದ ಜೊತೆಗೆ ಯಾವ ಯುದ್ದಗಳು ಆಗುವುದಿಲ್ಲ. ಪ್ರಧಾನಿ ನರೇಂದ್ರ‌ ಮೋದಿಯವರಿಗೂ ಕಷ್ಟ ಇದೆ. ಜೂನ್ ವರೆಗೂ ಮೋದಿ ಅವರಿಗೂ ಕಷ್ಟ ಇದೆ ಎಂದು ಸ್ಫೋಟಕ ಭವಿಷ್ಯ ನುಡಿದಿದ್ದಾರೆ.

ಕರ್ನಾಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ICC ODI Rankings: ಏಕದಿನ ಕ್ರಿಕೆಟ್​ನಲ್ಲಿ ಮತ್ತೆ ಅಗ್ರಸ್ಥಾನಕ್ಕೇರಿದ ಸ್ಮೃತಿ ಮಂಧಾನ – Kannada News | Smriti Mandhana Reclaims ICC Women’s ODI No.1 Ranking; Harmanpreet Climbs to 9th

ಭಾರತದ ಪರ ಇದುವರೆಗೆ 120 ಏಕದಿನ ಪಂದ್ಯಗಳನ್ನಾಡಿರುವ ಮಂಧಾನ, 47.88 ಸರಾಸರಿಯೊಂದಿಗೆ 5,411 ರನ್ ಗಳಿಸಿದ್ದಾರೆ. ಇದರಲ್ಲಿ 14 ಶತಕಗಳು ಮತ್ತು 35 ಅರ್ಧಶತಕಗಳು ಸೇರಿವೆ. ಹಾಗೆಯೇ ಅಂತರರಾಷ್ಟ್ರೀಯ ಟಿ20 ಕ್ರಿಕೆಟ್​ನಲ್ಲಿ 160 ಪಂದ್ಯಗಳನ್ನಾಡಿರುವ ಮಂಧಾನ 30.43 ಸರಾಸರಿಯಲ್ಲಿ 4,231 ರನ್ ಗಳಿಸಿದ್ದಾರೆ, ಒಂದು ಶತಕದೊಂದಿಗೆ. ಮಂಧಾನ ಪ್ರಸ್ತುತ ವಿಶ್ವದ ನಂ. 2 ಟಿ20 ಬ್ಯಾಟರ್ ಕೂಡ ಆಗಿದ್ದಾರೆ.

Source link

ಹೀನಾಯವಾಗಿ ಕುಸಿದ ‘ದಿ ಕೇರಳ ಸ್ಟೋರಿ 2’ ಬಾಕ್ಸ್ ಆಫೀಸ್ ಕಲೆಕ್ಷನ್ – Kannada News | The Kerala Story 2 movie Box Office collection declines after day 4

ವಿವಾದದ ಮೂಲಕವೇ ಭಾರಿ ಸುದ್ದಿ ಆಗಿದ್ದ ‘ದಿ ಕೇರಳ ಸ್ಟೋರಿ 2’ ಸಿನಿಮಾಗೆ ನಿರೀಕ್ಷಿತ ಪ್ರಮಾಣದ ಕಲೆಕ್ಷನ್ ಆಗಿಲ್ಲ. ಫೆಬ್ರವರಿ 27ರಂದು ರಿಲೀಸ್ ಆದ ಈ ಚಿತ್ರಕ್ಕೆ ಹೇಳಿಕೊಳ್ಳುವಂತಹ ಉತ್ತಮ ಪ್ರತಿಕ್ರಿಯೆ ಸಿಕ್ಕಿಲ್ಲ. ಆದ್ದರಿಂದ ಬಾಕ್ಸ್ ಆಫೀಸ್ ಕಲೆಕ್ಷನ್ (Box Office Collection) ಮೇಲೆ ಪೆಟ್ಟು ಬಿದ್ದಿದೆ. ಎರಡು ಮತ್ತು ಮೂರನೇ ದಿನ ಸ್ವಲ್ಪ ಚೇತರಿಕೆ ಕಂಡಿದ್ದ ಬಾಕ್ಸ್ ಆಫೀಸ್ ನಂಬರ್ ನಂತರದ ದಿನಗಳಲ್ಲಿ ಕುಸಿಯಲು ಆರಂಭ ಆಗಿದೆ. ‘ದಿ ಕೇರಳ ಸ್ಟೋರಿ 2’ (The Kerala Story 2) ಸಿನಿಮಾಗೆ ಹಾಕಿದ ಬಜೆಟ್ ಆದ್ರೂ ವಾಪಸ್ ಬರುತ್ತಾ ಅಥವಾ ಇಲ್ಲವಾ ಎಂಬ ಅನುಮಾನ ಮೂಡುವಂತಾಗಿದೆ.

ಕಾನೂನಿನ ತೊಡಕು ಉಂಟಾಗಿದ್ದರಿಂದ ಫೆಬ್ರವರಿ 27ರಂದು ಕೆಲವೇ ಕೆಲವು ಕಡೆಗಳಲ್ಲಿ ಮಾತ್ರ ‘ದಿ ಕೇರಳ ಸ್ಟೋರಿ 2’ ಸಿನಿಮಾ ರಿಲೀಸ್ ಆಯಿತು. ಅಂದು ಕೇವಲ 75 ಲಕ್ಷ ರೂಪಾಯಿ ಕಲೆಕ್ಷನ್ ಆಗಿತ್ತು. 2ನೇ ದಿನವಾದ ಫೆ.28ರಂದು ಈ ಚಿತ್ರಕ್ಕೆ 4.65 ಕೋಟಿ ರೂಪಾಯಿ ಕಮಾಯಿ ಆಯಿತು. 3ನೇ ದಿನ (ಮಾರ್ಚ್ 1) 4.75 ಕೋಟಿ ರೂಪಾಯಿ ಕಲೆಕ್ಷನ್ ಮಾಡಿತು.

ಆದರೆ 4ನೇ ದಿನವಾದ ಮಾರ್ಚ್ 2ರಂದು ‘ದಿ ಕೇರಳ ಸ್ಟೋರಿ 2’ ಸಿನಿಮಾದ ಕಲೆಕ್ಷನ್ 2.75 ಕೋಟಿ ರೂಪಾಯಿಗೆ ಕುಸಿದಿದೆ. 5ನೇ ದಿನ (ಮಾರ್ಚ್ 3) ಇನ್ನಷ್ಟು ಕುಸಿಯುವ ಸೂಚನೆ ಸಿಕ್ಕಿದೆ. ದೇಶಾದ್ಯಂತ ಈ ಸಿನಿಮಾ ಬಿಡುಗಡೆ ಆಗಿದೆ. ಆದರೆ ಮುಂಬೈ ಹೊರತುಪಡಿಸಿ ಬೇರೆ ಯಾವುದೇ ನಗರಗಳಲ್ಲಿ ಈ ಸಿನಿಮಾಗೆ ಜನರಿಂದ ಉತ್ತಮ ಪ್ರತಿಕ್ರಿಯೆ ಸಿಗುತ್ತಿಲ್ಲ.

ಕೇರಳದಲ್ಲಿ ಪ್ರೇಕ್ಷಕರು ಈ ಸಿನಿಮಾವನ್ನು ಬಹುತೇಕ ತಿರಸ್ಕರಿಸಿದ್ದಾರೆ. ವರದಿಗಳ ಪ್ರಕಾರ, ಈ ಸಿನಿಮಾಗೆ ಹಾಕಿರುವ ಒಟ್ಟು ಬಂಡವಾಳ 30 ಕೋಟಿ ರೂಪಾಯಿ. ಆದರೆ ಈವರೆಗೂ ಕಲೆಕ್ಷನ್ ಆಗಿರುವುದು ಅಂದಾಜು 14 ಕೋಟಿ ರೂಪಾಯಿ ಮಾತ್ರ. ಮುಂದಿನ ದಿನಗಳಲ್ಲಿ ಕಲೆಕ್ಷನ್ ಇನ್ನಷ್ಟು ಕುಸಿದರೆ ಹಾಕಿದ ಬಂಡವಾಳ ಕೂಡ ವಾಪಸ್ ಬರುವುದು ಕಷ್ಟವಾಗುತ್ತದೆ.

ಇದನ್ನೂ ಓದಿ: ‘ದಿ ಕೇರಳ ಸ್ಟೋರಿ 2’ ಸಿನಿಮಾ ಬಗ್ಗೆ ಜನರಿಗೆ ಎಚ್ಚರಿಕೆ ನೀಡಿದ ಸಿಎಂ ಪಿಣರಾಯಿ ವಿಜಯನ್

ಕಾಮ್ಯಾಕ್ಯ ನಾರಾಯಣ್ ಸಿಂಗ್ ಅವರು ನಿರ್ದೇಶನ ಮಾಡಿದ ಈ ಸಿನಿಮಾವನ್ನು ವಿಪುಲ್ ಅಮೃತ್​ಲಾಲ್ ಶಾ ಅವರು ನಿರ್ಮಿಸಿದ್ದಾರೆ. ಈ ಚಿತ್ರದಲ್ಲಿ ಉಲ್ಕಾ ಗುಪ್ತಾ, ಐಶ್ವರ್ಯಾ ಊಜಾ, ಅದಿತಿ ಭಾಟಿಯಾ, ಅರ್ಜುನ್ ಸಿಂಗ್ ಮುಂತಾದವರು ನಟಿಸಿದ್ದಾರೆ. ಲವ್ ಜಿಹಾದ್ ಕುರಿತ ಕಥೆಯನ್ನು ‘ದಿ ಕೇರಳ ಸ್ಟೋರಿ 2’ ಸಿನಿಮಾದಲ್ಲಿ ತೋರಿಸಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Video: ಬಂಡೆಮಹಾಕಾಳಿ ದೇವಾಲಯಕ್ಕೆ ತಟ್ಟದ ಚಂದ್ರಗ್ರಹಣ; ಕಾಳಿಯ ದರ್ಶನಕ್ಕೆ ಜನವೋ ಜನ! – Kannada News | Bande Mahakali Temple Defies Lunar Eclipse: Bengaluru Devotees Get Darshan As Usual

ಬೆಂಗಳೂರು: ಸಾಮಾನ್ಯವಾಗಿ ಗ್ರಹಣದ ಸಮಯದಲ್ಲಿ ದೇವಾಲಯಗಳನ್ನು ಮುಚ್ಚುವ ಸಂಪ್ರದಾಯವಿದ್ದರೂ, ಬಂಡೆಮಹಾಕಾಳಿ ದೇವಾಲಯದಲ್ಲಿ ಭಕ್ತರಿಗೆ ದರ್ಶನಕ್ಕೆ ಇಂದೂ ಕೂಡ ಅವಕಾಶ ನೀಡಲಾಗಿದೆ. ಗ್ರಹಣದ ವೇಳೆ, ಭಕ್ತರ ಅನುಕೂಲಕ್ಕಾಗಿ ದೇವಾಲಯದ ಆಡಳಿತವು ವಿಶೇಷ ವ್ಯವಸ್ಥೆಗಳನ್ನು ಮಾಡಿದೆ. ಮಧ್ಯಾಹ್ನ 3ರಿಂದ ಸಂಜೆ 6ರವರೆಗೆ ಚಂದ್ರಶಾಂತಿ ಮತ್ತು ಕೇತು ಶಾಂತಿ ಹೋಮಗಳನ್ನು ನೆರವೇರಿಸಲಾಗುತ್ತಿದೆ. ಈ ಹೋಮಗಳ ನಂತರ, ಚಂದ್ರ ಮತ್ತು ಕೇತು ಶಾಂತಿ ಕಳಸದ ತೀರ್ಥ ಅಭಿಷೇಕವನ್ನು ಸಹ ನಡೆಯಲಿವೆ. ದೇವಾಲಯವು ರಾತ್ರಿ 9 ಗಂಟೆಯವರೆಗೂ ಭಕ್ತರಿಗೆ ದರ್ಶನಕ್ಕೆ ಮುಕ್ತವಾಗಿದೆ.

ಇದನ್ನೂ ಓದಿ: ಮಾ.03 ವರ್ಷದ ಮೊದಲ ಚಂದ್ರಗ್ರಹಣ; ಇದು ಭಾರತದಲ್ಲಿ ಗೋಚರಿಸುತ್ತಾ?

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಫೋಕ್ಸೋ ಕೇಸ್​​ನಲ್ಲಿ ಇಂದು 2 ಬೆಳವಣಿಗೆ: ಕುತೂಹಲ ಮೂಡಿಸಿದ ಮಲ್ಲಿಕಾರ್ಜುನ ಮುತ್ಯಾ ನಡೆ – Kannada News | Mallikarjun mutya lawyer Takes Back pocso case Quash Application From Kalaburagi hogh Court

ಕಲಬುರಗಿ/ಯಾದಗಿರಿ, (ಮಾರ್ಚ್ 03): ತಮ್ಮ ವಿರುದ್ಧ ದಾಖಲಾಗಿರುವ ಫೋಕ್ಸೋ ಪ್ರಕರಣ (pocso case) ರದ್ದು ಕೋರಿ ಯಾದಗಿರಿಯ ಮಹಲ್ ರೋಜಾ ಮಲ್ಲಿಕಾರ್ಜುನ ಮುತ್ಯಾ (Mallikarjun mutya) ಸಲ್ಲಿಸಿದ್ದ ಅರ್ಜಿಯನ್ನು ವಾಪಸ್ ಪಡೆದುಕೊಂಡಿದ್ದಾರೆ. ಬಾಲಕಿ ಜತೆ ಅನುಚಿತವಾಗಿ ವರ್ತಿಸಿದ ವಿಡಿಯೋ ವೈರಲ್ ಬೆನ್ನಲ್ಲೇ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಫೋಕ್ಸೋ ಪ್ರಕರಣ ದಾಖಲಾಗಿದ್ದು, ಬಳಿಕ ಅಜ್ಞಾತ ಸ್ಥಳದಿಂದಲೇ ತಮ್ಮ ವಕೀಲರ ಮೂಲಕ ಪ್ರಕರಣ ರದ್ದುಕೋರಿ ಕಲಬುರಗಿ ಹೈಕೋರ್ಟ್​ ಅರ್ಜಿ ಸಲ್ಲಿಸಿದ್ದರು. ಆದ್ರೆ, ಇದೀಗ ಇಂದು (ಮಾರ್ಚ್ 03) ಏಕಾಏಕಿ ಹೈಕೋರ್ಟ್ ನಲ್ಲಿ ಸಲ್ಲಿಸಿದ್ದ ಅರ್ಜಿಯನ್ನು ಹಿಂಪಡೆದುಕೊಂಡಿದ್ದಾರೆ. ಇದರಿಂದ ಮುತ್ಯಾ ನಡೆ ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಇನ್ನೊಂದೆಡೆ ಮಲ್ಲಿಕಾರ್ಜುನ ಮುತ್ಯಾ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆಯನ್ನು ಯಾದಗಿರಿ ಜಿಲ್ಲಾ ಮತ್ತು ಪ್ರಧಾನ ಸತ್ರಾ ನ್ಯಾಯಾಲಯ ಮಾರ್ಚ್ 6ಕ್ಕೆ ಮುಂದೂಡಿದೆ.

ಹೈಕೋರ್ಟ್​​ನಿಂದ ಅರ್ಜಿ ವಾಪಸ್

ಬಾಲಕಿ ಜತೆ ಅನುಚಿತವಾಗಿ ವರ್ತಿಸಿದ ವಿಡಿಯೋ ವೈರಲ್ ಆಗಿದ್ದು, ಇದರ ಬೆನ್ನಲ್ಲೇ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಯಾದಗಿರಿ ಜಿಲ್ಲಾಧಿಕಾರಿಗೆ ಸೂಚನೆ ನೀಡಿದ್ದರು. ಇದರ ಬೆನ್ನಲ್ಲೇ ಮಲ್ಲಿಕಾರ್ಜು ಮುತ್ಯಾ ವಿರುದ್ಧ ಪೊಲೀಸರು ಫೋಕ್ಸೋ ಪ್ರಕರಣ ದಾಖಲಿಸಿದ್ದರು. ಕೇಸ್ ದಾಖಲಾಗುತ್ತಿದ್ದಂತೆಯೇ ಮುತ್ಯಾ ನಾಪತ್ತೆಯಾಗಿದ್ದು, ಅಜ್ಞಾತ ಸ್ಥಳದಿಂದಲೇ ತಮ್ಮ ವಿರುದ್ಧದ ಫೋಕ್ಸೋ ಪ್ರಕರಣ ರದ್ದುಕೋರಿ ಕಲಬುರಗಿ ಹೈಕೋರ್ಟ್​​ಗೆ ಅರ್ಜಿ ಸಲ್ಲಿಸಿದ್ದರು. ಆದ್ರೆ, ಇಂದು ಏಕಾಏಕಿ ಮುತ್ಯಾ ಪರ ವಕೀಲರು ಅರ್ಜಿಯನ್ನು ವಾಪಸ್ ಪಡೆದುಕೊಂಡಿದ್ದಾರೆ.

ಇದನ್ನೂ ಓದಿ: ಪೋಕ್ಸೋ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ: ಬಾಲಕಿ ಹೇಳಿಕೆ ಮೇಲೆ ಮಲ್ಲಿಕಾರ್ಜುನ ಮುತ್ಯಾನ ಭವಿಷ್ಯ ನಿರ್ಧಾರ

ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

ಇನ್ನೊಂದೆಡೆ ಪೋಕ್ಸೋ ಪ್ರಕರಣ ಸಂಬಂಧ ಮಲ್ಲಿಕಾರ್ಜುನ ಮುತ್ಯಾ, ನಿರೀಕ್ಷಣಾ ಜಾಮೀನು ಕೋರಿ ಯಾದಗಿರಿ ಜಿಲ್ಲಾ ಕೋರ್ಟ್ ಅರ್ಜಿ ಸಲ್ಲಿಸಿದ್ದಾರೆ. ಇನ್ನೊಂದೆಡೆ ಇದಕ್ಕೆ ಸರಕಾರದ ಪರ ವಕೀಲರು ಸಹ ಆಕ್ಷೇಪಣೆ ಸಲ್ಲಿಸಿದ್ದಾರೆ. ಹೀಗಾಗಿ. ಜಾಮೀನು ಅರ್ಜಿ ವಿಚಾರಣೆಯನ್ನು ಯಾದಗಿರಿ ಜಿಲ್ಲಾ ಮತ್ತು ಪ್ರಧಾನ ಸತ್ರಾ ನ್ಯಾಯಾಲಯ ಮಾರ್ಚ್ 6ಕ್ಕೆ ಮುಂದೂಡಿದೆ.  ಇದರಿಂದ ಮುತ್ಯಾ ಭವಿಷ್ಯ ಮಾರ್ಚ್ 6ರಂದು ನಿರ್ಧಾರವಾಗಲಿದೆ.

ಬಾಲಕಿ ಹೇಳಿಕೆ ದಾಖಲು

ಮಲ್ಲಿಕಾರ್ಜುನ ಮುತ್ಯಾ ವಿರುದ್ಧದ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ಬಾಲಕಿ ನೀಡಿದ ಹೇಳಿಕೆ‌ಯನ್ನು ಶಹಾಪುರ ಜೆಎಂಸಿ ಕೋರ್ಟ್​ ಜಡ್ಜ್ ದಾಖಲಿಸಿಕೊಂಡಿದ್ದಾರೆ. ಬಳಿಕ ಬಾಲಕಿ ಹೇಳಿಕೆಯ ದಾಖಲು ಪ್ರತಿಯನ್ನು ಮುಚ್ಚಿದ ಲಕೋಟೆಯಲ್ಲಿ ತನಿಖಾಧಿಕಾರಿಗೆ ಸಲ್ಲಿಸಲಾಗುತ್ತದೆ.  ಹೀಗಾಗಿ ಬಾಲಕಿ ನೀಡಿರುವ ಹೇಳಿಕೆ ಮೇಲೆ ಮಲ್ಲಿಕಾರ್ಜುನ ಮುತ್ಯಾನ ಭವಿಷ್ಯ ನಿರ್ಧರ ಆಗಲಿದೆ.

ಮುತ್ಯಾ ವಿರುದ್ಧ ಕೇಸ್ ರದ್ದು ಮಾಡುವಂತೆ ಭಕ್ತರ ಪ್ರತಭಟನೆ

ಇನ್ನೊಂದರಡೆ ಯಾದಗಿರಿ ಹಾಗೂ ಕಲಬುರಗಿ ಜಿಲ್ಲೆಯಲ್ಲಿ ಮಲ್ಲಿಕಾರ್ಜುನ ಮುತ್ಯಾ ಪರ ವಿವಿಧ ಸಮುದಾಯದ ಜನರು ಸಹ ಬೀದಿಗಿಳಿದು ಹೋರಾಟ ನಡೆಸಿದ್ದು, ಮುತ್ಯಾ ವಿರುದ್ಧ ದಾಖಲಾಗಿರುವ ಫೋಕ್ಸೋ ಪ್ರಕರಣ ರದ್ದುಗೊಳಿಸಬೇಕೆಂದು ಆಗ್ರಹಿಸಿದ್ದಾರೆ. ಇನ್ನು ಪ್ರಕರಣ ದಾಖಲಾಗಿರುವ ಬಗ್ಗೆ ಕಾಂಗ್ರೆಸ್ ಹಾಗೂ ಬಿಜೆಪಿಯ ಪ್ರಮುಖ ನಾಯಕರು ಸಹ ಅಸಮಾಧಾನ ಹೊರಹಾಕಿದ್ದಾರೆ.

ಕರ್ನಾಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On – 4:29 pm, Tue, 3 March 26

Source link