ವಿಜಯ್ ಸಿಎಂ ಆಗಿದ್ದಕ್ಕೆ ಏನ್ ಹೇಳ್ತೀರಿ? ಕೈ ಮುಗಿದು ಮುಂದಕ್ಕೆ ಹೋದ ರಜನಿಕಾಂತ್ – Kannada News | Rajinikanth refuses to comment on Vijay becoming Tamil Nadu CM at Chennai airport
ತಮಿಳು ಚಿತ್ರರಂಗದ ಖ್ಯಾತ ನಟ ದಳಪತಿ ವಿಜಯ್ (Thalapathy Vijay) ಅವರು ತಮ್ಮ ರಾಜಕೀಯ ಜೀವನದ ಮೊದಲ ಪ್ರಯತ್ನದಲ್ಲೇ ತಮಿಳುನಾಡಿನ ಮುಖ್ಯಮಂತ್ರಿಯಾಗಿ ಇತಿಹಾಸ ಸೃಷ್ಟಿಸಿದ್ದಾರೆ. ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಭರ್ಜರಿ ಜಯ ದಾಖಲಿಸಿ ಅವರು ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದರು. ಈ ರೀತಿ ಸಾಧನೆ ಮಾಡಿದ ವಿಜಯ್ ಕುರಿತು ಕೇಳಲಾದ ಪ್ರಶ್ನೆಗೆ ಸೂಪರ್ಸ್ಟಾರ್ ರಜನಿಕಾಂತ್ ಅವರು ಯಾವುದೇ ಉತ್ತರ ನೀಡಿಲ್ಲ. ಬದಲಿಗೆ, ಅವರು ಮೌನಕ್ಕೆ ಶರಣಾಗಿದ್ದಾರೆ. ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ಅವರು ತಮಿಳುನಾಡಿನ…