ತಾಹಿರ್ ಅನ್ವರ್ ಯಾರು? ಪಾಕಿಸ್ತಾನದಲ್ಲಿ ಮಸೂದ್ ಅಜರ್ ಸಹೋದರ ಅನುಮಾನಾಸ್ಪದವಾಗಿ ಸಾವು
ಇಸ್ಲಾಮಾಬಾದ್, ಮಾರ್ಚ್ 31: ಪಾಕಿಸ್ತಾನ(Pakistan) ಮೂಲದ ಭಯೋತ್ಪಾದಕ ಸಂಘಟನೆ ಜೈಶ್-ಎ-ಮೊಹಮ್ಮದ್ ನಾಯಕ ಮಸೂದ್ ಅಜರ್ನ ಸಹೋದರ ಮೊಹಮ್ಮದ್ ತಾಹಿರ್ ಅನ್ವರ್ ಮೃತಪಟ್ಟಿದ್ದಾನೆ. ಬಹಾವಲ್ಪುರದಲ್ಲಿ ಆತನ ಅಂತ್ಯಕ್ರಿಯೆ ನಡೆದಿದೆ ಎಂದು ವರದಿಯಾಗಿದೆ. ಅವನ ಸಾವು ಹೇಗೆ ಸಂಭವಿಸಿದೆ ಎಂಬುದರ ಬಗ್ಗೆ ಸಂಘಟನೆ ಬಹಿರಂಗಗೊಳಿಸಿಲ್ಲ. ತಾಹಿರ್ ಅನ್ವರ್ ತನ್ನ ಸಹೋದರನ ಭಯೋತ್ಪಾದಕ ಸಂಘಟನೆಯಾದ ಜೈಶ್-ಎ-ಮೊಹಮ್ಮದ್‌ನೊಂದಿಗೆ ಸಹ ಸಂಬಂಧ ಹೊಂದಿದ್ದ ಎನ್ನಲಾಗಿದೆ. ಸೋಮವಾರ ತಡರಾತ್ರಿ ಬಹಾವಲ್ಪುರದ ಜಾಮಿಯಾ ಮಸೀದಿ ಉಸ್ಮಾನ್ ವಾಲಿ ಬಳಿ ತಾರಿಕ್ನನ್ನು ಸಮಾಧಿ ಮಾಡಲಾಗಿದೆ ಎಂದು ಸಂಘಟನೆಯ ಅಧಿಕೃತ…