ಟೀಮ್ ಇಂಡಿಯಾ ದಾಂಡಿಗರ ಆರ್ಭಟ… 11 ದಾಖಲೆಗಳು ನಿರ್ಮಾಣ – Kannada News | India vs Afghanistan 2nd ODI All Records list
ಲಕ್ನೋನ ಏಕನಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಎರಡನೇ ಏಕದಿನ ಪಂದ್ಯದಲ್ಲಿ ಪ್ರವಾಸಿ ಆಫ್ಘಾನಿಸ್ತಾನ್ ತಂಡವನ್ನು ಟೀಮ್ ಇಂಡಿಯಾ 170 ರನ್‌ಗಳ ಬೃಹತ್ ಅಂತರದಿಂದ ಸೋಲಿಸಿದೆ. ಈ ಗೆಲುವಿನೊಂದಿಗೆ ಭಾರತ ತಂಡವು 3 ಪಂದ್ಯಗಳ ಸರಣಿಯನ್ನು 2-0 ಅಂತರದಿಂದ ಗೆದ್ದುಕೊಂಡಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಅಫ್ಘಾನಿಸ್ತಾನ್ ತಂಡ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 49.5 ಓವರ್ಗಳಲ್ಲಿ 402 ರನ್ ಕಲೆಹಾಕಿತು. ಈ ಗುರಿ ಬೆನ್ನತ್ತಿದ ಅಫ್ಘಾನಿಸ್ತಾನ್ ತಂಡವು 232 ರನ್ಗಳಿಗೆ ಆಲೌಟ್…