ಕಾನೂನು ಉಲಂಘಿಸಿ ರಸ್ತೆಯಲ್ಲಿ ಸಂಚಾರ ಮಾಡ್ತಿದ್ದ ಶಾಲಾ ವಾಹನಗಳು RTO ವಶಕ್ಕೆ !
ಮೈಸೂರು, ಮೇ 11: ಮೈಸೂರು ಆರ್ಟಿಓ ಅಧಿಕಾರಿಗಳು ಕಾನೂನು ಉಲ್ಲಂಘನೆ ಮಾಡಿ ರಸ್ತೆಯಲ್ಲಿ ಸಂಚರಿಸುತ್ತಿದ್ದ ಎರಡು ಶಾಲಾ ವಾಹನಗಳನ್ನು ಜಪ್ತಿ ಮಾಡಿದ್ದಾರೆ. ‘ದ ಲರ್ನಿಂಗ್ ಕರ್ವ್ ಇಂಟರ್ನ್ಯಾಷನಲ್ ಶಾಲೆ’ಗೆ ಸೇರಿದ ಒಂದು ವಾಹನ ಮತ್ತು ಗುರುತು ಹಾಕದ ಮತ್ತೊಂದು ವಾಹನವನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಜಪ್ತಿ ಮಾಡಿದ ವಾಹನಗಳ ಸ್ಥಿತಿ ಆತಂಕಕಾರಿಯಾಗಿದ್ದು, ಮಕ್ಕಳ ಸುರಕ್ಷತೆಗೆ ಸಂಪೂರ್ಣವಾಗಿ ಧಕ್ಕೆ ತರುವಂತಿತ್ತು. ಒಂದನೇ ವಾಹನದ ಮುಂಭಾಗದ ಗಾಜು ಸಂಪೂರ್ಣವಾಗಿ ಬಿರುಕುಬಿಟ್ಟಿದ್ದು, ಯಾವುದೇ ಕ್ಷಣದಲ್ಲಿ ಬೀಳುವ ಸ್ಥಿತಿಯಲ್ಲಿತ್ತು. ತುರ್ತು ನಿರ್ಗಮನ ದ್ವಾರದ…