ಪರೀಕ್ಷೆಗೆ ಹೆದರಿ ವಸತಿ ಶಾಲೆಯ ಕಾಂಪೌಂಡ್ ಹಾರಿ 5 ಮಂದಿ SSLC ವಿದ್ಯಾರ್ಥಿಗಳು ಪರಾರಿ! – Kannada News | SSLC Exam Fear: 5 Haveri Students Missing from Morarji School, Cover up Alleged
ಹಾವೇರಿ, ಫೆಬ್ರವರಿ 27: ರಾಜ್ಯದಲ್ಲಿ ಮಾರ್ಚ್ 18ರಿಂದ SSLC ಪರೀಕ್ಷೆಗಳು ಆರಂಭವಾಗಲಿದ್ದು, ಪೂರ್ವ ಸಿದ್ಧತಾ ಪರೀಕ್ಷೆ ಸೇರಿ ಅಂತಿಮ ಹಂತದ ತಯಾರಿ ನಡೆಯುತ್ತಿವೆ. ಉತ್ತಮ ಅಂಕಗಳೊಂದಿಗೆ ವಿದ್ಯಾರ್ಥಿಗಳು ತೇರ್ಗಡೆ ಹೊಂದಬೇಕೆಂಬ ಉದ್ದೇಶದಿಂದ ಶಿಕ್ಷಕರು ಮಾತ್ರವಲ್ಲದೆ ಶಿಕ್ಷಣ ಅಧಿಕಾರಿಗಳು, ತಹಶೀಲ್ದಾರ್ಗಳೂ ಕೆಲವೆಡೆ ತಮ್ಮದೇ ಆದ ರೀತಿಯಲ್ಲಿ ವಿದ್ಯಾರ್ಥಿಗಳನ್ನು ಪ್ರೇರೇಪಿಸುವ ಕೆಲಸ ಮಾಡುತ್ತಿದ್ದಾರೆ. ಪರೀಕ್ಷೆ ಬಗ್ಗೆ ಮಕ್ಕಳು ಆತಂಕಕ್ಕೆ ಒಳಗಾಗಬಾರದು ಎಂದು ಹಲವು ಕಾರ್ಯಕ್ರಮಗಳನ್ನು ನಡೆಸಿ ಅವರಿಗೆ ಧೈರ್ಯ ತುಂಬುವ ಕೆಲಸ ಆಗುತ್ತಿವೆ. ಹೀಗಿದ್ದರೂ ಹತ್ತನೇ ತರಗತಿ ಪರೀಕ್ಷೆಗೆ ಹೆದರಿ…