All posts by nagaraj11081993

ತಮಿಳುನಾಡು ಸಾಲದ ಬಗ್ಗೆ ಆರೋಪಿಸಿದ್ದ ಮುಖ್ಯಮಂತ್ರಿ ವಿಜಯ್​​ ಮಾತಿಗೆ ಮಾಜಿ ಸಿಎಂ ಸ್ಟಾಲಿನ್​​ ಆಕ್ರೋಶ – Kannada News | Tamil nadu debt row cm vijays claims ignite stalins fury on state finances

ವಿಜಯ್​​ ಮಾತಿಗೆ ಸ್ಟಾಲಿನ್​​ ಆಕ್ರೋಶ

ಚೆನ್ನೈ, ಮೇ 10: ತಮಿಳುನಾಡಿನ ಮುಖ್ಯಮಂತ್ರಿಯಾಗಿ ಸಿ. ಜೋಸೇಫ್​​ ವಿಜಯ್​​ ಪ್ರಮಾಣವಚನ ಸ್ವೀಕರಿಸುತ್ತಿದ್ದಂತೆ ಹಿಂದಿನ ಸರ್ಕಾರದ ವಿರುದ್ಧ ಸಾಲದ ಆರೋಪ ಮಾಡಿದ್ದರು. ರಾಜ್ಯವು 10 ಲಕ್ಷ ಕೋಟಿಗೂ ಹೆಚ್ಚು ಸಾಲದಲ್ಲಿದ್ದು, ಖಜಾನೆ ಸಂಪೂರ್ಣ ಬರಿದಾಗಿದೆ. ಇಂತಹ ಕಷ್ಟಕರ ಪರಿಸ್ಥಿತಿಯಲ್ಲಿ ಜವಾಬ್ದಾರಿಯನ್ನು ವಹಿಸಿಕೊಂಡಿರುವುದಾಗಿ ತಿಳಿಸಿದ್ದರು. ಆದರೆ ಈ ವಿಚಾರವೀಗ ಮಾಜಿ ಸಿಎಂ, ಡಿಎಂಕೆ ಪಕ್ಷದ ಅಧ್ಯಕ್ಷ ಎಂ.ಕೆ. ಸ್ಟಾಲಿನ್​​ ಆಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ ಎಕ್ಸ್​​ ಪೋಸ್ಟ್​​ ಮಾಡಿ ಕಿಡಿ ಕಾರಿರುವ ಅವರು, ಜನರನ್ನು ತಪ್ಪು ದಾರಿಗೆಳೆಯಲು ಯತ್ನಿಸಬೇಡಿ ಎಂದಿದ್ದಾರೆ.

ಎಂ.ಕೆ. ಸ್ಟಾಲಿನ್​​ ಹೇಳಿದ್ದೇನು?

ತಮಿಳುನಾಡಿನ ನೂತನ ಮುಖ್ಯಮಂತ್ರಿ, ತಮಿಳಗ ವೆಟ್ರಿ ಕಳಗಂ ಪಕ್ಷದ ನಾಯಕ ವಿಜಯ್​​ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳನ್ನು ತಿಳಿಸುತ್ತೇನೆ. ಅಧಿಕಾರ ಸ್ವೀಕರಿಸಿದ ತಕ್ಷಣವೇ ನೀವು ಸಹಿ ಹಾಕಿರುವ ಘೋಷಣೆಗಳನ್ನೂ ಸ್ವಾಗತಿಸುತ್ತೇನೆ. ಆದರೆ ಸರ್ಕಾರದ ಬಳಿ ಹಣವೇ ಇಲ್ಲ ಎಂದು ಆರಂಭದಲ್ಲೇ ಹೇಳಬೇಡಿ. ಹಣ ಇದೆ. ಜನರಿಗೆ ಅದನ್ನು ತಲುಪಿಸುವ ಮನಸ್ಸು ಮತ್ತು ಆಡಳಿತ ನಡೆಸುವ ಸಾಮರ್ಥ್ಯ ಬೇಕಷ್ಟೇ. ಕೋವಿಡ್, ಪ್ರವಾಹ ಸೇರಿದಂತೆ ಅನೇಕ ಸಂಕಷ್ಟಗಳು ಹಾಗೂ ಕೇಂದ್ರದ ಬಿಜೆಪಿ ಸರ್ಕಾರದ ನಿರ್ಲಕ್ಷ್ಯದ ನಡುವೆಯೂ ನಾವು ಐದು ವರ್ಷಗಳ ಕಾಲ ಅನೇಕ ಜನಪರ ಯೋಜನೆಗಳನ್ನು ಜಾರಿಗೆ ತಂದಿದ್ದೇವೆ. ನೀವು ನಿಮ್ಮ ಮೊದಲ ಭಾಷಣದಲ್ಲೇ “ಹಿಂದಿನ ಸರ್ಕಾರ ₹10 ಲಕ್ಷ ಕೋಟಿ ಸಾಲ ಬಿಟ್ಟು ಖಜಾನೆ ಖಾಲಿ ಮಾಡಿದೆ” ಎಂದು ಆರೋಪಿಸಿದ್ದೀರಿ. ಆದರೆ ತಮಿಳುನಾಡಿನ ಸಾಲದ ಮಟ್ಟ ಅನುಮತಿಸಲಾದ ಮಿತಿಯೊಳಗೇ ಇದೆ ಎಂದು ಸ್ಟಾಲಿನ್​​ ತಿಳಿಸಿದ್ದಾರೆ.

ಇದನ್ನೂ ಓದಿ: ಮೊದಲ ಭಾಷಣದಲ್ಲೇ ಸಾಲದ ಬಗ್ಗೆ ಮಾತಾಡಿದ ತಮಿಳುನಾಡು ಸಿಎಂ ಜೋಸೆಫ್​​ ವಿಜಯ್​​

ಫೆಬ್ರವರಿ ಬಜೆಟ್‌ನಲ್ಲೇ ರಾಜ್ಯದ ಆರ್ಥಿಕ ಸ್ಥಿತಿಯನ್ನು ನಾವು ಸ್ಪಷ್ಟವಾಗಿ ವಿವರಿಸಿದ್ದೇವೆ. ಅದು ನಿಮಗೆ ತಿಳಿದಿರಲಿಲ್ಲವೇ? ಅದಾದ ಬಳಿಕವೇ ನೀವು ಜನರಿಗೆ ಹಲವು ಭರವಸೆಗಳನ್ನು ನೀಡಿದ್ದೀರಲ್ಲಾ? ಹೀಗಾಗಿ ಈಗ ಜನರನ್ನು ತಪ್ಪು ದಾರಿಗೆಳೆಯಲು ಯತ್ನಿಸಬೇಡಿ. ಪ್ರಾಯೋಗಿಕವಾಗಿ ಸಾಧ್ಯವಿರುವ ಭರವಸೆಗಳನ್ನಷ್ಟೇ ನೀಡುತ್ತೇನೆ ಎಂದು ಹೇಳಿ ಅಧಿಕಾರಕ್ಕೆ ಬಂದ ನೀವು ಈಗಷ್ಟೇ ಆಡಳಿತಕ್ಕೆ ಕಾಲಿಟ್ಟಿದ್ದೀರಿ. ಜನರಿಗೆ ನೀಡಿದ ಭರವಸೆಗಳನ್ನು ಹೇಗೆ ಈಡೇರಿಸಬೇಕು ಎಂಬ ಆಡಳಿತದ ಸೂಕ್ಷ್ಮತೆಗಳನ್ನು ನಮ್ಮಂತೆಯೇ ನೀವು ಕೂಡ ಬೇಗನೆ ಅರಿತುಕೊಳ್ಳುವಿರಿ ಎಂಬ ನಂಬಿಕೆ ಇದೆ. ನಿಮ್ಮ ಮೇಲೆ ವಿಶ್ವಾಸವಿಟ್ಟು ಮತಹಾಕಿದ ಜನರಂತೆ ನಾನೂ ಅದನ್ನೇ ನಿರೀಕ್ಷಿಸುತ್ತೇನೆ.ನಿಮ್ಮ ಆಡಳಿತದಲ್ಲಿ ತಮಿಳುನಾಡಿನ ಅಭಿವೃದ್ಧಿಯ ಪಯಣ ಮುಂದುವರಿಯಲಿ ಎಂಬ ಶುಭಾಶಯಗಳು ಎಂದು ಸ್ಟಾಲಿನ್​​ ಹೇಳಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

ಮೊದಲ ಭಾಷಣದಲ್ಲೇ ಸಾಲದ ಬಗ್ಗೆ ಮಾತಾಡಿದ ತಮಿಳುನಾಡು ಸಿಎಂ ಜೋಸೆಫ್​​ ವಿಜಯ್​​ – Kannada News | CM Vijay Highlights Tamil Nadu’s Current Debt in His First Speech

ಚೆನ್ನೈ, ಮೇ 10: ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ನಟ ದಳಪತಿ ವಿಜಯ್​​ ಇಂದು ಪ್ರಮಾಣವಚನ ಸ್ವೀಕರಿಸಿದ್ದಾರೆ. ತಮ್ಮ ಮೊದಲ ಭಾಷಣದಲ್ಲೇ ಅಬ್ಬರಿಸಿದ ‘ಜನನಾಯಗನ್’ ಹಿಂದಿನ ಸರ್ಕಾರದ ವಿರುದ್ಧ ಕಿಡಿ ಕಾರಿದ್ದಾರೆ. ತಮಿಳುನಾಡಿನ ಪ್ರಸ್ತುತ ಆರ್ಥಿಕ ಸ್ಥಿತಿಯ ಬಗ್ಗೆ ಕಳವಳ ವ್ಯಕ್ತಪಡಿಸಿರುವ ವಿಜಯ್​​, ರಾಜ್ಯವು 10 ಲಕ್ಷ ಕೋಟಿಗೂ ಹೆಚ್ಚು ಸಾಲದಲ್ಲಿದ್ದು, ಖಜಾನೆ ಸಂಪೂರ್ಣ ಬರಿದಾಗಿದೆ. ಇಂತಹ ಕಷ್ಟಕರ ಪರಿಸ್ಥಿತಿಯಲ್ಲಿ ಜವಾಬ್ದಾರಿಯನ್ನು ವಹಿಸಿಕೊಂಡಿರುವುದಾಗಿ ತಿಳಿಸಿದ್ದಾರೆ. ಅಲ್ಲದೆ ಪಾರದರ್ಶಕ ಆಡಳಿತವನ್ನು ನೀಡುವ ಗುರಿ ಹೊಂದಿದ್ದು, ಯಾವುದೇ ಮುಚ್ಚುಮರೆಯಿಲ್ಲದೆ, ಸಾರ್ವಜನಿಕವಾಗಿ ಆಡಳಿತ ನಡೆಸುವುದಾಗಿ ಭರವಸೆ ನೀಡಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

Video: ರವಿಶಂಕರ್ ಗುರೂಜಿ ಮಾತಿಗೆ ಪ್ರಧಾನಿ ಮೋದಿಗೂ ನಗು! – Kannada News | Bengaluru: PM Modi Joins Sri Sri Ravi Shankar’s 70th B’day, Hails India’s Growth

ಬೆಂಗಳೂರು, ಮೇ10: ಕನಕಪುರ ರಸ್ತೆಯಲ್ಲಿರುವ ಆರ್ಟ್ ಆಫ್ ಲಿವಿಂಗ್ ಆಶ್ರಮದಲ್ಲಿ ಇಂದು ನಡೆದ ಶ್ರೀ ಶ್ರೀ ರವಿಶಂಕರ್ ಗುರೂಜಿ ಅವರ 70ನೇ ಜನ್ಮದಿನಾಚರಣೆ ಹಾಗೂ ಸಂಸ್ಥೆಯ 45ನೇ ವಾರ್ಷಿಕೋತ್ಸವದಲ್ಲಿ ಪಾಲ್ಗೊಂಡ ಪ್ರಧಾನಿ ನರೇಂದ್ರ ಮೋದಿ ಅವರ ಸಮ್ಮುಖದಲ್ಲಿ, ಗುರೂಜಿಯವರು ಕಳೆದ ದಶಕದಲ್ಲಿ ಭಾರತ ಕಂಡ ಅಭೂತಪೂರ್ವ ಬದಲಾವಣೆಗಳನ್ನು ಮುಕ್ತಕಂಠದಿಂದ ಶ್ಲಾಘಿಸಿದರು. ದೇಶವು ಬಡತನ ಮತ್ತು ಅಸ್ತವ್ಯಸ್ತತೆಯಿಂದ ಹೊರಬಂದು ಸ್ವಚ್ಛ ಭಾರತದ ಮೂಲಕ ಹೊಸ ಗುರುತು ಪಡೆದಿದೆ ಎಂದು ಬಣ್ಣಿಸಿದ ಅವರು, ರೆಡ್ ಟೆರರ್ ಅಂತ್ಯವಾಗಿ ಭದ್ರತೆ ಸುಧಾರಿಸಿರುವುದು ಹಾಗೂ ಭಾರತವು ಜಾಗತಿಕ ಆರ್ಥಿಕತೆಯಲ್ಲಿ 14ನೇ ಸ್ಥಾನದಿಂದ 3ನೇ ಸ್ಥಾನಕ್ಕೆ ಏರಿರುವುದು ಮೋದಿಯವರ ನೇತೃತ್ವದ ದೊಡ್ಡ ಸಾಧನೆ ಎಂದು ಸ್ಮರಿಸಿದರು. ಇದೇ ವೇಳೆ ಅಯೋಧ್ಯೆಯ ಶ್ರೀರಾಮ ಮಂದಿರ ನಿರ್ಮಾಣದಲ್ಲಿ ಕರ್ನಾಟಕದ ಶಿಲೆಗಳ ಬಳಕೆಯನ್ನು ಹೆಮ್ಮೆಯಿಂದ ಉಲ್ಲೇಖಿಸುತ್ತಾ, ಯೋಗ ಮತ್ತು ಆಯುರ್ವೇದಕ್ಕೆ ಜಾಗತಿಕ ಮಾನ್ಯತೆ ಸಿಕ್ಕಿದ್ದನ್ನು ಅವರು ಕೊಂಡಾಡಿದಾಗ ಪ್ರಧಾನಿಯವರ ಮುಖದಲ್ಲಿಯೂ ಮಂದಹಾಸ ಮೂಡಿತು.

ಇದನ್ನೂ ಓದಿ: ವಿಜಯ್ ಪ್ರಮಾಣವಚನ: ನಗುನಗುತ್ತಾ ಆಗಮಿಸಿದ ನಟಿ ತ್ರಿಶಾ ವಿಡಿಯೋ ವೈರಲ್

ಇನ್ನಷ್ಟು ವಿಡಿಯೋ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ: 

Source link

ಮಹಾ ಎಡವಟ್ಟು… ಪಾಕ್ ತಂಡದಲ್ಲಿ ಟೀಮ್ ಇಂಡಿಯಾ ಆಟಗಾರರು! – Kannada News | Indian XI Shown on Pakistan Scorecard

ಬಾಂಗ್ಲಾದೇಶ್ ಮತ್ತು ಪಾಕಿಸ್ತಾನ್ ತಂಡಗಳ ನಡುವೆ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯವು ಮೈದಾನದ ಆಟಕ್ಕಿಂತ ಹೆಚ್ಚಾಗಿ ಬ್ರಾಡ್‌ಕಾಸ್ಟರ್‌ಗಳ ಬೃಹತ್ ಪ್ರಮಾದದಿಂದಾಗಿ ಜಾಗತಿಕ ಮಟ್ಟದಲ್ಲಿ ಸುದ್ದಿಯಾಗಿದೆ. ಪಂದ್ಯದ ಆರಂಭಿಕ ಹಂತದಲ್ಲಿ ಪಾಕಿಸ್ತಾನದ ಆಡುವ ಬಳಗವನ್ನು (Playing XI) ಪ್ರದರ್ಶಿಸುವ ಸಂದರ್ಭದಲ್ಲಿ, ತಾಂತ್ರಿಕ ದೋಷದಿಂದಾಗಿ ಭಾರತೀಯ ಕ್ರಿಕೆಟ್ ತಂಡದ ಆಟಗಾರರ ಪಟ್ಟಿ ಪರದೆಯ ಮೇಲೆ ಮೂಡಿಬಂದಿದೆ.

ಪಾಕಿಸ್ತಾನದ ಟೆಸ್ಟ್ ಇತಿಹಾಸದ ಅಂಕಿಅಂಶಗಳ ಗ್ರಾಫಿಕ್ಸ್ ಅಡಿಯಲ್ಲಿ ರೋಹಿತ್ ಶರ್ಮಾ, ಶುಭ್​ಮನ್ ಗಿಲ್ ಮತ್ತು ರಿಂಕು ಸಿಂಗ್ ಅವರಂತಹ ಭಾರತೀಯ ಆಟಗಾರರ ಹೆಸರುಗಳು ರಾರಾಜಿಸಿದ್ದು, ಕ್ರಿಕೆಟ್ ವಲಯದಲ್ಲಿ ಭಾರಿ ಅಚ್ಚರಿಗೆ ಕಾರಣವಾಯಿತು. ಕ್ರೀಡಾ ಪ್ರಸಾರ ಇತಿಹಾಸದಲ್ಲೇ ಇಂತಹ ದೊಡ್ಡ ಮಟ್ಟದ ಪ್ಲೇಯಿಂಗ್ ಇಲೆವೆನ್ ಎಡವಟ್ಟು ಸಂಭವಿಸಿರುವುದು ಅಪರೂಪವಾಗಿದ್ದು, ಈ ಘಟನೆಯ ಸಂಪೂರ್ಣ ವಿವರ ಇಲ್ಲಿದೆ…

ಏನಿದು ಘಟನೆ?

ಪಾಕಿಸ್ತಾನ್ ಮತ್ತು ಬಾಂಗ್ಲಾದೇಶ್ ಪಂದ್ಯ ಆರಂಭಕ್ಕೂ ಮುನ್ನ, ಅಂದರೆ ಟಾಸ್ ಪ್ರಕ್ರಿಯೆ ಮುಗಿದ ನಂತರ ಬ್ರಾಡ್‌ಕಾಸ್ಟರ್‌ಗಳು ಪಾಕಿಸ್ತಾನ್ ತಂಡದ ಪ್ಲೇಯಿಂಗ್ ಇಲೆವೆನ್ ಪಟ್ಟಿಯನ್ನು ಪರದೆಯ ಮೇಲೆ ತೋರಿಸಬೇಕಿತ್ತು. ಆದರೆ, ಇಲ್ಲಿ ದೊಡ್ಡ ಎಡವಟ್ಟು ಸಂಭವಿಸಿತು. “ಪಾಕಿಸ್ತಾನ ಟೆಸ್ಟ್ ಕೆರಿಯರ್” ಎಂಬ ಶೀರ್ಷಿಕೆಯ ಅಡಿಯಲ್ಲಿ ಪಾಕ್ ಆಟಗಾರರ ಬದಲು ಭಾರತೀಯ ಕ್ರಿಕೆಟ್ ತಂಡದ ಆಟಗಾರರ ಹೆಸರುಗಳು ಮೂಡಿಬಂದವು!

ಪರದೆಯ ಮೇಲೆ ಕಂಡ ಭಾರತೀಯ ಆಟಗಾರರು:

ರೋಹಿತ್ ಶರ್ಮಾ ನಾಯಕತ್ವದ ಭಾರತದ ಟಿ20 ಮತ್ತು ಏಕದಿನ ಮಾದರಿಯ ಆಟಗಾರರ ಪಟ್ಟಿ ಅಲ್ಲಿ ಕಾಣಿಸಿಕೊಂಡಿತು.

  • ರೋಹಿತ್ ಶರ್ಮಾ (ನಾಯಕ)
  •  ಶುಭ್​​ಮನ್ ಗೊಲ್
  • ತಿಲಕ್ ವರ್ಮಾ
  • ಶಿವಂ ದುಬೆ
  • ಜಿತೇಶ್ ಶರ್ಮಾ
  •  ರಿಂಕು ಸಿಂಗ್
  • ಅಕ್ಷರ್ ಪಟೇಲ್
  • ವಾಷಿಂಗ್ಟನ್ ಸುಂದರ್
  • ರವಿ ಬಿಷ್ಣೋಯ್
  • ಅರ್ಷದೀಪ್ ಸಿಂಗ್
  • ಮುಖೇಶ್ ಕುಮಾರ್.

ಈ ಹನ್ನೊಂದು ಭಾರತೀಯ ಆಟಗಾರರ ಹೆಸರುಗಳು ಸ್ಕೋರ್‌ಕಾರ್ಡ್‌ನಲ್ಲಿ ರಾರಾಜಿಸಿದವು. ತಕ್ಷಣವೇ ಬ್ರಾಡ್​ಕಾಸ್ಟರ್ ತಾಂತ್ರಿಕ ದೋಷವನ್ನು ಸರಿಪಡಿಸಿಕೊಂಡರೂ, ಅಷ್ಟರಲ್ಲಾಗಲೇ ಈ ಸ್ಕೋರ್​ ಕಾರ್ಡ್​ನ ಸ್ಕ್ರೀನ್‌ಶಾಟ್‌ಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು.

ಇದೀಗ ಈ ವೈರಲ್ ಫೋಟೋ ನೋಡಿ,  “ಪಾಕಿಸ್ತಾನ್ ತಂಡದಲ್ಲಿ ಭಾರತದ ಆಟಗಾರರೇ?” ಎಂದು ನೆಟ್ಟಿಗರು ಪ್ರಶ್ನಿಸುತ್ತಾ ಟ್ರೋಲ್ ಮಾಡುತ್ತಿದ್ದಾರೆ. “ಬ್ರಾಡ್‌ಕಾಸ್ಟರ್‌ಗಳಿಗೆ ಟೀಮ್ ಇಂಡಿಯಾದ ಮೇಲಿರುವ ಪ್ರೀತಿಯನ್ನು ಮರೆಯಲು ಸಾಧ್ಯವಾಗುತ್ತಿಲ್ಲ” ಎಂದು ಅನೇಕರು ಕಿಚಾಯಿಸಿದ್ದಾರೆ.

Source link

Modi Visit Art Of Living: ರವಿಶಂಕರ್ ಗುರೂಜಿಯ 100ನೇ ಹುಟ್ಟುಹಬ್ಬಕ್ಕೂ ಬರುತ್ತೇನೆ ಎಂದ ಪ್ರಧಾನಿ ಮೋದಿ

ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು (ಮೇ 10) ಬೆಂಗಳೂರಿನ ಕನಕಪುರ ರಸ್ತೆಯಲ್ಲಿರುವ ಆರ್ಟ್ ಆಫ್ ಲಿವಿಂಗ್ ಆಶ್ರಮಕ್ಕೆ ಭೇಟಿ ನೀಡಿ, ಶ್ರೀ ಶ್ರೀ ರವಿಶಂಕರ್ ಗುರೂಜಿ ಅವರ 70ನೇ ಜನ್ಮದಿನಾಚರಣೆ ಹಾಗೂ ಸಂಸ್ಥೆಯ 45ನೇ ವಾರ್ಷಿಕೋತ್ಸವದ ಸಂಭ್ರಮದಲ್ಲಿ ಪಾಲ್ಗೊಂಡರು. ಈ ಐತಿಹಾಸಿಕ ಸಂದರ್ಭದಲ್ಲಿ ನೂತನವಾಗಿ ನಿರ್ಮಿಸಲಾದ ಭವ್ಯ ‘ದಿವ್ಯ ಧ್ಯಾನ ಮಂದಿರ’ವನ್ನು ಲೋಕಾರ್ಪಣೆಗೊಳಿಸಿದ ಅವರು, ಬೆಂಗಳೂರಿನ ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕ ಹಿರಿಮೆಯನ್ನು ಕೊಂಡಾಡಿದರು. ಆರ್ಟ್ ಆಫ್ ಲಿವಿಂಗ್ ಸಂಸ್ಥೆಯು ಕಳೆದ ನಾಲ್ಕು ದಶಕಗಳಲ್ಲಿ ವಿಶಾಲ ವಟವೃಕ್ಷದಂತೆ ಬೆಳೆದು ಜಾಗತಿಕವಾಗಿ ಲಕ್ಷಾಂತರ ಜನರ ಜೀವನದಲ್ಲಿ ಸಕಾರಾತ್ಮಕ ಬದಲಾವಣೆ ತಂದಿದೆ ಎಂದು ಬಣ್ಣಿಸಿದ ಪ್ರಧಾನಿಯವರು, ಯೋಗ ಮತ್ತು ಧ್ಯಾನದ ಭಾರತೀಯ ಪರಂಪರೆಯನ್ನು ಸ್ಮರಿಸುತ್ತಾ ಗುರೂಜಿಯವರ 100ನೇ ಜನ್ಮದಿನದ ಶತಮಾನೋತ್ಸವ ಕಾರ್ಯಕ್ರಮಕ್ಕೂ ಮತ್ತೆ ಬರುವುದಾಗಿ ಆತ್ಮವಿಶ್ವಾಸದಿಂದ ಘೋಷಿಸಿದರು.

ಇದನ್ನೂ ಓದಿ: ವಿಜಯ್ ಪ್ರಮಾಣವಚನ: ನಗುನಗುತ್ತಾ ಆಗಮಿಸಿದ ನಟಿ ತ್ರಿಶಾ ವಿಡಿಯೋ ವೈರಲ್

ಇನ್ನಷ್ಟು ವಿಡಿಯೋ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ: 

Source link

ಪ್ರಧಾನಿ ಮೋದಿ ಸಂಚರಿಸೋ ರಸ್ತೆಯಲ್ಲಿ ಜಿಲೆಟಿನ್ ಕಡ್ಡಿಗಳು ಪತ್ತೆ: ಶಂಕಿತ ವ್ಯಕ್ತಿ ಪೊಲೀಸ್ ವಶಕ್ಕೆ – Kannada News | Security Alert in Bengaluru: Gelatin Sticks Found Near PM Modi’s Route in Kaggalipura; One Suspect Detained

ಬೆಂಗಳೂರು, ಮೇ 10: ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಆತಂಕಕಾರಿ ಘಟನೆ ನಡೆದಿರುವುದು ಬೆಳಕಿಗೆ ಬಂದಿದೆ. ಬೆಂಗಳೂರು ಹೊರವಲಯದ ಕಗ್ಗಲಿಪುರ ಗ್ರಾಮದ ತಾತಗುಣಿ ಬಳಿ, ಪ್ರಧಾನಿ ಮೋದಿ ಸಂಚರಿಸುವ ರಸ್ತೆ ಮಾರ್ಗದ ಸಮೀಪ ಜಿಲೆಟಿನ್ ಕಡ್ಡಿಗಳು ಪತ್ತೆಯಾಗಿವೆ. ಪ್ರಧಾನಮಂತ್ರಿಯವರ ಆರ್ಟ್ ಆಫ್ ಲಿವಿಂಗ್ ಆಶ್ರಮ ಭೇಟಿಯ ಮಾರ್ಗದಲ್ಲಿ ಈ ಜಿಲೆಟಿನ್ ಕಡ್ಡಿಗಳು ದೊರೆತಿವೆ.

ಈ ಸಂಬಂಧ ಓರ್ವ ಶಂಕಿತ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಅಜ್ಞಾತ ಸ್ಥಳದಲ್ಲಿ ವಿಚಾರಣೆ ನಡೆಸುತ್ತಿದ್ದಾರೆ. ಬೆಂಗಳೂರು ನಗರ ಪೊಲೀಸ್ ಮತ್ತು ರಾಮನಗರ ಪೊಲೀಸರು ಜಂಟಿಯಾಗಿ ಈ ಪ್ರಕರಣದ ತನಿಖೆಯನ್ನು ಕೈಗೊಂಡಿದ್ದಾರೆ. ಜಿಲೆಟಿನ್ ಕಡ್ಡಿಗಳು ಉದ್ದೇಶಪೂರ್ವಕವಾಗಿ ಇರಿಸಲಾಗಿದೆಯೇ ಅಥವಾ ಇದರ ಹಿಂದಿನ ಉದ್ದೇಶವೇನು ಎಂಬುದು ಪೊಲೀಸರ ತನಿಖೆಯಿಂದ ಸ್ಪಷ್ಟವಾಗಬೇಕಿದೆ. ಸದ್ಯಕ್ಕೆ, ಈ ಘಟನೆ ಆತಂಕ ಹಾಗೂ ಹಲವಾರು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ವಶಕ್ಕೆ ಪಡೆದಿರುವ ವ್ಯಕ್ತಿಯ ಹಿನ್ನೆಲೆ ಮತ್ತು ಈ ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ವಿವರಗಳು ಇನ್ನಷ್ಟೇ ಲಭ್ಯವಾಗಬೇಕಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಪ್ರಧಾನಿ ಮೋದಿಗೆ ಆರ್ಟ್​ ಆಫ್ ಲಿವಿಂಗ್ ಫೋಟೊ ಕೊಟ್ಟು ಸನ್ಮಾನಿಸಿದ ಶ್ರೀ ಶ್ರೀ ರವಿಶಂಕರ್ ಗುರೂಜಿ

ಬೆಂಗಳೂರು, ಮೇ 10: ಶ್ರೀ ಶ್ರೀ ರವಿಶಂಕರ್ ಗುರೂಜಿ 70ನೇ ಜನ್ಮೋತ್ಸವ ಹಾಗೂ ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ 45ನೇ ವರ್ಷಾಚರಣೆ ಕಾರ್ಯಕ್ರಮ ಬೆಂಗಳೂರಿನ ಕನಕಪುರ ರಸ್ತೆಯ ಆಶ್ರಮದಲ್ಲಿ ಭಾನುವಾರ ನೆರವೇರಿತು. ಕಾರ್ಯಕ್ರಮದಲ್ಲಿ ಭಾಗವಹಿಸಿದ ಪ್ರಧಾನಿ ನರೇಂದ್ರ ಮೋದಿ, ಕಮಲದ ಹೂವಿನ ಆಕೃತಿಯಲ್ಲಿ ನಿರ್ಮಾಣ ಮಾಡಲಾಗಿರುವ ಭವ್ಯವಾದ ‘ಧ್ಯಾನ ಮಂದಿರ’ವನ್ನು ಲೋಕಾರ್ಪಣೆಗೊಳಿಸಿದರು. ಇದೇ ಸಂದರ್ಭದಲ್ಲಿ ಶ್ರೀ ಶ್ರೀ ರವಿಶಂಕರ್ ಗುರೂಜಿ ಅವರು ಪ್ರಧಾನಿ ಮೋದಿಗೆ ಆರ್ಟ್​ ಆಫ್ ಲಿವಿಂಗ್ ಫೋಟೊ ಕೊಟ್ಟು ಸನ್ಮಾನಿಸಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ವಿಜಯ್ ಪ್ರಮಾಣವಚನ ಮುಗಿಸಿ ಹೊರಟ ತ್ರಿಶಾ ನೋಡಲು ಮುಗಿಬಿದ್ದ ಅಭಿಮಾನಿಗಳು – Kannada News | Fans try to take selfie with Trisha Krishnan after Thalapathy Vijay Oath Ceremony

ಅಭಿಮಾನಿಗಳ ನಿರೀಕ್ಷೆಯಂತೆಯೇ ನಟ ದಳಪತಿ ವಿಜಯ್ (Thalapathy Vijay) ಅವರು ತಮಿಳುನಾಡಿನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಈ ಸಮಾರಂಭಕ್ಕೆ ವಿಜಯ್ ಅವರ ಆಪ್ತ ಸ್ನೇಹಿತೆ ತ್ರಿಶಾ ಕೃಷ್ಣನ್ ಅವರು ಆಗಮಿಸಿದ್ದು, ವಿಶೇಷವಾಗಿತ್ತು. ಕಾರ್ಯಕ್ರಮದಲ್ಲಿ ತ್ರಿಶಾ ಅವರ ಆಗಮನವು ಎಲ್ಲರ ಗಮನ ಸೆಳೆಯಿತು. ತ್ರಿಶಾ ಮತ್ತು ವಿಜಯ್ ಅವರು ಹಲವು ವರ್ಷಗಳಿಂದ ಆಪ್ತವಾಗಿದ್ದಾರೆ. ಅವರ ಬಗ್ಗೆ ಅನೇಕ ಗಾಸಿಪ್​ಗಳು ಇವೆ. ಆದರೆ ಅವುಗಳಿಂದ ಅವರಿಬ್ಬರು ತಲೆ ಕೆಡಿಸಿಕೊಂಡಿಲ್ಲ. ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಬಂದ ತ್ರಿಶಾ ಅವರು ವಾಪಸ್ ತೆರಳುವಾಗ ಅವರಿಗೆ ಭದ್ರತೆ ನೀಡಲಾಯಿತು. ತ್ರಿಶಾ (Trisha Krishnan) ಅವರನ್ನು ನೋಡಲು ಅಭಿಮಾನಿಗಳು ಮುತ್ತಿಕೊಂಡಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಸೇವೆಯೇ ಪರಮ ಧರ್ಮ, ಆರ್ಟ್ ಆಫ್ ಲಿವಿಂಗ್‌ ಧ್ಯಾನ ಮಂದಿರ ವಿಶ್ವ ಶಾಂತಿಯ ಕೇಂದ್ರವಾಗಲಿದೆ: ಪ್ರಧಾನಿ ಮೋದಿ ಆಶಯ – Kannada News | PM Modi in Bengaluru: Inaugurates Majestic Lotus Dhyan Mandir at Art of Living; Hails Sri Sri Ravi Shankar Guruji’s Vision

ಆರ್ಟ್ ಆಫ್ ಲಿವಿಂಗ್‌ ಧ್ಯಾನ ಮಂದಿರ ಉದ್ಘಾಟಿಸಿ ಮಾತನಾಡಿದ ಪ್ರಧಾನಿ ಮೋದಿImage Credit source: tv9

ಬೆಂಗಳೂರು, ಮೇ 10: ಆರ್ಟ್ ಆಫ್ ಲಿವಿಂಗ್ (Art of Living) ಸಂಸ್ಥೆಯ 45ನೇ ವರ್ಷಾಚರಣೆ ಹಾಗೂ ಸಂಸ್ಥಾಪಕ ಶ್ರೀ ಶ್ರೀ ರವಿಶಂಕರ್ ಗುರೂಜಿ (Sri Sri Ravi Shankar Guruji) ಅವರ 70ನೇ ಜನ್ಮೋತ್ಸವದ ಅಂಗವಾಗಿ ಬೆಂಗಳೂರಿನ ಕನಕಪುರ ರಸ್ತೆಯ ಆಶ್ರಮದಲ್ಲಿ ಭಾನುವಾರ ನಡೆದ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಪಾಲ್ಗೊಂಡರು. ಈ ಸಂದರ್ಭದಲ್ಲಿ ಕಮಲದ ಹೂವಿನ ಆಕೃತಿಯಲ್ಲಿ ನಿರ್ಮಾಣ ಮಾಡಲಾಗಿರುವ ಭವ್ಯವಾದ ‘ಧ್ಯಾನ ಮಂದಿರ’ವನ್ನು ಲೋಕಾರ್ಪಣೆಗೊಳಿಸಿದ ಅವರು, ಆಧ್ಯಾತ್ಮಿಕ ಶಕ್ತಿ ಮತ್ತು ಸಮಾಜ ಸೇವೆಯ ಮಹತ್ವದ ಬಗ್ಗೆ ಪ್ರಸ್ತಾಪಿಸಿದರು. ಗುರೂಜಿಯವರ ಮತ್ತು ಆಶ್ರಮದ ಸೇವಾ ಕಾರ್ಯಗಳು ಭಾರತವನ್ನು ‘ವಿಶ್ವಗುರು’ವನ್ನಾಗಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿವೆ ಎಂದು ಶ್ಲಾಘಿಸಿದರು.

ಮುಖ್ಯಾಂಶಗಳು

  • ಆಶ್ರಮದಲ್ಲಿ ನೂತನವಾಗಿ ನಿರ್ಮಿಸಲಾದ ಭವ್ಯ ‘ಧ್ಯಾನ ಮಂದಿರ’ವನ್ನು ಪ್ರಧಾನಿ ಮೋದಿ ಲೋಕಾರ್ಪಣೆ ಮಾಡಿದರು.
  • ‘ಗುರೂಜಿಯವರ 100ನೇ ವರ್ಷದ ಸಂಭ್ರಮಾಚರಣೆಗೂ ನಾನೇ ಬರುತ್ತೇನೆ’ ಎಂದು ಮೋದಿ ನುಡಿದರು.
  • ಪ್ರಕೃತಿ ರಕ್ಷಣೆ, ನೈಸರ್ಗಿಕ ಕೃಷಿ ಮತ್ತು ಜಲ ಸಂರಕ್ಷಣೆಯೇ ನಿಜವಾದ ‘ಬದುಕಿನ ಕಲೆ (Art of Living)’ ಎಂದು ಮೋದಿ ವ್ಯಾಖ್ಯಾನಿಸಿದರು.

ಸೇವೆಯೇ ಪರಮ ಧರ್ಮ

ತಮ್ಮ ಭಾಷಣದುದ್ದಕ್ಕೂ ‘ಸೇವೆ’ಯ ಮಹತ್ವವನ್ನು ಎತ್ತಿ ಉಲ್ಲೇಖಿಸಿದ ಮೋದಿ, ‘ನಮ್ಮಲ್ಲಿ ಸೇವೆ ಎನ್ನುವುದು ಪರಮ ಧರ್ಮ. ಪರೋಪಕಾರವೇ ಪುಣ್ಯ, ಪರಪೀಡನೆಯೇ ಪಾಪ. ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ ಪ್ರತಿ ಕಾರ್ಯಕರ್ತನಲ್ಲೂ ಸೇವಾ ಭಾವನೆ ಎದ್ದು ಕಾಣುತ್ತಿದೆ. ಗುರೂಜಿ ಅವರು ಕಳೆದ 45 ವರ್ಷಗಳ ಹಿಂದೆ ಬಿತ್ತಿದ ಬೀಜ ಇಂದು ವಿಶಾಲವಾದ ಹೆಮ್ಮರವಾಗಿ ಬೆಳೆದು ನಿಂತಿದೆ. ಈ ವೃಕ್ಷದ ಸಾವಿರಾರು ಶಾಖೆಗಳು ಜಗತ್ತಿನಾದ್ಯಂತ ಲಕ್ಷಾಂತರ ಜನರ ಬದುಕನ್ನು ಸುಂದರಗೊಳಿಸುತ್ತಿವೆ ಎಂದು ಹರ್ಷ ವ್ಯಕ್ತಪಡಿಸಿದರು.

ಸೇವಾ ಭಾವನೆಯಿಂದ ಮಾಡಿದ ಕಾರ್ಯವು ಯಾವಾಗಲೂ ಸುಖದ ಫಲ ನೀಡುತ್ತದೆ ಎಂಬುದಕ್ಕೆ ಈ ಮಂದಿರವೇ ಸಾಕ್ಷಿ. ಈ ಆಶ್ರಮದ ಪವಿತ್ರ ಪರಿಸರದಲ್ಲಿ ಕಾಲ ಕಳೆದ ಸಂದರ್ಭ ಮತ್ತು ಇಲ್ಲಿನ ದಿವ್ಯ ಅನುಭವವು ಸ್ಮೃತಿಯಲ್ಲಿ ಸದಾ ಇರಲಿದೆ ಎಂದು ಮೋದಿ ನುಡಿದರು.

ಬೆಂಗಳೂರು ಮತ್ತು ಆಧ್ಯಾತ್ಮದ ಸಂಗಮ

ಬೆಂಗಳೂರು ಕೇವಲ ತಂತ್ರಜ್ಞಾನದ ನಗರವಲ್ಲ, ಇದು ಆಧ್ಯಾತ್ಮಿಕ ಚೇತನದ ಕೇಂದ್ರವೂ ಹೌದು ಎಂದು ಪ್ರಧಾನಿ ಬಣ್ಣಿಸಿದರು. ‘ಬೆಂಗಳೂರು ನಗರವು ವಿಶ್ವಕ್ಕೆ ಸಾಫ್ಟ್‌ವೇರ್ ಅನ್ನು ನೀಡುತ್ತಿದೆ. ಅದೇ ರೀತಿ ಆರ್ಟ್ ಆಫ್ ಲಿವಿಂಗ್ ಮೂಲಕ ವಿಶ್ವಕ್ಕೆ ಮಾನಸಿಕ ಶಾಂತಿಯ ಸಾಫ್ಟ್‌ವೇರ್ ಅನ್ನೂ ನೀಡುತ್ತಿದೆ. ಯೋಗ, ಧ್ಯಾನ ಮತ್ತು ಪ್ರಾಣಾಯಾಮಗಳು ಭಾರತದ ಸಂಸ್ಕಾರದ ಅವಿಭಾಜ್ಯ ಅಂಗಗಳಾಗಿದ್ದು, ಇವುಗಳನ್ನು ಜಾಗತಿಕ ಮಟ್ಟದಲ್ಲಿ ಜನಪ್ರಿಯಗೊಳಿಸುವಲ್ಲಿ ಈ ಸಂಸ್ಥೆಯ ಪಾತ್ರ ಹಿರಿದು’ ಎಂದು ಮೋದಿ ಮೆಚ್ಚುಗೆ ಸೂಚಿಸಿದರು.

ಪರಿಸರ ರಕ್ಷಣೆಗೆ ಮೋದಿ ಕರೆ

ಮುಂದಿನ ತಲೆಮಾರಿನ ಹಿತದೃಷ್ಟಿಯಿಂದ ಪರಿಸರವನ್ನು ಉಳಿಸುವುದು ನಮ್ಮೆಲ್ಲರ ಹೊಣೆ ಎಂದ ಪ್ರಧಾನಿ, ಆಶ್ರಮದ ಕಾರ್ಯಕರ್ತರಿಗೆ ಕೆಲವು ಮಹತ್ವದ ಕೆಲಸಗಳನ್ನು ವಹಿಸಿದರು. ‘ಕೆಮಿಕಲ್ ಗೊಬ್ಬರಗಳಿಂದ ನಮ್ಮ ಭೂಮಿ ತಾಯಿಯನ್ನು ರಕ್ಷಿಸುವುದು ಕೂಡ ಒಂದು ಆರ್ಟ್ ಆಫ್ ಲಿವಿಂಗ್. ನೈಸರ್ಗಿಕ ಕೃಷಿಗೆ ಹೆಚ್ಚಿನ ಒತ್ತು ನೀಡಿ. ಜಲ ಸಂರಕ್ಷಣೆ ಮತ್ತು ಪ್ರತಿ ಹನಿ ನೀರನ್ನು ಉಳಿಸುವುದು ಬದುಕಿನ ಅತ್ಯಗತ್ಯ ಕಲೆಯಾಗಲಿ ಎಂದರು.

ಯುವಶಕ್ತಿ ಮತ್ತು ಡಿಜಿಟಲ್ ಭಾರತ

ಭಾರತದ ಯುವಜನತೆ ಇಂದು ಬಾಹ್ಯಾಕಾಶದಿಂದ ಡಿಜಿಟಲ್ ಪೇಮೆಂಟ್‌ವರೆಗೆ ಎಲ್ಲ ರಂಗದಲ್ಲೂ ಮುಂಚೂಣಿಯಲ್ಲಿದ್ದಾರೆ ಎಂದು ಹೆಮ್ಮೆಯಿಂದ ಹೇಳಿದ ಮೋದಿ, ‘ಯುವಕರು ಮಾನಸಿಕವಾಗಿ ಶಾಂತರಾಗಿದ್ದಾಗ ಮಾತ್ರ ದೇಶ ಅಭಿವೃದ್ಧಿ ಹೊಂದಲು ಸಾಧ್ಯ. ಆಧುನಿಕ ಯುಗದ ಒತ್ತಡಗಳನ್ನು ಎದುರಿಸಲು ಧ್ಯಾನ ಮಂದಿರವು ಶಾಂತಿ ಮತ್ತು ಚೈತನ್ಯದ ಕೇಂದ್ರವಾಗಲಿದೆ’ ಎಂದು ಆಶಿಸಿದರು.

ಇದನ್ನೂ ಓದಿ: ಭಾರತವನ್ನು ಜಗತ್ತಿನ 3ನೇ ದೊಡ್ಡ ಆರ್ಥಿಕ ಶಕ್ತಿಯಾಗಿಸಿದ ಮೋದಿ ಒಬ್ಬ ‘ನೈಜ ಯೋಗಿ’: ಶ್ರೀ ಶ್ರೀ ರವಿಶಂಕರ್ ಗುರೂಜಿ

ಕೊನೆಯಲ್ಲಿ ‘ಲೋಟಸ್ (ಕಮಲ) ಛತ್ರದ ಅಡಿಯಲ್ಲಿ ನಾವೆಲ್ಲರೂ ಇದ್ದೇವೆ, ಈ ಆಧ್ಯಾತ್ಮಿಕ ಶಕ್ತಿಯೇ ದೇಶವನ್ನು ಹೊಸ ಎತ್ತರಕ್ಕೆ ಕೊಂಡೊಯ್ಯಲಿದೆ’ ಎಂದು ಮಾರ್ಮಿಕವಾಗಿ ನುಡಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ನಿನ್ನ ಜೇಬಿನಲ್ಲಿ ವಿಕೆಟ್​ ಇದೆ, ನನ್ನ ಕಿಸೆಯಲ್ಲಿ ಪಾಯಿಂಟ್ಸ್ ಇದೆ! – Kannada News | Rashid Khan’s ‘Pocket’ Revenge: GT Star Mocks Jadeja After Epic Win

ಐಪಿಎಲ್ ಅಂಗಳದಲ್ಲಿ ಕೇವಲ ಬ್ಯಾಟ್ ಮತ್ತು ಬಾಲ್ ನಡುವಿನ ಹೋರಾಟ ಮಾತ್ರವಲ್ಲದೆ, ಆಟಗಾರರ ನಡುವಿನ ಸಂಭ್ರಮಾಚರಣೆಯ ಜಿದ್ದಾಜಿದ್ದೂ ನೋಡುಗರಿಗೆ ಭರಪೂರ ಮನರಂಜನೆ ನೀಡುತ್ತದೆ. ಇತ್ತೀಚೆಗೆ ಗುಜರಾತ್ ಟೈಟಾನ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ನಡುವೆ ನಡೆದ ಪಂದ್ಯವು ಇಂತಹದ್ದೇ ಒಂದು ಸ್ವಾರಸ್ಯಕರ ಘಟನೆಗೆ ಸಾಕ್ಷಿಯಾಯಿತು. ರಾಜಸ್ಥಾನ ರಾಯಲ್ಸ್​ ತಂಡದ ರವೀಂದ್ರ ಜಡೇಜಾ ಅವರ ‘ಪಾಕೆಟ್’ ಸಂಭ್ರಮಕ್ಕೆ, ಅಫ್ಘಾನ್ ಸ್ಪಿನ್ ಮಾಂತ್ರಿಕ ರಶೀದ್ ಖಾನ್ ನೀಡಿದ ತಮಾಷೆಯ ತಿರುಗೇಟು ಇದೀಗ ವೈರಲ್ ಆಗಿದೆ. ಅಷ್ಟಕ್ಕೂ ಈ ‘ಪಾಕೆಟ್ ವೀಡಿಯೋ’ ಹಿಂದಿನ ಕಥೆಯೇನು? ಇಲ್ಲಿದೆ ಸಂಪೂರ್ಣ ವಿವರ.

ಏನಿದು ‘ಪಾಕೆಟ್’ ಸೆಲೆಬ್ರೇಷನ್?

ಜೈಪುರದಲ್ಲಿ ನಡೆದ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದ ವೇಳೆ ರಾಜಸ್ಥಾನ್ ರಾಯಲ್ಸ್‌ನ ರವೀಂದ್ರ ಜಡೇಜಾ ಅವರು  ಜೋಸ್ ಬಟ್ಲರ್ ಅವರ ವಿಕೆಟ್ ಪಡೆದು, ನಿನ್ನ ವಿಕೆಟ್ ನನ್ನ ಪಾಕೆಟ್​ನಲ್ಲಿ ಎಂಬಾರ್ಥದಲ್ಲಿ ‘ಪಾಕೆಟ್ ಸೆಲೆಬ್ರೇಷನ್’ ಮಾಡಿದ್ದರು.

ರಶೀದ್ ಖಾನ್ ತಿರುಗೇಟು:

ಗುಜರಾತ್ ಟೈಟಾನ್ಸ್ ಈ ಪಂದ್ಯವನ್ನು 77 ರನ್‌ಗಳ ಬೃಹತ್ ಅಂತರದಿಂದ ಗೆದ್ದ ನಂತರ, ರಶೀದ್ ಖಾನ್ ಅವರು ಒಂದು ವಿಶೇಷ ವೀಡಿಯೋ ಹಂಚಿಕೊಂಡಿದ್ದಾರೆ. ಅದರಲ್ಲಿ ಅವರು ತಮ್ಮ ಜೇಬಿನಲ್ಲಿದ್ದ ವಸ್ತುವನ್ನು ಹುಡುಕುವಂತೆ ಅಭಿನಯಿಸಿದ ರಶೀದ್ ಖಾನ್, ನನ್ನ ಪಾಕೆಟ್​ನಲ್ಲಿ 2 ಪಾಯಿಂಟ್ ಇದೆ ಎಂದು ತೋರಿಸಿದ್ದಾರೆ.

ಅಂದರೆ ನಿನ್ನ ಕಿಸೆಯಲ್ಲಿ ವಿಕೆಟ್​ ಇದ್ದರೆ, ನನ್ನ ಜೇಬಿನಲ್ಲಿ 2 ಪಾಯಿಂಟ್ ಇದೆ ಎಂದು ರಶೀದ್ ಖಾನ್ ಪರೋಕ್ಷವಾಗಿ ರವೀಂದ್ರ ಜಡೇಜಾಗೆ ತಿರುಗೇಟು ನೀಡಿದ್ದಾರೆ. ಈ ಮೂಲಕ ವಿಕೆಟ್​ಗಿಂತ ಪಾಯಿಂಟ್ ಮುಖ್ಯ ಎಂಬುದನ್ನು ಸಾರಿದ್ದಾರೆ. ಇದೀಗ ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಈ ಪಂದ್ಯದ ಮುಖ್ಯಾಂಶಗಳು:

    • ಟೈಟಾನ್ಸ್ ಬ್ಯಾಟಿಂಗ್: ಶುಭ್​ಮನ್ ಗಿಲ್ (84) ಮತ್ತು ಸಾಯಿ ಸುದರ್ಶನ್ (55) ಅವರ ಸ್ಫೋಟಕ ಬ್ಯಾಟಿಂಗ್ ನೆರವಿನಿಂದ ಗುಜರಾತ್ ಟೈಟಾನ್ಸ್ ತಂಡವು 20 ಓವರ್​ಗಳಲ್ಲಿ 229 ರನ್‌ ಕಲೆಹಾಕಿತು.
    • ರಾಜಸ್ಥಾನ್ ರಾಯಲ್ಸ್ ಬ್ಯಾಟಿಂಗ್: 230 ರನ್​ಗಳ ಕಠಿಣ ಗುರಿ ಬೆನ್ನತ್ತಿದ ರಾಜಸ್ಥಾನ್ ರಾಯಲ್ಸ್ ತಂಡವು 16.3 ಓವರ್​ಗಳಲ್ಲಿ 152 ರನ್‌ಗಳಿಗೆ ಆಲೌಟ್ ಆಗಿದೆ. ಈ ಮೂಲಕ 77 ರನ್​ಗಳಿಂದ ಸೋಲೊಪ್ಪಿಕೊಂಡಿದೆ.
    • ರಶೀದ್ ಖಾನ್ ಮ್ಯಾಜಿಕ್: ಈ ಪಂದ್ಯದಲ್ಲಿ ಮಿಂಚಿದ ರಶೀದ್ ಖಾನ್ 4 ಓವರ್​ಗಳಲ್ಲಿ 33 ರನ್ ನೀಡಿ 4 ಪ್ರಮುಖ ವಿಕೆಟ್ ಪಡೆದರು. ಇದರಲ್ಲಿ ರವೀಂದ್ರ ಜಡೇಜಾ ಅವರ ವಿಕೆಟ್ ಕೂಡ ಸೇರಿತ್ತು ಎಂಬುದು ವಿಶೇಷ.

ಈ ಗೆಲುವಿನೊಂದಿಗೆ ಗುಜರಾತ್ ಟೈಟಾನ್ಸ್ ತಂಡವು ಅಂಕ ಪಟ್ಟಿಯಲ್ಲಿ ದ್ವಿತೀಯ ಸ್ಥಾನಕ್ಕೇರಿದೆ. ಅಲ್ಲದೆ ಮುಂದಿನ ಮೂರು ಮ್ಯಾಚ್​ಗಳಲ್ಲಿ ಒಂದು ಗೆಲುವು ಸಾಧಿಸಿದರೆ ಪ್ಲೇಆಫ್ ಆಡುವುದನ್ನು ಖಚಿತಪಡಿಸಿಕೊಳ್ಳಲಿದೆ.

Published On – 1:02 pm, Sun, 10 May 26

Source link