ಪ್ರಯಾಣಿಕರೇ ಇತ್ತ ಗಮನಿಸಿ: ಮೋದಿ ಆಗಮನ ಹಿನ್ನೆಲೆ ಇಂದು ಬೆಂಗಳೂರು-ಕನಕಪುರ ರಸ್ತೆಯಲ್ಲಿ ಸಂಚಾರ ಬದಲಾವಣೆ – Kannada News | PM Modi in Bengaluru: Traffic Diversions on Kanakapura Road Today; Check Alternate Routes and Timings
ಬೆಂಗಳೂರು, ಮೇ 9: ಆರ್ಟ್ ಆಫ್ ಲಿವಿಂಗ್ ಆಶ್ರಮದ ಸಂಸ್ಥಾಪಕ ಶ್ರೀ ಶ್ರೀ ರವಿಶಂಕರ್ ಗುರೂಜಿ 70ನೇ ಜನ್ಮೋತ್ಸವ ಹಾಗೂ ಆಶ್ರಮದ 45ನೇ ವರ್ಷದ ಸಂಭ್ರಮಾಚರಣೆಯಲ್ಲಿ ಭಾಗಿಯಾಗಲು ಪ್ರಧಾನಿ ನರೇಂದ್ರ ಮೋದಿ (Narendra Modi) ಇಂದು ಸಿಲಿಕಾನ್ ಸಿಟಿ ಬೆಂಗಳೂರಿಗೆ ಆಗಮಿಸುತ್ತಿದ್ದಾರೆ. ಪ್ರಧಾನಿಯವರ ಭೇಟಿಯ ಹಿನ್ನೆಲೆಯಲ್ಲಿ ಭದ್ರತಾ ದೃಷ್ಟಿಯಿಂದ ಬೆಂಗಳೂರು-ಕನಕಪುರ ಮುಖ್ಯರಸ್ತೆಯಲ್ಲಿ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ವಾಹನ ಸಂಚಾರವನ್ನು ನಿರ್ಬಂಧಿಸಲಾಗಿದ್ದು, ಪರ್ಯಾಯ ಮಾರ್ಗಗಳನ್ನು ಬಳಸುವಂತೆ ಸಂಚಾರ ಪೊಲೀಸರು ಮನವಿ ಮಾಡಿದ್ದಾರೆ. ಮುಖ್ಯಾಂಶಗಳು ಪ್ರಧಾನಿ ಭೇಟಿ…