ನ್ಯಾಯಾಂಗಕ್ಕೆ ಅಗೌರವ ತೋರುವ ಉದ್ದೇಶವಿಲ್ಲ; NCERT ಪಠ್ಯಪುಸ್ತಕ ವಿವಾದದ ತನಿಖೆಗೆ ಕೇಂದ್ರ ಸರ್ಕಾರ ಆದೇಶ – Kannada News | We Respect judiciary Education Minister Dharmendra Pradhan orders probe into NCERT textbook row
ನವದೆಹಲಿ, ಫೆಬ್ರವರಿ 26: ಸುಪ್ರೀಂ ಕೋರ್ಟ್ “ನ್ಯಾಯಾಂಗದಲ್ಲಿ ಭ್ರಷ್ಟಾಚಾರ” ಎಂಬ ವಿವಾದಾತ್ಮಕ ಅಧ್ಯಾಯವನ್ನು NCERT 8ನೇ ತರಗತಿಯ ಸಮಾಜ ವಿಜ್ಞಾನ ಪಠ್ಯದಲ್ಲಿ ಸೇರಿಸಿದ್ದಕ್ಕೆ ಅಸಮಾಧಾನ ವ್ಯಕ್ತಪಡಿಸಿತ್ತು. ಈ ಬಗ್ಗೆ ನ್ಯಾಯಾಂಗ ನಿಂದನೆ ನೋಟಿಸ್‌ಗಳನ್ನು ನೀಡಿದ ನಂತರ ಪ್ರತಿಕ್ರಿಯಿಸಿರುವ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಸರ್ಕಾರವು ನ್ಯಾಯಾಲಯದ ನಿರ್ದೇಶನಗಳನ್ನು ಸಂಪೂರ್ಣವಾಗಿ ಪಾಲಿಸುತ್ತದೆ, ನಮ್ಮ ಸರ್ಕಾರಕ್ಕೆ ನ್ಯಾಯಾಂಗವನ್ನು ಅಗೌರವಿಸುವ ಉದ್ದೇಶವಿಲ್ಲ ಎಂದು ಹೇಳಿದ್ದಾರೆ. ನ್ಯಾಯಾಂಗದ ಬಗ್ಗೆ ಬಹಳ ಗೌರವವಿದೆ. ಆಗಿರುವ ಅಚಾತುರ್ಯವನ್ನು ತಕ್ಷಣ ಸರಿಪಡಿಸುವ ಕ್ರಮಗಳನ್ನು ತೆಗೆದುಕೊಳ್ಳಲು ಈಗಾಗಲೇ…