ಹಾಸನ ಗ್ರೀನ್‌ಫೀಲ್ಡ್ ವಿಮಾನ ನಿಲ್ದಾಣಕ್ಕೆ ಹತ್ತಾರು ವಿಘ್ನ: ಕಾಮಗಾರಿ ಮುಗಿಯೋದು ಯಾವಾಗ? – Kannada News | Hassan Airport Project Delays: UDAN Scheme Faces Funding and Land Acquisition Hurdles
ಹಾಸನ, ಫೆಬ್ರವರಿ 26: ನಿಧಿ ಕೊರತೆ ಹಾಗೂ ಭೂಸ್ವಾಧೀನ ಸಮಸ್ಯೆಗಳ ಕಾರಣದಿಂದ UDAN ಯೋಜನೆಯಡಿ ಹಾಸನದಲ್ಲಿ ನಿರ್ಮಾಣವಾಗುತ್ತಿರುವ ಗ್ರೀನ್‌ಫೀಲ್ಡ್ ವಿಮಾನ ನಿಲ್ದಾಣ ಕಾಮಗಾರಿ ವಿಳಂಬವಾಗುತ್ತಿದೆ. ಟರ್ಮಿನಲ್ ಕಟ್ಟಡ, ಏರ್ ಟ್ರಾಫಿಕ್ ಕಂಟ್ರೋಲ್ (ATC) ಗೋಪುರ, ರನ್‌ವೇ ಮತ್ತು ಏಪ್ರನ್ ಸೇರಿದಂತೆ ಶೇಕಡಾ 80ಕ್ಕೂ ಹೆಚ್ಚು ಕಾಮಗಾರಿಗಳು ಪೂರ್ಣಗೊಂಡಿದ್ದರೂ, ಹಲವು ಕೆಲಸಗಳು ಇನ್ನೂ ಬಾಕಿ ಇವೆ. ಹಾಸನ ನಗರದಿಂದ 6 ಕಿ.ಮೀ ದೂರದ ಭುವನಹಳ್ಳಿ ಗ್ರಾಮದ ಸಮೀಪ 516 ಎಕರೆ ಭೂಮಿಯಲ್ಲಿ ವಿಮಾನ ನಿಲ್ದಾಣ ನಿರ್ಮಾಣವಾಗುತ್ತಿದ್ದು, 2006ರಲ್ಲಿ ಮಾಜಿ…