ಬಿಜೆಪಿ ಸರ್ಕಾರದ ಪ್ರಮಾಣವಚನಕ್ಕೆ ಕೊಲ್ಕತ್ತಾಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ – Kannada News | PM Modi receives grand welcome at Brigade Parade grounds in Kolkata before swearing in ceremony
ಕೋಲ್ಕತ್ತಾ, ಮೇ 9: ಪಶ್ಚಿಮ ಬಂಗಾಳದಲ್ಲಿ (West Bengal) ಬಿಜೆಪಿ ಸರ್ಕಾರದ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯುತ್ತಿರುವ ಕೊಲ್ಕತ್ತಾದ ಐತಿಹಾಸಿಕ ಬ್ರಿಗೇಡ್ ಪೆರೇಡ್‌ಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದಾರೆ. ಇಂದು ಬಿಜೆಪಿ ಸರ್ಕಾರದ ಮುಖ್ಯಮಂತ್ರಿಯಾಗಿ ಸುವೇಂದು ಅಧಿಕಾರಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಕೂಡ ಪಾಲ್ಗೊಂಡಿದ್ದಾರೆ. ಪಶ್ಚಿಮ ಬಂಗಾಳಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಭೂತಪೂರ್ವ ಸ್ವಾಗತ ದೊರೆಯಿತು. ಕೊಲ್ಕತ್ತಾದ ಬ್ರಿಗೇಡ್ ಪೆರೇಡ್ ಮೈದಾನದಲ್ಲಿ ಸಮಾರಂಭ ನಡೆಯುತ್ತಿದ್ದು, ಅಲ್ಲಿಗೆ ಮೋದಿ ಆಗಮಿಸುತ್ತಿದ್ದಂತೆ “ಮೋದಿ,…