ನನ್ನ ಲೈಫ್ ಹೇಗಾಗಿದೆ ಅಂದ್ರೆ: ಒಂದು ಕಡೆ ಅಪ್ಪ ಇಲ್ಲ, ಇನ್ನೊಂದು ಕಡೆ ಅಮ್ಮನಿಗೆ ಅನಾರೋಗ್ಯ, ಕೈಯಲ್ಲಿ ಕೆಲಸ ಇಲ್ಲ – Kannada News | Unemployed Youth in Dharwad Demand Action on Vacant Posts, Criticise Government
ಧಾರವಾಡ, ಫೆ.24: ಸರ್ಕಾರಿ ಹುದ್ದೆಗಳ ಭರ್ತಿಗಾಗಿ ನಿರುದ್ಯೋಗಿ ವಿದ್ಯಾರ್ಥಿಗಳು ಮತ್ತು ಉದ್ಯೋಗಾಕಾಂಕ್ಷಿಗಳು ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ಶ್ರೀನಗರ ವೃತ್ತದಿಂದ ಜುಬಿಲಿ ವೃತ್ತದವರೆಗೆ ಮೆರವಣಿಗೆ ನಡೆಸಿದ ವಿದ್ಯಾರ್ಥಿಗಳು, ರಾಜ್ಯ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಪ್ರತಿಭಟನೆಗೆ ಸಾರ್ವಜನಿಕರಿಂದ ವ್ಯಾಪಕ ಬೆಂಬಲ ದೊರೆತಿದ್ದು, ವಿದ್ಯಾರ್ಥಿಗಳ ಹೋರಾಟ ತೀವ್ರ ಸ್ವರೂಪ ಪಡೆದುಕೊಂಡಿದೆ. ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿಯೊಬ್ಬರು ತಮ್ಮ ನೋವನ್ನು ಹಂಚಿಕೊಳ್ಳುತ್ತಾ, “ನಾನು ಕಳೆದ ಮೂರು ವರ್ಷಗಳಿಂದ ಓದಲು ಬಂದಿದ್ದೇನೆ. ನನ್ನ ತಂದೆ ಇಲ್ಲ. ನನ್ನ ತಾಯಿ ಅನಾರೋಗ್ಯದಿಂದ ಆಸ್ಪತ್ರೆಯಲ್ಲಿ…