All posts by nagaraj11081993

ಬಗೆಹರಿಸದಿದ್ರೆ ಕುಟುಂಬ ಸಮೇತ ಆತ್ಮಹತ್ಯೆ: ಸಚಿವರ ಮುಂದೆ ವಿಷದ ಬಾಟ್ಲು ಹಿಡಿದು ನಿಂತ ವ್ಯಕ್ತಿ

ಬಗೆಹರಿಸದಿದ್ರೆ ಕುಟುಂಬ ಸಮೇತ ಆತ್ಮಹತ್ಯೆ: ಸಚಿವರ ಮುಂದೆ ವಿಷದ ಬಾಟ್ಲು ಹಿಡಿದು ನಿಂತ ವ್ಯಕ್ತಿ

ದೇವನಹಳ್ಳಿ, ಏಪ್ರಿಲ್​ 02: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಜಿಲ್ಲಾಡಳಿತ ಭವನದಲ್ಲಿ ಸಚಿವ ಕೆ.ಹೆಚ್ ಮುನಿಯಪ್ಪ ನೇತೃತ್ವದಲ್ಲಿ ನಡೆದ ಡಾ. ಬಿಆರ್ ಅಂಬೇಡ್ಕರ್ ಮತ್ತು ಬಾಬು ಜಗಜೀವನ್ ರಾಂ ಜಯಂತಿ ಆಚರಣೆಯ ಪೂರ್ವಭಾವಿ ಸಭೆಯಲ್ಲಿ ಮಾತಿನ ಜಟಾಪಟಿಯೇ ನಡೆಯಿತು. ಇದೇ ವೇಳೆ ಸಚಿವರ ಎದುರೇ ವಿಷ ಕುಡಿಯುವುದಾಗಿ ರೈತರೊಬ್ಬರು ಹೇಳಿದ್ದಾರೆ. ದೇವನಹಳ್ಳಿಯ ಮುದಗುರ್ಕಿ ಗ್ರಾಮದ ನಿವಾಸಿ ಆಂಜಿನಪ್ಪ ಸಭೆಗೆ ವಿಷದ ಬಾಟಲ್ ತಂದಿದ್ದರು. 20 ಗುಂಟೆ ಜಮೀನು ವ್ಯಾಜ್ಯ ವಿಚಾರಕ್ಕೆ ಅಧಿಕಾರಿಗಳು ಕಿರುಕುಳ ನೀಡುತ್ತಿರುವ ಆರೋಪ ಮಾಡಿದ್ದಾರೆ. ಅಂಬೇಡ್ಕರ್ ಜಯಂತಿ ಒಳಗಾಗಿ ವ್ಯಾಜ್ಯ ಬಗೆ ಹರಿಸದಿದ್ದರೆ ಕುಟುಂಬ ಸಮೇತ ಸಾಮೂಹಿಕ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ. ಈ ವೇಳೆ ಪೊಲೀಸರು ವಿಷದ ಬಾಟಲ್ ಕಿತ್ತುಕೊಂಡು ಬುದ್ದಿವಾದ ಹೇಳಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Source link

ರಾಜ್ಯಸಭಾ ಉಪನಾಯಕನ ಹುದ್ದೆಯಿಂದ ವಜಾಗೊಳಿಸಿದ ಬೆನ್ನಲ್ಲೇ ರಾಘವ್ ಚಡ್ಡಾ ವಿಡಿಯೋ ರಿಲೀಸ್

ನವದೆಹಲಿ, ಏಪ್ರಿಲ್ 2: ಆಮ್ ಆದ್ಮಿ ಪಕ್ಷ (ಎಎಪಿ) ಸಂಸದ ರಾಘವ್ ಚಡ್ಡಾ (Raghav Chadha) ಅವರನ್ನು ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕನ ಹುದ್ದೆಯಿಂದ ವಜಾಗೊಳಿಸಿದೆ. ಅವರನ್ನು ತೆಗೆದುಹಾಕುವಂತೆ ಕೋರಿ ಎಎಪಿ ರಾಜ್ಯಸಭಾ ಸಚಿವಾಲಯಕ್ಕೆ ಪತ್ರ ಬರೆದಿದೆ. ಎಎಪಿಯ ವತಿಯಿಂದ ಅವರಿಗೆ ರಾಜ್ಯಸಭೆಯಲ್ಲಿ ಮಾತನಾಡುವ ಸಮಯವನ್ನು ನೀಡಬಾರದು ಎಂದು ಮನವಿ ಮಾಡಿದೆ. ಆದರೆ, ಈ ನಿರ್ಧಾರಕ್ಕೆ ಕಾರಣವೇನೆಂಬುದರ ಬಗ್ಗೆ ಪಕ್ಷ ಯಾವುದೇ ಮಾಹಿತಿ ನೀಡದಿರುವುದು ಕುತೂಹಲ ಮೂಡಿಸಿದೆ.

ಇನ್ನೊಂದೆಡೆ ರಾಘವ್ ಚಡ್ಡಾ ಕೂಡ ಈ ಸುದ್ದಿಯ ಬಗ್ಗೆ ಯಾವುದೇ ಸ್ಪಷ್ಟನೆ ನೀಡಿಲ್ಲವಾದರೂ ಈ ಸುದ್ದಿಗಳು ಮಾಧ್ಯಮಗಳಲ್ಲಿ ಪ್ರಸಾರವಾದ ಕೆಲವೇ ಗಂಟೆಗಳಲ್ಲಿ ರಾಜ್ಯಸಭಾ ಅಧಿವೇಶನದಲ್ಲಿ ತಾವು ಮಾಡಿದ ಭಾಷಣದ, ಹೈಲೈಟ್ ಮಾಡಿದ ಸಮಸ್ಯೆಗಳ ಕುರಿತಾದ ವಿಡಿಯೋವನ್ನು ಬಿಡುಗಡೆ ಮಾಡಿದ್ದಾರೆ. ಈ ವಿಡಿಯೋ ಮೇಲೆ ಕೆಟ್ಟ ದೃಷ್ಟಿ ತಾಗದಿರಲಿ ಎಂಬ ಇಮೋಜಿ ಕೂಡ ಹಾಕಿದ್ದಾರೆ.

ರಾಘವ್ ಚಡ್ಡಾ ಅವರು ಸಂಸತ್ತಿನಲ್ಲಿ ಎತ್ತಿದ್ದ ಸಮಸ್ಯೆಗಳ ಕೊಲಾಜ್ ಹೊಂದಿರುವ ವೀಡಿಯೊವನ್ನು ಹಂಚಿಕೊಂಡಿದ್ದು, ಇದು ರಾಷ್ಟ್ರವ್ಯಾಪಿ ಗಮನ ಸೆಳೆದಿದೆ. ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳ ಡೆಲಿವರಿ ವ್ಯಕ್ತಿಗಳಿಗೆ ಸೌಲಭ್ಯಗಳು, ಪಿತೃತ್ವ ರಜೆ, ಆಹಾರ ಕಲಬೆರಕೆ, ಮೊಬೈಲ್ ಡೇಟಾ ಬಳಕೆ ಮತ್ತು ವಿಮಾನ ವಿಳಂಬದಂತಹ ಸಮಸ್ಯೆಗಳ ಬಗ್ಗೆ ಮಾತನಾಡಿರುವುದನ್ನು ಕಾಣಬಹುದು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

KKR vs SRH Viral Moment: 4,4,6,6,4.. ಮೊದಲ ಓವರ್​ನಲ್ಲೇ ಅಬ್ಬರಿಸಿದ ಅಲೆನ್

ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಐಪಿಎಲ್ 2026 ರ 6ನೇ ಪಂದ್ಯದಲ್ಲಿ ಕೆಕೆಆರ್ ತಂಡ, ಸನ್‌ರೈಸರ್ಸ್ ಹೈದರಾಬಾದ್ ತಂಡವನ್ನು ಎದುರಿಸಿತ್ತು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಸನ್‌ರೈಸರ್ಸ್ 226 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಕೆಕೆಆರ್ ಪರ ಆರಂಭಿಕ ಫಿನ್ ಅಲೆನ್ ಮೊದಲ ಓವರ್​ನಲ್ಲೇ ಬೌಂಡರಿ ಹಾಗೂ ಸಿಕ್ಸರ್​ಗಳ ಮಳೆಗರೆದು 25 ರನ್ ಕಲೆಹಾಕಿದರು.

ಸನ್‌ರೈಸರ್ಸ್ ಪರ ಡೇವಿಡ್ ಪೇನ್ ಮೊದಲ ಓವರ್ ಬೌಲ್ ಮಾಡಿದರು. ಈ ಓವರ್​ನ ಮೊದಲ ಎಸೆತವನ್ನು ಎದುರಿಸಿದ ನಾಯಕ ಅಜಿಂಕ್ಯ ರಹಾನೆ ಸಿಂಗಲ್ ತೆಗೆದುಕೊಂಡು ಅಲೆನ್​ಗೆ ಸ್ಟ್ರೈಕ್ ನೀಡಿದರು. ಅಲೆನ್ ತಾವು ಎದುರಿಸಿದ ಮೊದಲ ಎಸೆತವನ್ನೇ ಬೌಂಡರಿಗಟ್ಟಿದರು. ನಂತರದ ಎರಡು ಎಸೆತಗಳಲ್ಲಿ ಭರ್ಜರಿ ಸಿಕ್ಸರ್ ಬಾರಿಸಿದರು. ಕೊನೆಯ ಎರಡು ಎಸೆತಗಳಲ್ಲಿ ಬೌಂಡರಿ ಬಂತು. ಈ ಮೂಲಕ ಅಲೆನ್ ತಾವು ಎದುರಿಸಿದ ಐದು ಎಸೆತಗಳಲ್ಲಿ 24 ರನ್ ಕಲೆಹಾಕಿದರು.

ಆ ಬಳಿಕವೂ ಅಬ್ಬರಿಸಿದ ಅಲೆನ್ ಮುಂದಿನ ಓವರ್​ನಲ್ಲಿ ಎದುರಿಸಿದ ಮೊದಲ ಎಸೆತವನ್ನು ಬೌಂಡರಿಗಟ್ಟಿದರು. ಆದರೆ ಮುಂದಿನ ಎಸೆತದಲ್ಲಿ ಮತ್ತೊಂದು ಬೌಂಡರಿ ಬಾರಿಸಲು ಯತ್ನಿಸಿ ಬೌಲರ್ ಹರ್ಷ್ ದುಬೆಗೆ ಕ್ಯಾಚಿತ್ತು ಔಟಾದರು. ಅಂತಿಮವಾಗಿ ಅಲೆನ್ ತಮ್ಮ ಇನ್ನಿಂಗ್ಸ್​ನಲ್ಲಿ 7 ಎಸೆತಗಳನ್ನು ಎದುರಿಸಿ 4 ಬೌಂಡರಿ ಹಾಗೂ 2 ಸಿಕ್ಸರ್ ಸಹಿತ 28 ರನ್ ಬಾರಿಸಿ ಔಟಾದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ರಾಜ್ಯಸಭಾ ಸದಸ್ಯರಾಗಿ ಏ. 10ಕ್ಕೆ ನಿತೀಶ್ ಕುಮಾರ್ ಪ್ರಮಾಣವಚನ ಸ್ವೀಕಾರ; ಏಪ್ರಿಲ್ ಮಧ್ಯದಲ್ಲಿ ಬಿಹಾರದಲ್ಲಿ ಹೊಸ ಸರ್ಕಾರ ರಚನೆ

ನವದೆಹಲಿ, ಏಪ್ರಿಲ್ 2: ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ (Nitish Kumar) ಅವರು ತಮ್ಮ ಪ್ರಸ್ತುತ ಹುದ್ದೆಯಿಂದ ಕೆಳಗಿಳಿಯುವ ಸಾಧ್ಯತೆಯಿದ್ದು, ರಾಜ್ಯಸಭೆಗೆ ಪ್ರವೇಶಿಸಲು ಸಜ್ಜಾಗಿದ್ದಾರೆ. ನಿತೀಶ್ ಕುಮಾರ್ ಏಪ್ರಿಲ್ 10ರಂದು ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಅವರು ಏಪ್ರಿಲ್ 9ರಂದು ಪಾಟ್ನಾದಿಂದ ದೆಹಲಿಗೆ ಪ್ರಯಾಣಿಸಿ ದೆಹಲಿಯಲ್ಲಿ ಉಳಿಯಲಿದ್ದು, ಈ ಭೇಟಿಯ ಸಮಯದಲ್ಲಿ ಅವರು ಹಿರಿಯ ಬಿಜೆಪಿ ನಾಯಕರೊಂದಿಗೆ ಸಭೆ ನಡೆಸುವ ಸಾಧ್ಯತೆಯಿದೆ.

ನಿತೀಶ್ ಕುಮಾರ್ ಪಾಟ್ನಾಗೆ ಹಿಂದಿರುಗಿದ ಸ್ವಲ್ಪ ಸಮಯದ ನಂತರ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆಯಿದೆ. ಇದು ಬಿಹಾರದಲ್ಲಿ ಹೊಸ ಸರ್ಕಾರ ರಚನೆಗೆ ದಾರಿ ಮಾಡಿಕೊಡುತ್ತದೆ ಎಂದು ಜೆಡಿಯು ಮೂಲಗಳು ತಿಳಿಸಿವೆ. ಏಪ್ರಿಲ್ 11ರಂದು ಅಥವಾ ನಂತರ ಅವರು ಬಿಹಾರಕ್ಕೆ ಮರಳುವ ನಿರೀಕ್ಷೆಯಿದೆ. ಇದಾದ ಬಳಿಕ ಬಿಹಾರದಲ್ಲಿ ಹೊಸ ಸರ್ಕಾರ ರಚನೆಯಾಗುವ ನಿರೀಕ್ಷೆಯಿದೆ. ಏಪ್ರಿಲ್ ಮಧ್ಯಭಾಗದಲ್ಲಿ ಹೊಸ ಸರ್ಕಾರ ರಚನೆಯಾಗಲಿದೆ ಎನ್ನಲಾಗಿದೆ.

ಇದನ್ನೂ ಓದಿ: ನಿತೀಶ್ ಕುಮಾರ್ ಮಾರ್ಚ್​ 30ರಂದು ಬಿಹಾರ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆ

ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ರಾಜ್ಯಸಭೆಗೆ ಪ್ರವೇಶಿಸಿದ ನಂತರ Z-ಪ್ಲಸ್ ಭದ್ರತೆಯನ್ನು ಪಡೆಯುತ್ತಾರೆ ಎಂದು ರಾಜ್ಯ ಗೃಹ ಇಲಾಖೆ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಲಾಗಿದೆ ಎಂದು ಪಿಟಿಐ ವರದಿ ತಿಳಿಸಿದೆ.

ಮಾರ್ಚ್ 16ರಂದು ರಾಜ್ಯಸಭೆಗೆ ಆಯ್ಕೆಯಾದ ನಿತೀಶ್ ಕುಮಾರ್ ಈ ತಿಂಗಳು ನಿವೃತ್ತರಾಗುವ ಸದಸ್ಯರ ಅವಧಿ ಮುಗಿದ ನಂತರ ತಮ್ಮ ಹೊಸ ಹುದ್ದೆಯನ್ನು ವಹಿಸಿಕೊಳ್ಳುವ ನಿರೀಕ್ಷೆಯಿದೆ. ಬಿಹಾರದ 5 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆಗಳು ನಡೆದಿದ್ದು, ಅವರ ಅಧಿಕಾರಾವಧಿ ಏಪ್ರಿಲ್ 9ರಂದು ಕೊನೆಗೊಳ್ಳಲಿದೆ.

ಇದನ್ನೂ ಓದಿ: Nitish Kumar: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಎಂಎಲ್​ಸಿ ಸ್ಥಾನಕ್ಕೆ ರಾಜೀನಾಮೆ

ನಿತೀಶ್ ಕುಮಾರ್ ತಮ್ಮ ಸುದೀರ್ಘ ವೃತ್ತಿಜೀವನದಲ್ಲಿ ಪ್ರತಿನಿಧಿಸದ ಏಕೈಕ ಸದನವಾದ ರಾಜ್ಯಸಭೆಗೆ ಪಾದಾರ್ಪಣೆ ಮಾಡಲು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧರಾಗಿದ್ದಾರೆ. ಇದು ರಾಜ್ಯ ವಿಧಾನಸಭೆಯಲ್ಲಿ ಅತಿದೊಡ್ಡ ಪಕ್ಷವಾದ ಬಿಜೆಪಿಗೆ ಬಿಹಾರದಲ್ಲಿ ಮೊದಲ ಬಾರಿಗೆ ಮುಖ್ಯಮಂತ್ರಿಯಾಗುವ ಅವಕಾಶವನ್ನು ನೀಡುವ ಸಾಧ್ಯತೆಯಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಲೋಕಾಯುಕ್ತ ಭರ್ಜರಿ ಕಾರ್ಯಚರಣೆ: ಲಂಚ ಪಡೆಯುವಾಗ ಸಿಕ್ಕಿಬಿದ್ದ ಹಲವು ಅಧಿಕಾರಿಗಳು

ಯಾದಗಿರಿ, ಏಪ್ರಿಲ್​ 02: ಗುತ್ತಿಗೆದಾರನಿಂದ ಲಂಚ (Bribe) ಸ್ವೀಕರಿಸುತ್ತಿದ್ದ ವೇಳೆ ಕೆಬಿಜೆಎನ್ಎಲ್ ಭೀಮರಾಯನಗುಡಿ ವಿಭಾಗದ ಎಇಇ ಮತ್ತು ಜೆಇ ಲೋಕಾಯುಕ್ತ (Lokayukta) ಬಲೆಗೆ ಬಿದ್ದಿದ್ದಾರೆ. ಎಇಇ ಮಧುಸೂದನ್ ಮತ್ತು ಜೆಇ ಮಂಜುನಾಥ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿಗಳು. ಲೋಕಾಯುಕ್ತ ಡಿವೈಎಸ್​ಪಿ ಜೆ.ಹೆಚ್.ಇನಾಂದಾರ್ ನೇತೃತ್ವದಲ್ಲಿ ದಾಳಿ ಮಾಡಿ ಇಬ್ಬರು ಅಧಿಕಾರಿಗಳನ್ನು ವಶಕ್ಕೆ ಪಡೆಯಲಾಗಿದೆ.

ರೆಡ್ ಹ್ಯಾಂಡ್ ಆಗಿ ಬಲೆಗೆ ಬಿದ್ದ ಅಧಿಕಾರಿಗಳು

ಎಇಇ ಮಧುಸೂದನ್ ಮತ್ತು ಜೆಇ ಮಂಜುನಾಥ ಕಾಮಗಾರಿ ಬಿಲ್ ಮಂಜೂರು ಮಾಡಲು ಗುತ್ತಿಗೆದಾರ ಖಾಸಿಂ ಸಾಬ್​ನಿಂದ 35 ಸಾವಿರ ರೂಪಾಯಿಗೆ ಬೇಡಿಕೆ ಇಟ್ಟಿದ್ದರು. ಇತ್ತ ಅಧಿಕಾರಿಗಳು ಲಂಚಕ್ಕೆ ಬೇಡಿಕೆಯಿಟ್ಟ ಬಗ್ಗೆ ಗುತ್ತಿಗೆದಾರ ದೂರು ಕೂಡ ನೀಡಿದ್ದ. ಇಂದು ಫೋನ್​ಪೇ ಮೂಲಕ ಲಂಚ ಸ್ವೀಕರಿಸಲು ಮುಂದಾದಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಇಬ್ಬರು ಅಧಿಕಾರಿಗಳನ್ನು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ.

3 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ ಜಿಬಿಎ ಅಧಿಕಾರಿಗಳು ಲೋಕಾ ಬಲೆಗೆ

ಇನ್ನು ಇತ್ತ ಬೆಂಗಳೂರಿನ ಥಣಿಸಂದ್ರದಲ್ಲಿ ಕೂಡ ಜಿಬಿಎ ಅಧಿಕಾರಿಗಳಿಬ್ಬರು ಲಂಚ ಸ್ವೀಕರಿಸುವಾಗ ಲೋಕಾ ಬಲೆಗೆ ಬಿದಿದ್ದಾರೆ. ಆರ್​ಐ​ ವೆಂಕಟೇಶ್ ಮತ್ತು ತೆರಿಗೆ ಅಧಿಕಾರಿ ಶ್ರೀನಿವಾಸ್ ಲೋಕಾಯುಕ್ತ ಬಲೆಗೆ ಬಿದಿದ್ದಾರೆ.  ಕಟ್ಟಡದ ಖಾತೆ ಮಾಡಿಕೊಡಲು 3 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು.

ಇದನ್ನೂ ಓದಿ: ಬೆಂಗಳೂರಿನಲ್ಲಿ ಮಂತ್ರಿ ಬಿಲ್ಡರ್ಸ್ ಮೇಲೆ ಇಡಿ ದಾಳಿ: ಮತ್ತೆ ಶಾಕ್​ ಕೊಟ್ಟ ದೆಹಲಿ ಅಧಿಕಾರಿಗಳು

ಬೆಂಗಳೂರಿನ ಥಣಿಸಂದ್ರದಲ್ಲಿ ನ್ಯಾಮತುಲ್ಲಾ ಖಾನ್​ ಎಂಬುವವರಿಂದ 3 ಲಕ್ಷ ರೂಪಾಯಿ ಲಂಚ ಸ್ವೀಕರಿಸುವಾಗ ಇಬ್ಬರು ಅಧಿಕಾರಿಗಳು ರೆಡ್​ಹ್ಯಾಂಡ್​ ಆಗಿ ಲೋಕಾಯುಕ್ತ ಅಧಿಕಾರಿಗಳು ಹಿಡಿದಿದ್ದಾರೆ. ಈ ಬಗ್ಗೆ ನ್ಯಾಮತುಲ್ಲಾ ಖಾನ್​ ದೂರು ನೀಡಿದ್ದರು. ಹೀಗಾಗಿ ಲೋಕಾಯುಕ್ತ ಎಸ್​ಪಿ ವಂಶಿಕೃಷ್ಣ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಸದ್ಯ ಇಬ್ಬರು ಅಧಿಕಾರಿಗಳನ್ನು ವಶಕ್ಕೆ ಪಡೆಯಲಾಗಿದೆ.

ಕೈದಿಯ ಕೂಲಿ ಹಣಕ್ಕೆ ಲಂಚ ಕೇಳಿದ ಅಧಿಕಾರಿ ಲೋಕಾ ಬಲೆಗೆ

ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ಉಪಕಾರಾಗೃಹದಲ್ಲಿ ಕೈದಿಯ ಕೂಲಿ ಹಣಕ್ಕೆ ಲಂಚ ಕೇಳಿದ ಅಧಿಕಾರಿ ಲೋಕಾ ಬಲೆಗೆ ಬಿದಿದ್ದಾರೆ. ಕಲ್ಲಪ್ಪ ಗಸ್ತಿ ಲೋಕಾಯುಕ್ತ ಬಲೆಗೆ ಬಿದ್ದ ಉಪ ಕಾರಾಗೃಹದ ಅಧೀಕ್ಷಕ. ಕೊಲೆ ಆರೋಪಿ ರಾಜಕುಮಾರ್​ ಹುಂದೇಕರನಿಂದ ಹಣಕ್ಕೆ ಬೇಡಿಕೆ ಇಟ್ಟಿದ್ದರು.

ಇದನ್ನೂ ಓದಿ: ಜಿಎಸ್​ಟಿ ಹೆಸರಿನಲ್ಲಿ ಲಂಚ ಕೇಳಿದ ಕಮರ್ಷಿಯಲ್ ಟ್ಯಾಕ್ಸ್ ಅಡಿಟ್ ಡಿಸಿ ಭರತ್ ಹೆಗಡೆ ಲೋಕಾಯುಕ್ತ ಬಲೆಗೆ!

ಹಳಿಯಾಳ ತಾಲೂಕಿನ ಯಡೋಗಾ ಗ್ರಾಮದ ರಾಜಕುಮಾರ್ 2022ರಲ್ಲಿ ಪತ್ನಿಯ ಕತ್ತು ಸಿಳಿ ಜೈಲು ಪಾಲಾಗಿದ್ದ. ಕೊಲೆ ಆರೋಪದ ಮೇರೆಗೆ ಎರಡು ವರ್ಷ ಜೈಲು ಸೇರಿದ್ದ. ಜಾಮೀನು ಸಿಕ್ಕ ಹಿನ್ನೆಲೆ ಜೈಲಿನಿಂದ ಹೊರ ಬಂದಿದ್ದ. ಎರಡು ವರ್ಷ ಜೈಲಿನಲ್ಲಿ ಕೂಲಿ ಕೆಲಸ ಮಾಡಿ 1 ಲಕ್ಷ 40 ಸಾವಿರ ರೂ ಸಂಪಾದಿಸಿದ್ದ. ಜೈಲಿನ ಕೂಲಿ ವೇತನ ನೀಡಲು ಜೈಲರ್​ನಿಂದ 60 ಸಾವಿರ ರೂ ಬೇಡಿಕೆ ಇಟ್ಟಿದ್ದರು. ಹಣವನ್ನು ಧಾರವಾಡದ ಮಹಿಳಾ ವಕೀಲೆಯೊಬ್ಬರಿಗೆ ಫೋನ್​​​ ಪೇ ಮಾಡಲು ತಾಕೀತು ಮಾಡಿದ್ದರು. ಹಣಕ್ಕೆ ಪೀಡಿಸಿದ್ದರಿಂದ ರಾಜಕುಮಾರ್ ಹುಂದೇಕರ್ ಲೋಕಾಯುಕ್ತಕ್ಕೆ ದೂರು ನೀಡಿದ್ದ. ಲೋಕಾಯುಕ್ತ ಎಸ್.ಪಿ ಧನ್ಯ ನಾಯ್ಕ, ಸಿಪಿಐ ವಿನಾಯಕ್ ಬಿಲ್ಲವ ತಂಡದಿಂದ ದಾಳಿ ಹಿಡಿದಿದ್ದಾರೆ. ಸದ್ಯ ಜೈಲರ್​ಗೆ ನೋಟಿಸ್ ನೀಡಿ ಬಿಡುಗಡೆ ಮಾಡಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

KKR vs SRH : ವೃತ್ತಿಜೀವನದ ಬೆಸ್ಟ್ ಕ್ಯಾಚ್ ಹಿಡಿದ ವರುಣ್ ಚಕ್ರವರ್ತಿ; ಹುಟ್ಟಿಕೊಳ್ತು ವಿವಾದ

ಕೋಲ್ಕತ್ತಾ ನೈಟ್ ರೈಡರ್ಸ್​ ವಿರುದ್ಧ ನಡೆದ ಐಪಿಎಲ್ 2026 ರ (IPL 2026) 6ನೇ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ (KKR vs SRH) ತಂಡದ ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ (Abhishek Sharma) 48 ರನ್‌ಗಳ ಅಬ್ಬರದ ಇನ್ನಿಂಗ್ಸ್ ಆಡಿದರು. ಅವರ ಈ ಇನ್ನಿಂಗ್ಸ್​ನಲ್ಲಿ 4 ಸಿಕ್ಸರ್‌ಗಳು ಮತ್ತು 4 ಬೌಂಡರಿಗಳು ಸೇರಿದ್ದವು. ಆದರೆ ಅವರ ವಿಕೆಟ್ ಈಗ ದೊಡ್ಡ ವಿವಾದಕ್ಕೆ ಕಾರಣವಾಗಿದೆ. ಅಭಿಷೇಕ್ ಶರ್ಮಾ ಅವರ ವಿಕೆಟ್ ಅನ್ನು ಬ್ಲೆಸ್ಸಿಂಗ್ ಮುಜರಬಾನಿ ಪಡೆದರಾದರೂ, ವರುಣ್ ಚಕ್ರವರ್ತಿ (Varun Chakravarthy) ಹಿಡಿದ ಕ್ಯಾಚ್ ಇದೀಗ ವಿವಾದ ಸೃಷ್ಟಿಸಿದೆ. 9 ನೇ ಓವರ್‌ನ ನಾಲ್ಕನೇ ಎಸೆತದಲ್ಲಿ ಅಭಿಷೇಕ್ ಶರ್ಮಾ ದೊಡ್ಡ ಶಾಟ್ ಆಡಿದರು, ಆದರೆ ಸ್ಕ್ವೇರ್ ಲೆಗ್ ಬೌಂಡರಿಯಲ್ಲಿ ನಿಂತಿದ್ದ ವರುಣ್ ಚಕ್ರವರ್ತಿ ಅದ್ಭುತ ಕ್ಯಾಚ್ ತೆಗೆದುಕೊಂಡರು.

ಅಭಿಷೇಕ್ ಶರ್ಮಾ ಔಟ್?

ವರುಣ್ ಚಕ್ರವರ್ತಿ ಕ್ಯಾಚ್ ಹಿಡಿದ ವಿಡಿಯೋವನ್ನು ಮೂರನೇ ಅಂಪೈರ್ ಪರಿಶೀಲಿಸಿದಾಗ, ಚೆಂಡು ನೆಲಕ್ಕೆ ತಾಗಿರುವಂತೆ ಕಂಡುಬಂದಿತು. ಚಕ್ರವರ್ತಿ ಕ್ಯಾಚ್ ತೆಗೆದುಕೊಳ್ಳುವ ಮೊದಲೇ ಚೆಂಡು ನೆಲಕ್ಕಪಳಿಸಿದಂತೆ ಕಾಣಿಸಿತು ಆದರೆ, ಮೂರನೇ ಅಂಪೈರ್ ಅಭಿಷೇಕ್ ಔಟ್ ಎಂದು ಘೋಷಿಸಿದರು. ಇದೀಗ ಅಭಿಷೇಕ್ ಔಟ್ ಆದ ನಂತರ ಅಭಿಮಾನಿಗಳು ಸಾಮಾಜಿಕ ಮಾಧ್ಯಮದಲ್ಲಿ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದು, ಅಭಿಷೇಕ್ ಔಟ್ ಆಗಿಲ್ಲ ಎಂಬುದು ಅವರ ಅಭಿಪ್ರಾಯವಾಗಿದೆ.

ಅರ್ಧಶತಕ ವಂಚಿತರಾದ ಅಭಿ

ವರುಣ್ ಚಕ್ರವರ್ತಿಯ ಕ್ಯಾಚ್‌ನಿಂದ ಅಭಿಷೇಕ್ ಶರ್ಮಾ 48 ರನ್​ಗಳಿಗೆ ಔಟಾದರು. ಕುತೂಹಲಕಾರಿ ಸಂಗತಿಯೆಂದರೆ ಇದೇ ವರುಣ್ ಬೌಲಿಂಗ್​ನಲ್ಲಿ, ಅಭಿಷೇಕ್ ಬೌಂಡರಿ, ಸಿಕ್ಸರ್​ಗಳ ಮಳೆಗರೆದಿದ್ದರು. ವರುಣ್ ಅವರ ಓವರ್‌ನಲ್ಲಿ ಅಭಿಷೇಕ್ ಎರಡು ಸಿಕ್ಸರ್‌ಗಳು ಮತ್ತು ಮೂರು ಬೌಂಡರಿಗಳನ್ನು ಒಳಗೊಂಡಂತೆ 25 ರನ್‌ ಕಲೆಹಾಕಿದ್ದರು. ಅಲ್ಲದೆ ಅಭಿಷೇಕ್ ಶರ್ಮಾ ಮತ್ತು ಟ್ರಾವಿಸ್ ಹೆಡ್ ಜೊತೆಗೂಡಿ 34 ಎಸೆತಗಳಲ್ಲಿ 82 ರನ್‌ಗಳ ಜತೆಯಾಟ ನಿರ್ಮಿಸಿದ್ದರು.

KKR vs SRH IPL 2026 Live Score: ಕೆಕೆಆರ್​​ ಮೊದಲ ವಿಕೆಟ್ ಪತನ

ದುಬಾರಿಯಾದ ವರುಣ್ ಚಕ್ರವರ್ತಿ

ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ವರುಣ್ ಚಕ್ರವರ್ತಿ ಕೇವಲ ಎರಡು ಓವರ್‌ಗಳನ್ನು ಎಸೆದು 31 ರನ್‌ಗಳನ್ನು ನೀಡಿದರು. ಹಿಂದಿನ ಪಂದ್ಯದಲ್ಲೂ ಕಳಪೆ ಬೌಲಿಂಗ್ ಪ್ರದರ್ಶಿಸಿದ ವರುಣ್, ಮುಂಬೈ ಇಂಡಿಯನ್ಸ್ ವಿರುದ್ಧ ನಾಲ್ಕು ಓವರ್‌ಗಳಲ್ಲಿ 48 ರನ್‌ಗಳನ್ನು ನೀಡಿದ್ದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

‘ಜನ ನಾಯಗನ್’ ಸಿನಿಮಾ ತಡ ಆಗಿದ್ದಕ್ಕೆ ನನಗೆ ನ್ಯಾಯ ಬೇಕು: ಗುಡುಗಿದ ವಿಜಯ್

ತಮಿಳು ಚಿತ್ರರಂಗದ ಖ್ಯಾತ ನಟ ಮತ್ತು ತಮಿಳಗ ವೆಟ್ರಿ ಕಳಗಂ (TVK) ಪಕ್ಷದ ಸಂಸ್ಥಾಪಕ ಹಾಗೂ ಅಧ್ಯಕ್ಷರಾದ ದಳಪತಿ ವಿಜಯ್ ಅವರು ಮುಂಬರುವ ತಮಿಳುನಾಡು ವಿಧಾನಸಭಾ ಚುನಾವಣೆಗೆ ಅಧಿಕೃತವಾಗಿ ತಿರುಚನಾಪಳ್ಳಿಯಲ್ಲಿ (ತಿರುಚಿ) ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಕೆಯ ನಂತರ ಅಲ್ಲಿ ನೆರೆದಿದ್ದ ಅಪಾರ ಜನಸ್ತೋಮವನ್ನು ಉದ್ದೇಶಿಸಿ ಮಾತನಾಡಿದ ದಳಪತಿ ವಿಜಯ್ (Thalapathy Vijay) ಅವರು, ತಮ್ಮ ಕೊನೆಯ ಚಿತ್ರ ‘ಜನ ನಾಯಗನ್’ (Jana Nayagan) ಬಿಡುಗಡೆಯ ವಿಳಂಬದ ಹಿಂದೆ ದೊಡ್ಡ ರಾಜಕೀಯ ಷಡ್ಯಂತ್ರವಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

‘ನನ್ನನ್ನು ವಿರೋಧಿಸಲು ಎಲ್ಲಾ ಪಕ್ಷಗಳೂ ಹೇಗೆ ಒಂದಾಗಿವೆ ಎಂಬುದನ್ನು ನಾನು ನಿಮಗೆ ಹೇಳಬೇಕಾಗಿಲ್ಲ. 40ಕ್ಕೂ ಹೆಚ್ಚು ಜೀವಗಳನ್ನು ಬಲಿ ಪಡೆದ ಕರೂರ್ ಕಾಲ್ತುಳಿತದ ಘಟನೆ ಮತ್ತು ನನ್ನ ಕೊನೆಯ ಸಿನಿಮಾ ಜನ ನಾಯಗನ್ ಬಿಡುಗಡೆಯಾಗದಂತೆ ತಡೆದಿರುವುದರ ಹಿಂದೆ ದೊಡ್ಡ ಷಡ್ಯಂತ್ರವಿದೆ. ಚುನಾವಣೆಯಲ್ಲಿ ಆ ಸಿನಿಮಾ ಪ್ರಬಲ ಅಸ್ತ್ರವಾಗುತ್ತದೆ ಎಂಬ ಭಯ ಅವರಿಗಿದೆ. ಒಬ್ಬ ಸಹೋದರನಾಗಿ, ಮಗನಾಗಿ ನಿಮ್ಮ ವಿಜಯ್‌ಗೆ ನ್ಯಾಯ ಬೇಕು’ ಎಂದು ಅವರು ಭಾವುಕರಾಗಿ ನುಡಿದರು.

‘ನಾನು ಬೇಕಿದ್ದರೆ ಐಷಾರಾಮಿ ಜೀವನ ನಡೆಸಬಹುದಿತ್ತು. ಆದರೆ ನಿಮ್ಮ ಸೇವೆ ಮಾಡಲು, ನಿಮ್ಮ ಪ್ರೀತಿಯ ಕೃತಜ್ಞತೆ ತೀರಿಸಲು ಮತ್ತು ನೋವುಗಳನ್ನು ಹಂಚಿಕೊಳ್ಳಲು ನಾನು ಇಲ್ಲಿಗೆ ಬಂದಿದ್ದೇನೆ. ನಾನು ನಿಮಗೆ ಎಂದಿಗೂ ಸುಳ್ಳು ಹೇಳುವುದಿಲ್ಲ ಅಥವಾ ಮೋಸ ಮಾಡುವುದಿಲ್ಲ’ ಎಂದು ವಿಜಯ್ ಅವರು ಅಭಿಮಾನಿಗಳಿಗೆ ಭರವಸೆ ನೀಡಿದರು.

ಇದೇ ವೇಳೆ ಡಿಎಂಕೆ ವಿರುದ್ಧ ಅವರು ನೇರ ವಾಗ್ದಾಳಿ ಮಾಡಿದರು. ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಜನರ ವಿರುದ್ಧ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದ ವಿಜಯ್, ಪ್ರಸ್ತುತ ಡಿಎಂಕೆ ಸರ್ಕಾರವನ್ನು ‘ದುಷ್ಟ ಶಕ್ತಿ’ ಎಂದು ಕರೆದರು. ಅಲ್ಲದೆ, ಈ ಸರ್ಕಾರವನ್ನು ಅಧಿಕಾರದಿಂದ ಕಿತ್ತೊಗೆಯುವಂತೆ ಮತದಾರರಲ್ಲಿ ಮನವಿ ಮಾಡಿದರು.

ಇದನ್ನೂ ಓದಿ: ಅನಾರೋಗ್ಯದ ಕಾರಣ ಕೊಟ್ಟು ‘ಜನ ನಾಯಗನ್’ ನೋಡೋದನ್ನು ಮುಂದಕ್ಕೆ ಹಾಕಿದ ರಿವಿಶನ್ ಸಮಿತಿ

ಎಚ್. ವಿನೋದ್ ನಿರ್ದೇಶನದ ‘ಜನ ನಾಯಕನ್’ ಸಿನಿಮಾ ಜನವರಿ 9ರಂದೇ ಬಿಡುಗಡೆ ಆಗಬೇಕಿತ್ತು. ಚಿತ್ರದ ವಿಳಂಬದಿಂದಾಗಿ ಸುಮಾರು 100 ಕೋಟಿ ರೂಪಾಯಿಗೂ ಹೆಚ್ಚು ನಷ್ಟವಾಗುತ್ತದೆ ಎಂದು ಚಿತ್ರದ ನಿರ್ಮಾಣ ಸಂಸ್ಥೆಯಾದ ‘ಕೆವಿಎನ್ ಪ್ರೊಡಕ್ಷನ್ಸ್’ ನ್ಯಾಯಾಲಯದಲ್ಲಿ ವಾದಿಸಿತ್ತು. ಆದರೆ ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿಯಿಂದ ಪ್ರಮಾಣಪತ್ರ ಪಡೆಯುವಲ್ಲಿನ ವಿಳಂಬದಿಂದಾಗಿ ಚಿತ್ರದ ಬಿಡುಗಡೆ ಮುಂದೂಡಲ್ಪಟ್ಟಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಇರಾನ್ ಯುದ್ಧದಿಂದೀಚೆ ಹೂಡಿಕೆದಾರರಿಗೆ 41 ಲಕ್ಷ ರೂ ನಷ್ಟ; ಷೇರುಗಳಲ್ಲಿ ಹೂಡಿಕೆ ಮಾಡುವ ಸಮಯವಾ?

ನವದೆಹಲಿ, ಏಪ್ರಿಲ್ 2: ಇರಾನ್ ಯುದ್ಧಕ್ಕೆ ಮೊದಲು ಚೇತರಿಕೆಯ ಹಾದಿಯಲ್ಲಿದ್ದ ಭಾರತೀಯ ಷೇರು ಮಾರುಕಟ್ಟೆ (stock market) ಈಗ ಮತ್ತೆ ತತ್ತರಿಸುತ್ತಿದೆ. ಇರಾನ್ ಯುದ್ಧ ಆರಂಭವಾದ ಬಳಿಕ ಗಡಗಡ ನಡುಗುತ್ತಿದೆ. ಮಾರ್ಚ್ ತಿಂಗಳಲ್ಲಿ ಸೆನ್ಸೆಕ್ಸ್ ಮತ್ತು ನಿಫ್ಟಿ ಸೂಚ್ಯಂಕಗಳು ಶೇ 11ರಷ್ಟು ಕುಸಿತ ಕಂಡಿವೆ. ಹೆಚ್ಚಿನ ಸೂಚ್ಯಂಕಗಳು ಶೇ. 10ಕ್ಕಿಂತಲೂ ಹೆಚ್ಚಿನ ಕುಸಿತ ಕಂಡಿವೆ.

ಇಸ್ರೇಲ್ ಮತ್ತು ಅಮೆರಿಕ ದೇಶಗಳು ಇರಾನ್ ಮೇಲೆ ದಾಳಿ ಮಾಡುವ ಮುನ್ನ, ಅಂದರೆ ಫೆಬ್ರುವರಿ 27ರಂದು ಬಿಎಸ್​ಇಯಲ್ಲಿ ಲಿಸ್ಟ್ ಆಗಿರುವ ಕಂಪನಿಗಳ ಒಟ್ಟು ಷೇರು ಸಂಪತ್ತು 463.5 ಲಕ್ಷ ಕೋಟಿ ರೂ ಇತ್ತು. ಇವತ್ತು ಏಪ್ರಿಲ್ 2ರಂದು ಇವುಗಳ ಒಟ್ಟು ಮಾರುಕಟ್ಟೆ ಬಂಡವಾಳ 422.4 ಲಕ್ಷ ಕೋಟಿ ರೂ ಇದೆ. ಅಂದರೆ, ಬರೋಬ್ಬರಿ 41 ಲಕ್ಷ ಕೋಟಿ ರೂ ಷೇರುಸಂಪತ್ತು ಕುಸಿದಿದೆ. ಹೂಡಿಕೆದಾರರಿಗೆ 41 ಲಕ್ಷ ಕೋಟಿ ರೂ ನಷ್ಟ ಆಗಿದೆ.

ಇದನ್ನೂ ಓದಿ: ಬೆಂಗಳೂರಿನ ಶೇ. 80 ಐಟಿ ಕೂಲಿಗಳಿಗೆ ಇನ್ನು 3 ವರ್ಷದಲ್ಲಿ ಕೆಲಸ ಇರೋದಿಲ್ಲ: ಶಾಕ್ ಕೊಟ್ಟಿದೆ ರೆಡ್ಡಿಟ್ ಪೋಸ್ಟ್

ಷೇರು ಮಾರುಕಟ್ಟೆಗೆ ಮುಂದೇನು ಗತಿ?

ಇರಾನ್ ಯುದ್ಧವು ಜಾಗತಿಕ ತೈಲ ಮಾರುಕಟ್ಟೆಯನ್ನು ಅಲುಗಾಡಿಸಿದೆ. ತೈಲ ಪೂರೈಕೆಯಲ್ಲಿ ಭಾರೀ ವ್ಯತ್ಯಯ ಆಗಿದೆ. ಇದು ಒಟ್ಟಾರೆ ಷೇರು ಮಾರುಕಟ್ಟೆಯ ಮೇಲೆ ನಕಾರಾತ್ಮಕ ಪರಿಣಾಮ ಬೀರಿದೆ. ವಿದೇಶೀ ಹೂಡಿಕೆದಾರರು ಸಾಲುಸಾಲಾಗಿ ನಿರ್ಗಮಿಸುತ್ತಿದ್ದಾರೆ. ಇರಾನ್ ಯುದ್ಧ ನಿಂತು, ತೈಲ ಪೂರೈಕೆ ಹಾಗೂ ಇತರ ವ್ಯಾಪಾರ ವಹಿವಾಟು ಸಹಜ ಸ್ಥಿತಿಗೆ ಮರಳುವವರೆಗೂ ಷೇರುಪೇಟೆ ತುಮುಲ ಹೀಗೇ ಮುಂದುವರಿಯುತ್ತದೆ.

ಈ ಸಂದಿಗ್ಧತೆ ಸದ್ಯಕ್ಕೆ ಮುಕ್ತಾಯವಾಗುವುದಿಲ್ಲ ಎಂದು ಅನಿಸುವಂತೆ ಡೊನಾಲ್ಡ್ ಟ್ರಂಪ್ ರಣಕಹಳೆ ಮುಂದುವರಿಸಿದ್ದಾರೆ. ಮುಂದಿನ ದಿನಗಳಲ್ಲಿ ಇರಾನ್ ಮೇಲೆ ಇನ್ನೂ ದೊಡ್ಡ ಮಟ್ಟದಲ್ಲಿ ಪ್ರಹಾರ ಮಾಡುತ್ತೇವೆ ಎಂದಿದ್ದಾರೆ. ಅಮೆರಿಕದ ಹುಟ್ಟಡಗಿಸುವವರೆಗೂ ಯುದ್ಧ ನಿಲ್ಲಿಸಲ್ಲ ಎಂದು ಇರಾನ್ ಕೂಡ ಹೇಳುತ್ತಿದೆ. ಹೀಗಾಗಿ, ಹೂಡಿಕೆದಾರರು ಏನು ಮಾಡಬೇಕೆಂದು ದಿಕ್ಕುತೋಚದೆ ಉಳಿಯುವ ಪರಿಸ್ಥಿತಿ ಇದೆ ಎಂದು ಮೇಲ್ನೋಟಕ್ಕೆ ಕಾಣುತ್ತದೆ.

ಇದನ್ನೂ ಓದಿ: ಏರ್​ಟೆಲ್ ಈಗ ವಿಶ್ವದ ಎರಡನೇ ಅತಿದೊಡ್ಡ ಟೆಲಿಕಾಂ ಆಪರೇಟರ್; ಅಗ್ರಸ್ಥಾನ ಯಾರದ್ದು, ಟಾಪ್-10 ಕಂಪನಿಗಳು ಯಾವುವು?

ಹೂಡಿಕೆದಾರರಿಗೆ ಸಲಹೆಗಳು…

ಭಾರತದ ಈಕ್ವಿಟಿ ಮಾರುಕಟ್ಟೆ ಕಳೆದ ಒಂದೂವರೆ ವರ್ಷದಲ್ಲಿ ಬಹಳ ಕುಸಿತ ಕಂಡಿದೆ. ಬಹಳಷ್ಟು ಷೇರುಗಳ ಮಾರ್ಕೆಟ್ ಕರೆಕ್ಷನ್ ಆಗಿದೆ. ಅನೇಕ ಉತ್ತಮ ಷೇರುಗಳು ಒಳ್ಳೆಯ ಬೆಲೆಗೆ ಸಿಗುತ್ತಿವೆ. ತಜ್ಞರು ನೀಡಿರುವ ಸಲಹೆ ಪ್ರಕಾರ, ಉತ್ತಮ ಷೇರುಗಳನ್ನು ಖರೀದಿಸಲು ಮಾರುಕಟ್ಟೆ ಅವಕಾಶ ಕೊಟ್ಟಿದೆ. ಹಾಗಂತ, ಷೇರುಗಳಲ್ಲಿ ಸಿಕ್ಕಾಪಟ್ಟೆ ಹೂಡಿಕೆ ಮಾಡಬೇಡಿ ಎನ್ನುವ ಎಚ್ಚರಿಕೆಯೂ ಇದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

‘ಲವ್ ಮಾಕ್ಟೇಲ್ 3’ ಬಳಿಕ ‘ಪೀಟರ್’ ಬಿಡುಗಡೆ ಮಾಡಲಿರುವ ‘ಕೆವಿಎನ್ ಪ್ರೊಡಕ್ಷನ್ಸ್’

ಇತ್ತೀಚೆಗೆ ‘ಕೆವಿಎನ್ ಪ್ರೊಡಕ್ಷನ್ಸ್’ (KVN Productions) ಸಂಸ್ಥೆಯು ‘ಲವ್ ಮಾಕ್ಟೇಲ್ 3’ ಸಿನಿಮಾವನ್ನು ಬಿಡುಗಡೆ ಮಾಡಿತ್ತು. ಆ ಸಿನಿಮಾ ಸೂಪರ್ ಹಿಟ್ ಆಯಿತು. ಅದರ ಬೆನ್ನಲ್ಲೇ ‘ಪೀಟರ್’ ಸಿನಿಮಾವನ್ನು ವಿತರಣೆ ಮಾಡಲು ‘ಕೆವಿಎನ್ ಪ್ರೊಡಕ್ಷನ್ಸ್’ ಸಜ್ಜಾಗಿದೆ. ಈ ಸಿನಿಮಾದ ಕಂಟೆಂಟ್ ನೋಡಿ ಇಷ್ಟಪಟ್ಟಿದ್ದರಿಂದ ವಿತರಿಸಲು ಮುಂದೆ ಬಂದಿದೆ. ಏಪ್ರಿಲ್ 10ಕ್ಕೆ ರಾಜ್ಯದಾದ್ಯಂತ ಬಿಡುಗಡೆ ಮಾಡಲಿದೆ. ರಾಜೇಶ್ ಧ್ರುವ ಅವರು ‘ಪೀಟರ್’ (Peter) ಚಿತ್ರದಲ್ಲಿ ಪ್ರಮುಖ ಪಾತ್ರ ಮಾಡಿದ್ದಾರೆ.

ನಾಯಕಿಯಾಗಿ ಜಾನ್ವಿ ನಟಿಸಿದ್ದಾರೆ. ರವೀಕ್ಷಾ ಶೆಟ್ಟಿ , ರಘು ಪಾಂಡೇಶ್ವರ್ , ರಾಮನಾಡಗೌಡ, ವರುಣ್ ಪಟೇಲ್, ಪ್ರತಿಮಾ ನಾಯಕ್, ಭರತ್, ರಾಧಾಕೃಷ್ಣ ಕುಂಬ್ಳೆ, ರಕ್ಷಿತ್ ದೊಡ್ಡೇರಾ, ದೀನಾ ಮುಂತಾದವರು ಈ ಸಿನಿಮಾದ ಪಾತ್ರವರ್ಗದಲ್ಲಿ ಇದ್ದಾರೆ. ಕರ್ನಾಟಕ-ಕೇರಳ ಗಡಿ ಭಾಗದಲ್ಲಿ ನಡೆಯುವ ಕಥೆಯನ್ನು ‘ಪೀಟರ್’ ಸಿನಿಮಾದಲ್ಲಿ ತೋರಿಸಲಾಗುವುದು.

ಗುರುಪ್ರಸಾದ್ ನಾರ್ನಾಡ್ ಅವರು ಛಾಯಾಗ್ರಹಣ ಮಾಡಿದ್ದಾರೆ. ನವೀನ್ ಶೆಟ್ಟಿ ಅವರ ಸಂಕಲನ ಈ ಚಿತ್ರಕ್ಕಿದೆ. ‘ವೃದ್ಧಿ ಸ್ಟುಡಿಯೋಸ್’ ಬ್ಯಾನರ್ ಮೂಲಕ 100ಕ್ಕೂ ಹೆಚ್ಚು ಸಿನಿಮಾಗಳಿಗೆ ಸೌಂಡ್ ಡಿಸೈನರ್ ಆಗಿ ಕೆಲಸ ಮಾಡಿದ ರವಿ ಹೀರೇಮಠ್ ಹಾಗೂ ರಾಕೇಶ್ ಹೆಗಡೆ ಅವರು ಈ ಸಿನಿಮಾವವನ್ನು ನಿರ್ಮಿಸಿದ್ದಾರೆ. ರಿತ್ವಿಕ್ ಮುರಳಿಧರ್ ಅವರು ಚಿತ್ರಕ್ಕೆ ಸಂಗೀತ ನೀಡಿದ್ದಾರೆ.

ಈಗಾಗಲೇ ಈ ಸಿನಿಮಾದ ಹಾಡುಗಳು ಗಮನ ಸೆಳೆದಿವೆ. ಇತ್ತೀಚೆಗೆ ಈ ಸಿನಿಮಾದ ಪ್ರೀ-ರಿಲೀಸ್ ಇವೆಂಟ್ ನಡೆಯಿತು. ನಿರ್ದೇಶಕ ಸುಕೇಶ್ ಶೆಟ್ಟಿ ಮಾತನಾಡಿ ಸಿನಿಮಾ ಬಗ್ಗೆ ಮಾಹಿತಿ ಹಂಚಿಕೊಂಡರು. ‘ಕರ್ನಾಟಕ ಮಾತ್ರವಲ್ಲದೆ ಕೇರಳ, ತಮಿಳುನಾಡು, ಹೈದರಾಬಾದ್​ನಲ್ಲಿಯೂ ಪ್ರಚಾರ ಕೆಲಸ ನಡೆಯುತ್ತಿದೆ. ಏಪ್ರಿಲ್ 10ಕ್ಕೆ ನಮ್ಮ ರಾಜ್ಯದಲ್ಲಿ ಬಿಡುಗಡೆಯಾಗಲಿದೆ. ಎರಡು ವಾರದ ಬಳಿಕ ಬೇರೆ ರಾಜ್ಯಗಳಲ್ಲಿ ಬಿಡುಗಡೆ ಮಾಡಲಿದ್ದೇವೆ’ ಎಂದು ಅವರು ಹೇಳಿದರು.

ಇದನ್ನೂ ಓದಿ: ಶರವೇಗದಲ್ಲಿ ಕೆವಿಎನ್ ಪ್ರೊಡಕ್ಷನ್, ನಿರ್ಮಿಸುತ್ತಿರುವ ಸಿನಿಮಾಗಳೆಷ್ಟು? ಹಾಕಿರುವ ಬಂಡವಾಳ ಎಷ್ಟು?

ರಾಜೇಶ್ ಧ್ರುವ ಅವರಿಗೆ ಇದು ಎರಡನೇ ಸಿನಿಮಾ. ಅಚ್ಚುಕಟ್ಟಾಗಿ ಕೆಲಸ ಮಾಡಿದ ನಿರ್ದೇಶಕರು ಮತ್ತು ಯಾವುದೇ ರಾಜಿ ಇಲ್ಲದೇ ನಿರ್ಮಾಣ ಮಾಡಿದ ನಿರ್ಮಾಪಕರನ್ನು ರಾಜೇಶ್ ಧ್ರುವ ಹೊಗಳಿದರು. ‘ಪೀಟರ್ ರಾಕ್ಷಸನೂ ಹೌದು, ರಕ್ಷಕನೂ ಹೌದು’ ಎಂದು ಹೇಳುವ ಮೂಲಕ ಅವರು ಸಿನಿಮಾದ ಕಥೆಯ ಬಗ್ಗೆ ಕೌತುಕ ಮೂಡಿಸಿದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಭಾರತೀಯ ಸ್ನೇಹಿತರು ಚಿಂತಿಸಬೇಕಾಗಿಲ್ಲ; ಹಾರ್ಮುಜ್ ಜಲಸಂಧಿಯ ಬಗ್ಗೆ ಇರಾನ್ ಭರವಸೆ

ಟೆಹ್ರಾನ್, ಏಪ್ರಿಲ್ 2: ಮಧ್ಯ ಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಮಧ್ಯೆ ಭಾರತಕ್ಕೆ ಇರಾನ್ ಮತ್ತೊಮ್ಮೆ ಹಾರ್ಮುಜ್ ಜಲಸಂಧಿಯಲ್ಲಿ ಭಾರತದ ಹಡಗುಗಳಿಗೆ ಯಾವುದೇ ತೊಂದರೆಯಾಗದು ಎಂದು ಭರವಸೆ ನೀಡಿದೆ. ಇರಾನಿನ ರಾಯಭಾರ ಕಚೇರಿ ಇಂದು ಹಾರ್ಮುಜ್ ಜಲಸಂಧಿಯ (Strait of Hormuz) ಬಗ್ಗೆ ಭಾರತಕ್ಕೆ ಭರವಸೆ ನೀಡಿದ್ದು, ಸಂಘರ್ಷ ಮುಂದುವರಿದಿದ್ದರೂ, ಕದನ ವಿರಾಮವನ್ನು ಸಾಧಿಸುವ ಪ್ರಯತ್ನಗಳು ವಿಫಲವಾಗಿದ್ದರೂ ಭಾರತ ಭಯಭೀತರಾಗುವ ಅಗತ್ಯವಿಲ್ಲ ಎಂದು ಒತ್ತಿಹೇಳಿದೆ.

ಹಾರ್ಮುಜ್ ಜಲಸಂಧಿಯು ಕಿರಿದಾದ ಹಾಗೂ ಪ್ರಮುಖ ಜಲಮಾರ್ಗವಾಗಿದ್ದು, ಇದು ಪರ್ಷಿಯನ್ ಕೊಲ್ಲಿಯನ್ನು ಓಮನ್ ಕೊಲ್ಲಿಗೆ ಮತ್ತು ಅರೇಬಿಯನ್ ಸಮುದ್ರಕ್ಕೆ ಸಂಪರ್ಕಿಸುತ್ತದೆ. ಇದು ಆಗ್ನೇಯಕ್ಕೆ ಓಮನ್ ಮತ್ತು ಉತ್ತರಕ್ಕೆ ಇರಾನ್ ನಡುವೆ ಇದೆ. ಇದು ಗಲ್ಫ್ ರಾಷ್ಟ್ರಗಳಿಂದ ಪ್ರಪಂಚದಾದ್ಯಂತ ತೈಲ ಮತ್ತು ಅನಿಲವನ್ನು ಸಾಗಿಸುವ ಹಡಗುಗಳು ಸಾಗುವ ಪ್ರಮುಖ ಮಾರ್ಗವಾಗಿದೆ. ಮಧ್ಯಪ್ರಾಚ್ಯದಲ್ಲಿನ ಸಂಘರ್ಷದಿಂದಾಗಿ ಹಾರ್ಮುಜ್ ನಿರಂತರವಾಗಿ ಅಡಚಣೆಗಳನ್ನು ಎದುರಿಸುತ್ತಿದೆ.

ಇದನ್ನೂ ಓದಿ: ಅಮೆರಿಕಕ್ಕೆ ಪೂರ್ತಿ ಅವಮಾನವಾಗುವವರೆಗೂ ಯುದ್ಧ ಮುಂದುವರೆಯುತ್ತದೆ; ಟ್ರಂಪ್​ಗೆ ಇರಾನ್ ಎಚ್ಚರಿಕೆ

ನಮ್ಮ ಭಾರತೀಯ ಸ್ನೇಹಿತರು ಸುರಕ್ಷಿತ ಕೈಯಲ್ಲಿದ್ದಾರೆ. ಚಿಂತಿಸಬೇಡಿ ಎಂದು ರಾಯಭಾರ ಕಚೇರಿ ಎಕ್ಸ್​ನಲ್ಲಿ ಪೋಸ್ಟ್‌ ಮಾಡಿದೆ.

ಪ್ರಧಾನಿ ನರೇಂದ್ರ ಮೋದಿ ಮತ್ತು ಭಾರತದ ವಿದೇಶಾಂಗ ಸಚಿವಾಲಯವು ಭಾರತೀಯ ಪ್ರಜೆಗಳ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಮತ್ತು ಗಲ್ಫ್ ಸಂಘರ್ಷದ ನಡುವೆ ಭಾರತೀಯ ಹಡಗುಗಳಿಗೆ ಸುರಕ್ಷಿತ ಮಾರ್ಗವನ್ನು ಖಚಿತಪಡಿಸಿಕೊಳ್ಳಲು ಇರಾನಿನ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Source link