All posts by nagaraj11081993

ಕಲಬುರಗಿ ಪೊಲೀಸರ ಭರ್ಜರಿ ಕಾರ್ಯಚರಣೆ: 1.44 ಕೋಟಿ ರೂ ಮೌಲ್ಯದ 785 ಫೋನ್‌ ಪತ್ತೆ ಮಾಡಿದ್ಹೇಗೆ ಗೊತ್ತಾ? – Kannada News | Kalaburagi Police Recover 785 Lost Phones Worth 1.44 Crore Using CEIR Portal

ಕಲಬುರಗಿ, ಮೇ 07: ನಗರ ಪೊಲೀಸರು ಕಳೆದ ಎರಡು ತಿಂಗಳಲ್ಲಿ ನಡೆಸಿದ ವಿಶೇಷ ಕಾರ್ಯಾಚರಣೆಯ ಮೂಲಕ ಸಿಇಐಆರ್ (CEIR) ಪೋರ್ಟಲ್ ಬಳಸಿ ವಿವಿಧ ಠಾಣಾ ವ್ಯಾಪ್ತಿಗಳಲ್ಲಿ ಕಳೆದುಹೋಗಿದ್ದ ದಾಖಲೆ ಮಟ್ಟದ ಬರೋಬ್ಬರಿ 1,44,90,000 ರೂ ಮೌಲ್ಯದ 785 ಮೊಬೈಲ್ ಫೋನ್‌ಗಳನ್ನು ಯಶಸ್ವಿಯಾಗಿ ಪತ್ತೆಹಚ್ಚಿದ್ದಾರೆ. ವಿವಿಧ ಕಂಪನಿಗಳ ಈ ಕೋಟ್ಯಂತರ ರೂ ಮೌಲ್ಯದ ಮೊಬೈಲ್ ಫೋನ್‌ಗಳನ್ನು ನಗರ ಪೊಲೀಸ್ ಆಯುಕ್ತ ಡಾ. ಶರಣಪ್ಪ, ಮಾಲೀಕರಿಗೆ ಅಧಿಕೃತವಾಗಿ ಹಸ್ತಾಂತರಿಸಿದ್ದಾರೆ. ಇಷ್ಟು ಕಡಿಮೆ ಅವಧಿಯಲ್ಲಿ ಭಾರಿ ಪ್ರಮಾಣದ ಮೊಬೈಲ್ ಫೋನ್‌ಗಳನ್ನು ಮರಳಿ ವಾರಸುದಾರರಿಗೆ ತಲುಪಿಸಿರುವುದು ಪೊಲೀಸ್ ಇಲಾಖೆಯ ದಕ್ಷತೆಗೆ ಸಾಕ್ಷಿಯಾಗಿದೆ. ತಾಂತ್ರಿಕ ನೆರವಿನೊಂದಿಗೆ ಕಳೆದುಹೋದ ಮೊಬೈಲ್​​ಗಳನ್ನು ಪತ್ತೆ ಹಚ್ಚಲಾಗಿದೆ. ಸಾರ್ವಜನಿಕರಲ್ಲಿ ವಿಶ್ವಾಸ ಮೂಡಿಸಲು ಈ ಕಾರ್ಯಾಚರಣೆ ಕೈಗೊಳ್ಳಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಡಾ. ಶರಣಪ್ಪ ಹೇಳಿದ್ದಾರೆ. ಕಡಿಮೆ ಬೆಲೆಗೆ ಸಿಗುತ್ತದೆ ಎಂದು ಬಿಲ್ ಇಲ್ಲದ ಅಥವಾ ಸೂಕ್ತ ದಾಖಲೆಗಳಿಲ್ಲದ ಮೊಬೈಲ್ ಫೋನ್‌ಗಳನ್ನು ಯಾರೂ ಖರೀದಿಸಬಾರದು. ಒಂದು ವೇಳೆ ಕಳ್ಳತನದ ಫೋನ್ ಎಂದು ತಿಳಿದಿದ್ದರೂ ಖರೀದಿಸಿದರೆ ಕ್ರಮಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Source link

LSG vs RCB: ಆರ್​ಸಿಬಿ ವಿರುದ್ಧ ಅಬ್ಬರಿಸಿ ವೇಗದ ಶತಕ ಬಾರಿಸಿದ ಮಿಚೆಲ್ ಮಾರ್ಷ್ – Kannada News | Mitchell Marsh’s Explosive IPL 2026 Century: LSG’s Fastest Ever vs RCB!

ಐಪಿಎಲ್ 2026 ರ 50 ನೇ ಪಂದ್ಯದಲ್ಲಿ, ಲಕ್ನೋ ಸೂಪರ್ ಜೈಂಟ್ಸ್ ತಂಡದ ಆರಂಭಿಕ ಆಟಗಾರ ಮಿಚೆಲ್ ಮಾರ್ಷ್ ಸ್ಫೋಟಕ ಶತಕ ಸಿಡಿಸಿದರು. ಲಕ್ನೋದ ಏಕಾನಾ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ಮಾರ್ಷ್​, ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಕೇವಲ 49 ಎಸೆತಗಳಲ್ಲಿ ಶತಕ ಪೂರೈಸಿದರು. ಈ ಮೂಲಕ ಲಕ್ನೋ ತಂಡದ ಪರ ಅತ್ಯಂತ ವೇಗದ ಶತಕ ಬಾರಿಸಿದ ದಾಖಲೆಯನ್ನು ನಿರ್ಮಿಸಿದರು. ಇದು ಐಪಿಎಲ್‌ನಲ್ಲಿ ಮಾರ್ಷ್​ ಅವರ ಎರಡನೇ ಶತಕವಾಗಿದ್ದರೆ, ಈ ಆವೃತ್ತಿಯಲ್ಲಿ ಮೊದಲ ಶತಕವಾಗಿದೆ.

ಮಳೆಯಿಂದ ಬಾಧಿತವಾದ ಈ ಪಂದ್ಯದಲ್ಲಿ ಮಿಚೆಲ್ ಮಾರ್ಷ್ ಕೂಡ ಬೌಂಡರಿ ಮತ್ತು ಸಿಕ್ಸರ್‌ಗಳ ಮಳೆಗರೆದರು. ಕೇವಲ 49 ಎಸೆತಗಳಲ್ಲಿ 100 ರನ್ ಗಳಿಸಿದರು, ಇದು ಐಪಿಎಲ್‌ನಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಆಟಗಾರ ಗಳಿಸಿದ ಅತ್ಯಂತ ವೇಗದ ಶತಕವಾಗಿದೆ. ಈ ಇನ್ನಿಂಗ್ಸ್‌ನಲ್ಲಿ ಅವರು ಒಂಬತ್ತು ಬೌಂಡರಿ ಮತ್ತು ಎಂಟು ಸಿಕ್ಸರ್‌ಗಳನ್ನು ಬಾರಿಸಿ ಶತಕ ತಲುಪಿದರು. ಇದಕ್ಕೂ ಮೊದಲು, ಕಳೆದ ವರ್ಷ ಇದೇ ಆರ್​ಸಿಬಿ ವಿರುದ್ಧ 54 ಎಸೆತಗಳಲ್ಲಿ ಶತಕ ಗಳಿಸಿದ್ದ ರಿಷಭ್ ಪಂತ್ ಈ ದಾಖಲೆಯನ್ನು ಹೊಂದಿದ್ದರು. ತಮ್ಮ ಇನ್ನಿಂಗ್ಸ್‌ನಲ್ಲಿ ಮಿಚೆಲ್ ಮಾರ್ಷ್ 56 ಎಸೆತಗಳನ್ನು ಎದುರಿಸಿ ಒಟ್ಟು 111 ರನ್ ಬಾರಿಸಿದರು. ಇದರಲ್ಲಿ ಒಂಬತ್ತು ಬೌಂಡರಿಗಳು ಮತ್ತು ಅಷ್ಟೇ ಸಿಕ್ಸರ್‌ಗಳು ಸೇರಿದ್ದವು.

Source link

‘ಎರಡು ಚಿತ್ರದ ಜಗದೇಕವೀರ’ ಚೇತನ್​​ಗೆ ಜಗ್ಗೇಶ್ ಮಾತಿನ ಚಾಟಿ – Kannada News | Actor Jaggesh criticize Chetan Ahimsa’s statement about Dr Rajkumar’s memorial

ನಟ ಚೇತನ್ ಅಹಿಂಸ, ಡಾ ರಾಜ್​ಕುಮಾರ್ (Dr Rajkumar) ಅವರ ಸಮಾಧಿ ಕುರಿತು ಆಡಿರುವ ಅಸೂಕ್ಷ್ಮ ಮಾತುಗಳು ತೀವ್ರ ಟೀಕೆಗೆ, ನಿಂದನೆಗೆ ಗುರಿ ಆಗಿವೆ. ಕನ್ನಡಪರ ಸಂಘಟನೆಗಳು, ಅಣ್ಣಾವ್ರ ಅಭಿಮಾನಿಗಳು ಬೀದಿಗಿಳಿದು ಪ್ರತಿಭಟನೆ ಸಹ ನಡೆಸಿದ್ದಾರೆ. ಹಲವು ವಿಚಾರವಾದಿಗಳು, ಸಾಹಿತಿಗಳು ಸಹ ಚಿತ್ರರಂಗ ಹಾಗೂ ಕರ್ನಾಟಕಕ್ಕೆ ಅಣ್ಣಾವ್ರ ಕೊಡುಗೆಯನ್ನು ವಿವರಿಸಿದ್ದಾರೆ. ಇದೀಗ ನಟ ಜಗ್ಗೇಶ್ ಅವರು ಸಾಮಾಜಿಕ ಜಾಲತಾಣದಲ್ಲಿ ಚಿತ್ರರಂಗಕ್ಕೆ ಅಣ್ಣಾವ್ರ ಮಹತ್ವದ ಕೊಡುಗೆಯನ್ನು ವಿವರಿಸಿರುವ ಜೊತೆಗೆ ಚೇತನ್ ಅಹಿಂಸ ಹೇಳಿಕೆಯನ್ನು ಟೀಕೆ ಮಾಡಿದ್ದಾರೆ.

‘ಹೋದವರೆಲ್ಲಾ ಒಳ್ಳೆಯವರು ನಮ್ಮ ಹಿರಿಯರು, ಆ ಹಿರಿಯರಲ್ಲಿ ನಮ್ಮ ತಂದೆ ತಾಯಿ ತಾತ ಅಜ್ಜಿ ವಂಶದ ಪರಂಪರೆಯೇ ಸೇರಿರುತ್ತದೆ ಅಲ್ಲವೆ? ಹಿರಿಯರು ಎಂದ ಮೇಲೆ ನಮ್ಮ ಮನೆಯವರೆ ಅಲ್ಲಾ ಸಂಬಂದಿಗಳು ಅಥವ ಯಾವುದೆ ಕ್ಷೇತ್ರದಲ್ಲಿ ಸಾಧನೆ ಮಾಡಿದವರು ನಮ್ಮ ವಂಶದ ಹಿರಿಯರ ಸಮ ಅಲ್ಲವೆ? ಇದು ಹೇಳುವ ಕಾರಣ ರಾಜಣ್ಣನ ಸಮಾಧಿಯ ಬಗ್ಗೆ ಒಬ್ಬ ನಟ ಆಡಿದ ಮಾತು, ಮನಸ್ಸಿಗೆ ಬಹಳ ನೋವುಂಟು ಮಾಡಿತು. ಆತನಿಗೆ ನನ್ನ ಕಿವಿಮಾತು 1954ರಲ್ಲಿ ಕನ್ನಡ ಚಿತ್ರರಂಗಕ್ಕೆ ನೆಲೆ ಬೆಲೆ ಇಲ್ಲದ ಕಾಲ. ಇರಲು ಸೂರಿಲ್ಲಾ ಉದರಕ್ಕೆ ತೃಪ್ತ ಆಹಾರವಿಲ್ಲಾ ಅಂಥಹ ಸಮಯದಿಂದ ಕನ್ನಡ ಚಿತ್ರರಂಗ ಕಟ್ಟಿ ಬೆಳೆಸಿ ಅರಮನೆಯಂತೆ ಮಾಡಿ ಹೋಗಿದ್ದಾರೆ.’ ಎಂದಿದ್ದಾರೆ ಜಗ್ಗೇಶ್.

‘ಇಂದು ಅದರ ಬೆಲೆ ಅರಿಯದೆ ಒಂದು ಅಥವ ಎರಡು ಚಿತ್ರಕ್ಕೆ ಜಗದೇಕವೀರರಂತೆ ಮಾತಾಡಿ ಮಲೀನವಾಗೋ ಸಂಪ್ರದಾಯ ಹುಟ್ಟಿ ಹಿರಿಯರೆಲ್ಲಾ ಮೂಖರಂತೆ ಯಾರ ತಂಟೆ ಬೇಡವೆಂದು ಉಳಿದುಬಿಟ್ಟಿದ್ದಾರೆ. ದ್ವನಿ ಎತ್ತಿದರೆ ಸರ್ಕಾರ ಬದಲಾಗುತ್ತಿತ್ತು ಅದು ರಾಜಣ್ಣನ ತಾಕತ್ತು, ಅಂಥಹ ಸಾಧಕ ಹೋದಾಗ ಇಡಿ ಚಿತ್ರರಂಗ ಸರ್ಕಾರ ಒಟ್ಟುಗೂಡಿ ಅವರ ಶ್ರಮಕ್ಕೆ ಗೌರವ ನೀಡಲು ಅವರ ಕೊನೆಯ ಚಿರನಿದ್ರೆಗೆ ಕಲಾವಿದರ ರಂಗಸ್ಥಳವನ್ನ ಪ್ರೀತಿಯ ಹಾಸಿಗೆ ಮಾಡಿ ಮಲಗಿಸಿದ್ದಾರೆ’ ಎಂದಿದ್ದಾರೆ ನಟ ಜಗ್ಗೇಶ್.

‘ಕಳೆದುಹೋದ ಸಮಯ ವಿಷಯ ಪ್ರಚಾರಕ್ಕಾಗಿ ಈಗ ಮಾತಾಡುವ ಚಿಕ್ಕಮನಸ್ಸು ಕಂಡು ಅಸಹ್ಯವಾಯಿತು. ಉತ್ತಮ ಚಿತ್ರಮಾಡಿ ಪ್ರೇಕ್ಷಕರ ರಂಜಿಸಿ ಹೆಸರುಮಾಡಿ (ಪ್ರೇಕ್ಷಕ ಇಷ್ಟಪಟ್ಟರೆ), ಇಲ್ಲದಿದ್ದರೆ ಗಳಿಸಿದ ಅಲ್ಪ ಹೆಸರು ಮಾಸಿ ಜೀವನ ರೋಸಿ ಹೋಗುತ್ತದೆ’ ಎಂದು ನಟ ಜಗ್ಗೇಶ್ ಕಿವಿಮಾತನ್ನು ನಟ ಚೇತನ್ ಅಹಿಂಸ ಕುರಿತು ಹೇಳಿದ್ದಾರೆ.

ಡಾ ರಾಜ್​ಕುಮಾರ್ ಅವರ ಅಪ್ಪಟ ಅಭಿಮಾನಿ ಜಗ್ಗೇಶ್. ಸಾಮಾಜಿಕ ಜಾಲತಾಣದಲ್ಲಿ ರಾಜ್​ಕುಮಾರ್ ಅವರ ಕುರಿತು ಹಲವು ಅಪರೂಪದ ಸಂಗತಿಗಳನ್ನು ಜಗ್ಗೇಶ್ ಹಂಚಿಕೊಳ್ಳುತ್ತಲೇ ಇರುತ್ತಾರೆ. ಈಗ ಚೇತನ್ ಅಹಿಂಸ ಆಡಿರುವ ಮಾತುಗಳು ಸಹಜವಾಗಿಯೇ ಅವರಿಗೆ ನೋವುಂಟು ಮಾಡಿವೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಫೋನ್‌ ಕಳೆದುಕೊಂಡು ಅಲೆದಾಡಿದ್ದ ವ್ಯಕ್ತಿ ಮಾಡಿದ್ದೇನು ಗೊತ್ತಾ? ಅನುಭವದ ಮಾತು ಕೇಳಿ – Kannada News | What you should do if you lose your phone, here Is Kalaburagi victim suggestions

ಕಲಬುರಗಿ, (ಮೇ 07): ಕಲಬುರಗಿ ನಗರ ಪೊಲೀಸರು ವಿಶೇಷ ಕಾರ್ಯಚರಣೆ ನಡೆಸಿ ದಾಖಲೆ ಮಟ್ಟದ ಬರೋಬ್ಬರಿ 1,44,90,000 ರೂಪಾಯಿ ಮೌಲ್ಯದ ಮೊಬೈಲ್ ಪೋನ್ ಗಳನ್ನ ಪತ್ತೆ ಹಚ್ಚಿದ್ದಾರೆ. ಕಲಬುರಗಿ ನಗರ ವಿವಿಧ ಠಾಣಾ ವ್ಯಾಪ್ತಿಯಲ್ಲಿ ಕಳೆದುಹೋಗಿದ್ದ 785 ಮೊಬೈಲ್ ಗಳನ್ನು ಸಿಇಐಆರ್ ಪೋರ್ಟಲ್ ಮೂಲಕ ಕೇವಲ ಎರಡು ತಿಂಗಳಲ್ಲಿ ಪತ್ತೆ ಮಾಡಿದ್ದು, ಕಲಬುರಗಿ ನಗರ ಪೊಲೀಸ್ ಆಯುಕ್ತ ಡಾ.ಶರಣಪ್ಪ ಅವರು ವಾರಸುದಾರರಿಗೆ ಮರಳಿ ಮೊಬೈಲ್ ಹಸ್ತಾಂತರಿಸಿದರು. ಇನ್ನು ವ್ಯಕ್ತಿಯೋರ್ವ ಮೊಬೈಲ್ ಸಿಕ್ಕ ಖುಷಿಯನ್ನು ಟಿವಿ9 ಜೊತೆ ಹಂಚಿಕೊಂಡಿದ್ದು, ಮೊಬೈಲ್ ಕಳೆದು ಹೋದ ಬಳಿಕ ಏನು ಮಾಡಬೇಕು? ತಾನು ಏನು ಮಾಡಿದ್ದ ಎನ್ನುವುದನ್ನು ಅನುಭವನ್ನು ಹಂಚಿಕೊಂಡಿದ್ದಾರೆ. ನಿಮ್ಮ ಮೊಬೈಲ್ ಸಹ ಕಳೆದು ಹೋದರೆ ನೀವು ಇದೆ ಟ್ರಿಕ್ ಅನುಸರಿಸಿ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಬಿಡಿಎ ಆಸ್ತಿ ಮೇಲೆ ಬ್ರೋಕರ್ ಕಣ್ಣು: ನೌಕರನೆಂದು ನಂಬಿಸಿ ಸೈಟ್ ಕಬಳಿಸಿದ್ದ ಕಿಂಗ್‌ಪಿನ್ ಬಂಧನ – Kannada News | Fake BDA Employee Arrested in Bengaluru Property Grabbing Case

ಬೆಂಗಳೂರು, ಮೇ 07: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (BDA) ಆಸ್ತಿಗಳನ್ನು ನಕಲಿ ದಾಖಲೆಗಳ ಮೂಲಕ ಕಬಳಿಸಲು ಯತ್ನಿಸುತ್ತಿದ್ದ ದೊಡ್ಡ ಜಾಲವೊಂದನ್ನು ಬಿಡಿಎ ಜಾಗೃತ ದಳ ಪತ್ತೆಹಚ್ಚಿದೆ. ಪ್ರಾಧಿಕಾರದ ನೌಕರನೆಂದು ಸುಳ್ಳು ಹೇಳಿ ಸೈಟ್ (Land Scam) ಪಡೆದಿದ್ದ ಬ್ರೋಕರ್ ನಾಗರಾಜ್ ಎಂಬಾತನನ್ನು ಪೊಲೀಸರು ಬಂಧಿಸಿದ್ದರೆ, ನೂರಾರು ಕೋಟಿ ರೂ ಮೌಲ್ಯದ ಜಾಗಕ್ಕೆ ಸ್ಕೆಚ್ ಹಾಕಿದ್ದ ಲಕ್ಷ್ಮೀನಾರಾಯಣ್ ಎಂಬಾತ ತಲೆಮರೆಸಿಕೊಂಡಿದ್ದಾನೆ.

ಮುಖ್ಯಾಂಶಗಳು

  • ಗ್ರೂಪ್-ಡಿ ನೌಕರನ ಸೋಗಿನಲ್ಲಿ ವಂಚನೆ
  • ಅಧಿಕಾರಿಗಳು ಶಾಮೀಲು ಶಂಕೆ
  • 160 ಕೋಟಿ ಮೌಲ್ಯದ ಭೂಮಿಗೆ ಸ್ಕೆಚ್

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ನೌಕರರ ಕ್ಷೇಮಾಭಿವೃದ್ಧಿ ಸಂಘದಿಂದ ಬಡಾವಣೆ ನಿರ್ಮಾಣ ಮಾಡಲಾಗಿತ್ತು. ಬಿಡಿಎನಲ್ಲಿ ಬ್ರೋಕರ್ ಆಗಿದ್ದ ನಾಗರಾಜ್​ ಎಂಬಾತ ತಾನು ಗ್ರೂಪ್ ಡಿ ನೌಕರ ಎಂದು ಹೇಳಿ ಸೈಟ್ ಮೇಲೆ ಕಣ್ಣು ಹಾಕಿದ್ದ. ಸುಳ್ಳು ದಾಖಲೆ ನೀಡಿ ಬಡಾವಣೆಯ ಸೈಟುಗಳನ್ನ ಪಡೆದಿದ್ದ ಆತ ಕೆಲ ಅಧಿಕಾರಿಗಳನ್ನು ಯಾಮಾರಿಸಿದ್ದ.

ಇದನ್ನೂ ಓದಿ: ಕೋಟ್ಯಂತರ ಮೌಲ್ಯದ ಜಮೀನು ಕಬಳಿಕೆಗೆ ಯತ್ನ: ಬದುಕಿರುವಾಗಲೇ ನಿವೃತ್ತ ಉದ್ಯೋಗಿಯ ಚಟ್ಟ ಕಟ್ಟಿದ ಭೂಗಳ್ಳರು

ಇನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ನಡೆಸಿದ ತನಿಖೆಯಲ್ಲಿ ಈತನ ಅಕ್ರಮ ಬಯಲಾಗಿತ್ತು. ನಾಗರಾಜ್  ಪ್ರಾಧಿಕಾರದ ನೌಕರನಲ್ಲ ಎಂಬುವುದು ಸಾಬೀತಾಗಿತ್ತು. ತನಿಖೆಯಲ್ಲಿ ನಾಗರಾಜ್ ಜೊತೆ ಬಿಡಿಎಯ ಕೆಲ ಅಧಿಕಾರಿಗಳು ಶಾಮೀಲಾಗಿರುವುದು ಕೂಡ ಪತ್ತೆಯಾಗಿತ್ತು. ನಾಗರಾಜ್ ಇದೇ ರೀತಿ 10ಕ್ಕೂ ಹೆಚ್ಚು ಕಡೆ ಸೈಟ್ ಗಳನ್ನ ಪಡೆದಿರುವುದು ಕೂಡ ಪತ್ತೆಯಾಗಿದೆ. ಈ ಹಿನ್ನಲೆ ಬಿಡಿಎ ಡಿವೈಎಸ್​ಪಿ ಹನುಮಂತರಾಯ ಶೇಷಾದ್ರಿಪುರಂ ಠಾಣೆಗೆ ದೂರು ನೀಡಿದ್ದರು. FIR ದಾಖಲಿಸಿಕೊಂಡ ಪೊಲೀಸರು ನಾಗರಾಜ್ ನನ್ನ ಬಂಧಿಸಿ ಮೂರು ದಿನ ಪೊಲೀಸ್ ಕಸ್ಟಡಿಗೆ ಪಡೆದು ವಿಚಾರಣೆ‌ ನಡೆಸಿದ್ದಾರೆ.

ನಕಲಿ ದಾಖಲೆ ಸೃಷ್ಟಿಸಿ 160 ಕೊಟಿ ರೂ ಮೌಲ್ಯದ ಜಾಗ ಮಾರಾಟಕ್ಕೆ ಸ್ಕೆಚ್

ಮತ್ತೊಂದೆಡೆ ಬಿಡಿಎ ಜಾಗಕ್ಕೆ ನಕಲಿ ದಾಖಲೆ ಸೃಷ್ಟಿಸಿ ಮಾರಾಟ ಮಾಡಲು ಹೊರಟಿದ್ದ ಲಕ್ಷ್ಮೀನಾರಾಯಣ್ ಎಂಬಾತ ಎಸ್ಕೇಪ್ ಆಗಿದ್ದಾನೆ. ಕಳೆದ ವಾರ ಶೇಷಾದ್ರಿಪುರಂ ಠಾಣೆಯಲ್ಲಿ ಲಕ್ಷ್ಮೀನಾರಾಯಣ್ ಗ್ಯಾಂಗ್ ಮೇಲೆ FIR ದಾಖಲಾಗಿತ್ತು. ಬೆಂಗಳೂರು ದಕ್ಷಿಣ ಕೊತ್ತನೂರಿನ ಬಿಡಿಎ ಜಾಗಕ್ಕೆ ಲಕ್ಷ್ಮೀನಾರಾಯಣ್ ನಕಲಿ ದಾಖಲೆ ಸೃಷ್ಟಿಸಿದ್ದ. ಸುಮಾರು 160 ಕೊಟಿ ರೂ ಮೌಲ್ಯದ ಜಾಗ ಮಾರಾಟ ಮಾಡಲು ಹೊರಟಿದ್ದ.

ತಲೆಮರೆಸಿಕೊಂಡಿರುವ ಆರೋಪಿಗಾಗಿ ಪೊಲೀಸರು ಹುಡುಕಾಟ

ಈ ಬಗ್ಗೆ ಮಾಹಿತಿ ಕಲೆ ಹಾಕಿದ್ದ ಬಿಡಿಎ, ತನಿಖೆ ನಡೆಸಿ ಲಕ್ಷ್ಮೀನಾರಾಯಣ್ ಮೇಲೆ ದೂರು ನೀಡಿದ್ದರು. ಅತ್ತ ಪ್ರಕರಣ ದಾಖಲಾಗುತ್ತಿದ್ದಂತೆ ಇತ್ತ ಲಕ್ಷ್ಮೀನಾರಾಯಣ್ ಎಸ್ಕೇಪ್ ಆಗಿದ್ದಾನೆ. ಅಲ್ಲದೇ ಪೊಲೀಸ್ ತನಿಖೆ ವೇಳೆ ಈತ ಇದೇ ರೀತಿ ನೂರಾರು ಕೋಟಿ ರೂ ಬಿಡಿಎ ಜಾಗ ಕಬಳಿಸಿರುವುದು ಪತ್ತೆಯಾಗಿದೆ. ಸದ್ಯ ತಲೆಮರೆಸಿಕೊಂಡಿರುವ ಆರೋಪಿ ಲಕ್ಷ್ಮೀನಾರಾಯಣ್​ಗಾಗಿ ಶೇಷಾದ್ರಿಪುರಂ ಪೊಲೀಸರು ಹುಡುಕಾಟ ನಡೆಸಿದ್ದಾರೆ.

ಇದನ್ನೂ ಓದಿ: ಕಬ್ಬನ್ ಪಾರ್ಕ್‌ನಲ್ಲಿ ಮಾವು ಮೇಳಕ್ಕೆ ವಾಕರ್ಸ್ ಅಸೋಸಿಯೇಷನ್ ವಿರೋಧ: ಏಕೆ?

ಒಟ್ಟಾರೆ ಬಿಡಿಎ ಜಾಗವನ್ನ ಕಂಡಕಂಡವರು ಲೂಟಿಗೆ ಮುಂದಾಗಿದ್ದಾರೆ‌. ಬೆಂಗಳೂರಿನಾದ್ಯಂತ ಹಲವು ಕಡೆ ಇದೇ ರೀತಿಯ ದೂರುಗಳು ದಾಖಲಾಗುತ್ತಿದ್ದು, ಬಿಡಿಎ ತನಿಖೆ ಚುರುಕುಗೊಳಿಸಿದೆ‌.

ವರದಿ: ವಿಕಾಸ್, ಟಿವಿ9 ಬೆಂಗಳೂರು

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಕೇಂದ್ರದ ವಿರುದ್ಧ ಮತ್ತೆ ಸಿಡಿದೆದ್ದ ರಾಜ್ಯ ಸರ್ಕಾರ, ವಿಬಿ ಜಿ ರಾಮ್ ಜೀ ಪ್ರಶ್ನಿಸಿ ಕೋರ್ಟ್ ಮೆಟ್ಟಿಲೇರಲು ತೀರ್ಮಾನ – Kannada News | Karnataka cabinet decides Going Court Against Union Governmnet for Changed MGNREGA as VB G RAM G

ಬೆಂಗಳೂರು, (ಮೇ 07): ಮನ್​ರೇಗಾ (MGNREGA) ಎನ್ನುವುದನ್ನು ವಿಬಿ ಜಿ ರಾಮ್ ಜೀ (VB-G RAM G) ಎಂದು ಬದಲಾವಣೆ ಮಾಡಿರುವ ಕೇಂದ್ರ ಸರ್ಕಾರದ ವಿರುದ್ಧ ಕೋರ್ಟ್ ಮೊರೆ ಹೋಗಲು ರಾಜ್ಯ ಕಾಂಗ್ರೆಸ್ ಸರ್ಕಾರ ಮುಂದಾಗಿದೆ. ಈ ಸಂಬಂಧ ಇಂದು (ಮೇ 07) ಸಿಎಂ ಸಿದ್ದರಾಮಯ್ಯನವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟದಲ್ಲಿ ಚರ್ಚಿಸಿದ್ದು, ಮನ್​ರೇಗಾ ಹೆಸರು ಬದಲಾವಣೆ ಪ್ರಶ್ನಿಸಿ ಕೋರ್ಟ್ ಮೊರೆ ಹೋಗಲು ತೀರ್ಮಾನಿಸಿದೆ. ಈ ಬಗ್ಗೆ ಕಾನೂನು ಸಚಿವ ಎಚ್​​ಕೆ ಪಾಟೀಲ್ ಮಾಹಿತಿ ನೀಡಿದ್ದಾರೆ.

  • ಮನ್​ರೇಗಾ ಹೆಸರು ಬದಲಾವಣೆ ಪ್ರಶ್ನಿಸಿ ಕೋರ್ಟ್ ಮೊರೆ ಹೋಗಲು ರಾಜ್ಯ ಸರ್ಕಾರ ನಿರ್ಧಾರ
  • ಇಂದಿನ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ
  • ವಿಬಿ ಜಿ ರಾಮ್ ಜೀ ಎಂದು ಬದಲಿಸಿದ್ದ ಕೇಂದ್ರ ಸರ್ಕಾರ

ಇದನ್ನೂ ಓದಿ: G-RAM-G: ಜಿ ರಾಮ್‌ ಜಿ ಕಾಯ್ದೆ- ಮತ್ತಷ್ಟು ಉದ್ಯೋಗ, ಮತ್ತಷ್ಟು ಭದ್ರತೆ

ಸಚಿವ ಸಂಪುಟ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಎಚ್​​ಕೆ ಪಾಟೀಲ್, ಮನ್​ರೇಗಾವನ್ನು ವಿಬಿ ಜಿ ರಾಮ್ ಜೀ ಎಂದು ಬದಲಿಸಿದ ಕೇಂದ್ರ ಸರ್ಕಾರ ನಡೆಯನ್ನು ಪ್ರಶ್ನಿಸಿ ಕೋರ್ಟ್ ಮೊರೆ ಹೋಗಲು ಸಂಪುಟದಲ್ಲಿ ನಿರ್ಧರಿಸಿದ್ದೇವೆ. ಈ ಬಗ್ಗೆ ಸಂಪುಟ ಸಭೆಯಲ್ಲಿ 15 ವಿಷಯಗಳ ಬಗ್ಗೆ ಚರ್ಚೆ ಮಾಡಿದ್ದೇವೆ. ಮನ್​ರೇಗಾ ಸ್ಥಗಿತ ಮಾಡಿದ್ದರಿಂದ ಬಡವರಿಗೆ ಅನಾನುಕೂಲವಾಗಲಿದೆ. ಹೀಗಾಗಿ ಮನ್​ರೇಗಾ ಮರು ಸ್ಥಾಪನೆಗೆ ನಾವು ಚಳವಳಿ ಮಾಡಿದ್ದೆವು. ಮೇ ತಿಂಗಳಾದರೂ ವಿಬಿ ಜಿ ರಾಮ್​​ಜೀ ನೋಟಿಫೈ ಆಗಿಲ್ಲ. ಇದುವರೆಗೆ ವಿಬಿ ಜಿ ರಾಮ್​​ಜೀ ದೇಶದಲ್ಲಿ ಇನ್ನೂ ಬಂದಿಲ್ಲ. ಮನ್​ರೇಗಾ ಬಾಕಿ ಕೆಲಸ ಮುಂದುವರಿಸಬಹುದೆಂದು ಆದೇಶಿಸಿದೆ. ಆದರೆ ಕೇಂದ್ರ ಸರ್ಕಾರ ಯಾವುದೇ ಅನುದಾನ ನೀಡಿಲ್ಲ ಎಂದು ಹೇಳಿದರು.

ಈ ಬಾರಿ ಮಳೆ ಕೊರತೆಯಿಂದ ನೀರಿನ ಸಂಕಷ್ಟ ಅಂತಿದ್ದಾರೆ. ಆದರೂ ಬಡವರ ಕೆಲಸದ ಬಗ್ಗೆ ಕೇಂದ್ರ ಚಿಂತನೆ ಮಾಡುತ್ತಿಲ್ಲ. ಈ ಹಿನ್ನೆಲೆಯಲ್ಲಿ ನಿರ್ಣಯದ ಮೂಲಕ ಒತ್ತಡ ಹೇರಿದ್ದೇವೆ. ಮುಖ್ಯಮಂತ್ರಿ ಕೂಡ ಪ್ರಧಾನಮಂತ್ರಿಗಳಿಗೆ ಪತ್ರ ಬರೆದಿದ್ದಾರೆ ಎಂದರು.

ರಾಜ್ಯ ಶಿಕ್ಷಣ ನೀತಿ ಆಯೋಗದ ಶಿಫಾರಸು ಮಂಡನೆ

ಸಂಪುಟ ಸಭೆಯಲ್ಲಿ ಆಯೋಗದ ಶಿಫಾರಸುಗಳ ಬಗ್ಗೆ ಚರ್ಚೆ ಆಗಿದ್ದು, ಆಯೋಗದ ವರದಿಯ ಅನುಷ್ಠಾನಕ್ಕೆ ಸಂಪುಟ ಉಪ ಸಮಿತಿ ರಚಿಸಲು ಸಂಪುಟದಲ್ಲಿ ನಿರ್ಧಾರವಾಗಿದೆ. ಈ ಸಂಪುಟ ಉಪ ಸಮಿತಿಯು, ಆಯೋಗದ ಶಿಫಾರಸು ಅಧ್ಯಯನ ಮಾಡಿ ಸರ್ಕಾರಕ್ಕೆ ವರದಿ ಸಲ್ಲಿಕೆ ಮಾಡಲಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಮೇ 10ರವರೆಗೆ ಚೆನ್ನೈನಲ್ಲೇ ಇರಿ; ಡಿಎಂಕೆ ಶಾಸಕರಿಗೆ ಸ್ಟಾಲಿನ್ ಆದೇಶ – Kannada News | Tamil Nadu DMK chief MK Stalin Asks DMK MLAs to Stay in Chennai Till May 10

ಚೆನ್ನೈ, ಮೇ 7: ತಮಿಳುನಾಡಿನಲ್ಲಿ ಸರ್ಕಾರ ರಚನೆಯ ಬಿಕ್ಕಟ್ಟು ಇನ್ನೂ ಬಗೆಹರಿದಿಲ್ಲ. ಸದ್ಯಕ್ಕೆ ಚೆಂಡು ಟಿವಿಕೆ ಮುಖ್ಯಸ್ಥ ವಿಜಯ್ (Vijay) ಅವರ ಮೈದಾನದಲ್ಲಿದ್ದರೂ ಯಾರು ಬಹುಮತ ಸಾಬೀತುಪಡಿಸುತ್ತಾರೋ ಅವರಿಗೆ ಸರ್ಕಾರ ರಚಿಸುವ ಅವಕಾಶ ಸಿಗಲಿದೆ. ಹೀಗಾಗಿ, ಡಿಎಂಕೆ ಮತ್ತು ಎಐಎಡಿಎಂಕೆ ಕೂಡ ತಮ್ಮ ಪಕ್ಷದ ಶಾಸಕರ ಜೊತೆ ಸಭೆಗಳನ್ನು ನಡೆಸುತ್ತಿದ್ದಾರೆ. ಡಿಎಂಕೆ ವಿಧಾನಸಭಾ ಶಾಸಕರು ಇಂದು ಪಕ್ಷದ ನಾಯಕ ಎಂ.ಕೆ. ಸ್ಟಾಲಿನ್ (MK Stalin) ಅವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದರು.

ಈ ವೇಳೆ ಮಾತನಾಡಿದ ಎಂ.ಕೆ ಸ್ಟಾಲಿನ್, “ಉತ್ತಮ ವಿರೋಧ ಪಕ್ಷವಾಗಿ ಕಾರ್ಯನಿರ್ವಹಿಸುವುದು ನನ್ನ ಆಸೆ. ಆದರೆ ಕೆಲವು ನಿರ್ಧಾರಗಳನ್ನು ಪಕ್ಷದ ಹಿತದೃಷ್ಟಿಯಿಂದ ತೆಗೆದುಕೊಳ್ಳಬೇಕಾಗುತ್ತದೆ. ಯಾವುದೇ ನಿರ್ಧಾರ ತೆಗೆದುಕೊಂಡರೂ, ಸದಸ್ಯರು ಅದಕ್ಕೆ ಬದ್ಧರಾಗಿರಬೇಕು. ಸದ್ಯದಲ್ಲೇ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುವುದು. ನಮ್ಮ ಪಕ್ಷದ ಎಲ್ಲ ಶಾಸಕರು ಮೇ 10ರವರೆಗೆ ಚೆನ್ನೈನಲ್ಲಿಯೇ ಇರಬೇಕು” ಎಂದು ಆದೇಶಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಎಲುಬುಗಳಲ್ಲಿ ನೋವು ಕಂಡುಬರುವುದಕ್ಕೆ ಈ ವಿಟಮಿನ್ ಕೊರತೆಯೇ ಕಾರಣ? ಇದನ್ನು ತಡೆಗಟ್ಟಲು ಸಿಂಪಲ್ ಟ್ರಿಕ್ ಇಲ್ಲಿದೆ – Kannada News | Vitamin Deficiencies That Cause Bone Pain: What You Need to Know

ಇತ್ತೀಚಿನ ದಿನಗಳಲ್ಲಿ ಎಲುಬು ನೋವು ಮತ್ತು ದೇಹದ ದುರ್ಬಲತೆ ಸಮಸ್ಯೆಗಳು ಅನೇಕರಲ್ಲಿ ಹೆಚ್ಚಾಗಿ ಕಾಣಿಸುತ್ತಿವೆ. ಹಲವರು ಇದನ್ನು ಸಾಮಾನ್ಯ ದಣಿವು ಅಥವಾ ವಯಸ್ಸಿನ ಪರಿಣಾಮ ಎಂದು ನಿರ್ಲಕ್ಷಿಸುತ್ತಾರೆ. ಆದರೆ ವೈದ್ಯರ ಪ್ರಕಾರ, ದೇಹದಲ್ಲಿ ಅಗತ್ಯ ವಿಟಮಿನ್ (Vitamin Deficiencies) ಮತ್ತು ಖನಿಜಗಳ ಕೊರತೆ ಕೂಡ ಎಲುಬು ನೋವಿಗೆ ಪ್ರಮುಖ ಕಾರಣವಾಗಬಹುದು. ತಜ್ಞರ ಪ್ರಕಾರ, ವಿಶೇಷವಾಗಿ ವಿಟಮಿನ್ ಡಿ ಕೊರತೆಯು ಎಲುಬು ನೋವಿಗೆ ಪ್ರಮುಖ ಕಾರಣವಾಗಿದೆ. ವಿಟಮಿನ್ ಡಿ ದೇಹದಲ್ಲಿ ಕ್ಯಾಲ್ಸಿಯಂ ಪೋಷಣೆಗೆ ಸಹಾಯ ಮಾಡುತ್ತದೆ. ಇದು ಎಲುಬುಗಳನ್ನು ಗಟ್ಟಿಯಾಗಿಡಲು ಅಗತ್ಯವಾದ ಪೋಷಕಾಂಶವಾಗಿದೆ. ಇದರ ಕೊರತೆಯಿಂದ ಎಲುಬುಗಳಲ್ಲಿ ನೋವು (Bone Pain), ದುರ್ಬಲತೆ ಮತ್ತು ಗಟ್ಟಿತನದ ಸಮಸ್ಯೆಗಳು ಕಾಣಿಸಿಕೊಳ್ಳಬಹುದು. ಹಾಗಾದರೆ ಈ ರೀತಿಯ ಕೊರತೆ ನೀಗಿಸಿಕೊಳ್ಳುವುದು ಹೇಗೆ, ಎಲುಬು ಗಟ್ಟಿಯಾಗಿರಲು ಏನು ಮಾಡಬೇಕು ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಇತರ ವಿಟಮಿನ್ ಕೊರತೆಯೂ ಸಮಸ್ಯೆಗೆ ಕಾರಣ:

ವೈದ್ಯರು ತಿಳಿಸುವಂತೆ, ಕ್ಯಾಲ್ಸಿಯಂ ಮತ್ತು ವಿಟಮಿನ್ ಬಿ12 ಕೊರತೆಯೂ ದೇಹದ ಸ್ನಾಯುಗಳು ಮತ್ತು ಎಲುಬುಗಳ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ವಿಟಮಿನ್ C ಕೊರತೆಯಿಂದ ದೇಹದಲ್ಲಿ ದೌರ್ಬಲ್ಯ, ಸಂಧಿ ನೋವು ಮತ್ತು ದಣಿವು ಹೆಚ್ಚಾಗಬಹುದು. ಈ ರೀತಿಯ ಕೊರತೆ ದೀರ್ಘಕಾಲ ಮುಂದುವರಿದರೆ ಎಲುಬುಗಳು ದುರ್ಬಲವಾಗಿ, ಮುರಿತದ ಅಪಾಯವೂ ಹೆಚ್ಚಾಗುತ್ತದೆ.

ಇದನ್ನೂ ಓದಿ: ಡಾರ್ಕ್ ಸ್ಕಿನ್ ಮತ್ತು ಒಬೆಸಿಟಿ ಇರುವವರಲ್ಲಿ ವಿಟಮಿನ್ ಡಿ ಕೊರತೆ ಹೆಚ್ಚಾಗಿ ಕಂಡು ಬರುವುದಕ್ಕೆ ಕಾರಣ ಏನ್ ಗೊತ್ತಾ?

ವಿಟಮಿನ್ ಕೊರತೆಯನ್ನು ಹೇಗೆ ಪೂರೈಸಬೇಕು?

ಸಾಮಾನ್ಯವಾಗಿ ವಿಟಮಿನ್ ಕೊರತೆಯನ್ನು ನಿವಾರಿಸಲು ಸಮತೋಲನಯುತ ಮತ್ತು ಪೌಷ್ಟಿಕ ಆಹಾರ ಸೇವನೆ ಬಹಳ ಮುಖ್ಯ. ಹಾಲು, ಮೊಸರು, ಹಸಿರು ತರಕಾರಿ, ಮೊಟ್ಟೆ, ಹಣ್ಣು ಮತ್ತು ಒಣಹಣ್ಣುಗಳು ದೇಹಕ್ಕೆ ಅಗತ್ಯ ಪೋಷಕಾಂಶಗಳನ್ನು ಒದಗಿಸುತ್ತವೆ. ಪ್ರತಿದಿನ ಕೆಲವು ಸಮಯ ಸೂರ್ಯನ ಬೆಳಕಿನಲ್ಲಿ ಇರುವುದರಿಂದ ವಿಟಮಿನ್ ಡಿ ಪಡೆದುಕೊಳ್ಳಬಹುದು. ಕೊರತೆ ಹೆಚ್ಚು ಇದ್ದರೆ ವೈದ್ಯರ ಸಲಹೆಯ ಮೇರೆಗೆ ಸಪ್ಲಿಮೆಂಟ್ಸ್ ತೆಗೆದುಕೊಳ್ಳಬಹುದು. ಜೊತೆಗೆ ನಿಯಮಿತ ಆರೋಗ್ಯ ತಪಾಸಣೆ ಕೂಡ ಅಗತ್ಯ.

ಎಲುಬು ಗಟ್ಟಿಯಾಗಿರಲು ಏನು ಮಾಡಬೇಕು?

ಸರಿಯಾದ ಆಹಾರದ ಜೊತೆಗೆ ನಿಯಮಿತ ವ್ಯಾಯಾಮವೂ ಎಲುಬುಗಳ ಆರೋಗ್ಯಕ್ಕೆ ಅಗತ್ಯವಾಗಿದೆ. ದಿನನಿತ್ಯ ನಡೆಯುವುದು, ಲಘು ವ್ಯಾಯಾಮ ಮಾಡುವುದು ಎಲುಬುಗಳನ್ನು ಗಟ್ಟಿಗೊಳಿಸಲು ಸಹಕಾರಿಯಾಗಿದೆ. ಧೂಮಪಾನ ಮತ್ತು ಹೆಚ್ಚು ಜಂಕ್ ಫುಡ್ ಸೇವನೆಯನ್ನು ತಪ್ಪಿಸುವುದು ಉತ್ತಮ. ಒಟ್ಟಾರೆ, ದೇಹದಲ್ಲಿ ಅಗತ್ಯ ವಿಟಮಿನ್‌ಗಳ ಸಮತೋಲನ ಕಾಪಾಡಿಕೊಳ್ಳುವುದರಿಂದ ಎಲುಬು ನೋವು ಮತ್ತು ದುರ್ಬಲತೆ ಸಮಸ್ಯೆಗಳನ್ನು ತಡೆಗಟ್ಟಬಹುದು.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಕ್ರಿಕೆಟಿಗ ಸೂರ್ಯ ಹಾಗೂ ದೇವಿಶಾ ದಂಪತಿಗೆ ಮುದ್ದಾದ ಹೆಣ್ಣು ಮಗು ಜನನ – Kannada News | Suryakumar yadav and devisha shetty Welcomes Baby Girl

2026 ರ ಐಪಿಎಲ್‌ನಲ್ಲಿ ಮುಂಬೈ ಇಂಡಿಯನ್ಸ್ ತಂಡದ ಪರ ಆಡುತ್ತಿರುವ ಸೂರ್ಯಕುಮಾರ್ ಯಾದವ್​ಗೆ ಈ ಸೀಸನ್​ ಅಂದುಕೊಂಡಂತೆ ನಡೆದಿಲ್ಲ. ಈ ಆವೃತ್ತಿಯಲ್ಲಿ ಕಳಪೆ ಫಾರ್ಮ್​ನಿಂದ ಬಳಲುತ್ತಿರುವ ಸೂರ್ಯಕುಮಾರ್ ರನ್ ಬರ ಎದುರಿಸುತ್ತಿದ್ದಾರೆ. ಹೀಗಾಗಿ ಸಾಕಷ್ಟು ಟೀಕೆಗಳಿಗೆ ಗುರಿಯಾಗಿರುವ ಸೂರ್ಯಕುಮಾರ್​ಗೆ ವೈಯಕ್ತಿಕ ಬದುಕಿನಲ್ಲಿ ಸಿಹಿ ಸುದ್ದಿಯೊಂದು ಸಿಕ್ಕಿದೆ. ಅವರ ಮಡದಿ ದೇವಿಶಾ ಶೆಟ್ಟಿ ಮುದ್ದಾದ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಸ್ವತಃ ಈ ವಿಚಾರವನ್ನು ಸೂರ್ಯಕುಮಾರ್ ಯಾದವ್ ತಮ್ಮ ಅಧಿಕೃತ ಇನ್ಸ್​ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳುವ ಮೂಲಕ ಮಾಹಿತಿ ನೀಡಿದ್ದಾರೆ.

Source link

ರಾತ್ರಿ ಸಲ್ವಾರ್ ಧರಿಸಿ ರಸ್ತೆಯಲ್ಲಿ ನಿಂತಿದ್ದ ಮಹಿಳಾ ಐಪಿಎಸ್ ಅಧಿಕಾರಿಗೆ 40 ಪುರುಷರಿಂದ ಕಿರುಕುಳ! – Kannada News | Hyderabad woman Police commissioner goes undercover faces 40 men harassment at night

ಹೈದರಾಬಾದ್, ಮೇ 7: ತೆಲಂಗಾಣದಲ್ಲಿ (Telangana) ಹೊಸದಾಗಿ ನೇಮಕವಾದ ಮಲ್ಕಾಜ್‌ಗಿರಿ ಪೊಲೀಸ್ ಆಯುಕ್ತರಾದ ಬಿ. ಸುಮತಿ ಅವರು ನಗರದಲ್ಲಿ ಮಹಿಳೆಯರ ಸುರಕ್ಷತೆಯನ್ನು ಪರಿಶೀಲಿಸಲು ತಡರಾತ್ರಿ ಅಂಡರ್​ಕವರ್ ಕಾರ್ಯಾಚರಣೆ ನಡೆಸಿದ್ದಾರೆ. ಸಾಮಾನ್ಯ ಮಹಿಳೆಯಂತೆ ರಾತ್ರಿ ಓಡಾಡುತ್ತಿದ್ದ ಅವರಿಗೆ 3 ಗಂಟೆಯಲ್ಲಿ 40 ಪುರುಷರು ಕಿರುಕುಳ ನೀಡಿದ್ದಾರೆ. ಐಪಿಎಸ್ ಅಧಿಕಾರಿ ನಡೆಸಿದ ಈ ರಹಸ್ಯ ಕಾರ್ಯಾಚರಣೆಯ ಬಳಿಕ ನಗರದಾದ್ಯಂತ ಮಹಿಳೆಯರ ಭದ್ರತೆಗೆ ಅಗತ್ಯವಾದ ಮುನ್ನೆಚ್ಚರಿಕೆಗಳನ್ನು ಹೆಚ್ಚಿಸಲು ಅವರು ಸೂಚಿಸಿದ್ದಾರೆ.

ಹೊಸದಾಗಿ ನೇಮಕಗೊಂಡ ಮಲ್ಕಾಜ್‌ಗಿರಿ ಪೊಲೀಸ್ ಆಯುಕ್ತರಾದ ಬಿ. ಸುಮತಿಗೆ ನಗರದಲ್ಲಿ ಮಹಿಳೆಯರ ಸುರಕ್ಷತೆಯನ್ನು ನಿರ್ಣಯಿಸಲು ನಡೆಸಿದ ರಹಸ್ಯ ಕಾರ್ಯಾಚರಣೆಯ ಸಂದರ್ಭದಲ್ಲಿ ಸಲ್ವಾರ್ ಕಮೀಜ್‌ನಲ್ಲಿ ಸಾಮಾನ್ಯ ಮಹಿಳೆಯಂತೆ ಹೋಗಿದ್ದಾಗ ಸುಮಾರು 40 ಪುರುಷರು ಕಿರುಕುಳ ನೀಡಿದ್ದಾರೆ. ಅವರನ್ನು ಪೊಲೀಸ್ ಠಾಣೆಗೆ ಕರೆಸಿ ಬುದ್ಧಿ ಹೇಳಲಾಗಿದೆ. ಹಾಗೇ, ಮಹಿಳೆಯರ ಜೊತೆ ಯಾವ ರೀತಿ ವರ್ತಿಸಬೇಕೆಂದು ಕೌನ್ಸಿಲಿಂಗ್ ಕೂಡ ಕೊಡಲಾಗುತ್ತಿದೆ.

ಇದನ್ನೂ ಓದಿ: ತೆಲಂಗಾಣದಲ್ಲಿ ಭೀಕರ ಕೃತ್ಯ, ಮಾಂಸದ ಅಡುಗೆ ವಿಚಾರಕ್ಕೆ ದಂಪತಿ ನಡುವೆ ವಾಗ್ವಾದ, ಪತಿಯನ್ನೇ ಕೊಂದ ಪತ್ನಿ

ತಮ್ಮ ಪ್ರದೇಶದ ಕಾನೂನು ಮತ್ತು ಸುವ್ಯವಸ್ಥೆಯ ಬಗ್ಗೆ ತಿಳಿಯಲು ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಮಧ್ಯರಾತ್ರಿ ದಿಲ್ಸುಖ್‌ನಗರದ ಬಸ್ ನಿಲ್ದಾಣದಲ್ಲಿ ಒಬ್ಬಂಟಿಯಾಗಿ ನಿಂತಿದ್ದರು. ಈ 3 ಗಂಟೆಗಳ ಅವಧಿಯಲ್ಲಿ ಪುರುಷರ ಗುಂಪುಗಳು ಅವರನ್ನು ಸಂಪರ್ಕಿಸಿದವು. ಹಲವರು ಮದ್ಯ ಅಥವಾ ಡ್ರಗ್ಸ್ ಪ್ರಭಾವದಲ್ಲಿ ಮತ್ತು ಅಸಭ್ಯ ಹೇಳಿಕೆಗಳನ್ನು ನೀಡಿ ಕಿರುಕುಳ ನೀಡಿದ್ದಾರೆ. ವಿದ್ಯಾರ್ಥಿಗಳು ಮತ್ತು ಉದ್ಯೋಗಿಗಳು ಸೇರಿದಂತೆ ಹೆಚ್ಚಿನ ಯುವಕರಿಗೆ ತಾವು ಹಿರಿಯ ಪೊಲೀಸ್ ಅಧಿಕಾರಿಯೊಂದಿಗೆ ಮಾತನಾಡುತ್ತಿದ್ದೇವೆಂದು ತಿಳಿದಿರಲಿಲ್ಲ.

ಇದನ್ನೂ ಓದಿ: ಮಾನವೀಯತೆ ಅಂದ್ರೆ ಇದು: ಸುಡುವ ಬಿಸಿಲಿನಿಂದ ರಕ್ಷಿಸಲು ತನ್ನ ಅಂಗಡಿಯೊಳಗೆ ಬೀದಿ ನಾಯಿಗಳಿಗೆ ಆಶ್ರಯ ನೀಡಿದ ವ್ಯಕ್ತಿ

ಸುಮತಿ ಅವರು ಸುದ್ದಿಯಲ್ಲಿರುವುದು ಇದೇ ಮೊದಲಲ್ಲ. ಸುಮಾರು 25 ವರ್ಷಗಳ ಹಿಂದೆ ಅವರು ಮೊದಲು ಕಾಜಿಪೇಟೆ ರೈಲ್ವೆ ನಿಲ್ದಾಣದ ಬಳಿ ಉಪ ಪೊಲೀಸ್ ವರಿಷ್ಠಾಧಿಕಾರಿಯಾಗಿ ಪ್ರಾರಂಭಿಸಿದಾಗ ಮಹಿಳೆಯರ ಸುರಕ್ಷತೆಯನ್ನು ತಿಳಿಯಲು ಇದೇ ರೀತಿಯಲ್ಲಿ ಮಫ್ತಿಯಲ್ಲಿ ಕಾರ್ಯಾಚರಣೆಯನ್ನು ನಡೆಸಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link