All posts by nagaraj11081993

Video: ಪ್ರಧಾನಿ ಮೋದಿ ನಿಂದಿಸುವವರಿಗೆ ಹೊದಿಕೆ ಇಲ್ಲ, ಮುಸ್ಲಿಮರಿಗೆ ಬೆಡ್​ಶೀಟ್ ಕೊಡದ ಬಿಜೆಪಿ ಮಾಜಿ ಸಂಸದ ಸುಖ್​ಬೀರ್ – Kannada News | Former BJP MP Withholds Blanket Distribution Amid Remarks on PM Modi

ರಾಜಸ್ಥಾನ, ಫೆಬ್ರವರಿ 23: ರಾಜಸ್ಥಾನದಲ್ಲಿ ದತ್ತಿ ಕಾರ್ಯಕ್ರಮವೊಂದು ನಡೆಯುತ್ತಿತ್ತು, ಬಿಜೆಪಿ ಮಾಜಿ ಸಂಸದ ಸುಖ್​ಬೀರ್ ಸಿಂಗ್ ಎಲ್ಲರಿಗೂ ಬೆಡ್​ಶೀಟ್ ವಿತರಿಸುತ್ತಿದ್ದರು. ಈ ಸಮಯದಲ್ಲಿ ಪ್ರಧಾನಿ ಮೋದಿಗೆ ಅವಮಾನ ಮಾಡಿದವರಿಗೆ ಕೊಡುವುದಿಲ್ಲ ಎಂದು ಹೇಳುತ್ತಾ ಮುಸ್ಲಿಮರಿಗೆ ಹೊಸಕೆ ಕೊಡಲು ನಿರಾಕರಿಸಿರುವ ವಿಡಿಯೋ ವೈರಲ್ ಆಗಿದ್ದು, ಬಿಜೆಪಿ ಮಾಜಿ ಸಂಸದನ ನಡೆ ಹೊಸ ವಿವಾದವನ್ನು ಹುಟ್ಟುಹಾಕಿದೆ. 2014 ಮತ್ತು 2019 ರ ಸಂಸತ್ ಚುನಾವಣೆಯಲ್ಲಿ ಲೋಕಸಭೆಗೆ ಆಯ್ಕೆಯಾಗಿದ್ದರು.ಟೋಂಕ್ ಜಿಲ್ಲೆಯಲ್ಲಿ ನಡೆದ ಈ ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ತನ್ನ ನಿರ್ಧಾರದಿಂದ ಯಾರಿಗಾದರೂ ನೋವಾದರೆ ಅದರಿಂದ ನನಗೇನು ಆಗಬೇಕಿಲ್ಲ ಎಂದು ಹೇಳುವ ಮೂಲಕ ಅವರು ತಿರಸ್ಕಾರದ ಮನೋಭಾವವನ್ನು ತೋರಿದ್ದಾರೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ರಾಜ್ಯದ ತರಕಾರಿಗಳಲ್ಲಿ ಹೇರಳವಾಗಿ ಸಿಕ್ತು ಲೆಡ್ ಅಂಶ!ನೀವು ತಿನ್ನುವುದು ನಿಜವಾಗಲೂ ಆರ್ಗ್ಯಾನಿಕ್ ತರಕಾರಿನಾ? – Kannada News | Shocking Report: Lead and Pesticides Found in Karnataka Vegetables

ನೀವು ತಿನ್ನುವುದು ನಿಜವಾಗಲೂ ಆರ್ಗ್ಯಾನಿಕ್ ತರಕಾರೀನಾ?

ಬೆಂಗಳೂರು, ಫೆಬ್ರವರಿ 23: ರಾಜ್ಯದ ತರಕಾರಿಗಳಲ್ಲಿ ಲೆಡ್ (Lead)ಪ್ರಮಾಣ ಹೇರಳವಾಗಿ ಕಂಡುಬಂದಿದ್ದು, ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ (CPCB)ಯು ಕರ್ನಾಟಕದಾದ್ಯಂತ 70ಕ್ಕೂ ಹೆಚ್ಚು ತರಕಾರಿ ಸ್ಯಾಂಪಲ್​ಗಳನ್ನು ತಂದು ಪರಿಶೀಲಿಸಿದಾಗ 19 ಮಾದರಿಗಳಲ್ಲಿ ಸೀಸದ ಪ್ರಮಾಣ ಮಿತಿ ಮೀರಿರುವುದು ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ರೈತರಿಗೆ ಕೀಟನಾಶಕ ಬಳಕೆ ಬಗ್ಗೆ ಜಾಗೃತಿ ಮೂಡಿಸುವಂತೆ ಸಮಿತಿ ಶಿಫಾರಸು ಮಾಡಿದೆ.

ಎರಡು ವರ್ಷಗಳ ಹಿಂದೆಯೂ ತರಕಾರಿಗಳಲ್ಲಿ ಭಾರಿ ಲೋಹಗಳ ಅಂಶ ಪತ್ತೆಯಾಗಿದೆ ಎಂದು ಅಧ್ಯಯನ ವರದಿ ಪ್ರಕಟವಾಗಿತ್ತು. 2023ರ ಅಕ್ಟೋಬರ್ 25ರಂದು ಇಎಂಪ್ರಿ ಸಂಸ್ಥೆ 400 ಮಾದರಿಗಳ ಪರಿಶೀಲನೆ ಆಧಾರವಾಗಿ ಸೀಸ ಸೇರಿದಂತೆ ಭಾರಿ ಲೋಹಗಳ ಅಸ್ತಿತ್ವವಿದೆ ಎಂದು ತಿಳಿಸಿತ್ತು. ಈ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿ, CPCBಗೆ ಸ್ಥಳ ಪರಿಶೀಲನೆ ನಡೆಸುವಂತೆ ಸೂಚಿಸಿತ್ತು. ಆದರೀಗ ಮತ್ತೊಮ್ಮೆ ಮಾಡಿದ ಅಧ್ಯಯನದಿಂದ ರಾಜ್ಯದ ವಿವಿಧ ಭಾಗದ ತರಕಾರಿಗಳಲ್ಲಿ ಸೀಸದ ಪ್ರಮಾಣ ಹೆಚ್ಚಿರುವುದು ತಿಳಿದು ಬಂದಿದೆ.

ರಾಜ್ಯದ 19 ಸ್ಯಾಂಪಲ್​ಗಳಲ್ಲಿ ಲೋಹದ ಅಂಶ ಪತ್ತೆ!

ಎಫ್‌ಎಸ್‌ಎಸ್‌ಎಐ ಮಾನ್ಯತೆ ಪಡೆದ ಪ್ರಯೋಗಾಲಯಗಳಲ್ಲಿ ಪರೀಕ್ಷೆ ನಡೆಸಬೇಕು ಎಂದು ಹೇಳಿದ ಸಿಪಿಸಿಬಿ, ಐದು ಸದಸ್ಯರ ಸಮಿತಿಯನ್ನು ರಚಿಸಿ 72 ತರಕಾರಿ ಮಾದರಿಗಳನ್ನು ಸಂಗ್ರಹಿಸಿತ್ತು. ಇದರಲ್ಲಿ ನೆಲಮಂಗಲ, ರಾಜಾಜಿನಗರ, ಕೋಲಾರ ಮಾರುಕಟ್ಟೆಗಳಿಂದ 53 ಮಾದರಿಗಳು ಹಾಗೂ ನೆಲಮಂಗಲ, ಕೋಲಾರ, ಚಿಕ್ಕಬಳ್ಳಾಪುರ ಕೃಷಿ ಕ್ಷೇತ್ರಗಳಿಂದ ಉಳಿದ ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷೆ ನಡೆಸಲಾಗಿದ್ದು, ಸೀಸ ಹಾಗೂ ಕೀಟನಾಶಕಗಳ ಅಂಶ ಪತ್ತೆಯಾಗಿದೆ.

ಇದನ್ನೂ ಓದಿ ಬೆಂಗಳೂರು ಗ್ರಾಮಾಂತರ ಭಾಗದ ಪ್ರಯಾಣಿಕರಿಗೂ ಬಿಎಂಟಿಸಿ ಗುಡ್ ನ್ಯೂಸ್: ಇನ್ಮುಂದೆ 80 ಕಿಮೀ ವ್ಯಾಪ್ತಿಯಲ್ಲಿ ಸಂಚಾರ!

ಯಾವ್ಯಾವ ತರಕಾರಿಗಳಲ್ಲಿ ಸೀಸ?

72 ತರಕಾರಿ ಮಾದರಿಗಳಲ್ಲಿ 19 ಮಾದರಿಗಳು ಮಾನದಂಡಕ್ಕಿಂತ ಹೆಚ್ಚಾದ ಸೀಸದ ಅಂಶ ಹೊಂದಿರುವುದು ಎಫ್‌ಎಸ್‌ಎಸ್‌ಎಐ ಮಾನ್ಯತೆ ಪಡೆದ ಪ್ರಯೋಗಾಲಯ ಪರೀಕ್ಷೆಯಲ್ಲಿ ಪತ್ತೆಯಾಗಿದೆ. ಆರ್ಗ್ಯಾನಿಕ್ ಎಂದು ಮಾರಾಟವಾಗಿದ್ದ ಬದನೆಕಾಯಿಯಲ್ಲಿ 1.953 ಮಿ.ಗ್ರಾಂ/ಕೆಜಿ ಸೀಸ ಪತ್ತೆಯಾಗಿದ್ದು, ಇದು ನಿಗದಿತ 0.1 ಮಿ.ಗ್ರಾಂ ಮಿತಿಗಿಂತ ಸುಮಾರು 20 ಪಟ್ಟು ಹೆಚ್ಚಾಗಿದೆ. ತೊಂಡೆಕಾಯಿ, ಅವರೆಕಾಯಿ, ಸೊಪ್ಪು, ಕೋಸು ಸೇರಿದಂತೆ ಹಲವು ತರಕಾರಿಗಳಲ್ಲೂ ಮಿತಿಗಿಂತ ಹಲವು ಪಟ್ಟು ಅಧಿಕ ಸೀಸ ಕಂಡುಬಂದಿದೆ. ಸೌತೆಕಾಯಿ, ಹೀರೇಕಾಯಿ, ಕ್ಯಾಪ್ಸಿಕಂ, ಬೀಟ್‌ರೂಟ್, ಹಾಗಲಕಾಯಿ, ಶಲಗಂ, ಸ್ಕ್ವಾಶ್ ಮತ್ತು ಮೆಣಸಿನಕಾಯಿ ಮಾದರಿಗಳಲ್ಲೂ ಅತಿಯಾದ ಅಂಶ ಪತ್ತೆಯಾಗಿದೆ.

ಮಣ್ಣಿನಲ್ಲೂ ಸಿಕ್ತು ವಿಷಕಾರಿ ಅಂಶ

ಕೋಲಾರ, ಚಿಕ್ಕಬಳ್ಳಾಪುರ ಮತ್ತು ನೆಲಮಂಗಲ ಪ್ರದೇಶಗಳಿಂದ ಸಂಗ್ರಹಿಸಿದ 26 ಮಣ್ಣಿನ ಮಾದರಿಗಳಲ್ಲಿ 23 ಮಾದರಿಗಳು ದೂಷಿತವಾಗಿವೆ. ಇದು ಪ್ರಾಥಮಿಕ ವರದಿ ಮಾತ್ರವಾಗಿದ್ದು, ಮುಂದಿನ ದಿನಗಳಲ್ಲಿ ಸಮಗ್ರ ಅಧ್ಯಯನ ನಡೆಸುವಂತೆ ಸೂಚಿಸಲಾಗಿದೆ. ಪರಿಶೀಲನೆ ವೇಳೆ ಎಫ್‌ಎಸ್‌ಎಸ್‌ಆರ್ ಮಾನದಂಡಕ್ಕಿಂತ ಹೆಚ್ಚು ಪ್ರಮಾಣದ 12 ವಿಧದ ಕೀಟನಾಶಕ ಅವಶೇಷಗಳು ಪತ್ತೆಯಾಗಿವೆ. ಕ್ಯಾಪ್ಸಿಕಂ, ಮೆಣಸಿನಕಾಯಿ (ಬಜ್ಜಿ ಮೆಣಸು), ಶುಂಠಿ ಹಾಗೂ ಸೌತೆಕಾಯಿ ಮಾದರಿಗಳಲ್ಲಿ ಅತಿಯಾದ ಕೀಟನಾಶಕ ಅಂಶ ಕಂಡುಬಂದಿದೆ.

ಭಾರೀ ವಿಷಕಾರಿ ಕೀಟನಾಶಕವಾದ ಮೊನೋಕ್ರೋಟೊಫೋಸ್ ಕೂಡ ಪತ್ತೆಯಾಗಿದ್ದು, ಭಾರತದಲ್ಲಿ 2023ರಲ್ಲಿ ಇದನ್ನು ನಿಷೇಧಿಸಲಾಗಿತ್ತು. ಮೆಣಸಿನಕಾಯಿ ಮಾದರಿಗಳಲ್ಲಿ ನಿಗದಿತ 0.2 ಮಿ.ಗ್ರಾಂ/ಕೆಜಿ ಮಿತಿಗಿಂತ ಎರಡು ಪಟ್ಟು ಹೆಚ್ಚು ಮೊನೋಕ್ರೋಟೊಫೋಸ್ ಕಂಡುಬಂದಿದೆ.

ಇದನ್ನೂ ಓದಿ ಕರ್ನಾಟಕ ಹವಾಮಾನ ವರದಿ: ಕೂಲ್ ಸಿಟಿ ಇನ್ಮುಂದೆ ಹಾಟ್ ಸಿಟಿ! ಬೆಂಗಳೂರಿಗೆ ಗರಿಷ್ಠ ತಾಪಮಾನದ ಅಲರ್ಟ್

ಇದಲ್ಲದೆ ಏಸಿಫೇಟ್, ಇಥಿಯಾನ್, ಫಿಪ್ರೋನಿಲ್ ಹಾಗೂ ಪ್ರೊಫೆನೋಫೋಸ್ ಮುಂತಾದ ಕೀಟನಾಶಕಗಳು ಸಹ ಪತ್ತೆಯಾಗಿದ್ದು, ಅವುಗಳ ವಿಷಕಾರಿ ಪರಿಣಾಮದ ಹಿನ್ನೆಲೆಯಲ್ಲಿ ಯುರೋಪಿಯನ್ ಯೂನಿಯನ್‌ನಲ್ಲಿ ಈಗಾಗಲೇ ನಿಷೇಧಿಸಲಾಗಿದೆ ಆದರೆ ನಮ್ಮಲ್ಲಿ ಬಳಕೆಯಲ್ಲಿರುವುದು ಆತಂಕ ಸೃಷ್ಟಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On – 8:43 am, Mon, 23 February 26

Source link

ಶಿವಾಜಿ ಜಯಂತಿ ವೇಳೆ ಕಲ್ಲು ತೂರಾಟ ಪ್ರಕರಣ: ಫೆ. 26 ರಂದು ಬೃಹತ್ ಹೋರಾಟಕ್ಕೆ ಹಿಂದೂ ಸಂಘಟನೆಗಳ ಕರೆ – Kannada News | Stone Pelting During Shivaji Jayanti Procession in Bagalkot: Hindu Groups Call for Massive Protest on Feb 26

ಬಾಗಲಕೋಟೆ, ಫೆಬ್ರವರಿ 23: ಶಿವಾಜಿ ಜಯಂತಿ ಮೆರವಣಿಗೆ ವೇಳೆ ನಡೆದ ಕಲ್ಲುತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಗಲಕೋಟೆಯಲ್ಲಿ ಬೃಹತ್ ಪ್ರತಿಭಟನೆಗೆ ಕರೆ ನೀಡಲಾಗಿದೆ. ಹಿಂದೂ ಸಮುದಾಯವು ಫೆಬ್ರವರಿ 26 ರಂದು ದೊಡ್ಡ ಮಟ್ಟದ ಹೋರಾಟ ನಡೆಸಲು ಸಿದ್ಧತೆ ನಡೆಸಿದೆ. ಇತ್ತೀಚೆಗೆ ಶಿವಾಜಿ ಮಹಾರಾಜರ ಭಾವಚಿತ್ರ ಮೆರವಣಿಗೆ ಮೇಲೆ ಕಲ್ಲು ಮತ್ತು ಚಪ್ಪಲಿ ಎಸೆದು ಅಪಮಾನ ಮಾಡಿದವರನ್ನು ಇನ್ನೂ ಬಂಧಿಸಿಲ್ಲ ಎಂದು ಭಾನುವಾರ ಸಭೆಯಲ್ಲಿ ಆತಂಕ ವ್ಯಕ್ತಪಡಿಸಲಾಯಿತು. ಹಿಂದೂ ಸಕಲ ಸಮಾಜದ ಮುಖಂಡರು ಮತ್ತು ರಾಜಕೀಯ ನಾಯಕರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ, ಅಪರಾಧಿಗಳನ್ನು ಕೂಡಲೇ ಬಂಧಿಸಬೇಕು ಎಂದು ಒತ್ತಾಯಿಸಲಾಯಿತು. ಆರೋಪಿಗಳನ್ನು ಬಂಧಿಸದಿದ್ದರೆ, ಇದೇ ಫೆಬ್ರವರಿ 26 ರಂದು ಅಂಬಾಬಾಯಿ ದೇವಸ್ಥಾನದಿಂದ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸುವುದಾಗಿ ಘೋಷಿಸಲಾಗಿದೆ.

ಅಂದು ರಾತ್ರಿ ಮಸೀದಿ ಒಳಗೆ ಸೇರಿಕೊಂಡು ದುಷ್ಕೃತ್ಯ ಎಸಗಿದ ಕಿಡಿಗೇಡಿಗಳನ್ನು ಆದಷ್ಟು ಬೇಗ ಬಂಧಿಸಬೇಕೆಂದು ಸಭೆ ಸರ್ಕಾರವನ್ನು ಆಗ್ರಹಿಸಲಾಗಿದೆ. ಫೆಬ್ರವರಿ 26 ರಂದು ಬೆಳಗ್ಗೆ 10,30 ಗಂಟೆಗೆ ಅಂಬಾಬಾಯಿ ದೇವಸ್ಥಾನದಿಂದ ಪ್ರತಿಭಟನಾ ಮೆರವಣಿಗೆ ಹೊರಡಲಿದೆ. ಈ ಹೋರಾಟದ ಮೂಲಕ ಆರೋಪಿಗಳ ಬಂಧನಕ್ಕೆ ಒತ್ತಾಯಿಸಲು ಹಿಂದೂ ಸಮುದಾಯ ಮುಂದಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಪವರ್​ಪ್ಲೇನಲ್ಲಿ ಪಂದ್ಯ ಗೆಲ್ಲಲು ಸಾಧ್ಯವಿಲ್ಲ, ಆದರೆ ಸೋಲಬಹುದು! – Kannada News | Suryakumar yadav post match interview IND vs SA 2026

T20 World Cup 2026: ಟಿ20 ವಿಶ್ವಕಪ್​ನ ಲೀಗ್​ ಹಂತದಲ್ಲಿ ಸತತ 4 ಪಂದ್ಯಗಳನ್ನು ಗೆದ್ದು ಬೀಗಿದ್ದ ಟೀಮ್ ಇಂಡಿಯಾ ಸೂಪರ್-8 ಸುತ್ತಿನ ಮೊದಲ ಪಂದ್ಯದಲ್ಲೇ ಪರಾಜಯಗೊಂಡಿದೆ. ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಸೌತ್ ಆಫ್ರಿಕಾ ತಂಡದ ನಾಯಕ ಐಡೆನ್ ಮಾರ್ಕ್ರಾಮ್ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಸೌತ್ ಆಫ್ರಿಕಾ 20 ಓವರ್​ಗಳಲ್ಲಿ 7 ವಿಕೆಟ್ ಕಳೆದುಕೊಂಡು 187 ರನ್ ಕಲೆಹಾಕಿತು. ಈ ಕಠಿಣ ಗುರಿ ಬೆನ್ನತ್ತಿದ ಟೀಮ್ ಇಂಡಿಯಾ 18.5 ಓವರ್​ಗಳಲ್ಲಿ 111 ರನ್​ಗಳಿಸಿ ಆಲೌಟ್ ಆಗಿದೆ. ಈ ಮೂಲಕ ಭಾರತ ತಂಡವು 76 ರನ್​ಗಳಿಂದ ಸೋಲೊಪ್ಪಿಕೊಂಡಿದೆ.

ಈ ಸೋಲಿನ ಬಳಿಕ ಮಾತನಾಡಿದ ಟೀಮ್ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್, ಈ ಪಂದ್ಯದ ಆರಂಭದಲ್ಲಿ ನಾವು ಉತ್ತಮ ಪ್ರದರ್ಶನ ನೀಡಿದ್ದೇವೆ ಎಂದು ಭಾವಿಸುತ್ತೇನೆ. ಏಕೆಂದರೆ ಆರಂಭದಲ್ಲಿ ನಾವು ನಿಜವಾಗಿಯೂ ಚೆನ್ನಾಗಿ ಬೌಲಿಂಗ್ ಮಾಡಿದ್ದೇವೆ. ಕೇವಲ 21 ರನ್​ಗಳಿಗೆ 3 ವಿಕೆಟ್ ಕಬಳಿಸಿ ನಮ್ಮ ಬೌಲರ್​ಗಳು ಆರಂಭಿಕ ಆಘಾತ ನೀಡಿದ್ದರು.

ಆದರೆ ಆ ಬಳಿಕ 7 ರಿಂದ 15ನೇ ಓವರ್​ವರೆಗೆ ಸೌತ್ ಆಫ್ರಿಕಾ ಬ್ಯಾಟರ್​ಗಳು ಉತ್ತಮವಾಗಿ ಬ್ಯಾಟಿಂಗ್ ಮಾಡಿದರು. ಇದಾಗ್ಯೂ ಕೊನೆಯ ಹಂತದಲ್ಲಿ ನಮ್ಮ ಬೌಲರ್​ಗಳು ಉತ್ತಮ ದಾಳಿ ಸಂಘಟಿಸಿದ್ದರು. ಒಟ್ಟಾರೆಯಾಗಿ, ನಾವು ನಿಜವಾಗಿಯೂ ಚೆನ್ನಾಗಿ ಬೌಲಿಂಗ್ ಮಾಡಿದ್ದೇವೆ. ಅದೇ ರೀತಿ ನಾವು ಸ್ವಲ್ಪ ಉತ್ತಮವಾಗಿ ಬ್ಯಾಟಿಂಗ್ ಮಾಡಬಹುದಿತ್ತು.

ಏಕೆಂದರೆ 180-185  ರನ್​ಗಳ ಗುರಿಯನ್ನು ಬೆನ್ನಟ್ಟುತ್ತಿದ್ದರೆ, ನೀವು ಪವರ್‌ಪ್ಲೇಯಲ್ಲಿ ಪಂದ್ಯವನ್ನು ಗೆಲ್ಲಲು ಸಾಧ್ಯವಿಲ್ಲ. ಆದರೆ ನೀವು ಪವರ್‌ಪ್ಲೇಯಲ್ಲಿ ಪಂದ್ಯವನ್ನು ಕಳೆದುಕೊಳ್ಳಬಹುದು. ನಾವು ಪವರ್‌ಪ್ಲೇನಲ್ಲಿ ಹಲವಾರು ವಿಕೆಟ್‌ಗಳನ್ನು ಕಳೆದುಕೊಂಡಿದ್ದೇವೆ.

ಆರಂಭದಲ್ಲೇ ವಿಕೆಟ್ ಕಳೆದುಕೊಂಡರೆ ಬೃಹತ್ ಮೊತ್ತದ ಗುರಿಯನ್ನು ಬೆನ್ನತ್ತಲು ಸಣ್ಣ ಸಣ್ಣ ಜೊತೆಯಾಟವಾಡಲು ಸಾಧ್ಯವಾಗುವುದಿಲ್ಲ. ಹೀಗಾಗಿ ನಮ್ಮ ಸೋಲಿಗೆ ಮುಖ್ಯ ಕಾರಣ ಪವರ್​ಪ್ಲೇನಲ್ಲೇ ವಿಕೆಟ್ ಕಳೆದುಕೊಂಡಿರುವುದು. ಇದರಿಂದ ನಾವು ಪಾಠ ಕಲಿತಿದ್ದೇವೆ ಎಂದು ಸೂರ್ಯಕುಮಾರ್ ಯಾದವ್ ಹೇಳಿದ್ದಾರೆ.

ಈ ಸೋಲಿನ ಹೊರತಾಗಿಯೂ ಸಕರಾತ್ಮಕ ವಿಷಯ ಎಂದರೆ, ಜಸ್​ಪ್ರೀತ್ ಬುಮ್ರಾ ಹಾಗೂ ಅರ್ಷದೀಪ್ ಸಿಂಗ್ ಬೌಲಿಂಗ್ ಮಾಡಿದ ರೀತಿ. ಇಬ್ಬರೂ ಅತ್ಯುತ್ತಮವಾಗಿ ದಾಳಿ ಸಂಘಟಿಸಿದ್ದರು. ಇವರಿಬ್ಬರೂ ಎಸೆದ 8 ಓವರ್​ಗಳಲ್ಲಿ 5 ವಿಕೆಟ್​ಗಳನ್ನು ಕಬಳಿಸಿದ್ದರು. ಅಷ್ಟೇ ಅಲ್ಲದೆ 8 ಓವರ್​ಗಳ ಮೂಲಕ 45 ರಿಂದ 50 ರನ್ ಮಾತ್ರ ನೀಡಿದ್ದಾರೆ.

ಇಬ್ಬರೂ ಅನುಭವಿ ವೇಗಿಗಳು ನಮ್ಮ ತಂಡದಲ್ಲಿ ಇರುವುದು ಪ್ಲಸ್ ಪಾಯಿಂಟ್. ಇದಾಗ್ಯೂ ನಾವು ಚೆನ್ನಾಗಿ ಬ್ಯಾಟಿಂಗ್ ಮಾಡಿದ್ರೆ ಪಂದ್ಯವನ್ನು ಗೆಲ್ಲಬಹುದಿತ್ತು. ಈ ಸೋಲಿನ ಹೊರತಾಗಿಯೂ ನಾವು ಝಿಂಬಾಬ್ವೆ ವಿರುದ್ಧದ ಪಂದ್ಯದಲ್ಲಿ ಚೆನ್ನಾಗಿ ಬ್ಯಾಟಿಂಗ್ ಮಾಡಿ, ಬೌಲಿಂಗ್ ಮಾಡಿ, ಫೀಲ್ಡಿಂಗ್ ಮಾಡಿ ಪಂದ್ಯವನ್ನು ಗೆಲ್ಲುತ್ತೇವೆ. ಅಲ್ಲದೆ ಟೀಮ್ ಇಂಡಿಯಾ ತನ್ನ ಬ್ರಾಂಡ್ ಕ್ರಿಕೆಟ್​ ಅನ್ನು ಆಡಲಿದೆ. ಈ ಮೂಲಕ ಮುಂದಿನ ಪಂದ್ಯದಲ್ಲಿ ಕಂಬ್ಯಾಕ್ ಮಾಡುವುದಾಗಿ ಸೂರ್ಯಕುಮಾರ್ ಯಾದವ್ ಹೇಳಿದ್ದಾರೆ.

Source link

‘ರಾಮ ಹಾಗೂ ಹನುಮನ ಭಕ್ತರು ಖುಷಿಯಿಂದ ನೋಡುವ ಸಿನಿಮಾ ಇದು’; ಹೆಮ್ಮೆಯಿಂದ ಹೇಳಿದ ರಿಷಬ್

‘ಜೈ ಹನುಮಾನ್’ ಸಿನಿಮಾದಲ್ಲಿ ರಿಷಬ್ ಶೆಟ್ಟಿ ಅವರು ಹನುಮಂತನಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಚಿತ್ರದ ಮುಹೂರ್ತ ಹನುಮಂತ ಹುಟ್ಟಿದ ಹಂಪಿಯ ಅಂಜನಾದ್ರಿ ಬೆಟ್ಟದಲ್ಲಿ ನಡೆದಿದೆ. ರಿಷಬ್ ಅವರು ಕಾಲ್ನಡಿಗೆಯಲ್ಲೇ ಬೆಟ್ಟ ಏರಿದರು. ಮುಹೂರ್ತದ ಬಳಿಕ ಮಾತನಾಡಿದ ಅವರು, ‘ಈ ಚಿತ್ರದಿಂದ ರಾಮ ಹಾಗೂ ಹನುಮ ಭಕ್ತರಿಗೆ ಖುಷಿ ಆಗಲಿದೆ’ ಎಂದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

‘ಟಾಕ್ಸಿಕ್’ ಚಿತ್ರಕ್ಕೆ ಯಶ್ ಪಡೆದ ಸಂಭಾವನೆ ಎಷ್ಟು? – Kannada News | Yash’s Toxic Remuneration: Pan India Star Demands 150 Crores After KGF Success?

ಕನ್ನಡದ ರಾಕಿಂಗ್ ಸ್ಟಾರ್ ಯಶ್ ‘ಕೆಜಿಎಫ್ 1’ ಮತ್ತು ‘ಕೆಜಿಎಫ್ 2’ ಚಿತ್ರಗಳೊಂದಿಗೆ ಸತತ ಬ್ಲಾಕ್ಬಸ್ಟರ್ ಹಿಟ್ ಗಳಿಸಿದ್ದಾರೆ. ಅವರು ಪ್ರಸ್ತುತ ‘ಟಾಕ್ಸಿಕ್: ಎ ಫೇರಿಟೇಲ್ ಫಾರ್ ಗ್ರೋನ್-ಅಪ್ಸ್’ (Toxic Movie) ಚಿತ್ರದಲ್ಲಿ ನಟಿಸುತ್ತಿದ್ದಾರೆ. ಬಿಡುಗಡೆಗೂ ಮುನ್ನ, ಚಿತ್ರದ ಟೀಸರ್ ಮತ್ತು ಗ್ಲಿಂಪ್ಸ್ ಸಾಮಾಜಿಕ ಮಾಧ್ಯಮದಲ್ಲಿ ಚರ್ಚೆ ಆಗುತ್ತಿದೆ. ಇತ್ತೀಚೆಗೆ, ಈ ಚಿತ್ರಕ್ಕಾಗಿ ಯಶ್ ತೆಗೆದುಕೊಳ್ಳುತ್ತಿರುವ ಸಂಭಾವನೆ ಕೂಡ ಚರ್ಚೆಯ ವಿಷಯವಾಗಿದೆ.

ರಾಕಿಂಗ್ ಸ್ಟಾರ್ ಯಶ್ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಅಪಾರ ಕ್ರೇಜ್ ಹೊಂದಿರುವ ನಾಯಕ. ಸಾಮಾನ್ಯ ಕುಟುಂಬದಿಂದ ಬಂದು ಆ್ಯಂಕರಿಂಗ್ ಮಾಡಿ, ಧಾರಾವಾಹಿಗಳಲ್ಲಿ ನಟಿಸಿ, ಈಗ ಹೀರೋ ಆಗಿದ್ದಾರೆ. ಅದಾದ ನಂತರ, ಅವರು ನಾಯಕನಾಗಿ ಮಿಂಚಿದರು. ನಿರ್ದೇಶಕ ಪ್ರಶಾಂತ್ ನೀಲ್ ನಿರ್ದೇಶನದ ಕೆಜಿಎಫ್ ಚಿತ್ರ ಅವರ ವೃತ್ತಿಜೀವನಕ್ಕೆ ತಿರುವು ನೀಡಿತು. ಆ ಸಮಯದಲ್ಲಿ ಈ ಚಿತ್ರವು ಭಾರಿ ಯಶಸ್ಸನ್ನು ಕಂಡಿತು. ಒಂದು ಚಿತ್ರದಿಂದ ಅವರು ಪ್ಯಾನ್ ಇಂಡಿಯಾ ಮಟ್ಟದಲ್ಲಿ ಅಪಾರ ಕ್ರೇಜ್ ಗಳಿಸಿದರು.

‘ಕೆಜಿಎಫ್’ ಮತ್ತು ‘ಕೆಜಿಎಫ್ 2’ ಚಿತ್ರಗಳ ಮೂಲಕ ಅಭೂತಪೂರ್ವ ಯಶಸ್ಸನ್ನು ಕಂಡ ಯಶ್, ಈಗ ಟಾಕ್ಸಿಕ್ ಚಿತ್ರದಲ್ಲಿ ನಟಿಸುತ್ತಿದ್ದಾರೆ. ವರದಿಗಳ ಪ್ರಕಾರ, ಯಶ್ ಈ ಚಿತ್ರಕ್ಕಾಗಿ ಸುಮಾರು 150 ಕೋಟಿ ರೂ. ಸಂಭಾವನೆ ಪಡೆಯುತ್ತಿದ್ದಾರೆ. ಯಶ್ ಈ ಚಿತ್ರಕ್ಕೆ ಸಹ-ನಿರ್ಮಾಪಕರಾಗಿಯೂ ಕಾರ್ಯನಿರ್ವಹಿಸುತ್ತಿದ್ದಾರೆ. ಅವರ ಒಟ್ಟು ಗಳಿಕೆ ಇನ್ನೂ ಹೆಚ್ಚಿರಬಹುದು ಎಂದು ಹೇಳಲಾಗುತ್ತದೆ.

ಈ ಚಿತ್ರಕ್ಕಾಗಿ ಅವರು 150 ಕೋಟಿ ರೂಪಾಯಿ ನಿಗದಿ ಮಾಡಿದ್ದು, ಆ ಸಂಭಾವನೆ ತೆಗೆದುಕೊಳ್ಳದೆ ಅದನ್ನು ಸಿನಿಮಾ ಮೇಲೆ ಹೂಡಿರಬಹುದು ಎಂದು ಹೇಳಲಾಗುತ್ತಾ ಇದೆ. ‘ಟಾಕ್ಸಿಕ್’ ಚಿತ್ರವನ್ನು ಯಶ್ ಮತ್ತು ವೆಂಕಟ್ ಕೆ. ನಾರಾಯಣ್ ನಿರ್ಮಿಸುತ್ತಿದ್ದಾರೆ. ಇದು ಮಾರ್ಚ್ 19ರಂದು ಈದ್, ಯುಗಾದಿ ಹಬ್ಬಗಳ ಸಂದರ್ಭದಲ್ಲಿ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.

ಇದನ್ನೂ ಓದಿ: ‘ಟಾಕ್ಸಿಕ್’ನಲ್ಲಿ ಯಶ್ ಪಾತ್ರದ ಹೆಸರು ಟಿಕೆಟ್; ಮಾಸ್ಟರ್ ಪ್ಲ್ಯಾನ್ ಮಾಡಿದ ರಾಕಿಂಗ್ ಸ್ಟಾರ್

ಇತ್ತೀಚೆಗೆ ಬಿಡುಗಡೆಯಾದ ಟೀಸರ್ ಯೂಟ್ಯೂಬ್‌ನಲ್ಲಿ ಸಂಚಲನ ಮೂಡಿಸಿದೆ. ಈ ಚಿತ್ರವು ತನ್ನ ಮಾಸ್ ಆಕ್ಷನ್ ಕಾರಣದಿಂದ ಚಿತ್ರಮಂದಿರಗಳಲ್ಲಿ ಸಂಚಲನ ಸೃಷ್ಟಿಸಲಿದೆ ಎಂದು ಹೇಳಲಾಗುತ್ತಾ ಇದೆ. ಈ ಚಿತ್ರದಲ್ಲಿ ಕಿಯಾರಾ ಅಡ್ವಾಣಿ, ನಯನತಾರಾ ಮತ್ತು ರುಕ್ಮಿಣಿ ವಸಂತ್ ನಾಯಕಿಯರಾಗಿ ನಟಿಸುತ್ತಿದ್ದಾರೆ .

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಗೆದ್ದರೆ ಮಾತ್ರ ಸಾಕಾಗಲ್ಲ… ಹೀಗಿದೆ ಟೀಮ್ ಇಂಡಿಯಾದ ‘ಸೆಮಿಫೈನಲ್’ ಲೆಕ್ಕಾಚಾರ – Kannada News | How can India qualify for semifinal in T20 World Cup 2026

T20 World Cup 2026: ಟಿ20 ವಿಶ್ವಕಪ್​ನ ಸೂಪರ್-8 ಸುತ್ತಿನ ಮೊದಲ ಪಂದ್ಯದಲ್ಲೇ ಟೀಮ್ ಇಂಡಿಯಾ ಮುಗ್ಗರಿಸಿದೆ. ಈ ಸೋಲಿನ ಹೊರತಾಗಿಯೂ ಭಾರತ ತಂಡಕ್ಕೆ ಸೆಮಿಫೈನಲ್​ಗೇರಲು ಉತ್ತಮ ಅವಕಾಶವಿದೆ. ಈ ಅವಕಾಶದೊಂದಿಗೆ ಟೀಮ್ ಇಂಡಿಯಾ ತನ್ನ ಗೆಲುವಿನ ಅಂತರವನ್ನೂ ಸಹ ನೋಡಿಕೊಳ್ಳಬೇಕಿದೆ. ಏಕೆಂದರೆ ಸೆಮಿಫೈನಲ್​ ರೇಸ್​ನಲ್ಲಿ ಒಟ್ಟು 4 ತಂಡಗಳಿದ್ದು, ಈ ನಾಲ್ಕು ಟೀಮ್​ಗಳಲ್ಲಿ ಎರಡು ತಂಡ ಮುಂದಿನ ಹಂತಕ್ಕೇರಲಿದೆ.

ಆದರೆ ಇತ್ತ ಟೀಮ್ ಇಂಡಿಯಾ ಸೌತ್ ಆಫ್ರಿಕಾ ವಿರುದ್ಧ ಹೀನಾಯವಾಗಿ ಸೋತಿರುವುದರಿಂದ ನೆಟ್ ರನ್ ರೇಟ್ (NRR) -3.800 ಗೆ ಕುಸಿದಿದೆ. ಹೀಗಾಗಿ ಭಾರತ ತಂಡವು ಮುಂದಿನ ಪಂದ್ಯಗಳಲ್ಲಿ ಭರ್ಜರಿ ಜಯ ಸಾಧಿಸಲೇಬೇಕು. ಅದರಂತೆ ಟೀಮ್ ಇಂಡಿಯಾದ ಸೆಮಿಫೈನಲ್ ಹಾದಿಯ ಸಮೀಕರಣಗಳು ಹೇಗಿವೆ ಎಂದು ನೋಡುವುದಾದರೆ…

  • ಎರಡು ಗೆಲುವು: ಭಾರತ ತಂಡವು ಮುಂದಿನ ಎರಡು ಮ್ಯಾಚ್​ಗಳಲ್ಲಿ ಜಯ ಸಾಧಿಸಬೇಕು. ಅಂದರೆ ಝಿಂಬಾಬ್ವೆ (ಫೆಬ್ರವರಿ 26) ಮತ್ತು ವೆಸ್ಟ್ ಇಂಡೀಸ್ (ಮಾರ್ಚ್ 1) ತಂಡಗಳನ್ನು ಸೋಲಿಸಲೇಬೇಕು.
  • 4 ಅಂಕಗಳು: ಮುಂದಿನ ಎರಡು ಪಂದ್ಯಗಳಲ್ಲಿ ಜಯ ಸಾಧಿಸಿದರೆ ಟೀಮ್ ಇಂಡಿಯಾ ಒಟ್ಟು 4 ಅಂಕಗಳನ್ನು ಪಡೆಯಲಿದೆ.
  • ಭಾರೀ ಅಂತರದ ಗೆಲುವು: ಪ್ರಸ್ತುತ ಭಾರತದ ನೆಟ್ ರನ್ ರೇಟ್​ ತುಂಬಾ ಕಡಿಮೆ ಇರುವುದರಿಂದ, ಮುಂಬರುವ ಪಂದ್ಯಗಳನ್ನು ದೊಡ್ಡ ಅಂತರದಿಂದ ಗೆಲ್ಲುವುದು ಬಹಳ ಮುಖ್ಯ. ಒಂದು ವೇಳೆ ಪಾಯಿಂಟ್ಸ್ ಪಟ್ಟಿಯಲ್ಲಿ ಟೈ ಉಂಟಾದರೆ, ಉತ್ತಮ ರನ್ ರೇಟ್ ಇರುವ ತಂಡಕ್ಕೆ ಆದ್ಯತೆ ಸಿಗುತ್ತದೆ.
  • ಇತರೆ ತಂಡಗಳ ಫಲಿತಾಂಶ: ಸೌತ್ ಆಫ್ರಿಕಾ ತಂಡವು ವೆಸ್ಟ್ ಇಂಡೀಸ್ ಮತ್ತು ಝಿಂಬಾಬ್ವೆ ವಿರುದ್ಧವೂ ಗೆದ್ದರೆ ಭಾರತದ ಹಾದಿ ಸುಗಮವಾಗುತ್ತದೆ. ಒಂದು ವೇಳೆ ವೆಸ್ಟ್ ಇಂಡೀಸ್ ಅಥವಾ ಝಿಂಬಾಬ್ವೆ ಇತರ ಪಂದ್ಯಗಳನ್ನು ಗೆದ್ದರೆ, ಅಂಕಗಳ ಸಮಬಲ ಏರ್ಪಟ್ಟು ರನ್ ರೇಟ್ ಲೆಕ್ಕಾಚಾರಕ್ಕೆ ಬರಲಿದೆ.

ಅಂದರೆ ಇಲ್ಲಿ ಇತರೆ ತಂಡಗಳ ಫಲಿತಾಂಶವನ್ನು ಅವಲಂಭಿಸದೇ ಟೀಮ್ ಇಂಡಿಯಾ ಸೆಮಿಫೈನಲ್​ಗೇರಬೇಕಿದ್ದರೆ ಝಿಂಬಾಬ್ವೆ ಹಾಗೂ ವೆಸ್ಟ್ ಇಂಡೀಸ್ ತಂಡಗಳನ್ನು ಭಾರೀ ಅಂತರದಿಂದ ಸೋಲಿಸಬೇಕು. ಈ ಮೂಲಕ ಉತ್ತಮ ನೆಟ್ ರನ್ ರೇಟ್ ಪಡೆದುಕೊಳ್ಳಬಹುದು.

ಇದರಿಂದ ಝಿಂಬಾಬ್ವೆ ಅಥವಾ ವೆಸ್ಟ್ ಇಂಡೀಸ್ ಉಳಿದ 2 ಮ್ಯಾಚ್​ಗಳಲ್ಲಿ ಗೆಲುವು ದಾಖಲಿಸಿದರೂ ಅಂಕ ಪಟ್ಟಿಯಲ್ಲಿ ಟೀಮ್ ಇಂಡಿಯಾವನ್ನು ಹಿಂದಿಕ್ಕಲು ಸಾಧ್ಯವಾಗುವುದಿಲ್ಲ. ಈ ಮೂಲಕ ಭಾರತ ತಂಡವು ಗ್ರೂಪ್-1 ಪಾಯಿಂಟ್ಸ್ ಟೇಬಲ್​ನಲ್ಲಿ ದ್ವಿತೀಯ ಸ್ಥಾನದಲ್ಲಿ ಕಾಣಿಸಿಕೊಳ್ಳುವ ಮೂಲಕ ಸೆಮಿಫೈನಲ್​ಗೇರಬಹುದು.

ಅಂದರೆ ಇಲ್ಲಿ ಭಾರತ ತಂಡಕ್ಕೆ ಗೆಲುವಿನೊಂದಿಗೆ ನೆಟ್ ರನ್ ರೇಟ್ ಕೂಡ ಹೆಚ್ಚಿಸಿಕೊಳ್ಳಬೇಕಾದ ಅನಿವಾರ್ಯತೆ ಇದೆ. ಹೀಗಾಗಿ ಟೀಮ್ ಇಂಡಿಯಾ ನೇರವಾಗಿ ಸೆಮಿಫೈನಲ್​ಗೇರಬೇಕಿದ್ದರೆ ಕೇವಲ ಗೆದ್ದರೆ ಮಾತ್ರ ಸಾಕಾಗಲ್ಲ, ಬದಲಾಗಿ -3.800 ಇರುವ ನೆಟ್​ ರನ್ ರೇಟ್​ನ್ನು ಪಾಸಿಟಿಮ್ ಆಗಿ ಬದಲಿಸಬೇಕಾದ ಅನಿವಾರ್ಯತೆ ಕೂಡ ಇದೆ.

ಇದನ್ನೂ ಓದಿ: ಟಿ20 ವಿಶ್ವಕಪ್ ಇತಿಹಾಸದಲ್ಲೇ ಅತ್ಯಂತ ಹೀನಾಯ ಸೋಲುಂಡ ಟೀಮ್ ಇಂಡಿಯಾ

ಭಾರತದ ಮುಂದಿನ ಪಂದ್ಯಗಳ ವೇಳಾಪಟ್ಟಿ:

  • ಫೆಬ್ರವರಿ 26: ಭಾರತ vs ಝಿಂಬಾಬ್ವೆ (ಚೆನ್ನೈ, ಸಂಜೆ 7:00)
  • ಮಾರ್ಚ್ 1: ಭಾರತ vs ವೆಸ್ಟ್ ಇಂಡೀಸ್ (ಕೋಲ್ಕತ್ತಾ, ಸಂಜೆ 7:00)

Source link

ಬೆಂಗಳೂರು ಗ್ರಾಮಾಂತರ ಭಾಗದ ಪ್ರಯಾಣಿಕರಿಗೂ ಬಿಎಂಟಿಸಿ ಗುಡ್ ನ್ಯೂಸ್: ಇನ್ಮುಂದೆ 80 ಕಿಮೀ ವ್ಯಾಪ್ತಿಯಲ್ಲಿ ಸಂಚಾರ! – Kannada News | BMTC Extends Bus Services Up to 80 KM: Big Relief for Bengaluru Rural Passengers

ಬೆಂಗಳೂರು, ಫೆಬ್ರವರಿ 23: ಬೆಂಗಳೂರು (Bangalore) ನಗರದ ಒಂದು ಭಾಗದಿಂದ ಮತ್ತೊಂದು ಭಾಗಕ್ಕೆ ಹೋಗಬೇಕು ಅಂದರೆ ಬಿಎಂಟಿಸಿ ಬಸ್ (BMTC Bus) ಬೇಕೇಬೇಕು. ರಾಜಧಾನಿಯ ಗಲ್ಲಿ ಗಲ್ಲಿಗೂ ಬಿಎಂಟಿಸಿ ಬಸ್ಸುಗಳು ಸಂಚಾರ ಮಾಡುತ್ತವೆ. ಆದರೆ ಇನ್ಮುಂದೆ ಬಿಎಂಟಿಸಿ ಬಸ್ಸುಗಳು ಬೆಂಗಳೂರು ಗ್ರಾಮಾಂತರ ಭಾಗಗಳಿಗೂ ಸಂಚಾರ ಮಾಡಲು ಸಜ್ಜಾಗಿವೆ. ಇಲ್ಲಿಯವರೆಗೆ ಬಿಎಂಟಿಸಿ ಬಸ್ಸುಗಳು 40 ಕಿಮೀ ವ್ಯಾಪ್ತಿಯಲ್ಲಿ ಮಾತ್ರ ಸಂಚಾರ ಮಾಡುತ್ತಿದ್ದವು. ಇನ್ಮುಂದೆ ರಾಮನಗರ, ಕನಕಪುರ, ನೆಲಮಂಗಲ-ಹೊಸಕೋಟೆ, ದೇವನಹಳ್ಳಿ- ದೊಡ್ಡಬಳ್ಳಾಪುರಕ್ಕೂ ಸಂಚಾರ ಮಾಡಲಿವೆ.

ಬಿಎಂಟಿಸಿ ಹೊಸ ನಿರ್ಧಾರ ಪ್ರಯಾಣಿಕರಿಗೂ ಖುಷಿಕೊಟ್ಟಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಬಿಎಂಟಿಸಿ ಪ್ರಯಾಣಿಕರು, ಗ್ರಾಮಾಂತರ ಭಾಗಗಳಿಗೂ ಬಿಎಂಟಿಸಿ ಬಸ್ಸುಗಳು ಸಂಚಾರ ಮಾಡುವುದರಿಂದ ಶಾಲೆ-ಕಾಲೇಜು, ಕೆಲಸಕ್ಕೆ ಹೋಗುವವರಿಗೆ ತುಂಬಾ ಸಹಾಯ ಆಗಲಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

ಬಿಎಂಟಿಸಿಯಲ್ಲಿ ಎಲೆಕ್ಟ್ರಿಕ್ ಬಸ್ಸುಗಳು ಸೇರಿದಂತೆ ಒಟ್ಟು 6750 ಬಸ್ಸುಗಳಿವೆ. ಪ್ರತಿದಿನ 45 ಲಕ್ಷ ಪ್ರಯಾಣಿಕರು ಪ್ರಯಾಣ ಮಾಡುತ್ತಿದ್ದು, ಒಂದು ದಿನಕ್ಕೆ ಬಿಎಂಟಿಸಿ ಬಸ್​ಗಳು 13 ಲಕ್ಷ ಕಿಮೀ ಸಂಚಾರ ಮಾಡುತ್ತವೆ.

ಯಾವೆಲ್ಲ ಪ್ರದೇಶಗಳಿಗೆ ಬಿಎಂಟಿಸಿ ಬಸ್ ಸಂಚಾರ ವಿಸ್ತರಣೆ?

ಮೈಸೂರು ರಸ್ತೆಯ ಸ್ಯಾಟಲೈಟ್ ಬಸ್ ಸ್ಟ್ಯಾಂಡ್​ನಿಂದ ರಾಮನಗರಕ್ಕೆ, ಬನಶಂಕರಿ ಬಸ್ ಸ್ಟ್ಯಾಂಡ್ ನಿಂದ ಕನಕಪುರಕ್ಕೆ, ಮೆಜಸ್ಟಿಕ್ ಕೆಂಪೇಗೌಡ ಬಸ್ ಸ್ಟ್ಯಾಂಡ್​ನಿಂದ ನೆಲಮಂಗಲ, ಹೊಸಕೋಟೆ, ದೇವನಹಳ್ಳಿ, ದೊಡ್ಡಬಳ್ಳಾಪುರಕ್ಕೆ ಬಸ್ಸುಗಳು ಸಂಚಾರ ಮಾಡಲಿವೆ.

ಇದನ್ನೂ ಓದಿ: ಆತ್ಮಹತ್ಯೆ ತಡೆಗೆ ಮೆಟ್ರೋ ನಿಲ್ದಾಣಗಳಲ್ಲಿ ಪಿಎಸ್​ಡಿ ಡೋರ್ ಬದಲಿಗೆ ಸ್ಟೀಲ್ ಬ್ಯಾರಿಕೇಡ್ ಮೊರೆ ಹೋದ ಬಿಎಂಆರ್​ಸಿಎಲ್

ಒಟ್ಟಿನಲ್ಲಿ, ಇಷ್ಟು ದಿನಗಳ ಕಾಲ ನಗರದೊಳಗೆ ಮಾತ್ರ ಸಂಚಾರ ಮಾಡುತ್ತಿದ್ದ ಬಿಎಂಟಿಸಿ ಬಸ್ಸುಗಳು ಇನ್ಮುಂದೆ ಬೆಂಗಳೂರು ಗ್ರಾಮಾಂತರ ಭಾಗಗಳಿಗೂ ಸಂಚಾರ ಮಾಡುವುದರಿಂದ ವಿದ್ಯಾರ್ಥಿಗಳಿಗೆ, ಉದ್ಯೋಗಿಗಳಿಗೆ ದೊಡ್ಡಮಟ್ಟದಲ್ಲಿ ಸಹಾಯವಾಗುವುದರಲ್ಲಿ ಅನುಮಾನವಿಲ್ಲ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಕರ್ನಾಟಕ ಹವಾಮಾನ ವರದಿ: ಕೂಲ್ ಸಿಟಿ ಇನ್ಮುಂದೆ ಹಾಟ್ ಸಿಟಿ! ಬೆಂಗಳೂರಿಗೆ ಗರಿಷ್ಠ ತಾಪಮಾನದ ಅಲರ್ಟ್ – Kannada News | Bengaluru temperature: Heat wave alert in Bengaluru after March

ಕೂಲ್ ಸಿಟಿ ಇನ್ಮುಂದೆ ಹಾಟ್ ಸಿಟಿ! ಬೆಂಗಳೂರಿಗೆ ಗರಿಷ್ಠ ತಾಪಮಾನದ ಅಲರ್ಟ್

ಬೆಂಗಳೂರು, ಫೆಬ್ರವರಿ 23: ರಾಜ್ಯದಲ್ಲಿ ಹಲವು ದಿನಗಳಿಂದ ಶುಷ್ಕ ವಾತಾವರಣವೇ (Weather Forecast) ಆವರಿಸಿದ್ದು, ನಿನ್ನೆಯಷ್ಟೇ ಮೋಡ ಕವಿದ ವಾತಾವರಣ ಕಾಣಿಸಿತ್ತು. ಆದರೆ ಇಂದು ಎಲ್ಲೆಡೆ ಒಣಹವೆಯಿರಲಿದೆ ಎಂದು ಹವಾಮಾನ ಇಲಾಖೆ ಸೂಚಿಸಿದ್ದು, ಇನ್ನು ಕೆಲ ದಿನಗಳಲ್ಲಿ ಬೆಂಗಳೂರು ಬಿಸಿಲಿನ ಬೇಗೆಯಿಂದ ತತ್ತರಿಸಲಿದೆ ಎನ್ನಲಾಗಿದೆ. ರಾಜ್ಯದಲ್ಲಿ ಬೇಸಿಗೆ ತೀವ್ರಗೊಳ್ಳುತ್ತಿದ್ದು, ಸಿಲಿಕಾನ್ ಸಿಟಿ ಬೆಂಗಳೂರು ಬಿಸಿಲಿನ ತಾಪಕ್ಕೆ ತತ್ತರಿಸುತ್ತಿದೆ. ಕಳೆದ ಒಂದು ವಾರದಿಂದ ತಾಪಮಾನ ನಿರಂತರ ಏರಿಕೆಯಾಗುತ್ತಿದ್ದು, ಮುಂದಿನ ದಿನಗಳಲ್ಲಿ ಗರಿಷ್ಠ ತಾಪಮಾನ 38ರಿಂದ 39 ಡಿಗ್ರಿ ಸೆಲ್ಸಿಯಸ್‌ ತಲುಪುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ನೀವೇನು ಮಾಡಬೇಕು?

ನಗರದಲ್ಲಿ ಈಗಾಗಲೇ ಮಧ್ಯಾಹ್ನ ವೇಳೆಯಲ್ಲಿ ಹೊರಗೆ ಸಂಚಾರ ಮಾಡುವುದು ಕಷ್ಟಕರವಾಗಿದ್ದು, ಜನರು ಏರ್ ಕೂಲರ್ ಮತ್ತು ಫ್ಯಾನ್‌ಗಳ ಸಹಾಯಕ್ಕೆ ಮೊರೆ ಹೋಗಿದ್ದಾರೆ. ಹವಾಮಾನ ಇಲಾಖೆ ತಜ್ಞರ ಪ್ರಕಾರ, ಮಾರ್ಚ್ ಎರಡನೇ ವಾರದ ಬಳಿಕ ಬಿಸಿಲಿನ ತೀವ್ರತೆ ಇನ್ನಷ್ಟು ಹೆಚ್ಚಲಿದೆ. ಈ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಕೂಡ ಅಲರ್ಟ್ ಆಗಿದೆ. ಬೆಳಿಗ್ಗೆ 11ರಿಂದ ಸಂಜೆ 4ರವರೆಗೆ ಅನಗತ್ಯವಾಗಿ ಹೊರಗೆ ಹೋಗದಂತೆ ಸೂಚನೆ ನೀಡಲಾಗಿದೆ. ಹೀಟ್ ಸ್ಟ್ರೋಕ್ ಹಾಗೂ ಡಿಹೈಡ್ರೇಶನ್ ಅಪಾಯ ಇರುವುದರಿಂದ ವೃದ್ಧರು, ಗರ್ಭಿಣಿಯರು, ಮಕ್ಕಳು ಮತ್ತು ಹೃದಯ ಸಂಬಂಧಿ ಕಾಯಿಲೆ ಇರುವವರು ವಿಶೇಷ ಎಚ್ಚರಿಕೆ ವಹಿಸಬೇಕು.

ಹೆಚ್ಚಾಗಿ ನೀರು, ತಂಪು ಪಾನೀಯಗಳು ಹಾಗೂ ಹಣ್ಣುಗಳನ್ನು ಸೇವಿಸಿ ದೇಹದ ತಾಪಮಾನ ನಿಯಂತ್ರಿಸಿಕೊಳ್ಳುವಂತೆ ವೈದ್ಯರು ಸಲಹೆ ನೀಡಿದ್ದಾರೆ. ಒಟ್ಟಿನಲ್ಲಿ, ಈ ವರ್ಷವೂ ಬೆಂಗಳೂರು ಮಂದಿಗೆ ಕಠಿಣ ಬೇಸಿಗೆ ಎದುರಾಗುವ ಸೂಚನೆಗಳಿವೆ.

ಎಲ್ಲೆಲ್ಲಿ ಒಣ ಹವೆ?

ಕರಾವಳಿಯ ಜಿಲ್ಲೆಗಳಾದ ದಕ್ಷಿಣ ಕನ್ನಡ , ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವೆಯಿರಲಿದೆ ಎಂದು ಇಲಾಖೆ ತಿಳಿಸಿದೆ. ಉತ್ತರ ಒಳನಾಡು ಭಾಗದ ಜಿಲ್ಲೆಗಳಾದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರದಲ್ಲಿ ಕಳೆದ ಹಲವು ದಿನಗಳಿಂದ ಒಣಹವೆಯ ವಾತಾವರಣವಿದ್ದು, ಇಂದೂ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ದಕ್ಷಿಣ ಒಳನಾಡಿನ ಚಾಮರಾಜನಗರ, ಕೊಡಗು, ಮೈಸೂರು, ಮಂಡ್ಯ, ಶಿವಮೊಗ್ಗ, ಚಿಕ್ಕಮಗಳೂರು,ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಬಳ್ಳಾರಿ, ತುಮಕೂರು, ಚಿಕ್ಕಬಳ್ಳಾಪುರ, ರಾಮನಗರ, ಚಿತ್ರದುರ್ಗ, ದಾವಣಗೆರೆ ಮತ್ತು ವಿಜಯನಗರ ಜಿಲ್ಲೆಗಳಲ್ಲಿಯೂ ಒಣ ಹವೆಯ ವಾತಾವರಣ ಇರಲಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಕೇಸ್! ಏನಿದು ಹೊಸ ಕೇಸ್? ಇಲ್ಲಿದೆ ನೋಡಿ – Kannada News | Another FIR Filed Against Activist Snehamayi Krishna in Bengaluru: Fresh Case Registered at Basaveshwaranagar

ಬೆಂಗಳೂರು, ಫೆಬ್ರವರಿ 23: ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣ ಕೇಸ್​​ನಲ್ಲಿ ತೀವ್ರ ಹೋರಾಟ ನಡೆಸಿದ್ದ ಹೋರಾಟಗಾರ ಸ್ನೇಹಮಯಿ ಕೃಷ್ಣ ಅವರನ್ನು 2 ದಿನ ಹಿಂದಷ್ಟೇ ಸಿಸಿಬಿ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿ ನಂತರ ಬಿಡುಗಡೆ ಮಾಡಿದ್ದರು. ಮುಡಾ ಮಾಜಿ ಆಯುಕ್ತ ನಟೇಶ್ ಅವರ ಆಡಿಯೋ ಬಹಿರಂಗ ವಿಚಾರವಾಗಿ ಈ ಕ್ರಮ ಆಗಿತ್ತು. ಇದೀಗ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಕೇಸ್ ದಾಖಲಾಗಿದೆ. ಬೆಂಗಳೂರಿನ ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ಮತ್ತೊಂದು ಎಫ್‌ಐಆರ್ ದಾಖಲಾಗಿದೆ. ಪವಿತ್ರಾ ಎಂಬ ಮಹಿಳೆ ನೀಡಿದ ದೂರಿನ ಮೇರೆಗೆ ಹೊಸ ಎಫ್‌ಐಆರ್ ದಾಖಲಿಸಲಾಗಿದೆ.

ಪವಿತ್ರಾ ಅವರ ಪತಿ ಕಳೆದ ವರ್ಷ ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಪ್ರಕರಣದ ಮರುತನಿಖೆಗೆ ಆಗ್ರಹಿಸಿದ್ದ ಸ್ನೇಹಮಯಿ ಕೃಷ್ಣ, ಮೈಲಾರಪ್ಪ ವಿರುದ್ಧ ನೀಡಿದ್ದ ದೂರನ್ನು ಹಿಂಪಡೆಯುವಂತೆ ಪವಿತ್ರಾ ಅವರಿಗೆ ತಾಕೀತು ಮಾಡಿದ್ದರು ಎಂದು ಆರೋಪಿಸಲಾಗಿದೆ. ಅಲ್ಲದೆ, ಸ್ನೇಹಮಯಿ ಕೃಷ್ಣ ಅವರು 2025ರ ಡಿಸೆಂಬರ್ 5ರಂದು ಪವಿತ್ರಾ ಅವರ ಮನೆ ವಿಳಾಸಕ್ಕೆ ಪತ್ರವೊಂದನ್ನು ಬರೆದಿದ್ದರು. ಈ ಪತ್ರದ ಮೂಲಕ ಒತ್ತಡ ಹೇರಿದ್ದರಿಂದ ತಮ್ಮ ನೆಮ್ಮದಿ ಹಾಳಾಗಿದೆ ಎಂದು ಪವಿತ್ರಾ ದೂರು ನೀಡಿದ್ದಾರೆ.

ಈ ಹಿಂದೆ ಬಸವೇಶ್ವರ ನಗರ ಪೊಲೀಸರು ಈ ಸಂಬಂಧ ಎನ್‌ಸಿಆರ್ ದಾಖಲಿಸಿದ್ದರು. ಇದೀಗ ನ್ಯಾಯಾಲಯದ ಅನುಮತಿಯ ಮೇರೆಗೆ ಸ್ನೇಹಮಯಿ ಕೃಷ್ಣ ಮತ್ತು ಮೈಲಾರಪ್ಪ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಪವಿತ್ರಾ ನೀಡಿದ ದೂರಿನ ಎರಡು ತಿಂಗಳ ನಂತರ ಈ ಕ್ರಮ ಕೈಗೊಳ್ಳಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link