ಪತ್ನಿಗೆ ಪಕ್ಕದ ಮನೆಯ ವ್ಯಕ್ತಿಯ ಜತೆ ಅಕ್ರಮ ಸಂಬಂಧ: ಮರ್ಯಾದೆ ಹೋಯಿತು ಎಂದು ಪತಿ ಆತ್ಮಹತ್ಯೆ! – Kannada News | Karnataka Suicides: Police Harassment and False Complaints Spark Tragedies
ಚಿಕ್ಕಮಗಳೂರು, ಫೆ.21: ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನಲ್ಲಿ ನೆನ್ನೆ ಪೊಲೀಸ್ ಕಿರುಕುಳಕ್ಕೆ ವಿಧವೆ ಮಹಿಳೆ ಆತ್ಮಹತ್ಯೆಗೆ ಶರಣಾಗಿರುವಂತಹ ಘಟನೆ ನಡೆದಿತ್ತು. ಇದೀಗ ಇಂತಹದೇ ಮತ್ತೊಂದು ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಏಳು ವರ್ಷಗಳ ಕಾಲ ಪ್ರೀತಿಸಿ ಮದುವೆಯಾಗಿದ್ದ ಪತ್ನಿಯ ಅಕ್ರಮ ಸಂಬಂಧ ಮತ್ತು ಆಕೆ ತನ್ನ ವಿರುದ್ಧವೇ ನೀಡಿದ ಸುಳ್ಳು ದೂರಿನಿಂದ ಮನನೊಂದ ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ವೃತ್ತಿಯಲ್ಲಿ ಚಾಲಕನಾಗಿದ್ದ ಮನು, ಸಖರಾಯಪಟ್ಟಣ ಮೂಲದ ಹರಿಣಿ ಎಂಬಾಕೆಯನ್ನು ಪ್ರೀತಿಸಿ…