All posts by nagaraj11081993

ಕಾಂಗ್ರೆಸ್ ಕುರ್ಚಿ ಕದನ: ಮಲ್ಲಿಕಾರ್ಜುನ ಖರ್ಗೆ ಭೇಟಿ ಬಳಿಕ ಸತೀಶ್ ಜಾರಕಿಹೊಳಿ ಸ್ಫೋಟಕ ಮಾಹಿತಿ – Kannada News | Congress Leadership Tussle: Satish Jarkiholi Meets Mallikarjun Kharge in Delhi, Hints at Early Decision

ನವದೆಹಲಿ, ಫೆಬ್ರವರಿ 21: ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಸಚಿವ ಸತೀಶ್ ಜಾರಕಿಹೊಳಿ ಹಾಗೂ ಕೆಲ ಶಾಸಕರು ಭೇಟಿ ಮಾಡಿದರು. ರಾಜ್ಯದ ಪ್ರಸಕ್ತ ರಾಜಕೀಯ ವಿದ್ಯಮಾನಗಳು, ಆಗಿರುವ ಮತ್ತು ಮುಂದಾಗುವ ಬೆಳವಣಿಗೆಗಳ ಕುರಿತು ಈ ವೇಳೆ ಚರ್ಚಿಸಲಾಯಿತು ಎಂದು ಜಾರಕಿಹೊಳಿ ತಿಳಿಸಿದ್ದಾರೆ. ಕರ್ನಾಟಕದಲ್ಲಿನ ಗೊಂದಲಗಳ ಕುರಿತು ಖರ್ಗೆ ಅವರ ಗಮನಕ್ಕೆ ತಂದಿರುವುದಾಗಿ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ. ಗೊಂದಲಗಳನ್ನು ಆದಷ್ಟು ಬೇಗ ಇತ್ಯರ್ಥಪಡಿಸುವಂತೆ ಮನವಿ ಮಾಡಿರುವುದಾಗಿ ಜಾರಕಿಹೊಳಿ ಹೇಳಿದ್ದಾರೆ.

ಆದಷ್ಟು ಬೇಗ ನಿರ್ಣಯ ಕೈಗೊಳ್ಳುವುದಾಗಿ ಮತ್ತು ಗೊಂದಲಗಳನ್ನು ತ್ವರಿತವಾಗಿ ಬಗೆಹರಿಸುವುದಾಗಿ ಖರ್ಗೆ ಭರವಸೆ ನೀಡಿದ್ದಾರೆ. ಈ ಕುರಿತು ಈಗಾಗಲೇ ಒಂದು ತೀರ್ಮಾನಕ್ಕೆ ಬರಲಾಗಿದೆ ಎಂದೂ ಖರ್ಗೆ ಮಾಹಿತಿ ನೀಡಿದ್ದಾರೆ ಎಂದು ಜಾರಕಿಹೊಳಿ ತಿಳಿಸಿದ್ದಾರೆ. ಪದೇ ಪದೇ ಅಧಿಕಾರದ ಗೊಂದಲಗಳು ಮತ್ತು ಹೇಳಿಕೆಗಳು ಬರದಂತೆ ಪೂರ್ಣವಿರಾಮ ಹಾಕಿ ಈ ಸಮಸ್ಯೆಗೆ ಶೀಘ್ರ ಇತ್ಯರ್ಥ ಸಿಗಬೇಕೆಂಬುದು ನಮ್ಮ ನಿರೀಕ್ಷೆ. ಯಾವುದೇ ವಿಳಂಬವಿಲ್ಲದೆ ಇದು ಬೇಗ ಮುಗಿದರೆ ಒಳ್ಳೆಯದು ಎಂದು ಸತೀಶ್ ಜಾರಕಿಹೊಳಿ ಅಭಿಪ್ರಾಯಪಟ್ಟಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಐಎಎಸ್ ಅಧಿಕಾರಿಗೆ ಹೈಕೋರ್ಟ್ ಶಾಕ್; ಮಾನನಷ್ಟ ಪ್ರಕರಣದಲ್ಲಿ ರೋಹಿಣಿ ಸಿಂಧೂರಿಗೆ ಹಿನ್ನಡೆ – Kannada News | Rohini Sindhuri Defamation Case: High Court Rejects Plea, D. Roopa’s Complaint to Proceed

ಮಾನನಷ್ಟ ಪ್ರಕರಣದಲ್ಲಿ ರೋಹಿಣಿ ಸಿಂಧೂರಿಗೆ ಹಿನ್ನಡೆ

ಬೆಂಗಳೂರು, ಫೆಬ್ರವರಿ 21: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಗೆ (Rohini Sindhuri) ಮಾನನಷ್ಟ ಪ್ರಕರಣದಲ್ಲಿ ಹಿನ್ನಡೆ ಉಂಟಾಗಿದೆ. ರೋಹಿಣಿ ಮಾಧ್ಯಮಗಳ ಮುಂದೆ ತಮ್ಮ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿ, ಅದನ್ನು ಸಾಮಾಜಿಕ ಜಾಲತಾಣದಲ್ಲಿಯೂ ಹಂಚಿಕೊಂಡಿದ್ದಾರೆ ಎಂದು ರೂಪಾ ಮೌದ್ಗಿಲ್ ಬೆಂಗಳೂರಿನ 7ನೇ ಎಸಿಎಂಎಂ ನ್ಯಾಯಾಲಯದಲ್ಲಿ ಖಾಸಗಿ ದೂರು ಸಲ್ಲಿಸಿದ್ದರು. ಐಪಿಎಸ್ ಅಧಿಕಾರಿ ಡಿ. ರೂಪಾ ಮೌದ್ಗಿಲ್ ದಾಖಲಿಸಿದ್ದ ಖಾಸಗಿ ದೂರು ರದ್ದುಪಡಿಸುವಂತೆ ಕೋರಿ ಸಲ್ಲಿಸಿದ್ದ ಐಎಎಸ್ ಅಧಿಕಾರಿಯ ಅರ್ಜಿಯನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ವಜಾಗೊಳಿಸಿದೆ.

ಕೇಸ್ ರದ್ದು ಕೋರಿದ್ದ ರೋಹಿಣಿ ಸಿಂಧೂರಿ

ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಐಪಿಎಸ್ ಅಧಿಕಾರಿ ಡಿ. ರೂಪಾ ಮೌದ್ಗಿಲ್ ದಾಖಲಿಸಿದ್ದ ಮಾನನಷ್ಟ ಪ್ರಕರಣಕ್ಕೆ ಹೈಕೋರ್ಟ್ ತಾತ್ಕಾಲಿಕ ತಡೆಯಾಜ್ಞೆ ನೀಡಿತ್ತು. ನ್ಯಾಯಮೂರ್ತಿ ಮೊಹಮ್ಮದ್ ನವಾಜ್ ವಿಚಾರಣೆಗೆ ತಡೆ ನೀಡಿ, ರಾಜಿ ಸಂಧಾನಕ್ಕೆ ಪ್ರಯತ್ನಿಸುವಂತೆ ಸಲಹೆ ನೀಡಿದ್ದರು. 19-02-2023ರಂದು ನೀಡಿದ್ದ ಹೇಳಿಕೆಯಲ್ಲಿ ಅವಹೇಳನಕಾರಿ ಆರೋಪಗಳಿವೆ ಎಂದು ರೂಪಾ ಆರೋಪಿಸಿ 7ನೇ ಎಸಿಎಂಎಂ ಕೋರ್ಟ್‌ನಲ್ಲಿ ದೂರು ದಾಖಲಿಸಿದ್ದರು. ಈ ವಿವಾದ ಎರಡು ವರ್ಷಗಳಿಂದ ಮುಂದುವರಿದಿದ್ದು, ಸುಪ್ರೀಂ ಕೋರ್ಟ್‌ನಿಂದ ಮತ್ತೆ ವಿಚಾರಣಾ ನ್ಯಾಯಾಲಯಕ್ಕೆ ವಾಪಸ್ ಕಳುಹಿಸಲಾಗಿತ್ತು. ಈ ಪ್ರಕರಣ ರದ್ದುಪಡಿಸುವಂತೆ ರೋಹಿಣಿ ಸಿಂಧೂರಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ತಿರಸ್ಕರಿಸಿದೆ.

ಇದನ್ನೂ ಓದಿ ಐಎಎಸ್​ ವರ್ಸಸ್ ಐಪಿಎಸ್​: ರೋಹಿಣಿ ಸಿಂಧೂರಿಗೆ ತಾತ್ಕಾಲಿಕ ರಿಲೀಫ್ ನೀಡಿದ ಕೋರ್ಟ್​​

2023ರ ಫೆಬ್ರವರಿ 19ರಂದು ರೋಹಿಣಿ ಸಿಂಧೂರಿ ಮಾಧ್ಯಮಗಳಿಗೆ ನೀಡಿದ ಹೇಳಿಕೆಯನ್ನು ನಂತರ ‘ಎಕ್ಸ್’ ಜಾಲತಾಣದಲ್ಲಿ ಹಂಚಿಕೊಂಡಿದ್ದು, ಅದರಲ್ಲಿ ತಮ್ಮ ವಿರುದ್ಧ ಅವಹೇಳನಕಾರಿ ಆರೋಪಗಳನ್ನು ಮಾಡಿದ್ದಾರೆ ಎಂದು ರೂಪಾ ಆರೋಪಿಸಿದ್ದರು. ಈ ಹೇಳಿಕೆಯನ್ನು ಸುಮಾರು 1.8 ಲಕ್ಷ ಮಂದಿ ವೀಕ್ಷಿಸಿದ್ದರೆಂದು ದೂರುದಲ್ಲಿ ಉಲ್ಲೇಖಿಸಲಾಗಿದೆ. ಈ ಹೇಳಿಕೆಯ ನಂತರ ತಮಗೆ ವರ್ಗಾವಣೆ ಆಗಿದ್ದು, ಆರು ತಿಂಗಳ ಕಾಲ ಸಂಬಳವಿಲ್ಲದೆ ಹುದ್ದೆ ರಹಿತ ಸ್ಥಿತಿ ಉಂಟಾಯಿತು ಎಂದು ರೂಪಾ ತಿಳಿಸಿದ್ದಾರೆ. ಜೊತೆಗೆ ಕುಟುಂಬದ ಸದಸ್ಯರು ಮಾನಸಿಕ ಯಾತನೆ ಅನುಭವಿಸಿದ್ದಾರೆ ಎಂಬ ಕಾರಣ ನೀಡಿ ಮಾನನಷ್ಟ ಪ್ರಕರಣ ದಾಖಲಿಸಿದ್ದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

47 ವರ್ಷಗಳ ಬಳಿಕ ಒಂದಾದ ಕಮಲ್-ರಜನೀಕಾಂತ್ ಆದರೆ ನಾಯಕ ಯಾರು? – Kannada News | Rajinikanth and Kamal Haasan new movie announced here is the detail

ರಜನೀಕಾಂತ್ (Rajinikanth) ಮತ್ತು ಕಮಲ್ ಹಾಸನ್ ಭಾರತ ಚಿತ್ರರಂಗದ ಇಬ್ಬರು ಸೂಪರ್ ಸ್ಟಾರ್​​ ನಟರು. ಬಹುತೇಕ ಒಟ್ಟಿಗೆ ಚಿತ್ರರಂಗಕ್ಕೆ ಕಾಲಿಟ್ಟ ಇವರು ದಶಕಗಳಿಂದಲೂ ಸ್ಟಾರ್ ಗಿರಿಯನ್ನು ಅನುಭವಿಸುತ್ತಿದ್ದಾರೆ. ಬೇರೆ ಚಿತ್ರರಂಗಗಳಲ್ಲಿ ಸ್ಟಾರ್ ನಟರುಗಳ ನಡುವೆ ಪರಸ್ಪರ ಸ್ಪರ್ಧೆ, ವೈರತ್ನ ಇದ್ದರೆ ರಜನೀಕಾಂತ್ ಮತ್ತು ಕಮಲ್ ಹಾಸನ್ ಹಲವು ವರ್ಷಗಳಿಂದಲೂ ಬಲು ಆತ್ಮೀಯ ಗೆಳೆಯರು ಎಂಬದು ವಿಶೇಷ. ಆರಂಭದ ಕೆಲವು ವರ್ಷ ಒಟ್ಟಿಗೆ ನಟಿಸಿದ ರಜನೀಕಾಂತ್ ಮತ್ತು ಕಮಲ್ ಹಾಸನ್ ಸ್ಟಾರ್​​ ನಟರುಗಳು ಎನಿಸಿಕೊಂಡ ಬಳಿಕ ಒಟ್ಟಿಗೆ ನಟಿಸಿದ್ದಿಲ್ಲ. ಇದೀಗ ಬರೋಬ್ಬರಿ 47 ವರ್ಷಗಳ ಬಳಿಕ ರಜನೀಕಾಂತ್ ಮತ್ತು ಕಮಲ್ ಹಾಸನ್ ಒಟ್ಟಿಗೆ ಒಂದೇ ಸಿನಿಮಾನಲ್ಲಿ ನಟಿಸಲಿದ್ದಾರೆ ಆದರೆ ಒಂದು ಅನುಮಾನ ಮೂಡಿದೆ ಈ ಸಿನಿಮಾನಲ್ಲಿ ನಾಯಕ ಯಾರು?

ರಜನೀಕಾಂತ್ ಮತ್ತು ಕಮಲ್ ಹಾಸನ್ ಒಟ್ಟಿಗೆ ನಟಿಸಲಿರುವ ಸಿನಿಮಾವನ್ನು ‘ಜೈಲರ್’ ಸಿನಿಮಾ ಖ್ಯಾತಿಯ ನಿರ್ದೇಶಕ ನೆಲ್ಸನ್ ನಿರ್ದೇಶಿಸಲಿದ್ದಾರೆ. ಈ ಸಿನಿಮಾಕ್ಕೆ ಸದ್ಯಕ್ಕೆ ‘ಕೆಎಚ್-ಆರ್​​ಕೆ’ ಎಂದು ತಾತ್ಕಾಲಿಕ ಹೆಸರಿಡಲಾಗಿದ್ದು, ಸಿನಿಮಾದ ಘೋಷಣೆಗೆಂದು ಒಂದು ತಮಾಷೆಯಾದ ಪ್ರೋಮೊ ಸಹ ಬಿಡುಗಡೆ ಮಾಡಲಾಗಿದೆ. ಈ ಪ್ರೊಮೊ ವಿಡಿಯೋ ಎಷ್ಟು ಮಜವಾಗಿದೆ ಎಂದರೆ, ಇಲ್ಲಿ ಸಿನಿಮಾದ ಕಥೆಗಿಂತ ಹೆಚ್ಚಾಗಿ ನಿರ್ದೇಶಕ ನೆಲ್ಸನ್ ದಿಲೀಪ್‌ಕುಮಾರ್ ಹಾಗೂ ಸಂಗೀತ ನಿರ್ದೇಶಕ ಅನಿರುದ್ಧ್ ಅವರ ಗೊಂದಲವೇ ಹೈಲೈಟ್.

ವಿಡಿಯೋದ ಆರಂಭದಲ್ಲಿ ನೆಲ್ಸನ್ ಕಾರಿಡಾರ್‌ನಲ್ಲಿ ಅತ್ತಿತ್ತ ಅಡ್ಡಾಡುತ್ತಾ, ‘ಯಾರ ರೂಮಿಗೆ ಮೊದಲು ಹೋಗಲಿ? ರಜನಿ ಸಾರ್ ರೂಮಿಗೋ ಅಥವಾ ಕಮಲ್ ಸಾರ್ ರೂಮಿಗೋ?’ ಎಂದು ತಲೆ ಕೆರೆದುಕೊಳ್ಳುತ್ತಿರುತ್ತಾರೆ. ಅಷ್ಟರಲ್ಲಿ ಮ್ಯೂಸಿಕ್ ಡೈರೆಕ್ಟರ್ ಅನಿರುದ್ಧ್ ರವಿಚಂದರ್ ಎಂಟ್ರಿ ಕೊಟ್ಟು, “ಗುರುಗಳೇ, ಯಾವ ರಾಗ ಸೆಲೆಕ್ಟ್ ಮಾಡಲಿ?” ಎಂದು ಇನ್ನೊಂದು ಕನ್ಫ್ಯೂಷನ್ ಎಸೆಯುತ್ತಾರೆ. ಪಾಪ ನೆಲ್ಸನ್, ಇಬ್ಬರು ಸೂಪರ್‌ಸ್ಟಾರ್‌ಗಳನ್ನು ಮ್ಯಾನೇಜ್ ಮಾಡೋಕೆ ಪಡುತ್ತಿರುವ ಪಾಡು ನೋಡಿ ಪ್ರೇಕ್ಷಕರು ನಗುವಂತಿದೆ.

ಇದನ್ನೂ ಓದಿ:ಸ್ವಚ್ಛತಾ ಕಾರ್ಮಿಕ ಮಹಿಳೆ ಪದ್ಮಮ್ಮನ ಸನ್ಮಾನಿಸಿದ ರಜನೀಕಾಂತ್: ಕಾರಣ?

ವಿಡಿಯೋ ಮುಂದುವರೆದಂತೆ, ರಜನೀ ಮತ್ತು ಕಮಲ್ ಅವರುಗಳು ಒಬ್ಬರಿಗಿಂತಲೂ ಇನ್ನೊಬ್ಬರು ಸ್ಟೈಲ್ ಆಗಿ ಕಾಣಬೇಕು ಎಂದು ಸ್ಪರ್ಧೆಗೆ ಬಿದ್ದವರಂತೆ ತೋರಿಸಲಾಗಿದೆ. ವಿಡಿಯೋದ ಕೊನೆಯಲ್ಲಿ ಅಸಲಿ ಟ್ವಿಸ್ಟ್ ಇದೆ. ಇಬ್ಬರೂ ಲೆಜೆಂಡರಿ ನಟರು ಫುಲ್ ರೆಟ್ರೋ ಸ್ಟೈಲ್‌ನಲ್ಲಿ, ಲೆದರ್ ಜಾಕೆಟ್ ತೊಟ್ಟು ಮಸ್ತ್ ಆಗಿ ನಡೆದುಕೊಂಡು ಬರುತ್ತಾರೆ. ವಿಂಟೇಜ್ ಮರ್ಸಿಡೀಜ್ ಕಾರಿನಲ್ಲಿ ಕಮಲ್ ಹಾಸನ್ ಡ್ರೈವಿಂಗ್ ಸೀಟಿನಲ್ಲಿ ಕೂತರೆ, ರಜನಿ ಪಕ್ಕದ ಸೀಟಿನಲ್ಲಿ ಆಸೀನರಾಗುತ್ತಾರೆ. ಇವರ ಹಿಂಬದಿಯ ಸೀಟಿನಲ್ಲಿ ನೆಲ್ಸನ್ ಮತ್ತು ಅನಿರುದ್ಧ್ ಇರುತ್ತಾರೆ. ಈ ಸಮಯದಲ್ಲಿ ಇಬ್ಬರೂ ಗಂಭೀರವಾಗಿ ನೆಲ್ಸನ್ ಕಡೆ ನೋಡಿ, ‘ಅಂದಹಾಗೆ, ನಮ್ಮಿಬ್ಬರಲ್ಲಿ ಈ ಸಿನಿಮಾಕ್ಕೆ ಹೀರೋ ಯಾರು?’ ಎಂದು ಕೇಳುತ್ತಾರೆ. ಇಬ್ಬರು ಸ್ಟಾರ್ ನಟರ ಈ ಪ್ರಶ್ನೆಗೆ ನೆಲ್ಸನ್ ಮತ್ತಷ್ಟು ಗಾಬರಿ ಆಗುತ್ತಾರೆ.

ರಜನೀಕಾಂತ್ ಮತ್ತು ಕಮಲ್ ಹಾಸನ್ ಒಟ್ಟಿಗೆ ಏಳು ಸಿನಿಮಾಗಳಲ್ಲಿ ನಟಿಸಿದ್ದಾರೆ. ರಜನೀಕಾಂತ್ ಅವರ ಮೊದಲ ಸಿನಿಮಾ ‘ಅಪೂರ್ವರಾಗಂಗಳ್’ನಲ್ಲಿ ಕಮಲ್ ಹಾಸನ್ ನಾಯಕ. ಆ ಬಳಿಕ ‘ಮೂದ್ರು ಮುದಿಚ್ಚು’, ‘ಆವರ್ಗಳ್’, ‘ಪದಿನಾರು ವಯತ್ತಿನಿಲೆ’, ‘ಇಳಮಾಯ್ ಊಂಜಿಲ್ ಆಡುಕಿರಾತ್ತು’, ‘ನಿನ್ನೈತಾಲೆ ಇನಿಕ್ಕುಂ’ ಮತ್ತು 1979 ರಲ್ಲಿ ಬಿಡುಗಡೆ ಆದ ‘ಅಲ್ಲಾವುದ್ದೀನ್ ಅಲ್ಬುತ ವಿಲಕ್ಕುಂ’ ಕಮಲ್ ಹಾಗೂ ರಜನೀಕಾಂತ್ ಒಟ್ಟಿಗೆ ನಟಿಸಿದ ಕೊನೆಯ ಸಿನಿಮಾ. ಅದಾದ ಬಳಿಕ ಈ ಇಬ್ಬರು ಒಟ್ಟಿಗೆ ನಟಿಸಿರಲೇ ಇಲ್ಲ ಇದೀಗ 47 ವರ್ಷಗಳ ಬಳಿಕ ಮತ್ತೆ ಒಟ್ಟಿಗೆ ನಟಿಸುತ್ತಿದ್ದಾರೆ. ಈ ಸಿನಿಮಾಕ್ಕೆ ಕಮಲ್ ಹಾಸನ್ ಅವರೇ ಬಂಡವಾಳ ಹೂಡುತ್ತಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಕೊಲೆ ಆರೋಪಿ ರೌಡಿಶೀಟರ್ ಜತೆ ವರ್ತೂರು ಇನ್ಸ್‌ಪೆಕ್ಟರ್ ಯೋಗಾನಂದ್ ದೋಸ್ತಿ: ಗಂಭೀರ ಆರೋಪ – Kannada News | Bangalore Crime: Inspector Yoganand Under Fire for Alleged Collusion in Revanth Murder

, ವರ್ತೂರು ಪೊಲೀಸ್ ಇನ್ಸ್‌ಪೆಕ್ಟರ್

ಬೆಂಗಳೂರು, ಫೆ.21: ನಗರದ ವರ್ತೂರು ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ (Varthur Police corruption) ಯೋಗಾನಂದ್ ಅವರು ರೌಡಿಶೀಟರ್‌ಗಳೊಂದಿಗೆ ಕೈಜೋಡಿಸಿ, ಕೊಲೆ ಪ್ರಕರಣವೊಂದನ್ನು ಹಳ್ಳ ಹಿಡಿಸುತ್ತಿದ್ದಾರೆ ಎಂಬ ಆತಂಕಕಾರಿ ಆರೋಪ ಕೇಳಿಬಂದಿದೆ. ಎಲ್ ಎಲ್ ಬಿ ವಿದ್ಯಾರ್ಥಿ ರೇವಂತ್ ಕೊಲೆ ಪ್ರಕರಣದ ತನಿಖೆಯಲ್ಲಿ ಉದ್ದೇಶಪೂರ್ವಕ ನಿರ್ಲಕ್ಷ್ಯ ವಹಿಸಿರುವ ಬಗ್ಗೆ ಸಂತ್ರಸ್ತ ಕುಟುಂಬ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. 2024ರ ಸೆಪ್ಟೆಂಬರ್ 18ರಂದು ತಮಿಳುನಾಡಿನ ಬಾಗಲೂರಿನಲ್ಲಿ 24 ವರ್ಷದ ಎಲ್ ಎಲ್ ಬಿ ವಿದ್ಯಾರ್ಥಿ ರೇವಂತ್‌ನನ್ನು ರೌಡಿಶೀಟರ್ ರೇವಾ ಮತ್ತು ಗ್ಯಾಂಗ್ ಭೀಕರವಾಗಿ ಹತ್ಯೆ ಮಾಡಿತ್ತು.

ರೇವಂತ್ ತನ್ನ ಸ್ನೇಹಿತ ಸ್ಟಾಲಿನ್ ಮೇಲೆ ನಡೆದಿದ್ದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಸ್ ದಾಖಲಿಸಲು ಸಹಕರಿಸಿದ್ದ. ಈ ಕೇಸ್ ವಾಪಸ್ ಪಡೆಯುವಂತೆ ರೇವಾ ಗ್ಯಾಂಗ್ ರೇವಂತ್ ಮೇಲೆ ಒತ್ತಡ ಹೇರಿತ್ತು. ರಾಜಿ ಮಾಡಿಕೊಳ್ಳೋಣ ಎಂದು ನಂಬಿಸಿ ಕರೆಸಿಕೊಂಡ ದುಷ್ಕರ್ಮಿಗಳು, ರೇವಂತ್‌ನ ಚಿಕ್ಕಪ್ಪನ ಕಣ್ಣೆದುರೇ ಆತನನ್ನು ಕೊಚ್ಚಿ ಕೊಂದಿದ್ದರು.

ತಮಿಳುನಾಡು ಪೊಲೀಸರಿಂದ ವರ್ಗಾವಣೆಯಾದ ಈ ಪ್ರಕರಣದ ತನಿಖೆ ನಡೆಸಿದ ವರ್ತೂರು ಪೊಲೀಸರು, ನಿಯಮದಂತೆ 90 ದಿನಗಳೊಳಗೆ ಚಾರ್ಜ್‌ಶೀಟ್ ಸಲ್ಲಿಸಿಲ್ಲ. ಜೈಲಿನಲ್ಲಿದ್ದ ರೌಡಿಶೀಟರ್ ರೇವಾ ಸೇರಿದಂತೆ ಏಳು ಮಂದಿ ಆರೋಪಿಗಳು ಸುಲಭವಾಗಿ ಜಾಮೀನು ಪಡೆದು ಹೊರಬಂದಿದ್ದಾರೆ. ಜಾಮೀನಿನ ಮೇಲೆ ಹೊರಬಂದ ರೌಡಿಶೀಟರ್ ರೇವಾಗೆ ಪ್ರತಿದಿನ ಠಾಣೆಗೆ ಬಂದು ಸಹಿ ಹಾಕುವಂತೆ ನ್ಯಾಯಾಲಯ ಆದೇಶಿಸಿತ್ತು. ಆದರೆ, ಇನ್ಸ್‌ಪೆಕ್ಟರ್ ಯೋಗಾನಂದ್ ಪ್ರಭಾವದಿಂದ ರೇವಾ ಠಾಣೆಗೆ ಬರುತ್ತಿಲ್ಲ. ಬದಲಾಗಿ, ಪೊಲೀಸರೇ ರೇವಾನ ಅಪಾರ್ಟ್‌ಮೆಂಟ್‌ಗೆ ಹೋಗಿ ಸಹಿ ಮಾಡಿಸಿಕೊಂಡು ಬರುತ್ತಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.

ಇದನ್ನೂ ಓದಿ: ಸೋಶಿಯಲ್ ಮೀಡಿಯಾದಲ್ಲಿ ಕಾಡಿಸುತ್ತಿದ್ದ ಕಾನ್ಸ್‌ಟೇಬಲ್‌; ಕಿರುಕುಳ ತಾಳಲಾರದೆ ಮಹಿಳೆ ಆತ್ಮಹತ್ಯೆ!

ಕೊಲೆಯಾದ ರೇವಂತ್ ಕುಟುಂಬದವರಿಗೆ ಮತ್ತು ಸಾಕ್ಷಿಗಳಿಗೆ ರೌಡಿಗಳಿಂದ ಜೀವ ಬೆದರಿಕೆ ಇತ್ತು. ಈ ಬಗ್ಗೆ ರಕ್ಷಣೆ ಕೋರಿದರೂ ಇನ್ಸ್‌ಪೆಕ್ಟರ್ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ವಹಿಸಿದ್ದಾರೆ ಎನ್ನಲಾಗಿದೆ. ನ್ಯಾಯ ಸಿಗಬೇಕಿದ್ದ ಠಾಣೆಯೇ ಆರೋಪಿಗಳ ಪರವಾಗಿ ನಿಂತಿರುವುದು ಕುಟುಂಬದವರನ್ನು ಕಂಗಾಲಾಗಿಸಿದೆ. ರೌಡಿಶೀಟರ್ ಜೊತೆ ಸಖ್ಯ ಬೆಳೆಸಿರುವ ಇನ್ಸ್‌ಪೆಕ್ಟರ್ ವಿರುದ್ಧ ಹಿರಿಯ ಅಧಿಕಾರಿಗಳು ತನಿಖೆ ನಡೆಸಿ, ನ್ಯಾಯ ಒದಗಿಸಬೇಕೆಂದು ರೇವಂತ್ ಪೋಷಕರು ಒತ್ತಾಯಿಸಿದ್ದಾರೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್ – Kannada News | Social activist Snehamayi Krishna first reaction to the CCB Crime Police arrest

ಬೆಂಗಳೂರು, ಫೆಬ್ರವರಿ 21: ಸಿಸಿಬಿ ಕ್ರೈಂ ಪೊಲೀಸರಿಂದ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿಚಾರಣೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಆಯುಕ್ತ ಡಿ.ವಿ. ನಟೇಶ್ ನೀಡಿದ ದೂರಿನ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ನಟೇಶ್ ಅವರು, ತಾನು ಆಡಿಯೋ ಸೃಷ್ಟಿಸಿ ಫೇಸ್‌ಬುಕ್‌ನಲ್ಲಿ ಹಾಕಿದ್ದೇನೆ ಹಾಗೂ ರಾಜ್ಯ ಸರ್ಕಾರ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರ ವಿರುದ್ಧ ಸುಳ್ಳು ಆರೋಪ ಮಾಡಿದ್ದೇನೆ ಎಂದು ದೂರು ನೀಡಿದ್ದರು. ಈ ದೂರು ಹಿನ್ನೆಲೆ ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನನ್ನನ್ನು ವಿಚಾರಣೆಗಾಗಿ ಕರೆತರಲಾಗಿತ್ತು ಹೊರತು ಬಂಧಿಸಿಲ್ಲ ಎಂದು ಹೇಳಿದ್ದಾರೆ.  ನಟೇಶ್ ಹಾಗೂ ವಿನೋದ್ ಮಧ್ಯೆ ಹಣಕಾಸಿನ ವಿಚಾರ ನಡೆದಿತ್ತು. ನಟೇಶ್ ದುಡ್ಡು ಕೇಳಬಾರದು ಅಂತಾ ಈ ರೀತಿ ಮಾಡಿದ್ದಾನೆ. ಆಡಿಯೋ ನಿಜ, ಆದರೆ ಶಾಲಿನಿ ರಜನೀಶ್ ವಿರುದ್ಧದ ಆರೋಪ ಸುಳ್ಳು. ಮುಡಾ ಪ್ರಕರಣಕ್ಕೂ ಹಾಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಸ್ನೇಹಮಯಿ ಕೃಷ್ಣ ಹೇಳಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Source link

Video: ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ; ಸಿಸಿಟಿವಿ ದೃಶ್ಯ ವೈರಲ್​ – Kannada News | Arson Attempt Fails: Man’s Own Car Catches Fire in Viral CCTV Footage

ವ್ಯಕ್ತಿಯೊಬ್ಬ ತನ್ನ ವೈರಿಯ ಮನೆಯ ಆವರಣದ ಸುತ್ತಲೂ ಪೆಟ್ರೋಲ್ ಸುರಿದು ಬೆಂಕಿ ಹಚ್ಚಲು ಪ್ರಯತ್ನಿಸಿದ್ದಾನೆ. ಆದರೆ, ಬೆಂಕಿ ಇದ್ದಕ್ಕಿದ್ದಂತೆ ಹೊತ್ತಿಕೊಂಡು ನಿಯಂತ್ರಣ ತಪ್ಪಿ ಹರಡಿದೆ. ಪರಿಣಾಮ ಈತ ಬಂದಿದ್ದ ಕಾರೇ ಬೆಂಕಿಗಾಹುತಿಯಾಗಿದೆ. ವೈರಿಯ ಮನೆಗೆ ಬೆಂಕಿ ಹಚ್ಚುವ ಗಡಿಬಿಡಿಯಲ್ಲಿ ಪೆಟ್ರೋಲ್ ಕಾರಿನ ಮೇಲೆ ಚೆಲ್ಲಿದ್ದರಿಂದ ಏಕಾಏಕಿ ಕಾರಿನೊಳಗೆ ಬೆಂಕಿ ಕಾಣಿಸಿಕೊಂಡಿದೆ. ಸಂಪೂರ್ಣ ದೃಶ್ಯಾವಳಿ ಮನೆಯ ಮುಂಭಾಗದ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸದ್ಯ ವಿಡಿಯೋ ವ್ಯಾಪಕವಾಗಿ ಹರಿದಾಡುತ್ತಿದೆ.

 

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

IND vs SA: ಬದಲಾಗಲಿದೆಯಾ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್ – Kannada News | India’s Predicted Playing 11 vs South Africa in T20 World Cup 2026

T20 World Cup 2026: ಟಿ20 ವಿಶ್ವಕಪ್​ನ ದ್ವಿತೀಯ ಸುತ್ತಿಗೆ ವೇದಿಕೆ ಸಿದ್ಧವಾಗಿದೆ. ಫೆಬ್ರವರಿ 21 ರಂದು ನಡೆಯಲಿರುವ ಸೂಪರ್-8 ರೌಂಡ್​ನ ಮೊದಲ ಮ್ಯಾಚ್​ನಲ್ಲಿ ಪಾಕಿಸ್ತಾನ್ ಮತ್ತು ನ್ಯೂಝಿಲೆಂಡ್ ಮುಖಾಮುಖಿಯಾಗಲಿದೆ. ಇನ್ನು ಫೆಬ್ರವರಿ 22 ರಂದು ನಡೆಯಲಿರುವ ಮೊದಲ ಪಂದ್ಯದಲ್ಲಿ ಇಂಗ್ಲೆಂಢ್ ಮತ್ತು ಶ್ರೀಲಂಕಾ ಕಣಕ್ಕಿಳಿದರೆ, ದ್ವಿತೀಯ ಪಂದ್ಯದಲ್ಲಿ ಭಾರತ ಮತ್ತು ಸೌತ್ ಆಫ್ರಿಕಾ ತಂಡಗಳು ಸೆಣಸಲಿದೆ.

ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯಕ್ಕಾಗಿ ಟೀಮ್ ಇಂಡಿಯಾ ತನ್ನ ಪ್ಲೇಯಿಂಗ್ ಇಲೆವೆನ್ ಬದಲಿಸಲಿದೆಯಾ ಎಂಬುದೇ ಪ್ರಶ್ನೆ. ಏಕೆಂದರೆ ಟೀಮ್ ಇಂಡಿಯಾ ಆರಂಭಿಕ ದಾಂಡಿಗ ಅಭಿಷೇಕ್ ಶರ್ಮಾ ಕಳೆದ ಮೂರು ಮ್ಯಾಚ್​ಗಳಲ್ಲಿ ಸೊನ್ನೆ ಸುತ್ತಿದ್ದಾರೆ.

ಇದಾಗ್ಯೂ ಅಭಿಷೇಕ್ ಶರ್ಮಾ ಅವರನ್ನು ಆಡುವ ಬಳಗದಿಂದ ಕೈ ಬಿಡುವ ಸಾಧ್ಯತೆಯಿಲ್ಲ. ಏಕೆಂದರೆ ತಂಡದಲ್ಲಿರುವ ಮತ್ತೋರ್ವ ಆರಂಭಿಕ ದಾಂಡಿಗ ಸಂಜು ಸ್ಯಾಮ್ಸನ್ ಕೂಡ ಫಾರ್ಮ್​ನಲ್ಲಿಲ್ಲ. ಹೀಗಾಗಿ ಅಭಿಷೇಕ್​ಗೆ ಮತ್ತೊಂದು ಚಾನ್ಸ್​ ನೀಡುವ ಸಾಧ್ಯತೆ ಹೆಚ್ಚು.

ಅಷ್ಟೇ ಅಲ್ಲದೆ ಕಳೆದ ಪಂದ್ಯದಲ್ಲಿ ಕಣಕ್ಕಿಳಿದ ಬಳಗವೇ ಸೌತ್ ಆಫ್ರಿಕಾ ವಿರುದ್ಧ ಕೂಡ ಆಡುವ ಸಾಧ್ಯತೆಯಿದೆ. ಏಕೆಂದರೆ ನೆದರ್​ಲೆಂಡ್ಸ್ ವಿರುದ್ಧದ ಪಂದ್ಯ ನಡೆದಿರುವುದು ಕೂಡ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ. ಹೀಗಾಗಿ ಅದೇ ಪ್ಲೇಯಿಂಗ್ ಇಲೆವೆನ್​ ಅನ್ನೇ ಈ ಮ್ಯಾಚ್​ನಲ್ಲೂ ಮುಂದುವರೆಸುವ ಸಾಧ್ಯತೆಯಿದೆ.

ಅದರಂತೆ ಟೀಮ್ ಇಂಡಿಯಾ ಪರ ಆರಂಭಿಕರಾಗಿ ಅಭಿಷೇಕ್ ಶರ್ಮಾ ಹಾಗೂ ಇಶಾನ್ ಕಿಶನ್ ಕಣಕ್ಕಿಳಿಯಲಿದ್ದಾರೆ. ಇನ್ನು ಮೂರನೇ ಕ್ರಮಾಂಕದಲ್ಲಿ ತಿಲಕ್ ವರ್ಮಾ ಆಡಿದ್ರೆ, ನಾಲ್ಕನೇ ಕ್ರಮಾಂಕದಲ್ಲಿ ಸೂರ್ಯಕುಮಾರ್ ಯಾದವ್ ಬ್ಯಾಟ್ ಬೀಸಲಿದ್ದಾರೆ.

ಇನ್ನು ಆಲ್​ರೌಂಡರ್​ಗಳಾಗಿ ಹಾರ್ದಿಕ್ ಪಾಂಡ್ಯ, ಶಿವಂ ದುಬೆ ಹಾಗೂ ಅಕ್ಷರ್ ಪಟೇಲ್​ಗೆ ಸ್ಥಾನ ಸಿಗಲಿದೆ. ಹಾಗೆಯೇ ಫಿನಿಶರ್ ಪಾತ್ರದಲ್ಲಿ ರಿಂಕು ಸಿಂಗ್ ಕಣಕ್ಕಿಳಿಯಲಿದ್ದಾರೆ. ಇನ್ನುಳಿದಂತೆ ಬೌಲರ್​ಗಳಾಗಿ ಜಸ್​ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್ ಹಾಗೂ ವರುಣ್ ಚಕ್ರವರ್ತಿ ಆಡುವ ಬಳಗದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಅದರಂತೆ ಟೀಮ್ ಇಂಡಿಯಾದ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿರಲಿದೆ…

  • ಇಶಾನ್ ಕಿಶನ್
  • ಅಭಿಷೇಕ್ ಶರ್ಮಾ
  • ತಿಲಕ್ ವರ್ಮಾ
  • ಸೂರ್ಯಕುಮಾರ್ ಯಾದವ್
  • ಹಾರ್ದಿಕ್ ಪಾಂಡ್ಯ
  • ಅಕ್ಷರ್ ಪಟೇಲ್
  • ಶಿವಂ ದುಬೆ
  • ರಿಂಕು ಸಿಂಗ್
  • ವರುಣ್ ಚಕ್ರವರ್ತಿ
  • ಅರ್ಷದೀಪ್ ಸಿಂಗ್
  • ಜಸ್​ಪ್ರೀತ್ ಬುಮ್ರಾ.

ಇದನ್ನೂ ಓದಿ: ಟೀಮ್ ಇಂಡಿಯಾ ಸೆಮಿಫೈನಲ್​ಗೆ ತಲುಪಲ್ಲ: ಪಾಕ್ ಕ್ರಿಕೆಟಿಗನ ಭವಿಷ್ಯ

ಭಾರತ ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಅಕ್ಷರ್ ಪಟೇಲ್ (ಉಪನಾಯಕ), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಜಸ್​ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ, ಮೊಹಮ್ಮದ್ ಸಿರಾಜ್, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಇಶಾನ್ ಕಿಶನ್ (ವಿಕೆಟ್ ಕೀಪರ್), ರಿಂಕು ಸಿಂಗ್.

Source link

ಸೋಶಿಯಲ್ ಮೀಡಿಯಾದಲ್ಲಿ ಕಾಡಿಸುತ್ತಿದ್ದ ಕಾನ್ಸ್‌ಟೇಬಲ್‌; ಕಿರುಕುಳ ತಾಳಲಾರದೆ ಮಹಿಳೆ ಆತ್ಮಹತ್ಯೆ! – Kannada News | Shivamogga Woman’s Suicide: Bhadravathi Constable Harassment via Social Media Blamed

ಸೋಶಿಯಲ್ ಮೀಡಿಯಾದಲ್ಲಿ ಕಾಡಿಸುತ್ತಿದ್ದ ಕಾನ್ಸ್‌ಟೇಬಲ್‌; ಕಿರುಕುಳ ತಾಳಲಾರದೆ ಮಹಿಳೆ ಆತ್ಮಹತ್ಯೆ!

ಶಿವಮೊಗ್ಗ, ಫೆಬ್ರವರಿ 21: ಜಿಲ್ಲೆಯಲ್ಲಿ ಕಾನ್ಸ್‌ಟೇಬಲ್‌ನ ಕಿರುಕುಳಕ್ಕೆ ಬೇಸತ್ತು ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಭದ್ರಾವತಿ ತಾಲೂಕಿನ ಹೊಸ ಸಿದ್ದಾಪುರ ಗ್ರಾಮದಲ್ಲಿ ನಡೆದಿದೆ. ಮಹಿಳೆ ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಸಾಮಾಜಿಕ ಜಾಲತಾಣಗಳ ಮೂಲಕ ಆಕೆಗೆ ವಿಪರೀತ ತೊಂದರೆ ನೀಡುತ್ತಿದ್ದ ಎಂಬುದು ಬೆಳಕಿಗೆ ಬಂದಿದೆ.

ಕಾನ್ಸ್‌ಟೇಬಲ್ ಮೋಹನ್ ವಿರುದ್ಧ ಎಫ್‌ಐಆರ್

ಮೃತಳ ತಾಯಿ ಭದ್ರಾವತಿಯ ನ್ಯೂಟೌನ್ ಪೊಲೀಸ್ ಠಾಣೆಗೆ ನೀಡಿದ ದೂರಿನ ಮೇರೆಗೆ ಕಾನ್ಸ್‌ಟೇಬಲ್ ಮೋಹನ್ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಫೇಸ್‌ಬುಕ್ ಹಾಗೂ ಮೆಸೇಂಜರ್ ಮೂಲಕ ತನ್ನ ಮಗಳಿಗೆ ನಿರಂತರವಾಗಿ ಸಂದೇಶ ಕಳುಹಿಸಿ ಕಿರುಕುಳ ನೀಡುತ್ತಿದ್ದನೆಂದು, ಬ್ಲಾಕ್ ಮಾಡಿದರೂ ಬೇರೆ ಖಾತೆಗಳಿಂದ ಸಂಪರ್ಕಿಸುತ್ತಿದ್ದನೆಂದು ದೂರಿನಲ್ಲಿ ತಾಯಿ ಉಲ್ಲೇಖಿಸಿದ್ದಾರೆ. ಮಹಿಳೆ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಅಪ್ರಚಾರ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ ಎಂಬ ಆರೋಪವೂ ಕೇಳಿಬಂದಿದೆ.ಮೃತದೇಹದ ಮರಣೋತ್ತರ ಪರೀಕ್ಷೆ ಭದ್ರಾವತಿ ತಾಲೂಕು ಆಸ್ಪತ್ರೆಯಲ್ಲಿ ಪೂರ್ಣಗೊಂಡಿದೆ.

ಈ ಪ್ರಕರಣಕ್ಕೆ ಸಂಬಂಧಿಸಿ ಬಿ. ನಿಖಿಲ್ ಪ್ರತಿಕ್ರಿಯೆ ನೀಡಿದ್ದು, ಆರೋಪಿ ಕಾನ್ಸ್‌ಟೇಬಲ್ ಮೋಹನ್ ಬಂಧನಕ್ಕಾಗಿ ವಿಶೇಷ ಪೊಲೀಸ್ ತಂಡ ರಚಿಸಲಾಗಿದೆ ಹಾಗೂ ಶೀಘ್ರದಲ್ಲೇ ಬಂಧಿಸಲಾಗುವುದು ಎಂದು ತಿಳಿಸಿದ್ದಾರೆ.

ಇನ್ನೂ ಅನೇಕ ಮಹಿಳೆಯರಿಗೆ ಕಾಟ ಕೊಟ್ಟಿದ್ದ ಆಸಾಮಿ

ಮೋಹನ್ ಈ ಹಿಂದೆ ಭದ್ರಾವತಿ ನ್ಯೂಟೌನ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸಿ, ಅಶಿಸ್ತು ಹಿನ್ನೆಲೆ ತೀರ್ಥಹಳ್ಳಿ ತಾಲೂಕಿನ ಮಾಳೂರು ಠಾಣೆಗೆ ವರ್ಗಾವಣೆಗೊಂಡಿದ್ದ ಎಂದು ಹೇಳಲಾಗಿದೆ. ಸಾಮಾಜಿಕ ಜಾಲತಾಣಗಳ ಮೂಲಕ ಇನ್ನೂ ಅನೇಕ ಮಹಿಳೆಯರಿಗೆ ಇದೇ ರೀತಿ ಕಿರುಕುಳ ನೀಡಿದ್ದಾನೆ ಎಂಬ ಆರೋಪಗಳೂ ಕೇಳಿಬಂದಿವೆ. ಜೊತೆಗೆ ನಗರದಲ್ಲಿ ಮೀಟರ್ ಬಡ್ಡಿ ವ್ಯವಹಾರ ನಡೆಸುತ್ತಿದ್ದನೆಂಬ ದೂರುಗಳೂ ದಾಖಲಾಗಿದೆ ಎಂದು ಹೇಳಲಾಗಿದೆ.

ಇದನ್ನೂ ಓದಿ ತುಂಗಾ ನದಿ ತೀರದಲ್ಲಿ ವಿದೇಶಿಗರ ಪಾರ್ಟಿ! ರೆಸಾರ್ಟ್ ಮಾಲೀಕರ ಮೇಲೆ ಬಿತ್ತು ಕೇಸ್

ಆರು ದಿನಗಳ ಹಿಂದೆ ರಾಜ್ಯ ಕೈಗಾರಿಕಾ ಭದ್ರತಾ ಪಡೆಯ ಪೊಲೀಸ್ ಪೇದೆ ಜಗದೀಶ್ ಅನಾರೋಗ್ಯದಿಂದ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಪತಿ ಆತ್ಮಹತ್ಯೆಯಾದ ಆರು ದಿನಗಳಲ್ಲೇ ಪತ್ನಿ ಕೂಡ ಅದೇ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವುದು ಕುಟುಂಬವನ್ನು ಶೋಕಸಾಗರದಲ್ಲಿ ಮುಳುಗಿಸಿದೆ. ತಂದೆ ತಾಯಿಯಿಲ್ಲದೆ ಇಬ್ಬರು ಪುಟ್ಟ ಹೆಣ್ಣುಮಕ್ಕಳು ಈಗ ಅನಾಥರಾಗಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

IND vs SA: ಟೀಮ್ ಇಂಡಿಯಾ ಆಟಗಾರ ಗಾಯಾಳು – Kannada News | T20 World Cup 2026: Mohammed Siraj Suffers Injury Scare

T20 World Cup 2026: ಭಾರತ ಮತ್ತು ಸೌತ್ ಆಫ್ರಿಕಾ (IND vs SA) ನಡುವಣ ಸೂಪರ್-8 ಸುತ್ತಿನ ಪಂದ್ಯವು ನಾಳೆ (ಫೆ.22) ನಡೆಯಲಿದೆ. ಈ ಪಂದ್ಯಕ್ಕೂ ಮುನ್ನ ಟೀಮ್ ಇಂಡಿಯಾ ವೇಗಿ ಮೊಹಮ್ಮದ್ ಸಿರಾಜ್ ಗಾಯಗೊಂಡಿದ್ದಾರೆ. ಅಹಮದಾಬಾದ್​ನಲ್ಲಿ ನಡೆದ ಅಭ್ಯಾಸ ಪಂದ್ಯದ ವೇಳೆ ಸಿರಾಜ್ ಅವರ ಕಾಲಿಗೆ ಗಾಯವಾಗಿದ್ದು, ಹೀಗಾಗಿ ಅವರು ಅರ್ಧದಲ್ಲೇ ಅಭ್ಯಾಸ ನಿಲ್ಲಿಸಿದ್ದರು.

ನೆಟ್ಸ್​ನಲ್ಲಿ ಸಿರಾಜ್ ಟೀಮ್ ಇಂಡಿಯಾ ಬ್ಯಾಟರ್ ಹಾರ್ದಿಕ್ ಪಾಂಡ್ಯಗೆ ಬೌಲಿಂಗ್ ಮಾಡುತ್ತಿದ್ದರು. ವೇಳೆ ಪಾಂಡ್ಯ ಹೊಡೆದ ಚೆಂಡು ನೇರವಾಗಿ ಸಿರಾಜ್​ ಅವರ ಎಡಗಾಲಿನ ಮಂಡಿಗೆ ಬಡಿದಿದೆ.

ಚೆಂಡು ತಗುಲಿದ ತಕ್ಷಣ ಮೊಹಮ್ಮದ್ ಸಿರಾಜ್ ನೋವಿನಿಂದ ಮೈದಾನದಲ್ಲೇ ಕುಸಿದು ಬಿದ್ದರು. ತಕ್ಷಣವೇ ಫಿಸಿಯೋಗಳು ಅವರಿಗೆ ಐಸ್ ಪ್ಯಾಕ್ ಚಿಕಿತ್ಸೆ ನೀಡಿದರು. ಇದಾಗ್ಯೂ ಅವರು ಚೇತರಿಸಿಕೊಂಡಿರಲಿಲ್ಲ. ಅಲ್ಲದೆ ನೋವಿನೊಂದಿಗೆ ಕಾಲು ಎಳೆಯುತ್ತಾ ಮೈದಾನದಿಂದ ಹೊರನಡೆದಿದ್ದಾರೆ.

ಸದ್ಯ ಮೊಹಮ್ಮದ್ ಸಿರಾಜ್ ಅವರ ಗಾಯದ ತೀವ್ರತೆಯ ಬಗ್ಗೆ ವೈದ್ಯಕೀಯ ತಂಡ ನಿಗಾ ಇರಿಸಿದ್ದು, ಫೆಬ್ರವರಿ 22 ರಂದು ಸೌತ್ ಆಫ್ರಿಕಾ ವಿರುದ್ಧ ನಡೆಯಲಿರುವ ಮಹತ್ವದ ಪಂದ್ಯಕ್ಕೆ ಅವರು ಲಭ್ಯರಿರುತ್ತಾರೆಯೇ ಎಂಬುದು ಇನ್ನು 24 ಗಂಟೆಗಳಲ್ಲಿ ನಿರ್ಧಾರವಾಗಲಿದೆ.

ಅಂದಹಾಗೆ ಮೊಹಮ್ಮದ್ ಸಿರಾಜ್ ಈ ಬಾರಿಯ ಟಿ20 ವಿಶ್ವಕಪ್​ಗೆ ಬದಲಿ ಆಟಗಾರನಾಗಿ ಆಯ್ಕೆಯಾಗಿದ್ದರು. ಭಾರತ ತಂಡದಲ್ಲಿ ಸ್ಥಾನ ಪಡೆದಿದ್ದ ಹರ್ಷಿತ್ ರಾಣಾ ಗಾಯಗೊಂಡ ಪರಿಣಾಮ ಸಿರಾಜ್ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿತ್ತು.

ಅದರಂತೆ ಯುಎಸ್​ಎ ವಿರುದ್ಧದ ಮೊದಲ ಪಂದ್ಯದಲ್ಲಿ ಕಣಕ್ಕಿಳಿದಿದ್ದ ಸಿರಾಜ್ 3 ವಿಕೆಟ್ ಕಬಳಿಸಿ ಮಿಂಚಿದ್ದರು. ಇದೀಗ ಅವರು ಗಾಯಗೊಂಡಿರುವ ಕಾರಣ ಬದಲಿ ಆಟಗಾರನನ್ನು ಆಯ್ಕೆ ಮಾಡಲಿದ್ದಾರಾ ಎಂಬುದನ್ನು ಕಾದು ನೋಡಬೇಕಿದೆ.

ಇದನ್ನೂ ಓದಿ: ಸೂಪರ್-8 ಪಂದ್ಯಗಳ ವೇಳೆ ಮಳೆ ಬಂದರೆ ಫಲಿತಾಂಶ ನಿರ್ಧರಿಸುವುದು ಹೇಗೆ?

ಭಾರತ ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಅಕ್ಷರ್ ಪಟೇಲ್ (ಉಪನಾಯಕ), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಜಸ್​ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ, ಮೊಹಮ್ಮದ್ ಸಿರಾಜ್, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಇಶಾನ್ ಕಿಶನ್ (ವಿಕೆಟ್ ಕೀಪರ್), ರಿಂಕು ಸಿಂಗ್.

Published On – 1:59 pm, Sat, 21 February 26

Source link

ಬೆಂಗಳೂರಿನಲ್ಲಿ ಉಗ್ರ ಚಟುವಟಿಕೆ ಪ್ರಕರಣದಲ್ಲಿ ಬೇಕಾಗಿದ್ದ ಉಗ್ರ ಜುನೈದ್ ಸುಳಿವು ನೀಡಿದವರಿಗೆ 5 ಲಕ್ಷ ರೂ. ಬಹುಮಾನ: ಎನ್ಐಎ ಘೋಷಣೆ – Kannada News | NIA Announces Rs 5 Lakh Reward for Information on LeT Operative Junaid Ahmed Wanted in Bengaluru Terror Case

ಉಗ್ರ ಜುನೈದ್ ಸುಳಿವು ನೀಡಿದವರಿಗೆ 5 ಲಕ್ಷ ರೂ. ಬಹುಮಾನ: ಎನ್ಐಎ ಘೋಷಣೆImage Credit source: TV9 Network

ಬೆಂಗಳೂರು, ಫೆಬ್ರವರಿ 21: ಲಷ್ಕರ್ ಎ ತೊಯ್ಬಾ (LeT) ಉಗ್ರ ಜುನೈದ್ ಅಹ್ಮದ್ ಬಗ್ಗೆ ಮಾಹಿತಿ ನೀಡಿದವರಿಗೆ 5 ಲಕ್ಷ ರೂಪಾಯಿ ನಗದು ಬಹುಮಾನ ನೀಡುವುದಾಗಿ ರಾಷ್ಟ್ರೀಯ ತನಿಖಾ ದಳ (NIA) ಘೋಷಿಸಿದೆ. 33 ವರ್ಷ ವಯಸ್ಸಿನ ಉಗ್ರ ಜುನೈದ್ ಅಹ್ಮದ್ ಘೋಷಿತ ಅಪರಾಧಿಯಾಗಿದ್ದು, ಶಸ್ತ್ರಾಸ್ತ್ರ, ಮದ್ದುಗುಂಡುಗಳು ಮತ್ತು ಸ್ಫೋಟಕಗಳನ್ನು ವಶಪಡಿಸಿಕೊಂಡ ಪ್ರಕರಣದಲ್ಲಿ ಎನ್​ಐಎಗೆ ಬೇಕಾಗಿದ್ದಾನೆ. ಜುಲೈ 2023 ರಲ್ಲಿ ಹೆಬ್ಬಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈತ ವಿವಿಧ ಹೆಸರುಗಳನ್ನಿಟ್ಟುಕೊಂಡು ಬೆಂಗಳೂರಿನ ನಾಗಶೆಟ್ಟಿಹಳ್ಳಿಯ ಮಲ್ಲಿಗೆ ಲೇಔಟ್​​ನಲ್ಲಿ ವಾಸಿಸುತ್ತಿದ್ದ.

ಜುನೈದ್ ಅಹ್ಮದ್ ಬಂಧನಕ್ಕೆ ನೆರವಾಗುವಂಥ ಯಾವುದೇ ಮಾಹಿತಿಯನ್ನು ನೀಡುವವರಿಗೆ ಬಹುಮಾನ ನೀಡಲಾಗುವುದು. ಮಾಹಿತಿದಾರರ ಗುರುತನ್ನು ಗೌಪ್ಯವಾಗಿಡಲಾಗುವುದು ಎಂದು ಎನ್​ಐಎ ಹೇಳಿದೆ. ಮಾಹಿತಿಯನ್ನು 080-29510900 ಅಥವಾ 8904241100 ಗೆ ಕರೆ ಮಾಡಿ ಹಂಚಿಕೊಳ್ಳಬಹುದು. ಜುನೈದ್ ಅಹ್ಮದ್ ಎಂಬ ಉಗ್ರ ಜುನೈದ್, ಜೆಡಿ ಜಮ್ಶೀದಾ, ಜಾನ್, ಸುಹಾನಾ, ಡಿಜೆ ರಿಟ್ಜ್, ಜಮೀಲಾ ಮತ್ತು ಜನ್ನು ಎಂಬ ಹೆಸರುಗಳಿಂದ ಗುರುತಿಸಿಕೊಂಡಿದ್ದ ಎನ್ನಲಾಗಿದೆ.

ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಅಧಿಕಾರಿಗಳು ಬೆಂಗಳೂರಿನ ಪರಪ್ಪನ ಅಗಹಾರದಲ್ಲಿರುವ ಕೇಂದ್ರ ಕಾರಾಗೃಹದಿಂದ 2023 ರ ಜುಲೈನಲ್ಲಿ ಐವರು ಭಯೋತ್ಪಾದಕ ಶಂಕಿತರನ್ನು ಬಂಧಿಸಿದ್ದರು. ಅವರನ್ನು ಎಲ್‌ಇಟಿ ಉಗ್ರನೊಬ್ಬ ನಗರದಲ್ಲಿ ಭಯೋತ್ಪಾದಕ ದಾಳಿ ನಡೆಸಲು ಸೆಳೆದುಕೊಂಡಿದ್ದು ಬಯಲಾಗಿತ್ತು. ಆರೋಪಿಗಳಿಂದ ಏಳು ದೇಶೀಯ ಪಿಸ್ತೂಲ್‌ಗಳು, 45 ಜೀವಂತ ಸುತ್ತುಗಳು, ವಾಕಿ-ಟಾಕಿ ಸೆಟ್‌ಗಳು, ಒಂದು ಚಾಕು ಮತ್ತು 12 ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಳ್ಳಲಾಗಿತ್ತು.

ಭಯೋತ್ಪಾದ ಚಟುವಟಿಕೆ ಸಂಬಂಧ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಐವರನ್ನು ಬಂಧಿಸಲಾಗಿತ್ತು. ಎಲ್‌ಇಟಿ ಕಾರ್ಯಕರ್ತ ಟಿ ನಸೀರ್ ಅಲಿಯಾಸ್ ಉಮ್ಮರ್ ಹಾಜಿ ಮತ್ತು ಜುನೈದ್ ಅಹ್ಮದ್ ಜೊತೆಗೆ ಐವರು ಶಂಕಿತ ಭಯೋತ್ಪಾದಕ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿತ್ತು. ಜುನೈದ್ ಅಹ್ಮದ್ ಜೊತೆಗೆ ಬಂಧಿತರಾದ ಐವರು 2017 ರಲ್ಲಿ ಆರ್‌ಟಿ ನಗರ ಪೊಲೀಸ್ ವ್ಯಾಪ್ತಿಯಲ್ಲಿ ನೂರ್ ಅಹ್ಮದ್‌ ಎಂಬಾತನನ್ನು ಅಪಹರಿಸಿ ಕೊಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿತ್ತು. ಸುಮಾರು 18 ತಿಂಗಳ ಕಾಲ ವಿಚಾರಣಾಧೀನ ಕೈದಿಗಳಾಗಿ ಜೈಲು ಶಿಕ್ಷೆ ಅನುಭವಿಸಿದ ನಂತರ, ಜುನೈದ್ ಅಹ್ಮದ್ ಜೊತೆಗೆ ಬಂಧಿಸಲಾದ ಐವರು ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದರು. ಬಿಡುಗಡೆಯಾದ ನಂತರ ಐವರು ಸಣ್ಣಪುಟ್ಟ ಕೆಲಸಗಳನ್ನು ಮಾಡುತ್ತಿದ್ದರು.

ಜುನೈದ್ ಅಹ್ಮದ್ 2020 ರಲ್ಲಿ ಮತ್ತೆ ರಕ್ತಚಂದನ ಕಳ್ಳಸಾಗಣೆಗಾಗಿ ಬಂಧನಕ್ಕೊಳಗಾಗಿ ಮತ್ತೆ ಐದು ತಿಂಗಳು ಅದೇ ಜೈಲಿನಲ್ಲಿದ್ದನು. 2021 ರಲ್ಲಿ ಡಕಾಯಿತಿ ಪ್ರಕರಣದಲ್ಲಿ ಮತ್ತೆ ಬಂಧನಕ್ಕೊಳಗಾಗಿದ್ದ. ಜಾಮೀನಿನ ಮೇಲೆ ಹೊರಬಂದ ನಂತರ, ದೇಶ ಬಿಟ್ಟು ಓಡಿಹೋಗಿ ಪ್ರಸ್ತುತ ಮಧ್ಯಪ್ರಾಚ್ಯ ದೇಶದಲ್ಲಿ ಆಶ್ರಯ ಪಡೆದಿದ್ದಾನೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: ಕರ್ನಾಟಕದ ಮೂವರು ಶಂಕಿತ ಉಗ್ರರನ್ನ NIA ಕಸ್ಟಡಿಗೆ ನೀಡಿ ಕೋರ್ಟ್ ಆದೇಶ

ಬೆಂಗಳೂರು ಕೇಂದ್ರ ಕಾರಾಗೃಹದಲ್ಲಿ ಉಗ್ರ ಟಿ. ನಾಸಿರ್​​ಗೆ ಮೊಬೈಲ್ ಮತ್ತು ಹಣವನ್ನು ಒದಗಿಸಿದ ಆರೋಪದ ಮೇಲೆ ಜುನೈದ್ ತಾಯಿ ಅನೀಸ್ ಫಾತಿಮಾರನ್ನು ಎನ್​ಐಎ ಬಂಧಿಸಿತ್ತು. ಫಾತಿಮಾ ಜೊತೆಗೆ ನಗರ ಸಶಸ್ತ್ರ ಮೀಸಲು-ದಕ್ಷಿಣದ ಸಹಾಯಕ ಸಬ್-ಇನ್ಸ್‌ಪೆಕ್ಟರ್ ಚಂದ್ ಪಾಷಾ ಮತ್ತು ಬೆಂಗಳೂರು ಕೇಂದ್ರ ಕಾರಾಗೃಹದ ಮನೋವೈದ್ಯ ಡಾ. ನಾಗರಾಜ್ ಅವರನ್ನು ಸಹ ಬಂಧಿಸಲಾಗಿತ್ತು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link