ಇರು ಅಂದ್ರೆ ಇರ್ತೀನಿ, ಬಿಡು ಅಂದ್ರೆ ಬಿಡ್ತೀನಿ: ಹೈಕಮಾಂಡ್ ನಿರ್ಧಾರವೇ ಫೈನಲ್; ಶಾಕಿಂಗ್ ಹೇಳಿಕೆ ನೀಡಿದ ಸಿದ್ದರಾಮಯ್ಯ – Kannada News | Karnataka CM Siddaramaiah on Cabinet Reshuffle, Local Polls, and Opposition Tactics
ಬೆಂಗಳೂರು, ಮೇ.6: ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಐದು ವರ್ಷಗಳ ಮುಖ್ಯಮಂತ್ರಿ ಸ್ಥಾನದ ಅವಧಿಯ ಕುರಿತು ಹೈಕಮಾಂಡ್ ನಿರ್ಧಾರವೇ ಅಂತಿಮ ಎಂದು ಸ್ಪಷ್ಟಪಡಿಸಿದ್ದಾರೆ. “ನಮ್ಮ ಪಕ್ಷ ಐದು ವರ್ಷ ಪೂರ್ಣಗೊಳಿಸುತ್ತದೆ, ಆದರೆ ನನ್ನ ಸ್ಥಾನದ ಕುರಿತು ಹೈಕಮಾಂಡ್ ಏನು ತೀರ್ಮಾನ ಮಾಡುತ್ತದೆಯೋ ಅದರಂತೆ ನಡೆಯುತ್ತೇನೆ” ಎಂದು ಅವರು ತಿಳಿಸಿದ್ದಾರೆ. ದೆಹಲಿ ಭೇಟಿ ಬಗ್ಗೆ ಕೇಳಿದ ಪ್ರಶ್ನೆಗೆ, ಹೈಕಮಾಂಡ್ ಕರೆದರೆ ಅಥವಾ ರಾಹುಲ್ ಗಾಂಧಿ ಅಪಾಯಿಂಟ್ಮೆಂಟ್ ನೀಡಿದರೆ ಸಂಪುಟ ಪುನರಚನೆ ಸೇರಿದಂತೆ ಇತರೆ ವಿಚಾರಗಳ ಕುರಿತು ಚರ್ಚಿಸಲು…