ದಳಪತಿ ವಿಜಯ್ 603 ಕೋಟಿ ರೂಪಾಯಿ ಆಸ್ತಿ ವಿವರ ಬಹಿರಂಗ: ಪತ್ನಿ ಬಳಿ ಎಷ್ಟಿದೆ?
ತಮಿಳುನಾಡು ರಾಜಕೀಯದಲ್ಲಿ ಹೊಸ ಇತಿಹಾಸ ಬರೆಯಲು ಹೊರಟಿರುವ ತಮಿಳು ವೆಟ್ರಿ ಕಳಗಂ (TVK) ಪಕ್ಷದ ಸ್ಥಾಪಕ, ನಟ ದಳಪತಿ ವಿಜಯ್ (Thalapathy Vijay) ಅವರು ಸೋಮವಾರ (ಮಾರ್ಚ್ 30) ತಮ್ಮ ಮೊದಲ ಚುನಾವಣಾ ಅಫಿಡವಿಟ್ ಸಲ್ಲಿಸಿದ್ದಾರೆ. ಈ ಅಫಿಡವಿಟ್‌ನಲ್ಲಿ ಅವರು ಘೋಷಿಸಿಕೊಂಡಿರುವ ಆಸ್ತಿಯ ಮೊತ್ತ ಕೇಳಿ ಅಭಿಮಾನಿಗಳು ಹಾಗೂ ರಾಜಕೀಯ ವಲಯ ದಂಗಾಗಿದೆ. 52 ವರ್ಷ ವಯಸ್ಸಿನ ವಿಜಯ್ ಅವರು ಸುಮಾರು 603.20 ಕೋಟಿ ರೂಪಾಯಿ ಮೌಲ್ಯದ ಒಟ್ಟು ಆಸ್ತಿಯನ್ನು (Thalapathy Vijay Net Worth) ಹೊಂದಿರುವುದಾಗಿ…