ಮೇಲ್ಮನೆ ಮೇಲಾಟ: ಕಾಂಗ್ರೆಸ್ ಕ್ಯಾಂಪ್ ಸೇರಿಕೊಂಡ ಬಿಜೆಪಿ ಉಚ್ಛಾಟಿತ ಶಾಸಕರು – Kannada News | bjp expelled MLAs ST Somashekar And Shivaram Hebbar In Congress Camp at Resort ahead of MLC polls
ರಾಮನಗರ, (ಜೂನ್ 17): ವಿಧಾನ ಪರಿಷತ್ ಚುನಾವಣೆ (MLC polls) ನಾಳೆ ಅಂದರೆ ಜೂನ್ 18ರಂದು ನಡೆಯಲಿದ್ದು, ಆಡಳಿತಾರೂಢ ಕಾಂಗ್ರೆಸ್ ಶಾಸಕರು ರೆಸಾರ್ಟ್ ಸೇರಿಕೊಂಡಿದ್ದಾರೆ. ಪರಿಷತ್ ಕಣದಲ್ಲಿ ಏಳನೇ ಅಭ್ಯರ್ಥಿ ಅಖಾಡಕ್ಕಿಳಿಸಿರುವುದು ಮೇಲ್ಮನೆ ಚುನಾವಣೆ ರಂಗೇರಿದೆ. 7 ಸ್ಥಾನಗಳಿಗೆ ನಡೆಯಲಿರುವ ಚುನಾವಣೆಯಲ್ಲಿ ಕಾಂಗ್ರೆಸ್ 5 ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದರೆ, ಬಿಜೆಪಿ 2 ಹಾಗೂ ಜೆಡಿಎಸ್ ಓರ್ವ ಅಭ್ಯರ್ಥಿ ಕಣಕ್ಕಿಳ ಸಿದೆ. ಕಾಂಗ್ರೆಸ್‌ನ 4 ಹಾಗೂ ಬಿಜೆಪಿಯ ಇಬ್ಬರು ಅಭ್ಯರ್ಥಿಗಳು ಸರಾಗವಾಗಿ ಗೆಲುವು ಸಾಧಿಸಲಿದ್ದಾರೆ. ಏಳನೇ ಸ್ಥಾನಕ್ಕೆ ಜಟಾಪಟಿ ಜೋರಾಗಿದೆ….