ನಮ್ಮ ಮೆಟ್ರೋ ನೇರಳೆ ಮಾರ್ಗದ ಸೇವೆಯಲ್ಲಿ ವ್ಯತ್ಯಯ: 15 ನಿಮಿಷ ನಿಂತಲ್ಲೇ ನಿಂತ ರೈಲುಗಳು – Kannada News | Namma Metro Disruption: Purple Line Service Halts, Technical Issues Affect Commuters
ಬೆಂಗಳೂರು, ಮೇ 05: ಇವತ್ತೂ ಕೂಡ ನಮ್ಮ ಮೆಟ್ರೋ ನೇರಳೆ ಮಾರ್ಗದ ಕಾರ್ಯಾಚರಣೆಯಲ್ಲಿ ವ್ಯತ್ಯಯ ಉಂಟಾಗಿದೆ. ಸುಮಾರು 15 ನಿಮಿಷಗಳ ಕಾಲ ನೇರಳೆ ಮಾರ್ಗದ ಕುಂದಲಹಳ್ಳಿ ಸ್ಟೇಷನ್ನಲ್ಲಿ ಮೆಟ್ರೋ ರೈಲುಗಳು ನಿಂತಲ್ಲೇ ನಿಂತಿರುವ ಬಗ್ಗೆ ಪ್ರಯಾಣಿಕರು ಸಾಮಾಜಿಕ ಜಾಲತಾಣಗಳಲ್ಲಿ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಆದರೆ ಈ ಬಗ್ಗೆ ಬಿಎಂಆರ್ಸಿಎಲ್ ಈವರೆಗೂ ಮೆಟ್ರೋ ಸೇವೆಯಲ್ಲಿನ ವ್ಯತ್ಯಯದ ಬಗ್ಗೆ ಅಧಿಕೃತ ಮಾಹಿತಿ ನೀಡಿಲ್ಲ. ನಮ್ಮ ಮೆಟ್ರೋ ನೇರಳೆ ಮಾರ್ಗದ ಕಾರ್ಯಾಚರಣೆಯಲ್ಲಿ ವ್ಯತ್ಯಯ 15 ನಿಮಿಷಗಳ ಕಾಲ ನಿಂತಲ್ಲೇ ನಿಂತ ಮೆಟ್ರೋ ರೈಲುಗಳು…