TV9 Kannada News Live: ಉಪಚುನಾವಣೆ ಗೆದ್ದರೂ ‘ಕೈ’ಗೆ ಹೊಸ ಚಿಂತೆ, ಟಿವಿಕೆ ಮೈತ್ರಿ ಬಗ್ಗೆ ಅಂತೆಕಂತೆ – Kannada News | TV9 Kannada News Live: Muslim Votes shifts From Congress in Dvanagere, Vijay’s Alliance curiosity in Tamilnadu
ಬೆಂಗಳೂರು, ಮೇ 05: ದಾವಣಗೆರೆ ದಕ್ಷಿಣ ಕ್ಷೇತ್ರದ ಉಪ ಚುನಾವಣೆಯ ಫಲಿತಾಂಶ ಕಾಂಗ್ರೆಸ್ಗೆ ಆತಂಕ ಮೂಡಿಸಿದೆ. ಎಲೆಕ್ಷನ್ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಗೆದ್ದಿದ್ದರೂ, ವಿಜಯದ ಅಂತರ ಬಹಳ ಕಡಿಮೆಯಾಗಿರೋದು ಮುಸ್ಲಿಂ ಮತದಾರರು ಕಾಂಗ್ರೆಸ್ನಿಂದ ದೂರ ಸರಿದಿರುವುದನ್ನು ಸ್ಪಷ್ಟವಾಗಿ ತೋರಿಸುತ್ತಿದೆ ಎಂದು ವಿಶ್ಲೇಷಿಸಲಾಗಿದೆ. ಎಸ್ಡಿಪಿಐ ಅಭ್ಯರ್ಥಿ ಸೇರಿದಂತೆ ಚುನಾವಣೆಗೆ ಸ್ಪರ್ಧಿಸಿದ್ದ ಮುಸ್ಲಿಂ ಸಮಉದಾಯಕ್ಕೆ ಸೇರಿರುವ ಕ್ಯಾಂಡಿಡೇಟ್ಗಳು 20 ಸಾವಿರಕ್ಕೂ ಅಧಿಕ ಮತಗಳನ್ನು ಪಡೆದುಕೊಂಡಿದ್ದಾರೆ. ಈ ಬೆಳವಣಿಗೆಯು ಮುಂದಿನ ದಿನಗಳಲ್ಲಿ 40-50 ಕ್ಷೇತ್ರಗಳಲ್ಲಿ ಕಾಂಗ್ರೆಸ್ಗೆ ದೊಡ್ಡ ಮಟ್ಟದ ಹಾನಿಯನ್ನುಂಟು…