ಆಪರೇಷನ್ ಸಿಂದೂರ್ ಕುರಿತು ಸಿನಿಮಾ ಮಾಡಲಿರುವ ವಿವೇಕ್ ಅಗ್ನಿಹೋತ್ರಿ – Kannada News | Director Vivek Agnihotri to make a film on Operation Sindoor
ನಿರ್ದೇಶಕ ವಿವೇಕ್ ಅಗ್ನಿಹೋತ್ರಿ (Vivek Agnihotri) ಅವರು ಸತ್ಯ ಘಟನೆಗಳನ್ನು ಆಧರಿಸಿ ಸಿನಿಮಾ ಮಾಡುವ ಮೂಲಕ ಫೇಮಸ್ ಆಗಿದ್ದಾರೆ. ‘ದಿ ಕಾಶ್ಮೀರ್ ಫೈಲ್ಸ್’, ‘ದಿ ವ್ಯಾಕ್ಸಿನ್ ವಾರ್’, ‘ದಿ ಬೆಂಗಾಲ್ ಫೈಲ್ಸ್’ ಮುಂತಾದ ಸಿನಿಮಾಗಳನ್ನು ಅವರು ಮಾಡಿದ್ದಾರೆ. ಈಗ ಮತ್ತೊಂದು ನೈಜ ಘಟನೆ ಆಧಾರಿತ ಸಿನಿಮಾಗೆ ಅವರು ಸಜ್ಜಾಗುತ್ತಿದ್ದಾರೆ ಎಂಬ ಸುದ್ದಿ ಕೇಳಿಬಂದಿದೆ. ‘ಆಪರೇಷನ್ ಸಿಂದೂರ್’ (Operation Sindoor) ಕುರಿತು ಅವರು ಸಿನಿಮಾ ಮಾಡುತ್ತಾರೆ ಎನ್ನಲಾಗಿದೆ. ಆದರೆ ಈ ಬಗ್ಗೆ ಅವರು ಅಧಿಕೃತವಾಗಿ ಹೇಳಿಕೆ ನೀಡಿಲ್ಲ. ಪಾಕ್…