CSK vs RR: ಸಿಎಸ್ಕೆ ವಿರುದ್ಧ 15 ಎಸೆತಗಳಲ್ಲಿ 50 ರನ್ ಚಚ್ಚಿದ ವೈಭವ್ ಸೂರ್ಯವಂಶಿ
ಗುವಾಹಟಿಯಲ್ಲಿ ನಡೆದ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಐಪಿಎಲ್ 2026 ರ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದ ಯುವ ಆರಂಭಿಕ ಬ್ಯಾಟ್ಸ್‌ಮನ್ ವೈಭವ್ ಸೂರ್ಯವಂಶಿ ಕೇವಲ 15 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ್ದಾರೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಸಿಎಸ್ಕೆ ಕೇವಲ 127 ರನ್ಗಳ ಗುರಿ ನೀಡಿತು. ಈ ಗುರಿ ಬೆನ್ನಟ್ಟಿದ ರಾಜಸ್ಥಾನ್ ತಂಡಕ್ಕೆ ವೈಭವ್ ಸಿಡಿಲಬ್ಬರದ ಆರಂಭ ಒದಗಿಸಿಕೊಟ್ಟರು. ಜೇಮಿ ಓವರ್ಟನ್ ಎಸೆದ ಮೊದಲ ಓವರ್ನಲ್ಲಿ ತಾನು ಎದುರಿಸಿದ ಮೊದಲ ಎಸೆತದಲ್ಲೇ ವೈಭವ್ ಸಿಕ್ಸರ್ ಬಾರಿಸುವ…