All posts by nagaraj11081993

CSK vs RR: ಸಿಎಸ್​ಕೆ ಪರ ಮೊದಲ ಪಂದ್ಯದಲ್ಲೇ ಎಡವಿದ ಸಂಜು ಸ್ಯಾಮ್ಸನ್

Source link

CSK vs RR: W,W,W, W.. ಸಿಎಸ್​ಕೆ ಪೆವಿಲಿಯನ್ ಪರೇಡ್ ಶುರು

Source link

ದಳಪತಿ ವಿಜಯ್ 603 ಕೋಟಿ ರೂಪಾಯಿ ಆಸ್ತಿ ವಿವರ ಬಹಿರಂಗ: ಪತ್ನಿ ಬಳಿ ಎಷ್ಟಿದೆ?

ತಮಿಳುನಾಡು ರಾಜಕೀಯದಲ್ಲಿ ಹೊಸ ಇತಿಹಾಸ ಬರೆಯಲು ಹೊರಟಿರುವ ತಮಿಳು ವೆಟ್ರಿ ಕಳಗಂ (TVK) ಪಕ್ಷದ ಸ್ಥಾಪಕ, ನಟ ದಳಪತಿ ವಿಜಯ್ (Thalapathy Vijay) ಅವರು ಸೋಮವಾರ (ಮಾರ್ಚ್ 30) ತಮ್ಮ ಮೊದಲ ಚುನಾವಣಾ ಅಫಿಡವಿಟ್ ಸಲ್ಲಿಸಿದ್ದಾರೆ. ಈ ಅಫಿಡವಿಟ್‌ನಲ್ಲಿ ಅವರು ಘೋಷಿಸಿಕೊಂಡಿರುವ ಆಸ್ತಿಯ ಮೊತ್ತ ಕೇಳಿ ಅಭಿಮಾನಿಗಳು ಹಾಗೂ ರಾಜಕೀಯ ವಲಯ ದಂಗಾಗಿದೆ. 52 ವರ್ಷ ವಯಸ್ಸಿನ ವಿಜಯ್ ಅವರು ಸುಮಾರು 603.20 ಕೋಟಿ ರೂಪಾಯಿ ಮೌಲ್ಯದ ಒಟ್ಟು ಆಸ್ತಿಯನ್ನು (Thalapathy Vijay Net Worth) ಹೊಂದಿರುವುದಾಗಿ ತಿಳಿಸಿದ್ದಾರೆ.

ವಿಜಯ್ ಅವರ ಒಟ್ಟು ಆಸ್ತಿಯಲ್ಲಿ 404.58 ಕೋಟಿ ರೂಪಾಯಿ ಮೊತ್ತದ ಚರಾಸ್ತಿ ಹಾಗೂ 198.62 ಕೋಟಿ ರೂಪಾಯಿ ಮೌಲ್ಯದ ಸ್ಥಿರಾಸ್ತಿ ಸೇರಿದೆ. ಕೊಡೈಕೆನಾಲ್‌ನಲ್ಲಿ ಕೃಷಿ ಭೂಮಿ, ಚೆನ್ನೈನ ವಿವಿಧೆಡೆ ವಾಣಿಜ್ಯ ಮಳಿಗೆಗಳು ಮತ್ತು ವಸತಿ ಕಟ್ಟಡಗಳನ್ನು ಅವರು ಹೊಂದಿದ್ದಾರೆ. ಇನ್ನು, ವಿಜಯ್ ಅವರ ಪತ್ನಿ ಸಂಗೀತಾ ಅವರ ಹೆಸರಿನಲ್ಲಿ 15.76 ಕೋಟಿ ರೂಪಾಯಿ ಮೌಲ್ಯದ ಆಸ್ತಿ ಇದೆ.

ವಿಜಯ್ ಅವರು ಐಷಾರಾಮಿ ಜೀವನಶೈಲಿಗೆ ಹೆಸರಾಗಿದ್ದು, ಅವರ ಬಳಿ ಬಿಎಂಡಬ್ಲ್ಯು 530, ಟೊಯೋಟಾ ಲೆಕ್ಸಸ್, ಟೊಯೋಟಾ ವೆಲ್‌ಫೈರ್ ಮತ್ತು ಬಿಎಂಡಬ್ಲ್ಯು ಐ7 ಮುಂತಾದ ಕೋಟ್ಯಂತರ ರೂಪಾಯಿ ಬೆಲೆಬಾಳುವ ಕಾರುಗಳಿವೆ. ಅವರ ಕೈಯಲ್ಲಿ 2 ಲಕ್ಷ ರೂ. ನಗದು ಹಾಗೂ ವಿವಿಧ ಬ್ಯಾಂಕ್‌ ಖಾತೆಗಳಲ್ಲಿ 213 ಕೋಟಿ ರೂಪಾಯಿಗೂ ಅಧಿಕ ಠೇವಣಿ ಇದೆ. 883 ಗ್ರಾಂ ಚಿನ್ನ ಮತ್ತು 15 ಲಕ್ಷ ಮೌಲ್ಯದ ಬೆಳ್ಳಿ ಆಭರಣಗಳನ್ನು ಅವರು ಘೋಷಿಸಿದ್ದಾರೆ.

ವಿಜಯ್ ಅವರ ಅಫಿಡವಿಟ್‌ನಲ್ಲಿ ಗಮನ ಸೆಳೆದ ಪ್ರಮುಖ ಅಂಶವೆಂದರೆ ಅವರ ಸಾಲದ ವಿವರ. ಇಷ್ಟೊಂದು ದೊಡ್ಡ ಮೊತ್ತದ ಆಸ್ತಿ ಹೊಂದಿದ್ದರೂ ಬ್ಯಾಂಕ್ ಅಥವಾ ಯಾವುದೇ ಹಣಕಾಸು ಸಂಸ್ಥೆಗಳಿಗೆ ಅವರು ಒಂದು ರೂಪಾಯಿ ಕೂಡ ಸಾಲ ಬಾಕಿ ಉಳಿಸಿಕೊಂಡಿಲ್ಲ. 2024-25ರ ಆರ್ಥಿಕ ವರ್ಷದಲ್ಲಿ ಅವರು 184.53 ಕೋಟಿ ರೂಪಾಯಿ ಆದಾಯವನ್ನು ಐಟಿ ರಿಟರ್ನ್ಸ್‌ನಲ್ಲಿ ತೋರಿಸಿದ್ದಾರೆ.

ಇದನ್ನೂ ಓದಿ: ಇಫ್ತಾರ್​​ಕೂಟದಲ್ಲಿ ಭಾಗಿ ಆದ ದಳಪತಿ ವಿಜಯ್; ವಿವಾದದಿಂದ ತಪ್ಪಿಸಿಕೊಳ್ಳಲು ಹೊಸ ಐಡಿಯಾ

ವಿಜಯ್ ಅವರು 1992ರಲ್ಲಿ ಚೆನ್ನೈನ ಲೊಯೊಲಾ ಕಾಲೇಜಿನಲ್ಲಿ ಬಿಎಸ್‌ಸಿ ಪದವಿಯನ್ನು ಅರ್ಧಕ್ಕೆ ನಿಲ್ಲಿಸಿದ್ದಾರೆ. 1989 ಮತ್ತು 1991ರಲ್ಲಿ 10 ಮತ್ತು 12ನೇ ತರಗತಿಯನ್ನು ಖಾಸಗಿಯಾಗಿ ಪೂರೈಸಿದ್ದಾರೆ. ಅವರ ಮೇಲೆ ಯಾವುದೇ ಕ್ರಿಮಿನಲ್ ಪ್ರಕರಣಗಳು ಬಾಕಿ ಇಲ್ಲ ಹಾಗೂ ಯಾವುದೇ ಪ್ರಕರಣದಲ್ಲಿ ಶಿಕ್ಷೆಯಾಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ತಮಿಳುನಾಡು ವಿಧಾನಸಭೆಗೆ ಏಪ್ರಿಲ್ 23ರಂದು ಚುನಾವಣೆ ನಡೆಯಲಿದೆ. ಮೇ 4ರಂದು ಫಲಿತಾಂಶ ಪ್ರಕಟವಾಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಹೊಸ ಚರ್ಚೆ ಹುಟ್ಟುಹಾಕಿದ KPS ಮ್ಯಾಗ್ನೆಟ್ ಶಾಲೆ ಯೋಜನೆ: ಆರಂಭಕ್ಕೂ ಮುನ್ನವೇ ಅಪಸ್ವರ ಏಕೆ?

ತುಮಕೂರು, ಮಾರ್ಚ್​ 30: ಅದೊಂದು ಕಾಲವಿತ್ತು. ಶಾಲೆ ಎಂದರೇ ಸಾಕು ಮಕ್ಕಳು ಕಿ.ಮೀಗಳಷ್ಟು ದೂರ ಹೆಜ್ಜೆ ಹಾಕಬೇಕಿತ್ತು. ಊರಿಂದೂರಿಗೆ ಬಂದು ಪಾಠ ಕೇಳಬೇಕಿತ್ತು. ನಂತರದಲ್ಲಿ ನಮ್ಮೂರ ಶಾಲೆ ಎಂಬಂತೆ ಹಳ್ಳಿಹಳ್ಳಿಯಲ್ಲೂ ಸರ್ಕಾರಿ ಶಾಲೆ ತೆರೆಯಲಾಗಿತ್ತು. ಮಕ್ಕಳು ಖುಷಿಯಾಗಿ ಪಾಠ ಕೇಳುತಿದ್ದರು. ಆದ್ರೀಗ ಸರ್ಕಾರದ ಕೆಪಿಎಸ್ ಮ್ಯಾಗ್ನೆಟ್ ಶಾಲೆಯ (KPS Magnet Schools) ನೀತಿ ಆರಂಭಕ್ಕೂ ಮುನ್ನವೇ ಒಂದಷ್ಟು ಅಪಸ್ವರದ ಚರ್ಚೆ ಸೃಷ್ಟಿಸಿದೆ.

ವಿವಿಧೋದ್ದೇಶಿತ ಶಾಲಾ ನೀತಿಗೆ ವಿರೋಧ 

ಕೆಪಿಎಸ್ ಶಾಲೆ, ಕರ್ನಾಟಕ ಸಾರ್ವಜನಿಕ ಶಾಲೆಗಳ ಮ್ಯಾಗ್ನೆಟ್ ಯೋಜನೆ. ಇದು ರಾಜ್ಯದ ಸರ್ಕಾರಿ ಶಾಲೆಗಳ ಗುಣಮಟ್ಟ ಸುಧಾರಣೆ ಮತ್ತು ಏಕೀಕರಣಕ್ಕಾಗಿ ಹಮ್ಮಿಕೊಂಡಿರುವ ನೀತಿ. ಸುಮಾರು ಒಂದರಿಂದ ಐದು ಕಿ.ಮೀ ವ್ಯಾಪ್ತಿಯ ಸಣ್ಣ ಶಾಲೆಗಳನ್ನು ವಿಲೀನಗೊಳಿಸಿ, ಸುಮಾರು 1,200ಕ್ಕೂ ಹೆಚ್ಚು ವಿದ್ಯಾರ್ಥಿಗಳ ಸಾಮರ್ಥ್ಯದ ಆಧುನಿಕ ಸೌಲಭ್ಯಗಳಿರುವ ಶಾಲೆಗಳನ್ನು ನಿರ್ಮಿಸುವ ಗುರಿಯಾಗಿದೆ. ಆ ಮೂಲಕ ಪೂರ್ವ ಹಾಗೂ ಪ್ರಾಥಮಿಕದಿಂದ ಪಿಯುಸಿವರೆಗೆ ಒಂದೇ ಸೂರಿನಡಿ ಶಿಕ್ಷಣ ಮತ್ತು ಆಧುನಿಕ ಮೂಲಸೌಕರ್ಯಗಳನ್ನು ಒದಗಿಸುವ ಉದ್ದೇಶ ಹೊಂದಿದೆ. ಈ ರೀತಿಯ ವಿವಿಧೋದ್ದೇಶಿತ ಶಾಲಾ ನೀತಿಗೆ ಈಗ ತುಮಕೂರಿನಲ್ಲಿ ವಿರೋಧ ವ್ಯಕ್ತವಾಗಿದೆ.

ಇದನ್ನೂ ಓದಿ: ವರ್ಷಗಳಿಂದ ಅಭಿವೃದ್ಧಿ ಕಾಣದೆ ಉಳಿದ ಬಾಲಕಿಯರ ವಸತಿ ನಿಲಯ; ಮೌಢ್ಯವನ್ನೇ ನೆಪ ಮಾಡಿಕೊಂಡಿತಾ ಸರ್ಕಾರ?

ತುಮಕೂರು ಜಿಲ್ಲೆಯಲ್ಲಿ ಕೆಪಿಎಸ್ ಮ್ಯಾಗ್ನೆಟ್ ಶಾಲೆಗಳ ನೀತಿಗೆ ದಿನದಿಂದದಿನಕ್ಕೆ ವಿರೋಧದ ಕೂಗು ಜೋರಾಗುತ್ತಿದೆ. ವಿಲೀನ ನೀತಿ ಪ್ರಕಾರವಾಗಿ ಹಳ್ಳಿಗಳ ಸರ್ಕಾರಿ ಶಾಲೆಗಳನ್ನು ಮುಚ್ಚುವ ಕ್ರಮದ ವಿರುದ್ಧ ಶಾಲಾ ಮಕ್ಕಳು, ಪೋಷಕರು ಬೀದಿಗಿಳಿದು ಹೋರಾಟ ನಡೆಸುತ್ತಿದ್ದಾರೆ. ತುಮಕೂರು ನಗರ, ಶಿರಾ, ಕೊರಟಗೆರೆ ಸೇರಿದಂತೆ ಹಲವು ತಾಲ್ಲೂಕಿನ ಭಾಗಗಳಲ್ಲಿ ಪ್ರತಿಭಟನೆ ತೀವ್ರಗೊಂಡಿದೆ. ಕಾರಣ, ಕೆಪಿಎಸ್ ಮ್ಯಾಗ್ನೆಟ್ ಶಾಲೆಗಳ ಹೆಸರಿನಲ್ಲಿ ನಮ್ಮೂರ ಸರ್ಕಾರಿ ಶಾಲೆಗಳಿಗೆ ಬೀಗ ಹಾಕುವ ಮುಖಾಂತರ ಮುಚ್ಚಲು ಮುಂದಾಗಿದ್ದಾರೆ ಎಂಬ ಆರೋಪ ಕೇಳಿಬರುತ್ತಿದೆ. ಈ ರೀತಿ ಜಿಲ್ಲೆಯಲ್ಲಿ ಒಟ್ಟು 1200 ಸರ್ಕಾರಿ ಶಾಲೆಗಳ ಮೇಲೆ ಪರಿಣಾಮ ಬೀಳುವ ಸಾಧ್ಯತೆ ಇದೆ ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸುತ್ತಿದ್ದಾರೆ.

ವಿದ್ಯಾರ್ಥಿಗಳು ಮತ್ತು ಪೋಷಕರ ಜೊತೆ ಪ್ರತಿಭಟನೆ

ಇನ್ನು ಈ ಹೋರಾಟಕ್ಕೆ ಎಐಡಿಎಸ್ಒ ಸಂಘಟನೆ ಜೊತೆಯಾಗಿದೆ. ಹಳ್ಳಿಹಳ್ಳಿಯ ಸಣ್ಣ ಸರ್ಕಾರಿ ಶಾಲೆಗಳ ಉಳಿವಿಗಾಗಿ ವಿದ್ಯಾರ್ಥಿಗಳು ಮತ್ತು ಪೋಷಕರ ಜೊತೆ ಪ್ರತಿಭಟನೆ ನಡೆಸುತ್ತಿದೆ. ಗ್ರಾಮಸ್ಥರು ನಮ್ಮ ಶಾಲೆ ಮುಚ್ಚಲು ಬಿಡುವುದಿಲ್ಲ ಎಂದು ಘೋಷಣೆ ಕೂಗುತ್ತಾ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಈ ಕೂಗು ಹಂತ ಹಂತವಾಗಿ ಜಿಲ್ಲೆಯಾದ್ಯಂತ ವಿರೋಧದ ಅಲೆ ಹೆಚ್ಚಾಗುತ್ತಿದ್ದು, ಸರ್ಕಾರದ ನಿರ್ಧಾರ ಹಿಂಪಡೆಯುವಂತೆ ಆಗ್ರಹ ಹೆಚ್ಚಾಗಿದೆ.

ಇದನ್ನೂ ಓದಿ: ಚಲಿಸುವ ಬಸ್ ಕಿಟಕಿಯಲ್ಲಿ ಬ್ಯಾಗ್ ಇಡಲು ಹೋಗಿ ಚಕ್ರಕ್ಕೆ ಸಿಲುಕಿದ ವಿದ್ಯಾರ್ಥಿನಿ ಕಾಲು: ಸೆರೆಯಾಯ್ತು ಭೀಕರ ದೃಶ್ಯ

ಸದ್ಯ ದಿನದಿಂದ ದಿನಕ್ಕೆ ಕೆಪಿಎಸ್ ಮ್ಯಾಗ್ನೆಟ್ ಶಾಲಾ ನೀತಿಗೆ ತುಮಕೂರಿನಲ್ಲಿ ವಿರೋಧ ಹೆಚ್ಚಾಗುತ್ತಿದೆ. ಸರ್ಕಾರ ಈ ಚಿಂತನೆ ನಿಲ್ಲಿಸುವಂತೆ ಒತ್ತಾಯ ಕೇಳಿಬರುತ್ತಿದೆ. ಸದ್ಯ ಈ ಬೆಳವಣಿಗೆ ಮುಂದಿನ ದಿನಗಳಲ್ಲಿ ಇನ್ನಷ್ಟು ತೀವ್ರ ಸ್ವರೂಪ ಪಡೆಯುವ ಸಾಧ್ಯತೆಯಿದ್ದು, ಸರ್ಕಾರ ಈ ವಿಚಾರವಾಗಿ ಯಾವ ನಿರ್ಧಾರ ಕೈಗೊಳ್ಳಲಿದೆ ಎನ್ನುವುದನ್ನು ಕಾದುನೋಡಬೇಕಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಗಲ್ಫ್ ಬಿಕ್ಕಟ್ಟಿನಲ್ಲೂ ರಸಗೊಬ್ಬರ ಪೂರೈಕೆಯಲ್ಲಿ ವ್ಯತ್ಯಯ ಆಗಲು ಬಿಡುತ್ತಿಲ್ಲ: ಸರ್ಕಾರದಿಂದ ಸ್ಪಷ್ಟನೆ

ನವದೆಹಲಿ, ಮಾರ್ಚ್ 30: ಇರಾನ್ ಯುದ್ಧ ನಿಲ್ಲದ ಹಿನ್ನೆಲೆಯಲ್ಲಿ ರಸಗೊಬ್ಬರ, ಎಲ್​ಪಿಜಿ, ಪೆಟ್ರೋಲ್, ಡೀಸಲ್, ಗ್ಯಾಸ್ ಪೂರೈಕೆ ಬಗ್ಗೆ ಜನರ ಆತಂಕ ಮುಂದುವರಿದಿದೆ. ಸರ್ಕಾರ ದಿನವೂ ಜನರಿಗೆ ಈ ಅಗತ್ಯ ವಸ್ತುಗಳ ಪೂರೈಕೆ ಸ್ಥಿತಿ ಬಗ್ಗೆ ಮಾಹಿತಿ ಒದಗಿಸುತ್ತಿದೆ. ಪೆಟ್ರೋಲಿಯಂ, ನೈಸರ್ಗಿಕ ಅನಿಲ, ಬಂದರು, ಹಡಗು, ಜಲಮಾರ್ಗ ಇತ್ಯಾದಿ ಸಚಿವಾಲಯದ ಅಧಿಕಾರಿಗಳು ಇಂದು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಯೂರಿಯಾ ಸಂಗ್ರಹ ಸಾಕಷ್ಟಿದೆ. ಬೇರೆ ಬೇರೆ ಮೂಲಗಳಿಂದ ರಸಗೊಬ್ಬರ ಪೂರೈಕೆಗೆ (Urea supply) ಪ್ರಯತ್ನಿಸಲಾಗುತ್ತಿದೆ ಎಂದು ಸರ್ಕಾರ ಹೇಳಿದೆ.

ರಸಗೊಬ್ಬರ ಪೂರೈಕೆ ನಿಲ್ಲದಂತೆ ಸರ್ಕಾರದ ಅತೀವ ಯತ್ನ

ಭಾರತದ ಪೆಟ್ರೋಲ್, ಡೀಸಲ್ ಮತ್ತು ಗ್ಯಾಸ್ ಅವಶ್ಯಕತೆಗೆ ಆಮದು ಮೇಲೆ ಹೆಚ್ಚಿನ ಅವಲಂಬನೆ ಇದೆ. ಹಾಗೆಯೇ, ರಸಗೊಬ್ಬರಕ್ಕೂ ಭಾರತ ಆಮದು ಮೇಲೆ ಅವಲಂಬಿತವಾಗಿದೆ. ಹೆಚ್ಚಿನ ರಸಗೊಬ್ಬರ ಆಮದು ಗಲ್ಫ್​ನಿಂದ ಮಾಡಲಾಗುತ್ತಿದೆ. ಪೆಟ್ರೋಲಿಯಂ ಸಚಿವಾಲಯ ನೀಡಿರುವ ಮಾಹಿತಿ ಪ್ರಕಾರ ಶೇ. 20-30ರಷ್ಟು ಯೂರಿಯ, ಶೇ. 30ರಷ್ಟು ಡಿಎಪಿಯನ್ನು ಗಲ್ಫ್​ನಿಂದ ಆಮದು ಮಾಡಿಕೊಳ್ಳಲಾಗುತ್ತಿದೆ. ಭಾರತದಲ್ಲಿ ಯೂರಿಯಾ ಉತ್ಪಾದನೆಗೆ ಬೇಕಾದ ಎಲ್​ಎನ್​ಜಿ ಗಲ್ಫ್​ನಿಂದ ಶೇ. 50ರಷ್ಟು ಪೂರೈಕೆಯಾಗುತ್ತಿದೆ. ರಸಗೊಬ್ಬರ ತಯಾರಿಕೆಗೆ ಅಗತ್ಯವಾಗಿರುವ ಕಚ್ಛಾ ಸಾಮಗ್ರಿಗಳಾದ ಅಮ್ಮೋನಿಯಾ, ಸಲ್ಫರ್ ಇತ್ಯಾದಿಯೂ ಕೂಡ ಆಮದು ಮೇಲೆ ಅವಲಂಬಿತವಾಗಿರುವಂಥವೇ. ಇದರಿಂದ ದೇಶದೊಳಗಿನ ಯೂರಿಯಾ ಉತ್ಪಾದನೆ ಮೇಲೆ ಪರಿಣಾಮ ಬೀರಿದೆ ಎಂದು ಸರ್ಕಾರ ಹೇಳಿದೆ.

ಇದನ್ನೂ ಓದಿ: ಬೇಗ ಡೀಲ್ ಆಗದಿದ್ದರೆ ಇರಾನ್​ನ ಇಂಧನ ಘಟಕಗಳು, ಖರ್ಗ್ ದ್ವೀಪವನ್ನು ಉಡಾಯಿಸುತ್ತೇವೆ: ಡೊನಾಲ್ಡ್ ಟ್ರಂಪ್ ಕಟ್ಟೆಚ್ಚರಿಕೆ

ಸದ್ಯ ರಸಗೊಬ್ಬರ ದಾಸ್ತಾನು ಸಾಕಷ್ಟಿದೆ. ಕಳೆದ ವರ್ಷ ಈ ಅವಧಿಯಲ್ಲಿ 147 ಲಕ್ಷ ಟನ್ ಯೂರಿಯಾ ಇತ್ತು. ಈಗ ಅದು 180 ಲಕ್ಷ ಟನ್​ಗಳಷ್ಟಿದೆ. ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಬೇಸಾಯ ಹೆಚ್ಚು ಇರುವುದಿಲ್ಲ. ಹೀಗಾಗಿ, ಮುಂಗಾರು ಬೆಳೆ ಸೀಸನ್​ಗೆ ಯೂರಿಯಾ ದಾಸ್ತಾನು ಮಾಡಲು ಅವಕಾಶ ಇದೆ ಎಂದು ಸರ್ಕಾರ ತಿಳಿಸಿದೆ.

ಯೂರಿಯಾ ಉತ್ಪಾದನೆ ಹೆಚ್ಚಿಸಲು ಸರ್ಕಾರ ಕ್ರಮ ಕೈಗೊಂಡಿದೆ. ಯೂರಿಯಾ ಘಟಕಗಳಿಗೆ ಎಲ್​ಎನ್​ಜಿ ಪೂರೈಕೆಯನ್ನು ಹೆಚ್ಚಿಸಲಾಗಿದೆ. ಇದರಿಂದ ಯೂರಿಯಾ ಉತ್ಪಾದನೆ ದಿನಕ್ಕೆ 12,000-15,000 ಟನ್​ಗಳಷ್ಟು ಹೆಚ್ಚಿಗೆ ಆಗಿದೆ ಎಂದು ಪೆಟ್ರೋಲಿಯಂ ಸಚಿವಾಲಯದ ಅಧಿಕಾರಿಗಳು ಹೇಳಿದ್ದಾರೆ.

ಇದನ್ನೂ ಓದಿ: ಇರಾನ್​ನ ಖರ್ಗ್ ದ್ವೀಪದ ಮೇಲೆ ಟ್ರಂಪ್​ಗೆ ಕಣ್ಣು? ಅಂಥದ್ದೇನಿದೆ ಅಲ್ಲಿ?

ಜಾಗತಿಕವಾಗಿ ಯೂರಿಯಾ ಲಭ್ಯತೆ ಶೋಧಿಸಿ, ಗುರುತಿಸಲು ಟ್ಯಾಸ್ಕ್ ಗ್ರೂಪ್ ರಚಿಸಲಾಗುತ್ತಿದೆ. 13.07 ಲಕ್ಷ ಟನ್​ಗಳಷ್ಟು ಯೂರಿಯಾ ಖರೀದಿಗಾಗಿ ಜಾಗತಿಕ ಟೆಂಡರ್ ಕರೆಯಲಾಗಿದೆ. ರಷ್ಯಾ, ಸೌದಿ ಅರೇಬಿಯಾ, ಓಮನ್, ಮೊರಾಕ್ಕೋ, ಆಸ್ಟ್ರೇಲಿಯಾ, ಇಂಡೋನೇಷ್ಯಾ, ಮಲೇಷ್ಯಾ, ಜೋರ್ಡಾನ್, ಕೆನಡಾ, ಈಜಿಪ್ಟ್, ಆಲ್ಜೀರಿಯಾ, ಫಿನ್​ಲ್ಯಾಂಡ್, ಟೋಬೋ ಮೊದಲಾದ ದೇಶಗಳಿಂದ ಯೂರಿಯಾ ಪೂರೈಕೆಗೆ ಕ್ರಮ ಕೈಗೊಳ್ಳಲಾಗುತ್ತಿದೆ. ಜಾಗತಿಕವಾಗಿ ವಿವಿಧೆಡೆ 16 ಭಾರತೀಯ ಮಿಷನ್​ಗಳ ಮೂಲಕ ಪರ್ಯಾಯ ಪೂರೈಕೆ ಮೂಲಗಳನ್ನು ಅನ್ವೇಷಿಸಲಾಗುತ್ತಿದೆ ಎಂದು ಅಧಿಕಾರಿಗಳು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಡಿವೋರ್ಸ್ ಬಳಿಕ 9 ಕಿ.ಮೀ ದೀಡ ನಮಸ್ಕಾರ ಹಾಕಿ ದೇವರಿಗೆ ಥ್ಯಾಂಕ್ಸ್ ಹೇಳಿದ ಯುವಕ! ವಿಡಿಯೋ ವೈರಲ್‌

ಲಕ್ನೋ, (ಮಾರ್ಚ್ 30): ಸಾಮಾನ್ಯವಾಗಿ ದಾಂಪತ್ಯ ಜೀವನದಲ್ಲಿ ವಿಚ್ಛೇದನ (Divorce) ಸಂಭವಿಸಿದರೆ ಅದು ದುಃಖದ ಸಂಗತಿ ಎಂದು ಪರಿಗಣಿಸಲಾಗುತ್ತದೆ. ಆದ್ರೆ, ಇತ್ತೀಚಿನ ದಿನಗಳಲ್ಲಿ ಕೆಲವರು ‘ಡಿವೋರ್ಸ್ ಪಾರ್ಟಿ’ ನೀಡಿ ಸಂಭ್ರಮಿಸುವುದನ್ನೂ ನಾವು ನೋಡಿದ್ದೇವೆ. ಅದರಂತೆ ಉತ್ತರ ಪ್ರದೇಶದ (Uttara Pradesh) ಬಸ್ತಿ ಜಿಲ್ಲೆಯ 25 ವರ್ಷದ ಯುವಕನೋರ್ವ ತನಗೆ ಪತ್ನಿಯಿಂದ ​ಕೋರ್ಟಿನಲ್ಲಿ ವಿಚ್ಛೇದನ ಸಿಕ್ಕಿದ್ದಕ್ಕೆ ದೇವರಿಗೆ ಧನ್ಯವಾದ ಸಲ್ಲಿಸಲು ಬರೋಬ್ಬರಿ 9 ಕಿಲೋಮೀಟರ್‌ಗಳಷ್ಟು ದೂರ ದೀಡ ನಮಸ್ಕಾರ ಹಾಕುವ ಮೂಲಕ ವಿಶಿಷ್ಟವಾಗಿ ಹರಕೆ ತೀರಿಸಿದ್ದಾನೆ. ಈ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದೆ.

ಬಸ್ತಿ ಜಿಲ್ಲೆಯ ನರ್ಖೋರಿಯಾ ಗ್ರಾಮದ ಜೋಗೇಶ್ ಎಂಬ ಯುವಕ ಈ ವಿಚಿತ್ರ ಸಾಹಸ ಮಾಡಿದವರು. ನವರಾತ್ರಿಯ ಶುಭ ಸಂದರ್ಭದಲ್ಲಿ ಅವರು ತಮ್ಮ ಗ್ರಾಮದಿಂದ ಸ್ಥಳೀಯ ‘ಬೈದಾ ಸಮಯ ಮಾತಾ’ ದೇವಸ್ಥಾನದವರೆಗೆ ನೆಲದ ಮೇಲೆ ಮಲಗಿ ಸಾಷ್ಟಾಂಗ ನಮಸ್ಕಾರ ಮಾಡುತ್ತಾ ಸಾಗಿದ್ದಾರೆ. ಬೆಳಿಗ್ಗೆ ಆರಂಭವಾದ ಈ ಕಠಿಣ ಯಾತ್ರೆಯು ಸುಮಾರು 12 ಗಂಟೆಗಳ ಕಾಲ ನಡೆದಿದ್ದು, ಇಡೀ ಹಾದಿಯುದ್ದಕ್ಕೂ ಜೋಗೇಶ್ ಅವರು ಉಪವಾಸವಿದ್ದು ‘ಜೈ ಶ್ರೀರಾಮ್’ ಮತ್ತು ‘ಜೈ ಬಜರಂಗಬಲಿ’ ಎಂದು ಘೋಷಣೆ ಕೂಗುತ್ತಾ ದೇವಸ್ಥಾನ ತಲುಪಿದ್ದಾರೆ.

ಇದನ್ನೂ ನೋಡಿ: ಬಿರುಗಾಳಿಗೆ ಮಂಟಪವನ್ನೇ ಹಾರದಂತೆ ತಡೆದವನು, ಇನ್ನು ಪತ್ನಿ ಕೈ ಬಿಡುವನೇ!

ಪ್ರಕರಣದ ಹಿನ್ನೆಲೆ

ಜೋಗೇಶ್ ಅವರಿಗೆ 2022 ರಲ್ಲಿ ಮದುವೆಯಾಗಿತ್ತು. ಆದರೆ ಮದುವೆಯಾದ ಮೊದಲ ದಿನದಿಂದಲೇ ದಂಪತಿಗಳ ನಡುವೆ ತೀವ್ರ ಗಲಾಟೆಗಳು ಶುರುವಾಗಿದ್ದವು. ಇದರಿಂದ ದಾಂಪತ್ಯ ಜೀವನ ನರಕಸದೃಶವಾದಾಗ ಜೋಗೇಶ್ ನ್ಯಾಯಾಲಯದ ಮೊರೆ ಹೋಗಿದ್ದರು. ಅಲ್ಲದೇ ನನಗೆ ಈ ಕಿರಿಕಿರಿ ತುಂಬಿದ ದಾಂಪತ್ಯದಿಂದ ಮುಕ್ತಿ ಸಿಕ್ಕರೆ ದೇವಸ್ಥಾನಕ್ಕೆ ದೀಡ‌ ನಮಸ್ಕಾರ ಮಾಡುತ್ತೇನೆ” ಎಂದು ಅವರು ದೇವರಿಗೆ ಹರಕೆ ಹೊತ್ತಿದ್ದರು. 2026 ಜನವರಿಯಲ್ಲಿ ವಿಚ್ಛೇದನ ಪ್ರಕ್ರಿಯೆ ಕಾನೂನುಬದ್ಧವಾಗಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ಜೋಗೇಶ್ ತಮ್ಮ ಹರಕೆಯನ್ನು ತೀರಿಸಿದ್ದಾರೆ.

ಈ ಯಾತ್ರೆಗಾಗಿ ಜೋಗೇಶ್ ಮುಂಚಿತವಾಗಿಯೇ ಉಪವಿಭಾಗಾಧಿಕಾರಿಗಳಿಂದ (SDM) ಅನುಮತಿ ಪಡೆದಿದ್ದರು. ಯಾತ್ರೆಯ ಸಮಯದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮತ್ತು ಸಂಚಾರಕ್ಕೆ ಅಡ್ಡಿಯಾಗದಂತೆ ಪೊಲೀಸರು ಭದ್ರತೆ ನೀಡಿದ್ದರು. ಜೋಗೇಶ್ ಅವರ ಪೋಷಕರು ಮತ್ತು ಕುಟುಂಬದ ಸದಸ್ಯರು ಕೂಡ ಅವರ ಜೊತೆಗಿದ್ದರು. ದೇವಸ್ಥಾನ ತಲುಪಿದ ನಂತರ ಅವರು ತೆಂಗಿನಕಾಯಿ ಒಡೆದು ವಿಶೇಷ ಪೂಜೆ ಸಲ್ಲಿಸಿ ತಮ್ಮ ಉಪವಾಸವನ್ನು ಅಂತ್ಯಗೊಳಿಸಿದರು.

ಇನ್ನಷ್ಟು ವೈರಲ್ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಸ್ನೇಹಿತರನ್ನು ಮೀಟ್ ಮಾಡಲು ಬಂದಿದ್ದ ವಿದ್ಯಾರ್ಥಿ ದುರಂತ ಅಂತ್ಯ: 12ನೇ ಮಹಡಿಯಿಂದ ಬಿದ್ದು ಸಾವು

ಮಂಗಳೂರು, ಮಾರ್ಚ್​ 30: 12ನೇ ಮಹಡಿಯಿಂದ ಬಿದ್ದು ಮೆಡಿಕಲ್ ವಿದ್ಯಾರ್ಥಿ ಸಾವನ್ನಪ್ಪಿರುವಂತಹ (death) ಘಟನೆ ಮಂಗಳೂರಿನ ಕ್ಯಾಸಾಗ್ರಾಂಡ್​ ಅಪಾರ್ಟ್​ಮೆಂಟ್​ನಲ್ಲಿ ನಡೆದಿದೆ. ಸ್ನೇಹಿತರನ್ನು ಮೀಟ್ ಮಾಡಲು ಪರಿಚಯಸ್ಥರ ಫ್ಲಾಟ್​ಗೆ ಬಂದಿದ್ದ ವೇಳೆ ಅಲ್ಲಿಂದ ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ವಿದ್ಯಾರ್ಥಿಯ ಹೆಸರು ಮತ್ತು ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಸದ್ಯ ಆತ್ಮಹತ್ಯೆ ಶಂಕೆ ವ್ಯಕ್ತವಾಗಿದ್ದು, ಘಟನಾ ಸ್ಥಳಕ್ಕೆ ಪಾಂಡೇಶ್ವರ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಮನೆ ಹೊಸ್ತಿಲಿನಲ್ಲಿ ಪೂಜೆಗಿಟ್ಟಿದ್ದ ದಾಸವಾಳ ಹೂವು ನುಂಗಿ ಮಗು ಸಾವು

ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ದೊಡ್ಡ ಹೆಜ್ಜೂರು ಗ್ರಾಮದಲ್ಲಿ ಮನಕಲಕುವ ಘಟನೆಯೊಂದು ನಡೆದಿದೆ. ಮನೆ ಹೊಸ್ತಿಲಿನಲ್ಲಿ ಪೂಜೆಗೆ ಇಟ್ಟಿದ್ದ ದಾಸವಾಳ ಹೂವು ನುಂಗಿದ್ದ ಮಗು ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ ನಡೆದಿದೆ.

ಇದನ್ನೂ ಓದಿ: ಹಸುಗೂಸಿಗೆ ಹಾಲುಣಿಸಿದ ಕೆಲವೇ ಕ್ಷಣದಲ್ಲಿ ತಾಯಿ ಸಾವು: ಮಹಿಳಾ ಉದ್ಯೋಗಿ ಸಾವಿನ ಸುತ್ತ ಅನುಮಾನದ ಹುತ್ತ

ಸುದರ್ಶನ್, ನವ್ಯಾ ದಂಪತಿಯ ಎರಡನೇ ಪುತ್ರ ಆರೂವರೆ ತಿಂಗಳ ಚಿನ್ಮಯಿಗೌಡ ಮೃತ ಮಗು. ಮನೆ ಹೊಸ್ತಿಲಿನಲ್ಲಿ ಪೂಜೆಗೆ ದಾಸವಾಳ ಹೂವು ಇಟ್ಟಿದ್ದರು. ಒಣಗಿದ ಹೂವನ್ನು ನುಂಗಿ ಚಿನ್ಮಯಿಗೌಡ ಅಸ್ವಸ್ಥಗೊಂಡಿದ್ದ. ಚಿಕಿತ್ಸೆಗಾಗಿ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಚಿನ್ಮಯಿಗೌಡ ಮೃತಪಟ್ಟಿದ್ದಾನೆ.

ರಥೋತ್ಸವ ನೋಡಲು ಬಂದಿದ್ದ ವ್ಯಕ್ತಿ ಹೃದಯಾಘಾತದಿಂದ ಸಾವು

ಮತ್ತೊಂದು ಪ್ರಕರಣದಲ್ಲಿ ಮೈಸೂರು ಜಿಲ್ಲೆಯ ನಂಜನಗೂಡು ರಥೋತ್ಸವ ನೋಡಲು ಬಂದಿದ್ದ ಮಾಗಡಿ ಮೂಲದ ನಂಜುಂಡಸ್ವಾಮಿ(56) ಹೃದಯಾಘಾತದಿಂದ ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ರಥೋತ್ಸವ ನೋಡಲು ಬಂದಿದ್ದ ನಂಜುಂಡಸ್ವಾಮಿಗೆ ಹೃದಯಾಘಾತ ಸಂಭವಿಸಿದ್ದು, ತಕ್ಷಣ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ಆದರೆ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ.

ಆಟವಾಡುವಾಗ ಆಯತಪ್ಪಿ ಕೃಷಿ ಹೊಂಡಕ್ಕೆ ಬಿದ್ದು ಬಾಲಕಿ ಸಾವು

ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಚನ್ನಗಾನಹಳ್ಳಿ ಬಳಿ ಕೃಷಿ ಹೊಂಡಕ್ಕೆ ಬಿದ್ದು ಬಾಲಕಿ ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಆಟವಾಡುವಾಗ ಆಯತಪ್ಪಿ ಬಿದ್ದು ಕೀರ್ತನಾ(10) ಸಾವನ್ನಪ್ಪಿದ್ದಾಳೆ. ನಾಯಕನಹಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಸ್ನೇಹಿತರನ್ನು ಮೀಟ್ ಮಾಡಲು ಬಂದಿದ್ದ ವಿದ್ಯಾರ್ಥಿ ದುರಂತ ಅಂತ್ಯ: 12ನೇ ಮಹಡಿಯಿಂದ ಬಿದ್ದು ಸಾವು

ಮಂಗಳೂರು, ಮಾರ್ಚ್​ 30: 12ನೇ ಮಹಡಿಯಿಂದ ಬಿದ್ದು ಮೆಡಿಕಲ್ ವಿದ್ಯಾರ್ಥಿ ಸಾವನ್ನಪ್ಪಿರುವಂತಹ (death) ಘಟನೆ ಮಂಗಳೂರಿನ ಕ್ಯಾಸಾಗ್ರಾಂಡ್​ ಅಪಾರ್ಟ್​ಮೆಂಟ್​ನಲ್ಲಿ ನಡೆದಿದೆ. ಸ್ನೇಹಿತರನ್ನು ಮೀಟ್ ಮಾಡಲು ಪರಿಚಯಸ್ಥರ ಫ್ಲಾಟ್​ಗೆ ಬಂದಿದ್ದ ವೇಳೆ ಅಲ್ಲಿಂದ ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ವಿದ್ಯಾರ್ಥಿಯ ಹೆಸರು ಮತ್ತು ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಸದ್ಯ ಆತ್ಮಹತ್ಯೆ ಶಂಕೆ ವ್ಯಕ್ತವಾಗಿದ್ದು, ಘಟನಾ ಸ್ಥಳಕ್ಕೆ ಪಾಂಡೇಶ್ವರ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಮನೆ ಹೊಸ್ತಿಲಿನಲ್ಲಿ ಪೂಜೆಗಿಟ್ಟಿದ್ದ ದಾಸವಾಳ ಹೂವು ನುಂಗಿ ಮಗು ಸಾವು

ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ದೊಡ್ಡ ಹೆಜ್ಜೂರು ಗ್ರಾಮದಲ್ಲಿ ಮನಕಲಕುವ ಘಟನೆಯೊಂದು ನಡೆದಿದೆ. ಮನೆ ಹೊಸ್ತಿಲಿನಲ್ಲಿ ಪೂಜೆಗೆ ಇಟ್ಟಿದ್ದ ದಾಸವಾಳ ಹೂವು ನುಂಗಿದ್ದ ಮಗು ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ ನಡೆದಿದೆ.

ಇದನ್ನೂ ಓದಿ: ಹಸುಗೂಸಿಗೆ ಹಾಲುಣಿಸಿದ ಕೆಲವೇ ಕ್ಷಣದಲ್ಲಿ ತಾಯಿ ಸಾವು: ಮಹಿಳಾ ಉದ್ಯೋಗಿ ಸಾವಿನ ಸುತ್ತ ಅನುಮಾನದ ಹುತ್ತ

ಸುದರ್ಶನ್, ನವ್ಯಾ ದಂಪತಿಯ ಎರಡನೇ ಪುತ್ರ ಆರೂವರೆ ತಿಂಗಳ ಚಿನ್ಮಯಿಗೌಡ ಮೃತ ಮಗು. ಮನೆ ಹೊಸ್ತಿಲಿನಲ್ಲಿ ಪೂಜೆಗೆ ದಾಸವಾಳ ಹೂವು ಇಟ್ಟಿದ್ದರು. ಒಣಗಿದ ಹೂವನ್ನು ನುಂಗಿ ಚಿನ್ಮಯಿಗೌಡ ಅಸ್ವಸ್ಥಗೊಂಡಿದ್ದ. ಚಿಕಿತ್ಸೆಗಾಗಿ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಚಿನ್ಮಯಿಗೌಡ ಮೃತಪಟ್ಟಿದ್ದಾನೆ.

ರಥೋತ್ಸವ ನೋಡಲು ಬಂದಿದ್ದ ವ್ಯಕ್ತಿ ಹೃದಯಾಘಾತದಿಂದ ಸಾವು

ಮತ್ತೊಂದು ಪ್ರಕರಣದಲ್ಲಿ ಮೈಸೂರು ಜಿಲ್ಲೆಯ ನಂಜನಗೂಡು ರಥೋತ್ಸವ ನೋಡಲು ಬಂದಿದ್ದ ಮಾಗಡಿ ಮೂಲದ ನಂಜುಂಡಸ್ವಾಮಿ(56) ಹೃದಯಾಘಾತದಿಂದ ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ರಥೋತ್ಸವ ನೋಡಲು ಬಂದಿದ್ದ ನಂಜುಂಡಸ್ವಾಮಿಗೆ ಹೃದಯಾಘಾತ ಸಂಭವಿಸಿದ್ದು, ತಕ್ಷಣ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ಆದರೆ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ.

ಆಟವಾಡುವಾಗ ಆಯತಪ್ಪಿ ಕೃಷಿ ಹೊಂಡಕ್ಕೆ ಬಿದ್ದು ಬಾಲಕಿ ಸಾವು

ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಚನ್ನಗಾನಹಳ್ಳಿ ಬಳಿ ಕೃಷಿ ಹೊಂಡಕ್ಕೆ ಬಿದ್ದು ಬಾಲಕಿ ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಆಟವಾಡುವಾಗ ಆಯತಪ್ಪಿ ಬಿದ್ದು ಕೀರ್ತನಾ(10) ಸಾವನ್ನಪ್ಪಿದ್ದಾಳೆ. ನಾಯಕನಹಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

BJP ರೋಡ್ ಶೋಗೆ ಕಾಂಗ್ರೆಸ್ ಧ್ವಜ ಹಿಡಿದು ‘ಕೈ’ ಕಾರ್ಯಕರ್ತರ ಎಂಟ್ರಿ: ಫುಲ್​​ ಹೈಡ್ರಾಮಾ

ಬಾಗಲಕೋಟೆ, ಮಾರ್ಚ್​​ 30: ಉಪಚುನಾವಣೆ ಹಿನ್ನೆಲೆ ಬಿಜೆಪಿ ರೋಡ್ ಶೋ ನಡೆಯುತ್ತಿದ್ದ ವೇಳೆ ಕಾಂಗ್ರೆಸ್ ಧ್ವಜ ಹಿಡಿದು ‘ಕೈ’ ಕಾರ್ಯಕರ್ತರು ಎಂಟ್ರಿಕೊಟ್ಟ ಪರಿಣಾಮ ಕಾರ್ಯಕರ್ತರ ಮಧ್ಯೆ ನೂಕಾಟ-ತಳ್ಳಾಟ ನಡೆದಿರುವ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ. ಬಿಜೆಪಿ ಕಾರ್ಯಕರ್ತ ಮಧ್ಯೆ ಬೈಕ್ ತೆಗೆದುಕೊಂಡು ಹೋಗಲು ಕಾಂಗ್ರೆಸ್ ಕಾರ್ಯಕರ್ತ ಯತ್ನಿಸಿದ್ದು, ಈ ವೇಳೆ ಗದ್ದಲ ಆರಂಭವಾಗಿದೆ. ಕಾಂಗ್ರೆಸ್​​ ಕಾರ್ಯಕರ್ತನನ್ನು ಪೊಲೀಸರು ಎಳೆದು ತಂದಿದ್ದು, ಈ ವೇಳೆ ಅದೇ ಪಕ್ಷದ ಕಾರ್ಯಕರ್ತರು ಕಿರುಚಾಡಿದ್ದಾರೆ. ಈ ವೇಳೆ ಕೆಲ ಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿದ್ದು, ಅಂತಿಮವಾಗಿ ಕಾಂಗ್ರೆಸ್​​ ಕಾರ್ಯಕರ್ತನನ್ನು ಪೊಲೀಸರು ಸ್ಥಳದಿಂದ ಕಳುಹಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

ಗೃಹ ಸಚಿವ ಪರಮೇಶ್ವರ ಆಪ್ತನ ಹತ್ಯೆ ಹತ್ನ: ಚಾಕುವಿನಿಂದ ಚುಚ್ಚುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಕಾರವಾರ, (ಮಾರ್ಚ್ 30): ಗೃಹ ಸಚಿವ ಡಾ. ಜಿ. ಪರಮೇಶ್ವರ ಅವರ ಆಪ್ತರಾಗಿರುವ ಕೆಪಿಸಿಸಿ ಮಾಜಿ ಪ್ರಧಾನ ಕಾರ್ಯದರ್ಶಿ ಗೋಪಾಲಕೃಷ್ಣ ನಾಯಕ್ ಅವರ ಮೇಲೆ ಅಂಕೋಲಾದಲ್ಲಿ ನಡೆದ ಹತ್ಯೆ  ಯತ್ನ ಪ್ರಕರಣ (Gopalkrishna Nayak Murder Attempt) ಜಿಲ್ಲೆಯಲ್ಲಿ ಭೀತಿಯ ವಾತಾವರಣ ಸೃಷ್ಟಿಸಿದೆ. ಮಾರ್ಚ್ 25ರಂದು ಹಾಡಹಗಲೇ ನಡೆದ ಈ ದಾಳಿ ರಾಜಕೀಯ ವಲಯದಲ್ಲೂ ಭಾರೀ ಚರ್ಚೆಗೆ ಗ್ರಾಸವಾಗಿದೆ. ಇನ್ನು ಘಟನೆಯ‌ ಇನ್ನೊಂದು ಸಿಸಿಟಿವಿ ವಿಡಿಯೋ ವೈರಲ್ ಆಗಿದ್ದು, ಆರೋಪಿಗಳು ಗೋಪಾಲ ಕೃಷ್ಣ ನಾಯಕ್ ಅವರ ತಲೆಗೆ ಹಲವು ಬಾರಿ ಚಾಕುವಿನಿಂದ ಚುಚ್ಚುವ ದೃಶ್ಯ ಸೆರೆಯಾಗಿದೆ. ಘಟನೆ ಸಂಬಂಧ ಸದ್ಯ ಗೋವಾ ಮೂಲದ ಏಳಕ್ಕೂ ಹೆಚ್ಚು ಆರೋಪಿ ಬಂದಿಸಿರುವ ಪೊಲೀಸರು, ಸುಪಾರಿ ಕೊಟ್ಟ ಆರೋಪಿಗೆ ಬಲೆ ಬೀಸಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್ ಮುಖಂಡನ ಕೊಲೆ ಯತ್ನ: ಚಾಕು ಇರಿದು ದುಷ್ಕರ್ಮಿಗಳು ಪರಾರಿ

Source link