ಐಪಿಎಲ್ 2026 ರ 47 ನೇ ಪಂದ್ಯ ಮುಂಬೈ ಇಂಡಿಯನ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ನಡುವೆ ನಡೆಯುತ್ತಿದೆ. ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಈ ಪಂದ್ಯ ಮುಂಬೈಗೆ 10 ನೇ ಪಂದ್ಯವಾಗಿದ್ದರೆ, ಲಕ್ನೋಗೆ ಒಂಬತ್ತನೇ ಪಂದ್ಯವಾಗಿದೆ. ಎರಡೂ ತಂಡಗಳು ಈ ಆವೃತ್ತಿಯಲ್ಲಿ ಅತ್ಯಂತ ನಿರಾಶಾದಾಯಕ ಪ್ರದರ್ಶನ ನೀಡಿವೆ. ಮುಂಬೈ 9 ಪಂದ್ಯಗಳಲ್ಲಿ 7 ರಲ್ಲಿ ಸೋತಿದ್ದರೆ, ಲಕ್ನೋ ಕೂಡ ಇದೇ ರೀತಿಯ ಪರಿಸ್ಥಿತಿಯಲ್ಲಿದೆ.
ಕೊಲ್ಕತ್ತಾ, ಮೇ 4: ಪಶ್ಚಿಮ ಬಂಗಾಳದಲ್ಲಿ (West Bengal Assembly Elections) ಬಿಜೆಪಿ ಜಯಭೇರಿ ಬಾರಿಸಿದೆ. ಪ್ರಧಾನಿ ಮೋದಿಯವರ (PM Modi) ಗ್ಯಾರಂಟಿ ಮತ್ತು ಅಮಿತ್ ಶಾ (Amit Shah) ಅವರ ಚುನಾವಣಾ ತಂತ್ರದಿಂದಾಗಿ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಐತಿಹಾಸಿಕ ಗೆಲುವು ಸಾಧಿಸಿದೆ. ಪಕ್ಷವು ಮಮತಾ ಬ್ಯಾನರ್ಜಿಯವರ 15 ವರ್ಷಗಳ ಆಡಳಿತವನ್ನು ಉರುಳಿಸಿ ರಾಜ್ಯದಲ್ಲಿ ತನ್ನ ಮೊದಲ ಸರ್ಕಾರವನ್ನು ಸ್ಥಾಪಿಸಿದೆ. ಸಾರ್ವಜನಿಕ ಕಲ್ಯಾಣ ಯೋಜನೆಗಳು, ಒಳನುಸುಳುವಿಕೆ ವಿರೋಧಿ ನಿಲುವು ಮತ್ತು ಬಲವಾದ ಬೂತ್ ನಿರ್ವಹಣೆಯು ಮತದಾರರ ವಿಶ್ವಾಸವನ್ನು ಗಳಿಸಿತು. ಇದು ಬಿಜೆಪಿಯ ನಿರ್ಣಾಯಕ ಗೆಲುವಿಗೆ ಕಾರಣವಾಯಿತು ಎನ್ನಬಹುದು.
ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷವು ಸ್ಪಷ್ಟ ಬಹುಮತದ ಸರ್ಕಾರವನ್ನು ರಚಿಸಲು ಸಜ್ಜಾಗಿದೆ. ಇದು ರಾಜ್ಯದಲ್ಲಿ ಬಿಜೆಪಿಯ ಮೊದಲ ಸರ್ಕಾರವಾಗಿದೆ. ಪಶ್ಚಿಮ ಬಂಗಾಳದ ಇತಿಹಾಸದಲ್ಲಿ ಬಂಗಾಳದಲ್ಲಿ ಬಿಜೆಪಿ ಸರ್ಕಾರ ರಚನೆಯಾಗುತ್ತಿರುವುದು ಇದೇ ಮೊದಲು. ಇದು ಬಂಗಾಳದಲ್ಲಿ 15 ವರ್ಷಗಳ ಮಮತಾ ಬ್ಯಾನರ್ಜಿ ಸರ್ಕಾರದ ಅಂತ್ಯವನ್ನು ಸೂಚಿಸುತ್ತದೆ.
ಈ ಬಾರಿ ಪಶ್ಚಿಮ ಬಂಗಾಳದ ಚುನಾವಣೆಯಲ್ಲಿ ಬಿಜೆಜೆಪಿಯನ್ನು ಗೆಲ್ಲಿಸಲೇಬೇಕೆಂದು ಪ್ರಧಾನಿ ಮೋದಿ ಮತ್ತು ಅಮಿತ್ ಶಾ ಖುದ್ದಾಗಿ ಅಖಾಡಕ್ಕೆ ಇಳಿದಿದ್ದರು. ಕಳೆದ 2 ತಿಂಗಳಲ್ಲಿ ಅನೇಕ ಬಾರಿ ನರೇಂದ್ರ ಮೋದಿ ಬಂಗಾಳಕ್ಕೆ ಆಗಮಿಸಿ ಚುನಾವಣಾ ಪ್ರಚಾರ ನಡೆಸಿದ್ದಾರೆ. ಅಮಿತ್ ಶಾ ಬಂಗಾಳದಲ್ಲೇ ಬೀಡುಬಿಟ್ಟು ರಾಜ್ಯದ ಬಿಜೆಪಿ ನಾಯಕರಿಗೆ ಸಲಹೆ-ಸೂಚನೆಗಳನ್ನು ನೀಡುತ್ತಾ ಬಂಗಾಳದಲ್ಲಿ ಬಿಜೆಪಿ ಪರ ಅಲೆ ಮೂಡಲು ಸಾಕಷ್ಟು ಶ್ರಮಿಸಿದ್ದಾರೆ. ಹೀಗಾಗಿ, ಈ ಗೆಲುವು ಸಿಗಲು ಪಶ್ಚಿಮ ಬಂಗಾಳ ರಾಜ್ಯದ ಬಿಜೆಪಿ ನಾಯಕರಿಗಿಂತ ಹೆಚ್ಚಾಗಿ ಹೈಕಮಾಂಡ್ ನಾಯಕರ ಪರಿಶ್ರಮವೇ ಕಾರಣ ಎನ್ನಬಹುದು. ಹೀಗಾಗಿ, ಬಂಗಾಳದಲ್ಲಿ ಕೂಡ ಬಿಜೆಪಿ ಪ್ರಧಾನಿ ಮೋದಿಯ ಹೆಸರು ಮತ್ತು ಖ್ಯಾತಿಯನ್ನು ಬಳಸಿಕೊಂಡು ಚುನಾವಣೆ ಗೆದ್ದಿದೆ.
ಚುನಾವಣಾ ಪ್ರಚಾರದ ಸಮಯದಲ್ಲಿ, ಪ್ರಧಾನಿ ಮೋದಿ ಹಲವಾರು ಸಾರ್ವಜನಿಕ ರ್ಯಾಲಿಗಳನ್ನು ನಡೆಸಿ ರಾಜ್ಯದಲ್ಲಿ ಬದಲಾವಣೆಗೆ ಕರೆ ನೀಡಿದರು. ಬಂಗಾಳದಲ್ಲಿ ಕೇಂದ್ರ ಸರ್ಕಾರದ ಯೋಜನೆಗಳನ್ನು ಜಾರಿಗೆ ತರುವ ಭರವಸೆ ನೀಡಿದರು. ಹಾಗೇ, ಕೇಂದ್ರ ಗೃಹ ಸಚಿವ ಅಮಿತ್ ಶಾ ಸುಮಾರು 15 ದಿನಗಳ ಕಾಲ ಬಂಗಾಳದಲ್ಲಿಯೇ ಇದ್ದು, ರಾಜ್ಯದ ವಿವಿಧ ಪ್ರದೇಶಗಳಲ್ಲಿ ಸಭೆಗಳನ್ನು ನಡೆಸಿ, ಪ್ರತಿ ವಿಧಾನಸಭಾ ಸ್ಥಾನಕ್ಕೆ ಪ್ರತ್ಯೇಕ ಕಾರ್ಯತಂತ್ರ ರೂಪಿಸಿದರು. ಈ ಕಾರ್ಯತಂತ್ರವು ಈಗ ಚುನಾವಣಾ ಫಲಿತಾಂಶಗಳಲ್ಲಿ ಗೋಚರಿಸುತ್ತಿದೆ.
ಬಿಜೆಪಿ 82,000 ಬೂತ್‌ಗಳಲ್ಲಿ 71,000 ಬೂತ್‌ಗಳ ಮೇಲೆ ನಿಯಂತ್ರಣ ಸಾಧಿಸಿದೆ. ಮುಸ್ಲಿಂ ಪ್ರಾಬಲ್ಯದ ಪ್ರದೇಶಗಳನ್ನು ಹೊರತುಪಡಿಸಿ, ಪ್ರತಿಯೊಂದು ಬೂತ್‌ನಲ್ಲಿ ಸಂಘಟನೆಯನ್ನು ಬಲಪಡಿಸಲಾಗಿದೆ. ಹಿಂಸಾಚಾರಕ್ಕೆ ಬಲಿಯಾದ ಕಾರ್ಯಕರ್ತರನ್ನು ಪುನಃ ಸಕ್ರಿಯಗೊಳಿಸುವ ಮೂಲಕ ಬಿಜೆಪಿ ತುಳಿತಕ್ಕೆ ಒಳಗಾದವರನ್ನು ತನ್ನ ಚುನಾವಣಾ ಅಸ್ತ್ರವನ್ನಾಗಿ ಬಳಸಿಕೊಂಡಿತು. ಅಮಿತ್ ಶಾ ಅವರ ಮೇಲ್ವಿಚಾರಣೆಯಲ್ಲಿ ಕೇಂದ್ರ ನಾಯಕರಿಗೆ ಸ್ಥಾನವಾರು ಜವಾಬ್ದಾರಿಗಳನ್ನು ವಹಿಸಲಾಯಿತು. ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್ಎಸ್ಎಸ್) ಡ್ರಾಯಿಂಗ್ ರೂಮ್ ಸಭೆಗಳು ಮನೆ ಮನೆಗೆ ಬಿಜೆಪಿ ತಲುಪಲು ಕಾರಣವಾಯಿತು. ಇದಕ್ಕೆ ಆರ್ಎಸ್ಎಸ್ ಕಾರ್ಯಕರ್ತರು ಕೈಜೋಡಿಸಿದ್ದರಿಂದ ಬಿಜೆಪಿಗೆ ಬಹಳ ಸಹಾಯವಾಯಿತು. ಬಿಜೆಪಿಯ ಚುನಾವಣಾ ಪ್ರಚಾರದಲ್ಲಿ ಟಾಲಿವುಡ್ ತಾರೆಯರು ಮತ್ತು ಕಳಂಕಿತ ರಾಜಕಾರಣಿಗಳನ್ನು ದೂರವಿಡಲಾಯಿತು.
ಪೂರ್ವಾಂಚಲಿ, ಮಾರ್ವಾರಿ ಸಮುದಾಯ ಮತ್ತು ಸ್ಥಳೀಯ ಫುಟ್ಬಾಲ್ ಕ್ಲಬ್‌ಗಳನ್ನು ತಲುಪುವ ಮೂಲಕ ಹೊಸ ಮತ ಬ್ಯಾಂಕ್ ಅನ್ನು ರಚಿಸಲಾಯಿತು. ಜೈ ಶ್ರೀ ರಾಮ್, ಒಳನುಸುಳುವಿಕೆ, ಮಹಿಳಾ ಸುರಕ್ಷತೆ – ಇವುಗಳನ್ನು ಒಟ್ಟುಗೂಡಿಸಿ ಬಲವಾದ ಸೈದ್ಧಾಂತಿಕ ಚೌಕಟ್ಟನ್ನು ರಚಿಸಲಾಯಿತು. ಇದು ಬಿಜೆಪಿಯತ್ತ ಜನರು ಒಲವು ತೋರಲು ಕಾರಣವಾಯಿತು.
ಮಮತಾ ಬ್ಯಾನರ್ಜಿ ಅವರ ಪ್ರಣಾಳಿಕೆ ವರ್ಸರ್ ಪ್ರಧಾನಿ ಮೋದಿ ಅವರ ಭರವಸೆ:
3,000 ರೂ. ವರ್ಸಸ್ 1,500 ರೂ. ಆಫರ್: ಟಿಎಂಸಿ 1,500 ರೂ. ನಿರುದ್ಯೋಗ ಭತ್ಯೆಯನ್ನು ನೀಡಿದರೆ, ಬಿಜೆಪಿ ಅದನ್ನು 3,000 ರೂ.ಗೆ ದ್ವಿಗುಣಗೊಳಿಸುವುದಾಗಿ ಭರವಸೆ ನೀಡಿತು.
ಮಹಿಳೆಯರಿಗೆ ಡಬಲ್ ಡೋಸ್: ಮಮತಾ ಬ್ಯಾನರ್ಜಿಯವರ ಲಕ್ಷ್ಮಿ ಭಂಡಾರ್ 1,500 ರೂ.ಗೆ ಹೋಲಿಸಿದರೆ, ಬಿಜೆಪಿ ಪ್ರತಿ ಮಹಿಳೆಗೆ ತಿಂಗಳಿಗೆ 3,000 ರೂ. ನೀಡುವುದಾಗಿ ಭರವಸೆ ನೀಡಿತು. ಇದು ಮಹಿಳೆಯರನ್ನು ತನ್ನತ್ತ ಸೆಳೆಯಲು ಬಿಜೆಪಿಗೆ ಸಹಾಯವಾಯಿತು.
ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗ: ಟಿಎಂಸಿ ವಿರುದ್ಧ ಡಿಎ ಮತ್ತು ವೇತನ ವ್ಯತ್ಯಾಸದ ಆರೋಪ ಮಾಡಿತು. ಅಧಿಕಾರಕ್ಕೆ ಬಂದ 45 ದಿನಗಳಲ್ಲಿ 7ನೇ ವೇತನ ಆಯೋಗವನ್ನು ಜಾರಿಗೆ ತರುವುದಾಗಿ ಬಿಜೆಪಿ ಭರವಸೆ ನೀಡಿದೆ.
ಸರ್ಕಾರಿ ಉದ್ಯೋಗಗಳಲ್ಲಿ 33% ಮಹಿಳಾ ಮೀಸಲಾತಿಯ ಭರವಸೆ: ಹಣಕಾಸಿನ ನೆರವು ಮಾತ್ರವಲ್ಲದೆ, ಉದ್ಯೋಗದಲ್ಲಿ ಕೂಡ ಮಹಿಳೆಯರಿಗೆ ಹೆಚ್ಚಿನ ಆದ್ಯತೆಯ ಭರವಸೆಯನ್ನು ಬಿಜೆಪಿ ನೀಡಿದೆ.
ಏಕರೂಪ ನಾಗರಿಕ ಸಂಹಿತೆಯ ಭರವಸೆ: ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಬಿಜೆಪಿ ಇದನ್ನು ಎಲ್ಲರಿಗೂ ಒಂದೇ ಕಾನೂನು ಎಂದು ಪ್ರಸ್ತುತಪಡಿಸಿತು. ಇದು ಟಿಎಂಸಿ ನಿರೂಪಣೆಗಿಂತ ಭಿನ್ನವಾಗಿದೆ.
ಒಳನುಸುಳುವಿಕೆಗೆ ಶೂನ್ಯ ಸಹಿಷ್ಣುತೆ: ಪಶ್ಚಿಮ ಬಂಗಾಳದಲ್ಲಿ ಒಳನುಸುಳುವವರನ್ನು ಹೊರಹಾಕಲಾಗುವುದು ಎಂದು ಬಿಜೆಪಿ ಸ್ಪಷ್ಟವಾಗಿ ಹೇಳಿದೆ.
ಕೈಗಾರಿಕೆ ಮತ್ತು ಸಿಂಗೂರ್ ಪುನರುಜ್ಜೀವನ: ಸಿಂಗೂರ್ ಅನ್ನು ಮತ್ತೆ ಕೈಗಾರಿಕಾ ಕೇಂದ್ರವನ್ನಾಗಿ ಮಾಡುವ ಭರವಸೆಯನ್ನು ಬಿಜೆಪಿ ನೀಡಿದೆ. ಇದು ಉದ್ಯೋಗ ಮತ್ತು ಹೂಡಿಕೆಗೆ ಅನುಕೂಲ ನೀಡುತ್ತದೆ.
ಕೇಂದ್ರ ಯೋಜನೆಗಳ ಸಂಪೂರ್ಣ ಲಾಭ: ಬಂಗಾಳದಲ್ಲಿ ಆಯುಷ್ಮಾನ್ ಭಾರತ್ ನಂತಹ ಯೋಜನೆಗಳನ್ನು ಸಂಪೂರ್ಣವಾಗಿ ಜಾರಿಗೆ ತರುವ ಭರವಸೆ ನೀಡಲಾಗಿದೆ.
ಈ ಬಾರಿ ಪಶ್ಚಿಮ ಬಂಗಾಳವು ಸ್ವಾತಂತ್ರ್ಯದ ನಂತರ ಅತಿ ಹೆಚ್ಚು ಮತದಾನವನ್ನು ದಾಖಲಿಸಿದೆ. ವಿಧಾನಸಭಾ ಚುನಾವಣೆಯ ಎರಡನೇ ಹಂತದಲ್ಲಿ ಶೇ. 91.66ರಷ್ಟು ಮತದಾನವಾಗಿದೆ. ಮೊದಲ ಹಂತದ ಚುನಾವಣೆಯಲ್ಲಿ ಶೇ.93.19ರಷ್ಟು ಜನರು ಮತದಾನದಲ್ಲಿ ಭಾಗವಹಿಸಿದ್ದು, ಒಟ್ಟಾರೆ ಮತದಾನದ ಪ್ರಮಾಣ ಶೇ.92.47ಕ್ಕೆ ತಲುಪಿದೆ.
2021 ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ, ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ ಪಕ್ಷವು 294 ಸ್ಥಾನಗಳಲ್ಲಿ 213 ಸ್ಥಾನಗಳನ್ನು ಗೆದ್ದು ಸುಮಾರು ಶೇ.48ರಷ್ಟು ಮತಗಳನ್ನು ಗಳಿಸಿ ನಿರ್ಣಾಯಕ ಬಹುಮತ ಗಳಿಸಿತು. ಆದರೆ ಬಿಜೆಪಿ 77 ಸ್ಥಾನಗಳನ್ನು ಅಂದರೆ ಸರಿಸುಮಾರು ಶೇ.38ರಷ್ಟು ಮತಗಳನ್ನು ಗಳಿಸಿ ಪ್ರಮುಖ ವಿರೋಧ ಪಕ್ಷವಾಗಿ ಹೊರಹೊಮ್ಮಿತ್ತು. ಈ ಬಾರಿ ಬಿಜೆಪಿ ನಿರೀಕ್ಷೆಗೂ ಮೀರಿ ಗೆಲುವು ಸಾಧಿಸಿದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಅಡುಗೆ ಮನೆಯನ್ನು (kitchen) ಪ್ರತಿಯೊಬ್ಬರೂ ಸಹ ಕ್ಲೀನ್ ಆಗಿ ಇಟ್ಟುಕೊಳ್ಳುತ್ತಾರೆ. ಅದರಲ್ಲೂ ಆರೋಗ್ಯದ ದೃಷ್ಟಿಯಿಂದ ಸಿಂಕ್, ಪಾತ್ರೆಗಳ ಸ್ವಚ್ಛತೆಯ ಬಗ್ಗೆ ತುಸು ಹೆಚ್ಚೇ ಕಾಳಜಿ ವಹಿಸುತ್ತಾರೆ, ಆದರೆ ಪಾತ್ರೆ ತೊಳೆಯುವ ಸ್ಪಾಂಜ್, ಸ್ಕ್ರಬ್ಬರ್‌ಗಳ ಸ್ವಚ್ಛತೆಯ ಬಗ್ಗೆ ಹೆಚ್ಚಿನವರು ಗಮನ ಹರಿಸುವುದೇ ಇಲ್ಲ. ಕೊಳಕಾದ ಸ್ಪಾಂಜ್‌ಗಳನ್ನೇ ವರ್ಷಗಟ್ಟಲೇ ಬಳಸುತ್ತಿರುತ್ತಾರೆ. ಸ್ಪಾಂಜ್ ಅನ್ನೋ ಅಡುಗೆ ಮನೆಯಲ್ಲಿರುವ ಸೈಲೆಂಟ್ ಕಿಲ್ಲರ್ ಹಾನಿಕಾರಕ ಬ್ಯಾಕ್ಟೀರಿಯಾಗಳಿಗೆ ಸಂತಾನೋತ್ಪತ್ತಿ ಮಾಡುವ ಸ್ಥಳವಾಗಿದ್ದು, ಇದು ಹಲವು ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗುತ್ತದೆ. ಆದ್ದರಿಂದ, ನಿಮ್ಮ ಆರೋಗ್ಯದ ದೃಷ್ಟಿಯಿಂದ ಪಾತ್ರೆ ತೊಳೆಯುವ ಸ್ಪಾಂಜ್‌ನ ಶುಚಿಗೊಳಿಸುವಿಕೆ ಮತ್ತು ಅದರ ಮುಕ್ತಾಯ ದಿನಾಂಕದ ಬಗ್ಗೆ ತಿಳಿದುಕೊಳ್ಳುವುದು ಮುಖ್ಯ.
ಪಾತ್ರೆ ತೊಳೆಯುವ ಸ್ಪಾಂಜ್‌ಗಳಲ್ಲಿ ಬ್ಯಾಕ್ಟೀರಿಯಾ ಏಕೆ ಬೆಳೆಯುತ್ತದೆ?
ಅಡುಗೆಮನೆಯ ಸ್ಪಂಜುಗಳು ಯಾವಾಗಲೂ ಒದ್ದೆಯಾಗಿರುತ್ತವೆ ಮತ್ತು ಆಹಾರ ತ್ಯಾಜ್ಯದೊಂದಿಗೆ ಸಂಪರ್ಕಕ್ಕೆ ಬರುತ್ತವೆ. ಕೆಲವೊಮ್ಮೆ, ಅವು ಶೌಚಾಲಯದ ಸೀಟಿಗಿಂತ ಹೆಚ್ಚಿನ ಕೊಳೆಯನ್ನು ಹೊಂದಿರಬಹುದು. ಈ ತೇವಾಂಶ, ಕೊಳೆ ಇ. ಕೋಲಿ ಮತ್ತು ಇತರ ಹಾನಿಕಾರಕ ಬ್ಯಾಕ್ಟೀರಿಯಾಗಳು ಬೆಳೆಯಲು ಸೂಕ್ತವಾದ ಸ್ಥಳವಾಗಿದೆ. ಈ ಬ್ಯಾಕ್ಟೀರಿಯಾಗಳು ಸ್ಪಂಜಿನಿಂದ ಪಾತ್ರೆಗಳು ಮತ್ತು ಇತರ ಅಡುಗೆಮನೆಯ ಮೇಲ್ಮೈಗಳಿಗೆ ಹರಡುತ್ತವೆ, ಇದು ಸೋಂಕಿನ ಅಪಾಯವನ್ನು ಹೆಚ್ಚಿಸುತ್ತದೆ. ಮತ್ತು ಈ ಬ್ಯಾಕ್ಟೀರಿಯಾ ದೇಹವನ್ನು ಪ್ರವೇಶಿಸಿದರೆ ವಾಂತಿ, ಅತಿಸಾರ ಮತ್ತು ಹೊಟ್ಟೆ ನೋವಿನಂತಹ ಆರೋಗ್ಯ ಸಮಸ್ಯೆಗಳು ಕಾಡುತ್ತವೆ. ಮುಖ್ಯವಾಗಿ ವೃದ್ಧರು ಮತ್ತು ಮಕ್ಕಳಲ್ಲಿ ರೋಗ ನಿರೋಧಕ ಶಕ್ತಿ ಕುಂಠಿತವಾಗಲು ಕಾರಣವಾಗುತ್ತದೆ.
ಅಡುಗೆಮನೆಯ ಸ್ಪಾಂಜ್‌ಗಳನ್ನು ಎಷ್ಟು ಬಾರಿ ಬದಲಾಯಿಸಬೇಕು?
ನಿಮ್ಮ ಅಡುಗೆಮನೆಯ ಸ್ಪಂಜುಗಳು ಮತ್ತು ಸ್ಕ್ರಬ್ಬರ್‌ಗಳನ್ನು ನಿಯಮಿತವಾಗಿ ಬದಲಾಯಿಸುವುದು ಮುಖ್ಯ. ಸ್ಪಂಜುಗಳನ್ನು ಪ್ರತಿ 1 ರಿಂದ 2 ವಾರಗಳಿಗೊಮ್ಮೆ ಬದಲಾಯಿಸಬೇಕು, ಬ್ರಷ್‌ಗಳನ್ನು ಪ್ರತಿ 1 ರಿಂದ 2 ತಿಂಗಳಿಗೊಮ್ಮೆ ಬದಲಾಯಿಸಬೇಕು.
ಪ್ರತಿ ಬಳಕೆಯ ನಂತರ ಸ್ಪಂಜುಗಳು ಮತ್ತು ಬ್ರಷ್‌ಗಳನ್ನು ಚೆನ್ನಾಗಿ ತೊಳೆಯಿರಿ.
ಬೆಚ್ಚಗಿನ ನೀರು ಮತ್ತು ಸಾಬೂನಿನಿಂದ ಪ್ರತಿದಿನ ಅವುಗಳನ್ನು ಸ್ವಚ್ಛಗೊಳಿಸಿ.
ಒದ್ದೆಯಾದ ಸ್ಪಾಂಜ್ ಅನ್ನು ಒಂದು ನಿಮಿಷ ಮೈಕ್ರೋವೇವ್ ಮಾಡಿ ಅಥವಾ ಕುದಿಯುವ ನೀರಿನಲ್ಲಿ ಮುಳುಗಿಸಿ ಸೂಕ್ಷ್ಮಜೀವಿಗಳ ಸಂಖ್ಯೆಯನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.
ಯಾವಾಗಲೂ ಸ್ಪಾಂಜ್‌ಗಳನ್ನು ಒಣ ಸ್ಥಳದಲ್ಲಿ ಸಂಗ್ರಹಿಸಿ.
ಬ್ಯಾಕ್ಟೀರಿಯಾ ಮತ್ತು ವಾಸನೆಯನ್ನು ತೆಗೆದುಹಾಕಲು ಅಡಿಗೆ ಸೋಡಾ ಉತ್ತಮ ಮನೆಮದ್ದಾಗಿದೆ. ಇದನ್ನು ಸ್ಪಂಜಿನ ಮೇಲೆ ಸಿಂಪಡಿಸಿ ಕೆಲವು ನಿಮಿಷಗಳ ಕಾಲ ಹಾಗೆಯೇ ಬಿಟ್ಟು, ನಂತರ ಚೆನ್ನಾಗಿ ತೊಳೆಯಿರಿ. ಇದು ಸ್ಪಾಂಜ್‌ಗಳನ್ನು ಸ್ವಚ್ಛಗೊಳಿಸುತ್ತದೆ ಮತ್ತು ಬ್ಯಾಕ್ಟೀರಿಯಾಗಳನ್ನು ತೊಡೆದು ಹಾಕುತ್ತದೆ.
ಹಾಲಿ ಚಾಂಪಿಯನ್ ಆರ್‌ಸಿಬಿ ತನ್ನ ಮುಂದಿನ ಪಂದ್ಯವನ್ನು ಮೇ 7 ರಂದು ಲಕ್ನೋ ಸೂಪರ್ಜೈಂಟ್ಸ್ ವಿರುದ್ಧ ಏಕನಾ ಕ್ರೀಡಾಂಗಣದಲ್ಲಿ ಆಡಲಿದೆ. ಈ ಪಂದ್ಯಕ್ಕಾಗಿ ತಂಡ ಕೂಡ ತಯಾರಿ ನಡೆಸುತ್ತಿದೆ. ಏಕೆಂದರೆ ಪ್ಲೇ ಆಫ್ ದೃಷ್ಟಿಯಿಂದ ಆರ್‌ಸಿಬಿ ತಂಡಕ್ಕೆ ಉಳಿದ ಪಂದ್ಯಗಳ ಗೆಲುವು ಅತ್ಯಗತ್ಯವಾಗಿದೆ. ಈ ನಡುವೆ ಆರ್‌ಸಿಬಿ ಫ್ರಾಂಚೈಸಿ ತನ್ನ ಎಕ್ಸ್ ಖಾತೆಯಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದು, ಅದರಲ್ಲಿ ಸತತ 18 ವರ್ಷಗಳ ಕಾಲ ಆರ್‌ಸಿಬಿ ತಂಡದ ಫಿಸಿಯೋ ಆಗಿ ಕೆಲಸ ಮಾಡಿದ್ದ ಇವಾನ್ ಸ್ಪೀಚ್ಲಿ ಅವರಿಗೆ ಭಾವುಕ ವಿದಾಯವನ್ನು ಹೇಳಿದೆ.
ವಾಸ್ತವವಾಗಿ 2008 ರಲ್ಲಿ ಆರ್‌ಸಿಬಿ ತಂಡದ ಫಿಸಿಯೋ ಆಗಿ ನೇಮಕಗೊಂಡಿದ್ದ ಇವಾನ್ ಸ್ಪೀಚ್ಲಿ ಮೂಲತಃ ದಕ್ಷಿಣ ಆಫ್ರಿಕಾದವರು. ಸತತ 18 ವರ್ಷಗಳ ಕಾಲ ಅಂದರೆ 2008 ರಿಂದ 2025 ರ ವರೆಗೆ ಆರ್‌ಸಿಬಿ ತಂಡದಲ್ಲಿದ್ದ ಫಿಸಿಯೋ ಇವಾನ್ ಸ್ಪೀಚ್ಲಿ ಕಳೆದ ವರ್ಷವಷ್ಟೇ ತಮ್ಮ ಹುದ್ದೆಯಿಂದ ನಿವೃತ್ತಿ ಹೊಂದಿದ್ದರು. ಅಂದರೆ ಆರ್‌ಸಿಬಿ ತಂಡವನ್ನು ಮೊಟ್ಟ ಮೊದಲ ಬಾರಿಗೆ ಐಪಿಎಲ್ ಚಾಂಪಿಯನ್ ಮಾಡಿದ್ದ ಬಳಿಕ ಇವಾನ್ ಸ್ಪೀಚ್ಲಿ ತಂಡವನ್ನು ತೊರೆದಿದ್ದರು.
18 ವರ್ಷಗಳ ಕಾಲ ಆಟಗಾರರನ್ನು ಫಿಟ್ ಆಗಿಡುವಲ್ಲಿ ನಿರ್ಣಾಯಕ ಪಾತ್ರವಹಿಸಿದ್ದ ಸ್ಪೀಚ್ಲಿ ಅವರನ್ನು ಸನ್ಮಾನಿಸಲು ಆರ್‌ಸಿಬಿ ನಿರ್ಧರಿಸಿತ್ತು. ಈ ಕಾರಣಕ್ಕಾಗಿ, ಅವರನ್ನು ವಿಶೇಷವಾಗಿ ಆಹ್ವಾನಿಸಿ ತಂಡದ ಡ್ರೆಸ್ಸಿಂಗ್ ಕೋಣೆಯಲ್ಲಿ ವಿಶೇಷ ಕೈಗಡಿಯಾರವನ್ನು ನೀಡಿ ಗೌರವಿಸಲಾಯಿತು. ಸಮಾರಂಭದಲ್ಲಿ, ಕೊಹ್ಲಿ ಸ್ಪೀಚ್ಲಿ ಬಗ್ಗೆ ತಮ್ಮ ಗೌರವ ಮತ್ತು ಪ್ರೀತಿಯನ್ನು ವ್ಯಕ್ತಪಡಿಸಿದರು, ಆ 18 ವರ್ಷಗಳಲ್ಲಿ, ಆರ್‌ಸಿಬಿಯಲ್ಲಿ ಬೇರೆಯವರಿಗಿಂತ ಸ್ಪೀಚ್ಲಿ, ಬಸು ಮತ್ತು ಮೇನಕಾ ಅವರೊಂದಿಗೆ ಹೆಚ್ಚು ಸಮಯ ಕಳೆದಿದ್ದೇನೆ ಎಂದು ಹೇಳಿದರು.
ನವದೆಹಲಿ, (ಮೇ 04): ಪಂಚ ರಾಜ್ಯ ಚುನಾವಣಾ ಫಲಿತಾಂಶ ಹೊರಬಿದ್ದಿದ್ದು, ಪಶ್ಚಿಮ ಬಂಗಾಳ, ಅಸ್ಸಾಂ, ಪುದುಚೇರಿಯಲ್ಲಿ ಬಿಜೆಪಿ ಭರ್ಜರಿ ಬಹುತಮದತ್ತ ಪಡೆದುಕೊಂಡಿದೆ. ಇನ್ನು ತಮಿಳುನಾಡಿನಲ್ಲಿ ದಳಪತಿ ವಿಜಯ್ ನೇತೃತ್ವದ ಟಿವಿಕೆ ಭರ್ಜರಿ ಗೆಲುವಿನತ್ತ ಸಾಗುತ್ತಿದ್ದರೆ, ಕೇರಳದಲ್ಲಿ ಕಾಂಗ್ರೆಸ್ ಮರಳಿ ಅಧಿಕಾರ ಹಿಡಿಯುವಲ್ಲಿ ಯಶಸ್ವಿಯಾಗಿದೆ. ಅದರಲ್ಲೂ ಮುಖ್ಯವಾಗಿ ಪಶ್ಚಿಮ ಬಂಗಾಳದಲ್ಲಿ ಈ ಬಾರಿ ಬಿಜೆಪಿ ಬಹುಮತ ಪಡೆದಕೊಂಡಿದ್ದು, ಇದರೊಂದಿಗೆ 15 ವರ್ಷಗಳ ಕಾಲ ಮಮತಾ ಬ್ಯಾನರ್ಜಿ ಆಡಳಿತಕ್ಕೆ ಬಿಜೆಪಿ ಬ್ರೇಕ್ ಹಾಕಿದೆ. ಇನ್ನು ಈ ಅಭೂತ ಪೂರ್ವ ಗೆಲುವನ್ನು ಕಾರ್ಯಕರ್ತರೊಂದಿಗೆ ಆಚರಿಸಲು ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ದೆಹಲಿಯ ಬಿಜೆಪಿ ಕಚೇರಿಎ ಆಗಮಿಸಿದ್ದು, ಇದೇ ವೇಳೆ ಕಾರ್ಯಕರ್ತರನ್ನುದ್ದೇಶಿಸಿ ಭಾಷಣ ಮಾಡುತ್ತಿದ್ದು, ಏನೆಲ್ಲಾ ಹೇಳುತ್ತಿದ್ದಾರೆ ಎನ್ನುವ ನೇರಪ್ರಸಾರ ಇಲ್ಲಿದೆ ನೋಡಿ.
ಚೆನ್ನೈ, ಮೇ 4: ವಿಜಯ್ ಅವರ ಟಿವಿಕೆ ಪಕ್ಷ ತನ್ನ ಚೊಚ್ಚಲ ಸ್ಪರ್ಧೆಯಲ್ಲಿ ಬಹುಮತದ ಸಮೀಪಕ್ಕೆ ಹೋಗಿದೆ. 234 ಸದಸ್ಯ ಬಲದ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ (Tamil Nadu Assembly Elections) ತಮಿಳಗ ವೆಟ್ರಿ ಕಳಗಂ (TVK) 107-108 ಸ್ಥಾನಗಳಲ್ಲಿ ಗೆಲುವು ಮತ್ತು ಮುನ್ನಡೆ ಹೊಂದಿದೆ. ಬಹುಮತಕ್ಕೆ ಅಗತ್ಯ ಇರುವುದು 118 ಸ್ಥಾನಗಳಿಗೆ ಸುಮಾರು 10-11 ಸ್ಥಾನಗಳ ಕೊರತೆ ಎದುರಾಗಬಹುದು. ವಿಜಯ್ ಅವರು ಈ ಕೊರತೆ ತುಂಬಿಕೊಂಡರೆ ಕಿಂಗ್ ಮೇಕರ್ ಬದಲು ಕಿಂಗ್ ಆಗುವ ಅವಕಾಶ ಇದೆ.
ವಿಜಯ್ ಯಾರೊಂದಿಗೆ ಮೈತ್ರಿ?
ದಳಪತಿ ವಿಜಯ್ ಅವರು ಚುನಾವಣೋತ್ತರ ಮೈತ್ರಿ ಮಾಡಿಕೊಳ್ಳುವುದು ಅನಿವಾರ್ಯವಾಗಬಹುದು. ಆದರೆ, ಚುನಾವಣಾ ಪೂರ್ವದಲ್ಲಿ ಸ್ವತಂತ್ರವಾಗಿ ಸ್ಪರ್ಧಿಸಿದ್ದ ಟಿವಿಕೆ ಈಗ ಯಾರೊಂದಿಗೆ ಸ್ನೇಹ ಬೆಳೆಸಬಹುದು?
ಚುನಾವಣೆಗೆ ಮುನ್ನ ವಿಜಯ್ ತಮ್ಮ ರಾಜಕೀಯ ನಿಲುವನ್ನು ಬಹಳ ಸ್ಪಷ್ಟವಾಗಿ ಬಹಿರಂಗಪಡಿಸಿದ್ದರು. ಡಿಎಂಕೆ ಪಕ್ಷ ತನ್ನ ರಾಜಕೀಯ ವಿರೋಧಿ, ಬಿಜೆಪಿ ತನ್ನ ಸೈದ್ಧಾಂತಿಕ ವಿರೋಧಿ ಎಂದು ವಿಜಯ್ ಹೇಳಿದ್ದರು. ಬಿಜೆಪಿಯ ಹಲವು ವಿಚಾರಗಳನ್ನು ಅವರು ವಿರೋಧಿಸಿದ್ದಿದೆ. ಅವರ ಕೊನೆಯ ಸಿನಿಮಾ ಜನನಾಯಗನ್ ಬಿಡುಗಡೆಗೆ ಕೇಂದ್ರದ ಬಿಜೆಪಿ ತಡೆಗಲ್ಲು ಹಾಕಲು ಯತ್ನಿಸಿತು ಎನ್ನುವ ಅಸಮಾಧಾನವೂ ಅವರಿಗಿದೆ. ಹೀಗಾಗಿ, ಬಿಜೆಪಿ ಜೊತೆ ಅವರು ಮೈತ್ರಿ ಮಾಡಿಕೊಳ್ಳುವ ಸಾಧ್ಯತೆ ಬಹಳ ಕಡಿಮೆ.
ಹಾಗಾದರೆ, ವಿಜಯ್ ಅವರ ಟಿವಿಕೆ ಪಕ್ಷದ ಮುಂದಿರುವ ಆಯ್ಕೆಗಳೇನು? ಟಿವಿಕೆಗೆ ಬೆಂಬಲ ಕೊಡಬಹುದಾದ ಇತರ ಪಕ್ಷಗಳ್ಯಾವುವು? ಡಿಎಂಕೆ ಜೊತೆ ಮೈತ್ರಿ ಹೊಂದಿರುವ ಇತರ ಪಕ್ಷಗಳು, ಹಾಗೂ ಬಿಜೆಪಿ ಹೊರತಾದ ಎನ್ಡಿಎ ಮಿತ್ರ ಪಕ್ಷಗಳು ಈಗ ವಿಜಯ್ ಅವರಿಗಿರುವ ಆಯ್ಕೆಗಳಾಗಿವೆ.
ಡಿಎಂಕೆ ಎರಡನೇ ಅತಿದೊಡ್ಡ ಪಕ್ಷವಾಗಿದೆ. ಅದರೊಂದಿಗೆ ಟಿವಿಕೆ ಮೈತ್ರಿ ಸಾಧ್ಯತೆ ಕಡಿಮೆ. ಎಐಎಡಿಎಂಕೆ ಪಕ್ಷ 47 ಸ್ಥಾನಗಳನ್ನು ಪಡೆದಿದೆ. ಆದರೆ, ಬಿಜೆಪಿ ಜೊತೆಗಿದ್ದ ಕಾರಣಕ್ಕೆ ಎಐಎಡಿಎಂಕೆಯನ್ನು ವಿಜಯ್ ಹತ್ತಿರಕ್ಕೆ ಸೇರಿಸಿಕೊಳ್ಳುತ್ತಾರಾ ಗೊತ್ತಿಲ್ಲ.
ಕೆಲ ವರದಿಗಳ ಪ್ರಕಾರ ಕಾಂಗ್ರೆಸ್ ಪಕ್ಷದ ಬೆಂಬಲವನ್ನು ವಿಜಯ್ ಪಡೆಯಲು ಯತ್ನಿಸಬಹುದು. ಕಾಂಗ್ರೆಸ್ ಪಕ್ಷ 5 ಸ್ಥಾನಗಳನ್ನು ಹೊಂದಿದೆ. ಟಿಎಂಕೆ ಬಹುಮತ ಪಡೆಯಲು ಇರುವ 10-11 ಸ್ಥಾನಗಳ ಕೊರತೆ ನೀಗಲು ಕಾಂಗ್ರೆಸ್ ಬಲ ಸಾಕಾಗುವುದಿಲ್ಲ. ಪಿಎಂಕೆ 5 ಸ್ಥಾನ, ಎಡಪಕ್ಷಗಳು 4 ಸ್ಥಾನ, ಐಯುಎಂಎಲ್, ಡಿಎಂಡಿಕೆ ಇತ್ಯಾದಿ ಪಕ್ಷಗಳ ನೆರವನ್ನು ಪಡೆದುಕೊಂಡರೆ ಟಿಎಂಕೆ ಸರ್ಕಾರ ರಚಿಸಲು ಸಾಧ್ಯವಾಗುತ್ತದೆ.
ತಮಿಳು ಚಿತ್ರರಂಗದ ನಟ ದಳಪತಿ ವಿಜಯ್ (Thalapathy Vijay) ಅವರು ರಾಜಕೀಯದಲ್ಲಿ ಗೆಲುವು ಸಾಧಿಸಿದ್ದಾರೆ. ತಾವೇ ಸ್ಥಾಪಿಸಿದ ಟಿವಿಕೆ (TVK) ಪಕ್ಷದ ಮೂಲಕ ಅವರು ಮೊದಲ ಚುನಾವಣೆಯಲ್ಲೇ ಜಯಭೇರಿ ಬಾರಿಸಿದ್ದಾರೆ. ಅವರ ಈ ಗೆಲುವನ್ನು ಅಭಿಮಾನಿಗಳು ಸಂಭ್ರಮಿಸುತ್ತಿದ್ದಾರೆ. ಸಿನಿಮಾದಲ್ಲಿ ಯಶಸ್ಸು ಸಿಕ್ಕ ರೀತಿಯೇ ರಾಜಕೀಯದಲ್ಲೂ ವಿಜಯ್ ಅವರು ಸಾಧನೆ ಮಾಡಿದ್ದಾರೆ. ಅವರ ಮನೆ ಎದುರು ಭದ್ರತೆ ಹೆಚ್ಚಿಸಲಾಗಿದೆ. ಸಿನಿಮಾ ಹಿನ್ನೆಲೆಯಿಂದ ಬಂದ ಅಭ್ಯರ್ಥಿ ಎಂಬ ಕಾರಣಕ್ಕೆ ವಿಜಯ್ ಅವರನ್ನು ಲೇವಡಿ ಮಾಡಲಾಗಿತ್ತು. ಆದರೆ ಟೀಕಿಸುವವರಿಗೆ ವಿಜಯ್ ಅವರು ತಕ್ಕ ಉತ್ತರ ನೀಡಿದ್ದಾರೆ. ಅನೇಕ ಸೆಲೆಬ್ರಿಟಿಗಳು ಕೂಡ ವಿಜಯ್ ಅವರಿಗೆ ಅಭಿನಂದನೆ ಸಲ್ಲಿಸುತ್ತಿದ್ದಾರೆ.
ಕರೂರ್, ಮೇ 4: ತಮಿಳುನಾಡಿನ ಕರೂರ್ನಲ್ಲಿ ನಟ ಹಾಗೂ ಟಿವಿಕೆ ಮುಖ್ಯಸ್ಥ ವಿಜಯ್ (Vijay) ಚುನಾವಣಾ ಪ್ರಚಾರ ನಡೆಸುವಾಗ ನಿರೀಕ್ಷೆಗೂ ಮೀರಿದ ಜನರು ಸೇರಿದ್ದರು. ಇದರಿಂದ ಕಾಲ್ತುಳಿತ ಉಂಟಾಗಿ 41 ಜನರು ಪ್ರಾಣ ಕಳೆದುಕೊಂಡರು. ಕಳೆದ ವರ್ಷ ಈ ಘಟನೆ ನಡೆದಿತ್ತು. ವಿಜಯ್ ಅವರ ರ‍್ಯಾಲಿಯಿಂದ ಕಾಲ್ತುಳಿತ ಉಂಟಾಗಿದ್ದ ಕರೂರಿನಲ್ಲಿ ತಮಿಳುನಾಡು ವಿಕ್ಟರಿ ಪಾರ್ಟಿ (ಟಿವಿಕೆ) ಹಿನ್ನಡೆ ಸಾಧಿಸಿದೆ. ಈ ಕ್ಷೇತ್ರದಲ್ಲಿ ಡಿಎಂಕೆ ಮತ್ತು ಎಐಎಡಿಎಂಕೆ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ.
ಹೊಸದಾಗಿ ರಾಜಕೀಯ ಪಕ್ಷವನ್ನು ಘೋಷಿಸಿದ್ದ ವಿಜಯ್ ಮೊದಲ ಪ್ರಯತ್ನದಲ್ಲೇ ಅತ್ಯದ್ಭುತವಾದ ಗೆಲುವಿನ ರುಚಿ ಕಂಡಿದ್ದಾರೆ. ವಿಜಯ್ ತಮಿಳುನಾಡಿನ ಮುಖ್ಯಮಂತ್ರಿಯಾಗುವುದು ಖಚಿತವಾಗಿದೆ. 234 ಸ್ಥಾನಗಳ ತಮಿಳುನಾಡು ವಿಧಾನಸಭೆಯಲ್ಲಿ ಟಿವಿಕೆ 107 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಆದರೆ, ಬಹುಮತಕ್ಕೆ ಬೇಕಾದ 118 ಸ್ಥಾನಗಳು ಇಲ್ಲದ ಕಾರಣದಿಂದ ಟಿವಿಕೆಗೆ ಬೇರೆ ಪಕ್ಷದ ಬೆಂಬಲ ಬೇಕಾಗಿದೆ. ಆದರೂ ಟಿವಿಕೆ ಮೊದಲ ಪ್ರಯತ್ನದಲ್ಲೇ ತಮಿಳುನಾಡಿನ ಏಕೈಕ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿರುವುದು ರಾಜಕೀಯ ತಜ್ಞರನ್ನು ಕೂಡ ಅಚ್ಚರಿಗೊಳಿಸಿದೆ.
ಇದೆಲ್ಲದರ ನಡುವೆ ಬಹುತೇಕರ ಗಮನ ಕರೂರಿನತ್ತ ನೆಟ್ಟಿದೆ. ಇಏ ಕರೂರಿನಲ್ಲಿ ಕಳೆದ ವರ್ಷ ವಿಜಯ್ ಭಾಷಣ ಮಾಡಿದ ರ‍್ಯಾಲಿಯಲ್ಲಿ ಸಂಭವಿಸಿದ ಭೀಕರ ಕಾಲ್ತುಳಿತದಿಂದ 41 ಜನ ಪ್ರಾಣ ಕಳೆದುಕೊಂಡಿದ್ದರು. ಈ ಕ್ಷೇತ್ರವು ಈಗ ಕಠಿಣ ಸ್ಪರ್ಧೆಗೆ ಸಾಕ್ಷಿಯಾಗುತ್ತಿದೆ. ಕರೂರಿನಲ್ಲಿ ಅಖಿಲ ಭಾರತ ಅಣ್ಣಾ ದ್ರಾವಿಡ ಮುನ್ನೇತ್ರ ಕಳಗಂ (ಎಐಎಡಿಎಂಕೆ)ನ ಎಂ.ಆರ್. ವಿಜಯಭಾಸ್ಕರ್ 46,064 ಮತಗಳಿಂದ ಮುನ್ನಡೆಯಲ್ಲಿದ್ದಾರೆ. ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ನ ಎಎಎಸ್ಇಇ.ಎಂ. ತಿಯಾಗರಾಜನ್ 40,784 ಮತಗಳನ್ನು ಗಳಿಸಿದ್ದಾರೆ. ಟಿವಿಕೆ ಸ್ಪರ್ಧಿ 39,586 ಮತಗಳಿಂದ ಹಿಂದುಳಿದಿದ್ದಾರೆ.
ಚೆನ್ನೈನಿಂದ ಸುಮಾರು 400 ಕಿಮೀ ದೂರದಲ್ಲಿರುವ ಕರೂರಿನಲ್ಲಿ ನಟ-ರಾಜಕಾರಣಿ ವಿಜಯ್ ಅವರ ರ್ಯಾಲಿಯಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ 9 ಮಕ್ಕಳು 41 ಜನರು ಸಾವನ್ನಪ್ಪಿದ್ದರು. ಆಯೋಜಕರು ಸುಮಾರು 10,000 ಜನರ ನಿರೀಕ್ಷೆಯಲ್ಲಿ ವ್ಯವಸ್ಥೆ ಮಾಡಿದ್ದರು. ಆದರೆ ಅದಕ್ಕಿಂತ 3 ಪಟ್ಟು ಹೆಚ್ಚು ಜನರು ಆಗಮಿಸಿದ್ದರಿಂದ ಕಾಲ್ತುಳಿತ ಉಂಟಾಗಿತ್ತು ಎಂದು ಪೊಲೀಸರು ಬಹಿರಂಗಪಡಿಸಿದ್ದಾರೆ. ಬಿಸಿಲಿನಲ್ಲಿ ಕಾಯುವ ಸಮಯದಲ್ಲಿ ಜನಸಮೂಹಕ್ಕೆ ಸಾಕಷ್ಟು ಆಹಾರ ಮತ್ತು ನೀರಿನ ಕೊರತೆ ಇತ್ತು ಎಂದು ಉನ್ನತ ಪೊಲೀಸ್ ಅಧಿಕಾರಿಗಳು ವರದಿಯಲ್ಲಿ ತಿಳಿಸಿದ್ದರು.
ಸೆಪ್ಟೆಂಬರ್ 27ರಂದು ಕರೂರ್ ಜಿಲ್ಲೆಯಲ್ಲಿ ವಿಜಯ್ ಪ್ರಚಾರ ಮಾಡುವಾಗ ಈ ಕಾಲ್ತುಳಿತ ಸಂಭವಿಸಿತ್ತು. ಈ ಘಟನೆಯು ಭಾರತದಾದ್ಯಂತ ದೊಡ್ಡ ಆಘಾತವನ್ನು ಉಂಟುಮಾಡಿತು. ಇದರ ನಂತರ, ಅಕ್ಟೋಬರ್ 27ರಂದು ವಿಜಯ್ ಅವರು ಕರೂರ್ ಘಟನೆಯಲ್ಲಿ ಸಾವನ್ನಪ್ಪಿದ 41 ಜನರ ಕುಟುಂಬಗಳನ್ನು ಸಂತಾಪ ಸೂಚಿಸಲು ಪಣಯೂರಿಗೆ ತೆರಳಿದ್ದರು. ಈ ಪ್ರಕರಣದಲ್ಲಿ ಸಿಬಿಐ ತನಿಖೆ ನಡೆಯುತ್ತಿದೆ. ಇಲ್ಲಿಯವರೆಗೆ ಟಿವಿಕೆ ಅಧ್ಯಕ್ಷ ವಿಜಯ್ ದೆಹಲಿಯ ಸಿಬಿಐ ಕಚೇರಿಯಲ್ಲಿ 3 ಬಾರಿ ಹಾಜರಾಗಿ ವಿವರಣೆ ನೀಡಿದ್ದಾರೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಬೆಂಗಳೂರು, ಮೇ 04: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಫಲಿತಾಂಶದ ಚಿತ್ರಣ ಕ್ಷಣಕ್ಷಣಕ್ಕೂ ಬದಲಾಗುತ್ತಿದ್ದು, ಟ್ರೆಂಡ್‌ಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸುತ್ತಿರುವ ಬೆನ್ನಲ್ಲೇ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ತಮ್ಮ ಪಕ್ಷದ ಕಾರ್ಯಕರ್ತರು ಮತ್ತು ಎಣಿಕೆ ಏಜೆಂಟ್‌ಗಳಿಗೆ ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ. ತಮ್ಮ ಎಕ್ಸ್ (X) ಖಾತೆಯಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿರುವ ಅವರು, ಎಣಿಕೆ ಕೇಂದ್ರದಿಂದ ಯಾರೂ ಹೊರಬರಬೇಡಿ ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಅವರು ತಮ್ಮ ವೀಡಿಯೋದಲ್ಲಿ ನಮ್ಮ ಎಲ್ಲಾ ಮತ ಎಣಿಕೆ ಏಜೆಂಟ್‌ಗಳು ಮತ್ತು ಅಭ್ಯರ್ಥಿಗಳಲ್ಲಿ ನನ್ನದೊಂದು ವಿನಂತಿ, ಯಾರೂ ಎಣಿಕೆ ಕೇಂದ್ರದಿಂದ ಹೊರಬರಬೇಡಿ. ಇದು ಬಿಜೆಪಿಯ ಯೋಜನೆಯಾಗಿದೆ. ನಿನ್ನೆಯಿಂದಲೇ ನಾನು ಹೇಳುತ್ತಿದ್ದಂತೆ, ಅವರು ಮೊದಲ ಎರಡು-ಮೂರು ಸುತ್ತುಗಳಲ್ಲಿ ತಮ್ಮ ಫಲಿತಾಂಶಗಳನ್ನು ಮೊದಲು ತೋರಿಸುತ್ತಾರೆ ಮತ್ತು ನಮ್ಮದನ್ನು ಆಮೇಲೆ ತೋರಿಸುತ್ತಾರೆ. ಸುಮಾರು 100 ಕಡೆಗಳಲ್ಲಿ ಎರಡು-ಮೂರು ಸುತ್ತುಗಳ ನಂತರ ಎಣಿಕೆಯನ್ನು ನಿಲ್ಲಿಸಲಾಗಿದೆ. ಕೇಂದ್ರ ಪಡೆಗಳನ್ನು ಬಳಸಿ ತೃಣಮೂಲ ಕಾಂಗ್ರೆಸ್ ಅನ್ನು ಎಲ್ಲೆಡೆ ಹತ್ತಿಕ್ಕಲಾಗುತ್ತಿದೆ, ಕಚೇರಿಗಳನ್ನು ಧ್ವಂಸಗೊಳಿಸಲಾಗುತ್ತಿದೆ ಮತ್ತು ಬಲವಂತವಾಗಿ ವಶಪಡಿಸಿಕೊಳ್ಳಲಾಗುತ್ತಿದೆ ಅವರು ಸಂಪೂರ್ಣ ಸುಳ್ಳು ಸುದ್ದಿಗಳನ್ನು ಹರಡುತ್ತಿದ್ದಾರೆ. ನಾವು ಮುನ್ನಡೆಯಲ್ಲಿದ್ದರೂ ಅದನ್ನು ವರದಿ ಮಾಡುತ್ತಿಲ್ಲ. ಚುನಾವಣಾ ಆಯೋಗವು ಕೇಂದ್ರ ಪಡೆಗಳೊಂದಿಗೆ ಸೇರಿ ತನ್ನ ಇಚ್ಛೆಯಂತೆ ಆಡುತ್ತಿದೆ. ಆದ್ದರಿಂದ ನಮ್ಮ ಕಾರ್ಯಕರ್ತರು ಎದೆಗುಂದಬೇಡಿ. ಎಣಿಕೆಯ 14-18 ಸುತ್ತುಗಳು ಬಾಕಿ ಇವೆ. ಸೂರ್ಯ ಮುಳುಗಿದ ನಂತರ ನಾವು ಗೆಲ್ಲುತ್ತೇವೆ. ಹುಲಿ ಮರಿಗಳಂತೆ ಹೋರಾಡಿ ಎಂದು ಹೇಳಿದ್ದಾರೆ.