All posts by nagaraj11081993

CBSE ವಿದ್ಯಾರ್ಥಿಗಳು, ಪೋಷಕರು ನೋಡಲೇಬೇಕಾದ ಸ್ಟೋರಿ ಇದು

ಬೆಂಗಳೂರು, (ಫೆಬ್ರವರಿ 17): ಕೇಂದ್ರೀಯ ಮಾಧ್ಯಮಿಕ ಶಿಕ್ಷಣ ಮಂಡಳಿ (ಸಿಬಿಎಸ್‌ಇ) 2025-26ನೇ ಶೈಕ್ಷಣಿಕ ವರ್ಷದಿಂದ 10ನೇ ತರಗತಿಯ ವಿದ್ಯಾರ್ಥಿಗಳಿಗೆ ವಾರ್ಷಿಕವಾಗಿ ಎರಡು ಬಾರಿ ಬೋರ್ಡ್ ಪರೀಕ್ಷೆಗಳನ್ನು ನಡೆಸಲು ತೀರ್ಮಾನಿಸಿದೆ. ಈ ನಿರ್ಧಾರವು ರಾಷ್ಟ್ರೀಯ ಶಿಕ್ಷಣ ನೀತಿ (NEP) 2020ರ ಶಿಫಾರಸುಗಳಿಗೆ ಅನುಗುಣವಾಗಿದ್ದು, ಹೊಸ ನಿಯಮಗಳು 2026 ರಿಂದ ಜಾರಿಗೆ ಬರಲಿವೆ. ಎಲ್ಲಾ ವಿದ್ಯಾರ್ಥಿಗಳು ಸಹ ಮೊದಲ ಪರೀಕ್ಷೆ ಕಡ್ಡಾಯ ಅಂತಿದೆ ಸಿಬಿಎಸ್‌ಇ. ಹಾಗಾದ್ರೆ, ಏನು ಹೇಳುತ್ತಿದೆ ಸಿಬಿಎಸ್‌ಇ? ಈ ಬಗ್ಗೆ ಪೋಷಕರು ಹಾಗೂ ವಿದ್ಯಾರ್ಥಿಗಳಿಗಾಗಿ ಮಾಹಿತಿ ಇಲ್ಲಿದೆ ನೋಡಿ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಬದರಿನಾಥ, ಕೇದಾರನಾಥ ದೇವಾಲಯಗಳ ಬಳಿ ಮೊಬೈಲ್ ಬಳಕೆ ನಿಷೇಧ; ಚಾರ್ ಧಾಮ್ ಯಾತ್ರೆ ವೇಳೆ ರೀಲ್ಸ್​ ಮಾಡುವಂತಿಲ್ಲ – Kannada News | Mobiles banned near Badrinath Kedarnath temples reels and videos restricted during Char Dham Yatra

ನವದೆಹಲಿ, ಫೆಬ್ರವರಿ 17: ಚಾರ್ ಧಾಮ್ ಯಾತ್ರೆ 2026ರ ಸಮಯದಲ್ಲಿ ಬದರಿನಾಥ ಮತ್ತು ಕೇದಾರನಾಥ ದೇವಾಲಯಗಳ 70 ಮೀಟರ್ ಒಳಗೆ ಮೊಬೈಲ್ ಫೋನ್‌ಗಳನ್ನು ನಿಷೇಧಿಸಲಾಗುವುದು. ಚಾರ್ ಧಾಮ್ ಯಾತ್ರೆ (Char Dham Yatra) 2026ಕ್ಕೆ ಮುಂಚಿತವಾಗಿ ಬದರಿನಾಥ, ಕೇದಾರನಾಥ ದೇವಾಲಯ ಸಮಿತಿ (BKTC) ಬದರಿನಾಥ ಮತ್ತು ಕೇದಾರನಾಥ ದೇವಾಲಯ ಸಂಕೀರ್ಣಗಳ 70 ಮೀಟರ್ ವ್ಯಾಪ್ತಿಯಲ್ಲಿ ಮೊಬೈಲ್ ಫೋನ್‌ಗಳ ಮೇಲೆ ಸಂಪೂರ್ಣ ನಿಷೇಧವನ್ನು ಘೋಷಿಸಿದೆ. ಭಕ್ತರಿಗೆ ದೇವಾಲಯಗಳ ಬಳಿ ರೀಲ್‌ಗಳು ಅಥವಾ ವೀಡಿಯೊಗಳನ್ನು ಮಾಡಲು ಅನುಮತಿ ನೀಡುವುದಿಲ್ಲ.

ದೇವಾಲಯಗಳ ಪಾವಿತ್ರ್ಯವನ್ನು ಕಾಪಾಡಿಕೊಳ್ಳಲು ಮತ್ತು ಯಾತ್ರಿಕರಿಗೆ ಸುಗಮ ದರ್ಶನ ವ್ಯವಸ್ಥೆಗಳನ್ನು ನೀಡಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು BKTC ಅಧ್ಯಕ್ಷ ಹೇಮಂತ್ ದ್ವಿವೇದಿ ಹೇಳಿದ್ದಾರೆ. “ಭಕ್ತರ ನಂಬಿಕೆ, ಸುರಕ್ಷತೆ ಮತ್ತು ಘನತೆಯನ್ನು ಗಮನದಲ್ಲಿಟ್ಟುಕೊಂಡು, ದೇವಾಲಯದ ಆವರಣದ ಬಳಿ ಮೊಬೈಲ್ ಫೋನ್‌ಗಳು ಮತ್ತು ವೀಡಿಯೊ ಚಿತ್ರೀಕರಣವನ್ನು ನಿಷೇಧಿಸಲಾಗುವುದು. ಇದು ಚಾರ್ ಧಾಮದ ಆಧ್ಯಾತ್ಮಿಕ ವಾತಾವರಣವನ್ನು ಕಾಪಾಡಲು ಸಹಾಯ ಮಾಡುತ್ತದೆ” ಎಂದು ಅವರು ವಿವರಿಸಿದ್ದಾರೆ.

ಇದನ್ನೂ ಓದಿ: ಬದರಿನಾಥ-ಕೇದಾರನಾಥ ದೇವಾಲಯಕ್ಕೆ ಹಿಂದೂಗಳಲ್ಲದವರಿಗೆ ಪ್ರವೇಶ ನಿಷೇಧ

ರೀಲ್‌ಗಳು ಮತ್ತು ವಿಡಿಯೋಗಳನ್ನು ನಿಲ್ಲಿಸುವುದರ ಬಗ್ಗೆ ಮಾತ್ರವಲ್ಲದೆ ದೇವಾಲಯ ಸಂಕೀರ್ಣದೊಳಗಿನ ಜನಸಂದಣಿ ಮತ್ತು ಗೊಂದಲಗಳನ್ನು ಕಡಿಮೆ ಮಾಡುವ ಬಗ್ಗೆಯೂ ಆಗಿದೆ ಎಂದು ದೇವಾಲಯ ಸಮಿತಿ ಹೇಳಿದೆ. ಯಾತ್ರಿಕರು ಫೋಟೋ ತೆಗೆಯುವುದಕ್ಕಿಂತ ಹೆಚ್ಚಾಗಿ ಪ್ರಾರ್ಥನೆ ಮತ್ತು ಭಕ್ತಿಯ ಮೇಲೆ ತಮ್ಮ ಮನಸನ್ನು ಕೇಂದ್ರೀಕರಿಸಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಚಾರ್ ಧಾಮ ಯಾತ್ರೆಗೆ ಮುಂಚಿತವಾಗಿ ಯಾತ್ರಿಕರ ಅನುಕೂಲಕ್ಕಾಗಿ ಎಲ್ಲಾ ದೇವಾಲಯ ಸಮಿತಿಯ ವಿಶ್ರಾಂತಿ ಗೃಹಗಳನ್ನು ನವೀಕರಿಸಲಾಗುವುದು. ನೈರ್ಮಲ್ಯ, ಕುಡಿಯುವ ನೀರು, ವಿದ್ಯುತ್ ಮತ್ತು ಶೌಚಾಲಯಗಳ ವ್ಯವಸ್ಥೆಗಳನ್ನು ಬಲಪಡಿಸಲಾಗುತ್ತಿದೆ. ಈ ಸುಧಾರಣೆಗಳಿಗಾಗಿ ಮಂಡಳಿಯ ಸಭೆ ಶೀಘ್ರದಲ್ಲೇ ಬಜೆಟ್ ನಿಬಂಧನೆಗಳನ್ನು ಅಂತಿಮಗೊಳಿಸಲಿದೆ. ಯಾತ್ರಿಕರು ಎಲ್ಲಾ ಅಗತ್ಯ ಸೌಲಭ್ಯಗಳನ್ನು ಪಡೆಯಬಹುದು. ಇದು ಅವರ ಆಧ್ಯಾತ್ಮಿಕ ಪ್ರಯಾಣವನ್ನು ಆರಾಮದಾಯಕ ಮತ್ತು ಗೌರವಯುತವಾಗಿಸುತ್ತದೆ ಎಂದು ಸಮಿತಿ ಭರವಸೆ ನೀಡಿತು.

ಇದನ್ನೂ ಓದಿ: Char Dham Yatra: ಚಾರ್​ಧಾಮ್ ಯಾತ್ರೆಗೆ ಭೂಕುಸಿತದ ಆತಂಕ; ಬದರಿನಾಥದ ಹೆದ್ದಾರಿಯಲ್ಲಿ ಬಿರುಕು

ಚಾರ್‌ಧಾಮ್ ಯಾತ್ರೆಗೆ ಪ್ರತಿ ವರ್ಷ ಲಕ್ಷಾಂತರ ಭಕ್ತರು ಆಗಮಿಸುವುದರಿಂದ ಬದರಿನಾಥ ಮತ್ತು ಕೇದಾರನಾಥ ದೇವಾಲಯಗಳ ಬಳಿ ಮೊಬೈಲ್ ನಿಷೇಧವು ಯಾತ್ರಿಕರಿಗೆ ಸುರಕ್ಷತೆ ಮತ್ತು ಸುವ್ಯವಸ್ಥೆಯನ್ನು ನೀಡುವ ಜೊತೆಗೆ ಆಧ್ಯಾತ್ಮಿಕ ಅನುಭವವನ್ನು ಹೆಚ್ಚಿಸುತ್ತದೆ ಎನ್ನಲಾಗಿದೆ.

ಭಕ್ತರು ದರ್ಶನಕ್ಕಾಗಿ ದೇವಾಲಯವನ್ನು ಪ್ರವೇಶಿಸುವ ಮೊದಲು ತಮ್ಮ ಮೊಬೈಲ್ ಫೋನ್‌ಗಳು ಮತ್ತು ಕ್ಯಾಮೆರಾಗಳನ್ನು ಹೊರಗೆ ಇಡಬೇಕು. ದೇವಾಲಯದಿಂದ ಹೊರಬಂದ ನಂತರ ಅವರು ತಮ್ಮ ಫೋಟೋಗಳು ಮತ್ತು ವೀಡಿಯೊಗಳನ್ನು ದೇವಾಲಯದ ಹೊರಗೆ ತೆಗೆದುಕೊಳ್ಳಬಹುದು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Source link

SSLC, PUC ಪರೀಕ್ಷಾ ವೇಳಾಪಟ್ಟಿ ಪ್ರಕಟ: ಇಲ್ಲಿದೆ ಪರೀಕ್ಷೆ ಶುರುವಾಗುವ ಸಮಯ ವಿವರ – Kannada News | Minister Madhu Bangarappa Announces Karnataka SSLC And Second PUC Exams Time Table 2026

ಬೆಂಗಳೂರು, (ಫೆಬ್ರವರಿ 17): ಇದೇ ಫೆಬ್ರವರಿ 28ರಿಂದ ಮಾರ್ಚ್‌ 17ರ ವರೆಗೆ ದ್ವಿತೀಯ ಪಿಯುಸಿ (2nd PUC Exmas) ಹಾಗೂ ಮಾರ್ಚ್‌ 18 ರಿಂದ ಏಪ್ರಿಲ್‌ 2 ರ ವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು (SSLC Exams 2026) ನಡೆಯಲಿವೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ವೇಳಾಪಟ್ಟಿಯನ್ನು ಪ್ರಕಟಿಸಿದ್ದಾರೆ. ಬೆಂಗಳೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವರು, ಫೆ.28 ರಿಂದ ದ್ವಿತೀಯ ಪಿಯುಸಿ ಪರೀಕ್ಷೆ, ಮಾ. 18 ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ನಡೆಯಲಿದೆ. ದ್ವಿತೀಯ ಪಿಯುಸಿ ಪರೀಕ್ಷೆಗಳು ಪ್ರತಿದಿನ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆವರೆಗೆ ನಡೆದರೆ, ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬೆಳಗ್ಗೆ 10 ರಿಂದ ಮಧ್ಯಾಹ್ನ 1:15 ಗಂಟೆ ವರೆಗೆ ನಡೆಯಲಿದೆ ಎಂದು ತಿಳಿಸಿದರು.

ದ್ವಿತೀಯ ಪಿಯುಸಿ ಪರೀಕ್ಷೆಗೆ ಒಟ್ಟು 7,10,363 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು, ಪೈಕಿ 6,46,801 ಹೊಸಬರು, 50,540 ಪುನರಾವರ್ತಿತ ವಿದ್ಯಾರ್ಥಿಗಳು ಹಾಗೂ 13,022 ಖಾಸಗಿ ಅಭ್ಯರ್ಥಿಗಳು ಪಿಯು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದಾರೆ. ಇನ್ನು ರಾಜ್ಯಾದ್ಯಂತ ಒಟ್ಟು 1217 ದ್ವಿತೀಯ ಪಿಯು ಪರೀಕ್ಷೆ ಕೇಂದ್ರಗಳನ್ನು ತೆರೆಯಲಾಗಿದ್ದು, ಏಪ್ರಿಲ್ 7ರಂದು ದ್ವಿತೀಯ ಪಿಯು ಫಲಿತಾಂಶ ಪ್ರಕಟಿಸುವ ಸಾಧ್ಯತೆ ಇದೆ ಎಂದು ಮಾಹಿತಿ ನೀಡಿದರು.

ಇದನ್ನೂ ಓದಿ: 1ರಿಂದ 12ನೇ ತರಗತಿ ವಿದ್ಯಾರ್ಥಿಗಳಿಗೆ ಗುಡ್​ ನ್ಯೂಸ್, ಪೋಷಕರ ಹೊರೆ ಇಳಿಸಿದ ಸರ್ಕಾರ

ಎಸ್​​ಎಸ್​​ಎಲ್​ಸಿ ಪರೀಕ್ಷಾ ವೇಳಾಪಟ್ಟಿ: ಮೇ 18ರಿಂದ ಆರಂಭವಾಗಲಿರುವ ಎಸ್​ಎಲ್​ಎಲ್​ಸಿ ಪರೀಕ್ಷೆ-2; ಮೇ 18ರಂದು ಪ್ರಥಮ ಭಾಷೆ, ಮೇ 19ರಂದು ವಿಜ್ಞಾನ, ಮೇ 20ರಂದು ದ್ವೀತಿಯ ಭಾಷೆ, ಮೇ 21ರಂದು ಗಣಿತ, ಮೇ 22ರಂದು ತೃತೀಯ ಭಾಷೆ, ಮೇ 23ರಂದು ಸಮಾಜ ವಿಜ್ಞಾನ ಪರೀಕ್ಷೆ ನಡೆಯಲಿದೆ.

ಪಿಯುಸಿ ಪರೀಕ್ಷೆ 1 ವೇಳಾಪಟ್ಟಿ

  • ಫೆಬ್ರವರಿ 28- ಕನ್ನಡ, ಅರೇಬಿಕ್
  • ಮಾರ್ಚ್ 2- ಭೂಗೋಳ ಶಾಸ್ತ್ರ, ಸಂಖ್ಯಾಶಾಸ್ತ್ರ, ಮನಃಶಾಸ್ತ್ರ
  • ಮಾರ್ಚ್ 3- ಇಂಗ್ಲಿಷ್
  • ಮಾರ್ಚ್ 4- ತಮಿಳು,ತೆಲುಗು,ಮಲಯಾಳಂ, ಮರಾಠಿ,ಉರ್ದು,ಸಂಸ್ಕೃತ ಫ್ರೆಂಚ್.
  • ಮಾರ್ಚ್ 5- ಇತಿಹಾಸ
  • ಮಾರ್ಚ್ 6- ಭೌತಶಾಸ್ತ್ರ
  • ಮಾರ್ಚ್ 7- ಐಚ್ಛಿಕ ಕನ್ನಡ, ವ್ಯವಹಾರ ಅಧ್ಯಯನ,ಭೂಗರ್ಭ ಶಾಸ್ತ್ರ.
  • ಮಾರ್ಚ್ 9- ರಸಾಯನಶಾಸ್ತ್ರ, ಶಿಕ್ಷಣಶಾಸ್ತ್ರ, ಮೂಲ ಗಣಿತ
  • ಮಾರ್ಚ್ 10- ಅರ್ಥಶಾಸ್ತ್ರ
  • ಮಾರ್ಚ್ 11- ತರ್ಕಶಾಸ್ತ್ರ,ವಿದ್ಯುನ್ಮಾನಶಾಸ್ತ್ರ,ಗೃಹ ವಿಜ್ಞಾನ
  • ಮಾರ್ಚ್ 12- ಹಿಂದಿ
  • ಮಾರ್ಚ್ 13- ರಾಜ್ಯಶಾಸ್ತ್ರ
  • ಮಾರ್ಚ್ 14- ಲೆಕ್ಕಶಾಸ್ತ್ರ, ಗಣಿತ
  • ಮಾರ್ಚ್ 16- ಸಮಾಜಶಾಸ್ತ್ರ,ಜೀವಶಾಸ್ತ್ರ,ಗಣಕ ವಿಜ್ಞಾನ.
  • ಮಾರ್ಚ್ 17- ಹಿಂದುಸ್ತಾನಿ, ಸಂಗೀತ, ರೀಟೇಲ್ ಆಟೋಮೊಬೈಲ್, ಆರೋಗ್ಯ ರಕ್ಷಣೆ

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಏಕಾಏಕಿ ಆಸ್ಪತ್ರೆಗೆ ದಾಖಲಾದ ಸಲೀಮ್ ಖಾನ್; ಆಸ್ಪತ್ರೆಗೆ ದೌಡಾಯಿಸಿದ ಸಲ್ಮಾನ್ ಖಾನ್ – Kannada News | Salim Khan Hospitalized: Salman Khan’s Father Admitted to Leelavati, Health Update Awaited

ಹಿರಿಯ ಬರಹಗಾರ ಹಾಗೂ ನಟ ಸಲ್ಮಾನ್ ಖಾನ್ (SalmanKhan) ತಂದೆ ಸಲೀಮ್ ಖಾನ್ ಅವರು ಮುಂಬೈನ ಲೀಲಾವತಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರಿಗೆ ಏನಾಗಿದೆ ಎಂಬುದರ ನಿಖರ ಮಾಹಿತಿ ಇನ್ನೂ ಲಭ್ಯವಾಗಿಲ್ಲ. ಈ ಮಧ್ಯೆ ಸಲ್ಮಾನ್ ಖಾನ್ ಅವರು ಆಸ್ಪತ್ರೆಗೆ ದೌಡಾಯಿಸಿದ್ದಾರೆ. ಭದ್ರತಾ ಸಿಬ್ಬಂದಿ ಜೊತೆ ಅವರು ಮುಂಜಾನೆಯೇ ಆಸ್ಪತ್ರೆ ತಲುಪಿಸಿದ್ದಾರೆ. ಅವರು ಮಾಧ್ಯಮಗಳ ಜೊತೆ ಮಾತನಾಡಲು ನಿರಾಕರಿಸಿದ್ದಾರೆ.

ಸಲೀಮ್ ಖಾನ್ ಅವರನ್ನು ಇಂದು (ಫೆಬ್ರವರಿ 17) ಮುಂಜಾನೆ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ವರದಿ ಆಗಿದೆ. ಅವರನ್ನು ಮನೆಯಿಂದ ನೇರವಾಗಿ ಆಸ್ಪತ್ರೆಗೆ ಕರೆದುಕೊಂಡು ಬರಲಾಗಿದೆಯಂತೆ. ಸಲೀಮ್ ಖಾನ್ ಆರೋಗ್ಯದ ಬಗ್ಗೆ ಅಭಿಮಾನಿಗಳು ಸಾಕಷ್ಟು ಆತಂಕ ಹೊರಹಾಕಿದ್ದಾರೆ. ಅವರು ಬೇಗ ಚೇತರಿಕೆ ಕಾಣಲಿ ಎಂದು ಫ್ಯಾನ್ಸ್ ಬಯಸುತ್ತಿದ್ದಾರೆ. ಸದ್ಯ ಅವರನ್ನು ಐಸಿಯುನಲ್ಲಿ ಇಟ್ಟು ಚಿಕಿತ್ಸೆ ಮುಂದುವರಿಸಲಾಗಿದೆ.

ಸಲ್ಮಾನ್ ಅವರಿಗೆ ಸಲೀಮ್ ಖಾನ್ ಅವರನ್ನು ಕಂಡರೆ ಅಪಾರ ಗೌರವ ಹಾಗೂ ಪ್ರೀತಿ. ಅವರ ಪ್ರತಿ ಹಂತದಲ್ಲೂ ಸಲೀಮ್ ಖಾನ್ ಬೆಂಬಲವಾಗಿ ನಿಂತಿದ್ದರು. ಈ ಕಾರಣದಿಂದಲೇ ಈ ಹಂತಕ್ಕೆ ತಾವು ಬೆಳೆದು ನಿಂತಿದ್ದು ಎಂಬ ನಂಬಿಕೆ ಸಲ್ಮಾನ್ ಖಾನ್ ಅವರದ್ದು.

ಸಲೀಮ್ ಖಾನ್ ಅವರು ಜಾವೇದ್ ಜೊತೆ ಸೇರಿ ಅದ್ಭುತ ಕಥೆಗಳನ್ನು ಬರೆಯುತ್ತಿದ್ದರು. 70ರ ದಶಕದಲ್ಲಿ ಈ ಜೋಡಿ ಸಾಕಷ್ಟು ಸೂಪರ್ ಹಿಟ್ ಚಿತ್ರಗಳನ್ನು ನೀಡಿದೆ. ‘ಶೋಲೆ’ ಈ ಜೋಡಿ ಕೊಟ್ಟ ಅದ್ಭುತ ಸಿನಿಮಾಗಳಲ್ಲಿ ಒಂದು. ‘ದೀವಾರ್’, ‘ಝಂಜೀರ್’, ‘ಡಾನ್’ ಸಿನಿಮಾಗಳಿಗೂ ಇವರು ಕಥೆ ಬರೆದಿದ್ದಾರೆ. ಸಲೀಮ್ ಖಾನ್ ಅವರಿಗೆ ಕನ್ನಡದ ನಂಟು ಕೂಡ ಇದೆ. 1976ರಲ್ಲಿ ಬಂದ ‘ಪ್ರೇಮದ ಕಾಣಿಕೆ’ ಹಾಗೂ ‘ರಾಜ ನನ್ನ ರಾಜ’ ಸಿನಿಮಾಗಳಿಗೆ ಸಲೀಮ್ ಹಾಗೂ ಜಾವೇದ್ ಅವರೇ ಕಥೆ ನೀಡಿದರು. ಈ ಎರಡೂ ಸಿನಿಮಾಗಳು ಹಿಟ್ ಆದವು.

ಇದನ್ನೂ ಓದಿ: ಸಲ್ಮಾನ್ ಖಾನ್​​ಗೆ ಇಷ್ಟ ಆಯ್ತು ಸಾನ್ವಿ ಸುದೀಪ್ ಕಂಠ; ಮೆಚ್ಚುಗೆ ಸೂಚಿಸಿದ ನಟ

ಸಲೀಮ್ ಖಾನ್ ಅವರಿಗೆ ಈಗ 90ನೇ ವರ್ಷ. ಈ ವಯಸ್ಸಿನಲ್ಲಿ ಅನಾರೋಗ್ಯ ಕಾಡಿರುವುದರಿಂದ ಅಭಿಮಾನಿಗಳಿಗೆ ಆತಂಕ ಶುರುವಾಗಿದೆ. ಈ ಬಗ್ಗೆ ಆಸ್ಪತ್ರೆ ಕಡೆಯಿಂದ ಅಧಿಕೃತ ಮಾಹಿತಿ ಇನ್ನಷ್ಟೇ ಹೊರಬೀಳಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಬೈಕ್​​ ಗುದ್ದಿದ ರಭಸಕ್ಕೆ ಹಾರಿಬಿದ್ದು ಯುವತಿ ಸಾವು: ಎದೆ ಝಲ್​​ ಎನಿಸೋ ದೃಶ್ಯ ಇಲ್ಲಿದೆ – Kannada News | Bengaluru bike accident claims life of 26 year old woman

ಬೆಂಗಳೂರು, ಫೆಬ್ರವರಿ 17: ರಸ್ತೆ ದಾಟುತ್ತಿದ್ದ ಯುವತಿಗೆ ವೇಗವಾಗಿ ಬಂದ ಬೈಕ್​​ ಡಿಕ್ಕಿಯಾದ ಪರಿಣಾಮ ಮೃತಪಟ್ಟಿರುವ ಘಟನೆ ಬೆಂಗಳೂರಿನ ರಾಜಾಜಿನಗರದಲ್ಲಿ ನಡೆದಿದೆ. ಯೋಗೇಶ್ವರಿ (26) ಮೃತ ದುರ್ದೈವಿ. ರಾಜಾಜಿನಗರದ HDFC ಬ್ಯಾಂಕ್ ಹೋಮ್ ಲೋನ್ ವಿಭಾಗದಲ್ಲಿ ಉದ್ಯೋಗಿಯಾಗಿದ್ದ ಯೋಗೇಶ್ವರಿ, ಮಧ್ಯಾಹ್ನ ಊಟ ತರಲು ಹೋಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.  ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಅವರನ್ನು ಕೂಡಲೇ ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ. ರಾಜಾಜಿನಗರ ಪೊಲೀಸ್ ಠಾಣೆಯಲ್ಲಿ ಬೈಕ್ ಸವಾರನ ವಿರುದ್ಧ ಎಫ್‌ಐಆರ್ ದಾಖಲಾಗಿದ್ದು, ಘಟನೆಗೆ ಬಗ್ಗೆ ತನಿಖೆ ನಡೆಯುತ್ತಿದೆ.

ವರದಿ: ನಟರಾಜ್​​, ಟಿವಿ9 ಬೆಂಗಳೂರು

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

ಮೊದಲೇ ಪ್ರಕಟವಾಗುವ ಪಿಯುಸಿ ಇಂಟರ್​​​ನಲ್ ಮಾರ್ಕ್ಸ್​​ ಎಲ್ಲಿ? ಹೇಗೆ ನೋಡಬೇಕು? ಇಲ್ಲಿದೆ ವಿವರ – Kannada News | How And Where Checking 2nd puc internal marks, here Is Details

ಬೆಂಗಳೂರು, (ಫೆಬ್ರವರಿ 17): ಇದೇ ಫೆಬ್ರವರಿ 28ರಿಂದ ಮಾರ್ಚ್‌ 17ರ ವರೆಗೆ ದ್ವಿತೀಯ ಪಿಯುಸಿ (2nd PUC Exmas) ಹಾಗೂ ಮಾರ್ಚ್‌ 18 ರಿಂದ ಏಪ್ರಿಲ್‌ 2 ರ ವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು (SSLC Exams 2026) ನಡೆಯಲಿವೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ವೇಳಾಪಟ್ಟಿಯನ್ನು ಪ್ರಕಟಿಸಿದ್ದಾರೆ. ಬೆಂಗಳೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವರು, ಫೆ.28 ರಿಂದ ದ್ವಿತೀಯ ಪಿಯುಸಿ ಪರೀಕ್ಷೆ, ಮಾ. 18 ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ನಡೆಯಲಿದೆ. ದ್ವಿತೀಯ ಪಿಯುಸಿ ಪರೀಕ್ಷೆಗಳು ಪ್ರತಿದಿನ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆವರೆಗೆ ನಡೆದರೆ, ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬೆಳಗ್ಗೆ 10 ರಿಂದ ಮಧ್ಯಾಹ್ನ 1:15 ಗಂಟೆ ವರೆಗೆ ನಡೆಯಲಿದೆ ಎಂದು ತಿಳಿಸಿದರು.

ಇನ್ನು ಇದರ ಮಧ್ಯೆ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿಯೊಂದು ಸಿಕ್ಕಿದೆ. ಹೌದು…ಇಂಟರ್​​​​ನಲ್ ಮಾರ್ಕಸ್ ಮೊದಲೇ ಪ್ರಕಟವಾಗುತ್ತಂತೆ. ಹಾಗಾದ್ರೆ, ಅಂಕ ಎಲ್ಲಿ ಮತ್ತು ಹೇಗೆ ವೀಕ್ಷಿಸಬೇಕು ಎನ್ನುವ ಸಂಪೂರ್ಣ ವಿವರ ಇಲ್ಲಿದೆ ನೋಡಿ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಚಾಮರಾಜನಗರ: ತನಗೆ ತಾನೇ ಬೆಂಕಿ ಹಚ್ಚಿಕೊಂಡ ಕುಡುಕ! ಮುಂದೇನಾಯ್ತು ನೋಡಿ – Kannada News | Kollegala Incident: Drunk Man Sets Self on Fire in Chamarajanagar, Rushed to Hospital

ಚಾಮರಾಜನಗರ, ಫೆ.17: ಕುಡುಕನೊಬ್ಬ ತನಗೆ ತಾನೇ ಬೆಂಕಿ ಹಚ್ಚಿಕೊಂಡ ಘಟನೆಯೊಂದು ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲೂಕಿನ ಬಸ್ತಿಪುರದಲ್ಲಿ ನಡೆದಿದೆ. ಆನಂದ್ (45) ಎಂಬ ವ್ಯಕ್ತಿ ಬೆಂಕಿ ಹಚ್ಚಿಕೊಂಡು ಹುಚ್ಚಾಟ ಮೆರೆದಿದ್ದಾನೆ. ಬಸ್ತಿಪುರ ಗ್ರಾಮದ ಕಾಲುವೆ ಬಳಿ ಕಂಠಪೂರ್ತಿ ಕುಡಿದು ರಂಪಾಟ ಮಾಡಿದ್ದಾನೆ. ಮದ್ಯದ ಅಮಲಿನಲ್ಲಿ ರಂಪಾಟ ಶುರು ಮಾಡಿದ್ದಾರೆ. ಅದೇನಾಯಿತೋ ತಿಳಿಯದು, ಇದ್ದಕ್ಕಿದ್ದಂತೆ ತನ್ನ ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದಾನೆ.

ಮೈಗೆ ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ಗಾಬರಿಗೊಂಡ ಆತ ತಕ್ಷಣ ಪಕ್ಕದಲ್ಲಿದ್ದ ಕಾಲುವೆಗೆ ಹಾರಿದ್ದಾನೆ. ಇದರಿಂದ ಗಂಭೀರವಾಗಿ ಗಾಯಗೊಂಡಿದ್ದಾನೆ. ಗಾಯಗೊಂಡ ಆನಂದ್ ಅವರನ್ನು ತಕ್ಷಣವೇ ಕೊಳ್ಳೇಗಾಲದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ನೀಡಲಾಯಿತು. ಆದರೆ ಗಾಯದ ತೀವ್ರತೆ ಹೆಚ್ಚಿದ್ದರಿಂದ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಕೆ.ಆರ್. ಆಸ್ಪತ್ರೆಗೆ ರವಾನಿಸಲಾಗಿದೆ. ಘಟನಾ ಸ್ಥಳಕ್ಕೆ ಕೊಳ್ಳೇಗಾಲ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈತ ಆತ್ಮಹತ್ಯೆಗೆ ಯತ್ನಿಸಿದನೇ ಅಥವಾ ಕೇವಲ ಕುಡಿತದ ಅಮಲಿನಲ್ಲಿ ಈ ರೀತಿ ಮಾಡಿದನೇ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಬೆಂಗಳೂರು ಪೊಲೀಸರ ಭರ್ಜರಿ ಬೇಟೆ: 1.5 ಕೋಟಿ ಮೌಲ್ಯದ ಡ್ರಗ್ಸ್ ವಶಕ್ಕೆ

ಬಾಗಲಕೋಟೆಯಲ್ಲಿ ಪ್ರತ್ಯೇಕ ಘಟನೆ:

ಕೃಷಿಗಾಗಿ ಮಾಡಿದ ಸಾಲವನ್ನು ತೀರಿಸಲಾಗದೆ ಕಂಗಾಲಾದ ರೈತನೊಬ್ಬ ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಬೀಳಗಿ ತಾಲೂಕಿನ ಕೊರ್ತಿ ಪುನರ್ವಸತಿ ಕೇಂದ್ರದಲ್ಲಿ ನಡೆದಿದೆ. ಕೊರ್ತಿ ನಿವಾಸಿ ಮಾದೇವಯ್ಯ ಹಿರೇಮಠ (39) ಎಂಬುವವರೇ ಸಾಲದ ಸುಳಿಗೆ ಸಿಲುಕಿ ಪ್ರಾಣ ಕಳೆದುಕೊಂಡಿದ್ದಾರೆ. ಮಾದೇವಯ್ಯ ಅವರು ಕೃಷಿ ಚಟುವಟಿಕೆಗಳಿಗಾಗಿ ವಿವಿಧ ಬ್ಯಾಂಕ್‌ಗಳಲ್ಲಿ ಸಾಲ ಮಾಡಿದ್ದರು. ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಮತ್ತು ಇಂಡಿಯನ್ ಬ್ಯಾಂಕ್ ಸೇರಿ ಒಟ್ಟು 4 ಲಕ್ಷದ 80 ಸಾವಿರ ರೂಪಾಯಿ ಸಾಲ ಹೊಂದಿದ್ದರು ಎನ್ನಲಾಗಿದೆ. ಕಳೆದ ಕೆಲವು ಸಮಯದಿಂದ ಕೃಷಿಯಲ್ಲಿ ನಿರೀಕ್ಷಿತ ಆದಾಯ ಬಾರದೆ ಮತ್ತು ಬೆಳೆದ ಬೆಳೆಗೆ ಸೂಕ್ತ ಬೆಲೆ ಸಿಗದ ಕಾರಣ, ಸಾಲ ತೀರಿಸುವುದು ಹೇಗೆ ಎಂಬ ಚಿಂತೆಯಲ್ಲಿದ್ದರು. ಇದೇ ಮನಸ್ಥಾಪದಲ್ಲಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ವರದಿ: ಸೂರಜ್​​ ಪ್ರಸಾದ್, ರವಿ ಮೂಕಿ

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ದೃಷ್ಟಿ ಕಳೆದುಕೊಂಡ ಇಮ್ರಾನ್ ಖಾನ್: ಸೂಕ್ತ ಚಿಕಿತ್ಸೆ ನೀಡುವಂತೆ ಪಾಕ್ ಸರ್ಕಾರಕ್ಕೆ ಕಪಿಲ್ ದೇವ್, ಸುನಿಲ್ ಗವಾಸ್ಕರ್ ಮನವಿ – Kannada News | Imran Khan’s Failing Eyesight in Jail: Cricket Legends Appeal Pakistan Govt for Treatment

ಇಮ್ರಾನ್ ಖಾನ್-ಕಪಿಲ್ ದೇವ್ Image Credit source: India Today

ಇಸ್ಲಾಮಾಬಾದ್, ಫೆಬ್ರವರಿ 17: ಭ್ರಷ್ಟಾಚಾರ ಆರೋಪದಲ್ಲಿ ಅಡಿಯಾಲ ಜೈಲಿನಲ್ಲಿರುವ ಪಾಕ್ ಮಾಜಿ ಪ್ರಧಾನಿ ಇಮ್ರಾನ್​ ಖಾನ್(Imran Khan)​ಗೆ ಸೂಕ್ತ ಚಿಕಿತ್ಸೆ ನೀಡುವಂತೆ ಒತ್ತಾಯಿಸಿ ಪಾಕ್ ಸರ್ಕಾರಕ್ಕೆ ವಿಶ್ವ ಕ್ರಿಕೆಟ್​​ನ 14 ಮಾಜಿ ನಾಯಕರು ಪತ್ರ ಬರೆದಿದ್ದಾರೆ. ಇಮ್ರಾನ್ ಖಾನ್ ದೃಷ್ಟಿ ಕಳೆದುಕೊಂಡಿದ್ದು, ಸಮರ್ಪಕ ಚಿಕಿತ್ಸೆ ಒದಗಿಸುವಂತೆ ಕೋರಿ ಕಪಿಲ್ ದೇವ್, ಸುನಿಲ್ ಗವಾಸ್ಕರ್ ಸೇರಿ ಕ್ರಿಕೆಟ್ ತಂಡಗಳ ಹಲವು ಮಾಜಿ ನಾಯಕರು ಪತ್ರ ಬರೆದಿದ್ದಾರೆ.

ಅಕ್ಟೋಬರ್ 2025ರವರೆಗೆ ಇಮ್ರಾನ್ ಖಾನ್ ಅವರ ಎರಡೂ ಕಣ್ಣುಗಳ ದೃಷ್ಟಿ ಸಾಮಾನ್ಯವಾಗಿತ್ತು ಎಂದು ವೈದ್ಯಕೀಯ ವರದಿಗಳು ಹೇಳುತ್ತವೆ. ಅದರ ನಂತರ ಅವರ ದೃಷ್ಟಿ ಮಸುಕಾಗುತ್ತಿದೆ. ಇಮ್ರಾನ್ ಖಾನ್ ಜೈಲು ಆಡಳಿತಕ್ಕೆ ಹಲವಾರು ಬಾರು ದೂರು ನೀಡಿದ್ದರು. ಆದರೆ ಇದ್ದಕ್ಕಿದ್ದಂತೆ ಬಲಗಣ್ಣ ದೃಷ್ಟಿ ಹೋಗುತ್ತಾ ಬಂದಿದೆ ಎಂದು ತಿಳಿಸಿದ್ದಾರೆ.

ಪಾಕಿಸ್ತಾನದ ವೈದ್ಯಕೀಯ ವಿಜ್ಞಾನ ಸಂಸ್ಥೆಯ ನೇತ್ರಜ್ಞರು ಕಣ್ಣಿನಲ್ಲಿ ರಕ್ತ ಹೆಪ್ಪುಗಟ್ಟುವಿಕೆ ಆಗಿರುವುದನ್ನು ದೃಢಪಡಿಸಿದ್ದಾರೆ.ಇದರಿಂದಾಗಿ ಗಂಭೀರ ಹಾನಿಯಾಗಿದೆ. ಜನವರಿ 24ರಂದಿ ಪಿಮ್ಸ್​ ಆಸ್ಪತ್ರೆಯಲ್ಲಿ ನಡೆಸಲಾದ ವೈದ್ಯಕೀಯ ವಿಧಾನಗಳ ಮರುಪರೀಕ್ಷೆ ಕೋರಿಕೆಯನ್ನು ನ್ಯಾಯಾಲಯ ತಿರಸ್ಕರಿಸಿತ್ತು.

ಕ್ರಿಕೆಟ್ ತಂಡಗಳ ಮಾಜಿ ನಾಯಕರು ಪಾಕಿಸ್ತಾನ ಸರ್ಕಾರಕ್ಕೆ ಪತ್ರ ಬರೆದಿದ್ದು, 73 ವರ್ಷದ ಇಮ್ರಾನ್ ಖಾನ್ ಅವರ ಆರೋಗ್ಯದ ಬಗ್ಗೆ ಗಂಭೀರ ಕಳವಳ ವ್ಯಕ್ತಪಡಿಸಿದ್ದಾರೆ ಮತ್ತು ಜೈಲಿನಲ್ಲಿ ಅವರಿಗೆ ಉತ್ತಮ ಚಿಕಿತ್ಸೆ ನೀಡಬೇಕೆಂದು ಒತ್ತಾಯಿಸಿದ್ದಾರೆ.

ಮತ್ತಷ್ಟು ಓದಿ: ಶೇ.85ರಷ್ಟು ದೃಷ್ಟಿ ಕಳೆದುಕೊಂಡಿದ್ದಾರಂತೆ ಪಾಕ್ ಮಾಜಿ ಪ್ರಧಾನಿ ಇಮ್ರಾನ್​ ಖಾನ್, ಸುಪ್ರೀಂಕೋರ್ಟ್​​ನಲ್ಲಿ ಕಣ್ಣೀರಿಟ್ಟ ಸಹೋದರಿ

ಭಾರತದ ಮಾಜಿ ನಾಯಕರಾದ ಸುನಿಲ್ ಗವಾಸ್ಕರ್ ಮತ್ತು ಕಪಿಲ್ ದೇವ್, ಆಸ್ಟ್ರೇಲಿಯಾ ತಂಡದ ಮಾಜಿ ನಾಯಕ ಅಲನ್ ಬಾರ್ಡರ್, ಸ್ಟೀವ್ ವಾ, ಇಯಾನ್ ಚಾಪೆಲ್, ಬೆಲಿಂಡಾ ಕ್ಲಾರ್ಕ್ ಮತ್ತು ಕಿಮ್ ಹ್ಯೂಸ್ ಸೇರಿದಂತೆ ಹಲವರು ಮನವಿ ಮಾಡಿದ್ದಾರೆ.

ಇಂಗ್ಲೆಂಡ್‌ನ ಮೈಕ್ ಅಥರ್ಟನ್, ನಾಸರ್ ಹುಸೇನ್, ಮೈಕ್ ಬ್ರಿಯಾರ್ಲಿ ಮತ್ತು ಡೇವಿಡ್ ಗೋವರ್ ಕೂಡ ಅರ್ಜಿಗೆ ಸಹಿ ಹಾಕಿದ್ದಾರೆ, ಹಾಗೆಯೇ ವೆಸ್ಟ್ ಇಂಡೀಸ್‌ನ ದಿಗ್ಗಜ ಕ್ಲೈವ್ ಲಾಯ್ಡ್ ಮತ್ತು ನ್ಯೂಜಿಲೆಂಡ್‌ನ ಮಾಜಿ ನಾಯಕ ಜಾನ್ ರೈಟ್ ಕೂಡ ಅರ್ಜಿಗೆ ಸಹಿ ಹಾಕಿದ್ದಾರೆ.

ರಾವಲ್ಪಿಂಡಿಯ ಅಡಿಯಾಲಾ ಜೈಲಿನಲ್ಲಿ ಇಮ್ರಾನ್ ಖಾನ್ ಅವರ ಆರೋಗ್ಯ ಕ್ಷೀಣಿಸುತ್ತಿದೆ ಎಂಬ ವರದಿಗಳು ಬಂದ ನಂತರ ಆಸ್ಟ್ರೇಲಿಯಾದ ಮಾಜಿ ನಾಯಕ ಗ್ರೆಗ್ ಚಾಪೆಲ್ ಅರ್ಜಿ ಬರೆಯಲು ನಿರ್ಧರಿಸಿದ್ದರು. ಭ್ರಷ್ಟಾಚಾರ ಆರೋಪದ ಮೇಲೆ ಇಮ್ರಾನ್ ಎರಡು ವರ್ಷಗಳಿಗೂ ಹೆಚ್ಚು ಕಾಲ ಜೈಲಿನಲ್ಲಿದ್ದಾರೆ. ಇಮ್ರಾನ್ ಖಾನ್ ಅವರನ್ನು ನಡೆಸಿಕೊಂಡ ರೀತಿ ಬಗ್ಗೆ ಸುನಿಲ್ ಗವಾಸ್ಕರ್ ತೀವ್ರ ಕಳವಳ ವ್ಯಕ್ತಪಡಿಸಿದರು. ಪರಿಸ್ಥಿತಿ ಭಯಾನಕವಾಗಿದೆ ಮತ್ತು ಅವರ ಸಂಬಂಧವು ಮೈದಾನದಲ್ಲಿನ ಪೈಪೋಟಿಯನ್ನು ಮೀರಿದ್ದು ಎಂದು ಅವರು ಹೇಳಿದರು.

ಇಮ್ರಾನ್ ಖಾನ್ 1971ರಿಂದ 1992ರವರೆಗೂ ಪಾಕ್ ಕ್ರಿಕೆಟ್ ತಂಡದಲ್ಲಿ ಆಡಿದ್ದಾರೆ. 1987ರಲ್ಲಿ ವಿಶ್ವಕಪ್ ಅಂತ್ಯದಲ್ಲಿ ನಿವೃತ್ತಿ ಘೋಷಿಸಿದ್ದರು. 1988ರಲ್ಲಿ ಇವರನ್ನು ಮತ್ತೆ ತಂಡಕ್ಕೆ ಸೇರಲು ಕರೆತರಲಾಯಿತು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On – 3:00 pm, Tue, 17 February 26

Source link

ಡಚ್ಚರ ವಿರುದ್ಧದ ಪಂದ್ಯಕ್ಕೆ ಟೀಮ್ ಇಂಡಿಯಾದಲ್ಲಿ 2 ಬದಲಾವಣೆ ಖಚಿತ – Kannada News | India Playing XI For Netherlands

T20 World Cup 2026: ಟಿ20 ವಿಶ್ವಕಪ್​ನ 36ನೇ ಪಂದ್ಯದಲ್ಲಿ ಭಾರತ ಮತ್ತು ನೆದರ್​ಲೆಂಡ್ಸ್ ತಂಡಗಳು ಮುಖಾಮುಖಿಯಾಗಲಿದೆ. ಬುಧವಾರ (ಫೆ.18) ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಡಚ್ಚರ (ನೆದರ್​ಲೆಂಡ್ಸ್​) ವಿರುದ್ಧದ ಈ ಪಂದ್ಯಕ್ಕಾಗಿ ಟೀಮ್ ಇಂಡಿಯಾದಲ್ಲಿ 2 ಬದಲಾವಣೆ ಕಂಡು ಬರುವುದು ಬಹುತೇಕ ಖಚಿತ.

ಏಕೆಂದರೆ ಕಳೆದ ಎರಡು ಪಂದ್ಯಗಳಲ್ಲಿ ಕಣಕ್ಕಿಳಿದಿರುವ ಟೀಮ್ ಇಂಡಿಯಾ ವೇಗಿ ಜಸ್​ಪ್ರೀತ್ ಬುಮ್ರಾ ಈ ಪಂದ್ಯದಿಂದ ಹೊರಗುಳಿಯಲಿದ್ದಾರೆ. ಭಾರತ ತಂಡವು ಈಗಾಗಲೇ ಸೂಪರ್-8 ಹಂತಕ್ಕೇರಿರುವ ಕಾರಣ ಬುಮ್ರಾಗೆ ನಾಳಿನ ಪಂದ್ಯದ ವೇಳೆ ವಿಶ್ರಾಂತಿ ನೀಡುವ ಸಾಧ್ಯತೆ ಹೆಚ್ಚು.

ಇನ್ನು ಪಾಕಿಸ್ತಾನ್ ವಿರುದ್ಧದ ಪಂದ್ಯದಲ್ಲಿ ಕಣಕ್ಕಿಳಿದಿದ್ದ ಕುಲ್ದೀಪ್ ಯಾದವ್ ನೆದರ್​ಲೆಂಡ್ಸ್ ವಿರುದ್ಧದ ಕಣಕ್ಕಿಳಿಯುವ ಸಾಧ್ಯತೆಯಿಲ್ಲ. ಅವರ ಬದಲಿಗೆ ಎಡಗೈ ವೇಗಿ ಅರ್ಷದೀಪ್ ಸಿಂಗ್ ಮತ್ತೆ ಪ್ಲೇಯಿಂಗ್ ಇಲೆವೆನ್​ನಲ್ಲಿ ಕಾಣಿಸಿಕೊಳ್ಳುವುದು ಖಚಿತ ಎನ್ನಬಹುದು.

ಇತ್ತ ಬುಮ್ರಾ ಬದಲಿಗೆ ಮೊಹಮ್ಮದ್ ಸಿರಾಜ್ ಆಡುವ ಬಳಗದಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆಯಿದೆ. ಅದರಂತೆ ತನ್ನ ಕೊನೆಯ ಲೀಗ್ ಪಂದ್ಯದಲ್ಲಿ ಟೀಮ್ ಇಂಡಿಯಾ ಪರ ಆರಂಭಿಕರಾಗಿ ಅಭಿಷೇಕ್ ಶರ್ಮಾ ಹಾಗೂ ಇಶಾನ್ ಕಿಶನ್ ಇನಿಂಗ್ಸ್​ ಆರಂಭಿಸಲಿದ್ದಾರೆ.

ಇನ್ನು ಮೂರನೇ ಕ್ರಮಾಂಕದಲ್ಲಿ ತಿಲಕ್ ವರ್ಮಾ ಕಣಕ್ಕಿಳಿದರೆ, ನಾಲ್ಕನೇ ಕ್ರಮಾಂಕದಲ್ಲಿ ಸೂರ್ಯಕುಮಾರ್ ಯಾದವ್ ಬ್ಯಾಟ್ ಬೀಸಲಿದ್ದಾರೆ. ಇನ್ನುಳಿದ ಮೂರು ಕ್ರಮಾಂಕಗಳಲ್ಲಿ ಆಲ್​ರೌಂಡರ್​ಗಳಾಗಿ ಹಾರ್ದಿಕ್ ಪಾಂಡ್ಯ, ಶಿವಂ ದುಬೆ ಹಾಗೂ ಅಕ್ಷರ್ ಪಟೇಲ್ ಕಾಣಿಸಿಕೊಳ್ಳಲಿದ್ದಾರೆ. ಹಾಗೆಯೇ ಫಿನಿಶರ್ ಪಾತ್ರದಲ್ಲಿ ರಿಂಕು ಸಿಂಗ್ ಟೀಮ್ ಇಂಡಿಯಾ ಪರ ಕಣಕ್ಕಿಳಿಯಲಿದ್ದಾರೆ.

ಇನ್ನುಳಿದಂತೆ ವೇಗಿಗಳಾಗಿ ಮೊಹಮ್ಮದ್ ಸಿರಾಜ್ ಹಾಗೂ ಅರ್ಷದೀಪ್ ಸಿಂಗ್ ಕಾಣಿಸಿಕೊಂಡರೆ, ಸ್ಪಿನ್ನರ್ ಆಗಿ ವರುಣ್ ಚಕ್ರವರ್ತಿ ಆಡುವ ಬಳಗದಲ್ಲಿರಲಿದ್ದಾರೆ. ಅದರಂತೆ ಟೀಮ್ ಇಂಡಿಯಾದ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿರಲಿದೆ…

  • ಅಭಿಷೇಕ್ ಶರ್ಮಾ
  • ಇಶಾನ್ ಕಿಶನ್ (ವಿಕೇಟ್ ಕೀಪರ್)
  • ತಿಲಕ್ ವರ್ಮಾ
  • ಸೂರ್ಯಕುಮಾರ್ ಯಾದವ್ (ನಾಯಕ)
  • ಹಾರ್ದಿಕ್ ಪಾಂಡ್ಯ
  • ಶಿವಂ ದುಬೆ
  • ರಿಂಕು ಸಿಂಗ್
  • ಅಕ್ಷರ್ ಪಟೇಲ್
  • ವರುಣ್ ಚಕ್ರವರ್ತಿ
  • ಅರ್ಷದೀಪ್ ಸಿಂಗ್
  • ಮೊಹಮ್ಮದ್ ಸಿರಾಜ್.

ಇದನ್ನೂ ಓದಿ: W,W,W,W,W,W,W,W: ವಿಕೆಟ್ ಮೇಲೆ ವಿಕೆಟ್: ಶಮಿ ಬೆಂಕಿ ಬೌಲಿಂಗ್

ಭಾರತ ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಅಕ್ಷರ್ ಪಟೇಲ್ (ಉಪನಾಯಕ), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಜಸ್​ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ, ಮೊಹಮ್ಮದ್ ಸಿರಾಜ್, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಇಶಾನ್ ಕಿಶನ್ (ವಿಕೆಟ್ ಕೀಪರ್), ರಿಂಕು ಸಿಂಗ್.

Source link

ಪೊಲೀಸರ ಸೋಗಲ್ಲಿ ಉದ್ಯಮಿ ಮನೆಗೆ ನುಗ್ಗಿ 20 ಲಕ್ಷ ನಗದು, ಅರ್ಧ ಕೆಜಿ ಚಿನ್ನಾಭರಣ ದರೋಡೆ – Kannada News | Bengaluru Robbery: Gang Posing as Police Loots 20 Lakh Cash and Half Kg Gold from Businessman’s House

ಬೆಂಗಳೂರು, ಫೆಬ್ರವರಿ 17: ಪೊಲೀಸರ ಹೆಸರಲ್ಲಿ ಮನೆಗೆ ಎಂಟ್ರಿಕೊಟ್ಟ ಗ್ಯಾಂಗ್​​ ಒಂದು ರಿಯಲ್ ಎಸ್ಟೇಟ್ ಉದ್ಯಮಿ ಮನೆಯಿಂದ ಬರೋಬ್ಬರಿ 20 ಲಕ್ಷ ರೂಪಾಯಿ ನಗದು ಮತ್ತು ಸುಮಾರು ಅರ್ಧ ಕೆಜಿ ಚಿನ್ನಾಭರಣಗಳನ್ನು ದೋಚಿ ಪರಾರಿಯಾಗಿರುವ ಘಟನೆ ಬೆಂಗಳೂರಿನ ಬಿಇಎಲ್ ಲೇಔಟ್‌ನಲ್ಲಿ ನಡೆದಿದೆ. ನಾಲ್ಕು ಮಂದಿಯ ತಂಡ ಕೃತ್ಯ ಎಸಗಿದೆ ಎನ್ನಲಾಗಿದ್ದು, ಆರೋಪಿಗಳಿಗಾಗಿ ಪೊಲೀಸರು ಶೋಧ ಮುಂದುವರಿಸಿದ್ದಾರೆ. ಹೊಂಬಾಳೆಗೌಡ ಎಂಬವರ ಮನೆಯಲ್ಲಿ ನಿನ್ನೆ ಘಟನೆ ನಡೆದಿದೆ.

ಹೊಂಬಳೆಗೌಡ ಅವರು ಪತ್ನಿ ಮಂಗಳಮ್ಮ ಹಾಗೂ ಮೊಮ್ಮಕ್ಕಳೊಂದಿಗೆ ಮನೆಯಲ್ಲಿ ಇದ್ದ ವೇಳೆ ಪೊಲೀಸರಂತೆ ವೇಷಧರಿಸಿದ್ದ ಆರೋಪಿಗಳು ಮನೆಗೆ ಬಂದಿದ್ದಾರೆ. ತಾವು ಯಲಹಂಕ ಠಾಣೆಯಿಂದ ಬಂದಿದ್ದೇವೆ ಎಂದು ತಿಳಿಸಿದ್ದು, ಬ್ಯಾಗ್​​ ಮತ್ತು ಡೈರಿಯನ್ನೂ ಹಿಡಿದು ಬಂದಿದ್ದರು. ಹೀಗಾಗಿ ಆರಂಭದಲ್ಲಿ ಮನೆಯವರೂ ಆರೋಪಿಗಳ ಮಾತು ನಂಬಿದ್ದರು. ಆದರೆ ಬಳಿಕ ಆರೋಪಿಗಳು ವೃದ್ಧ ದಂಪತಿಯನ್ನು ಬಂದೂಕು ಮತ್ತು ಚಾಕುವಿನಿಂದ ಬೆದರಿಸಿ, ಅವರ ಕೈಕಾಲುಗಳನ್ನು ಕಪ್ಪು ಟೇಪ್‌ನಿಂದ ಕಟ್ಟಿದ್ದಾರೆ. ಮನೆಯೆಲ್ಲ ಜಾಲಾಡಿರುವ ಖದೀಮರು ನಗದು, ಚಿನ್ನಾಭರಣ ಹಾಗೂ ಮೊಬೈಲ್​​ನ ದೋಚಿದ್ದಾರೆ. ಇಬ್ಬರು ಮನೆಯೊಳಗೆ ನುಗ್ಗಿದ್ದರೆ ಮತ್ತಿಬ್ಬರು ಹೊರಗಡೆಯೇ ನಿಂತು ಕಾವಲು ಕಾಯ್ದಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ಬೆಂಗಳೂರು ಪೊಲೀಸರ ಭರ್ಜರಿ ಬೇಟೆ; 1.5 ಕೋಟಿ ಮೌಲ್ಯದ ಡ್ರಗ್ಸ್ ವಶಕ್ಕೆ

ಘಟನೆಯ ಬಳಿಕ ಹೊಂಬಳೆಗೌಡ ಅವರು ಪೊಲೀಸರಿಗೆ ಈ ಬಗ್ಗೆ ಮಾಹಿತಿ ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಎರಡು ವಿಶೇಷ ತಂಡಗಳನ್ನು ರಚಿಸಿ ತನಿಖೆ ಆರಂಭಿಸಿದ್ದಾರೆ. ಸದ್ಯ ಆರೋಪಿಗಳನ್ನು ಪತ್ತೆಹಚ್ಚಲು ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಲಾಗುತ್ತಿದೆ. ಆರೋಪಿಗಳು ಕೃತ್ಯ ಎಸಗಿದ ಬಳಿಕ ಮನೆಯ ಸಿಸಿಟಿವಿ ಡಿವಿಆರ್‌ ಕಳಚಿಕೊಂಡು ತೆರಳಿದ್ದಾರೆ ಎನ್ನಲಾಗಿದ್ದು, ಪೊಲೀಸರ ಸೋಗಲ್ಲೇ ಆರೋಪಿಗಳು ದರೋಡೆ ನಡೆಸಿರುವ ಕಾರಣ ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link