Bidar: ಆಕಸ್ಮಿಕವಾಗಿ ಕಾರಂಜಾ ಡ್ಯಾಂನ ಕಾಲುವೆಗೆ ಬಿದ್ದು ತಂದೆ-ಮಗ ಸಾವು – Kannada News | Karanja Dam Tragedy: Father, Son Drown in Bidar Canal After Rescue Attempt
ಕಾಲುವೆಯಿಂದ ಮೃತ ದೇಹ ಹೊರ ತೆಗೆಯುತ್ತಿರುವುದುImage Credit source: Tv9 Kannada ಬೀದರ್, ಫೆಬ್ರವರಿ 16: ಆಕಸ್ಮಿಕವಾಗಿ ಕಾರಂಜಾ ಡ್ಯಾಂನ ಕಾಲುವೆಗೆ ಬಿದ್ದು ತಂದೆ, ಮಗ ಮೃತಪಟ್ಟಿರುವ ಘಟನೆ ಬೀದರ್ ಜಿಲ್ಲೆ ಭಾಲ್ಕಿ ತಾಲೂಕಿನ ಬ್ಯಾಲಹಳ್ಳಿ ಗ್ರಾಮದ ಬಳಿ ನಡೆದಿದೆ. ಹಳ್ಳಿಖೇಡ್(ಬಿ) ಗ್ರಾಮದ ವಿಶ್ವನಾಥ(50) ಮತ್ತು ಅಮರೇಶ(23) ಮೃತ ದುರ್ದೈವಿಗಳಾಗಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಪೋಲಿಸರು ಹಾಗೂ ಅಗ್ನಿಶಾಮಕದಳ ಸಿಬ್ಬಂದಿ ಭೇಟಿ ನೀಡಿದ್ದಾರೆ. ಮೃತ ದೇಹಗಳನ್ನು ಅಗ್ನಿಶಾಮಕ ಸಿಬ್ಬಂದಿ ಕಾಲುವೆಯಿಂದ ಹೊರ ತೆಗೆದಿದ್ದಾರೆ. ಮಗನ ಉಳಿಸಲು…