ಗುರುಗ್ರಾಮ: ಪತ್ನಿ ಹಾಗೂ ನಾಲ್ವರು ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ – Kannada News | Multiple Deaths Reported in Gurugram, Investigation Underway
ಗುರುಗ್ರಾಮ, ಮೇ 03: ವ್ಯಕ್ತಿಯೊಬ್ಬ ತನ್ನ ಸುಖ ಸಂಸಾರವನ್ನೇ ಬಲಿಪಡೆದಿರುವ ಘಟನೆ ಗುರುಗ್ರಾಮದಲ್ಲಿ ನಡೆದಿದೆ. ಉತ್ತರ ಪ್ರದೇಶ ಮೂಲದ ನಜೀಮ್ ಎಂಬಾತ ತನ್ನ ಪತ್ನಿ ಮತ್ತು ನಾಲ್ವರು ಮಕ್ಕಳನ್ನು ಕೊಂದು ತಾನೂ ಆತ್ಮಹತ್ಯೆ(Suicide)ಗೆ ಯತ್ನಿಸಿದ್ದಾನೆ. ಶನಿವಾರ ರಾತ್ರಿ ಸುಮಾರು 9.30 ರ ವೇಳೆಗೆ ನಜೀಮ್‌ನ ಸಹೋದರ ಮನೆಗೆ ಹಿಂದಿರುಗಿದಾಗ, ಮೊದಲ ಮಹಡಿಯಲ್ಲಿ ಕುಟುಂಬದ ಸದಸ್ಯರೆಲ್ಲರೂ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿರುವುದನ್ನು ಕಂಡು ಬೆಚ್ಚಿಬಿದ್ದಿದ್ದಾರೆ. ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಮಹಿಳೆ ಮತ್ತು ನಾಲ್ವರು ಮಕ್ಕಳು ಅಷ್ಟರಲ್ಲೇ ಮೃತಪಟ್ಟಿದ್ದಾರೆ ಎಂದು…