ರಾಜೇಗೌಡ vs ಜೀವರಾಜ್: ಅಂಚೆ ಮತಗಳ ಮರು ಎಣಿಕೆ ಹೈಕೋರ್ಟ್ ಆದೇಶದಿಂದ ಇಲ್ಲಿಯವರೆಗೆ ಆಗಿದ್ದೇನು? ಯಾರಿಗೆ ಗೆಲುವು? – Kannada News | Sringeri Recount Saga: Invalid Ballots Challenge Rajegowda’s Win, EC Decision Awaited
ಚಿಕ್ಕಮಗಳೂರು, ಮೇ. 3: ಶೃಂಗೇರಿ ವಿಧಾನಸಭೆ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಕಾರ್ಯ ಮುಕ್ತಾಯಗೊಂಡಿದ್ದು, ಈ ಪ್ರಕ್ರಿಯೆ ಏಳು ಗಂಟೆಗೆ ಆರಂಭವಾಗಿ ದಿನವಿಡೀ ಮುಂದುವರಿದು ಅಂತಿಮವಾಗಿ ಅಂತ್ಯಗೊಂಡಿದೆ. ಈ ಘಟನೆಯ ಕುರಿತು ಬಿಜೆಪಿ ಅಭ್ಯರ್ಥಿ ಡಿ.ಎನ್. ಜೀವರಾಜ್ ಅವರು ಪ್ರತಿಕ್ರಿಯಿಸಿದ್ದು, ಸ್ಟ್ರಾಂಗ್ ರೂಂನಿಂದಲೂ ಗೊಂದಲ ಶುರುವಾಗಿದ್ದು, ಇವಿಎಂಗಳನ್ನು ಇರಿಸಿರುವ ಕೋಣೆಯಲ್ಲಿ ಅನಗತ್ಯ ಸಮಸ್ಯೆಗಳು ಸೃಷ್ಟಿಯಾಗಿವೆ ಎಂದು ಅವರು ಆರೋಪಿಸಿದ್ದಾರೆ. ಒಂಬತ್ತು ಗಂಟೆಗೆ ಎಲ್ಲಾ 22 ಟ್ರಂಕ್ಗಳನ್ನು ತೆರೆದು ಬ್ಯಾಲೆಟ್ಗಳನ್ನು ಎಣಿಕೆ ಮಾಡಲಾಗಿದೆ. ಅಮಾನ್ಯ ಎಂದು ಪರಿಗಣಿಸಲಾಗಿದ್ದ…