ಬಿಪಿ ಇರುವವರು ಬೇಸಿಗೆಯಲ್ಲಿ ಈ ವಿಷಯಗಳನ್ನು ಅಪ್ಪಿತಪ್ಪಿಯೂ ಮರೆಯಬೇಡಿ!
ಇತ್ತೀಚಿನ ದಿನಗಳಲ್ಲಿ ಹೈ ಬಿಪಿ (High Blood Pressure) ಸಮಸ್ಯೆ ಹೆಚ್ಚಾಗಿ ಕಂಡುಬರುತ್ತಿರುವುದನ್ನು ನೀವು ಕಾಣಬಹುದಾಗಿದೆ. ಇದಕ್ಕೆ ಜೀವನಶೈಲಿಯಲ್ಲಿ ಆಗಿರುವಂತಹ ಬದಲಾವಣೆ, ಆಹಾರ ಪದ್ಧತಿ ಸರಿಯಾಗಿ ಇಲ್ಲದಿರುವುದು ಜೊತೆಗೆ ಒತ್ತಡ (ಸ್ಟ್ರೆಸ್) ಪ್ರಮುಖ ಕಾರಣಗಳಾಗಿವೆ. ಅದರಲ್ಲಿಯೂ ಈ ಸಮಯದಲ್ಲಿ ಅಂದರೆ ಬೇಸಿಗೆಯಲ್ಲಿ ಬಿಸಿಲು ವಿಪರೀತವಾಗಿರುವುದರಿಂದ ದೇಹದಲ್ಲಿ ನೀರಿನ ಕೊರತೆ ಉಂಟಾಗಬಹುದು, ಇದು ರಕ್ತದ ಒತ್ತಡದ ಮೇಲೆ ಪರಿಣಾಮ ಬೀರಬಹುದು. ಹೆಚ್ಚು ಬೆವರು ಬರುವುದರಿಂದ ದೇಹದಲ್ಲಿನ ಇಲೆಕ್ಟ್ರೋಲೈಟ್‌ಗಳ ಸಮತೋಲನ ಹಾಳಾಗಬಹುದು, ಇದು ಹೃದಯ ಮತ್ತು ಬಿಪಿ ಮೇಲೆ ಪರಿಣಾಮ…