IPL 2026: ಆರಂಭಿಕನಾಗಿ ರೋಹಿತ್, ಕೊಹ್ಲಿ ದಾಖಲೆ ಮುರಿದ ರಾಹುಲ್
ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಪರ ಆರಂಭಿಕರಾಗಿ ಕಣಕ್ಕಿಳಿಯುವ ಕನ್ನಡಿಗ ಕೆಎಲ್ ರಾಹುಲ್ ಅದ್ಭುತ ಪ್ರದರ್ಶನ ನೀಡಿದರು. 226 ರನ್‌ಗಳ ಬೃಹತ್ ಗುರಿಯನ್ನು ಬೆನ್ನಟ್ಟಿದ ಡೆಲ್ಲಿ ಪರ ಗೆಲುವಿನ ಇನ್ನಿಂಗ್ಸ್ ಆಡಿದ ರಾಹುಲ್ ಕೇವಲ 40 ಎಸೆತಗಳಲ್ಲಿ 75 ರನ್ ಗಳಿಸಿದರು. ಈ ಇನ್ನಿಂಗ್ಸ್‌ನಲ್ಲಿ 6 ಬೌಂಡರಿ ಮತ್ತು 5 ಸಿಕ್ಸರ್‌ಗಳು ಸೇರಿದ್ದವು. ಈ ಇನ್ನಿಂಗ್ಸ್ ಮೂಲಕ ರಾಹುಲ್ ಐಪಿಎಲ್ ಇತಿಹಾಸದಲ್ಲಿ ಅಪರೂಪದ ಸಾಧನೆಯನ್ನು ಮಾಡಿದರು. ಈ ಪಂದ್ಯದಲ್ಲಿ 5 ಸಿಕ್ಸರ್‌ಗಳನ್ನು ಬಾರಿಸುವ ಮೂಲಕ…