ದಾರಿ ನಿರ್ಮಾಣ ವಿಚಾರದಲ್ಲಿ ಕುಟುಂಬಗಳ ಮಧ್ಯೆ ಮಾರಾಮಾರಿ: ಮಹಿಳೆಯನ್ನ ವಿವಸ್ತ್ರಗೊಳಿಸಿ ಹಲ್ಲೆಗೆ ಯತ್ನ
ಹಾಸನ, ಏಪ್ರಿಲ್ 02: ಅವರೆಲ್ಲಾ ಒಂದೇ ಕುಟುಂಬಗಳು. ಒಂದೇ ಸಮುದಾಯಕ್ಕೆ ಸೇರಿದವರು. ಆದರೆ ದಶದಕದ ಹಿಂದೆ ನಡೆದ ಅದೊಂದು ಚುನಾವಣೆ ಊರಿನ್ನೇ ಎರಡು ಭಾಗ ಮಾಡಿ ಹಾಕಿದೆ. ಸಣ್ಣಪುಟ್ಟ ವಿಚಾರಕ್ಕೂ ಕಲಹ, ಮಾರಾಮಾರಿ (Clash) ನಡೆಯುತ್ತಿದೆ. ಐದು ಕುಟುಂಬಗಳು ವಾಸಿಸುವ ಮನೆಗಳಿಗೆ ತೆರಳಲು ರಸ್ತೆ ನಿರ್ಮಾಣದ ವಿಚಾರ ಇದೀಗ ಊರಿನಲ್ಲಿ ಮತ್ತೆ ಸಂಘರ್ಷಕ್ಕೆ ಎಡೆಮಾಡಿಕೊಟ್ಟಿದೆ. ಜಿಲ್ಲೆಯ ಬೇಲೂರು ತಾಲೂಕಿನ ಹಂಚಿಹಳ್ಳಿಯಲ್ಲಿ ಘಟನೆ ನಡೆದಿದೆ. ಅಧಿಕಾರಿಗಳ ಸೂಚನೆಯಂತೆ ದಾರಿ ಮಾಡಿಕೊಳ್ಳಲು ಮುಂದಾದಾಗ ಮಹಿಳೆಯನ್ನ ವಿವಸ್ತ್ರಗೊಳಿಸಿ ಹಲ್ಲೆ ಯತ್ನ ಎಂಬ…