Headlines

nagaraj11081993

Breaking News Today Live: ರಾಜ್ಯ ರಾಜಕೀಯದ ಮಹಾಸಮರ, ಮೆಸ್ಸಿ ಹೊಸ ಇತಿಹಾಸ: ಇಲ್ಲಿವೆ ಈ ಹೊತ್ತಿನ ಪ್ರಮುಖ ಸುದ್ದಿಗಳು – Kannada News | TV9 Kannada News Live 17 June 2026 Karnataka Politics, Weather, MLC Polls Latest Updates

ರಾಜ್ಯ ರಾಜಕಾರಣದ ದಿಕ್ಕನ್ನೇ ಬದಲಿಸಬಲ್ಲ ವಿಧಾನಪರಿಷತ್ ಚುನಾವಣೆಯ ಮಹಾ ಕಣಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಜೂನ್ 18ರ ಮಹಾಸಮರಕ್ಕೆ ಕಾಂಗ್ರೆಸ್, ಜೆಡಿಎಸ್ ಹಾಗೂ ಬಿಜೆಪಿ ಭರ್ಜರಿ ಲೆಕ್ಕಾಚಾರ ನಡೆಸಿವೆ. ಇತ್ತ, ಅಂತರರಾಷ್ಟ್ರೀಯ ಫುಟ್‌ಬಾಲ್ ಅಂಗಳದಲ್ಲಿ ಅರ್ಜೆಂಟೀನಾದ ಮಾಂತ್ರಿಕ ಲಿಯೋನೆಲ್ ಮೆಸ್ಸಿ ಹ್ಯಾಟ್ರಿಕ್ ಗೋಲುಗಳ ಭರ್ಜರಿ ದಾಖಲೆಯೊಂದಿಗೆ ಹೊಸ ಇತಿಹಾಸ ಬರೆದಿದ್ದಾರೆ. ಇನ್ನು ಸ್ಯಾಂಡಲ್‌ವುಡ್ ಹಿರಿಯ ನಟ ದೊಡ್ಡಣ್ಣ ಅವರ ನಿಧನದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹಬ್ಬಿಸಿದ ಕಿಡಿಗೇಡಿಗಳ ವಿರುದ್ಧ ಸೈಬರ್ ಕ್ರೈಮ್ ಠಾಣೆಯಲ್ಲಿ ದೂರು ದಾಖಲಾಗಿದ್ದು,…

Read More

ಇಂಗ್ಲೆಂಡ್ ಪ್ಲೇಯಿಂಗ್ ಇಲೆವೆನ್​ನಲ್ಲಿ 5 ಬದಲಾವಣೆ..! – Kannada News | ENG vs NZ 2nd Test: 5 Changes in England Playing XI

ನ್ಯೂಝಿಲೆಂಡ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯಕ್ಕಾಗಿ ಇಂಗ್ಲೆಂಡ್ ಪ್ಲೇಯಿಂಗ್ ಇಲೆವೆನ್​ನಲ್ಲಿ ಐದು ಬದಲಾವಣೆಗಳನ್ನು ಮಾಡಲಾಗಿದೆ. ಈ ಬದಲಾವಣೆಯೊಂದಿಗೆ ಮೂವರು ಆಟಗಾರರು ಇಂಗ್ಲೆಂಡ್ ಪರ ಪಾದಾರ್ಪಣೆ ಮಾಡಲಿದ್ದಾರೆ. ಈ ಸರಣಿಯ ಮೊದಲ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡವು 115 ರನ್‌ಗಳ ಭರ್ಜರಿ ಜಯ ಸಾಧಿಸಿತ್ತು. ಈ ಗೆಲುವಿನ ಬಳಿಕ ನಡೆದ ಹೈ ಡ್ರಾಮಾದಿಂದಾಗಿ ಇದೀಗ ಪ್ಲೇಯಿಂಗ್ ಇಲೆವೆನ್​ನಲ್ಲಿ ಮಹತ್ವದ ಬದಲಾವಣೆ ಕಂಡು ಬಂದಿದೆ. ಇಷ್ಟೊಂದು ಬದಲಾವಣೆ ಯಾಕೆ? ಶಿಸ್ತು ಉಲ್ಲಂಘನೆ, ಗಾಯ ಹಾಗೂ ಪಿತೃತ್ವ ರಜೆಯ ಕಾರಣದಿಂದಾಗಿ ಲಾರ್ಡ್ಸ್…

Read More

ಹೆಚ್​​.ಸಿ. ಮಹದೇವಪ್ಪ ವಿರುದ್ಧ ಭ್ರಷ್ಟಾಚಾರ ಆರೋಪ: ರಾಜ್ಯಪಾಲರಿಗೆ ದೂರು ಸಲ್ಲಿಕೆ – Kannada News | Corruption Complaint Filed with Karnataka Governor Against Congress Leader H.C. Mahadevappa Over Tender Scams

ಬೆಂಗಳೂರು, ಜೂನ್​​ 17: ಕಾಂಗ್ರೆಸ್ ಶಾಸಕ H.C.ಮಹದೇವಪ್ಪ ವಿರುದ್ಧ ಭ್ರಷ್ಟಾಚಾರ ಆರೋಪ ಕೇಳಿಬಂದಿದ್ದು, ಬೆಂಗಳೂರು ನಿವಾಸಿಯೊಬ್ಬರು ಈ ಸಂಬಂಧ ರಾಜ್ಯಪಾಲರಿಗೆ ದೂರು ಸಲ್ಲಿಕೆ ಮಾಡಿದ್ದಾರೆ. ಹೆಚ್​.ಸಿ.ಮಹದೇವಪ್ಪ ಸಚಿವರಾಗಿದ್ದ ಅವಧಿಯಲ್ಲಿ ಸಾಮಾಜಿಕ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುವ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ (KREIS) ಹಾಗೂ ಅಂಬೇಡ್ಕರ್ ಅಭಿವೃದ್ಧಿ ನಿಗಮ/ಮಂಡಳಿಯ ಟೆಂಡರ್ ಪ್ರಕ್ರಿಯೆಯಲ್ಲಿ ಅಕ್ರಮ, ಭ್ರಷ್ಟಾಚಾರ, ದಾಖಲೆಗಳ ನಕಲಿ ಸೃಷ್ಟಿ ಹಾಗೂ ಅಧಿಕಾರ ದುರುಪಯೋಗ ನಡೆದಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಮನವಿಯ ಪ್ರಕಾರ, ಹೆಚ್.ಸಿ. ಮಹದೇವಪ್ಪ ಅವರು ಸಾಮಾಜಿಕ…

Read More

Garuda Purana: ಗರುಡ ಪುರಾಣದ ಪ್ರಕಾರ ಈ ಮನೆಗಳಲ್ಲಿ ಎಂದಿಗೂ ಊಟ ಮಾಡಬಾರದು! – Kannada News | The Spiritual Impact of Food: Garudapuranas Guide to Where and What to Eat for Blessings

ಗರುಡ ಪುರಾಣವು ಊಟದ ಕುರಿತು ಅತಿ ಮಹತ್ವದ ನಿಯಮಗಳನ್ನು ತಿಳಿಸಿದೆ, ಇದು ನಾವು ಎಲ್ಲಿ ಊಟ ಮಾಡಬೇಕು, ಎಲ್ಲಿ ಮಾಡಬಾರದು ಮತ್ತು ಅದರ ಫಲಗಳು ಏನೆಂಬುದನ್ನು ವಿವರಿಸುತ್ತದೆ. ಈ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ನೀಡಿರುವ ಮಾಹಿತಿ ಇಲ್ಲಿದೆ. ಗುರೂಜಿಯವರು ಹೇಳುವಂತೆ, ಸಾಮಾನ್ಯವಾಗಿ, ದೈವಾಧೀನರಾದವರ ಮನೆಯಲ್ಲಿ ಊಟ ಮಾಡಿದಾಗ ಅವರ ಆತ್ಮಕ್ಕೆ ಶಾಂತಿ ಸಿಗುತ್ತದೆ ಎಂಬ ನಂಬಿಕೆ ಇದೆ. ಹಾಗೆಯೇ, ದೇವಾಲಯಗಳಲ್ಲಿ ಮಾಡುವ ಊಟವನ್ನು ದೇವರ…

Read More

ಬನ್ ತಿಂದು ಹಣ ಕೊಡ್ಲಿಲ್ಲ, ಪೊಲೀಸರನ್ನ ಕರೆಸಿದ್ರೆ ಸೆಲ್ಯೂಟ್ ಮಾಡಿ ಎಂದ ನಕಲಿ ಐಪಿಎಸ್ ಅಧಿಕಾರಿ ಅರೆಸ್ಟ್​ – Kannada News | Fake IPS Arrested in Lucknow: Bun Dispute Leads to Impersonator’s Capture

ನಕಲಿ ಐಪಿಎಸ್ ಅಧಿಕಾರಿImage Credit source: India TV ಲಕ್ನೋ, ಜೂನ್ 17: ಬನ್ ತಿಂದು ಹಣ ಕೊಡದೆ ಸತಾಯಿಸುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಅವರನ್ನು ಬಂಧಿಸಲು ಇದೊಂದೇ ಕಾರಣವಲ್ಲ. ಬನ್ ತಿಂದು ಹಣ ಕೊಟ್ಟಿಲ್ಲ ಸರ್ ಎಂದು ಅಂಗಡಿ ಮಾಲೀಕ ಪೊಲೀಸರಿಗೆ ಕರೆ ಮಾಡಿದ್ದ, ಪೊಲೀಸ್(Police) ಬಂದು ವಿಚಾರಿಸಿದಾಗ ತಾನು ನೋಯ್ಡಾದಲ್ಲಿ ಕೆಲಸ ಮಾಡುತ್ತಿರುವ ಐಪಿಎಸ್ ಅಧಿಕಾರಿ ನಂಗೆ ಸೆಲ್ಯೂಟ್ ಮಾಡುವುದು ಬಿಟ್ಟು ನನ್ನನ್ನೇ ಪ್ರಶ್ನೆ ಮಾಡ್ತಿದ್ದೀರಾ ಎಂದು ಆ ವ್ಯಕ್ತಿ ಗದರಿದ್ದಾನೆ. ಹಾಗಾದರೆ ಮೊದಲು…

Read More

ನಾಳೆಯೇ ಪರಿಷತ್​​ ಚುನಾವಣೆ: 5ನೇ ಅಭ್ಯರ್ಥಿ ಗೆಲುವಿಗೆ ‘ಕೈ’ ತಂತ್ರ, ಏಕೈಕ ಕ್ಯಾಂಡಿಡೇಟ್​​ ವಿಜಯಕ್ಕೆ ಜೆಡಿಎಸ್​​ ಕಸರತ್ತು – Kannada News | Karnataka MLC Elections: Cross Voting Fears Drive Resort Politics as Congress and JDS Fight for Crucial Seats

ಪರಿಷತ್​​ ಸಮರ: ಜೋರಾದ ಸಂಖ್ಯಾ ಬಲದ ಅಂತಿಮ ಲೆಕ್ಕಾಚಾರ Image Credit source: PTI ಬೆಂಗಳೂರು, ಜೂನ್​​ 17: ನಾಳೆ (ಜೂನ್​ 18) ವಿಧಾನಪರಿಷತ್ ಚುನಾವಣೆ ನಡೆಯಲಿರುವ ಹಿನ್ನೆಲೆ ರಾಜ್ಯದ ಮೂರೂ ಪ್ರಮುಖ ಪಕ್ಷಗಳಲ್ಲಿಯೂ ಆತಂಕ ಹೆಚ್ಚಿದೆ. ಅದರಲ್ಲೂ ಕಾಂಗ್ರೆಸ್ ಹಾಗೂ ಜೆಡಿಎಸ್‌ಗೆ ಈ ಎಲೆಕ್ಷನ್​​ ಪ್ರತಿಷ್ಠೆಯ ಪ್ರಶ್ನೆಯಾಗಿ ಮಾರ್ಪಟ್ಟಿದೆ. ಏಳು ಸ್ಥಾನಗಳಿಗೆ ನಡೆಯಲಿರುವ ಚುನಾವಣೆಗೆ ಎಂಟು ಅಭ್ಯರ್ಥಿಗಳು ಕಣದಲ್ಲಿದ್ದು, ಗೆಲುವಿಗಾಗಿ ಭಾರೀ ಲೆಕ್ಕಾಚಾರ ಶುರುವಾಗಿದೆ. ಕಾಂಗ್ರೆಸ್‌ನಿಂದ ಐವರು, ಬಿಜೆಪಿ-ಜೆಡಿಎಸ್ ಮೈತ್ರಿಯಿಂದ ಮೂವರು ಅಭ್ಯರ್ಥಿಗಳು ಅಖಾಡದಲ್ಲಿದ್ದು, ಕಾಂಗ್ರೆಸ್‌ನ…

Read More

‘ಜೋಡಿ ನಂ. 1’ ಶೋನಲ್ಲಿ ಖಾಸಗಿ ವಿಷಯ ಚರ್ಚೆ; ಟ್ರೋಲ್ ಮಾಡಿದವರಿಗೆ ಗೀತಾ ಭಟ್ ಉತ್ತರ – Kannada News | Geetha Bharathi Bhat and Rajaram Clarify Jodi No 1 Controversy, Slam Social Media Trolls

ಜೀ ಕನ್ನಡ ವಾಹಿನಿಯಲ್ಲಿ ಪ್ರಸ್ತುತ ‘ಜೋಡಿ ನಂಬರ್ 1’ ರಿಯಾಲಿಟಿ ಶೋ ಯಶಸ್ವಿಯಾಗಿ ಪ್ರಸಾರ ಕಾಣುತ್ತಿದೆ. ಇತ್ತೀಚೆಗೆ ನಡೆದ ಎಪಿಸೋಡ್ ಒಂದರಲ್ಲಿ ಸ್ಪರ್ಧಿಗಳು ತಮ್ಮ ವೈಯಕ್ತಿಕ ವಿಷಯಗಳನ್ನು ವೇದಿಕೆ ಮೇಲೆ ಮುಕ್ತವಾಗಿ ಹೇಳಿಕೊಂಡಿದ್ದರು. ಆದರೆ, ಇದು ಸರಿ ಅಲ್ಲ ಎಂಬ ಮಾತುಗಳು ಸೋಶಿಯಲ್ ಮೀಡಿಯಾದಲ್ಲಿ ಕೇಳಿಬಂದಿದ್ದವು. ಕಲಾವಿದರು ತಮ್ಮ ಖಾಸಗಿ ವಿಷಯವನ್ನು ಟಿಆರ್‌ಪಿಗಾಗಿ ಸಾರ್ವಜನಿಕವಾಗಿ ಹೇಳಿಕೊಂಡಿದ್ದಾರೆ ಎಂಬ ವ್ಯಾಪಕ ಟೀಕೆ ವ್ಯಕ್ತವಾಗಿತ್ತು. ಇದೀಗ ಈ ಎಲ್ಲಾ ವಿವಾದ ಹಾಗೂ ನೆಗೆಟಿವ್ ಕಾಮೆಂಟ್‌ಗಳಿಗೆ ಶೋನ ಸ್ಪರ್ಧಿ, ನಟಿ ಗೀತಾ…

Read More

ಗೋಲುಗಳ ಮೇಲೆ ಗೋಲು… ವಿಶ್ವ ದಾಖಲೆ ಸರಿಗಟ್ಟಿದ ಮೆಸ್ಸಿ..! – Kannada News | Lionel Messi equals World record in FIFA World Cup

ಆರೋಹೆಡ್ ಅಂಗಳದಲ್ಲಿ ನಡೆದಿದ್ದು ಕೇವಲ ಕಾಲ್ಚೆಂಡಿನ ಆಟವಾಗಿರಲಿಲ್ಲ, ಬದಲಾಗಿ ಫುಟ್‌ಬಾಲ್ ಮೈದಾನದ ಹಸಿರು ಹಾಸಿನ ಮೇಲೆ ಬರೆದ ಇತಿಹಾಸದ ಮಹಾಕಾವ್ಯ! ಕಾಲಿನಲ್ಲೇ ಕಲೆಯುಂಡು, ಚೆಂಡನ್ನೇ ತನ್ನ ಆಜ್ಞಾಧಾರಕನನ್ನಾಗಿ ಮಾಡಿಕೊಂಡಿರುವ ಫುಟ್‌ಬಾಲ್ ಲೋಕದ ಏಕೈಕ ‘ಮಾಂತ್ರಿಕ’ ಲಿಯೋನೆಲ್ ಮೆಸ್ಸಿ (Lionel Messi) ಹೊಸ ಇತಿಹಾಸ ನಿರ್ಮಿಸಿದ್ದಾರೆ. ಅದು ಸಹ ಹ್ಯಾಟ್ರಿಕ್ ಗೋಲು ದಾಖಲಿಸುವ ಮೂಲಕ ಎಂಬುದು ವಿಶೇಷ. 2026ರ ಫಿಫಾ ವಿಶ್ವಕಪ್‌ನ ಗ್ರೂಪ್ ‘ಜೆ’ ನ  ಆರಂಭಿಕ ಪಂದ್ಯದಲ್ಲಿ ಆಲ್ಜೀರಿಯಾ ವಿರುದ್ಧ ಭರ್ಜರಿ ಹ್ಯಾಟ್ರಿಕ್ ಗೋಲು ಸಿಡಿಸುವ ಮೂಲಕ…

Read More

ಬೆಂಗಳೂರಿನಲ್ಲಿ ಬೀದಿ ಬದಿ ವ್ಯಾಪಾರಿಗಳ ಪ್ರತಿಭಟನೆ: ಜೂನ್ 18 ರಿಂದ ಅನಿರ್ದಿಷ್ಟಾವಧಿ ಮುಷ್ಕರ – Kannada News | Bengaluru Small Traders and Street Vendors on Strike from June 18

ಬೆಂಗಳೂರು, ಜೂನ್ 17: ವಿವಿಧ ಸರ್ಕಾರಿ ಇಲಾಖೆಗಳ ಅಧಿಕಾರಿಗಳಿಂದ ಆಗುತ್ತಿರುವ ಕಿರುಕುಳವನ್ನು ಖಂಡಿಸಿ ಮತ್ತು ತಮಗೆ ರಕ್ಷಣೆ ನೀಡುವಂತೆ ಆಗ್ರಹಿಸಿ ಬೆಂಗಳೂರಿನ (Bengaluru) ಸುಮಾರು 58,000ಕ್ಕೂ ಹೆಚ್ಚು ಬೇಕರಿ, ಬೀಡಾ ಅಂಗಡಿ ಮಾಲೀಕರು ಹಾಗೂ ಬೀದಿ ಬದಿ ವ್ಯಾಪಾರಿಗಳು ಜೂನ್ 18ರಿಂದ (ಗುರುವಾರ) ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದ್ದಾರೆ. ಮುಖ್ಯಾಂಶಗಳು ಅಧಿಕಾರಿಗಳ ಕಿರುಕುಳ ಖಂಡಿಸಿ ಸಣ್ಣ ವ್ಯಾಪಾರಿಗಳು ಮುಷ್ಕರಕ್ಕೆ ಕರೆ ನೀಡಿದ್ದಾರೆ. ಜೂನ್ 18 ರಿಂದ ಬೆಂಗಳೂರಿನಾದ್ಯಂತ ಬೇಕರಿ, ಸಣ್ಣ ಅಂಗಡಿಗಳು ಬಂದ್ ಆಗಲಿವೆ. ಪ್ಲಾಸ್ಟಿಕ್ ನಿಷೇಧ…

Read More

ಸಾಫ್ಟ್‌ವೇರ್ ಮತ್ತು ಸೇವೆಗಳ ರಫ್ತಿನಲ್ಲಿ ಕರ್ನಾಟಕವೇ ಅಗ್ರಗಣ್ಯ: 2025-26ನೇ ಹಣಕಾಸು ವರ್ಷದಲ್ಲಿ 173 ಬಿಲಿಯನ್ ಡಾಲರ್‌ ವಹಿವಾಟು – Kannada News | Karnataka retains no 1 spot in software exports contributes 41 percent of indias total

ಬೆಂಗಳೂರು, ಜೂನ್​​ 17: ಸಾಫ್ಟ್‌ವೇರ್ ಮತ್ತು ಸೇವೆಗಳ ರಫ್ತಿನಲ್ಲಿ ಕರ್ನಾಟಕವು ದೇಶದ ಅಗ್ರ ರಾಜ್ಯ ಎಂಬ ತನ್ನ ಸ್ಥಾನವನ್ನು ಮತ್ತೊಮ್ಮೆ ಉಳಿಸಿಕೊಂಡಿದೆ. ಈ ಕುರಿತ ಮಾಹಿತಯ್ನು ಸ್ವತಃ ಸಿಎಂ ಡಿ.ಕೆ. ಶಿವಕುಮಾರ್ ಅವರೇ ಎಕ್ಸ್​​ ಪೋಸ್ಟ್​​ ಮೂಲಕ ಹಂಚಿಕೊಂಡಿದ್ದು, 2025-26ನೇ ಹಣಕಾಸು ವರ್ಷದಲ್ಲಿ ಸುಮಾರು 173 ಬಿಲಿಯನ್ ಡಾಲರ್‌ (ಸುಮಾರು ₹19.7 ಲಕ್ಷ ಕೋಟಿ) ಮೌಲ್ಯದ ರಫ್ತು ದಾಖಲಿಸಿದೆ. ಇದರ ಜೊತೆಗೆ 34 ಬಿಲಿಯನ್ ಡಾಲರ್‌ ಮೌಲ್ಯದ ಸರಕು (Merchandise) ರಫ್ತಿನೊಂದಿಗೆ ಕರ್ನಾಟಕ ದೇಶದಲ್ಲಿ ನಾಲ್ಕನೇ ಸ್ಥಾನದಲ್ಲಿದೆ…

Read More