ತುಮಕೂರಿನಲ್ಲಿ ಹಕ್ಕಿ ಜ್ವರದ ಭೀತಿ: ನವಿಲುಗಳ ಸಾವಿನ ಬೆನ್ನಲ್ಲೇ ಈಗ 30 ಕೋಳಿಗಳ ಸಾವು! ಜಿಲ್ಲೆಯಲ್ಲಿ ಹೈ ಅಲರ್ಟ್ – Kannada News | Bird Flu Outbreak in Tumakuru: 30 chickens Dead; 5 Villages Declared Containment Zones
ತುಮಕೂರು, ಮೇ 02: ತುಮಕೂರು ಜಿಲ್ಲೆಯಲ್ಲಿ ಹಕ್ಕಿಜ್ವರದ (H5N1) ಭೀತಿ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಕಳೆದ ಕೆಲವು ದಿನಗಳಿಂದ ನವಿಲುಗಳ ಸರಣಿ ಸಾವುಗಳು ವರದಿಯಾಗಿದ್ದವು. ಇದೀಗ ಅದೇ ವ್ಯಾಪ್ತಿಯಲ್ಲಿ ಕೋಳಿಗಳ ಸಾವೂ ಸಂಭವಿಸಿರುವುದು ಆತಂಕಕ್ಕೆ ಕಾರಣವಾಗಿದೆ. ಸಾವನ್ನಪ್ಪಿದ ಕೋಳಿಗಳ ಮಾದರಿಗಳನ್ನು ಪರೀಕ್ಷೆಗಾಗಿ ಎಫ್‌ಎಸ್‌ಎಲ್‌ಗೆ ಕಳುಹಿಸಲಾಗಿದ್ದು, ಸಾವಿನ ನಿಖರ ಕಾರಣವನ್ನು ಪತ್ತೆಹಚ್ಚಲು ಪರಿಶೀಲನೆ ನಡೆಯುತ್ತಿದೆ. ಹಕ್ಕಿ ಜ್ವರವೇ 44 ನವಿಲುಗಳ ಸಾವಿಗೆ ಕಾರಣ ಎಂದು ಈಗಾಗಲೇ ದೃಢಪಟ್ಟಿದ್ದು, ಈಗ ಕೋಳಿಗಳ ಸಾವಿಗೂ ಅದೇ ಕಾರಣವಿರಬಹುದೆಂಬ ಶಂಕೆ ವ್ಯಕ್ತವಾಗಿದೆ. ಹಕ್ಕಿ…