All posts by nagaraj11081993

Bank Strike: ಫೆಬ್ರವರಿ 12ರಂದು ರಾಷ್ಟ್ರವ್ಯಾಪಿ ಬ್ಯಾಂಕ್​ ಮುಷ್ಕರ, ಕಾರಣವೇನು? – Kannada News | Banking Services May Face Disruptions on February 12, Here is Why

ನವದೆಹಲಿ, ಫೆಬ್ರವರಿ 12: ತುರ್ತು ಬ್ಯಾಂಕ್(Bank) ಕೆಲಸಗಳಿದ್ದರೆ ಇಂದೇ ಮುಗಿಸಿಕೊಳ್ಳಿ, ನಾಳೆಗೆ ಮುಂದೂಡಿದರೆ ಕಷ್ಟವಾಗಬಹುದು. ಬ್ಯಾಂಕ್​ಗಳ ಖಾಸಗೀಕರಣ ಮತ್ತು ಕಾರ್ಮಿಕ ಸಂಹಿತೆಯನ್ನು ವಿರೋಧಿಸಿ ಫೆಬ್ರವರಿ 12ರಂದು ದೇಶಾದ್ಯಂತ ಬ್ಯಾಂಕ್ ಮುಷ್ಕರ ನಡೆಯಲಿದೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಸೇರಿದಂತೆ ದೇಶದ ಪ್ರಮುಖ ಬ್ಯಾಂಕುಗಳು ಫೆ. 12 ರಂದು ರಾಷ್ಟ್ರವ್ಯಾಪಿ ಮುಷ್ಕರ ನಡೆಸಲಿವೆ. ಸೇವೆಗಳ ಮೇಲೆ ಪರಿಣಾಮ ಬೀರಬಹುದು ಮತ್ತು ಯಾವುದೇ ತುರ್ತು ಬೇಕಿಂಗ್ ಕೆಲಸವನ್ನು ಮುಂಚಿತವಾಗಿ ಪೂರ್ಣಗೊಳಿಸಬೇಕೆಂದು ಬ್ಯಾಂಕುಗಳು ತಮ್ಮ ಗ್ರಾಹಕರಿಗೆ  ಸೂಚನೆ ನೀಡಿವೆ.

ಹಿಂದೂ ಮಜ್ದೂರ್ ಕಿಸಾನ್ ಪಂಚಾಯತ್​ನ ಪ್ರಾಂತೀಯ ನಾಯಕ ಮೊಹಮ್ಮದ್ ಹಸ್ನೈನ್ ಅನ್ಸಾರಿ, ಉತ್ತರ ಪ್ರದೇಶ ಕಿಸಾನ್​​ನ ಇಂದ್ರದೇವ್ ಪಾಲ್ ಅವರು 12ರಂದು ಜಿಲ್ಲೆಯಲ್ಲಿ ಮತ್ತು ಇಡೀ ಭಾರತದಲ್ಲಿ ಮುಷ್ಕರ ನಡೆಯಲಿದೆ ಎಂದು ತಿಳಿಸಿದ್ದಾರೆ. ಈ ಸಮಯದಲ್ಲಿ ಬ್ಯಾಂಕ್​ಗಳು, ಭಾರತೀಯ ಜೀವ ವಿಮಾ ನಿಗಮ, ಅಂಚೆ ಕಚೇರಿಗಳು ಮುಚ್ಚಲ್ಪಡುತ್ತವೆ. ಮಂಗಳವಾರ ಬ್ಯಾಂಕ್ ಹಾಗೂ ಎಲ್​ಐಸಿ ಉದ್ಯೋಗಿಗಳನ್ನು ಸಂಪರ್ಕಿಸಲಾಗಿದೆ ಎಂದು ಹೇಳಿದ್ದಾರೆ.

ಶಾಖೆಗಳು ತೆರೆದಿರಬಹುದು ಆದರೆ ನಗದು ವಹಿವಾಟು ಮತ್ತು ಚೆಕ್ ಕ್ಲಿಯರಿಂಗ್ ಕೆಲಸದಲ್ಲಿ ವಿಳಂಬವಾಗಬಹುದು. ಆದಾಗ್ಯೂ, ಡಿಜಿಟಲ್ ಬ್ಯಾಂಕಿಂಗ್ ಸೇವೆಗಳಲ್ಲಿ ಯಾವುದೇ ಅಡ್ಡಿ ಉಂಟಾಗುವುದಿಲ್ಲ.

ಮುಷ್ಕರ ಏಕೆ?
ವಾರದಲ್ಲಿ ಕೇವಲ ಐದು ದಿನಗಳ ಕೆಲಸಕ್ಕೆ ಒತ್ತಾಯಿಸಿ ಜನವರಿ 27ರಂದು ಬ್ಯಾಂಕ್​ಗಳು ಒಂದು ದಿನದ ಮುಷ್ಕರವನ್ನು ನಡೆಸಿದ್ದರು. ಕಳೆದ ವರ್ಷದ ಕೊನೆಯಲ್ಲಿ ಸರ್ಕಾರವು ಅಧಿಸೂಚನೆ ಹೊರಡಿಸಿದ ನಾಲ್ಕು ಹೊಸ ಕಾರ್ಮಿಕ ಕಾನೂನುಗಳನ್ನು ವಿರೋಧಿಸಲು ಫೆಬ್ರವರಿ 12 ರಂದು ಅವರು 10 ಕೇಂದ್ರ ಕಾರ್ಮಿಕ ಸಂಘಗಳು ಕರೆದ ಪ್ರತಿಭಟನೆಯಲ್ಲಿ ಭಾಗವಹಿಸುತ್ತಿದ್ದಾರೆ.

ಮತ್ತಷ್ಟು ಓದಿ: ಬ್ಯಾಂಕ್ ಲಾಕರ್ ಕೀ ಕಳೆದುಹೋದರೆ ಮುಂದೇನು? ಲಾಕರ್ ಒಡೆಯಲಾಗುತ್ತಾ? ಇಲ್ಲಿದೆ ಪ್ರಕ್ರಿಯೆ

ಕೇಂದ್ರ ಸರ್ಕಾರವು ಕಾರ್ಮಿಕ ಕಾನೂನುಗಳನ್ನು ಹಾಳು ಮಾಡುತ್ತಿದೆ ಎನ್ನುವ ಆರೋಪ ಕೇಳಿಬಂದಿದೆ. ಇದಲ್ಲದೆ ಬ್ಯಾಂಕ್ ನೌಕರರ ಮೇಲೆ ಹೆಚ್ಚಿನ ಹೊರೆ ಹಾಕಲಾಗುತ್ತಿದೆ. ಹಳೆಯ ಪಿಂಚಣಿ ಮತ್ತು ಹೊಸ ಕಾರ್ಮಿಕ ಕಾನೂನುಗಳನ್ನು ರದ್ದುಗೊಳಿಸುವ ಬೇಡಿಕೆಗಳು ಬಹಳ ದಿನಗಳಿಂದ ಕೇಳಿಬರುತ್ತಿವೆ. ಆದರೆ ಸರ್ಕಾರ ಗಮನ ಹರಿಸುತ್ತಿಲ್ಲ ಎಂಬುದು ಅವರ ವಾದ.

ಪರಿಣಾಮವಾಗಿ, ಸಂಸ್ಥೆಯ ಅಧಿಕಾರಿಗಳೊಂದಿಗೆ ಚರ್ಚಿಸಿದ ನಂತರ ಫೆಬ್ರವರಿ 12 ರಂದು ಬೃಹತ್ ಮುಷ್ಕರ ನಡೆಸಲು ನಿರ್ಧರಿಸಲಾಗಿದೆ. ಮದುವೆಗಳ ಋತುವಿನಲ್ಲಿ ಬ್ಯಾಂಕ್ ಮುಷ್ಕರವು ಸಾಮಾನ್ಯ ಜನರ ಕಷ್ಟಗಳನ್ನು ಹೆಚ್ಚಿಸುವುದು ಖಚಿತ. ಇತ್ತೀಚಿನ ದಿನಗಳಲ್ಲಿ ನಗರಗಳು ಮತ್ತು ಹಳ್ಳಿಗಳಲ್ಲಿ ಮದುವೆ ಸೀಸನ್ ಶುರುವಾಗಿದೆ. ಪರಿಣಾಮವಾಗಿ ಜನರಿಗೆ ಹಣದ ಅಗತ್ಯವಿರುತ್ತದೆ.  ಫೆ.12ರಂದು ಜನರು ಸಂಕಷ್ಟ ಎದುರಿಸಬಹುದು.

ದೇಶಾದ್ಯಂತ ಪ್ರಮುಖ ಬ್ಯಾಂಕ್ ಒಕ್ಕೂಟಗಳು ಮುಷ್ಕರಕ್ಕೆ ಕರೆ ನೀಡಿವೆ, ಇದರಿಂದಾಗಿ ಆ ದಿನದಂದು ಬ್ಯಾಂಕಿಂಗ್ ಸೇವೆಯಲ್ಲಿ ಗ್ರಾಹಕರಿಗೆ ಸಮಸ್ಯೆ ಉಂಟಾಗಬಹುದು. ಆದಾಗ್ಯೂ, ಬ್ಯಾಂಕುಗಳು ಅಥವಾ ಭಾರತೀಯ ರಿಸರ್ವ್ ಬ್ಯಾಂಕ್ ಫೆಬ್ರವರಿ 12 ಅನ್ನು ಬ್ಯಾಂಕ್ ರಜಾದಿನವೆಂದು ಘೋಷಿಸಿಲ್ಲ, ಇದು ಶಾಖೆಗಳು ತೆರೆದಿರುವ ನಿರೀಕ್ಷೆಯಿದೆ.

10 ಕೇಂದ್ರ ಕಾರ್ಮಿಕ ಸಂಘಗಳು ಸಹ ಈ ಬೃಹತ್ ಪ್ರತಿಭಟನೆಯಲ್ಲಿ ಸೇರುವ ನಿರೀಕ್ಷೆಯಿದೆ. ಸರ್ಕಾರವು ನವೆಂಬರ್‌ನಲ್ಲಿ ಸೂಚಿಸಿದ ನಾಲ್ಕು ಹೊಸ ಕಾರ್ಮಿಕ ಸಂಹಿತೆಗಳನ್ನು ವಿರೋಧಿಸುವುದು ಈ ಮುಷ್ಕರದ ಉದ್ದೇಶವಾಗಿದೆ. ಫೆಬ್ರವರಿ 12 ರಂದು ಈ ಸಂಸ್ಥೆಗಳು ಮುಷ್ಕರ ನಡೆಸಲಿವೆ ಎಂದು ಪಂಜಾಬ್ ನ್ಯಾಷನಲ್ ಬ್ಯಾಂಕ್ (ಪಿಎನ್‌ಬಿ) ತಿಳಿಸಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ಉದ್ಯಮಿಗಳಿಂದ ಲಕ್ಷ ಲಕ್ಷ ಹಣ ಪಡೆದು ಟೋಪಿ ಹಾಕುತ್ತಿದ್ದ ಪೀಟರ್ ಡ್ಯಾಡಿ ಮನೆ ಮೇಲೆ ಸಿಐಡಿ ದಾಳಿ! – Kannada News | CID Raids Peter Daddy’s House in Bengaluru: Businessman Accused of Lakhs in Land Fraud

ಉದ್ಯಮಿಗಳಿಂದ ಲಕ್ಷ ಲಕ್ಷ ಹಣ ಪಡೆದು ಟೋಪಿ ಹಾಕುತ್ತಿದ್ದ ಪೀಟರ್ ಡ್ಯಾಡಿ ಮನೆ ಮೇಲೆ ಸಿಐಡಿ ದಾಳಿ!

ಬೆಂಗಳೂರು, ಫೆಬ್ರವರಿ 11: ಉದ್ಯಮಿಗೆ ಕೋಟ್ಯಾಂತರ ಮೌಲ್ಯದ ಜಮೀನು ವ್ಯವಹಾರದಲ್ಲಿ ವಂಚನೆ ನಡೆಸಿದ ಆರೋಪದಡಿ ಪೀಟರ್ ಡ್ಯಾಡಿ (Peter Daddy) ಎಂಬಾತನ ನಿವಾಸದ ಮೇಲೆ ಸಿಐಡಿ ಅಧಿಕಾರಿಗಳು ನಿನ್ನೆ (ಫೆ.10) ದಾಳಿ (CID raid) ನಡೆಸಿದ್ದಾರೆ. ಪುಲಿಕೇಶಿನಗರದಲ್ಲಿರುವ ಮನೆ ಮೇಲೆ ಆರ್ಥಿಕ ಅಪರಾಧ ವಿಭಾಗದ ಅಧಿಕಾರಿಗಳು ಶೋಧ ಕಾರ್ಯಾಚರಣೆ ನಡೆಸಿ ಮಹತ್ವದ ದಾಖಲೆಗಳನ್ನು ಪರಿಶೀಲಿಸಿದ್ದಾರೆ.

ಕಮಿಷನ್ ಹೆಸರಿನಲ್ಲಿ ಲಕ್ಷಾಂತರ ರೂ. ವಂಚನೆ

ಕಳೆದ ವರ್ಷದ ಆಗಸ್ಟ್‌ನಲ್ಲಿ ಸುಬ್ಬರಾವ್ ಎಂಬ ಉದ್ಯಮಿಯು ಪುಲಿಕೇಶಿನಗರ ಠಾಣೆಯಲ್ಲಿ ಪೀಟರ್ ವಿರುದ್ಧ ಎಫ್‌ಐಆರ್ ದಾಖಲಿಸಿದ್ದರು. ದೂರಿನಲ್ಲಿ ಹೇಳಿರುವಂತೆ, ಸುಮಾರು 300 ಎಕರೆ ಜಮೀನಿನ ದಾಖಲಾತಿಗಳನ್ನು ಸರಿಪಡಿಸಿ ಖಾತೆ ಬದಲಾವಣೆ ಮಾಡಿಸಿ, ಬಳಿಕ ಮಾರುಕಟ್ಟೆ ಬೆಲೆಗೆ ಮಾರಾಟ ಮಾಡಿಕೊಡುವುದಾಗಿ ಪೀಟರ್ ಭರವಸೆ ನೀಡಿದ್ದರು. ಈ ಹಿನ್ನೆಲೆ ಪ್ರೊಸೆಸಿಂಗ್ ಫೀ, ಲ್ಯಾಂಡ್ ಡೀಲ್ ಹಾಗೂ ಕಮಿಷನ್ ಹೆಸರಿನಲ್ಲಿ 96 ಲಕ್ಷ 50 ಸಾವಿರ ರೂ. ಹಣವನ್ನು ಪಡೆದುಕೊಂಡಿದ್ದರೂ, ಯಾವುದೇ ಕೆಲಸ ಮಾಡಿಕೊಡದೆ ವಂಚನೆ ಮಾಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ತಾನೇ ಚೆಕ್ ಬೌನ್ಸ್ ಕೇಸ್ ಹಾಕಿದ್ದ ಪೀಟರ್!

ಇದಲ್ಲದೆ, ಕಮಿಷನ್ ಖಾತ್ರಿಗಾಗಿ ಸುಬ್ಬರಾವ್ ಅವರಿಂದ ಚೆಕ್ ಪಡೆದಿದ್ದ ಪೀಟರ್, ಬಳಿಕ ಅದೇ ಚೆಕ್ ಆಧಾರವಾಗಿ ದೂರುದಾರರ ವಿರುದ್ಧ ಸುಳ್ಳು ಚೆಕ್ ಬೌನ್ಸ್ ಪ್ರಕರಣ ದಾಖಲಿಸಿರುವುದಾಗಿ ತಿಳಿದುಬಂದಿದೆ. ಪ್ರಕರಣದ ಗಂಭೀರತೆ ಹಿನ್ನೆಲೆ ಈ ವಿಚಾರಣೆಯನ್ನು ಸಿಐಡಿಗೆ ವರ್ಗಾವಣೆ ಮಾಡಲಾಗಿತ್ತು. ಸದ್ಯ ಸಿಐಡಿ ಅಧಿಕಾರಿಗಳು ಮನೆ ಶೋಧಿಸಿ, ಆರ್ಥಿಕ ವ್ಯವಹಾರಗಳಿಗೆ ಸಂಬಂಧಿಸಿದ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ. ಮುಂದಿನ ತನಿಖೆ ಮುಂದುವರಿದಿದೆ.

ಇದನ್ನೂ ಓದಿ ಮದುವೆ ನೆಪದಲ್ಲಿ 9 ಯುವತಿಯರ ಬಾಳಲ್ಲಿ ಚೆಲ್ಲಾಟವಾಡಿದ್ದ ‘ಮ್ಯಾಟ್ರಿಮೋನಿ ಮನ್ಮಥ’, ನಕಲಿ ಮಾವ ಪೊಲೀಸ್ ಬಲೆಗೆ

ಪೀಟರ್ ಡ್ಯಾಡಿ ವಿರುದ್ಧ ಬೆಂಗಳೂರು ನಗರದ ಅಶೋಕನಗರ, ಹಲಸೂರು, ಬೆಳ್ಳಂದೂರು, ಜೀವನ್ ಭೀಮಾನಗರ, ಪುಲಕೇಶಿನಗರ ಸೇರಿದಂತೆ ಹಲವು ಪೊಲೀಸ್ ಠಾಣೆಗಳಲ್ಲಿ ವಂಚನೆ ಪ್ರಕರಣಗಳು ದಾಖಲಾಗಿದ್ದು, ಹೆಚ್ಚಿನ ತನಿಖೆಗಾಗಿ ಸಿಐಡಿ ಆರ್ಥಿಕ ಅಪರಾಧ ದಳಕ್ಕೆ ವರ್ಗಾವಣೆ ಮಾಡಲಾಗಿದೆ.

ವರದಿ: ವಿಕಾಸ್, ಟಿವಿ9 ಬೆಂಗಳೂರು

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

Abhishek Sharma: ಅಭಿಷೇಕ್ ಶರ್ಮಾ ಆಸ್ಪತ್ರೆಗೆ ದಾಖಲು – Kannada News | Team India Player Abhishek Sharma was admitted in hospital

ಭಾರತ ತಂಡದ ಸ್ಫೋಟಕ ದಾಂಡಿಗ ಅಭಿಷೇಕ್ ಶರ್ಮಾ ಅನಾರೋಗ್ಯದ ಕಾರಣ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಯುವ ಆಟಗಾರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಹೀಗಾಗಿ ನಾಳೆ (ಫೆ.12) ನಡೆಯಲಿರುವ ನಮೀಬಿಯ ವಿರುದ್ಧದ ಪಂದ್ಯದಲ್ಲಿ ಕಣಕ್ಕಿಳಿಯುವುದಿಲ್ಲ ಎನ್ನಬಹುದು.

ಯುಎಸ್​ಎ ವಿರುದ್ಧದ ಪಂದ್ಯದ ಬಳಿಕ ಟೀಮ್ ಇಂಡಿಯಾ ಆಟಗಾರರು ದ್ವಿತೀಯ ಪಂದ್ಯಕ್ಕಾಗಿ ಭಾನುವಾರ ದೆಹಲಿಗೆ ಆಗಮಿಸಿದ್ದಾರೆ. ದೆಹಲಿಯ ತಮ್ಮ ನಿವಾಸದಲ್ಲಿ ಭಾರತ ತಂಡದ ಕೋಚ್ ಗೌತಮ್ ಗಂಭೀರ್ ಭೋಜನಾ ಕೂಟ ಏರ್ಪಡಿಸಿದ್ದರು. ಈ ಡಿನ್ನರ್ ಪಾರ್ಟಿಯ ವೇಳೆ ಅಭಿಷೇಕ್ ಶರ್ಮಾ ಅವರ ಆರೋಗ್ಯ ಹದಗೆಟ್ಟಿದ್ದು, ಹೀಗಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಪ್ರಸ್ತುತ ಮಾಹಿತಿ ಪ್ರಕಾರ, ಅಭಿಷೇಕ್ ಶರ್ಮಾ ಅವರು ಹೊಟ್ಟೆಯ ಸೋಂಕಿನಿಂದ ಬಳಲುತ್ತಿದ್ದು, ಹೀಗಾಗಿ ಅವರಿಗೆ ಆಸ್ಪತ್ರೆಯಲ್ಲೇ ಚಿಕಿತ್ಸೆ ಮುಂದುವರೆಸಲಾಗಿದೆ. ಮಂಗಳವಾರದವರೆಗೆ ಅವರು ಆಸ್ಪತ್ರೆಯಲ್ಲೇ ಉಳಿದುಕೊಂಡಿರುವ ಕಾರಣ ಗುರುವಾರ ನಡೆಯಲಿರುವ ನಮೀಬಿಯ ವಿರುದ್ಧದ ಪಂದ್ಯದಲ್ಲಿ ಅವರು ಕಣಕ್ಕಿಳಿಯುವುದು ಅನುಮಾನ.

ಆರಂಭಿಕರು ಯಾರು?

ಅಭಿಷೇಕ್ ಶರ್ಮಾ ನಮೀಬಿಯ ವಿರುದ್ಧದ ಪಂದ್ಯದಿಂದ ಹೊರಗುಳಿದರೆ ಅವರ ಬದಲಿಗೆ ಸಂಜು ಸ್ಯಾಮ್ಸನ್ ಆರಂಭಿಕರಾಗಿ ಕಣಕ್ಕಿಳಿಯಲಿದ್ದಾರೆ. ಇದಕ್ಕೂ ಮುನ್ನ ಟೀಮ್ ಇಂಡಿಯಾ ಪರ ಸಂಜು ಸ್ಯಾಮ್ಸನ್ ಹಾಗೂ ಅಭಿಷೇಕ್ ಶರ್ಮಾ ಓಪನರ್​ಗಳಾಗಿ ಇನಿಂಗ್ಸ್ ಆರಂಭಿಸುತ್ತಿದ್ದರು. ಆದರೆ ನ್ಯೂಝಿಲೆಂಡ್ ವಿರುದ್ಧ ತೋರಿದ ಕಳಪೆ ಬ್ಯಾಟಿಂಗ್ ಪ್ರದರ್ಶನದಿಂದಾಗಿ ಸ್ಯಾಮ್ಸನ್ ಅವರನ್ನು ಕೈ ಬಿಟ್ಟು ಇಶಾನ್ ಕಿಶನ್ ಅವರಿಗೆ ಆರಂಭಿಕನ ಸ್ಥಾನ ನೀಡಲಾಗಿದೆ.

ಇದೀಗ ಅಭಿಷೇಕ್ ಶರ್ಮಾ ಅಲಭ್ಯರಾದರೆ ಟೀಮ್ ಇಂಡಿಯಾ ಮುಂದಿರುವುದು ಏಕೈಕ ಆಯ್ಕೆ. ಅದರಂತೆ ನಮೀಬಿಯ ವಿರುದ್ಧ ಇಶಾನ್ ಕಿಶನ್ ಹಾಗೂ ಸಂಜು ಸ್ಯಾಮ್ಸನ್ ಆರಂಭಿಕರಾಗಿ ಕಣಕ್ಕಿಳಿಯುವ ಸಾಧ್ಯತೆ ಹೆಚ್ಚಿದೆ.

ಇನ್ನು ನಮೀಬಿಯ ವಿರುದ್ಧದ ಪಂದ್ಯದ ಬಳಿಕ ಟೀಮ್ ಇಂಡಿಯಾ ಪಾಕಿಸ್ತಾನ್ ಹಾಗೂ ನೆದರ್​ಲೆಂಡ್ಸ್ ವಿರುದ್ಧ ಕಣಕ್ಕಿಳಿಯಲಿದೆ. ಅದಕ್ಕೂ ಮುನ್ನ ಸಂಪೂರ್ಣ ಫಿಟ್​ನೆಸ್​ನೊಂದಿಗೆ ಅಭಿಷೇಕ್ ಶರ್ಮಾ ಟೀಮ್ ಇಂಡಿಯಾವನ್ನು ಕೂಡಿಕೊಳ್ಳುವ ಸಾಧ್ಯತೆ ಹೆಚ್ಚಿದೆ.

ಇದನ್ನೂ ಓದಿ: ಅಲೆನ್ ಆರ್ಭಟಕ್ಕೆ ಅಭಿಷೇಕ್ ವಿಶ್ವ ದಾಖಲೆ ಉಡೀಸ್

ಟಿ20 ವಿಶ್ವಕಪ್​ಗೆ ಭಾರತ ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಅಕ್ಷರ್ ಪಟೇಲ್ (ಉಪನಾಯಕ), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಜಸ್​ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ, ಮೊಹಮ್ಮದ್ ಸಿರಾಜ್, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಇಶಾನ್ ಕಿಶನ್ (ವಿಕೆಟ್ ಕೀಪರ್), ರಿಂಕು ಸಿಂಗ್.

Source link

ಅಬ್ಬಬ್ಬಾ, ಯಶ್ ಬುದ್ಧಿವಂತಿಕೆ ಮೆಚ್ಚಲೇಬೇಕು; ಈ ಡೀಲ್​​​ನಿಂದ ‘ಟಾಕ್ಸಿಕ್​​’ಗೆ ದೊಡ್ಡ ಲಾಭ – Kannada News | Toxic Movie: Yash’s Smart Deal with Fars Film for Global Reach and 105 Crore Rights

‘ಟಾಕ್ಸಿಕ್’ ಸಿನಿಮಾ (Toxic Movie) ರಿಲೀಸ್​​ಗೆ ಇನ್ನು ಒಂದು ತಿಂಗಳು ಬಾಕಿ ಇದೆ. ಈಗಾಗಲೇ ಸಿನಿಮಾಗೆ ಸಿದ್ಧತೆ ಜೋರಾಗಿ ನಡೆದಿದೆ. ಈ ಸಿನಿಮಾ ನೋಡಲು ಫ್ಯಾನ್ಸ್ ಕಾದಿದ್ದಾರೆ. ಈ ಚಿತ್ರದ ವಿದೇಶಿ ಹಂಚಿಕೆ ಹಕ್ಕನ್ನು ಫಾರ್ಸ್ ಫಿಲ್ಮ್ ಬರೋಬ್ಬರಿ 105 ಕೋಟಿ ರೂಪಾಯಿಗೆ ಖರೀದಿ ಮಾಡಿದೆ. ಈ ಡೀಲ್​​ನ ಹಿಂದೆ ಸಾಕಷ್ಟು ಲೆಕ್ಕಾಚಾರ ಇದೆ ಎಂದು ವರದಿ ಆಗಿದೆ. ಆ ಬಗ್ಗೆ ಇಲ್ಲಿದೆ ವಿವರ.

‘ಟಾಕ್ಸಿಕ್’ ಸಿನಿಮಾ ಕೇಲವ ಭಾರತದ ಭಾಷೆಗಳಲ್ಲಿ ಮಾತ್ರವಲ್ಲದೆ, ಇಂಗ್ಲಿಷ್ ಅಲ್ಲೂ ರಿಲೀಸ್ ಆಗಲಿದೆ. ಈಗ ಫಾರ್ಸ್ ಫಿಲ್ಮ್​ಗೆ ನೀಡಿದ್ದು ಕೇವಲ ಕನ್ನಡ, ತಮಿಳು, ತೆಲುಗು, ಹಿಂದಿ ಮತ್ತು ಮಲಯಾಳಂ ಆವೃತ್ತಿಗಳನ್ನು ಮಾತ್ರ. ಹೀಗಾಗಿ, ಇಂಗ್ಲಿಷ್ ಹಕ್ಕನ್ನು ಇನ್ನೊಂದು ಸಂಸ್ಥೆಗೆ ತಂಡ ನೀಡಲಿದೆ.

ಫಾರ್ಸ್ ಫಿಲ್ಮ್​ ಜೊತೆ ಇಷ್ಟು ದೊಡ್ಡ ಡೀಲ್ ಮಾಡಿಕೊಳ್ಳಲು ‘ಧುರಂಧರ್ 2’ ಕಾರಣ ಎನ್ನಲಾಗುತ್ತಿದೆ. ಫಾರ್ಸ್​ ಫಿಲ್ಮ್ಸ್ ಸಿನಿಮಾ ಹಂಚಿಕೆಯಲ್ಲಿ ಸಾಕಷ್ಟು ಅನುಭವ ಹೊಂದಿದೆ. ಅಲ್ಲದೆ, ಇದು ದುಬೈ ಮೂಲದ ಕಂಪನಿ. ಹೀಗಾಗಿ, ಗಲ್ಫ್ ರಾಷ್ಟ್ರಗಳಲ್ಲಿ ಇದು ಸಾಕಷ್ಟು ಹಿಡಿತ ಹೊಂದಿದೆ. ಈ ಭಾಗದಲ್ಲಿ ದೊಡ್ಡ ಮಟ್ಟದಲ್ಲಿ ಸಿನಿಮಾ ರಿಲೀಸ್ ಮಾಡುವ ಆಲೋಚನೆ ತಂಡಕ್ಕೆ ಇದೆ.

ಇದನ್ನೂ ಓದಿ: ‘ಧುರಂಧರ್’ ನಟ ರಣವೀರ್ ಸಿಂಗ್​ಗೆ ಬೆದರಿಕೆ; ಭದ್ರತೆ ಹೆಚ್ಚಿಸಿದ ಪೊಲೀಸರು

‘ಧುರಂಧರ್’ ಸಿನಿಮಾ ಗಲ್ಫ್ ರಾಷ್ಟ್ರಗಳಲ್ಲಿ ರಿಲೀಸ್ ಆಗಿರಲಿಲ್ಲ. ಅದೇ ರೀತಿ, ‘ಧುರಂಧರ್ 2’ ಸಿನಿಮಾ ಕೂಡ ಈ ಭಾಗದಲ್ಲಿ ರಿಲೀಸ್ ಆಗೋದಿಲ್ಲ. ಇದರ ಅಡ್ವಾಂಟೇಜ್ ತೆಗೆದುಕೊಳ್ಳಲು ಯಶ್ ಹಾಗೂ ತಂಡ ನಿರ್ಧರಿಸಿದೆ. ಈ ಕಾರಣದಿಂದ ‘ಟಾಕ್ಸಿಕ್’ ನಿರ್ಮಾಣ ಸಂಸ್ಥೆ ಹಾಗೂ ಯಶ್ ಫಾರ್ಸ್ ಫಿಲ್ಮ್​ ಜೊತೆ ಒಪ್ಪಂದ ಮಾಡಿಕೊಂಡಿದ್ದಾರೆ.

‘ಟಾಕ್ಸಿಕ್’ ಸಿನಿಮಾ ಮಾರ್ಚ್ 19ರಂದು ರಿಲೀಸ್ ಆಗುತ್ತಿದೆ. ಈ ಸಿನಿಮಾ ಬಗ್ಗೆ ಅಭಿಮಾನಿಗಳು ಸಾಕಷ್ಟು ನಿರೀಕ್ಷೆ ಹೊಂದಿದ್ದಾರೆ. ಯಶ್ ಜೊತೆ ಕಿಯಾರಾ ಅಡ್ವಾಣಿ ಮೊದಲಾದವರು ನಟಿಸಿದ್ದಾರೆ. ಮಲಯಾಳಂ ನಿರ್ದೇಶಕಿ ಗೀತು ಮೋಹನ್​ ದಾಸ್ ನಿರ್ದೇಶನ ಚಿತ್ರಕ್ಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಕಾಂಗ್ರೆಸ್ ಕುರ್ಚಿ ಕಾಳಗ ದೆಹಲಿಗೆ ಶಿಫ್ಟ್: ದೆಹಲಿ ತಲುಪುತ್ತಿದ್ದಂತೆಯೇ ಡಿಕೆಶಿ ನಂಬರ್ ಗೇಮ್! – Kannada News | Karnataka Congress Power Struggle Shifts to Delhi: DK Shivakumar Starts ‘Number Game’ Amid CM Change Buzz

ಬೆಂಗಳೂರು, ಫೆಬ್ರವರಿ 11: ಕರ್ನಾಟಕ ಕಾಂಗ್ರೆಸ್‌ನಲ್ಲಿ ಅಧಿಕಾರಕ್ಕಾಗಿ ನಡೆಯುತ್ತಿರುವ ಪೈಪೋಟಿ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿರುವ ಲಕ್ಷಣ ಕಾಣಿಸಿದೆ. ಡಿಸಿಎಂ ಡಿಕೆ ಶಿವಕುಮಾರ್ ಅವರು ಅಸ್ಸಾಂ ಚುನಾವಣಾ ಉಸ್ತುವಾರಿ ನೆಪದಲ್ಲಿ ದೆಹಲಿಗೆ ತೆರಳಿದ್ದು, ಹೈಕಮಾಂಡ್ ನಾಯಕರ ಪೈಕಿ ಕೆಲವ ಭೇಟಿಯಾಗಿದ್ದಾರೆ ಎನ್ನಲಾಗಿದೆ. ದೆಹಲಿಗೆ ತಲುಪುಸುತ್ತಿದ್ದಂತೆಯೇ ಅವರು ‘136’ ಎಂಬ ಸಂಖ್ಯೆಯನ್ನು ಉಲ್ಲೇಖಿಸಿ ನಂಬರ್ ಗೇಮ್ ಆರಂಭಿಸಿದ್ದಾರೆ. ಇದೇ ವೇಳೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಲಸಂಪನ್ಮೂಲ ಹಾಗೂ ಬೆಂಗಳೂರು ಅಭಿವೃದ್ಧಿ ಇಲಾಖೆಗಳ ಬಜೆಟ್ ಸಭೆ ನಡೆಸಿದ್ದು, ಡಿ.ಕೆ. ಶಿವಕುಮಾರ್ ಗೈರಾಗಿದ್ದರು. ಸಿದ್ದರಾಮಯ್ಯ ಅವರು ತಾವು ಹೈಕಮಾಂಡ್‌ನ ಯಾವುದೇ ನಿರ್ಧಾರಕ್ಕೂ ಬದ್ಧ ಎಂದು ಹೇಳಿಕೆ ನೀಡಿದ್ದಾರೆ. ಏತನ್ಮಧ್ಯೆ, ಪಕ್ಷದ ಮುಖಂಡರು ಬೇಜವಾಬ್ದಾರಿ ಹೇಳಿಕೆಗಳನ್ನು ನೀಡುವುದರಿಂದ ಪಕ್ಷಕ್ಕೆ ಡ್ಯಾಮೇಜ್ ಆಗುತ್ತದೆ ಎಂದು ಡಿಕೆ ಶಿವಕುಮಾರ್ ಪರೋಕ್ಷವಾಗಿ ಯತೀಂದ್ರ ಸಿದ್ದರಾಮಯ್ಯ ಅವರಿಗೆ ಟಾಂಗ್ ನೀಡಿದ್ದಾರೆ. ಒಟ್ಟಾರೆ, ರಾಜ್ಯ ಕಾಂಗ್ರೆಸ್‌ನ ಕುರ್ಚಿ ಕಾಳಗ ದೆಹಲಿಗೆ ಶಿಫ್ಟ್ ಆದಂತಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಕೆನಡಾದ ಬ್ರಿಟಿಷ್ ಕೊಲಂಬಿಯಾದಲ್ಲಿರುವ ಶಾಲೆಯಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು – Kannada News | Deadly School Shooting in British Columbia Leaves 10 Dead

ಒಟ್ಟಾವಾ, ಫೆಬ್ರವರಿ 11: ಕೆನಡಾದ  ಬ್ರಿಟಿಷ್ ಕೊಲಂಬಿಯಾದ ಟಂಬ್ಲರ್ ರಿಡ್ಜ್​ ಪಟ್ಟಣದಲ್ಲಿರುವ ಶಾಲೆಯಲ್ಲಿ ಅಪರಿಚಿತ ದುಷ್ಕರ್ಮಿಯಿಂದ ಸಾಮೂಹಿಕ ಗುಂಡಿನ ದಾಳಿ(Firing) ನಡೆದಿದ್ದು, ಘಟನೆಯಲ್ಲಿ 10 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. 20ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಒಬ್ಬ ಶಂಕಿತ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತರು ಹಾಗೂ ಉದ್ದೇಶ ಹಾಗೂ ಸಂದರ್ಭಗಳ ಕುರಿತು ಅಧಿಕಾರಿಗಳು ಮಾಹಿತಿಯನ್ನು ಇನ್ನೂ ನೀಡಿಲ್ಲ, ಸುಮಾರು 24 ಜನರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಟಂಬ್ಲರ್ ರಿಡ್ಜ್ ಮತ್ತು ಸುತ್ತಮುತ್ತಲಿನ ಮೊಬೈಲ್ ಫೋನ್‌ಗಳಿಗೆ ಕಳುಹಿಸಲಾದ ತುರ್ತು ಎಚ್ಚರಿಕೆಯಲ್ಲಿ ಶಂಕಿತರನ್ನು ಮಹಿಳೆ ಎಂದು ವಿವರಿಸಲಾಗಿದೆ. ನಿವಾಸಿಗಳು ಮನೆಯೊಳಗೆ ಉಳಿಯುವಂತೆ ಮತ್ತು ಆ ಪ್ರದೇಶಕ್ಕೆ ಹೋಗದಂತೆ ಮನವಿ ಮಾಡಲಾಗಿದೆ. ಟಂಬ್ಲರ್ ರಿಡ್ಜ್ ಪ್ರದೇಶದಲ್ಲಿರುವವರು ಒಳಗೆ ಇರುವಂತೆ, ನಿಮ್ಮ ಮನೆಯ ಬಾಗಿಲುಗಳನ್ನು ಸರಿಯಾಗಿ ಲಾಕ್ ಮಾಡಿಕೊಳ್ಳುವಂತೆ ಮತ್ತು ಈ ಸಮಯದಲ್ಲಿ ವ್ಯವಹಾರಕ್ಕೆಂದು ಮನೆಯ ಹೊರಗೆ ಹೋಗದಂತೆ ಕೇಳಿಕೊಳ್ಳಲಾಗಿದೆ.

ಇತರರೆಲ್ಲರೂ ಆ ಪ್ರದೇಶಕ್ಕೆ ಬರುವುದನ್ನು ತಪ್ಪಿಸಬೇಕು ಮತ್ತು ಪೊಲೀಸರ ನಿರ್ದೇಶನಗಳು ಮತ್ತು ನಿರ್ಬಂಧಗಳನ್ನು ಪಾಲಿಸಬೇಕು ಎಂದು ಹೇಳಲಾಗಿದೆ. ಗಂಭೀರವಾಗಿ ಗಾಯಗೊಂಡ ಇಬ್ಬರನ್ನು ಹೆಲಿಕಾಪ್ಟರ್ ಮೂಲಕ ಆಸ್ಪತ್ರೆಗೆ ಸಾಗಿಸಲಾಯಿತು, ಮೂರನೇ ವ್ಯಕ್ತಿ ಚಿಕಿತ್ಸೆಗಾಗಿ ಸಾಗಿಸುವಾಗ ಸಾವನ್ನಪ್ಪಿದ್ದರು.

ಮತ್ತಷ್ಟು ಓದಿ: Video: ಎಎಪಿ ನಾಯಕನ ಮೇಲೆ ಗುಂಡಿನ ದಾಳಿ, ಹಾಡಹಗಲೇ ನಡೆಯಿತು ಕೊಲೆ

ಕಳೆದ ವರ್ಷ ಸಿಡ್ನಿಯಲ್ಲೂ ಇಂಥಾ ಘಟನೆ ನಡೆದಿತ್ತು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ದುಷ್ಕರ್ಮಿಗಳು ಸಾಮೂಹಿಕ ಗುಂಡಿನ ದಾಳಿ ನಡೆಸಿದ್ದು, ಘಟನೆಯಲ್ಲಿ 10 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಪ್ರತ್ಯಕ್ಷದರ್ಶಿಗಳ ಪ್ರಕಾರ ಸುಮಾರು ಎರಡು ಗಂಟೆಗಳ ಹಿಂದೆ ನಡೆದ ಗುಂಡಿನ ದಾಳಿಯಲ್ಲಿ ಸುಮಾರು 50 ಗುಂಡುಗಳು ಹಾರಿವೆ ಎಂದು ಹೇಳಿದ್ದಾರೆ. ಈ ಘಟನೆ ಬಗ್ಗೆ ಆಸ್ಟ್ರೇಲಿಯಾ ಪ್ರಧಾನಿ ಬೇಸರ ವ್ಯಕ್ತಪಡಿಸಿದ್ದು, ಘಟನೆಯನ್ನುಆಘಾತಕಾರಿ ಮತ್ತು ದುಃಖಕರ ಎಂದು ಕರೆದಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ಅಲೆನ್ ಆರ್ಭಟಕ್ಕೆ ಅಭಿಷೇಕ್ ವಿಶ್ವ ದಾಖಲೆ ಉಡೀಸ್ – Kannada News | Finn Allen Breaks Abhishek Sharma’s World Record

ಇದೀಗ ಈ ದಾಖಲೆಯನ್ನು ಫಿನ್ ಅಲೆನ್ ಮುರಿದಿದ್ದಾರೆ. ಕೇವಲ 2854 ಎಸೆತಗಳಲ್ಲಿ 5 ಸಾವಿರ ಪೂರೈಸುವ ಮೂಲಕ ಅಲೆನ್ ಟಿ20 ಕ್ರಿಕೆಟ್ ಇತಿಹಾಸದಲ್ಲೇ ಅತೀ ವೇಗವಾಗಿ 5000 ರನ್ ಕಲೆಹಾಕಿದ ಬ್ಯಾಟರ್ ಎನಿಸಿಕೊಂಡಿದ್ದಾರೆ. ಇದೀಗ ಐದು ಸಾವಿರ ರನ್​ಗಳ ಸರದಾರರ ಪಟ್ಟಿಯಲ್ಲಿ ಅಲೆನ್ ಹಾಗೂ ಅಭಿಷೇಕ್ ಮೊದಲೆರಡು ಸ್ಥಾನಗಳಲ್ಲಿದ್ದು, ಯಾರು ವೇಗವಾಗಿ 6 ಸಾವಿರ ರನ್​ಗಳಿಸಲಿದ್ದಾರೆ ಎಂಬುದೇ ಈಗ ಕುತೂಹಲ.

Source link

ಇಬ್ಬರೂ ಕುಡಿದ ಮತ್ತಿನಲ್ಲಿದ್ರು, ಸ್ನೇಹಿತ ಮ್ಯಾನ್​ಹೋಲ್​ಗೆ ಬಿದ್ರೂ ಗೊತ್ತಾಗಲಿಲ್ಲ – Kannada News | Man Dies After Falling Into Open Drain Near Rohini Temple in Delhi

ನವದೆಹಲಿ, ಫೆಬ್ರವರಿ 11: ವ್ಯಕ್ತಿಯೊಬ್ಬರು ತೆರೆದ ಮ್ಯಾನ್​ಹೋಲ್​ಗೆ ಬಿದ್ದು ಸಾವನ್ನಪ್ಪಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ಸೋಮವಾರ ರಾತ್ರಿ ರೋಹಿಣಿ ಸೆಕ್ಟರ್ 32 ರ ಮಹಾಶಕ್ತಿ ಕಾಳಿ ದೇವಸ್ಥಾನದ ಬಳಿಯಲ್ಲಿ ಕಾರ್ಮಿಕ ಬಿರ್ಜು ಕುಮಾರ್ ಮತ್ತು ಅವರ ಸ್ನೇಹಿತ ಮನೆಗೆ ಹೋಗುತ್ತಿದ್ದಾಗ ಕುಮಾರ್ಕ್ತಿ ಮ್ಯಾನ್‌ಹೋಲ್‌ಗೆ ಬಿದ್ದಿದ್ದರು. ಘಟನೆ ನಡೆದ ಸಮಯದಲ್ಲಿ ಕುಮಾರ್ ಮತ್ತು ಅವರ ಸ್ನೇಹಿತ ಇಬ್ಬರೂ ಮದ್ಯದ ಅಮಲಿನಲ್ಲಿದ್ದರು, ಸ್ನೇಹಿತನಿಗೆ ಕುಮಾರ್ ಬಿದ್ದಿರುವ ಪರಿವೇ ಇರಲಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸ್ನೇಹಿತ ಮರುದಿನ ಕುಮಾರ್‌ಗೆ ಕರೆ ಮಾಡಲು ಪ್ರಯತ್ನಿಸಿದ್ದರು ಆದರೆ ಯಾವುದೇ ಪ್ರತಿಕ್ರಿಯೆ ಬರಲಿಲ್ಲ, ಮರುದಿನವೂ ಕುಮಾರ್‌ನ ಯಾವುದೇ ಸುಳಿವು ಸಿಗದಿದ್ದಾಗ, ದೆಹಲಿ ಪೊಲೀಸರು ಮತ್ತು ಅಗ್ನಿಶಾಮಕ ಇಲಾಖೆಯು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿತು ಮತ್ತು ಮ್ಯಾನ್‌ಹೋಲ್ ಪಕ್ಕದಲ್ಲಿ ಅವನ ಚಪ್ಪಲಿಗಳು ಕಂಡುಬಂದವು. ಮಂಗಳವಾರ ಸಂಜೆ 4 ಗಂಟೆ ಸುಮಾರಿಗೆ ಕುಮಾರ್ ಅವರ ಮೃತದೇಹ ಒಳಚರಂಡಿಯಿಂದ ಹೊರ ತೆಗೆಯಲಾಯಿತು.

ಫೆಬ್ರವರಿ 5 ರಂದು ದೆಹಲಿಯ ಜನಕಪುರಿಯಲ್ಲಿ 25 ವರ್ಷದ ಕಮಲ್ ಧಯಾನಿ ಬೈಕ್​ನಲ್ಲಿ ಬರುವಾಗ ದೆಹಲಿ ಜಲ ಮಂಡಳಿಯು ಅಗೆದ ಸುಮಾರು 15 ಅಡಿ ಆಳದ ಗುಂಡಿಗೆ ಬಿದ್ದು ಸಾವನ್ನಪ್ಪಿದ್ದರು, ಅದಾದ ಐದು ದಿನಕ್ಕೆ ಈ ಘಟನೆ ನಡೆದಿದೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

Bengaluru Air Quality: ಇಂದೂ ರಾಜ್ಯದಲ್ಲಿ ವಾಯು ಗುಣಮಟ್ಟ ಇನ್ನಷ್ಟು ಕುಸಿತ – Kannada News | Bangalore Air Pollution Crisis: Bengaluru, Manglore, Ballari and Shivamogga Air quality has gotten worse

ಇಂದೂ ರಾಜ್ಯದಲ್ಲಿ ವಾಯು ಗುಣಮಟ್ಟ ಇನ್ನಷ್ಟು ಕುಸಿತ

ಬೆಂಗಳೂರು, ಫೆಬ್ರವರಿ 11: ಕೆಲ ದಿನಗಳಿಂದ ಏರಿಕೆಯಾಗುತ್ತಿದ್ದ ಬೆಂಗಳೂರಿನ AQI (Bengaluru Air Quality) ಇಂದು ಹಠಾತ್ತನೆ ಕಳಪೆ ಮಟ್ಟ ತಲುಪಿದೆ. ನಿನ್ನೆ ತಕ್ಕ ಮಟ್ಟಿಗೆ ಸುಧಾರಿಸಿತೆಂದು ಎಂದುಕೊಂಡ ಬೆಂಗಳೂರಿನ ವಾಯು ಗುಣಮಟ್ಟವೀಗ ಮತ್ತೊಮ್ಮೆ ಕುಸಿತ ಕಂಡಿದೆ. ಅದರೊಂದಿಗೆ ಮಂಗಳೂರು, ಮೈಸೂರು ಮತ್ತು ಬೆಳಗಾವಿಯಲ್ಲೂ ಸಹ ಗಾಳಿಯ ಗುಣಮಟ್ಟ 170ಕ್ಕಿಂತ ಜಾಸ್ತಿಯಾಗಿದೆ. ದಿನದಿಂದ ದಿನಕ್ಕೆ ಈ ನಗರಗಳ AQI ಕುಸಿಯುತ್ತಿದ್ದು, ಮುನ್ನೆಚ್ಚರಿಕೆ ವಹಿಸುವಂತೆ ತಜ್ಞರು ಸಲಹೆ ನೀಡಿದ್ದಾರೆ.

ಕೆಲ ದಿನಗಳ ಹಿಂದೆಯಷ್ಟೇ ತೀವ್ರ ಕಳಪೆ ಮಟ್ಟಕ್ಕೆ ಇಳಿದಿದ್ದ ಬೆಂಗಳೂರಿನ ಏರ್ ಕ್ವಾಲಿಟಿ ಇಂದು 178ಕ್ಕೆ ತಲುಪಿದೆ. ಅದಕ್ಕಿಂತ ಹೆಚ್ಚಾಗಿ ಶಿವಮೊಗ್ಗದ ಏರ್ ಕ್ವಾಲಿಟಿ 160 ಆಗಿದೆ. ಜೊತೆಗೆ ಬಳ್ಳಾರಿಯ ವಾಯು ಗುಣಮಟ್ಟವೂ ಸಹ 168 ಆಗಿದೆ. ಕಳೆದ ಕೆಲ ದಿನಗಳಿಗೆ ಹೋಲಿಸಿದರೆ ಅಂಕೆಗಳಲ್ಲಿ ಸಣ್ಣ ಏರುಪೇರು ಕಂಡರೂ, WHO ಮಾನದಂಡಗಳ ಪ್ರಕಾರ ಈ ಮಟ್ಟದ ಗಾಳಿಯ ಗುಣಮಟ್ಟ ಆರೋಗ್ಯಕ್ಕೆ ಹಾನಿಕರವಾಗಿಯೇ ಉಳಿದಿದೆ.

ರಾಜ್ಯದ ಇತರ ನಗರದಲ್ಲಿ ಇಂದಿನ ಗಾಳಿಯ ಗುಣಮಟ್ಟ (Air Quality Index)

  • ಬೆಂಗಳೂರು –178
  • ಮಂಗಳೂರು-186
  • ಮೈಸೂರು –169
  • ಬೆಳಗಾವಿ – 160
  • ಕಲಬುರ್ಗಿ-126
  • ಶಿವಮೊಗ್ಗ – 160
  • ಬಳ್ಳಾರಿ – 168
  • ಹುಬ್ಬಳ್ಳಿ- 152
  • ಉಡುಪಿ –184
  • ವಿಜಯಪುರ –141

ಗಾಳಿ ಗುಣಮಟ್ಟ ತಿಳಿಯುವುದು ಹೇಗೆ?

  • ಉತ್ತಮ- 0-50
  • ಮಧ್ಯಮ – 50-100
  • ಕಳಪೆ – 100-150
  • ಅನಾರೋಗ್ಯಕರ – 150-200
  • ಗಂಭೀರ – 200 – 300
  • ಅಪಾಯಕಾರಿ – 300 -500+

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

‘ಅಮೃತಧಾರೆ’:ಕಳೆದುಕೊಂಡಿದ್ದಕ್ಕಿಂತ 10 ಪಟ್ಟು ಹೆಚ್ಚು ಗಳಿಸ್ತೀನಿ; ಗೌತಮ್ ಚಾಲೆಂಜ್ – Kannada News | Amrutadhare: Gautham’s Epic Comeback New Business Plan and Jayadev’s Downfall Begins

‘ಅಮೃತಧಾರೆ’ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್ ಬರೋ ಸಮಯ ಬಂದಿದೆ. ಗೌತಮ್ ಅವರು ಕ್ಯಾಬ್ ಓಡಿಸಿಕೊಂಡು ಹಾಯಾಗಿದ್ದ. ಮಗ ಕ್ಯಾಬ್ ಓಡಿಸೋದನ್ನು ನೋಡಿ ಅವನ ತಾಯಿ ಬೇಸರ ಮಾಡಿಕೊಂಡಿದ್ದಾರೆ. ಈ ವಿಷಯವನ್ನು ಭೂಮಿಕಾ ಬಳಿ ಹೇಳುವಾಗ ಗೌತಮ್ ಇದನ್ನು ಕದ್ದು ಕೇಳಿಸಿಕೊಂಡಿದ್ದಾನೆ. ಅಷ್ಟೇ ಅಲ್ಲ, ಉದ್ಯಮ ಶುರು ಮಾಡೋದಾಗಿ ಹೇಳಿದ್ದಾನೆ. ಇದರಿಂದ ಹೊಸ ಅಧ್ಯಾಯ ತೆರೆದುಕೊಳ್ಳುವ ಸಾಧ್ಯತೆ ಇದೆ.

ಗೌತಮ್ ದೀವಾನ್ ‘ದೀವಾನ್ ಗ್ರೂಪ್ ಆಫ್ ಕಂಪನೀಸ್’ ಸಂಸ್ಥೆಯ ಮಾಲೀಕನಾಗಿದ್ದ. ಆದರೆ, ಆತನ ಮಲತಾಯಿ ಅವನಿಗೆ ಮೋಸ ಮಾಡಿದಳು. ಆತನ ತಮ್ಮ ಜಯದೇವ್ ಕೂಡ ಇದೇ ಕೆಲಸ ಮಾಡಿದ. ಮೋಸದಿಂದ ಎಲ್ಲ ಆಸ್ತಿಯನ್ನ ಬರೆಸಿಕೊಂಡನು. ಇದರಿಂದ ಗೌತಮ್ ಮನೆ ಬಿಟ್ಟು ಹೋಗುವಂತೆ ಆಯಿತು.

ಮೊದಲು ಭೂಮಿಕಾ ಗೌತಮ್ ಬಿಟ್ಟು ಹೋದಳು. ಇದರಿಂದ ಗೌತಮ್ ದೀವಾನ್ ಒಂಟಿ ಆದನು. ಮನೆಯವರ ಕುತಂತ್ರ ಸಹಿಸಲಾರದೆ ಆಸ್ತಿ ಬರೆದುಕೊಟ್ಟು ಮನೆ ಬಿಟ್ಟು ಹೋದನು. ಈಗ ಗೌತಮ್ ಹಾಗೂ ಭೂಮಿಕಾ ಒಂದಾಗಿದ್ದಾರೆ. ಈ ಸಂದರ್ಭದಲ್ಲಿ ಆತ ಕ್ಯಾಬ್ ಓಡಿಸಿಕೊಂಡು ಇರೋದನ್ನು ಆತನ ತಾಯಿ ಇಷ್ಟಪಟ್ಟಿಲ್ಲ. ಹೀಗಾಗಿ, ಹೊಸ ಉದ್ಯಮ ಮಾಡೋದಾಗಿ ಅವನು ತಾಯಿ ಭರವಸೆ ನೀಡಿದ್ದಾನೆ.

‘ನಾನು ಕಳೆದುಕೊಂಡಿದ್ದಕ್ಕಿಂತ 10 ಪಟ್ಟು ಹೆಚ್ಚು ಗಳಿಸಿ, ನಿನ್ನ ಕಾಲ ಕೆಳಗೆ ಹಾಕ್ತೀನಿ’ ಎಂದು ಅಮ್ಮನಿಗೆ ಪ್ರಾಮಿಸ್ ಮಾಡಿದ್ದಾನೆ. ಗೌತಮ್ ದೀವಾನ್ ಮಾತನ್ನು ಕೇಳಿ ತಾಯಿ ಖುಷಿ ಆಗಿದ್ದಾಳೆ. ಗೌತಮ್ ಇದನ್ನು ಸಾಧಿಸಿ ತೋರಿಸುತ್ತಾನೆ ಎಂಬ ನಂಬಿಕೆ ಎಲ್ಲರಿಗೂ ಬಂದಿದೆ.

ಇದನ್ನೂ ಓದಿ: ‘ಅಮೃತಧಾರೆ’; ಮಿಂಚು ಕೂಡ ಗೌತಮ್ ಮಗಳು ಅನ್ನೋದು ಗೊತ್ತಾಗಿ ಹೋಯ್ತು

ಅತ್ತ ಜಯದೇವ್ಗೆ ಸಂಕಷ್ಟ ಎದುರಾಗಿದೆ. ಅವರು ಮಾಡಿದ ಸಾಲದಿಂದ ಸಂಕಷ್ಟ ಬಂದಿದೆ. ಬ್ಯಾಂಕ್ನವರು ಮನೆಗೆ ಬಂದು ಪೀಡಿಸುತ್ತಿದ್ದಾರೆ. ಇದರಿಂದ ಮುಂದಿನ ದಿನಗಳಲ್ಲಿ ಸಾಕಷ್ಟು ಸಮಸ್ಯೆ ಎದುರಿಸೋ ಪರಿಸ್ಥಿತಿ ಬರಬಹುದು ಎಂದು ಹೇಳಲಾಗುತ್ತಾ ಇದೆ. ಗೌತಮ್ ಹಾಗೂ ಭೂಮಿಕಾ ಒಂದಾದ ಖುಷಿಯಲ್ಲಿ ಎಲ್ಲರೂ ಇದ್ದರು. ಇದರ ಜೊತೆ ಈಗ ಬಂಪರ್ ಸಿಹಿಸುದ್ದಿ ಸಿಕ್ಕಂತೆ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link