ಸಂಸತ್ತಿನಲ್ಲಿ ರಾಜಕೀಯ ಸಮರ, ಮಾರ್ಚ್ 9ರಂದು ಸ್ಪೀಕರ್ ಓಂ ಬಿರ್ಲಾ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆ ಸಾಧ್ಯತೆ – Kannada News | Lok Sabha Speaker Om Birla No Confidence Motion: March 9 Vote Likely, Key Details here
ನವದೆಹಲಿ, ಫೆಬ್ರವರಿ 11: ಲೋಕಸಭಾ ಸ್ಪೀಕರ್ ಓಂ ಬಿರ್ಲಾ(Om Birla) ವಿರುದ್ಧದ ಅವಿಶ್ವಾಸ ನಿರ್ಣಯವನ್ನು ಮಾರ್ಚ್ 9 ರಂದು ಮಂಡಿಸುವ ಸಾಧ್ಯತೆಯಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ಎಎನ್‌ಐ ತಿಳಿಸಿದೆ. ಓಂ ಬಿರ್ಲಾ ಅವರನ್ನು ಲೋಕಸಭಾ ಸ್ಪೀಕರ್ ಹುದ್ದೆಯಿಂದ ಪದಚ್ಯುತಗೊಳಿಸುವ ಪ್ರಕ್ರಿಯೆಯನ್ನು ವಿರೋಧ ಪಕ್ಷಗಳು ಆರಂಭಿಸಿರುವಂತೆಯೇ ಈ ಬೆಳವಣಿಗೆ ಸಂಭವಿಸಿದೆ. ಕಾಂಗ್ರೆಸ್(Congress) ಪಕ್ಷವು ಇತರೆ ವಿರೋಧ ಪಕ್ಷಗಳೊಂದಿಗೆ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ಗೊತ್ತುವಳಿಯ ನೋಟಿಸ್ ಅನ್ನು ಲೋಕಸಭಾ ಪ್ರಧಾನ ಕಾರ್ಯದರ್ಶಿ ಉತ್ಪಲ್…