ಮಳೆಗೆ ಕಾಂಪೌಂಡ್ ಕುಸಿದು 7 ಜನ ಸಾವು: ಮೃತರ ಬಗ್ಗೆ ಮಾಹಿತಿ ನೀಡಿದ ಡಿಕೆ ಶಿವಕುಮಾರ್ – Kannada News | Bengaluru: 7 death in Wall Collapse Amid Heavy Rain: DK Shivakumar Shares Details of Victims
ಬೆಂಗಳೂರು, ಏಪ್ರಿಲ್ 29: ಮಳೆಯಿಂದಾಗಿ ಬೌರಿಂಗ್ ಆಸ್ಪತ್ರೆಯ ಎಮರ್ಜೆನ್ಸಿ ವಿಭಾಗದ ಬಳಿ ಕಾಂಪೌಂಡ್ ಕುಸಿತಗೊಂಡು ಬೀದಿಬದಿ ವ್ಯಾಪಾರ ಮಾಡಿತ್ತಿದ್ದ ಐವರು ಹಾಗೂ ಇಬ್ಬರು ಪಾದಚಾರಿಗಳು ಸೇರಿದಂತೆ 7 ಮಂದಿ ಉಸಿರು ನಿಲ್ಲಿಸಿದ್ದಾರೆ. ಬೆಂಗಳೂರು ಅಭಿವೃದ್ಧಿ ಸಚಿವರು ಆಗಿರುವ ಡಿಸಿಎಂ ಡಿಕೆ ಶಿವಕುಮಾರ್, ಸ್ಥಳಕ್ಕೆ ಆಗಮಿಸಿ ಮಾಹಿತಿ ಪಡೆದರು. ಬಳಿಕ ಮಾತನಾಡಿದ ಅವರು, ಮೃತರ ಪೈಕಿ ನಾಲ್ವರು ಸ್ಥಳೀಯ ವ್ಯಾಪಾರಿಗಳು, ಇಬ್ಬರು ಕೇರಳದವರು ಮತ್ತು ಮತ್ತೊಬ್ಬರ ಗುರುತು ಪತ್ತೆಯಾಗಿಲ್ಲ. ಆರು ವರ್ಷದ ಮಗು ಕೂಡ ಸಾವನ್ನಪ್ಪಿದೆ. ಮೃತಪಟ್ಟವರು ಒಬ್ಬರು…