ನೆರೆ ರಾಜ್ಯಗಳಲ್ಲಿ ಹಕ್ಕಿ ಜ್ವರದ ಅಬ್ಬರ: ಕರ್ನಾಟಕದಲ್ಲೂ ಶುರುವಾಯತ್ತು H5N1 ಟೆನ್ಷನ್ – Kannada News | Bird Flu Alert in Karnataka: Doctors Urge Preventive Measures
ಬೆಂಗಳೂರು, ಫೆಬ್ರವರಿ 08: ನೆರೆ ರಾಜ್ಯಗಳಾದ ಮಹಾರಾಷ್ಟ್ರ ಮತ್ತು ತಮಿಳುನಾಡುಗಳಲ್ಲಿ ಹಕ್ಕಿ ಜ್ವರದ ಭೀತಿ ಹಿನ್ನೆಲೆ ರಾಜ್ಯದಲ್ಲೂ H5N1 ಟೆನ್ಷನ್ ಶುರುವಾಗಿದೆ. ಹಕ್ಕಿ ಜ್ವರಕ್ಕೆ ತಮಿಳನಾಡಿನಲ್ಲಿ 1,500ಕ್ಕೂ ಹೆಚ್ಚು ಕಾಗೆಗಳು ಮೃತಪಟ್ಟಿದ್ದರೆ, ಇತ್ತ ಮಹಾರಷ್ಟ್ರದಲ್ಲೂ ವೈರಸ್ ಸದ್ದು ಮಾಡತೊಡಗಿದೆ. ಹೀಗಾಗಿ ಗಡಿ ಭಾಗದ ಜಿಲ್ಲೆಗಳಲ್ಲಿ ಎಚ್ಚರಿಕೆ ವಹಿಸುವಂತೆ ಪಶುಸಂಗೋಪಾನ ಇಲಾಖೆ ಸೂಚಿಸಿದೆ. ಹಕ್ಕಿ ಜ್ವರದ ತಡೆಗೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಏನಿದು ಹಕ್ಕಿಜ್ವರ? ಇದು H5N1 ವೈರಸ್‌ನಿಂದ ಪಕ್ಷಿಗಳಲ್ಲಿ ಹರಡುವ ಸಾಂಕ್ರಾಮಿಕ ಕಾಯಿಲೆಯಾಗಿದ್ದು, ಸೋಂಕಿತ ಪಕ್ಷಿಗಳ…