All posts by nagaraj11081993

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿಗೆ ಟಿಎಂಸಿಗೆ ಬೆಂಬಲಿಗರಿಂದ ಮುತ್ತಿಗೆ; ಮತಗಟ್ಟೆ ಬಳಿ ಲಾಠಿ ಚಾರ್ಜ್ – Kannada News | West Bengal Elections TMC Supporters surrounded BJP Leader Suvendu Adhikari Near polling Booth

ಕೊಲ್ಕತ್ತಾ, ಏಪ್ರಿಲ್ 29: ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ (West Bengal Elections) ಎರಡನೇ ಹಂತದ ಮತದಾನವು ಪ್ರಸ್ತುತ 7 ಜಿಲ್ಲೆಗಳಲ್ಲಿರುವ 142 ಕ್ಷೇತ್ರಗಳಲ್ಲಿ ನಡೆಯುತ್ತಿದ್ದು, ಮತಗಟ್ಟೆಗಳಲ್ಲಿ ಬಿಗಿ ಭದ್ರತೆ ಒದಗಿಸಲಾಗಿದೆ. ಇದರ ನಡುವೆ ಮತ್ತೊಮ್ಮೆ ಟಿಎಂಸಿ ಮತ್ತು ಬಿಜೆಪಿ ನಡುವೆ ಜಗಳ ನಡೆದಿದ್ದು, ಗಲಾಟೆ ನಿಲ್ಲಿಸಲು ಪೊಲೀಸರು ಲಾಠಿಚಾರ್ಜ್ ಮಾಡಬೇಕಾಯಿತು. ಪಶ್ಚಿಮ ಬಂಗಾಳದ ವಿರೋಧ ಪಕ್ಷದ ನಾಯಕ ಹಾಗೂ ಬಿಜೆಪಿ ಅಭ್ಯರ್ಥಿ ಸುವೇಂದು ಅಧಿಕಾರಿ ಭವಾನಿಪುರ ಮತಗಟ್ಟೆಯನ್ನು ಪರಿಶೀಲಿಸಲು ಬಂದಾಗ ಟಿಎಂಸಿ ಬೆಂಬಲಿಗರು ಅವರನ್ನು ಘೇರಾವ್ ಮಾಡಿ “ಜೈ ಬಂಗಾಳ” ಎಂದು ಘೋಷಣೆಗಳನ್ನು ಕೂಗಲು ಪ್ರಾರಂಭಿಸಿದರು.

ದಕ್ಷಿಣ ಕೋಲ್ಕತ್ತಾದ ಮತಗಟ್ಟೆಯಿಂದ ಜನಸಮೂಹವನ್ನು ಚದುರಿಸಲು ಸಿಆರ್‌ಪಿಎಫ್ ಮತ್ತು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದರು. ಬಂಗಾಳದ ಕೆಲವು ಪ್ರದೇಶಗಳಲ್ಲಿ ಕೆಲವು ಸಣ್ಣಪುಟ್ಟ ಘಟನೆಗಳನ್ನು ಹೊರತುಪಡಿಸಿ ಮತದಾನ ಶಾಂತಿಯುತವಾಗಿ ನಡೆಯುತ್ತಿದೆ ಎಂದು ಚುನಾವಣಾ ಸಮಿತಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. 2021ರ ವಿಧಾನಸಭಾ ಚುನಾವಣೆಯಲ್ಲಿ ನಂದಿಗ್ರಾಮದಲ್ಲಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು ಸೋಲಿಸಿದ ನಂತರ ಭವಾನಿಪುರವು ಸುವೇಂದು ಅಧಿಕಾರಿ ಅವರಿಗೆ ಪ್ರತಿಷ್ಠೆಯ ಹೋರಾಟವಾಗಿ ಮಾರ್ಪಟ್ಟಿದೆ.

ಇದನ್ನೂ ಓದಿ: West Bengal Election 2026: 142 ಕ್ಷೇತ್ರಗಳು, 1448 ಅಭ್ಯರ್ಥಿಗಳು, 3.21 ಕೋಟಿ ಮತದಾರರು, ಪಶ್ಚಿಮ ಬಂಗಾಳದಲ್ಲಿ ಇಂದು ಎರಡನೇ ಹಂತದ ಮತದಾನ

ಮತದಾನದ ಮಧ್ಯೆ ಬಿಜೆಪಿ ನಾಯಕ ಸುವೇಂದು ಅಧಿಕಾರಿ ಸ್ಥಳಕ್ಕೆ ಭೇಟಿ ನೀಡಿದಾಗ ಕೊಲ್ಕತ್ತಾದ ಒಂದು ಬೂತ್‌ನಲ್ಲಿ ಉದ್ವಿಗ್ನ ಕ್ಷಣ ತೆರೆದುಕೊಂಡಿತು. ಟಿಎಂಸಿ ಬೆಂಬಲಿಗರ ಗುಂಪು ಅವರನ್ನು ಸುತ್ತುವರೆದ ನಂತರ ಪರಿಸ್ಥಿತಿ ಸ್ವಲ್ಪ ಸಮಯದವರೆಗೆ ಉಲ್ಬಣಗೊಂಡಿತು. ಬೂತ್ ಭೇಟಿಯ ಸಮಯದಲ್ಲಿ ಟಿಎಂಸಿ ಬೆಂಬಲಿಗರು ಸುವೇಂದು ಅಧಿಕಾರಿಯನ್ನು ಸುತ್ತುವರೆದರು. ರಾಜ್ಯದ ವಿರೋಧ ಪಕ್ಷದ ನಾಯಕ ಮತ್ತು ಭಬಾನಿಪುರ ಮತ್ತು ನಂದಿಗ್ರಾಮದ ಬಿಜೆಪಿ ಅಭ್ಯರ್ಥಿ ಸುವೇಂದು ಅಧಿಕಾರಿ ಅವರು ವ್ಯವಸ್ಥೆಗಳನ್ನು ಪರಿಶೀಲಿಸಲು ಮತಗಟ್ಟೆಗೆ ಬಂದರು. ಅವರ ಭೇಟಿಯ ಸಮಯದಲ್ಲಿ, ಟಿಎಂಸಿ ಬೆಂಬಲಿಗರು ಒಟ್ಟುಗೂಡಿದರು ಮತ್ತು “ಜೈ ಬಂಗಾಳ” ಘೋಷಣೆಗಳನ್ನು ಕೂಗಿದರು.

ಇದನ್ನೂ ಓದಿ: ಬಂಗಾಳದಲ್ಲಿ ವಿವಾದ ಸೃಷ್ಟಿಸಿದ ಎನ್‌ಕೌಂಟರ್ ಸ್ಪೆಷಲಿಸ್ಟ್ ಅಜಯ್ ಶರ್ಮಾ ಯಾರು?

ಜನಸಮೂಹ ಶೀಘ್ರದಲ್ಲೇ ಅವರನ್ನು ಸುತ್ತುವರೆದ ಹಿನ್ನೆಲೆಯಲ್ಲಿ ಮತಗಟ್ಟೆಯಲ್ಲಿ ಉದ್ವಿಗ್ನ ವಾತಾವರಣ ಸೃಷ್ಟಿಯಾಯಿತು. ಸ್ಥಳೀಯ ಪೊಲೀಸರೊಂದಿಗೆ ಸಿಆರ್‌ಪಿಎಫ್ ಸಿಬ್ಬಂದಿ ಕೂಡ ಪರಿಸ್ಥಿತಿಯನ್ನು ನಿರ್ವಹಿಸಲು ಮಧ್ಯಪ್ರವೇಶಿಸಿದರು. ಗುಂಪನ್ನು ಚದುರಿಸಲು ಮತ್ತು ಪ್ರದೇಶವನ್ನು ತೆರವುಗೊಳಿಸಲು ಲಘು ಲಾಠಿ ಪ್ರಹಾರ ನಡೆಸಲಾಯಿತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಸರ್ಕಾರಿ ಶಾಲೆಗಳತ್ತ ಮಕ್ಕಳನ್ನು ಸೆಳೆಯಲು ರಾಜ್ಯ ಸರ್ಕಾರದ ‘ಶಿಕ್ಷಣ ಗ್ಯಾರಂಟಿ’ ಅಸ್ತ್ರ! – Kannada News | Karnataka government’s Education Guarantee to attract children to government schools and colleges affter SSLC, PUC Results

ಶಿಕ್ಷಣ ಗ್ಯಾರಂಟಿImage Credit source: x.com/siddaramaiah

ಬೆಂಗಳೂರು, ಏಪ್ರಿಲ್​ 29: 2025–26ನೇ ಶೈಕ್ಷಣಿಕ ಸಾಲಿನ ಎಸ್​​​ಎಸ್​​​ಎಲ್​​ಸಿ (SSLC) ಮತ್ತು ದ್ವಿತೀಯ ಪಿಯುಸಿ (2nd PUC) ಪರೀಕ್ಷೆ ಫಲಿತಾಂಶ ಇತ್ತೀಚೆಗೆ ಬಿಡುಗಡೆಗೊಂಡಿದೆ. ಈ ಬೆನ್ನಲ್ಲೇ ವಿದ್ಯಾರ್ಥಿಗಳನ್ನು ಸೆಳೆಯುವ ನಿಟ್ಟಿನಲ್ಲಿ ಖಾಸಗಿ ಶಾಲಾ-ಕಾಲೇಜುಗಳು ನಾನಾ ಕಸರತ್ತು ನಡೆಸುತ್ತಿವೆ. ವಿಶೇಷವೆಂದರೆ, ಕಾಂಗ್ರೆಸ್​ ಸರ್ಕಾರ ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ಮಕ್ಕಳ ಸಂಖ್ಯೆ ಹೆಚ್ಚಳಕ್ಕಾಗಿ ಜಾಹೀರಾತು ನೀಡುವ ಮೂಲಕ ಗಮನಸೆಳೆದಿದೆ. ಆ ಮೂಲಕ ರಾಜ್ಯದಲ್ಲಿ ಉತ್ತಮಗುಣಮಟ್ಟದ ಶಿಕ್ಷಣ ಒದಗಿಸುವ ‘ಗ್ಯಾರಂಟಿ’ ನೀಡಿದೆ.

ಎಸ್​​ಎಸ್​​ಎಲ್​ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟ. ಇತ್ತೀಚೆಗಷ್ಟೆ ಎರಡು ಪರೀಕ್ಷೆಯ ಫಲಿತಾಂಶ ಬಿಡುಗಡೆಗೊಂಡಿದೆ. ಇತಿಹಾಸದಲ್ಲೇ ಮೊದಲ ಬಾರಿಗೆ ತೇರ್ಗಡೆಯಲ್ಲಿ ದಾಖಲೆಯ ರಿಸಲ್ಟ್​ ಬಂದಿದೆ. ಪ್ರಸಕ್ತ ವರ್ಷದಲ್ಲಿ ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ಕೂಡ ಉತ್ತಮ ರಿಸಲ್ಟ್​ ದಾಖಲಾಗಿದೆ. ಎಸ್​​ಎಸ್​​ಎಲ್​ಸಿಯಲ್ಲಿ ಶೇ 94. 10 ಮತ್ತು ದ್ವಿತೀಯ ಪಿಯುಸಿಯಲ್ಲಿ ಶೇ 86.48ರಷ್ಟು ಫಲಿತಾಂಶ ಬಂದಿದೆ.

ಇದನ್ನೂ ಓದಿ: CBSE 10 Second Board Exam: CBSE 10ನೇ ತರಗತಿ ಎರಡನೇ ಬಾರಿಯ ಬೋರ್ಡ್ ಪರೀಕ್ಷಾ ವೇಳಾಪಟ್ಟಿ ಪ್ರಕಟ; ಮೇ 15ರಿಂದ ಪರೀಕ್ಷೆ ಆರಂಭ

ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ಎಸ್​​ಎಸ್​​ಎಲ್​ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ದಾಖಲೆಯ ರಿಸಲ್ಟ್ ಬೆನ್ನಲ್ಲೇ ರಾಜ್ಯ ಸರ್ಕಾರ ಇದೀಗ ಮತ್ತಷ್ಟು ವಿದ್ಯಾರ್ಥಿಗಳನ್ನು ಸರ್ಕಾರಿ ಶಾಲಾ-ಕಾಲೇಜುಗಳತ್ತ ಸೆಳೆಯಲು ಜಾಹಿರಾತು ನೀಡುವ ಮೂಲಕ ಗಮನಸೆಳೆದಿದೆ. ಆ ಮೂಲಕ ರಾಜ್ಯದಲ್ಲಿ ಉತ್ತಮಗುಣಮಟ್ಟ ಶಿಕ್ಷಣ ಒದಗಿಸುವ ನಿಟ್ಟಿನಲ್ಲಿ ‘ಶಿಕ್ಷಣ ಗ್ಯಾರಂಟಿ’ ನೀಡುವ ಭರವಸೆ ನೀಡಿದೆ.

8 ಶಿಕ್ಷಣ ಗ್ಯಾರಂಟಿಗಳು

  • ಗ್ಯಾರಂಟಿ 1: ಶಿಕ್ಷಕರ ಕೊರತೆಗೆ ಮುಕ್ತಿ;  5ನೇ ತರಗತಿಯವರೆಗೆ ಪ್ರತಿ ತರಗತಿಗೆ ಒಬ್ಬರು ಶಿಕ್ಷಕರು ಹಾಗೂ 6ನೇ ತರಗತಿಯಿಂದ ಪ್ರತಿ ವಿಷಯಕ್ಕೂ ಪ್ರತ್ಯೇಕ ವಿಷಯವಾರು ಶಿಕ್ಷಕರ ನೇಮಕಾತಿ.
  • ಗ್ಯಾರಂಟಿ 2: ಪೋಷಕರ ಆಶಯದಂತೆ ಬೋಧನಾ ಮಾಧ್ಯಮ; ಕನ್ನಡದ ಜೊತೆಗೆ ಎಲ್ಲಾ ಶಾಲೆಗಳಲ್ಲೂ ಇಂಗ್ಲಿಷ್ ಮಾಧ್ಯಮ ಲಭ್ಯ. ಇಂಗ್ಲಿಷ್‌ನಲ್ಲಿ ಬೋಧಿಸಲು ಶಿಕ್ಷಕರಿಗೆ ವಿಶೇಷ ತರಬೇತಿ ನೀಡಲಾಗುವುದು.
  • ಗ್ಯಾರಂಟಿ 3: ಉಚಿತ ಸಾರಿಗೆ ಸೌಲಭ್ಯ; ಕರ್ನಾಟಕ ಪಬ್ಲಿಕ್ ಶಾಲೆ (KPS) ವಿದ್ಯಾರ್ಥಿಗಳಿಗೆ ಉಚಿತ ಸಾರಿಗೆ ವ್ಯವಸ್ಥೆ ಕಲ್ಪಿಸಲಾಗುವುದು.
  • ಗ್ಯಾರಂಟಿ 4: ಡಿಜಿಟಲ್ ಶಿಕ್ಷಣ; 1ನೇ ತರಗತಿಯಿಂದ ಕಂಪ್ಯೂಟರ್ ಶಿಕ್ಷಣ ಹಾಗೂ 3ನೇ ತರಗತಿಯಿಂದ ಕೃತಕ ಬುದ್ಧಿಮತ್ತೆ (AI) ಕಲಿಕೆ, ಮುಂದಿನ 3 ವರ್ಷಗಳಲ್ಲಿ ಎಲ್ಲಾ ಕೆ.ಪಿ.ಎಸ್ ಶಾಲೆಗಳಲ್ಲಿ ಕಂಪ್ಯೂಟರ್ ಶಿಕ್ಷಕರ ನೇಮಕ ಮಾಡಲಾಗುವುದು.
  • ಗ್ಯಾರಂಟಿ 5: ಕಲೆ ಮತ್ತು ದೈಹಿಕ ಶಿಕ್ಷಣ; ಸಂಗೀತ, ಕಲೆ ಮತ್ತು ದೈಹಿಕ ಶಿಕ್ಷಣಕ್ಕಾಗಿ ಶಿಕ್ಷಕರ ನೇಮಕ, ಈ ವರ್ಷದಿಂದಲೇ ದೈಹಿಕ ಶಿಕ್ಷಣ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು.
  • ಗ್ಯಾರಂಟಿ 6: ಶೈಕ್ಷಣಿಕೇತರ ಕೆಲಸಗಳಿಂದ ಮುಕ್ತಿ; ಶೈಕ್ಷಣಿಕೇತರ ಕೆಲಸಗಳ ನಿರ್ವಹಣೆಗೆ ಪ್ರತ್ಯೇಕ ಸಿಬ್ಬಂದಿ ನೇಮಕ ಮಾಡಲಾಗುವುದು. ಇದರೊಂದಿಗೆ ಶಿಕ್ಷಕರು ಕೇವಲ ಬೋಧನೆಯ ಮೇಲೆ ಮಾತ್ರ ಗಮನಹರಿಸಲು ಅವಕಾಶ.
  • ಗ್ಯಾರಂಟಿ 7: ಕಲಿಕೆಯ ಗುಣಮಟ್ಟದ ಮೇಲ್ವಿಚಾರಣೆ; ಪ್ರತಿ ಮಗುವಿನ ಪ್ರಗತಿಗಾಗಿ ‘ಪಾಠ ಆಧಾರಿತ ಮೌಲ್ಯಮಾಪನ’ (Lesson Based Assessment) ವ್ಯವಸ್ಥೆ, ಪ್ರತಿ ಎರಡು ತಿಂಗಳಿಗೊಮ್ಮೆ ಪೋಷಕರು ಮತ್ತು ಶಿಕ್ಷಕರ ಕಡ್ಡಾಯ ಸಭೆ ಮಾಡುವುದು.
  • ಗ್ಯಾರಂಟಿ 8: ಕೌಶಲ ಶಿಕ್ಷಣ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ; 6ನೇ ತರಗತಿಯಿಂದಲೇ ಕೌಶಲ ಶಿಕ್ಷಣ ಪ್ರಾರಂಭಿಸಲಾಗುವುದು ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಲು ವಿಶೇಷ ತರಬೇತಿ ಸೌಲಭ್ಯ ಒದಗಿಸಲಾಗುವುದು. ಹೀಗೆ 8 ಶಿಕ್ಷಣ ಗ್ಯಾರಂಟಿಗಳನ್ನು ರಾಜ್ಯ ಸರ್ಕಾರ ನೀಡಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಜಪಾನ್​ಗೆ ಲಗ್ಗೆ ಇಡಲು ರೆಡಿಯಾದ ‘ಧುರಂಧರ್’ ಸಿನಿಮಾ; ಹೆಚ್ಚಲಿದೆ ಗಳಿಕೆ – Kannada News | Dhurandhar in Japan: Ranveer Singh’s Blockbuster Set for July 10 Release, Boosts Global Box Office

ವಿಶ್ವ ಬಾಕ್ಸ್ ಆಫೀಸ್‌ನಲ್ಲಿ ಆದಿತ್ಯ ಧಾರ್ ನಿರ್ದೇಶನದ ಮತ್ತು ರಣವೀರ್ ಸಿಂಗ್ ನಟನೆಯ ‘ಧುರಂಧರ್’ ಸಿನಿಮಾ ಸುನಾಮಿ ಎಬ್ಬಿಸಿತ್ತು. ಇದಾದ ಬಳಿಕ ಬಂದ ‘ಧುರಂಧರ್ 2’ ಚಿತ್ರವನ್ನು ಮತ್ತಷ್ಟು ಮೆಚ್ಚುಗೆ ಪಡೆಯಿತು. ಈ ಸಿನಿಮಾ ಅನೇಕ ದಾಖಲೆಗಳನ್ನು ಉಡೀಸ್ ಮಾಡಿದೆ. ಈಗ ‘ಧುರಂಧರ್’ ಚಿತ್ರ ಜುಲೈ 10ರಂದು, ಜಪಾನ್‌ನಾದ್ಯಂತ ಅದ್ದೂರಿಯಾಗಿ ಬಿಡುಗಡೆಯಾಗಲಿದೆ. ಜಪಾನ್ ಭಾಷೆಗೆ ಡಬ್ ಆಗಿ ರಿಲೀಸ್ ಆಗಲಿದೆ ಅನ್ನೋದು ವಿಶೇಷ.

ಜಪಾನ್ ಅಲ್ಲಿ ಭಾರತದ ಸಿನಿಮಾಗಳಿಗೆ ಬೇಡಿಕೆ ಇದೆ. ಅದರಲ್ಲೂ ಆ್ಯಕ್ಷನ್ ಹಾಗೂ ಫ್ಯಾಂಟಸಿ ಚಿತ್ರಗಳನ್ನು ಅಲ್ಲಿನ ಜನರು ಸಾಕಷ್ಟು ವೀಕ್ಷಣೆ ಮಾಡುತ್ತಾರೆ. ‘ಕೆಜಿಎಫ್’, ‘ಆರ್​​ಆರ್​​ಆರ್​​’ ರೀತಿಯ ಸಿನಿಮಾಗಳು ಜಪಾನ್ ಅಲ್ಲಿ ರಿಲೀಸ್​ ಆಗಿ ಮೆಚ್ಚುಗೆ ಪಡೆದಿವೆ. ಈಗ ‘ಧುರಂಧರ್’ ಚಿತ್ರದ ಸರದಿ.

ಈಗಾಗಲೇ ‘ಧುರಂಧರ್’ ಸಿನಿಮಾ ವಿಶ್ವದಾದ್ಯಂತ 1,328 ಕೋಟಿ ರೂಪಾಯಿಗೂ ಅಧಿಕ ಹಣ ಗಳಿಸಿದೆ.
ಹಿಂದಿ ಚಿತ್ರರಂಗದ ಅತಿ ದೊಡ್ಡ ಹಿಟ್ ಚಿತ್ರಗಳಲ್ಲಿ ಒಂದಾಗಿ ಹೊರಹೊಮ್ಮಿದೆ. ಜಪಾನ್ ರಿಲೀಸ್ ಬಳಿಕ ಸಿನಿಮಾದ ಗಳಿಕೆ ಮತ್ತಷ್ಟು ಹೆಚ್ಚುವ ನಿರೀಕ್ಷೆ ಇದೆ. ಉತ್ತರ ಅಮೆರಿಕದಲ್ಲಿ ಈ ಸಿನಿಮಾ ಸಾರ್ವಕಾಲಿಕ ನಂಬರ್ 1 ಹಿಂದಿ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಕೆನಡಾ, ಆಸ್ಟ್ರೇಲಿಯಾ, ಬ್ರಿಟನ್ ಮಾರುಕಟ್ಟೆಯಲ್ಲೂ ಈ ಚಿತ್ರವು ಭರ್ಜರಿ ಪ್ರದರ್ಶನ ಕಂಡು ಇತಿಹಾಸ ಸೃಷ್ಟಿಸಿದೆ. ಜಪಾನ್ ಪ್ರೇಕ್ಷಕರು ಇದನ್ನು ಹೇಗೆ ಸ್ವೀಕರಿಸುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

ಇದನ್ನೂ ಓದಿ: ಮತ್ತೆ ಒಂದಾದ ‘ಧುರಂಧರ್’ ಜೋಡಿ; ಆದಿತ್ಯ ಧಾರ್ ಹೊಸ ಚಿತ್ರಕ್ಕೆ ರಣವೀರ್ ಹೀರೋ

ಜಿಯೋ ಸ್ಟುಡಿಯೋಸ್ ಮತ್ತು ಬಿ62 ಸ್ಟುಡಿಯೋಸ್ ಜಂಟಿಯಾಗಿ ನಿರ್ಮಿಸಿರುವ ಈ ಚಿತ್ರದಲ್ಲಿ ರಣವೀರ್ ಸಿಂಗ್ ಅವರೊಂದಿಗೆ ಸಂಜಯ್ ದತ್, ಅಕ್ಷಯ್ ಖನ್ನಾ, ಆರ್. ಮಾಧವನ್, ಅರ್ಜುನ್ ರಾಂಪಾಲ್ ಮತ್ತು ಸಾರಾ ಅರ್ಜುನ್ ಅವರಂತಹ ಬಲಿಷ್ಠ ತಾರಾಗಣವಿದೆ. ಆದಿತ್ಯ ಧಾರ್ ಅವರು ಈ ಚಿತ್ರಕ್ಕೆ ಕಥೆ ಬರೆದು ನಿರ್ದೇಶಿಸುವುದರ ಜೊತೆಗೆ ಲೊಕೇಶ್ ಧಾರ್ ಮತ್ತು ಜ್ಯೋತಿ ದೇಶಪಾಂಡೆ ಅವರೊಂದಿಗೆ ನಿರ್ಮಾಣದ ಜವಾಬ್ದಾರಿಯನ್ನೂ ಹೊತ್ತಿದ್ದಾರೆ. ಒಟ್ಟಾರೆಯಾಗಿ, ಜಪಾನ್‌ನಲ್ಲೂ ‘ಧುರಂಧರ್’ ತನ್ನ ಅಬ್ಬರವನ್ನು ಮುಂದುವರಿಸುತ್ತದೆಯೇ ಎಂಬುದು ಸದ್ಯದ ಕುತೂಹಲ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಉಡುಪಿಯಲ್ಲಿ ಭೀಕರ ಅಪಘಾತ: ರಸ್ತೆ ಬದಿ ನಿಂತಿದ್ದ ಟ್ರಕ್​​ಗೆ ಪ್ರವಾಸಿ ಬಸ್ ಡಿಕ್ಕಿ; ಇಬ್ಬರು ವಿದ್ಯಾರ್ಥಿಗಳು ಸಾವು! – Kannada News | Tragic Udupi Road Crash: Byndoor Bus Hits Tanker, 2 College Students Dead

ಉಡುಪಿ, ಏ.29: ಬೇಸಿಗೆ ರಜೆಯಲ್ಲಿ ಊರೆಲ್ಲ ಸುತ್ತುವ ಎಂದು ಕರಾವಳಿ ಕಡೆ ಪ್ರವಾಸ ಕೈಗೊಂಡಿದ್ದ ವಿದ್ಯಾರ್ಥಿಗೆ ಯಮನ ದರ್ಶನವಾಗಿದೆ, ಜಿಲ್ಲೆಯ ಬೈಂದೂರು ತಾಲೂಕಿನ ತ್ರಾಸಿ ಬೀಚ್ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ಮಧ್ಯಾಹ್ನ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಪ್ರವಾಸಿಗರಿದ್ದ ಬಸ್ ರಸ್ತೆ ಬದಿಯಲ್ಲಿ ನಿಂತಿದ್ದ ಟ್ರಕ್​​ಗೆ ಅತಿ ವೇಗವಾಗಿ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಶಿವಮೊಗ್ಗದ ಶಂಕರಘಟ್ಟದ ರಂಭಾಪುರಿ ಕಾಲೇಜಿನ ಬಿಕಾಂ ವಿದ್ಯಾರ್ಥಿಗಳು ಕರಾವಳಿ ಭಾಗಕ್ಕೆ ಪ್ರವಾಸಕ್ಕೆಂದು ಬಂದಿದ್ದರು. ಮುರುಡೇಶ್ವರ ದರ್ಶನ ಮುಗಿಸಿ ಉಡುಪಿಯತ್ತ ಪ್ರಯಾಣಿಸುತ್ತಿದ್ದ ವೇಳೆ, ತ್ರಾಸಿ ಬೀಚ್ ಸಮೀಪದ ಹೆದ್ದಾರಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಬಸ್ ರಸ್ತೆ ಬದಿಯಲ್ಲಿದ್ದ ಟ್ರಕ್​​ಗೆ ರಭಸವಾಗಿ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಬಸ್ಸಿನಲ್ಲಿದ್ದ ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ. ಬಸ್ಸಿನಲ್ಲಿ ಒಟ್ಟು 47 ಮಂದಿ ಪ್ರಯಾಣಿಸುತ್ತಿದ್ದರು. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿರುವ ಹಲವು ವಿದ್ಯಾರ್ಥಿಗಳನ್ನು ಕುಂದಾಪುರದ ವಿವಿಧ ಖಾಸಗಿ ಆಸ್ಪತ್ರೆಗಳಿಗೆ ದಾಖಲಿಸಲಾಗಿದ್ದು, ಕೆಲವರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ. ಘಟನೆ ನಡೆದ ತಕ್ಷಣ ಸ್ಥಳೀಯರು ಹಾಗೂ ಪೊಲೀಸರು ರಕ್ಷಣಾ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ. ಗಂಗೊಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಅಪಘಾತ ಸಂಭವಿಸಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಧಾರವಾಡದಲ್ಲಿ ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ: ಮೂವರು ಪೊಲೀಸ್​ ಸಿಬ್ಬಂದಿಗೆ ಬಿಗ್​​ ಶಾಕ್​​ – Kannada News | Dharwad Police Suspends Three staffs After Student Death Over Harassment

ಧಾರವಾಡ, ಏಪ್ರಿಲ್​​ 29: ವಿದ್ಯಾರ್ಥಿ ಆದಿತ್ಯ ಮ್ಯಾಗೇರಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದ್ಯಾಗಿರಿ ಪೊಲೀಸ್ ಠಾಣೆಯ ಮೂವರು ಪೇದೆಗಳನ್ನು ಸಸ್ಪೆಂಡ್​​ ಮಾಡಲಾಗಿದೆ. ಹೆಡ್ ಕಾನ್ಸ್ಟೇಬಲ್ ಚಂದ್ರು ನಡುವಿನಮನಿ, ಕಿರಣ್ ಡೊಕ್ಕಣ್ಣನವರ್ ಮತ್ತು ಸಯದ್ ತಹಸಿಲ್ದಾರ್ ಅಮಾನತುಗೊಂಡಿರುವ ಅಧಿಕಾರಿಗಳು. ಗಾಂಜಾ ಸೇವನೆ ಆರೋಪದಡಿ ವಿದ್ಯಾರ್ಥಿ ಆದಿತ್ಯನನ್ನು ವಶಕ್ಕೆ ಪಡೆಯಲಾಗಿತ್ತು. ಪರೀಕ್ಷೆಯಲ್ಲಿ ಗಾಂಜಾ ಸೇವನೆ ನೆಗೆಟಿವ್ ಬಂದಿದ್ದರೂ, ಪೊಲೀಸರು ಆದಿತ್ಯನಿಂದ 2000 ರೂಪಾಯಿ ಹಣಕ್ಕೆ ಬೇಡಿಕೆ ಇಟ್ಟಿದ್ದರು. ತಾಯಿಯಿಂದ ಹಣ ಕೊಡಿಸಲು ಆದಿತ್ಯ ಯತ್ನಿಸಿದ್ದು, ತಾಯಿ ನಿರಾಕರಿಸಿದ ಕಾರಣ ನೇಣಿಗೆ ಶರಣಾಗಿದ್ದ ಎನ್ನಲಾಗಿತ್ತು.

ಪೊಲೀಸ್ ಆಯುಕ್ತರಿಗೆ ಪ್ರಹ್ಲಾದ್ ಜೋಶಿ ಕರೆ

ಪ್ರಕರಣ ಸಂಬಂಧ ಹುಬ್ಬಳ್ಳಿ-ಧಾರವಾಡ ನಗರ ಪೊಲೀಸ್ ಆಯುಕ್ತರಿಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ದೂರವಾಣಿ ಕರೆ ಮಾಡಿದ್ದಾರೆ. ಪ್ರಕರಣದ ನ್ಯಾಯಯುತ ತನಿಖೆ ನಡೆಸುವಂತೆ ಹಾಗೂ ಪ್ರಕರಣದಲ್ಲಿ ಭಾಗಿಯಾದ ತಪ್ಪಿತಸ್ಥ ಪೊಲೀಸ್ ಇನ್ಸಪೆಕ್ಟರ್ ಮತ್ತು ಸಿಬ್ಬಂದಿಯನ್ನು ಕೂಡಲೇ ಅಮಾನತುಗೊಳಿಸಿ, ಕಠಿಣ ಕ್ರಮ ಕೈಗೊಳ್ಳುವಂತೆ ಅವರು ಸೂಚನೆ ನೀಡಿದ್ದಾರೆ. ರಾಜ್ಯ ಸರ್ಕಾರ ಪ್ರಕರಣದ ನೈತಿಕ ಹೊಣೆ ಹೊರಬೇಕು ಮತ್ತು ಮೃತ ವಿದ್ಯಾರ್ಥಿಯ ಕುಟುಂಬಕ್ಕೆ ಪರಿಹಾರ ನೀಡಬೇಕೆಂದು ಅವರು ಆಗ್ರಹಿಸಿದ್ದಾರೆ.

ಡಿಸಿಪಿ ಶೃತಿ ನೇತೃತ್ವದಲ್ಲಿ ತನಿಖೆ

ಇನ್ನು ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ ಸಂಬಂಧ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಘಟನೆ ಸಂಬಂಧ ಹಿರಿಯ ಅಧಿಕಾರಿಗಳ ವರದಿ ಆಧಾರದಲ್ಲಿ ಮೂವರು ಪೊಲೀಸ್​​ ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ. ಡಿಸಿಪಿ ಶೃತಿ ನೇತೃತ್ವದಲ್ಲಿ ಪ್ರಕರಣದ ವಿಚಾರಣೆ ನಡೆಯುತ್ತಿದ್ದು, ಸಿಬ್ಬಂದಿ ಹಣ‌ ಕೇಳಿದ್ದರ ಬಗ್ಗೆಯೂ ತನಿಖೆಯಾಗಲಿದೆ. ಅಲ್ಲದೆ ಪ್ರಕರಣದಲ್ಲಿ ಯಾರೇ ಭಾಗಿಯಾಗಿದ್ದರೂ ಅವರನ್ನು ರಕ್ಷಣೆ ಮಾಡಲ್ಲ ಎಂದು ತಿಳಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

Video: ನಿಯಂತ್ರಣ ತಪ್ಪಿ ಸೈಕಲ್ ಸವಾರನ ಮೇಲೆ ಹರಿದು, ಎರಡು ಕಾರುಗಳಿಗೆ ಡಿಕ್ಕಿ ಹೊಡೆದ ಟ್ರ್ಯಾಕ್ಟರ್ – Kannada News | Speeding Tractor in Kasganj Causes Fatal Crash, CCTV Surfaces

ಲಕ್ನೋ, ಏಪ್ರಿಲ್ 29:ಉತ್ತರ ಪ್ರದೇಶದ ಕಾಸ್ಗಂಜ್‌ನಲ್ಲಿ ಬೆಚ್ಚಿಬೀಳಿಸುವ ಅಪಘಾತವೊಂದು ನಡೆದಿದೆ. ವೇಗವಾಗಿ ಬಂದ ಮರಳು ತುಂಬಿದ ಟ್ರ್ಯಾಕ್ಟರ್ ಟ್ರಾಲಿಯೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಬದಿಯಲ್ಲಿದ್ದ ಸೈಕಲ್ ಸವಾರನ ಮೇಲೆ ಹರಿದಿದೆ. ಅಪಘಾತದ ತೀವ್ರತೆಗೆ ಸೈಕಲ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಟ್ರ್ಯಾಕ್ಟರ್ ಅಷ್ಟಕ್ಕೇ ನಿಲ್ಲದೆ ಪಕ್ಕದಲ್ಲಿ ನಿಲ್ಲಿಸಿದ್ದ ಎರಡು ಕಾರುಗಳಿಗೂ ಡಿಕ್ಕಿ ಹೊಡೆದಿದೆ. ಚಾಲಕರು ಮಿತಿಯೊಳಗೆ ವಾಹನ ಚಾಲನೆ ಮಾಡಬೇಕು ಮತ್ತು ನಿಯಮ ಮೀರಿ ಭಾರವನ್ನು ಹೇರುವುದು ಕೇವಲ ತಮಗಷ್ಟೇ ಅಲ್ಲ, ರಸ್ತೆಯಲ್ಲಿರುವ ಇತರ ಅಮಾಯಕರಿಗೂ ಪ್ರಾಣಕ್ಕೆ ಕುತ್ತು ತರುತ್ತದೆ ಎಂಬುದನ್ನು ಮರೆಯಬಾರದು. ಪೊಲೀಸರು ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದು, ಮುಂದಿನ ತನಿಖೆ ಕೈಗೊಂಡಿದ್ದಾರೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

Video: ಕಿರಿದಾದ ರಸ್ತೆಯಲ್ಲಿ ಜನರ ಮೇಲೆ ನುಗ್ಗಿದ ಕಾರು; ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ – Kannada News | Asansol Car Attack: Viral CCTV Captures Violent Conflict in West Bengal Street

ಪಶ್ಚಿಮ ಬಂಗಾಳದ ಅಸನ್ಸೋಲ್‌ನಲ್ಲಿ ಭೀಕರ ಸಂಘರ್ಷವೊಂದು ಸಂಭವಿಸಿದ್ದು, ಕಿರಿದಾದ ಗಲ್ಲಿಯೊಂದರಲ್ಲಿ ನಡೆದ ಈ ಘಟನೆಯ ದೃಶ್ಯಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿವೆ. ಜನರ ಗುಂಪಿನ ಮೇಲೆ ಕಾರೊಂದು ನುಗ್ಗಲು ಪ್ರಯತ್ನಿಸಿದಾಗ ಪರಿಸ್ಥಿತಿ ವಿಕೋಪಕ್ಕೆ ತಿರುಗಿದ್ದು, ಕುಪಿತಗೊಂಡ ಸಾರ್ವಜನಿಕರು ಕಾರಿನ ಮೇಲೆ ಮನಬಂದಂತೆ ದಾಳಿ ನಡೆಸಿ ಜಖಂಗೊಳಿಸಿದ್ದಾರೆ. ಕಾರಿನ ಗಾಜುಗಳನ್ನು ಕಲ್ಲು ಮತ್ತು ದೊಣ್ಣೆಗಳಿಂದ ಹೊಡೆದು ಪುಡಿಪುಡಿ ಮಾಡುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ.

Source link

ಬಂದೇ ಬಿಡ್ತು ‘ಹೌಸ್ ಆಫ್ ದಿ ಡ್ರ್ಯಾಗನ್ 3’: ಬಿಡುಗಡೆ ದಿನಾಂಕ ಘೋಷಣೆ – Kannada News | House Of The Dragon season 3 trailer released

ವಿಶ್ವದ ಈ ವರೆಗಿನ ಅತ್ಯುತ್ತಮ ವೆಬ್ ಸರಣಿ ‘ಗೇಮ್ ಆಫ್ ಥ್ರೋನ್ಸ್’ (Game Of  Thrones) ಎನ್ನಲಾಗುತ್ತದೆ. ವಿಶ್ವದಲ್ಲಿ ಅತಿ ಹೆಚ್ಚು ಜನ ನೋಡಿರುವ ವೆಬ್ ಸರಣಿ ಸಹ ಇದೇ ಆಗಿದೆ. ಜಾರ್ಜ್​ ಆರ್​​ಆರ್ ಮಾರ್ಟಿನ್ ಬರೆದಿರುವ ‘ಆ ಸಾಂಗ್ ಆಫ್ ಐಸ್ ಆಂಡ್ ಫೈರ್’ ಪುಸ್ತಕ ಸರಣಿಯನ್ನು ಆಧರಿಸಿದ ಕತೆಯನ್ನು ಇದು ಒಳಗೊಂಡಿದೆ. ‘ಗೇಮ್ ಆಫ್ ಥ್ರೋನ್’ ವೆಬ್ ಸರಣಿ 2019 ರಲ್ಲಿ ಕೊನೆಗೊಂಡಿತ್ತು. ಅದರ ಪ್ರೀಕ್ವೆಲ್ ‘ಹೌಸ್ ಆಫ್ ದಿ ಡ್ರ್ಯಾಗನ್’ 2022 ರಲ್ಲಿ ಮೊದಲ ಸೀಸನ್ ಪ್ರಸಾರವಾಗಿ ಭಾರಿ ಜನಪ್ರಿಯತೆ ಗಳಿಸಿಕೊಂಡಿತು. ಇದೀಗ ‘ಹೌಸ್ ಆಫ್ ದಿ ಡ್ರ್ಯಾಗನ್’ ಸೀಸನ್ 3 ಪ್ರಸಾರಕ್ಕೆ ಅಣಿಯಾಗಿದ್ದು, ವೆಬ್ ಸರಣಿಯ ಟ್ರೈಲರ್ ಬಿಡುಗಡೆ ಆಗಿದೆ. ಜೊತೆಗೆ ಬಿಡುಗಡೆ ದಿನಾಂಕವನ್ನು ಸಹ ಪ್ರಕಟಿಸಲಾಗಿದೆ.

‘ಹೌಸ್ ಆಫ್ ದಿ ಡ್ರ್ಯಾಗನ್’ ಸರಣಿಯು ‘ಗೇಮ್ ಆಫ್ ಥ್ರೋನ್’ ಕತೆ ನಡೆಯುವ 200 ವರ್ಷ ಹಿಂದಿನ ಕತೆಯನ್ನು ಒಳಗೊಂಡಿದೆ. ಸೀಸನ್ 1 ಬಹುತೇಕ ಪಾತ್ರ ಪರಿಚಯ, ವಿವಿಧ ಹೌಸ್​​ಗಳ ಪರಿಚಯ ಅವರ ಸ್ಥಿತಿ ಇನ್ನಿತರೆಗಳನ್ನು ತೋರಿಸಿದರೆ ಸೀಸನ್ 2ರಲ್ಲಿ ಟಾಗೇರಿಯನ್ ರಾಜನ ಸಾವಿನ ಮೂಲಕ ಒಳ ರಾಜಕೀಯಗಳು ಶುರುವಾಗಿದ್ದವು. ಯುದ್ಧಕ್ಕೆ ತಯಾರಿ ಆರಂಭಿಸುವ ಮೂಲಕ ಎರಡನೇ ಸೀಸನ್ ಅಂತ್ಯವಾಗಿತ್ತು. ಆದರೆ ಇದೀಗ ಸೀಸನ್ 3 ರಲ್ಲಿ ಯುದ್ಧ ಮತ್ತು ಅದರ ನಂತರದ ಕತೆಯನ್ನು ಒಳಗೊಂಡಿದೆ.

ಈಗ ಬಿಡುಗಡೆ ಆಗಿರುವ ಟೀಸರ್​​ನಲ್ಲಿ ರಿಹಾನಾ ಟಾಗೇರಿಯನ್ ಮತ್ತು ಏಮಂಡ್ ಟಾಗೇರಿಯನ್ ನಡುವೆ ಭೀಕರ ಯುದ್ಧ ನಡೆದಿದೆ. ಕೊಲೆಯಾಗುವ ಭಯದಿಂದ ಪರಾರಿ ಆಗಿರುವ ಆತನ ಸಹೋದರ ಏಗನ್ ಟಾಗೇರಿಯನ್ ಸಹ ಈ ಸೀಸನ್​​ನಲ್ಲಿ ತಮ್ಮನ ವಿರುದ್ಧ ಸೇಡು ತೀರಿಸಿಕೊಳ್ಳಲು ಮರಳಿ ಬರುತ್ತಿದ್ದಾನೆ. ರಿಹಾನಾಳ ಪತಿ ಮತ್ತು ಚಿಕ್ಕಪ್ಪ ಎರಡೂ ಆಗಿರುವ ಡೇಮನ್ ಟಾಗೇರಿಯನ್ ಯುದ್ಧದಲ್ಲಿ ಪ್ರಮುಖ ಪಾತ್ರ ವಹಿಸುತ್ತಿರುವುದನ್ನು ಸಹ ತೋರಿಸಲಾಗಿದೆ. ಜೊತೆಗೆ ಕೆಲವು ಹೊಸ ಪಾತ್ರಗಳ ಪರಿಚಯವನ್ನು ಸೀಸನ್ 3ರಲ್ಲಿ ಮಾಡಲಾಗಿದೆ.

ಇದನ್ನೂ ಓದಿ:ಕೊಲೆ ಮಾಡಲು ಒಂದು ತಿಂಗಳು ವೆಬ್ ಸೀರೀಸ್ ನೋಡಿದ ಆರೋಪಿಗಳು

‘ಹೌಸ್ ಆಫ್ ದಿ ಡ್ರ್ಯಾಗನ್’ ಸೀಸನ್ 3 ಜೂನ್ 22 ಕ್ಕೆ ಬಿಡುಗಡೆ ಆಗಲಿದೆ. ಎಚ್​​ಬಿಓನಲ್ಲಿ ಇದು ಪ್ರಸಾರ ಆಗಲಿದ್ದು, ಜಿಯೋ ಹಾಟ್​​ಸ್ಟಾರ್​​ನಲ್ಲಿ ಸಹ ವೆಬ್ ಸರಣಿಯನ್ನು ವೀಕ್ಷಿಸಬಹುದಾಗಿದೆ. ‘ಗೇಮ್ ಆಫ್ ಥ್ರೋನ್ಸ್’ ಸರಣಿಯ ಎರಡನೇ ಪ್ರೀಕ್ವೆಲ್ ಇದಾಗಿದೆ. ‘ಹೌಸ್ ಆಫ್ ದಿ ಡ್ರ್ಯಾಗನ್’ ಹೊರತಾಗಿ ‘ಎ ನೈಟ್ ಆಫ್ ದಿ ಸೆವೆನ್ ಕಿಂಗ್ಡಮ್ಸ್’ ಹೆಸರಿನ ವೆಬ್ ಸರಣಿ ಸಹ ಈಗಾಗಲೇ ಪ್ರದರ್ಶನ ಆಗುತ್ತಿದ್ದು ಅದರ ಒಂದು ಸೀಸನ್​ ಈಗಾಗಲೇ ಪ್ರಸಾರ ಆಗಿದ್ದು, ಅದೂ ಸಹ ಉತ್ತಮ ಪ್ರತಿಕ್ರಿಯೆ ಪಡೆದುಕೊಂಡಿದೆ. ಎರಡನೇ ಸೀಸನ್ ಈ ವರ್ಷದ ಅಂತ್ಯದಲ್ಲಿ ಬಿಡುಗಡೆ ಆಗುವ ಸಾಧ್ಯತೆ ಇದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಕೆಐಎಡಿಬಿ ಭೂಸ್ವಾಧೀನ ವಿರೋಧಿಸಿ ಹೋರಾಟದ ವೇಳೆ ರೈತರು, ಪೊಲೀಸರ ನಡುವೆ ಘರ್ಷಣೆ – Kannada News | Chikkaballapur Farmers Clash with Police Over KIADB Land Acquisition Protest

ಚಿಕ್ಕಬಳ್ಳಾಪುರ, ಏಪ್ರಿಲ್​​ 29: ಕೆಐಎಡಿಬಿ ಭೂಸ್ವಾಧೀನ ವಿರೋಧಿಸಿ ರೈತರ ಪ್ರತಿಭಟನೆ ವೇಳೆ ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಭವನದ ಎದುರು ಭಾರಿ ಹೈಡ್ರಾಮಾವೇ ನಡೆದಿದೆ. ರೈತರ ಕೊರಳುಪಟ್ಟಿಗೆ ಕೈ ಹಾಕಿ ಪೊಲೀಸರು ದೌರ್ಜನ್ಯ ನಡೆಸಿರುವ ಆರೋಪ ಕಾರಣಕ್ಕೆ ಕೆಲ ಕಾಲ ಪರಿಸ್ಥಿತಿ ಪ್ರಕ್ಷುಬ್ಧಗೊಂಡಿದ್ದು, ರೈತರು ಹಾಗೂ ಪೊಲೀಸರ ನಡುವೆ ನೂಕಾಟ, ತಳ್ಳಾಟ ನಡೆದಿದೆ. ಪೊಲೀಸರ ವಿರುದ್ದ ರಾಜ್ಯ ರೈತ ಸಂಘದ ಕೋಡಿಹಳ್ಳಿ ಚಂದ್ರಶೇಖರ ಬಣ ರಾಜ್ಯ ಸರ್ಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದು, ದೌರ್ಜನ್ಯ ನಡೆಸಿರುವ ಪೊಲೀಸರ ಮೇಲೆ ಕ್ರಮ ಕೈಗೊಳ್ಳುವಂತೆ ಆಗ್ರಹಿಸಲಾಗಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

ಕೆಲಸ ಮಾಡುತ್ತಲೇ ಸಾವನ್ನಪ್ಪಿದ ಉದ್ಯೋಗ ಖಾತ್ರಿ ಕಾರ್ಮಿಕ: ಅಧಿಕಾರಿಗಳ ನಿರ್ಲಕ್ಷ್ಯ ಬಯಲು ಮಾಡಿದ ಟಿವಿ9 ರಿಯಾಲಿಟಿ ಚೆಕ್! – Kannada News | Raichur Heatwave Death: MGNREGA Worker Dies Due to Lack of Facilities; TV9 Reality Check Exposes PDO Negligence

ರಾಯಚೂರು, ಏಪ್ರಿಲ್ 29: ಯಾಪಲದಿನ್ನಿ ಪಂಚಾಯತ್ ವ್ಯಾಪ್ತಿಯಲ್ಲಿ ಉದ್ಯೋಗ ಖಾತ್ರಿ ಕೆಲಸ ಮಾಡುವಾಗ ಬಿಸಿಲ ಬೇಗೆಗೆ ಕಾರ್ಮಿಕ ಹುಸೇನಪ್ಪ ಸಾವನ್ನಪ್ಪಿದ್ದಾರೆ ಎಂದು ಆತನ ಕುಟುಂಬಸ್ಥರು ಹೇಳುತ್ತಿದ್ದಾರೆ. ಟಿವಿ9 ರಿಯಾಲಿಟಿ ಚೆಕ್‌ನಲ್ಲಿ ಕೆಲಸದ ಸ್ಥಳದಲ್ಲಿ ಕುಡಿಯುವ ನೀರು ಮತ್ತು ನೆರಳಿನ ವ್ಯವಸ್ಥೆ ಇಲ್ಲದಿರುವುದು ಬಯಲಾಗಿದ್ದು, ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ಧ ಮೃತನ ಕುಟುಂಬ ಮತ್ತು ರೈತ ಸಂಘಟನೆಗಳು ಸೂಕ್ತ ಪರಿಹಾರಕ್ಕಾಗಿ ಆಗ್ರಹಿಸಿವೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link