‘ತಾಳ್ಮೆಯಿಂದ ಇರಿ’; ‘ಟಾಕ್ಸಿಕ್’ ರಿಲೀಸ್ ಮತ್ತೆ ಮುಂದಕ್ಕೆ; ಕಾರಣ ಬಿಚ್ಚಿಟ್ಟ ಯಶ್ – Kannada News | Yash’s Toxic Movie Release Postponed: Global Shows Plan Delays Screening Date, Fans Upset
ರಾಕಿಂಗ್ ಸ್ಟಾರ್ ಯಶ್ ಅಭಿಮಾನಿಗಳಿಗೆ ಮತ್ತೆ ಬ್ಯಾಡ್ ನ್ಯೂಸ್ ಸಿಕ್ಕಿದೆ. ‘ಟಾಕ್ಸಿಕ್’ ಸಿನಿಮಾ ರಿಲೀಸ್ ಮತ್ತೆ ಮುಂದಕ್ಕೆ ಹೋಗಲಿದೆ ಎಂಬ ಸುದ್ದಿ ಈ ಮೊದಲಿನಿಂದಲೂ ಹರಿದಾಡುತ್ತಲೇ ಇತ್ತು. ಈಗ ಅದು ನಿಜವಾಗಿದೆ. ‘ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್-ಅಪ್ಸ್’ ಸಿನಿಮಾ ಜೂನ್ 4ರಂದು ಬಿಡುಗಡೆಯಾಗುತ್ತಿಲ್ಲ. ಚಿತ್ರದ ಬಿಡುಗಡೆ ದಿನಾಂಕವನ್ನು ಮುಂದೂಡಲಾಗಿದ್ದು, ಶೀಘ್ರದಲ್ಲೇ ಹೊಸ ದಿನಾಂಕವನ್ನು ಘೋಷಿಸುವುದಾಗಿ ಯಶ್ ತಿಳಿಸಿದ್ದಾರೆ. ಇದು ಫ್ತಾನ್ಸ್ ಆಕ್ರೋಶಕ್ಕೆ ಕಾರಣವಾಗಿದೆ. ದಿನಾಂಕ ಬದಲಾವಣೆಗೆ ಕಾರಣವೇನು? ಇತ್ತೀಚೆಗೆ ನಡೆದ ‘ಸಿನಿಮಾ ಕಾನ್’ (CinemaCon)…