ಅಭಿಷೇಕ್ ಬಚ್ಚನ್ ಅವರನ್ನು ಎಲ್ಲರೂ ಆಡಿಕೊಳ್ಳುತ್ತಾರೆ. ಇದಕ್ಕೆ ಕಾರಣ ಅವರ ತಂದೆ ಅಮಿತಾಭ್ ಬಚ್ಚನ್ ಅವರ ಲೆಗಸಿ. ಅಷ್ಟು ದೊಡ್ಡ ಸ್ಟಾರ್ ಹೀರೋನ ಮಗನಾದರೂ ಅಭಿಷೇಕ್ ಅವರಿಗೆ ಚಿತ್ರರಂಗದಲ್ಲಿ ದೊಡ್ಡ ಮಟ್ಟದಲ್ಲಿ ಹೆಸರು ಮಾಡಲು ಸಾಧ್ಯವಾಗಿಲ್ಲ. ಹೀಗಾಗಿ, ಅವಕಾಶ ಸಿಕ್ಕಾಗಲೆಲ್ಲ ಅವರನ್ನು ಟ್ರೋಲ್ ಮಾಡುವ ಕೆಲಸ ಆಗುತ್ತಿದೆ. ಹೀಗಿರುವಾಗಲೇ ಅಭಿಷೇಕ್ ಬಚ್ಚನ್ ಅವರ ಈ ಹಿಂದಿನ ವಿಡಿಯೋ ವೈರಲ್ ಆಗಿದೆ. ಇದರಲ್ಲಿ ಕೆಣಕಲು ಬಂದವರಿಗೆ ಅವರು ಖಡಕ್ ಆಗಿ ಉತ್ತರ ನೀಡಿದ್ದಾರೆ.
ಅಭಿಷೇಕ್ ಬಚ್ಚನ್ ಚಿತ್ರರಂಗಕ್ಕೆ ಬಂದು ಹಲವು ವರ್ಷಗಳು ಕಳೆದಿವೆ. ಅವರು ‘ಗುರು’ ರೀತಿಯ ಹಿಟ್ ಚಿತ್ರಗಳನ್ನು ನೀಡಿದ್ದಾರೆ. ಆದರೆ, ಇತ್ತೀಚೆಗೆ ಅವರು ಸಿನಿಮಾ ರಂಗದಲ್ಲಿ ಹೆಚ್ಚು ಸಕ್ರಿಯವಾಲ್ಲ. ಅವರು ನಟಿಸುತ್ತಿರುವ ಬಹುತೇಕ ಸಿನಿಮಾಗಳು ಮಲ್ಟಿ ಸ್ಟಾರರ್ ಚಿತ್ರಗಳು. ಹೀಗಾಗಿ, ಸುದ್ದಿಗೋಷ್ಠಿ ಒಂದರಲ್ಲಿ ಅವರಿಗೆ ಪ್ರಶ್ನೆ ಒಂದು ಎದುರಾಯಿತು.
ಅಭಿಷೇಕ್ ಬಚ್ಚನ್ ಇದ್ದ ವೇದಿಕೆ ಮೇಲೆ ಅಕ್ಷಯ್ ಕುಮಾರ್, ರಿತೇಷ್ ದೇಶ್ಮುಖ್ ಮೊದಲಾದವರು ಇದ್ದರು. ಆಗ ರಿಪೋರ್ಟರ್, ‘ನೀವು ಸೋಲೋ ಹೀರೋ ಆಗಿ ಕಾಣಿಸಿಕೊಳ್ಳೋದು ಯಾವಾಗ’ ಎಂದು ಕೇಳಿದರು. ಪ್ರಶ್ನೆ ಅರ್ಥವಾದರೂ ಅಭಿಷೇಕ್ ಬಚ್ಚನ್ ಪ್ರಶ್ನೆ ಅರ್ಥವಾಗಿಲ್ಲ ಎಂದರು. ‘ಮೇಲ್ (ಪುರುಷ) ಲೀಡ್ ಆಗಿ ಕಾಣಿಸಿಕೊಳ್ಳೋದು ಯಾವಾಗ’ ಎಂದು ಕೇಳಿದರು. ಇದು ಅಭಿಷೇಕ್ ಕೋಪ ಹೆಚ್ಚಿಸಿತು. ‘ನಾನೇನು ಈಗ ಹೀರೋಯಿನ್ ಆಗಿ ನಟಿಸುತ್ತಿದ್ದೇನಾ’ ಎಂದು ನೇರವಾಗಿ ಕೇಳಿದರು.
‘ನೀವು ಯಾವ ಅರ್ಥದಲ್ಲಿ ಕೇಳುತ್ತಿದ್ದೀರಿ ಅನ್ನೋದು ನನಗೆ ಗೊತ್ತಾಯ್ತು’ ಎಂದು ಅಭಿಷೇಕ್ ಹೇಳಿದರು. ಇದು ಅವರನ್ನು ಟ್ರೋಲ್ ಮಾಡುವ ರೀತಿಯಲ್ಲಿ ಇತ್ತು. ಇದನ್ನು ಅರಿತುಕೊಂಡ ಅಭಿಷೇಕ್ ಖಡಕ್ ಆಗಿ ಪ್ರತಿಕ್ರಿಯಿಸಿದರು. ಆ ಬಳಿಕ ವರದಿಗಾರ ಕೂಡ ಸೈಲೆಂಟ್ ಆದರು.
ಹಾಸನ, ಏಪ್ರಿಲ್ 29: ಹಾಸನ ಜಿಲ್ಲೆ ಹೊಳೆನರಸೀಪುರ ತಾಲೂಕಿನ ಜಿ.ಅಂಕನಹಳ್ಳಿಯಲ್ಲಿ ಸುರಿದ ಬಿರುಗಾಳಿ ಸಹಿತ ಭಾರಿ ಮಳೆಗೆ ವ್ಯಾಪಕ ಹಾನಿ ಸಂಭವಿಸಿದೆ. ಬೇಸಿಗೆ ಮಳೆಯ ತೀವ್ರತೆಗೆ ಹಲವು ವಿದ್ಯುತ್ ಕಂಬಗಳು ಮತ್ತು ಮರಗಳು ಧರೆಗುರುಳಿವೆ. ಈ ಘಟನೆಯಿಂದಾಗಿ ಜಿ.ಅಂಕನಹಳ್ಳಿ ಗ್ರಾಮದಲ್ಲಿ ವಿದ್ಯುತ್ ಸಂಪರ್ಕ ಸಂಪೂರ್ಣವಾಗಿ ಕಡಿತಗೊಂಡಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಮಳೆಯ ಆರ್ಭಟಕ್ಕೆ ರಸ್ತೆಗೆ ಅಡ್ಡಲಾಗಿ ಬಿದ್ದ ಮರದ ಕೊಂಬೆಗಳಿಂದ ಸಂಚಾರಕ್ಕೆ ಅಡ್ಡಿಯಾಗಿದೆ. ಕೂಡಲೇ ಸ್ಥಳಕ್ಕೆ ಆಗಮಿಸಿದ ಗ್ರಾಮ ಪಂಚಾಯತ್ ಸಿಬ್ಬಂದಿ ರಸ್ತೆ ತೆರವು ಕಾರ್ಯಾಚರಣೆ ನಡೆಸಿದ್ದಾರೆ. ಬಿದ್ದ ಮರದ ಕೊಂಬೆಗಳನ್ನು ತೆರವುಗೊಳಿಸಿ, ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ. ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕು ಸೇರಿ ಹಲವೆಡೆ ಭಾರಿ ಮಳೆ ಮುಂದುವರಿದಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಅಂತಾರಾಷ್ಟ್ರೀಯ ನೃತ್ಯ ದಿನImage Credit source: Getty Images
ನೃತ್ಯವು (Dance) ಒಬ್ಬ ವ್ಯಕ್ತಿಯು ತನ್ನ ಆಂತರಿಕತೆಯನ್ನು ಅನ್ವೇಷಿಸಲು ಅನುವು ಮಾಡಿಕೊಡುವ, ಭಾವನೆಯನ್ನು ವ್ಯಕ್ತಪಡಿಸುವ ಒಂದು ಕಲಾ ಪ್ರಕಾರವಾಗಿದೆ. ಈ ನೃತ್ಯ ಕಲೆ ಮನೋರಂಜನೆಯನ್ನು ನೀಡುವುದು, ಭಾವನೆಯನ್ನು ವ್ಯಕ್ತಪಡಿಸುವುದು, ಸಂಸ್ಕೃತಿಯನ್ನು ಪ್ರತಿನಿಧಿಸುವುದು ಮಾತ್ರವಲ್ಲದೆ ಮಾನಸಿಕ ಮತ್ತು ದೈಹಿಕ ಆರೋಗ್ಯವನ್ನು ಉತ್ತೇಜಿಸುವಲ್ಲಿಯೂ ಪ್ರಮುಖ ಪಾತ್ರ ವಹಿಸುತ್ತದೆ. ನೃತ್ಯದ ವೈವಿಧ್ಯತೆಯನ್ನು ಗುರುತಿಸಲು ಮತ್ತು ಈ ಕಲಾ ಪ್ರಕಾರವನ್ನು ಗೌರವಿಸಲು ಪ್ರತಿವರ್ಷ ಏಪ್ರಿಲ್ 29 ರಂದು ಅಂತರರಾಷ್ಟ್ರೀಯ ನೃತ್ಯ ದಿನವನ್ನು ಆಚರಿಸಲಾಗುತ್ತದೆ. ಈ ದಿನದ ಆಚರಣೆ ಹೇಗೆ ಪ್ರಾರಂಭವಾಯಿತು, ಇದರ ಮಹತ್ವವೇನು ಎಂಬುದನ್ನು ತಿಳಿಯೋಣ ಬನ್ನಿ.
ಅಂತಾರಾಷ್ಟ್ರೀಯ ನೃತ್ಯ ದಿನದ ಇತಿಹಾಸವೇನು?
ಅಂತಾರಾಷ್ಟ್ರೀಯ ನೃತ್ಯ ದಿನಾಚರಣೆಯನ್ನು 1982 ರಲ್ಲಿ ಅಂತಾರಾಷ್ಟ್ರೀಯ ರಂಗಭೂಮಿ ಸಂಸ್ಥೆಯ (ಐಟಿಐ) ಅಂತಾರಾಷ್ಟ್ರೀಯ ನೃತ್ಯ ಸಮಿತಿಯು ಪ್ರಾರಂಭಿಸಿತು. ಐಟಿಐ ಒಂದು ಸರ್ಕಾರೇತರ ಸಂಸ್ಥೆಯಾಗಿದ್ದು, ಇದು ವಿಶ್ವಸಂಸ್ಥೆಯ ಶೈಕ್ಷಣಿಕ, ವೈಜ್ಞಾನಿಕ ಮತ್ತು ಸಾಂಸ್ಕೃತಿಕ ಸಂಸ್ಥೆ (ಯುನೆಸ್ಕೋ)ಯ ಭಾಗವಾಗಿದೆ. ಅಂತಾರಾಷ್ಟ್ರೀಯ ನೃತ್ಯ ದಿನವನ್ನು ನೃತ್ಯ ಮಾಂತ್ರಿಕ ಜೀನ್ ಜಾರ್ಜಸ್ ನೊವೆರೆ ಅವರಿಗಾಗಿ ಸಮರ್ಪಿಸಲಾಗಿದೆ. ಜಾರ್ಜಸ್ ನೊವೆರೆ ಒಬ್ಬ ಪ್ರಸಿದ್ಧ ಬ್ಯಾಲೆ ಮಾಸ್ಟರ್ ಆಗಿದ್ದರು, ಅವರನ್ನು ಬ್ಯಾಲೆಯ ಪಿತಾಮಹ ಎಂದೂ ಕರೆಯುತ್ತಾರೆ. ಈ ಡ್ಯಾನ್ಸ್ ಮಾಂತ್ರಿಕನ ಜನ್ಮ ದಿನದ ಸವಿ ನೆನಪಿಗಾಗಿ 1982 ರಲ್ಲಿ, ಐಟಿಐನ ನೃತ್ಯ ಸಮಿತಿಯು ಜಾರ್ಜಸ್ ನೊವೆರ್ರೆ ಅವರ ಜನ್ಮದಿನವಾದ ಏಪ್ರಿಲ್ 29 ರಂದು ಅಂತಾರಾಷ್ಟ್ರೀಯ ನೃತ್ಯ ದಿನವನ್ನು ಆಚರಿಸುವ ಮೂಲಕ ಅವರಿಗೆ ಗೌರವ ಸಲ್ಲಿಸಿತು. ಆ ಬಳಿಕ ಪ್ರತಿ ವರ್ಷ ಈ ವಿಶೇಷ ದಿನವನ್ನು ಆಚರಿಸುತ್ತಾ ಬರಲಾಗುತ್ತಿದೆ.
ಅಂತಾರಾಷ್ಟ್ರೀಯ ನೃತ್ಯ ದಿನವು ನೃತ್ಯ ಕಲೆಯ ಮಹತ್ವವನ್ನು ಆಚರಿಸುವ ಮತ್ತು ಬೆಂಬಲಿಸುವ ಮಹತ್ವದ ದಿನವಾಗಿದೆ. ಈ ದಿನವು ಕಲೆ ಮತ್ತು ಸಂಸ್ಕೃತಿಯನ್ನು ಉತ್ತೇಜಿಸುತ್ತದೆ. ಅಲ್ಲದೆ ಇದು ಹಲವಾರು ಪ್ರಕಾರದ ನೃತ್ಯ ಪ್ರಕಾರಗಳು ಹಾಗೂ ನೃತ್ಯ ಕಲೆಯ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶವನ್ನು ಹೊಂದಿದೆ.
ಪ್ರತಿ ವರ್ಷ ಏಪ್ರಿಲ್ 29 ರಂದು, ನೃತ್ಯ ಕಲೆಯನ್ನು ಬೆಂಬಲಿಸಲು ಮತ್ತು ಉತ್ತೇಜಿಸಲು ಪ್ರಪಂಚದಾದ್ಯಂತ ಅಂತಾರಾಷ್ಟ್ರೀಯ ನೃತ್ಯ ದಿನವನ್ನು ಆಚರಿಸಲಾಗುತ್ತದೆ.
ನೃತ್ಯ ಕಲೆಯ ಮಹತ್ವದ ಬಗ್ಗೆ ಜಾಗೃತಿ ಮೂಡಿಸಲು ಮತ್ತು ಜನರಿಗೆ ನೃತ್ಯ ಕಲೆಯ ಮಹತ್ವವನ್ನು ಅರ್ಥಮಾಡಿಕೊಳ್ಳಲು ಈ ದಿನವನ್ನು ವಿಶೇಷವಾಗಿ ಆಚರಿಸಲಾಗುತ್ತದೆ. ಈ ದಿನದಂದು, ನೃತ್ಯ ಕಲೆಯನ್ನು ವೈಭವೀಕರಿಸುವ ವಿವಿಧ ನೃತ್ಯ ಸಂಬಂಧಿತ ಕಾರ್ಯಕ್ರಮಗಳು ಮತ್ತು ಸ್ಪರ್ಧೆಗಳನ್ನು ಆಯೋಜಿಸಲಾಗುತ್ತದೆ. ಅಷ್ಟೇ ಅಲ್ಲದೆ ನೃತ್ಯಗಾರರನ್ನು ಗೌರವಿಸುವುದ ಜೊತೆಗೆ ನೃತ್ಯದ ಪ್ರಯೋಜನಗಳ ಬಗ್ಗೆ ಜನರಿಗೆ ತಿಳಿಸಲು ಈ ವಿಶೇಷ ದಿನವನ್ನು ಆಚರಿಸಲಾಗುತ್ತದೆ.
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ 19ನೇ ಆವೃತ್ತಿಯಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದ ನಾಯಕ ರಿಯಾನ್ ಪರಾಗ್ ದೊಡ್ಡ ಸಂಕಷ್ಟಕ್ಕೆ ಸಿಲುಕಿದ್ದಾರೆ. ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದ ವೇಳೆ ತಂಡದ ಡ್ರೆಸ್ಸಿಂಗ್ ರೂಮ್‌ನಲ್ಲಿ ಪರಾಗ್ ‘ವೇಪಿಂಗ್’ (E-Cigarette) ಸೇದುತ್ತಿರುವ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಇದರ ಬೆನ್ನಲ್ಲೇ ಐಪಿಎಲ್ ನಿಯಮಗಳ ಬಗ್ಗೆ ಪ್ರಶ್ನೆಗಳೆದ್ದಿವೆ.
ಏಪ್ರಿಲ್ 28ರಂದು ಪಂಜಾಬ್ ಕಿಂಗ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ರಿಯಾನ್ ಪರಾಗ್ 16 ಎಸೆತಗಳಲ್ಲಿ 29 ರನ್ ಗಳಿಸಿ ಔಟಾದರು. ಅವರು ಪೆವಿಲಿಯನ್‌ಗೆ ಮರಳಿದ ನಂತರ, ಎರಡನೇ ಇನಿಂಗ್ಸ್‌ನ 16ನೇ ಓವರ್ ನಡೆಯುತ್ತಿದ್ದಾಗ ಬ್ರಾಡ್‌ಕಾಸ್ಟ್ ಕ್ಯಾಮೆರಾ ಡ್ರೆಸ್ಸಿಂಗ್ ರೂಮ್‌ನತ್ತ ತಿರುಗಿತು. ಈ ವೇಳೆ ಪರಾಗ್ ಎಲೆಕ್ಟ್ರಾನಿಕ್ ಸಿಗರೇಟ್ ಅಥವಾ ವೇಪ್ ಬಳಸುತ್ತಿರುವುದು ಸ್ಪಷ್ಟವಾಗಿ ಕಂಡುಬಂದಿದೆ. ಈ ದೃಶ್ಯದ ತುಣುಕುಗಳು ಇದೀಗ ವೈರಲ್ ಆಗಿವೆ.
ನಿಯಮಗಳ ಉಲ್ಲಂಘನೆ:
ರಿಯಾನ್ ಪರಾಗ್ ಅವರ ಈ ನಡೆಯು ಹಲವು ಕಾನೂನು ಮತ್ತು ಕ್ರೀಡಾ ನಿಯಮಗಳ ಉಲ್ಲಂಘನೆ ಎನ್ನಬಹುದು. ಏಕೆಂದರೆ ಭಾರತದಲ್ಲಿ ಇ-ಸಿಗರೇಟ್ ಬಳಕೆಯನ್ನು ನಿಷೇಧಿಸಲಾಗಿದೆ. ಅಲ್ಲದೆ ಇದು ಬಿಸಿಸಿಐನ ಶಿಷ್ಟಾಚಾರದ ಉಲ್ಲಂಘನೆ ಕೂಡ ಹೌದು. ಹಾಗಿದ್ರೆ ರಿಯಾನ್ ಪರಾಗ್ ಉಲ್ಲಂಘಿಸಿರುವ ನಿಯಮಗಳಾವುವು ಎಂದು ನೋಡುವುದಾದರೆ…
ಭಾರತೀಯ ಕಾನೂನು: ಭಾರತದಲ್ಲಿ 2019 ರಿಂದಲೇ ಇ-ಸಿಗರೇಟ್ ಮತ್ತು ವೇಪ್‌ಗಳ ಬಳಕೆ ಹಾಗೂ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.
ಬಿಸಿಸಿಐ ಶಿಷ್ಟಾಚಾರ: ಕ್ರೀಡಾಂಗಣದ ಆವರಣದಲ್ಲಿ ಮತ್ತು ವಿಶೇಷವಾಗಿ ಡ್ರೆಸ್ಸಿಂಗ್ ರೂಮ್‌ನಲ್ಲಿ ಧೂಮಪಾನ ಮಾಡುವುದು ಕಟ್ಟುನಿಟ್ಟಾದ ಶಿಸ್ತು ಉಲ್ಲಂಘನೆಯಾಗಿದೆ.
ಯುವ ಪೀಳಿಗೆಗೆ ತಪ್ಪು ಸಂದೇಶ: ಲಕ್ಷಾಂತರ ಯುವ ಅಭಿಮಾನಿಗಳು ವೀಕ್ಷಿಸುವ ಐಪಿಎಲ್‌ನಲ್ಲಿ ತಂಡದ ನಾಯಕನೇ ಇಂತಹ ಕೆಲಸ ಮಾಡುವುದು ಬೇಜವಾಬ್ದಾರಿತನ. ಐಪಿಎಲ್ ವೇಳೆ ಆಟಗಾರರು ತಪ್ಪು ಸಂದೇಶ ನೀಡುವಂತಹ ಯಾವುದೇ ಚಟುವಟಿಕೆಗಳಲ್ಲಿ ಭಾಗಿಯಾಗಬಾರದೆಂಬ ನಿಯಮವಿದೆ.
ಪರಾಗ್ ಮೇಲೆ ಶಿಸ್ತು ಕ್ರಮ?
ಈಗಾಗಲೇ ಕಳಪೆ ಫಾರ್ಮ್‌ನಿಂದಾಗಿ ಟೀಕೆಗೆ ಗುರಿಯಾಗಿರುವ ರಿಯಾನ್ ಪರಾಗ್ ಅವರಿಗೆ ಈ ಘಟನೆ ಮತ್ತಷ್ಟು ಸಂಕಷ್ಟ ತಂದೊಡ್ಡಿದೆ. ಐಪಿಎಲ್ ಆಡಳಿತ ಮಂಡಳಿ ಅಥವಾ ಬಿಸಿಸಿಐ ಈ ಬಗ್ಗೆ ಅಧಿಕೃತ ತನಿಖೆ ನಡೆಸಿ ದಂಡ ಅಥವಾ ಪಂದ್ಯದಿಂದ ನಿಷೇಧ ಹೇರುವ ಸಾಧ್ಯತೆಯಿದೆ.
ಸಂಜು ಸ್ಯಾಮ್ಸನ್ ಬದಲಿಗೆ ನಾಯಕತ್ವ ವಹಿಸಿಕೊಂಡಿದ್ದ ಪರಾಗ್, ಈ ಸೀಸನ್‌ನಲ್ಲಿ ಬ್ಯಾಟಿಂಗ್‌ನಲ್ಲಿ ವಿಫಲರಾಗಿದ್ದಾರೆ. ತಂಡ ಪಂದ್ಯವನ್ನು ಗೆದ್ದಿದ್ದರೂ, ನಾಯಕನ ಈ ವರ್ತನೆಯು ರಾಜಸ್ಥಾನ್ ರಾಯಲ್ಸ್ ಮ್ಯಾನೇಜ್‌ಮೆಂಟ್‌ಗೆ ತಲೆನೋವಾಗಿ ಪರಿಣಮಿಸಿದೆ.
ಐಪಿಎಲ್ ನೀತಿ ಸಂಹಿತೆ ಮತ್ತು ಬಿಸಿಸಿಐನ ಆರೋಗ್ಯ ಮತ್ತು ಸುರಕ್ಷತಾ ಶಿಷ್ಟಾಚಾರಗಳ ಅಡಿಯಲ್ಲಿ ಪರಾಗ್ ಅವರ ಮೇಲೆ ಈ ಕೆಳಗಿನ ಕ್ರಮಗಳನ್ನು ಜರುಗಿಸಬಹುದು:
ದಂಡ: ಪಂದ್ಯದ ಶುಲ್ಕದಲ್ಲಿ ಶೇಕಡಾವಾರು ಕಡಿತ ಅಥವಾ ಭಾರಿ ಮೊತ್ತದ ದಂಡ ವಿಧಿಸಬಹುದು. ಉದಾಹರಣೆಗೆ, ಈ ಹಿಂದಿನ ಕೆಲವು ಶಿಸ್ತು ಉಲ್ಲಂಘನೆಗಳಿಗೆ ಆಟಗಾರರಿಗೆ ಲಕ್ಷಾಂತರ ರೂಪಾಯಿ ದಂಡ ವಿಧಿಸಲಾಗಿದೆ.
ಪಂದ್ಯದಿಂದ ನಿಷೇಧ: ಇದು ಗಂಭೀರ ಸ್ವರೂಪದ ಶಿಸ್ತು ಉಲ್ಲಂಘನೆ ಎಂದು ಪರಿಗಣಿಸಲ್ಪಟ್ಟರೆ, ಪರಾಗ್ ಅವರನ್ನು 1 ರಿಂದ 2 ಪಂದ್ಯಗಳ ಕಾಲ ನಿಷೇಧಿಸುವ ಸಾಧ್ಯತೆಯೂ ಇದೆ.
ಅಧಿಕೃತ ಎಚ್ಚರಿಕೆ: ಮೊದಲ ಬಾರಿಯ ಅಪರಾಧವೆಂದು ಪರಿಗಣಿಸಿ ಬಿಸಿಸಿಐ ಅವರಿಗೆ ಅಧಿಕೃತ ಎಚ್ಚರಿಕೆ ಪತ್ರವನ್ನು ನೀಡಬಹುದು.
ನಾಯಕತ್ವದ ಮೇಲೆ ಪ್ರಭಾವ: ತಂಡದ ನಾಯಕನಾಗಿ ಇಂತಹ ವರ್ತನೆ ತೋರಿರುವುದರಿಂದ, ರಾಜಸ್ಥಾನ್ ರಾಯಲ್ಸ್ ಫ್ರಾಂಚೈಸಿಯು ತನ್ನ ಬ್ರ್ಯಾಂಡ್ ಮೌಲ್ಯ ಕಾಪಾಡಲು ಆಂತರಿಕವಾಗಿ ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬಹುದು.
ಭಾರತೀಯ ಕಾನೂನಿನ ಅಡಿಯಲ್ಲಿ ಕ್ರಮಗಳು:
ಭಾರತದಲ್ಲಿ ಇ-ಸಿಗರೇಟ್ ಅಥವಾ ವೇಪ್‌ಗಳನ್ನು 2019ರ ‘ಎಲೆಕ್ಟ್ರಾನಿಕ್ ಸಿಗರೇಟ್ ನಿಷೇಧ ಕಾಯ್ದೆ’ (PECA) ಅಡಿಯಲ್ಲಿ ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಇದರ ಅನ್ವಯ:
ಜೈಲು ಶಿಕ್ಷೆ: ಮೊದಲ ಬಾರಿಯ ಅಪರಾಧಕ್ಕೆ 1 ವರ್ಷದವರೆಗೆ ಜೈಲು ಶಿಕ್ಷೆ ಅನುಭವಿಸುವ ಸಾಧ್ಯತೆಯಿದೆ.
ದಂಡ: ಕಾನೂನು ಉಲ್ಲಂಘನೆಗಾಗಿ ₹1 ಲಕ್ಷದವರೆಗೆ ದಂಡ ವಿಧಿಸಬಹುದು.
ಮರುಕಳಿಸಿದರೆ: ಎರಡನೇ ಬಾರಿ ಅಥವಾ ಪದೇ ಪದೇ ಇಂತಹ ಕೃತ್ಯವೆಸಗಿದರೆ 3 ವರ್ಷಗಳವರೆಗೆ ಜೈಲು ಮತ್ತು ₹5 ಲಕ್ಷದವರೆಗೆ ದಂಡ ವಿಧಿಸಲು ಕಾನೂನಿನಲ್ಲಿ ಅವಕಾಶವಿದೆ.
ಪ್ರಸ್ತುತ ಬಿಸಿಸಿಐ ಈ ದೃಶ್ಯಗಳ ಸತ್ಯಾಸತ್ಯತೆಯನ್ನು ಪರಿಶೀಲಿಸುತ್ತಿದ್ದು, ಶೀಘ್ರದಲ್ಲೇ ಅಧಿಕೃತ ಹೇಳಿಕೆ ಹೊರಬೀಳುವ ನಿರೀಕ್ಷೆಯಿದೆ.
ಪಾಟ್ನಾ, ಏಪ್ರಿಲ್ 29: ಹುಷಾರಿಲ್ಲ ರಜೆ ಬೇಕು ಅಂದ್ರೆ ಅಧಿಕಾರಿ ಪ್ರೂಫ್ ಕೊಡು ಎಂದು ಕೇಳಿದ್ದಕ್ಕೆ ಅಂಗನವಾಡಿ ಕಾರ್ಯಕರ್ತೆ ಐವಿ ಡ್ರಿಪ್ ಹಾಕಿಸಿಕೊಂಡು ಆಸ್ಪತ್ರೆಗೆ ಹಾಜರಾಗಿರುವ ಘಟನೆ ಬಿಹಾರದಲ್ಲಿ ನಡೆದಿದೆ. ವೈರಲ್ ಆಗಿರುವ ಈ ವೀಡಿಯೊದಲ್ಲಿ, ಮಹಿಳೆ ಐವಿ ಡ್ರಿಪ್ ಹಾಕಿಸಿಕೊಂಡಿರುವುದು, ನಡುಗುತ್ತಾ ಪತಿಯ ಸಹಾಯದಿಂದ ನಡೆದುಕೊಂಡು ಹೋಗುತ್ತಿರುವುದನ್ನು ಕಾಣಬಹುದು. ಆಕೆ ಕೆಲಸಕ್ಕೆ ಬಾರದಿದ್ದಾಗ ಅಧಿಕಾರಿಯೊಬ್ಬರು ಕರೆ ಮಾಡಿದಾಗ ಆಕೆಗೆ ಅನಾರೋಗ್ಯ, ಕೆಲಸಕ್ಕೆ ಬರಲು ಸಾಧ್ಯವಿಲ್ಲ ಎಂದು ಪತಿ ಹೇಳಿದ್ದಾರೆ. ಆದರೆ ಅಷ್ಟಕ್ಕೆ ಸುಮ್ಮನಿರದ ಅಧಿಕಾರಿ ಪುರಾವೆ ಕೇಳಿದ್ದರು, ಹಾಗಾಗಿ ಮಹಿಳೆ ಐವಿ ಡ್ರಿಪ್ ಹಾಕಿಕೊಂಡೇ ಕೆಲಸಕ್ಕೆ ಹಾಜರಾಗಿದ್ದಾರೆ.
ದಿವ್ಯಾ ಉನ್ನಿ ಯಾವುದೋ ಗಡಿಬಿಡಿಯಲ್ಲಿ ಮನೆಯ ಬಾಗಿಲು ಹಾಕದೆ ಹೊರಗೆ ಹೋಗಿದ್ದರು. ಅಮ್ಜದ್ ಮನೆಗೆ ಪಾರ್ಸೆಲ್ ಕೊಡಲು ಬಂದ ವ್ಯಕ್ತಿಯೊಬ್ಬರು ಬಾಗಿಲು ತೆರೆದಿದ್ದನ್ನು ನೋಡಿ ಮೊದಲು ಮಾಲೀಕರು ಮನೆಯೊಳಗಿದ್ದಾರೆ ಎಂದುಕೊಂಡರು. ಬಳಿಕ ಯಾರೂ ಇಲ್ಲವೆಂದು ಅರಿವಾಗಿತ್ತು. ಸಾಕಿದ ಬೆಕ್ಕು ಕೂಡ ಅಲ್ಲೇ ಇತ್ತು. ಬಳಿಕ ಪಾರ್ಸೆಲ್ ಅನ್ನು ಸುರಕ್ಷಿತವಾಗಿ ಮನೆಯ ಒಳಗೆ ಟೇಬಲ್ ಮೇಲಿರಿಸಿದ್ದಾರೆ.
ಮನೆಯೊಳಗೆ ಯಾರೂ ಇಲ್ಲದಿದ್ದರೂ ಬಾಗಿಲು ತೆರೆದಿದ್ದರೆ ಕಳ್ಳರ ಭಯ ಅಥವಾ ಸಾಕುಪ್ರಾಣಿಗಳು ಓಡಿಹೋಗುವ ಅಪಾಯವಿರುತ್ತದೆ ಎಂದು ಅರಿತ ಅಮ್ಜಾದ್, ಮೊದಲು ಪಾರ್ಸೆಲ್ ಅನ್ನು ಸುರಕ್ಷಿತವಾಗಿ ಮನೆಯೊಳಗಿನ ಮೇಜಿನ ಮೇಲೆ ಇಟ್ಟರು. ಬಳಿಕ ದಿವ್ಯಾ ಅವರಿಗೆ ಫೋನ್ ಮಾಡಿ ವಿಷಯ ತಿಳಿಸಿದರು. ಅಷ್ಟಕ್ಕೇ ಸುಮ್ಮನಾಗದ ಅವರು, ದಿವ್ಯಾ ಅವರು ಮನೆಗೆ ವಾಪಸ್ ಬರುವವರೆಗೂ ಬೇರೆಲ್ಲೂ ಹೋಗದೆ ದ್ವಾರದ ಬಳಿಯೇ ಕಾವಲು ನಿಂತರು.
ದಿವ್ಯಾ ಅವರು ಮನೆಗೆ ಬಂದಾಗ ಬಾಗಿಲ ಬಳಿ ಕಾವಲು ಕಾಯುತ್ತಿದ್ದ ಅಮ್ಜಾದ್ ಅವರ ಪ್ರಾಮಾಣಿಕತೆ ಕಂಡು ಭಾವುಕರಾದರು. ಈ ದೃಶ್ಯವನ್ನು ಅವರು ತಮ್ಮ ಮೊಬೈಲ್‌ನಲ್ಲಿ ಸೆರೆಹಿಡಿದು ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿದ್ದಾರೆ. ನನ್ನ ಬೆಕ್ಕು ಓಡಿಹೋಗದಂತೆ ಮನೆಯನ್ನು ಕಾಯುತ್ತಿದ್ದರು ಪ್ರಾಮಾಣಿಕತೆ ಕಂಡು ಖುಷಿಪಟ್ಟಿದ್ದಾರೆ. ಡೆಲಿವರಿ ಕಂಪನಿಗೆ ಅಮ್ಜಾದ್ ಅವರಿಗೆ ಹೆಚ್ಚಿನ ವೇತನ ನೀಡುವಂತೆ ಮನವಿ ಮಾಡಿದ್ದಾರೆ.
ಈ ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ನೆಟ್ಟಿಗರು ಅಮ್ಜಾದ್ ಅವರ ಮೇಲೆ ಪ್ರಶಂಸೆಯ ಮಳೆ ಸುರಿಸಿದ್ದಾರೆ. ನಿಜವಾದ ಹೀರೊ ಎಂದರೆ ಇವರೇ ಬೆಕ್ಕನ್ನು ಸಾಕಿರುವ ನನಗೆ ಆ ಭಯ ಎಂತಹುದು ಎಂದು ನನಗೆ ಗೊತ್ತು, ಅಮ್ಜಾದ್ ಅದ್ಭುತ ಕೆಲಸ ಮಾಡಿದ್ದಾರೆ ಎಂಬಂತಹ ಸಾವಿರಾರು ಕಾಮೆಂಟ್‌ಗಳು ಹರಿದುಬರುತ್ತಿವೆ.
ನಟಿ ನೀತು ಕಪೂರ್ ನಟಿಸಿರುವ ‘ದಾದಿ ಕಿ ಶಾದಿ’ ಚಿತ್ರ ಶೀಘ್ರದಲ್ಲೇ ಬಿಡುಗಡೆಯಾಗಲಿದೆ. ಇದರಲ್ಲಿ ಹಾಸ್ಯನಟ ಕಪಿಲ್ ಶರ್ಮಾ ಮತ್ತು ಸಾದಿಯಾ ಖತೀಬ್ ಕೂಡ ನಟಿಸಿದ್ದಾರೆ. ಈ ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಗಿದ್ದು, ಕಪೂರ್ ಕುಟುಂಬದ ಮಗಳು ಕೂಡ ಇದರಲ್ಲಿ ಕಾಣಿಸಿಕೊಂಡಿದ್ದಾರೆ. ಅವರು 45 ನೇ ವಯಸ್ಸಿನಲ್ಲಿ ಬಾಲಿವುಡ್‌ಗೆ ಪಾದಾರ್ಪಣೆ ಮಾಡಿದ್ದಾರೆ. ಈ ಚಿತ್ರದಲ್ಲಿ ನೀತು ಕಪೂರ್ ‘ದಾದಿ’ ಪಾತ್ರವನ್ನು ನಿರ್ವಹಿಸಿದ್ದಾರೆ. ಚಿತ್ರ ನೀತು ಕಪೂರ್‌ಗೆ ತುಂಬಾ ವಿಶೇಷವಾಗಿದೆ. ಏಕೆಂದರೆ ಅವರ ಮಗಳು ರಿದ್ಧಿಮಾ ಕಪೂರ್ ಸಾಹ್ನಿ ಈ ಚಿತ್ರದಲ್ಲಿ ಬಾಲಿವುಡ್‌ಗೆ ಪಾದಾರ್ಪಣೆ ಮಾಡುತ್ತಿದ್ದಾರೆ.
ರಿಷಿ ಕಪೂರ್ ಮತ್ತು ನೀತು ಕಪೂರ್ ಅವರ ಪುತ್ರಿ ಮತ್ತು ರಣಬೀರ್ ಕಪೂರ್ ಅವರ ಸಹೋದರಿ ರಿದ್ಧಿಮಾ ಕಪೂರ್ ಸಾಹ್ನಿ ಕಳೆದ ಹಲವಾರು ವರ್ಷಗಳಿಂದ ಫ್ಯಾಷನ್ ಡಿಸೈನಿಂಗ್ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಅವರ ಪತಿ ಭರತ್ ಸಾಹ್ನಿ ದೆಹಲಿಯ ಅತಿದೊಡ್ಡ ಉದ್ಯಮಿಗಳಲ್ಲಿ ಒಬ್ಬರು. ಅವರು ಸುಮಾರು 250 ಕೋಟಿ ರೂ. ಮೌಲ್ಯದ ಉಡುಪು ರಫ್ತು ವ್ಯವಹಾರವನ್ನು ಹೊಂದಿದ್ದಾರೆ. ಭರತ್ ಸಾಹ್ನಿ ಕಳೆದ ಎರಡು ದಶಕಗಳಿಂದ ಈ ವ್ಯವಹಾರದಲ್ಲಿ ಸಕ್ರಿಯರಾಗಿದ್ದಾರೆ ಮತ್ತು ಅವರ ಕಂಪನಿಯು ವಿದೇಶಗಳಲ್ಲಿ ಅನೇಕ ದೊಡ್ಡ ಬ್ರಾಂಡ್‌ಗಳಿಗೆ ಬಟ್ಟೆಗಳನ್ನು ಪೂರೈಸುತ್ತದೆ.
ರಿದ್ಧಿಮಾ ಕಪೂರ್ ಅವರನ್ನು ಮದುವೆಯಾದ ನಂತರವೂ, ಭರತ್ ಎಲ್ಲರಿಂದ ದೂರವಿರಲು ಬಯಸುತ್ತಾರೆ. ಅವರು ಬಾಲಿವುಡ್ ಪಾರ್ಟಿಗಳು ಅಥವಾ ಕಾರ್ಯಕ್ರಮಗಳಲ್ಲಿ ವಿರಳವಾಗಿ ಕಾಣಿಸಿಕೊಳ್ಳುತ್ತಾರೆ. ಅವರು ನೆಟ್‌ಫ್ಲಿಕ್ಸ್‌ನ ‘ಫ್ಯಾಬ್ಯುಲಸ್ ಲೈವ್ಸ್ ವರ್ಸಸ್ ಬಾಲಿವುಡ್ ವೈವ್ಸ್’ ಕಾರ್ಯಕ್ರಮದ ಮೂರನೇ ಸೀಸನ್‌ನಲ್ಲಿ ಕಾಣಿಸಿಕೊಂಡರು. ಇದರಲ್ಲಿ, ಅವರು ಅತ್ತೆ ನೀತು ಕಪೂರ್, ಪತ್ನಿ ರಿದ್ಧಿಮಾ ಮತ್ತು ಮಗಳು ಸಮೈರಾ ಅವರೊಂದಿಗೆ ಹಾಜರಿದ್ದರು. ಕಪೂರ್ ಕುಟುಂಬದ ದೀಪಾವಳಿ ಮತ್ತು ಹೊಸ ವರ್ಷದ ಪಾರ್ಟಿಗಳಲ್ಲಿ ಭರತ್ ಕೂಡ ಕಾಣಿಸಿಕೊಂಡಿದ್ದಾರೆ. ಭರತ್ ಅವರ ವೈಯಕ್ತಿಕ ಸಂಪತ್ತು ಸುಮಾರು 100 ಕೋಟಿ ರೂ. ಅವರು ದೆಹಲಿಯ ಐಷಾರಾಮಿ ಪ್ರದೇಶದಲ್ಲಿ ತಮ್ಮ ಪತ್ನಿ ರಿದ್ಧಿಮಾ ಮತ್ತು ಇಡೀ ಕುಟುಂಬದೊಂದಿಗೆ ವಾಸಿಸುತ್ತಿದ್ದಾರೆ.
ರಣಬೀರ್ ಕಪೂರ್ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದರೂ, ರಿದ್ಧಿಮಾ ಎಂದಿಗೂ ಗ್ಲಾಮರ್ ಜಗತ್ತಿಗೆ ಕಾಲಿಡುವ ಬಗ್ಗೆ ಯೋಚಿಸಿರಲಿಲ್ಲ. ಈಗ 45 ನೇ ವಯಸ್ಸಿನಲ್ಲಿ, ಅವರಿಗೆ ‘ದಾದಿ ಕಿ ಶಾದಿ’ ಚಿತ್ರಕ್ಕೆ ಅವಕಾಶ ಬಂದಿದೆ. ಈ ಚಿತ್ರ ಮೇ 8 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಈ ಚಿತ್ರವನ್ನು ಕಪಿಲ್ ಶರ್ಮಾ ನಿರ್ಮಿಸಿದ್ದಾರೆ ಮತ್ತು ಆಶಿಶ್ ಆರ್. ಮೋಹನ್ ನಿರ್ದೇಶಿಸಿದ್ದಾರೆ.
ಕ್ವಾಲಿಟಿ ಕಂಟ್ರೋಲ್ ಲ್ಯಾಬ್Image Credit source: The Hindu
ಬೆಂಗಳೂರು, ಏಪ್ರಿಲ್ 29: ಸಿಲಿಕಾನ್ ಸಿಟಿಯ ಅಭಿವೃದ್ಧಿ ಕಾಮಗಾರಿಗಳ ಬೆನ್ನೆಲುಬಾಗಬೇಕಿದ್ದ ಬಿಬಿಎಂಪಿ ಗುಣನಿಯಂತ್ರಣ ಪ್ರಯೋಗಾಲಯವು (Quality Control Lab) ಸದ್ಯ ಅನಾಥ ಸ್ಥಿತಿಯಲ್ಲಿದೆ. ಎರಡು ವರ್ಷಗಳ ಹಿಂದೆ ಬಿಬಿಎಂಪಿ ಕೇಂದ್ರ ಕಚೇರಿಯ ಆವರಣದಲ್ಲಿದ್ದ ಲ್ಯಾಬ್‌ನಲ್ಲಿ ಸಂಭವಿಸಿದ ಭೀಕರ ಬೆಂಕಿ ಅವಘಡ ಹಲವರನ್ನು ಬಲಿ ಪಡೆದಿತ್ತು. ಆ ಘಟನೆಯ ನಂತರವೂ ಎಚ್ಚೆತ್ತುಕೊಳ್ಳದ ಅಧಿಕಾರಿಗಳು ಮತ್ತು ಜಿಬಿಎ (GBA), ಪ್ರಯೋಗಾಲಯದ ಪುನಶ್ಚೇತನಕ್ಕೆ ಆಸಕ್ತಿ ತೋರದಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.
ಹೊಸ ಲ್ಯಾಬ್ ನಿರ್ಮಾಣಕ್ಕಿನ್ನೂ ಬಂದಿಲ್ಲ ಮುಹೂರ್ತ!
ದುರಂತದ ನಂತರ ಸುಸಜ್ಜಿತವಾದ ಹೊಸ ಲ್ಯಾಬ್ ನಿರ್ಮಿಸುವುದಾಗಿ ಪಾಲಿಕೆ ನೀಡಿದ್ದ ಭರವಸೆ ಕೇವಲ ಕಾಗದದ ಮೇಲೆಯೇ ಉಳಿದಿದೆ. ಪರಿಣಾಮವಾಗಿ, ಸಾರ್ವಜನಿಕ ತೆರಿಗೆ ಹಣದಲ್ಲಿ ಖರೀದಿಸಲಾದ ಕೋಟ್ಯಂತರ ರೂಪಾಯಿ ಬೆಲೆಬಾಳುವ ಆಧುನಿಕ ಯಂತ್ರೋಪಕರಣಗಳು ಬಳಕೆಯಿಲ್ಲದೆ ಧೂಳು ಹಿಡಿಯುತ್ತಿವೆ. ನಗರದಲ್ಲಿ ನಡೆಯುತ್ತಿರುವ ಕೋಟ್ಯಂತರ ರೂಪಾಯಿ ವೆಚ್ಚದ ಕಾಮಗಾರಿಗಳ ಗುಣಮಟ್ಟವನ್ನು ಪರೀಕ್ಷಿಸಲು ಈ ಲ್ಯಾಬ್ ಅತ್ಯಗತ್ಯವಾಗಿತ್ತು. ಆದರೆ ಪ್ರಸ್ತುತ ಇದು ಕಾರ್ಯಾಚರಣೆ ಸ್ಥಗಿತಗೊಳಿಸಿರುವುದರಿಂದ, ರಸ್ತೆ ಹಾಗೂ ಕಟ್ಟಡ ಕಾಮಗಾರಿಗಳ ಗುಣಮಟ್ಟದ ಬಗ್ಗೆ ಗಂಭೀರ ಪ್ರಶ್ನೆಗಳು ಎದ್ದಿವೆ.
ಈ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಬಿಬಿಎಂಪಿ ಮಾಜಿ ಆಡಳಿತ ಪಕ್ಷದ ನಾಯಕ ಎನ್.ಆರ್. ರಮೇಶ್, ಅಧಿಕಾರಿಗಳು ತಮ್ಮ ಭ್ರಷ್ಟಾಚಾರ ಮತ್ತು ಕಳ್ಳಾಟವನ್ನು ಮುಚ್ಚಿಡಲು ಉದ್ದೇಶಪೂರ್ವಕವಾಗಿ ಲ್ಯಾಬ್ ಕಾರ್ಯನಿರ್ವಹಿಸದಂತೆ ಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ. ಬೆಂಕಿ ಅವಘಡದಂತಹ ಪಾಠ ಕಲಿತ ಮೇಲೂ ಸುಧಾರಣಾ ಕ್ರಮಗಳನ್ನು ಕೈಗೊಳ್ಳದ ಅಧಿಕಾರಿಗಳ ನಿರ್ಲಕ್ಷ್ಯ ಧೋರಣೆ ಶೋಚನೀಯವಾಗಿದೆ. ಗುಣಮಟ್ಟದ ತಪಾಸಣೆಯಿಲ್ಲದೆ ನಗರದ ಮೂಲಸೌಕರ್ಯಗಳು ಹಳ್ಳ ಹಿಡಿಯುವ ಭೀತಿ ಎದುರಾಗಿದೆ.
ಪ್ರಭಾಕರ್ ಅವರು ಸಾಕಷ್ಟು ಸಿನಿಮಾಗಳಲ್ಲಿ ನಟಿಸಿದ್ದರು. ಪೊಲೀಸ್ ಆಗಿ, ಹೀರೋ ಆಗಿ, ವಿಲನ್ ಆಗಿ ಮಿಂಚಿದ್ದರು. ಅವರು ಹೇಳಿದ ಒಂದು ಮಾತನ್ನು ವಿನೋದ್ ಪ್ರಭಾಕರ್ ನೆನಪಿಸಿಕೊಂಡಿದ್ದಾರೆ.‘ಬಲರಾಮನ ದಿನಗಳು’ ಸಿನಿಮಾ ಟೀಸರ್ ಲಾಂಚ್ ವೇಳೆ ಮಾತನಾಡಿದ ಪ್ರಭಾಕರ್ ಅವರು, ‘ನಾನು ಇಷ್ಟೆಲ್ಲ ಸಿನಿಮಾ ಮಾಡಿದರೂ ನನಗೆ ಸಿನಿಮಾ ಏನು ಅನ್ನೋದು ಗೊತ್ತಾಗಿಲ್ಲ ಮಗನೆ ಎಂದು ಪ್ರಭಾಕರ್ ಹೇಳುತ್ತಿದ್ದರು’ ಎಂದು ವಿನೋದ್ ಹೇಳಿದ್ದಾರೆ.
ಬರಿಯಾರ್‌ಪುರ, ಏಪ್ರಿಲ್ 29: ಮಂಗಲ ವಾದ್ಯಗಳು ಮೊಳಗಬೇಕಿದ್ದ ಮನೆಯಲ್ಲಿ ಈಗ ಸ್ಮಶಾನ ಮೌನ ಆವರಿಸಿದೆ. ಮದುವೆಗೆ ಸಿದ್ಧವಾಗಲು ಸಡಗರದಿಂದ ಬ್ಯೂಟಿ ಪಾರ್ಲರ್‌ಗೆ ಹೊರಟಿದ್ದ 22 ವರ್ಷದ ವಧು, ಮನೆಗೆ ಹೆಣವಾಗಿ ಹಿಂದಿರುಗಿದ ಘೋರ ದುರಂತ ಉತ್ತರ ಪ್ರದೇಶದಲ್ಲಿ ನಡೆದಿದೆ. ಬರಿಯಾರ್‌ಪುರದ ಗೌರ್ ಕೋಥಿ ಗ್ರಾಮದ ರಚನಾ (22) ಅವರ ವಿವಾಹ(Marriage)ವು ಅದೇ ದಿನ ಸಂಜೆ ನಡೆಯಬೇಕಿತ್ತು. ವಧುವಿನ ಅಲಂಕಾರಕ್ಕಾಗಿ ರಚನಾ ತನ್ನ ಕಿರಿಯ ಸಹೋದರನೊಂದಿಗೆ ಬೈಕ್ನಲ್ಲಿ ಹತ್ತಿರದ ಬ್ಯೂಟಿ ಪಾರ್ಲರ್‌ಗೆ ಹೊರಟಿದ್ದರು. ಆದರೆ ಬೈಕ್ ನಿಯಂತ್ರಣ ತಪ್ಪಿ ಬಿದ್ದಿದೆ, ಇದೇ ವೇಳೆ ಎದುರುಗಡೆಯಿಂದ ವೇಗವಾಗಿ ಬಂದ ಟ್ರಕ್ ರಚನಾ ಮೇಲೆ ಹರಿದಿದೆ.
ಅಪಘಾತದ ತೀವ್ರತೆಗೆ ರಚನಾ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ತಕ್ಷಣವೇ ಆಕೆಯನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ವೈದ್ಯರು ಬಂದಾಗಲೇ ಮೃತಪಟ್ಟಿದ್ದಾರೆ ಎಂದು ಘೋಷಿಸಿದರು. ಮಗಳ ಮದುವೆ ಮುಗಿಸಿ ಬೀಳ್ಕೊಡಬೇಕಿದ್ದ ತಂದೆ ಮತ್ತು ಕುಟುಂಬಸ್ಥರು ಈ ಸುದ್ದಿಯನ್ನು ಕೇಳಿ ದಿಗ್ಭ್ರಾಂತರಾಗಿದ್ದಾರೆ. ವರನ ಕಡೆಯವರು ಮೆರವಣಿಗೆಯೊಂದಿಗೆ ಬರಬೇಕಿದ್ದ ಸಮಯದಲ್ಲಿ, ಮಗಳ ಶವಯಾತ್ರೆ ನಡೆಸಬೇಕಾದ ಅನಿವಾರ್ಯತೆ ಆ ತಂದೆಗೆ ಎದುರಾಗಿದೆ.
ಘಟನೆ ನಡೆದ ತಕ್ಷಣ ಸ್ಥಳಕ್ಕೆ ಆಗಮಿಸಿದ ಪೊಲೀಸರು ಟ್ರೇಲರ್ ಅನ್ನು ವಶಪಡಿಸಿಕೊಂಡಿದ್ದು, ಚಾಲಕನನ್ನು ಬಂಧಿಸಿದ್ದಾರೆ. ಟ್ರೇಲರ್ ಅಡಿಯಲ್ಲಿ ಸಿಲುಕಿ ವಧು ಸಾವನ್ನಪ್ಪಿದ್ದಾರೆ. ಚಾಲಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಹೆಚ್ಚಿನ ತನಿಖೆ ನಡೆಸುತ್ತಿದ್ದೇವೆ ಎಂದು ಸ್ಟೇಷನ್ ಹೌಸ್ ಅಧಿಕಾರಿ ದೀಪಕ್ ಸಿಂಗ್ ತಿಳಿಸಿದ್ದಾರೆ.
ಸ್ಥಳೀಯ ಪ್ರತಿನಿಧಿ ರಾಜೇಶ್ ರಾಜ್‌ಭರ್ ಈ ಘಟನೆಯನ್ನು ಅತ್ಯಂತ ದುರಂತ ಎಂದು ಬಣ್ಣಿಸಿದ್ದಾರೆ. ಮದುವೆಯ ಸಿದ್ಧತೆಗಳಿಗಾಗಿ ಅದ್ದೂರಿಯಾಗಿ ಸಿಂಗಾರಗೊಂಡಿದ್ದ ಮನೆ, ಈಗ ಶೋಕಸಾಗರದಲ್ಲಿ ಮುಳುಗಿದೆ. ನೂರಾರು ಕನಸು ಹೊತ್ತು ಹೊಸ ಜೀವನಕ್ಕೆ ಕಾಲಿಡಬೇಕಿದ್ದ ಯುವತಿಯ ಅಕಾಲಿಕ ಮರಣವು ಇಡೀ ಗ್ರಾಮಸ್ಥರ ಕಣ್ಣುಗಳನ್ನು ತೇವಗೊಳಿಸಿದೆ.